Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿರುವ ಬಗ್ಗೆ ಸಂಬಂದಪಟ್ಟವರ ಗಮನಕ್ಕೆ ತಂದಿದ್ದರೂ ಈವರೆಗೆ ಪ್ರಯೋಜನವಾಗಿಲ್ಲ. ಸಹಕಾರಿ ಸಂಘದ ಅವ್ಯವಹಾರ ತನಿಖೆ ಮಾಡಿ ತಪ್ಪಿತಸ್ತರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳದಿದ್ದರೆ ವಿಧಾನಸೌಧ ಮುಂದೆ ಧರಣಿ ನಡೆಸುವುದಾಗಿ ಸಂಘದ ಸದಸ್ಯ ಬಿ. ಟಿ. ಮಂಜುನಾಥ ಪೂಜಾರಿ ಎಚ್ಚರಿಸಿದ್ದಾರೆ. ಕುಂದಾಪುರ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಹತ್ತಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆಯುತ್ತಿದೆ. ಈ ಬಗ್ಗೆ ಉಡುಪಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಮಾಹಿತಿ ಹಕ್ಕಿನ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದು ಅವರು ಮಾಮೂಲಿ ಅರ್ಜಿ ಎಂದು ಪರಿಗಣಿಸಿ ತಮ್ಮ ಕೈಕೆಳಗಿನ ಸಂಸ್ಥೆಯಲ್ಲಿ ಕೋಟಿಗಟ್ಟಲೆ ಅವ್ಯವಹಾರ ನಡೆಯುತ್ತಿದ್ದರೂ ತಮಗೆ ಏನು ಸಂಬಂಧ ಇಲ್ಲ ಎಂಬಂತೆ ವರ್ತಿಸಿ ಮಾಹಿತಿ ನೀಡಲು ಅವಕಾಶ ಇಲ್ಲ ಎಂದು ಹಿಂಬರಹ ನೀಡಿ ಕೈ ತೊಳೆದುಕೊಂಡಿದ್ದಾರೆ. ಆ ನಂತರ ಕುಂದಾಪುರ ಸಹಾಯಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್‌ನ 2021-22ನೇ ಸಾಲಿನ ಅಧ್ಯಕ್ಷರಾಗಿ ಉದ್ಯಮಿ ರಾಜೇಶ ಎಂ.ಜಿ. ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ನಾರಾಯಣ ಇ. ನಾಯ್ಕ್, ನಿಕಟಪೂರ್ವ ಅಧ್ಯಕ್ಷರಾಗಿ ಬಿ.ಲಕ್ಷ್ಮೀಕಾಂತ ಮಡಿವಾಳ, ನಿಯೋಜಿತ ಅಧ್ಯಕ್ಷೆಯಾಗಿ ಸುಗುಣ ಆರ್.ಕೆ., ಉಪಾಧ್ಯಕ್ಷರಾಗಿ ಪ್ರವೀಣ ಒಲಿವೇರಾ, ಜತೆ ಕಾರ್ಯದರ್ಶಿಯಾಗಿ ಕೃಷ್ಣ ಪೂಜಾರಿ, ಖಜಾಂಚಿ ನಾಗರಾಜ ಶೆಟ್ಟಿ, ನಿರ್ದೇಶಕರಾಗಿ ಉಮೇಶ ಮೇಸ್ತ, ಪ್ರದೀಪ ಡಿ.ಕೆ., ವಾಸುದೇವ ಶೇರುಗಾರ್, ಚಂದ್ರಕಲಾ ಟಿ., ಜನಾರ್ದನ ಪೂಜಾರಿ ಪೆರಾಜೆ ಶಿವಾನಂದ ಪೂಜಾರಿ, ಪ್ರೇಮಾ ಸಿ.ಎಸ್., ಎಚ್. ಗಣೇಶ ಕಾಮತ್, ಅಶೋಕ ದೇವಾಡಿಗ, ರಾಮನಾಥ ನಾಯಕ್ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ ಎಂಬ ಧ್ಯೇಯವಾಕ್ಯದೊಂದಿಗೆ 2021ನೇ ಸಾಲಿನ ಮಣಿಪಾಲ ಆರೋಗ್ಯ ಕಾರ್ಡ್ ನೊಂದಣಿ ಪ್ರಕ್ರಿಯೆಗೆ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಅವರು ವರ್ಚುವಲ್ ವೇದಿಕೆಯ ಮೂಲಕ ಚಾಲನೆ ನೀಡಿದ್ದು, ಆರೋಗ್ಯ ಸೇವೆಗಳಿಗೆ ಈ ಕಾರ್ಡ್ ಉತ್ತಮ ಪ್ರಯೋಜನ ಹೊಂದಿದೆ ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾರ್ಕೆಟಿಂಗ್ ವಿಭಾಗದ ಉಪ ವ್ಯವಸ್ಥಾಪಕರಾದ ಕೃಷ್ಣಪ್ರಸಾದ್ ಹೇಳಿದರು. ಅವರು ಶುಕ್ರವಾರ ಕುಂದಾಪುರದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ್ ಹೆಮ್ಮಾಡಿ ಅವರಿಗೆ ಸಾಂಕೇತಿಕವಾಗಿ ಆರೋಗ್ಯ ಕಾರ್ಡ್ ಹಸ್ತಾಂತರಿಸಿದಬಳಿಕ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಅವಿಭಾಜಿತ ದಕ್ಸಿಣ ಕನ್ನಡ ಜಿಲ್ಲೆಯ ಜನರಿಗೆ ಆರಂಭಿಸಿದ ಈ ಯೋಜನೆ ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ ಸೇರಿದಂತೆ ಕರಾವಳಿ ಕರ್ನಾಟಕದ ಮತ್ತು ಮಧ್ಯ ಕರ್ನಾಟಕದ ಸುಮಾರು 12ಕ್ಕೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಾಯಿ ಮಹಿಳಾ ಆರ್ಥಿಕ ಸೇವಾ ಸಹಕಾರ ಸಂಘ ನಿ. ಮುಳ್ಳಿಕಟ್ಟೆ ಹೊಸಾಡು ಇದರ 5ನೇ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯು ಮುಳ್ಳಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಮುಖ್ಯ ಕಾರ್ಯನಿರ್ವಹಣಾಕಾಧಿಕಾರಿ ಭಾಸ್ಕರ ಬಿಲ್ಲವ, ಸಂಸ್ಥೆಯು ರೂ. 12,98,25,081 ಠೇವಣಿ ಸಂಗ್ರಹ, ರೂ10,23,76,291 ಸಾಲ ವಿತರಿಸಲಾಗಿದೆ. ರೂ.4,61,00,862 ಬೇರೆ ಬೇರೆ ಬ್ಯಾಂಕುಗಳಲ್ಲಿ ಠೇವಣಿ ಹೊಂದಿದ್ದು, ರೂ 6,48,447 ಮೌಲ್ಯದ ಚರಾಸಿಯನ್ನ್ಥು ಹೊಂದಿರುತ್ತದೆ. ಸಂಘದಲ್ಲಿ ಕಾಯ್ದಿರಿಸಿದ ನಿಧಿಗಳು 1,22,35,917 ಇರುತ್ತದೆ ಸದ್ರಿ ಆರ್ಥಿಕ ವರ್ಷದಲ್ಲಿ ರೂ. 56 ಕೋಟಿಗೂ ಮಿಕ್ಕಿ ವ್ಯವಹಾರ ಮಾಡಿದ್ದು ರೂ7,92,000 ಲಾಭ ಗಳಿಸಿರುತ್ತದೆ ಎಂದು ವರದಿ ಮಂಡಿಸಿದರು. ಸಂಘದ ಅಧ್ಯಕ್ಷರು ಸಂಘವು ಆರ್ಥಿಕ ವ್ಯವಹಾರ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಸ್ಥೆ ಮಾಡಿರುತ್ತದೆ. ಲಾಕ್‌ಡೌನ್ ಸಂದರ್ಭದಲ್ಲಿ ಸದಸ್ಯರ ಮನೆಬಾಗಿಲಿಗೆ ಬ್ಯಾಂಕಿಂಗ್ ಸೇವೆಯನ್ನು ನೀಡಿ 6 ಜನ ಸದಸ್ಯರ ಮದುವೆ 3 ಮನೆ ಪ್ರವೇಶಕ್ಕೆ ಸಹಕರಿಸಿದ್ದೇವೆ ಮತ್ತು ಮಹಾಸಭೆಯಲ್ಲಿ ಸಂಘದ ಸದಸ್ಯರ 1…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡಲ್ಪಡುವ ಈ ಸಾಲಿನ ‘ಟ್ಯಾಗೋರ್ ಪತ್ರಿಕಾ ಪ್ರಶಸ್ತಿ’ ಘೋಷಣೆಯಾಗಿದ್ದು, ಈ ಬಾರಿ ಈ ಪ್ರಶಸ್ತಿಗೆ ‘ವಿಜಯ ಕರ್ನಾಟಕ’ ಶಿವಮೊಗ್ಗ ಬ್ಯೂರೋ ಮುಖ್ಯಸ್ಥ ವಿವೇಕ ಮಹಾಲೆ, ‘ದಿಗ್ವಿಜಯ ನ್ಯೂಸ್’ನ ಉತ್ತರಕನ್ನಡ ಜಿಲ್ಲಾ ವರದಿಗಾರ ಶೇಷಗಿರಿ ಮುಂಡಳ್ಳಿ ಹಾಗೂ ‘ಪ್ರಜಾವಾಣಿ’ ಉತ್ತರಕನ್ನಡ ಜಿಲ್ಲಾ ವರದಿಗಾರ ಸದಾಶಿವ ಎಂ.