ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶತಮಾನೋತ್ಸವ ಸಂಭ್ರಮ ಆಚರಿಸಿಕೊಂಡಿರುವ ಕುಂದಾಪುರ ತಾಲೂಕಿನ ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಾಖಲಾತಿಯಲ್ಲಿ ಗಣನೀಯ ಏರಿಕೆಯಾಗಿದ್ದು, ಪ್ರಸಕ್ತ ಸಾಲಿನಲ್ಲಿ ಹೊಸ ದಾಖಲಾತಿ ಶತಕ ಸನಿಹ ತಲುಪಿದೆ. ಪ್ರಸ್ತುತ 1ರಿಂದ 8ನೇ ತರಗತಿಯಲ್ಲಿ ಒಟ್ಟು 360 ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಡೆಸುತ್ತಿದ್ದು, 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಈವರೆಗೆ ಸುಮಾರು 92 ಮಕ್ಕಳು ಹೊಸ ದಾಖಲಾತಿಯಾಗಿದ್ದಾರೆ. 1ನೇ ತರಗತಿಗೆ 62 ವಿದ್ಯಾರ್ಥಿಗಳೂ ಸೇರಿದಂತೆ ಇನ್ನುಳಿದ ತರಗತಿಗಳಿಗೆ ಗುಜ್ಜಾಡಿ ಸುತ್ತಲಿನ ಸರಕಾರಿ ಹಾಗೂ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಂದ 50ಕ್ಕೂ ವಿದ್ಯಾರ್ಥಿಗಳು ಶಾಲೆಗೆ ಸೇರ್ಪಡೆಯಾಗುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾಗಿದೆ. ಫಲಪ್ರದವಾದ ಪರಿಣಾಮಕಾರಿ ಬೋಧನೆ ಹಾಗೂ ವಿದ್ಯಾಗಮ ಕಾರ್ಯಕ್ರಮ. ಆಕರ್ಷಕ ಶಾಲಾ ಪರಿಸರ, ವಿಶಾಲ ಆಟದ ಮೈದಾನ, ಸ್ಮಾರ್ಟ್ ಕ್ಲಾಸ್, ವಿಜ್ಞಾನ ಪ್ರಯೋಗಾಲಯ, ವಾಚನಾಲಯ, ವಿಶಾಲ ರಂಗಮಂದಿರವನ್ನು ಹೊಂದಿರುವ ಶಾಲೆಯು ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಹೊಂದಿದೆ. ಶತಮಾನೋತ್ಸವದ ನೆನಪಿಗಾಗಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀಹರಿಪಾದ ಸೇರಿದ ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರು ತಮ್ಮ ಜೀವನದಲ್ಲಿ ಶಿಸ್ತು, ಸಮಯಪಾಲನೆ ಹಾಗೂ ಧಾರ್ಮಿಕತೆಗೆ ಹೆಚ್ಚಿನ ಒತ್ತು ನೀಡಿದ್ದರು. ಚಿಕ್ಕ ವಯಸ್ಸಿನಲ್ಲೇ ಸನ್ಯಾಸ ದೀಕ್ಷೆ ಸ್ವೀಕರಿಸಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಮಠದ ಜವಾಬ್ದಾರಿಹೊತ್ತು ಅದನ್ನು ಯಶಸ್ವಿಯಾಗಿ ನಿರ್ವಹಿಸಿದರು. ಸಮಾಜಕ್ಕೆ ಹಾಗೂ ಮಠಗಳಿಗೆ ಅಗತ್ಯ ಮಾರ್ಗದರ್ಶನ ನೀಡಿ ಸನ್ಮಾರ್ಗದಲ್ಲಿ ಮುನ್ನಡೆಯುವಂತೆ ಮಾಡಿ, ಮಠದ ಪರಂಪರೆಯನ್ನು ಉಳಿಸಿ ಬೆಳೆಸಿದರು. ಶ್ರೀಗಳು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆದು, ಅವರ ಜೀವನದ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಎಲ್ಲರೂ ಸಾತ್ವಿಕ ಜೀವನ ನಡೆಸುವಂತಾಗಬೇಕು ಎಂದು ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಹೇಳಿದರು. ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗಿದ ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರಿಗೆ ಗೌರವ ನಮನ ಸಲ್ಲಿಸುವ ಕಾರ್ಯಕ್ರಮದಲ್ಲಿ ಗುರು ಗುಣಗಾನ ಮಾಡಿ ಮಾತನಾಡಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್ ಗುರು ಗುಣಗಾನ ಮಾಡಿದರು. ಗುರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ರೋಟರಿ ಭವನದಲ್ಲಿ ಸುರಭಿ ರಿ. ಬೈಂದೂರು ಸಂಸ್ಥೆಯ ನೇತೃತ್ವದಲ್ಲಿ ಕಥಾಓದು ಕಾರ್ಯಕ್ರಮ ಇತ್ತಿಚಿಗೆ ಜರುಗಿತು. ಸಾಹಿತಿ ವೈದೇಹಿ ಅವರ ಗುಲಾಬಿ ಟಾಕೀಸ್ ಮತ್ತು ಸಣ್ಣ ಅಲೆಗಳು ಕಥೆಯನ್ನು ಕೀರ್ತಿ ಭಟ್ ಉಪ್ಪುಂದ ವಾಚಿಸಿದರು. ಬಳಿಕ ಸುರಭಿ ಸದಸ್ಯರು ಹಾಗೂ ಕ್ಲಬ್ ಹೌಸ್ ಮೂಲಕ ಸಂವಾದ ನಡೆಯಿತು. ಈ ಸಂದರ್ಭ ಸುರಭಿ ಅಧ್ಯಕ್ಷ ನಾಗರಾಜ ಪಿ. ಯಡ್ತರೆ, ಕಾರ್ಯದರ್ಶಿ ಭಾಸ್ಕರ ಬಾಡ, ಖಜಾಂಚಿ ಸುರೇಶ್ ಹುದಾರ್, ನಿರ್ದೇಶಕ ಸುಧಾಕರ ಪಿ. ಬೈಂದೂರು ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಳವಾರದ ಡ್ರೀಮ್ ಫೈನಾನ್ಸ್ ಪಾಲುದಾರ ಅಜೇಂದ್ರ ಶೆಟ್ಟಿ (33) ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಗೋವಾದಲ್ಲಿ ವಶಕ್ಕೆ ಪಡೆದಿದ್ದು, ಅಲ್ಲಿಂದ ಕರೆತರಲಾಗುತ್ತಿದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಶುಕ್ರವಾರ ತಡರಾತ್ರಿ ಅಜೇಂದ್ರ ಶೆಟ್ಟಿಯ ಮೃತದೇಹ ಅವರ ಡ್ರೀಮ್ ಫೈನಾನ್ಸ್ ಕಚೇರಿಯಲ್ಲೇ ಪತ್ತೆಯಾಗಿತ್ತು. ಅಜೇಂದ್ರ ಸಹೋದರ ಕೊಟ್ಟ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಕ್ಷೀಪ್ರವಾಗಿ ಆರೋಪಿ ಅನೂಪ್ ಶೆಟ್ಟಿಯನ್ನು ಕ್ಷಿಪ್ರವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಪ್ರಾಥಮಿಕ ತನಿಖೆಯಿಂದ ಅಜೇಂದ್ರ ಅವರ ಫೈನಾನ್ಸ್ ವ್ಯವಹಾರದ ಪಾಲುದಾರ ಅನುಪ್ ಶೆಟ್ಟಿಯೇ ಕೊಲೆ ಆರೋಪಿ ಎನ್ನುವ ಶಂಕೆ ವ್ಯಕ್ತವಾಗಿತ್ತು. ಹತ್ಯೆ ಮಾಡಿದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದಲ್ಲದೇ ಪರಾರಿಯಾಗಲು ತನ್ನ ಬೈಕ್ ಅಲ್ಲಿಯೇ ಬಿಟ್ಟು ಅಜೇಂದ್ರ ಅವರ ಹೊಸ ಕಾರನ್ನೇ ಬಳಸಿಕೊಂಡಿದ್ದನು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಟೋಲ್ಗೇಟ್ ಗಳಲ್ಲಿ ಅಳವಡಿಸಿದ್ದ ಸಿಸಿ ಟಿವಿ ದೃಶ್ಯಾವಳಿಗಳ ಮೂಲಕ ಆರೋಪಿಯು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡಬಿದಿರೆ: ದೇಶಗಳ ನಡುವಿನ ಗಡಿಗಳನ್ನು ನಾವಾಗಿಯೇ ನಿರ್ಮಿಸಿಕೊಂಡದ್ದು. ಈ ಗಡಿಗಳು ಮಾನಸಿಕವಾಗಿ ನಮ್ಮನ್ನು ಕಟ್ಟಿಹಾಕಿವೆ. ಇದರ ಉಳಿವಿಗಾಗಿ ಇತಿಹಾಸಕಾಲದಿಂದಲೂ ಯುದ್ಧ ಮಾಡುತ್ತ ಬಂದಿದ್ದೇವೆ. ಯುದ್ಧ ಹಿಂಸೆ ಮಾನವನ ಇತಿಹಾಸದ ಬೆಳವಣಿಗೆಯಲ್ಲಿ ಒಂದು ಅಂಗವಾಗಿಯೇ ಬೆಳೆದು ಬಂದಿದೆ. ಆದ್ದರಿಂದಲೇ ಇವು ಮಾನಸಿಕ ಯುದ್ಧಗಳಾಗಿ ಪರಿವರ್ತನೆಗೊಂಡಿವೆ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್ ಹೇಳಿದರು. ಆಳ್ವಾಸ್ ಕಾಲೇಜಿನ ಎನ್ಸಿಸಿ ಘಟಕದ ವತಿಯಿಂದ ನಡೆದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ‘ಪ್ರಸ್ತುತ ಜಗತ್ತಿನಲ್ಲಿ ಯುದ್ಧಗಳಿಲ್ಲದ ಅಹಿಂಸಾತ್ಮಕ ಪರಿಕಲ್ಪನೆಯನ್ನು ಹೆಚ್ಚು ಪ್ರಚುರಪಡಿಸಬೇಕು’ಎಂದರು. ಈ ಸಂದರ್ಭ ಮಾಜಿ ಸೈನಿಕ, ಹವಾಲ್ದಾರ್ ಉದಯ್ ಹಾಗೂ ಮಾಜಿ ಸೈನಿಕ ಹವಾಲ್ದಾರ್ ಹರೀಶ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹವಾಲ್ದಾರ್ ಉದಯ್, ಆಳ್ವಾಸ್ ಕಾಲೇಜು ಕೇವಲ ಒಂದು ಶಿಕ್ಷಣ ಸಂಸ್ಥೆಯಾಗದೆ, ಕ್ರೀಡೆ ಮತ್ತು ಸೇನಾ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆಗಳನ್ನು ನೀಡುವಲ್ಲಿ ಯಶಸ್ವಿಯಾಗಿದೆ. ಸೈನ್ಯದಲ್ಲಿ ಒಗ್ಗಟ್ಟು ಇದ್ದರೆ ಏನನ್ನೂ ಸಾಧಿಸಲು ಸಾಧ್ಯ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2020 ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗಾಗಿ ಕಾವ್ಯ, ನವಕವಿಗಳ ಪ್ರಥಮ ಕವನ ಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ / ಅಂಕಣ ಬರಹ, ಅನುವಾದ-1 (ಇಂಗ್ಲೀಷ್ ಸೇರಿದಂತೆ ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಸೃಜನ/ ಸೃಜನೇತರ ಕೃತಿಗಳು), ಅನುವಾದ-2 (ಕನ್ನಡದಿಂದ ಅನ್ಯಭಾಷೆಗಳಿಗೆ ಅನುವಾದಗೊಂಡ ಸೃಜನ/ ಸೃಜನೇತರ ಕೃತಿ), ಲೇಖಕರ ಮೊದಲ ಸ್ವತಂತ್ರ ಕೃತಿ, ಕನ್ನಡದಿಂದ ಇಂಗ್ಲೀಷಿಗೆ ಅನುವಾದ, ದಾಸ ಸಾಹಿತ್ಯ ಮತ್ತು ಸಂಕೀರ್ಣ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. 