Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಹುಬ್ಬಳ್ಳಿಯ ಸುಮಧುರ ಎಂಟರ್ಟೈನ್ಮೆಂಟ್ ಫೌಂಡೇಶನ್ ಏರ್ಪಡಿಸಿದ್ದ ಝೇಂಕಾರ ಸಂಗೀತ ಉಪಕರಣಗಳನ್ನು ನುಡಿಸುವ ಆನ್‌ಲೈನ್ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಬಾಲ ಸ್ಯಾಕ್ಸೋಫೋನ್ ಪ್ರತಿಭೆ ಸಂಜಿತ್ ಎಂ ದೇವಾಡಿಗ ಅತ್ಯಧಿಕ ವಿವ್ಸ್ ಗಳ ಜೊತೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರು ಗಂಗೊಳ್ಳಿಯ ಮಾಧವ ದೇವಾಡಿಗ ಮತ್ತು ಸಾವಿತ್ರಿ ದಂಪತಿಯ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ಮರವಂತೆ ಚಿತ್ತಾರಿ ಶ್ರೀ ಮಹಾಗಣಪತಿ ದೇವಸ್ಥಾನ ಮರುರಚನೆಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ನೀಡಲಾದ ರೂ. 5 ಲಕ್ಷ ಅನುದಾನದ ಚೆಕ್‌ಅನ್ನು ಕ್ಷೇತ್ರದ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಅವರಿಗೆ ಹಸ್ತಾಂತರಿಸಲಾಯಿತು. ಚೆಕ್ ಸ್ವೀಕರಿಸಿ ಮಾತನಾಡಿದ ಪ್ರಭಾಕರ ಶೆಟ್ಟಿ,300 ವರ್ಷಗಳ ಹಿಂದೆ ಸ್ಥಾಪನೆಯಾದ ಈ ದೇಗುಲ ಕಾಲಾಂತರದಲ್ಲಿ ಅವನತಿಯತ್ತ ಸಾಗಿತು. ಈಚೆಗೆ ಭಕ್ತರು ಜೀರ್ಣೋದ್ಧಾರ ಸಮಿತಿ ರಚಿಸಿಕೊಂಡು ರೂ 1ಕೋಟಿ ವೆಚ್ಚದಲ್ಲಿ ಮರುನಿರ್ಮಿಸಲು ನಿರ್ಧರಿಸಿ, ಕಾರ್ಯೋನುಖರಾದೆವು. ಧರ್ಮಸ್ಥಳದ ಕೊಡುಗೆ ನಮ್ಮ ಹೊರೆಯನ್ನು ಅಷ್ಟರ ಮಟ್ಟಿಗೆ ತಗ್ಗಿಸಿದೆ. ಅದಕ್ಕಾಗಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ನಾವು ಋಣಿ ಎಂದರು. ರವಿ ಮಡಿವಾಳ ಸ್ವಾಗತಿಸಿ ವಂದಿಸಿದರು. ಕ್ಷೇತ್ರದ ಯೋಜನಾಧಿಕಾರಿ ಪುಷ್ಪರಾಜ, ಕ್ಷೇತ್ರದ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲ್ಲೂಕು ಯೋಜನಾಧಿಕಾರಿ ಶಶಿರೇಖಾ ಪಿ, ಯೋಜನೆಯ ಮೇಲ್ವಿಚಾರಕ ವೆಂಕಟೇಶ, ವಲಯಾಧ್ಯಕ್ಷೆ ವೀಣಾ, ಮರವಂತೆ ಒಕ್ಕೂಟದ ಸೇವಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಧನಾ ಕಲಾ ಸಂಗಮ ಕುಂದಾಪುರವು ಆನೆಗುಡ್ಡೆ ರಥೋತ್ಸವದ ಸಂದರ್ಭದಲ್ಲಿ ಆಯೋಜಿಸಿದ ಗಜವರ್ಣ 2020 – ಗಣಪತಿ ಚಿತ್ರ ಬಿಡಿಸುವ ಸ್ಪರ್ಧೆಯು ಸಾಂಗವಾಗಿ ನಡೆದಿದ್ದು, ಕುಂದಾಪುರ ಮತ್ತು ಬೈಂದೂರು ತಾಲೂಕಿನ ಸುಮಾರು 200 ಸ್ಪರ್ಧಿಗಳು ಬಾಗವಹಿಸಿದ್ದರು. ಈ ಸ್ಪರ್ಧೆಯ ಪಲಿತಾಂಶ ಈ ಕೇಳಗಿನಂತಿದೆ. ಪ್ರಥಮ ವಿಭಾಗ ಎಲ್ ಕೆಜಿಯಿಂದ 1ನೇ ತರಗತಿ – ಪ್ರಥಮ ಸಾತ್ವಿಕ್, ದ್ವಿತೀಯ ಸಾನವ್, ತ್ರತೀಯ ಅದ್ವಿತಿ ಶೆಟ್ಟಿ, ಸಮಾಧಾನಕರ ಆರಾಧ್ಯ ಶೆಟ್ಟಿ ಹಾಗೂ ಸಾತ್ವಿಕ್ ಆರ್ ರಾವ್. ದ್ವಿತೀಯ ವಿಭಾಗ 2ನೇ ತರಗತಿಯಿಂದ 4ನೇ ತರಗತಿ – ಪ್ರಥಮ ಸಿಂಚನ ಎಸ್ ಆಚಾರ್, ದ್ವಿತೀಯ ತನ್ವಿ ಪಿ ರಾವ್, ತ್ರತೀಯ ಯಕ್ಶಿತ್ ಎಸ್ ಶೆಟ್ಟಿ, ಸಮಾಧಾನಕರ ರಿಶಿಕಾ ಎಮ್ ಹಾಗೂ ಸಂಜಿತ್ ಎಮ್ ದೇವಡಿಗಾ. ತ್ರತೀಯ ವಿಭಾಗ 5ನೇ ತರಗತಿಯಿಂದ 7ನೇ ತರಗತಿ – ಪ್ರಥಮ ಯಶ್ವಿ ಆರ್, ದ್ವಿತೀಯ ಶ್ಯಾಮ್, ತ್ರತೀಯ ಶ್ರೀನಿಧಿ ಪಿ ಗೌಡ, ಸಮಾಧಾನಕರ ಪ್ರತೀಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೆಲವು ವ್ಯಕ್ತಿಗಳು ಎನ್‌ಪಿಸಿಐಎಲ್ (ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿ) ಕೈಗಾ, ವೆಬ್‌ಸೈಟ್‌ನ ಹೆಸರಿನಲ್ಲಿ, ಸುಳ್ಳು ದಾಖಲೆಗಳನ್ನು ಸೃಷ್ಠಿಸಿ, ನಕಲಿ ಉದ್ಯೋಗ ಭರವಸೆ ನೀಡಿ, ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಸುವಂತೆ ಸುಳ್ಳು ಇ-ಮೇಲ್‌ಗಳನ್ನು ಹಾಗೂ ದೂರವಾಣಿ ಕರೆಗಳನ್ನು ಮಾಡುತ್ತಿದ್ದು, ಇಂತಹ ವ್ಯಕ್ತಿಗಳಿಂದ ಹಣ ಪಾವತಿಸುವಂತೆ ಇ-ಮೇಲ್ ಅಥವಾ ದೂರವಾಣಿ ಕರೆಗಳು ಬಂದಲ್ಲಿ ಪ್ರತಿಕ್ರಿಯಿಸಬಾರದು. ಇಂತಹ ಆಮಿಷ ಒಡ್ಡುವ ವ್ಯಕ್ತಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಈ ರೀತಿಯ ಆಮಿಷಕ್ಕೆ ಬಲಿಯಾಗಿ ಹಣ ಕಳೆದುಕೊಂಡಲ್ಲಿ ಸಂಸ್ಥೆ ಜವಾಬ್ದಾರಿಯಾಗುವುದಿಲ್ಲ, ಎನ್‌ಪಿಸಿಐಎಲ್, ಕೈಗಾ ಸೈಟ್ ಮೆರಿಟ್ ಆಧಾರದ ಮೇಲೆ ಉದ್ಯೋಗಾಕಾಂಕ್ಷಿಗಳನ್ನು ಆಯ್ಕೆ ಮಾಡುತ್ತಿದ್ದು, ಉದ್ಯೋಗಾಕಾಂಕ್ಷಿಗಳಿಂದ ಯಾವುದೇ ಮೊತ್ತವನ್ನು ಅಥವಾ ಠೇವಣಿಯನ್ನು ಸ್ವೀಕರಿಸುವುದಿಲ್ಲ. ಈ ನಿಗಮದ ಯಾವುದೇ ಉದ್ಯೋಗಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ (https://www.npcilcareers.co.in/) ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ recrute.kgs@npcil.co.in ಸಂಪರ್ಕಿಸುವಂತೆ ಎನ್‌ಪಿಸಿಐಎಲ್ ಕೈಗಾ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ► ಬೈಂದೂರು: ಕೈಗಾದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಡಿ. 