ಎಸ್. ಅವರನ್ನು ಆಯ್ಕೆ ಮಾಡಲಾಗಿದೆ. ಇತ್ತೀಚಿಗೆ ಸಂಘದ ಅಧ್ಯಕ್ಷ ಟಿ .ಬಿ. ಹರಿಕಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ಮೂವರನ್ನೂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದಿಂದ 2016ರಿಂದ ಟ್ಯಾಗೋರ್ ಪತ್ರಿಕಾ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದ್ದು, ಕಾರವಾರದಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸಿ, ಪ್ರಸ್ತುತ ಹೊರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಹಾಗೂ ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯುನ್ಮಾನ ಹಾಗೂ ಮುದ್ರಣ ಮಾಧ್ಯಮದ ಈರ್ವರನ್ನು ಪ್ರತಿವರ್ಷ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಈ ವರ್ಷ ತಾಲೂಕಿನ ಸಿದ್ದರ ಗ್ರಾಮದಲ್ಲಿ ಜುಲೈ 25ರಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿರಿಯ ಪತ್ರಕರ್ತ, ಉದಯವಾಣಿಯಲ್ಲಿ 44 ವರ್ಷ ಸೇವೆ ಸಲ್ಲಿಸಿ ವಿಶ್ರಾಂತರಾಗಿರುವ ಎನ್. ಗುರುರಾಜ್ ಅವರಿಗೆ ಪತ್ರಕರ್ತರ ವೇದಿಕೆ ಬೆಂಗಳೂರು ನೀಡುವ ಪತ್ರಿಕಾದಿನದ ಗೌರವ (2021)ವನ್ನು ಅವರ ನಿವಾಸದಲ್ಲಿ ಹರಿಕೃಷ್ಣ ಪುನರೂರು ಅವರು ಪ್ರದಾನಿಸಲಿರುವರು ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಡಾ.ಶೇಖರ ಅಜೆಕಾರು ತಿಳಿಸಿದ್ದಾರೆ. ಒಂದೇ ಪತ್ರಿಕೆಯಲ್ಲಿ 44 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅವರ ಮಾಧ್ಯಮ ಸೇವೆಯನ್ನು ಗುರುತಿಸಿ ಅವರನ್ನು ಜುಲೈ23 ರಂದು ಗೌರವಿಸಲಾಗುತ್ತಿದೆ. ದಾವಣಗೆರೆ ಜಗಳೂರಿನ ಅಸಗೋಡಿನಲ್ಲಿ 1944ರಲ್ಲಿ ಜನಿಸಿದ ಎನ್.ಗುರುರಾಜ್ ಇಂಜಿನಿಯರ್ ಪದವಿಧರರು. ಉತ್ತಮ ಕಥೆಗಾರರಾಗಿರುವ ಅವರು ಪದವಿಯ ತಕ್ಷಣ ಆಗ ತಾನೆ ಪ್ರಕಟಣೆ ಆರಂಭಿಸಲಿದ್ದ ಉದಯವಾಣಿಗೆ ಅನುವಾದಕರಾಗಿ ಸೇರಿದರು. ಮುಂದೆ ಅವರ ತಮ್ಮ ಕಾರ್ಯದಕ್ಷತೆಯಿಂದ ಸಹಾಯಕ ಸುದ್ದಿ ಸಂಪಾದಕರಾಗಿ, ಸುದ್ದಿ ಸಂಪಾದಕರಾಗಿ, ಸಂಪಾದಕರಾಗಿ 2014ರಲ್ಲಿ ಸೇವಾ ನಿವೃತ್ತಿ ಪಡೆದಿದ್ದಾರೆ. ವಿವಿಧ ಹುದ್ದೆಗಳನ್ನು ನಿರ್ವಹಿಸಿದ ಅವರಿಗೆ 2006 ರ ಕರ್ನಾಟಕ ಮಾಧ್ಯಮ ಅಕಾಡೆಮಿಯ ಗೌರವ ಸಂದಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚವೀಶ್ ಜೈನ್ 600 ರಲ್ಲಿ 590 ಅಂಕಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾನೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.22: ಎಸ್‌ಎಸ್‌ಎಲ್‌ಸಿ ಎರಡನೇ ದಿನದ ಪರೀಕ್ಷೆಯನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕು ಸೇರಿದಂತೆ ಉಡುಪಿ ಜಿಲ್ಲಾದ್ಯಂತ ವಿದ್ಯಾರ್ಥಿಗಳು ನಿರ್ಭಯವಾಗಿ ಬರೆದಿದ್ದಾರೆ. ಈ ನಡುವೆ ತುಂಬಿ ಹರಿಯುತ್ತಿದ್ದರಿಂದ ಸೌಪರ್ಣಿಕಾ ನದಿಯ ನಡುವಿನ ಕುರು ದ್ವೀಪದಲ್ಲಿ ಪರೀಕ್ಷೆ ಬರೆಯಲಾಗದ ಆತಂಕದಲ್ಲಿದ್ದ ವಿದ್ಯಾರ್ಥಿಗಳನ್ನು ಸ್ವಯಃ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಹೆಚ್. ಎಸ್ ಹಾಗೂ ಉಡುಪಿ ಡಿ.ಎಚ್.ಓ ಎನ್. ಎಚ್ ನಾಗೂರು ದೋಣಿಯಲ್ಲಿ ಕರೆತಂದ ಪ್ರಸಂಗ ನಡೆದಿದೆ. ಸೌಪರ್ಣಿಕ ನದಿಯ ನಡುವಿನ ಕುರು ದ್ವೀಪದ ನಿವಾಸಿಗಳು ದೋಣಿಯನ್ನೇ ನಂಬಿ ಬದುಕು ಸವೆಸುತ್ತಿದ್ದಾರೆ. ಮಳೆಯಿಂದಾಗಿ ನೀರಿನ ಹರಿವು ಹೆಚ್ಚಿದ್ದರಿಂದ ದ್ವೀಪದ ನಿವಾಸಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಾದ ಶಿಲ್ಪಾ ಹಾಗೂ ಸಂಜನಾ ಆತಂಕದಲ್ಲಿದ್ದರು. ಪರೀಕ್ಷಾ ಸಂಯೋಜಕರ ಮೂಲಕ ವಿಷಯ ತಿಳಿದ ಶಿಕ್ಷಣಾಧಿಕಾರಿಗಳು ಹಾಗೂ ತಹಶೀಲ್ದಾರ್ ವಿದ್ಯಾರ್ಥಿಗಳ ಮನೆಗೆ ತೆರಳಿ ದೋಣಿಯಲ್ಲಿ ಅವರನ್ನು ಕರೆತಂದಿದ್ದು, ಬಳಿಕ ಡಿಡಿಪಿಐ ಅವರ ವಾಹನದಲ್ಲಿ ನಾವುಂದ ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ದಿದ್ದು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಂದರ್ಭ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಮುಂದಿನಮನಿ,…

Read More

ಮಳೆಗಾಲ ಶುರುವಾಗಿದೆ. ಜೋರಾಗಿ ಸುರಿಯುವ ಮಳೆ ಖುಷಿ, ಸಂತೋಷ, ಆತಂಕವನ್ನು ತರುವುದರ ಜೊತೆಗೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೂ ಆಹ್ವಾನ ನೀಡುತ್ತದೆ. ಕೊರೊನಾದಂತಹ ಸಾಂಕ್ರಾಮಿಕದ ನಡುವೆ ಈ ಮಳೆಗಾಲದ ರೋಗಗಳು ನಮ್ಮನ್ನ ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸುತ್ತವೆ. ಆದ್ದರಿಂದ ಇಂತಹ ರೋಗಗಳಿಂದ ಮಳೆಗಾಲದಲ್ಲಿ ನಮ್ಮ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಬೇಕು. ಸೊಳ್ಳೆಯಿಂದ ಹರಡುವ ರೋಗಗಳು:ಮಳೆಗಾಲ ಸೊಳ್ಳೆಗಳ ಸಂತಾನೋತ್ಪತ್ತಿ ಕಾಲ. ಆದ್ದರಿಂದ ಈ ಕಾಲದಲ್ಲಿ ಹಲವಾರು ರೋಗಗಳಿಗೆ ಕಾರಣವಾಗಬಹುದು. ಮಲೇರಿಯಾ: ಮಲೇರಿಯಾವು ಪ್ಲಾಸ್ಮೋಡಿಯಮ್ ಎಂಬ ಏಕಕೋಶೀಯ ಪರಾವಲಂಬಿಯಿಂದ ಬರುವುದು. ಇದು ಮಳೆಗಾಲದಲ್ಲಿ ಕಂಡುಬರುವ ಆರೋಗ್ಯದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ನೀರಿನ ಕಾಲುವೆಗಳು ಮತ್ತು ತೊರೆಗಳಲ್ಲಿ ಸೊಳ್ಳೆಗಳ ಉತ್ಪತ್ತಿಯಿಂದ ಉಂಟಾಗುತ್ತಿದ್ದು, ಹಲವಾರು ದಿನಗಳವರೆಗೆ ಜ್ವರ ಬರುತ್ತದೆ. ಡೆಂಗ್ಯೂ: ಡೆಂಗ್ಯೂವು ಈಡಿಸ್ ಈಜಿಪ್ಟಿ ಸೊಳ್ಳೆಯಿಂದ ಉಂಟಾಗುತ್ತದೆ. ಇದು ನಿಂತ ಅಥವಾ ಶೇಖರಣೆಯಾದ ನೀರಿನಲ್ಲಿ (ಬಕೆಟ್, ಡ್ರಮ್ಸ್, ಬಾವಿಗಳು, ಮರದ ರಂಧ್ರಗಳು ಮತ್ತು ಹೂವಿನ ಮಡಿಕೆಗಳು) ಸಂತಾನೋತ್ಪತ್ತಿ ಮಾಡುತ್ತದೆ. ಕಚ್ಚಿದ ನಾಲ್ಕರಿಂದ ಏಳು ದಿನಗಳ ನಂತರ ಡೆಂಗ್ಯೂ ಬರಲಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರದ ಅಕ್ಷರ ದಾಸೋಹ – ಬಿಸಿಯೂಟ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಗುವ ಅಡುಗೆ ಎಣ್ಣೆ ದಿನಸಿ ಅಂಗಡಿಗಳಲ್ಲಿ ಮಾರಾಟ ಮಾಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಕೋವಿಡ್-19 ಸಂದರ್ಭ ಸರಕಾರ ವಿದ್ಯಾರ್ಥಿಗಳಿಗೆ ವಿತರಿಸಲು ಸರಬರಾಜು ಮಾಡಿದ್ದ ಅಡುಗೆ ಎಣ್ಣೆ, ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಗ್ಗರ್ಸೆಯ ಅಂಗಡಿಯೊಂದರಲ್ಲಿ ಪತ್ತೆಯಾಗಿರುವುದು ಸಂಶಯಗಳಿಗೆ ಎಡೆಮಾಡಿಕೊಟ್ಟಿತ್ತು. ಗ್ರಾಹಕರೋರ್ವರು ಎಣ್ಣೆ ಪ್ಯಾಕೇಟ್ ಪರಿಶೀಲಿಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಬಿಸಿಯೂಟ ಯೋಜನೆಯ ಎಣ್ಣೆ ಅಂಗಡಿಗಳಲ್ಲಿ ಮಾರಾಟಕ್ಕೆ ಬಂದಿದ್ದು ಹೇಗೆ ಎಂಬುದು ತನಿಕೆಯಿಂದ ತಿಳಿದುಬರಬೇಕಿದೆ. ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಹೆಚ್. ಅವರು ಸ್ಥಳಕ್ಕೆ ಭೇಟಿ ನೀಡಿ ತನಿಕೆ ನಡೆಸಿದ್ದಾರೆ /ಕುಂದಾಪ್ರ ಡಾಟ್ ಕಾಂ ಸುದ್ದಿ/ ಸರಕಾರದ ಉಚಿತ ಅಡುಗೆ ಎಣ್ಣೆ ವಿಕ್ರಯವಾಗುತ್ತಿರುವ ಬಗ್ಗೆ ದೂರ ಬಂದ ತಕ್ಷಣ, ತಗ್ಗರ್ಸೆಯ ಅಂಗಡಿ ಹಾಗೂ ಸಮೀಪದ ಎರಡು ಸರಕಾರಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗಿರುವ ಪಟ್ಟಿ ಹಾಗೂ ಬಾಕಿ ಇರುವ ಸ್ಟಾಕ್ ಚೆಕ್…

Read More