Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ವೀರ ವಿಠಲ ಭಜನಾ ಮಂಡಳಿಯ ಸದಸ್ಯರು ಗಂಗೊಳ್ಳಿ ನಿನಾದ ಸಂಸ್ಥೆಯ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಪಂಡರಪುರದ ಶ್ರೀ ವಿಠಲ ರಕುಮಾಯಿ ದೇವಸ್ಥಾನದಲ್ಲಿ ಭಜನಾ ಸೇವೆ ಸಮರ್ಪಿಸಿದರು. ನಿನಾದ ಸಂಸ್ಥೆಯ ಅಧ್ಯಕ್ಷ ಎಂ.ಮುಕುಂದ ಪೈ ನೇತೃತ್ವದಲ್ಲಿ ಸುಮಾರು ಎರಡು ಗಂಟೆಗಳ ಕಾಲ ಭಜನೆ ನಡೆಸಿದ ಭಜನಾ ಮಂಡಳಿಯ ಸದಸ್ಯರು ಕೆಲ ಕಾಲ ಭಕ್ತರು ಭಾವಪರವಶರನ್ನಾಗಿ ಮಾಡಿದರು. ದೇವಸ್ಥಾನದ ಒಳಗೆ ಭಜನೆ ಮಾಡುವ ಅವಕಾಶ ದೊರೆತಿರುವುದು ಅವಿಸ್ಮರಣೀಯ. ದೇವಸ್ಥಾನದಲ್ಲಿ ಭಜನೆ ನಡೆಸಿದ ಒಂದೊಂದು ಕ್ಷಣ ಕೂಡ ವಿಶಿಷ್ಟ ರೋಮಾಂಚನ ನೀಡಿತ್ತು ಎಂದು ಭಜನಾ ಸೇವೆ ಅರ್ಪಿಸಿದ ಸದಸ್ಯರು ಧನ್ಯತೆಯಿಂದ ನುಡಿದಿದ್ದಾರೆ. ಇಂತಹ ಅದ್ಭುತ ಅವಕಾಶ ಕಲ್ಪಿಸಿದ ದೇವಸ್ಥಾನದ ಆಡಳಿತ ಮಂಡಳಿಯವರಿಗೆ ಹಾಗೂ ಸಹಕರಿಸಿದ ಪ್ರತಿಯೊಬ್ಬರಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವಕ್ವಾಡಿ ಗುರುಕುಲ ಶಾಲೆಯ ಕಿಂಡರ್ ಗಾರ್ಟನ್ ವಿಭಾಗದಲ್ಲಿ ಬಣ್ಣಗಳಲ್ಲಿ ರಂಗಾದ ಕೆಂಪು ಬಣ್ಣದ ದಿನವನ್ನು ಪುಟಾಣಿಗಳು ವಿಶೇಷವಾಗಿ ಆಚರಿಸಿದರು. ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಪುಟಾಣಿಗಳಿಗೆ ಬಣ್ಣವನ್ನು ಪರಿಚಯಿಸುವುದು. ಸಾಮಾನ್ಯವಾಗಿ ಮಕ್ಕಳು ಆಕರ್ಷಿತರಾಗುವುದು ಬಣ್ಣದಿಂದ ಹಾಗಾಗೀ ಪುಟಾಣಿಗಳಿಗೆ ಮೊದಲು ಬಣ್ಣಗಳನ್ನು ಪರಿಚಯಿಸಿ ನಂತರ ಇತರ ವಿಷಯಗಳನ್ನು ತಿಳಿಸುವುದು ಉತ್ತಮ ಕಲಿಕೆ ಎಂಬುದು ನಮ್ಮ ಅನಿಸಿಕೆ. ಆ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪುಟಾಣಿಗಳೆಲ್ಲರೂ ಕೆಂಪು ಬಣ್ಣದ ಉಡುಗೆ ತೊಟ್ಟು ಶಾಲೆಗೆ ಹಾಜರಾದರು ಜೊತೆಗೆ ಪ್ರತಿ ತರಗತಿ ಕೋಣೆಯಲ್ಲಿ ಕೂಡ ಕೆಂಪು ಬಣ್ಣದ ವಿವಿಧ ಅಲಂಕಾರಿಕ ವಸ್ತುಗಳು ಬಲೂನ್, ಆಟಿಕೆಗಳು, ಹಣ್ಣುಗಳ ಹಾಗೂ ವಿವಿಧ ರೀತಿಯ ನಕ್ಷೆಗಳು ತರಗತಿ ಕೋಣೆಯಲ್ಲಿ ರಾರಾಜಿಸುತ್ತಿದ್ದವು ಮತ್ತು ಶಿಕ್ಷಕಿಯರು ಕೆಂಪು ಬಣ್ಣದ ಸೀರೆ ಉಟ್ಟು ಪುಟಾಣಿಗಳ ಜೊತೆ ಸೇರಿ ವೃತ್ತದ ಸಮಯದಲ್ಲಿ ಹಲವಾರು ಚಟುವಟಿಕೆಗಳನ್ನು ಮಾಡಿ ಹಾಡಿ ಕುಣಿದರು. ಪುಟಾಣಿಗಳು ವಿವಿಧ ಚಿತ್ರಗಳಿಗೆ ಕೆಂಪು ಬಣ್ಣವನ್ನು ತುಂಬಿ ಆನಂದಿಸಿದರು. ಶಿಕ್ಷಕಿಯರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಗೋಳಿಹೊಳೆ ಶ್ರೀ ಮೂಕಾಂಬಿಕಾ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳಿಗೆ ಚುನಾವಣೆಯ ಕುರಿತು ಜ್ಞಾನಾನುಭವ ನೀಡುವ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಯಿತು. ಶಾಲೆಯ ವಿದ್ಯಾರ್ಥಿ ನಾಯಕ ಹಾಗೂ ಉಪನಾಯಕನ ಆಯ್ಕೆಯನ್ನು ವಿಧಾನಸಭಾ ಚುನಾವಣಾ ಮಾದರಿಯಂತೆ ನಡೆಸಲಾಯಿತು. ಎಂಟು ವಿದ್ಯಾರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಎರಡು ದಿನ ಶಾಲೆಯಲ್ಲಿ ಪ್ರಚಾರವನ್ನು ಕೈಗೊಂಡರು. ಎರಡು ಮತಕೇಂದ್ರಗಳಲ್ಲಿ ಶಾಲಾ ಗುರುತಿನ ಚೀಟಿಯೊಂದಿಗೆ ಬಂದು ತಮ್ಮ ಆಯ್ಕೆಯ ನಾಯಕ, ಉಪನಾಯಕನಿಗೆ ಮತನೀಡಿದರು. ನಂತರ ನಡೆದ ಮತ ಎಣಿಕೆಯಲ್ಲಿ ನಾಯಕನಾಗಿ ಸುಚಿ ಶೆಟ್ಟಿ, ಉಪನಾಯಕನಾಗಿ ಅಭೀಷ್ ಮೊಗವೀರ ಆಯ್ಕೆಯಾದರು. ಪ್ರಾಂಶುಪಾಲ ಚೇತನ್ ಕೆ. ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಶಿಕ್ಷಕರು ಸಹಕರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ್ ಭಾರತ್ ಅಭಿಯಾನಕ್ಕೆ ಸ್ವಚ್ಛ್ ಭಾರತ್ ಸಮ್ಮರ್ ಇಂಟರ್ನ್‌ಶಿಪ್ ಪ್ರೋಗ್ರಾಂ ಯೋಜನೆಯಲ್ಲಿ ತಮ್ಮದೇ ಆಗಿರುವ ಕೊಡುಗೆ ನೀಡಲು ಕೊಲ್ಲೂರು ಮಹಿಳಾ ಮಂಡಲದ ಆಸಕ್ತ ಮಹಿಳಾ ಸದಸ್ಯರು ಮುಂದೆ ಬಂದಿದ್ದಾರೆ. ಪ್ರತಿದಿನ4-5 ಗಂಟೆ ಸ್ವಚ್ಛತಾ ಅಭಿಯಾನಕ್ಕಾಗಿ ಮೀಸಲಿಟ್ಟಿರುವ ಮಹಿಳೆಯರು ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಬೆಳೆದು ನಿಂತಿರುವ ಗಿಡಗಂಟಿಗಳನ್ನು ತೆರವುಗೊಳಿಸುವ ಹಾಗೂ ಮೈದಾನವನ್ನು ಸ್ವಚ್ಛಗೊಳಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ನಿಗದಿತ ಸಮಯದಲ್ಲಿ ಸ್ವಚ್ಛ್ ಭಾರತ್ ಸಮ್ಮರ್ ಇಂಟರ್ನ್‌ಶಿಪ್ ಪ್ರೋಗ್ರಾಂನಡಿ ಕೇಂದ್ರ ಸರ್ಕಾರ ನೀಡುವ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಬೇಕೆಂಬ ನೆಲೆಯಲ್ಲಿ ನಾವೆಲ್ಲರೂ ಒಂದಾಗಿ ಪ್ರಯತ್ನಿಸಲಿದ್ದೇವೆ. ನಮ್ಮ ಮನೆಕೆಲಸಗಳನ್ನು ತ್ವರಿತವಾಗಿ ಮುಗಿಸಿಕೊಂಡು ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಒಂದಿಷ್ಟು ಸಮಯವನ್ನು ಇದಕ್ಕಾಗಿ ಮೀಸಲಿರಿಸಿದ್ದು, ಜುಲೈ31ರ ಒಳಗೆ ನೂರು ಗಂಟೆ ಕೆಲಸ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಸಂಘದ ಅಧ್ಯಕ್ಷೆ ಪ್ರಸನ್ನಾ ಶರ್ಮ ಹಾಗೂ ಕಾರ್ಯದರ್ಶಿ ಲತಾ ಶೆಟ್ಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಶಾಲೆಯ ಸುತ್ತಲೂ ನೀರು ತುಂಬಿಕೊಂಡಿರುವುದರಿಂದ ಮಕ್ಕಳು ಶಾಲೆಗೆ ಬರಲು ತೊಂದರೆಯಾಗುತ್ತಿದೆ. ಶಾಲಾ ವಠಾರ ತಗ್ಗು ಪ್ರದೇಶವಾಗಿರುವುದರಿಂದ ಮಳೆ ನೀರು ಈ ಪರಿಸರದಲ್ಲಿ ಸಂಗ್ರಹಗೊಳ್ಳುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಖಾರ್ವಿಕೇರಿ ಪ್ರದೇಶದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದ್ದು, ಮಳೆ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಮಾಡದಿರುವುದರಿಂದ ಮಳೆ ನೀರು ನಿಂತುಕೊಳ್ಳಲಾರಂಭಿಸದೆ. ಶಾಲಾ ವಠಾರದಲ್ಲಿ ಮಳೆ ನೀರು ನಿಂತು ಮಕ್ಕಳಿಗೆ ತೊಂದರೆಯಾಗುತ್ತಿದ್ದರೂ ಸ್ಥಳೀಯಾಡಳಿತ ಈವರೆಗೆ ಯಾವುದೇ ಕ್ರಮಕೈಗೊಳ್ಳದಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಆದಷ್ಟು ಶೀಘ್ರ ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಮಾಡುವಂತೆ ಪೋಷಕರು ಆಗ್ರಹಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳ್ಳೂರು ಗ್ರಾಮದ ಕಾಕ್ತೋಟ ಎಂಬಲ್ಲಿ ಶುಕ್ರವಾರ ದೈವಸ್ಥಾನದ ಆವರಣ ಗೋಡೆ ಕುಸಿದು ಸ್ನಾತಕೊತ್ತರ ಪದವಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸೇನಾಪುರಮನೆ ಚಂದ್ರಶೇಖರ ಶೆಟ್ಟಿ-ಹೇಮಾ ದಂಪತಿಯ ಮಗಳು ಧನ್ಯಾ ಕೆ.(22) ಮೃತ ದುರ್ದೈವಿ. ಘಟನೆಯ ವಿವರ: ಧನ್ಯಾ ಮನೆಯಿಂದ 100 ಮೀಟರು ಅಂತರದಲ್ಲಿದ್ದ ಜಟ್ಟಿಗೇಶ್ವರ ದೈವಸ್ಥಾನಕ್ಕೆ ಹೋಗುತ್ತಿದ್ದಾಗ ಅದರ ಪೂರ್ವ ಪಾರ್ಶ್ವದ ಆವರಣ ಕುಸಿದು ಅವಳ ಮೇಲೆ ಬಿದ್ದಿದೆ. ಅದೇ ವೇಳೆಗೆ ಬಿರುಸಾದ ಮಳೆ ಬೀಳುತ್ತಿತ್ತು. ಆವರಣದ ಕಲ್ಲುಗಳ ಅಡಿ ಸಿಲುಕಿದ್ದ ಅವಳ ಮೇಲೆ ನೀರು ಹರಿದ ಕಾರಣ ಉಸಿರುಕಟ್ಟಿ ಮೃತಳಾದಳೆಂದು ಶಂಕಿಸಲಾಗಿದೆ. ಆ ದಾರಿಯಾಗಿ ಕಿರಿಮಂಜೇಶ್ವರ ಸರ್ಕಾರಿ ಪ್ರೌಢಶಾಲೆಗೆ ಹೋಗುತ್ತಿದ್ದ ೧೦ನೇ ತರಗತಿ ವಿದ್ಯಾರ್ಥಿ ಕೃತನ್ ಶೆಟ್ಟಿ ಕಲ್ಲುಗಳ ಅಡಿ ಕೊಡೆ, ತಲೆ ಕೂದಲು ನೋಡಿ ಆಕೆಯ ಮನೆಗೆ ಓಡಿಹೋಗಿ ವಿಷಯ ತಿಳಿಸಿದ್ದಾನೆ. ನೆರೆಕೆರೆಯವರು ಬಂದು ಕಲ್ಲುಗಳನ್ನು ಸರಿಸಿ ಅವಳನ್ನು ಮೇಲೆತ್ತುವುದರೊಳಗೆ ಅವಳು ಇಹಲೋಕದ ಯಾತ್ರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆಯಾಗಿದ್ದಾರೆ. 2015ರಲ್ಲಿ ವಿಧಾನ ಪರಿಷತ್ ಪಂಚಾಯತ್ ಪ್ರತಿನಿಧಿಯಾಗಿ ಬಿಜೆಪಿ ಪಕ್ಷದಿಂದ ಸ್ವರ್ಧಿಸಿ ಆಯ್ಕೆಯಾಗಿದ್ದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆ ಹಾಗೂ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈಶ್ವರಪ್ಪ ಅವರು ಶಾಸಕರಾಗಿ ಆಯ್ಕೆಯಾದ ಬಳಿಕ ತೆರವಾದ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಶ್ರೀನಿವಾಸ  ಪೂಜಾರಿ ಅವರನ್ನು ಆಯ್ಕೆಮಾಡಲಾಗಿದೆ. ರಾಜಕಾರಣದಲ್ಲಿ ಸರಳ, ಸಜ್ಜನಿಕೆಗೆ ಅನ್ವರ್ಥ ಎಂಬಂತೆ ತನ್ನನ್ನು ತೊಡಗಿಕೊಂಡು ಎಲ್ಲರೊಂದಿಗೂ ಬೆರತು ವಿಶ್ವಾಸ ಹಾಗೂ ಘನತೆಯನ್ನು ಉಳಿಸಿಕೊಂಡ ಅಪರೂಪದ ರಾಜಕಾರಣಿ ಕೋಟ ಶ್ರೀನಿವಾಸ ಪೂಜಾರಿ. ಒಬ್ಬ ಸಾಮಾನ್ಯ ಛಾಯಾಗ್ರಾಹಕನಾಗಿದ್ದ ವ್ಯಕ್ತಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ವಿಧಾನ ಪರಿಷತ್‌ಗೆ ಆಯ್ಕೆಯಾಗಿ, ಮುಜರಾಯಿ ಮಂತ್ರಿಯೂ ಆದ ಪರಿ ಅಚ್ಚರಿ ಮೂಡಿಸುವಂತದ್ದು. ತನ್ನ ಸ್ಪಷ್ಟವಾದ ಮಾತು, ಒಲವು ನಿಲುವುಗಳಿಂದಲೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ನೂತನವಾಗಿ ಆರ್‌ಟಿಸಿ ವಿತರಣಾ ಸೇವೆ ಆರಂಭಿಸಲಾಯಿತು. ಈ ಸೇವೆಗೆ ಚಾಲನೆ ನೀಡಿದ ಕುಂದಾಪುರ ಉಪವಿಭಾಗಾಧಿಕಾರಿ ಟಿ.ಭೂಬಾಲನ್ ಮಾತನಾಡಿ ಪಹಣಿ ಪತ್ರದ ಗಣೀಕರಣ ವ್ಯವಸ್ಥೆಯಲ್ಲಿ ನಮ್ಮ ಇತರ ರಾಜ್ಯಗಳಿಗೆ ರೋಲ್ ಮಾಡೆಲ್ ಆಗಿದೆ. ಆರ್‌ಟಿಸಿ ವ್ಯವಸ್ಥೆಯ ಬಗ್ಗೆ ರಾಜ್ಯ ಸರಕಾರ ಹೆಚ್ಚು ಗಮನಹರಿಸಿ ಗಣೀಕರಣಗೊಳಿಸಿರುವುದರಿಂದ ಸಾರ್ವಜನಿಕರು ಸುಲಭವಾಗಿ ಆರ್‌ಟಿಸಿಯನ್ನು ಪಡೆಯಲು ಸಾಧ್ಯವಾಗುತ್ತಿದೆ. ವಿಕೇಂದ್ರಿಕರಣ ವ್ಯವಸ್ಥೆಯಿಂದ ಪಹಣಿ ಪತ್ರವನ್ನು ಆನ್‌ಲೈನ್‌ನಲ್ಲಿ ದೊರೆಯುವ ವ್ಯವಸ್ಥೆ ಮಾಡಿರುವುದರಿಂದ ಸಾರ್ವಜನಿಕರು ತಾಲೂಕು, ನಾಡ ಕಛೇರಿಗಳಿಗೆ ಪ್ರತಿದಿನ ಅಲೆಯುವುದು ತಪ್ಪಿದೆ. ಈ ವ್ಯವಸ್ಥೆಯಿಂದ ಕಂದಾಯ ಇಲಾಖೆ ಮೇಲೆ ಒತ್ತಡ ಕೂಡ ಕಡಿಮೆಯಾಗಿದೆ ಎಂದು ಹೇಳಿದರು. 98 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯಲ್ಲಿ ಸಾರ್ವಜನಿಕರ ಹಾಗೂ ರೈತರ ಅನುಕೂಲತೆ ಕಲ್ಪಿಸುವ ಉದ್ದೇಶದಿಂದ ಆರ್‌ಟಿಸಿ ವಿತರಣೆ ಸೇವೆಯನ್ನು ಪ್ರಾರಂಭಿಸಿರುವು ಶ್ಲಾಘನೀಯ. ಪ್ರಸಕ್ತ ವರ್ಷದಲ್ಲಿ ಒಂದು ಕೋಟಿ ರೂ. ಲಾಭ ಗಳಿಸಿರುವ ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ:  ಉಡುಪಿ ಜಿಲ್ಲಾ ಕಾಂಗ್ರೆಸ್‌ ನ ಮಾಹಿತಿ ತಂತ್ರಜ್ಞಾನ ವಿಭಾಗದ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಕಲತ್ರಪಾದೆ ಇವರು ನೇಮಕಗೊಂಡಿದ್ದಾರೆ. ಇವರು ಈ ಹಿಂದೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಉಪಾಧ್ಯಕ್ಷರಾಗಿ ಹಾಗೂ ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿ ಕೋಮುವಾದವನ್ನು ಬಲವಾಗಿ ವಿರೋದಿಸಿ ತಮ್ಮ ನೇರ ಬರವಣಿಗೆಯ ಮೂಲಕ ಗುರುತಿಸಿಕೊಂಡಿರುವ ಸತೀಶ್ ಪೂಜಾರಿ ಇವರನ್ನು ರಾಜ್ಯ ಕಾಂಗ್ರೆಸ್ ಐ.ಟಿ.ಸೆಲ್ ಅಧ್ಯಕ್ಷ ನಿರಂಜನ್ ರಾವ್ ಅವರು ಉಡುಪಿ ಜಿಲ್ಲೆಯ ಕಾಂಗ್ರೆಸ್ ಐ.ಟಿ. ಸೆಲ್ ನ ಅಧ್ಯಕ್ಷರಾಗಿ ನಿಯುಕ್ತಿಗೊಳಿಸಿದ ಪತ್ರವನ್ನು ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್‌ ಪ್ರದಾನ ಕಾರ್ಯದರ್ಶಿ ರವಿಶಂಕರ್ ಶೇರಿಗಾರ್, ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸದಾಶಿವ ದೇವಾಡಿಗ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ನಾಡ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಡಾಕೆರೆ, ಚಿಕ್ಕಳ್ಳಿ ಮತ್ತು ಪಡುಕೋಣೆ ಭಾಗದಲ್ಲಿ ಮಳೆಯಿಂದ ಭತ್ತದ ಕೃಷಿಯ ಗದ್ದೆ ಪ್ರದೇಶಗಳು ಸಂಪೂರ್ಣ ಜಲಾವೃತ ಗೊಂಡಿದ್ದು, ಸ್ಥಳಕ್ಕೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಭೇಟಿ ನೀಡಿದರು. ಬಂಟ್ವಾಡಿ ಡ್ಯಾಂ ಹಾಗೂ ಮೊವಾಡಿ ಸೇತುವೆಗಳ ಅಪೂರ್ಣ ಕಾಮಗಾರಿಗಳಿಂದಾಗಿ ಈ ಅನಾಹುತ ಸೃಷ್ಟಿಯಾಗಿದೆ ಎಂದು ಸ್ಥಳೀಯರು ಶಾಸಕರಿಗೆ ದೂರು ನೀಡಿದ್ದು, ಕೂಡಲೇ ಸಣ್ಣ ನೀರಾವರಿ ಎಂಜಿನಿಯರ್‌ ಹಾಗೂ ಪಿಡಬ್ಲ್ಯುಡಿ ಎಂಜಿನಿಯರ್‌ ಅವರನ್ನು ಸ್ಥಳಕ್ಕೆ ಕರೆಸಿದ ಶಾಸಕರು ಜನಸಾಮಾನ್ಯರಿಗೆ ತೊಂದರೆ ಯಾಗದಂತೆ, ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪಂಚಾಯತ್‌ ಸದಸ್ಯರಾದ ಶ್ರೀಧರ್‌ ದೇವಾಡಿಗ, ದಿನೇಶ್‌ ಶೆಟ್ಟಿ, ಅಶೋಕ್‌ ಶೆಟ್ಟಿ, ಗೋಪಾಲಕೃಷ್ಣ ನಾಡ ಉಪಸ್ಥಿತರಿದ್ದರು.

Read More