Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಂದ್ರಯಾನಕ್ಕೆ ತಯಾರಿ ನಡೆಸುತ್ತಿರುವ ನಮ್ಮ ದೇಶದಲ್ಲಿ ಬಹುದೊಡ್ಡ ವರ್ಗವೊಂದು ಇನ್ನೂ ಮೌಢ್ಯದ ಕೂಪದಲ್ಲೇ ನರಳಾಡುತ್ತಿರುವುದು ಬೇಸರದ ವಿಚಾರ. ವಿದ್ಯಾವಂತರೆಂದು ಹೇಳಿಕೊಳ್ಳುವ ಜನರು ಸಹ ವೈಚಾರಿಕವಾಗಿ, ವೈಜ್ಞಾನಿಕವಾಗಿ ಚಿಂತನೆ ನಡೆಸದೇ ನಡೆದುಬಂದ ಸಂಪ್ರದಾಯ ಎನ್ನುವ ನೆಪದಲ್ಲಿ ಮೂಢನಂಬಿಕೆಗಳನ್ನು ಬೆಳೆಸಿಕೊಂಡು ಬರುತ್ತಿದ್ದಾರೆ. ಇಂತಹ ವಿಷಯದಲ್ಲಿ ಜನಜಾಗೃತಿ ಮೂಡಿಸುವ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಕಾರ್ಯ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಮೂಲಕ ನಡೆಯಲಿ ಎಂದು ಹಿರಿಯ ವಿಚಾರವಾದಿ ಎಸ್.ಜನಾರ್ದನ್ ಮರವಂತೆ ಆಶಯ ವ್ಯಕ್ತಪಡಿಸಿದರು. ಅವರು ಕಂಬದಕೋಣೆಯ ಸಂವೇದನಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಉಡುಪಿ ಜಿಲ್ಲಾ ಘಟಕದ ಉದ್ಘಾಟನೆ ಮತ್ತು ಕವಿ ಪ್ರೊ. ಎಂ. ಗೋಪಾಲಕೃಷ್ಣ ಅಡಿಗರ 104ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (ಎಸ್‌ಸಿಡಿಸಿಸಿ) ಬ್ಯಾಂಕ್ ಸ್ಥಾಪನೆಯಾಗಿ 108 ವರ್ಷದ ಸಂಭ್ರಮದ ಸಂದರ್ಭದಲ್ಲಿ ತಲ್ಲೂರು ಶ್ರೀಜಲ ಅವೆನ್ಯೂ ಕಟ್ಟಡದಲ್ಲಿ ಸೋಮವಾರ 108ನೇ ಎಸ್‌ಸಿಡಿಸಿಸಿ ಬ್ಯಾಂಕ್ ಶಾಖಾ ಕಚೇರಿ ಉದ್ಘಾಟನೆ ಜರುಗಿತು. ಬೈಂದೂರು ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ, ಬ್ಯಾಂಕ್ ಹಲವಾರು ಪರಿವರ್ತನೆ ಮೂಲಕ ಸೇವಾ ಕ್ಷೇತ್ರದಲ್ಲಿ ಎತ್ತರಕ್ಕೆ ಏರಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸರಿಸಮಾನಾಗಿ ನಿಂತಿದೆ. ಗ್ರಾಹಕರು ಹೆಚ್ಚಿನ ಠೇವಣಿ ಇಡುವ ಮೂಲಕ ಎಸ್‌ಸಿಡಿಸಿಸಿ ಬ್ಯಾಂಕ್ ತಮ್ಮ ಬ್ಯಾಂಕ್ ಆಗಿ ಮಾಡಿಕೊಂಡಿದ್ದಾರೆ. ಉತ್ತಮ ಸೇವೆಗೆ ಸಹಕಾರಿ ಬ್ಯಾಂಕ್ ಮಾದರಿಯಾಗಿದೆ ಎಂದರು. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಹಕರು ಕೊಟ್ಟ ಸಾಲ ಕಟ್ಟುವುದಿಲ್ಲ ಎನ್ನುವ ಆರೋಪ ಸಾಮಾನ್ಯ. ಆದರೆ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಕೊಟ್ಟ ಸಾಲ ನೂರಕ್ಕೆ ನೂರು ಹಿಂದಕ್ಕೆ ಬರುತ್ತಿದೆ. ಕಳೆದ ೨೭ ವರ್ಷದಿಂದ ವಸೂಲಾತಿ ಎಂಬ ಶಬ್ದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ,ಬೈಂದೂರು: ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ವಿಜ್ಞಾನ ಸಂಘ, ಇಕೋಕ್ಲಬ್, ರೋವರ್ ರಂಜರ್ ಘಟಕ, ಎನ್ಎಸ್ಎಸ್ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಜಲಶಕ್ತಿ ಅಭಿಯಾನ ವಿಶೇಷ ಮಾಹಿತಿ ಕಾರ್ಯಾಗಾರವನ್ನು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ ಹೆಚ್. ಎಚ್ ಮಾತನಾಡಿ, ಶುದ್ಧ ಕುಡಿಯುವ ನೀರಿನ ಅವಶ್ಯಕತೆ ಹಾಗೂ ನಿರ್ವಹಣೆಯ ಕುರಿತು ತಿಳಿಸಿದರು. ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ಮಂಗಳೂರು ಇದರ ಕ್ಷೇತ್ರ ಪ್ರಚಾರ ಅಧಿಕಾರಿ ಜಿ. ತುಕಾರಾಮ ಗೌಡ ಅವರು ಜಲ ಜೀವನ್ ಮಿಷನ್ ಕಾರ್ಯಕ್ರಮ ಜಲಶಕ್ತಿ ಅಭಿಯಾನ ಇದರ ಔಚಿತ್ಯ ಹಾಗೂ ಪ್ರಾಮುಖ್ಯತೆಯ ಕುರಿತು ತಿಳಿಸಿದರು. ಉಡುಪಿ ಜಿಲ್ಲಾ ಪಂಚಾಯತ್ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಜೆಜೆಎಂ ಟಿವಿ ಗಿರೀಶ್ ಮಾತನಾಡಿ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆ, ಉಡುಪಿ ಜಿಲ್ಲೆಯ ಜಲಮೂಲಗಳು, ಕುಡಿಯುವ ನೀರಿನ ಸಮಸ್ಯೆ, ನೀರಿನ ಸಂರಕ್ಷಣೆಗೆ ಸರ್ಕಾರದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ,ಕೊಲ್ಲೂರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ಇತ್ತೀಚಿಗೆ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ಎಸ್.ಡಿ.ಎಂ.ಸಿ ಹಾಗೂ ಶಾಲಾ ಶಿಕ್ಷಕರ ವತಿಯಿಂದ ನಡೆಯಿತು. ವರ್ಗಾವಣೆಗೊಂಡ ಶಿಕ್ಷಕರಾದ ರಾಘವೇಂದ್ರ, ಯಶೋದಾ, ಉಷಾ, ಮತ್ತು ವಿನೋದ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ್ ಅಡಿಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಭಟ್ ಮತ್ತು ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶೈಲೇಶ್ ರಾವ್ ಹಾಗೂ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಗ್ರೀಷ್ಮಾ ಗಿರಿಧರ್ ಭಿಡೆ ಮತ್ತು ಎಸ್.ಡಿ.ಎಂ.ಸಿ ಸದಸ್ಯರಾದ ಯೋಗೇಶ್ ಭಟ್, ರಾಮಚಂದ್ರ ಭಟ್, ನವೀನ್ ಕುಮಾರ್, ಜನಾರ್ಧನ್, ಗೋವಿಂದ, ನೇತ್ರಾವತಿ, ಶಾರದಾ, ಶೋಭಾ ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕಿ ಶಾರದಾ ಸ್ವಾಗತಿಸಿದರು. ಸಹಶಿಕ್ಷಕಿ ಶೈಲಜಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಹಶಿಕ್ಷಕಿ ನಿರ್ಮಲಾ ಕಾರ್ಯಕ್ರಮ ವಂದಿಸಿದರು. ಸನ್ಮಾನ ಪತ್ರವನ್ನು ಸಹಶಿಕ್ಷಕಿರಾದ ರಾಜೇಶ್ವರಿ ಮತ್ತು ಸುಮಿತ್ರಾ ವಾಚಿಸಿದರು. ದಾನಿಗಳಾದ ಯೋಗೇಂದ್ರನಾಥ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸಂಜೀವಿನಿ ಸಂಘದ ಉತ್ಪನ್ನಗಳನ್ನು ಬ್ರಾಂಡಿಂಗ್ ಮಾಡಲಾಗುತ್ತಿದ್ದು, ಅಮೆಜಾನ್‌ನಲ್ಲಿ ಸಂಜೀವಿನ ಸಂಘದ ಉತ್ಪನ್ನಗಳನ್ನು ಪರಿಚಯಿಸಿ ಮಾರಾಟ ಮಾಡುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ. ಜಿಲ್ಲೆಯಲ್ಲಿ 21 ಕಡೆಗಳಲ್ಲಿ ಸಂಜೀವಿನಿ ಸಂತೆಗಳು ನಡೆಯುತ್ತಿದ್ದು, ಸಂಘದ ಸದಸ್ಯರು ಉತ್ತಮ ಲಾಭ ಗಳಿಸುತ್ತಿದ್ದಾರೆ. ಇತರ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ ಜಿಲ್ಲೆ ಅಗ್ರ ಸ್ಥಾನದಲ್ಲಿದ್ದು ಸಂಘದ ಸದಸ್ಯರು ಉತ್ತಮವಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಂಜೀವಿನಿ ಸ್ವಸಹಾಯ ಸಂಘಗಳ ಜಿಲ್ಲಾ ಯೋಜನಾ ನಿರ್ದೇಶಕ ಬಾಬು ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಕುಂದಾಪುರ, ಗ್ರಾಮ ಪಂಚಾಯತ್ ಗುಜ್ಜಾಡಿ ಇವರ ಜಂಟಿ ಆಶ್ರಯದಲ್ಲಿ ಗುಜ್ಜಾಡಿ ಗ್ರಾಮ ಪಂಚಾಯತ್ ಸಮೀಪ ಆಯೋಜಿಸಲಾಗಿದ್ದ ಸಮೃದ್ಧಿ ಸಂಜೀವಿನಿ ಒಕ್ಕೂಟದ ‘ಸಂಜೀವಿನಿ ಸಂತೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಎನ್., ಸಂಜೀವಿನಿ ಸಂತೆ ವಿಶಿಷ್ಟ ಕಾರ್ಯಕ್ರಮವಾಗಿದ್ದು, ಸಂಘದ ಸದಸ್ಯರು ತಯಾರಿಸಿದ ಉತ್ಪನ್ನಗಳನ್ನು ಸ್ಥಳೀಯವಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಹಿತಿ ಮೊಗೇರಿ ಗೋಪಾಲಕೃಷ್ಣ ಅಡಿಗ ಅವರ ಸ್ಮರಣಾರ್ಥವಾಗಿ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಗಾಂಧಿ ಮೈದಾನದ ಸಮೀಪ ₹4.95 ಕೋಟಿ ವೆಚ್ಚದಲ್ಲಿ ಪುರಭವನ ನಿರ್ಮಾಣಕ್ಕೆ ಸಂಸದ ಬಿ. ವೈ. ರಾಘವೇಂದ್ರ ಅವರು ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಸಂದರ್ಭ ಅವರು ಮಾತನಾಡಿ, ನವ್ಯ ಕಾವ್ಯದ ಮೂಲಕ ಮನೆಮಾತಾದ ಸಾಹಿತಿ ಕವಿ ಗೋಪಾಲಕೃಷ್ಣ ಅಡಿಗ ಅವರ ಹೆಸರನ್ನು ಶಾಶ್ವತವಾಗಿಸುವ ನಿಟ್ಟಿನಲ್ಲಿ ಪುರಭವನ ನಿರ್ಮಿಸಲಾಗುತ್ತಿದೆ. ಬೈಂದೂರು ಕ್ಷೇತ್ರದ ಜನರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಹಾಗೂ ತಾಲೂಕು ಕೇಂದ್ರಕ್ಕೆ ಅವಶ್ಯವಿರುವ ಎಲ್ಲಾ ಸರಕಾರಿ ಕಛೇರಿಗಳನ್ನು ಈ ಭಾಗಕ್ಕೆ ತರಲು ಶ್ರಮಿಸಲಾಗುತ್ತಿದೆ ಎಂದರು. ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರು ಮಾತನಾಡಿ ಬೈಂದೂರು ಕ್ಷೇತ್ರದ ಅಭಿವೃದ್ಧಿಗಾಗಿ ನೀಡಲಾದ ಭರವಸೆಗಳನ್ನು ಬಹುಪಾಲು ಈಡೇರಿಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್., ಯೋಜನಾ ಆಯೋಜದ ಅಧಿಕಾರೇತರ ಸದಸ್ಯೆ ಪ್ರಿಯದರ್ಶಿನಿ ಕಮಲೇಶ್, ಜಿಪಂ ಮಾಜಿ ಸದಸ್ಯರುಗಳಾದ ಬಾಬು ಶೆಟ್ಟಿ ತಗ್ಗರ್ಸೆ, ಶಂಕರ ಪೂಜಾರಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್ ವತಿಯಿಂದ ತಾಲೂಕಿನ ಬಸ್ರೂರು ಗ್ರಾಮದಲ್ಲಿ ಬಸ್ರೂರು ಆಟೋ ಚಾಲಕ ಮತ್ತು ಮಾಲಕರ ಸಂಘದ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಇತ್ತಿಚಿಗೆ ಹಮ್ಮಿಕೊಳ್ಳಲಾಗಿತ್ತು. ಶಿಬಿರ ಉದ್ಘಾಟನೆ ವೇಳೆಯಲ್ಲಿ ಬಸ್ರೂರು ಆಟೋ ಚಾಲಕ ಮಾಲಕರ ಸಂಘದ ಅಧ್ಯ್ಕಷ ಅಶೋಕ್, ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್ ಮಾರ್ಕೆಟಿಂಗ್ ಮ್ಯಾನೇಜರ್ ಯತೀಶ್ ಕುಮಾರ್, ಕೃಷ್ಣ, ಹೇಮಾ ಯತೀಶ್ ಈ ಸಂದರ್ಭ ಉಪಸ್ಥಿತರಿದ್ದರು. 150ಕ್ಕೂ ಹೆಚ್ಚಿನ ಸಾರ್ವಜನಿಕರು ಉಚಿತ ಆರೋಗ್ಯ ಶಿಬಿರದ ಪ್ರಯೋಜನ ಪಡೆದುಕೊಂಡರು. ಇದನ್ನೂ ಓದಿ:► ಕುಂದಾಪುರದಲ್ಲೀಗ ‘ಗಿರಿಜಾ ಹೆಲ್ತ್ ಕೇರ್ ಅಂಡ್ ಸರ್ಜಿಕಲ್ಸ್. ಒಂದೇ ಸೂರಿನಲ್ಲಿ ಎಲ್ಲಾ ಬಗೆಯ ಸರ್ಜಿಕಲ್ ಉತ್ಪನ್ನಗಳು – https://kundapraa.com/?p=56260 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವಾರ್ಷಿಕ ವರ್ಧಂತ್ಯೋತ್ಸವದ ಅಂಗವಾಗಿ ಹಮ್ಮಿಕೊಂಡ ಅಖಂಡ ಭಜನೋತ್ಸವ ಕಾರ್ಯಕ್ರಮ ಶನಿವಾರ ಸಂಪನ್ನಗೊಂಡಿತು. ಭಾನುವಾರ ವರ್ಧಂತಿಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಭಜನೋತ್ಸವಕ್ಕೆ ಚಾಲನೆ ಮೊದಲಾದ ಕಾರ್ಯಕ್ರಮಗಳು ನಡೆದರೆ ಸಂಜೆ 6 ಗಂಟೆಯಿಂದ ಶ್ರೀ ಮಹಾಸತಿ ಅಮ್ಮನವರ ದೇವಿಯ ನಗರೋತ್ಸವ, ಮಹಾಪೂಜೆ, ರಂಗಪೂಜೆ ಹಾಗೂ ವಿವಿಧ ಆಯ್ದ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಶನಿವಾರ ಬೆಳಿಗ್ಗೆ ಕಲಶಾಭಿಷೇಕ, ದೀಪ ವಿಸರ್ಜನೆ, ಮದ್ಯಾಹ್ನ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಭಜನಾ ಮಂಗಳೋತ್ಸವದ ಸಂದರ್ಭ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ನಾವಡ, ದೇವಸ್ಥಾನದ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, ಗೌರವಾಧ್ಯಕ್ಷ ಎಸ್. ರಾಜು ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಶ್ರೀನಿವಾಸ ಕುಮಾರ್, ಶಂಕರ ಮೊಗವೀರ, ಮಂಜುನಾಥ ಆಚಾರ್ಯ, ಸತ್ಯಪ್ರಸನ್ನ,ಅಣ್ಣಪ್ಪ ಪೂಜಾರಿ (ಪಾತ್ರಿ), ಭಜನಾ ಉಸ್ತುವಾರಿಗಳಾದ ರಘುರಾಮ ಕೆ.ಪೂಜಾರಿ, ಕಿಶೋರ ಪೂಜಾರಿ ಸಸಿಹಿತ್ಲು, ಪ್ರಭಾಕರ ಟೀಚರ್, ಬಾಬು ಪೂಜಾರಿ, ಶಿಕ್ಷಕ ಮಂಜುನಾಥ ಬಿಲ್ಲವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಡ್ತರೆ ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಅವರು ಮಾತನಾಡಿ, ವೀರ ಪುರುಷರಾದ ಕೋಟಿ ಚೆನ್ನಯರ ದೈವಸ್ಥಾನವನ್ನು ಅದ್ಭುತವಾಗಿ ನಿರ್ಮಿಸಲಾಗಿದೆ. ಇಲ್ಲಿನ ಪರಿಸರವೂ ಸಂದರವಾಗಿದೆ ದೇವಳದ ವಠಾರ ಪ್ರವೇಶಿಸುತ್ತಿದ್ದಂತೆ ಇಲ್ಲಿನ ದೈವಿಶಕ್ತಿಯ ಅರಿವಾಗುತ್ತದೆ. ಬಿಲ್ಲವ ಸಮುದಾಯ ಬಂಧುಗಳು ಊರವರೊಂದಿಗೆ ಸೇರಿ ಈ ಭವ್ಯ ದೇಗುಲ ನಿರ್ಮಾಣ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಸಂಸದ ಬಿ. ವೈ. ರಾಘವೇಂದ್ರ ಅವರ ತಾಯಿ ಮೈತ್ರಾದೇವಿ ಅವರ ಸ್ಮರಣಾರ್ಥ ವೈಯಕ್ತಿವಾಗಿ 2 ಲಕ್ಷ ರೂ. ಹಾಗೂ ಸರಕಾರದ ಅನುದಾನ ರೂ. 10 ಲಕ್ಷವನ್ನು ಗರಡಿಯ ಬಾಕಿ ಉಳಿದಿರುವ ಅಭಿವೃದ್ಧಿ ಕಾರ್ಯಗಳಿಗೆ ತಕ್ಷಣ ಒದಗಿಸುವುದಾಗಿ ಅವರು ತಿಳಿಸಿದರು. ಆಡಳಿತ ಮಂಡಳಿ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಗರಡಿಯ ಪರವಾಗಿ ಸಂಸದರನ್ನು ಸನ್ಮಾನಿಸಿದರು. ಈ ಸಂದರ್ಭ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹೇಂದ್ರ ಪೂಜಾರಿ ನಾವುಂದ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಡುಪಿ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ, ಬೈಂದೂರು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಯದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ, ಮಯ್ಯಾಡಿಯಲ್ಲಿ ನೂತನವಾಗಿ ಆರಂಭಗೊಂಡ ಬೈಂದೂರು ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಉದ್ಘಾಟನೆ ಶನಿವಾರ ನಡೆಯಿತು. ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರು ಬೈಂದೂರು ನ್ಯಾಯಾಲಯದ ಕಛೇರಿ ಉದ್ಘಾಟಿಸಿ ಮಾತನಾಡಿ, ಬೈಂದೂರು ಭಾಗದಲ್ಲಿ 2800 ವಿವಿಧ ಪ್ರಕರಣಗಳಿದ್ದು ಇದ್ದು, ಒಂದು ಕೋರ್ಟ್‌ನಲ್ಲಿ 1000 ಸಾವಿರ ಪ್ರಕರಣಗಳಿಗೆ ಮಾತ್ರ ಅವಕಾಶ ನೀಡಬಹುದು ಆದರೆ ಈ ಕೇಸ್‌ಗಳಿಗೆ ಎರಡು ಶಾಶ್ವತ ಕೋರ್ಟ್‌ನ ಅವಶ್ಯಕತೆ ಇದೆ. ಈ ಭಾಗದಲ್ಲಿ ಕೋರ್ಟ್ ಆಗಿದ್ದು, ಹಲವಾರು ಜನರಿಗೆ ಸಹಾಯ ಸಹಕಾರವಾಗಿದೆ ಎಂದರು. ಕರ್ನಾಟಕ ಉಚ್ಛ ನ್ಯಾಯಾಲಯದ ಬೆಂಗಳೂರು ಇದರ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಸಮಾರಂಭದ ಅಧ್ಯಕ್ಷತೆ ವಹಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಮಾತನಾಡಿ, ಈ ಇಪ್ಪತ್ತೊಂದನೇ ಶತಮಾನವನ್ನು ಭಾರತೀಯ ಶತಮಾನ ಎಂಬ ಮಾತಿದೆ ಅದರಂತೆ…

Read More