2020 ರ ಜನವರಿ 1 ರಿಂದ ಡಿಸೆಂಬರ್ 31 ರ ಒಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲೆಯ ಅಂಗವಿಕಲರಿಗಾಗಿ ಸರ್ಕಾರ ಅನುಷ್ಠಾನಗೊಳಿಸಿರುವ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್, ಅಂಗವಿಕಲರ ದೈನಂದಿನ ಚಟುವಟಿಕೆಗಳಿಗೆ ಅಗತ್ಯವಿರುವ ಸಾಧನ ಸಲಕರಣೆ, ನಿವಾರಣಾ ಶಸ್ತ್ರಚಿಕಿತ್ಸೆಗೆ ವೈದ್ಯಕೀಯ ನೆರವು, ವಿಕಲಚೇತನರ ಬಸ್ ಪಾಸ್, ಸ್ವಯಂ ಉದ್ಯೋಗಕ್ಕಾಗಿ ಶೇ. 50 ರಷ್ಟು ಬ್ಯಾಂಕ್ ಸಾಲ ಮತ್ತು ಶೇ. 50 ರಷ್ಟು ಸಬ್ಸಿಡಿ ಮೂಲಕ ಆಧಾರ ಸಾಲ ಯೋಜನೆ, ಯಂತ್ರಚಾಲಿತ ದ್ವಿಚಕ್ರ ವಾಹನ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಅಂಧ ಮಹಿಳೆಗೆ ಜನಿಸುವ ಮೊದಲನೇ ಮತ್ತು ಎರಡನೇ ಮಗುವಿನ ಪಾಲನೆಗಾಗಿ ಶಿಶುಪಾಲನಾ ಭತ್ಯೆ, ಶ್ರವಣ ದೋಷವುಳ್ಳ ವಿಕಲಚೇತನ ವ್ಯಕ್ತಿಗಳಿಗೆ ಹೊಲಿಗೆಯಂತ್ರ, ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾಚೇತನ ಯೋಜನೆಗಳಿಗೆ ಷರತ್ತಿಗೊಳಪಟ್ಟು ಅಂಗವಿಕಲರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಕ್ಲಬ್ನ 2021-22 ನೇ ಸಾಲಿನ ನೂತನ ಪಧಾದಿಕಾರಿಗಳ ಪದಗ್ರಹಣ ಕಾರ್ಯಕ್ರಮಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಕೋಯಾಕುಟ್ಟಿ ಸಭಾಂಗಣದಲ್ಲಿ ನಡೆಯಿತು. ಲಯನ್ಸ್ ಕ್ಲಬ್ನ ನೂತನ ಅಧ್ಯಕ್ಷರಾಗಿ ಬಿ. ರಾಧಾಕೃಷ್ಣ ನಾಯಕ್ ಅಧಿಕಾರ ಸ್ವೀಕರಿಸಿದರು. ಪದಗ್ರಹಣ ನೆರವೇರಿಸಿ ಮಾತನಾಡಿದ ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಪ್ರಕಾಶ್ ಟಿ ಸೋನ್ಸ್ ಸಮಾಜ ಸೇವೆ ಮಾಡುವವರಿಗೆ ಹಲವು ಆಯ್ಕೆಗಳು ಇರುತ್ತದೆ. ನಮ್ಮ ಮನಸ್ಥಿತಿಗೆ ಒಪ್ಪುವಂತಹ ಆಯ್ಕೆಗಳನ್ನು ಮಾಡಿಕೊಳ್ಳುವುದರಿಂದ ಸೇವಾ ಸಂತೃಪ್ತಿ ಪಡೆಯಲು ಸಾಧ್ಯ. ಪ್ರತಿಯೊಬ್ಬ ಲಯನ್ಸ್ ಸದಸ್ಯರಲ್ಲಿಯೂ ಈ ರೀತಿಯ ಸಂತೃಪ್ತಿ ಇರಬೇಕು ಎಂದರು. ಈ ಸಂದರ್ಭ ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಜಯಕರ ಶೆಟ್ಟಿ ಸುಪ್ರೀಮ್, ಮಂಜುನಾಥ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ. ಎಂ. ವಿ. ಕುಲಾಲ್ ಲಯನ್ಸ್ ವಿಭಾಗೀಯ ಸಭಾಪತಿ ಕೆದೂರು ಸೀತಾರಾಮ ಶೆಟ್ಟಿ, ವಲಯ ಸಭಾಪತಿ ಅಶೋಕ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷ ಕೆ. ಚಂದ್ರಶೇಖರ ಕಲ್ಪತರು. ನಿಕಟ ಪೂರ್ವ ಕಾರ್ಯದರ್ಶಿ ಡಾ. ರಾಜೇಂದ್ರ ಕೆ, ನಿಕಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2020- 21 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶದಲ್ಲಿ ಇಲ್ಲಿನ ಕೋಡಿ ಬ್ಯಾರೀಸ್ ಪಿಯು ಕಾಲೇಜಿನ 20ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ , 70 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣಗೊಂಡಿದ್ದಾರೆ. ವಿಶಿಷ್ಟ ಶ್ರೇಣಿಯಲ್ಲಿ ಉತ್ತಿರ್ಣಗೊಂಡ ವಿರ್ದ್ಯಾರ್ಥಿಗಳಾದ ಅಮೃತ -98% ಶಮೀಮ್ – 97% ಪ್ರಿಯಾ – 95% ಅಕ್ಷತ – 94% ಸಫ್ನಾಝ್ – 94% ರಕ್ಷಿತಾ – 94%
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಕ್ಷಸಿಂಚನ ಟ್ರಸ್ಟ್ ರಿ., ಬೆಂಗಳೂರು ಇದರ ಹನ್ನೆರಡನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಯಕ್ಷಗಾನ ಸಾಹಿತ್ಯಾಸಕ್ತರಿಗಾಗಿ ವಿಶಿಷ್ಟವಾದ ಸ್ಪರ್ಧೆ ಎರ್ಪಡಿಸಲಾಗಿದೆ. ಛಂದೋಬದ್ಧ ಪ್ರಸಂಗಕರ್ತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯಕ್ಷಗಾನ ಪ್ರಸಂಗ ರಚನಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಈ ಸ್ಪರ್ಧೆಯ ಮೊದಲ ಬಹುಮಾನವು 10 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರ ಹಾಗೂ ಎರಡನೇ ಬಹುಮಾನವು 5 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಪ್ರಸಂಗ ರಚನಾ ಸ್ಪರ್ಧೆಯ ನಿಯಮಗಳು: ಪ್ರಸಂಗವು ಪೌರಾಣಿಕ ಪ್ರಸಂಗವಾಗಿರಬೇಕು. ಕಥೆಯ ಎಳೆಯು ಯಾವುದಾದರೂ ಪುರಾಣಗಳಲ್ಲಿ ದಾಖಲಾಗಿರಬೇಕು. ಸ್ಥಳ ಪುರಾಣ ಹಾಗೂ ಕ್ಷೇತ್ರ ಮಹಾತ್ಮೆಯ ಕಥೆಗಳನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ. ಕಥೆಯ ಬಗ್ಗೆ ಹಾಗೂ ಬಳಸಿದ ಮೂಲದ ಬಗ್ಗೆ ನೋಂದಣಿ ಮಾಡಿಕೊಳ್ಳುವ ಸಮಯದಲ್ಲಿ ತಿಳಿಸಬೇಕು ಹಾಗೂ ಕಡ್ಡಾಯವಾಗಿ ಕೊನೆಗೆ ಅದೇ ಕಥೆಯ ಪ್ರಸಂಗವನ್ನು ಸ್ಪರ್ಧೆಗೆ ಕಳುಹಿಸಿಕೊಡಬೇಕು. ಈಗಾಗಲೇ ಪ್ರಕಟನೆ/ಪ್ರದರ್ಶನಗೊಂಡ ಕೃತಿಗಳನ್ನು ಬಳಸುವಂತಿಲ್ಲ. ಸ್ಪರ್ಧೆಗೆ ವಯಸ್ಸಿನ ಮಿತಿ ಇರುವುದಿಲ್ಲ. ಪ್ರಸಂಗ ರಚನೆಗೆ 4 ತಿಂಗಳುಗಳ ಕಾಲಾವಕಾಶ ನೀಡಲಾಗುತ್ತದೆ.…