22 ಮತ್ತು 27ರಂದು ನಡೆಯುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು ಜಿಲ್ಲೆಯ ಒಟ್ಟು 153 ಗ್ರಾಮ ಪಂಚಾಯತ್‌ಗಳಲ್ಲಿ ನಡೆಯಲಿದ್ದು, ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲು, ಉಡುಪಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ, ಯಕ್ಷಗಾನ ಮತ್ತು ಜನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಅರಿವು ಮೂಡಿಸಲಾಗುತ್ತಿದೆ. ಉಡುಪಿಯ ಶ್ರೀ ಸುಬ್ರಹ್ಮಣ್ಯ ಯಕ್ಷಗಾನ ಕಲಾ ಮಂಡಳಿ ತಂಡದ ಕಲಾವಿದರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ ಕುರಿತಂತೆ ಅರಿವು ಮೂಡಿಸುತ್ತಿದ್ದು, ಗ್ರಾಮಸ್ಥರು ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೇ, ತಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಅರ್ಹ ವ್ಯಕ್ತಿಗೆ ಮತ ಹಾಕುವುದರ ಮೂಲಕ ಅವರನ್ನು ಆಯ್ಕೆ ಮಾಡುವಂತೆ ಪ್ರೇರೇಪಿಸುತ್ತಿದ್ದಾರೆ. ಅನರ್ಹ ವ್ಯಕ್ತಿಗೆ ಮತ ಚಲಾಯಿಸಿದರೆ ಅದರ ಪರಿಣಾಮ ಏನಾಗಲಿದೆ, ಅರ್ಹ ವ್ಯಕ್ತಿಗೆ ಮತ ಚಲಾಯಿಸುವುದರಿಂದ ಅಗುವ ಪ್ರಯೋಜನಗಳ ಕುರಿತು, ಯಕ್ಷಗಾನ ರೂಪಕದಲ್ಲಿ ಕಥೆಯನ್ನು ಸಿದ್ಧಪಡಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರದರ್ಶನ ನೀಡುತ್ತಿದ್ದಾರೆ. ಇದರೊಂದಿಗೆ ಗಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಇಂದು ಬೆಳಗಿನ ಜಾವ ದೈವಾಧೀನರಾದ ಉದ್ಯಮಿ, ಪದ್ಮಭೂಷಣ ಆರ್.ಎನ್.ಶೆಟ್ಟಿ ಅವರಿಗೆ ಚಿರಶಾಂತಿಯನ್ನು ಕೋರಿ ಶೃದ್ಧಾಂಜಲಿ ಸಭೆ ನಡೆಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ರೇಖಾ ಬನ್ನಾಡಿ ಮಾತನಾಡಿ, ಪದ್ಮಭೂಷಣ ಆರ್.ಎನ್ ಶೆಟ್ಟಿ ಅವರು ಸಮಾಜಕ್ಕೆ ದೇಶಕ್ಕೆ ಮಾದರಿಯಾಗಿ ನಿಂತವರು. ಅನೇಕ ಶಿಕ್ಷಣ ಸಂಸ್ಥೆಗಳು ಅವರ ದೇಣಿಗೆ ಪಡೆದಿವೆ. ಅವರು ಉದ್ಯಮಿ ಅಷ್ಟೇ ಅಲ್ಲದೇ ಸಮಾಜಮುಖಿತಾದ ಜೀವ ಪರಚಿಂತಕರು. ದೇಶವನ್ನು ಕಟ್ಟುವಲ್ಲಿತಮ್ಮ ಕೊಡುಗೆಯನ್ನು ನೀಡಿದವರು. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇವೆ. ಅವರ ಪತ್ನಿಗೆ ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ, ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ರಾಮಚಂದ್ರ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿಕಾಲೇಜಿನ ಪ್ರಧ್ಯಾಪಕರು ಪದ್ಮಭೂಷಣ ಆರ್.ಎನ್.ಶೆಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪ ಸಲ್ಲಿಸಿ ಶೃದ್ಧಾಂಜಲಿ ಸಲ್ಲಿಸಿ ಅಗಲಿದ ಆತ್ಮಕ್ಕೆ ಚಿರಶಾಂತಿಯನ್ನು ಕೋರಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪಡುಕರೆ ಬೀಚ್ ನಲ್ಲಿ ಮರೀನಾ ನಿರ್ಮಾಣ ಕುರಿತಂತೆ ಕಾರ್ಯ ಸಾಧ್ಯತಾ ವರದಿ ( ಫಿಸಿಬಲಿಟಿ ರಿಪೋರ್ಟ್) ಪಡೆಯುವ ಕುರಿತಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ , ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ಪಡುಕರೆ ತೀರದಲ್ಲಿ ನೈಸರ್ಗಿಕ ದ್ವೀಪಗಳಿದ್ದು, ಸುಮಾರು 1.66 ಕಿಮೀ ನಿಂದ 2 ಕಿಮೀ ವರೆಗೆ ಬ್ರೇಕ್ ವಾಟರ್ ನಿರ್ಮಿಸಿ, 3.69 ಕಿಮೀ ಜಾಗದಲ್ಲಿ ಮರೀನಾ ನಿರ್ಮಿಸಬಹುದಾಗಿದ್ದು, ಈ ಕುರಿತಂತೆ ಪುಣೆಯ ಸಿ.ಡಬ್ಲೂಯ.ಪಿ.ಆರ್.ಎಸ್ ನಿಂದ ಕಾರ್ಯ ಸಾಧ್ಯತಾ ವರದಿಯನ್ನು ಪಡೆದು, ನಂತರ ವಿಸ್ತೃತಾ ಯೋಜನಾ ವರದಿ ತಯಾರಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಮೂಲಕ ಈ ಕಾರ್ಯವನ್ನು ಕೈಗೊಳ್ಳುವಂತೆ ತಿಳಿಸಿದರು. ಇಡೀ ಭಾರತದಲ್ಲಿ ಪೂರ್ಣ ಪ್ರಮಾಣದ ಮರೀನಾ ಇಲ್ಲವಾಗಿದ್ದು, ಉಡುಪಿಯ ಪಡುಕರೆಯಲ್ಲಿ ಮರೀನಾ ನಿರ್ಮಾಣವಾದಲ್ಲಿ  ಜಾಗತಿಕ ಪ್ರವಾಸಿ ತಾಣದಲ್ಲಿ ಗುರುತಿಸಿಕೊಳ್ಳುವುದರ ಜೊತೆಗೆ, ವಿಫುಲ ಉದ್ಯೋಗವಕಾಶಗಳು ಮತ್ತು ರಾಜ್ಯದ ಪ್ರವಾಸೋಧ್ಯಮ ಬೆಳವಣಿಗೆಗೆ ಅತ್ಯಂತ ಪ್ರಮುಖ ಕೊಡುಗೆಯಾಗಲಿದೆ ಎಂದ ಜಿಲ್ಲಾಧಿಕಾರಿಗಳು, ಸ್ಥಳೀಯ ಪರಿಸರಕ್ಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿರಿಯ ಉದ್ಯಮಿ, ಶಿಕ್ಷಣ ತಜ್ಞ ಆರ್ ಎನ್ ಶೆಟ್ಟಿ(92) ಗುರುವಾರ ನಸುಕಿನ ಜಾವ 3.30ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕೃಷಿ ಕುಟುಂಬದಲ್ಲಿ 1928ರಲ್ಲಿ ಜನಿಸಿದ ರಾಮ ನಾಗಪ್ಪ ಶೆಟ್ಟಿ ಅವರು ಪ್ರೌಢಶಿಕ್ಷಣದ ಬಳಿಕ ಶಿರಸಿಯ ನಾಗರಿಕ ಗುತ್ತಿಗೆದಾರರರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ಮುಂದೆ ಅವರು ಉದ್ಯಮಿಯಾಗಿ ಬೆಳೆದು ಬಹುದೊಡ್ಡ ಹೆಸರು ಮಾಡಿದ್ದರು. 1967ರಲ್ಲಿ ಪಾಲುದಾರ ಕಂಪೆನಿಯಾದ ಆರ್. ಎನ್. ಶೆಟ್ಟಿ ಆಂಡ್ ಕಂಪೆನಿ ಆರಂಬಿಸಿದರು. ಅದರ ಮೂಲಕ ಹಿಡಕಲ್ ಜಲಾಶಯ, ತಟ್ಟಿಹಳ್ಳ ಜಲಾಶಯ, ಸೂಪ ಜಲಾಶಯ, ಗೇರುಸೊಪ್ಪ ಜಲಾಶಯ, ವರಾಹಿ ವಿದ್ಯುತ್ ಯೋಜನೆ, ಕೊಂಕಣ ರೈಲು ಸುರಂಗ, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮೊದಲಾದ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಆಸ್ಪತ್ರೆ, ಮೋಟಾರ್ಸ್ ಕಂಪೆನಿ, ಫೈನಾನ್ಸ್, ಶಿಕ್ಷಣ ಸಂಸ್ಥೆಗಳನ್ನು ಅವರು ಸ್ಥಾಪಿಸಿ ಯಶಸ್ಸು ಗಳಿಸಿದ್ದರು. ಮುರುಡೇಶ್ವರ ದೇವಸ್ಥಾನದ ಅನುವಂಶಿಕ ಾಡಳಿತಾಧಿಕಾರಿಯಾಗಿ ಅದನ್ನು ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನವದೆಹಲಿಯ ಅಲ್ ಇಂಡಿಯಾ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(AIIMS) ಪ್ರವೇಶ ಪರೀಕ್ಷೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಕ್ಷಿಪ್ರಾ ದೇವಾಡಿಗ ಜನರಲ್ ಮೆರಿಟ್ ಕೆಟಗರಿಯಲ್ಲಿ INI -CET MD/MSನಲ್ಲಿ ರಾಷ್ಟ್ರಮಟ್ಟದಲ್ಲಿ 139ನೇ ರ್ಯಾಂಕ್ ಹಾಗೂ ಓಬಿಸಿ ಕೆಟಗರಿಯಲ್ಲಿ 21ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಬೈಂದೂರು ತಾಲೂಕು ಬಿಜೂರು ಗ್ರಾಮದ ಮುತ್ತಯ್ಯ ದೇವಾಡಿಗ ಹಾಗೂ ಜಯಶ್ರೀ ದೇವಾಡಿಗ ದಂಪತಿಯ ಪುತ್ರಿಯಾದ ಕ್ಷಿಪ್ರ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ 2020ರಲ್ಲಿ ವೈದ್ಯಕೀಯ ಪದವಿಯನ್ನು ಮುಗಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಂಘ ಸಂಸ್ಥೆಗಳು ಊರಿನ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವುದು ಶ್ಲಾಘನಾರ್ಹವಾಗಿದ್ದು, ಇಂತಹ ಸಂಸ್ಥೆಗಳು ಇನ್ನಷ್ಟು ಬೆಳೆಯಲಿ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀಚಂದ್ರ ಸೂಡ ಹೇಳಿದರು. ಅವರು ಬುಧವಾರ ಶಿರೂರು ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಶಿರೂರು ಅಸೋಸಿಯೇಷನ್ ಅವರು ಸಾರ್ವಜನಿಕ ಸೇವೆಗಾಗಿ ಕೊಡುಗೆಯಾಗಿ ನೀಡಿದ ನೂತನ ಆಂಬ್ಯುಲೆನ್ಸ್ ಹಸ್ತಾಂತರಿಸಿ ಮಾತನಾಡಿ ಎಂ.ಎಂ. ಹೌಸ್‌ನವರು ಊರಿನ ಹಿತಕ್ಕಾಗಿ ಊದಾರ ದೇಣಿಗೆ ನೀಡುತ್ತಿರುವುದು ಶ್ಲಾಘನಾರ್ಹ ಎಂದರು. ಶಿರೂರು ಅಸೋಸಿಯೇಷನ್ ಉಪಾಧ್ಯಕ್ಷ ಸಾದನ್‌ದಾಸ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸಂಸ್ಥೆಯ ಮೂಲಕ ಹಲವಾರು ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ವಿದೇಶಗಳಲ್ಲಿ ನೆಲೆಸಿರುವ ಶಿರೂರಿಗರು ಊರಿನ ಅಭಿವೃದ್ಧಿಯ ದೃಷ್ಟಿಯಿಂದ ಒಂದುಗೂಡಿ ಆರಂಭಿಸಿದ ಶಿರೂರು ಅಸೋಸಿಯೇಷನ್ ಹಲವಾರು ಸೇವಾ ಕಾರ್ಯಗಳನ್ನು ಕೈಗೊಂಡು ಊರಿನ ಪ್ರಗತಿಯಲ್ಲಿ ಕೈಜೋಡಿಸಿದೆ. ಇಲ್ಲಿ ನಾವು ರಾಜಕಿಯ ರಹಿತವಾಗಿ ಶ್ರಮಿಸುತ್ತಿದ್ದು, ಊರಿನವರ ಸಹಕಾರವೂ ಅತಿಮುಖ್ಯ ಎಂದರು. ಮುಖ್ಯ ಅತಿಥಿಗಳಾಗಿ ಶಿರೂರು ಎಂ.ಎಂ. ಹೌಸ್‌ನ ಮಣೆಗಾರ್ ಜಿಪ್ರಿ ಸಾಹೇಬ್, ಬಂದೂರು ಸಮುದಾಯ ಆರೋಗ್ಯ…

Read More