ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ತಾಲೂಕು ಪಂಚಾಯಿತಿ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಕುರಿತು ಶನಿವಾರ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಸಭೆ ನಡೆಸಿದರು. ಈ ಸಂದರ್ಭ ಅವರು ಮಾತನಾಡಿ, ಆಯಾ ಇಲಾಖೆಯಲ್ಲಿ ಸಮಸ್ಯೆ ಏನಿದೆ ಎನ್ನುವದರ ಮಾಹಿತಿ ಕೊಡಿ, ಮುಂದೆ ಅದಿಲ್ಲ ಇದಿಲ್ಲ ಉತ್ತರ ಬೇಡ. ಡೀಮ್ಡ್ ಫಾರೆಸ್ಟ್ ಯಾರದ್ದೋ ತಪ್ಪಿಗೆ ಡೀಮ್ಡ್ ಫಾರೆಸ್ಟ್ ಆಗಿದೆ. 94ಸಿಯಲ್ಲಿ ಅರ್ಜಿ ಬಂದಿರುವುದ ಬಾಕಿ ಇಡುವುದು ಸರಿಯಲ್ಲ. ತಾಲೂಕು ಮಟ್ಟದಿಂದ ಸೇರಿಸಿ ಎಲ್ಲಾ ಲೆಕ್ಕಕೊಡಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸೋಣ ಎಂದರು. ಕುಂದಗನ್ನಡ ಪೀಠದ ಬಗ್ಗೆ ಮಂಗಳೂರು ವಿವಿಗೆ ಪತ್ರ ಬರೆದಿದ್ದು, ಅವರಿಂದ ಉತ್ತರ ಬಂದಿದೆ. ಕುಂದಗನ್ನಡ ಪೀಠ ಸ್ಥಾಪನೆಯಾದರೆ ಅಧ್ಯಯನಕ್ಕೆ ಅನುಕೂಲವಾಗುತ್ತದೆ. ಕೊಂಕಣಿ ಅಕಾಡೆಮೆ, ಬ್ಯಾರಿ ಅಕಾಡೆಮಿ ರೀತಿಯಲ್ಲಿ ಕುಂದಗನ್ನಡ ಅಕಾಡೆಮಿ ಆದರೆ ಒಳ್ಳೆಯದು. ಕುಂದಗನ್ನಡ ಜಿಲ್ಲೆ ಬಗ್ಗೆ ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟಿದ್ದು ಎಂದರು. ಎಲ್ಲಾ ಹಾಸ್ಟೆಲ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಿಎಸ್ಸೆಸ್ಟಿಇ ಯೋಜನೆಯಡಿಯಲ್ಲಿ ಫಿಟ್ ಇಂಡಿಯಾ, ಖೇಲೋ ಇಂಡಿಯಾ ಹಾಗೂ ಒತ್ತಡ ನಿರ್ವಹಣೆ ಬಗ್ಗೆ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಒಂದು ದಿನದ ಮಾಹಿತಿ ಕಾರ್ಯಾಗಾರ ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಸಂಸ್ಥೆ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಉದ್ಘಾಟಿಸಿದರು. ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲ ಅಶೋಕ್ ಕಾಮತ್ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಅಜಾದ್ ಅಹಮದ್, ಸುಧಾಕರ ಶೆಟ್ಟಿ, ಸತ್ಯಾನಂದ ಸಾಲಿನ್ಸ್ ಹಾಗೂ ಅರುಣಕುಮಾರ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸ್ವಾಗತಿಸಿದರು. ಸಂಗೀತ ಶಿಕ್ಷಕಿಯರಾದ ರಮಣಿ ಹಾಗೂ ಉಷಾ ಪ್ರಾರ್ಥಿಸಿದರು. ಶಿಕ್ಷಕ ರವೀಂದ್ರ ಪೂಜಾರಿ ನಿರೂಪಿಸಿ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣ ವಂದಿಸಿದರು. ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ ಉಪನ್ಯಾಸಕಿ ಶೋಭಾ ಶೆಟ್ಟಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಸದಾನಂದ ಬೈಂದೂರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳರೂರು ವಿದ್ಯುತ್ ಸರಬರಾಜು ಕಂಪೆನಿ ವಿಭಾಗದ ನಿರ್ದೇಶಕರಾಗಿ ಕಮಲಶಿಲೆ ಬಾಲಚಂದ್ರ ಭಟ್ ಅವರನ್ನು ಕರ್ನಾಟಕ ಸರಕಾರ ನೇಮಕಗೊಳಿಸಿದೆ. ಬಾಲಚಂದ್ರ ಭಟ್ ಅವರು ಪ್ರಸ್ತುತ ಉಡುಪಿ ಜಿಲ್ಲಾ ಬಿಜೆಪಿಯ ಕಾರ್ಯದರ್ಶಿಯಾಗಿ ಮತ್ತು ಕುಂದಾಪುರ ವಿದಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ, ಕುಂದಾಪುರ ಹಾಗೂ ಆರೋಗ್ಯ ರಕ್ಷಾ ಸಮಿತಿ ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಹದಿಹರೆಯದ ಹೆಣ್ಣುಮಕ್ಕಳಿಗೆ ಆರೋಗ್ಯ ಮತ್ತು ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಅಬ್ದುಲ್ ರೆಹಮಾನ್ ವಹಿಸಿದ್ದರು. ಡಾ. ಉಮೇಶ್ ನಾಯಕ್ ವೈದ್ಯಾಧಿಕಾರಿ, ಕೋಡಿ ಕುಂದಾಪುರ ಕಾರ್ಯಕ್ರಮದ ಕುರಿತಾಗಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾಲಕ್ಷ್ಮಿ ಕಿರಿಯ ಆರೋಗ್ಯ ಸಹಾಯಕಿ, ಹೆಣ್ಣುಮಕ್ಕಳ ಆರೋಗ್ಯ ಮತ್ತು ಶುಚಿತ್ವವನ್ನು ಹೇಗೆ ಕಾಪಾಡಿಕೊಳ್ಳಬೇಕು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ಹಾಗೆಯೇ ಹಿರಿಯ ಆರೋಗ್ಯ ಸಹಾಯಕಿ ಚಂದ್ರಾವತಿ ಹದಿಹರೆಯದ ಹೆಣ್ಣುಮಕ್ಕಳ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಪ್ರಾಂಶುಪಾಲರಾದ ಡಾ. ಶಮೀರ್ ವಿದ್ಯಾರ್ಥಿನಿಯರಿಗೆ ಹಿತನುಡಿಯನ್ನಾಡಿ ಕಾರ್ಯಕ್ರಮದ ಉದ್ದೇಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ ಸಾಧು ಮತ್ತು ಆರೋಗ್ಯ ಕೇಂದ್ರದ ಸಿಬ್ಬಂಧಿ ಉಪಸ್ಥಿತರಿದ್ದರು ಹರ್ಷಿತಾ ಗಣಕ ವಿಭಾಗದ ಉಪನ್ಯಾಸಕಿ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ರೀಜನಲ್ ಹೆಲ್ತ್ಕೇರ್ ಗ್ರೂಪ್ ಸಿಂಗಾಪುರದ ಶ್ರೀಕಾಂತ್, ಮಾತನಾಡಿ ಶ್ರೇಷ್ಠ ಮತ್ತು ಉದಾತ್ತ ಜೀವನ ಎಂಬ ವಿಷಯದ ನೆಲೆಯಲ್ಲಿ ಮಾತನಾಡಿ ಬದುಕು ನಮ್ಮ ವಿಚಾರಗಳಿಗೆ ಪೂರಕವಾಗಿರುತ್ತದೆ. ಅಮೂಲ್ಯವಾದ ಈ ಬದುಕು ಸದಾ ಉದಾತ್ತ ಆಲೋಚನೆಗಳೊಂದಿಗೆ ಖುಷಿಯಾಗಿರಬೇಕು. ನಮ್ಮನ್ನು ನಾವು ಚೆನ್ನಾಗಿ ಖುಷಿಯಾಗಿರಿಸಿಕೊಳ್ಳಬೇಕೆಂದರೆ ಇರುವ ಸಮಯದಲ್ಲಿ ಒಳ್ಳೆಯ ವಿಚಾರಗಳನ್ನು ಸಹ ಅಳವಡಿಸಿಕೊಳ್ಳಬೇಕು. ಯಾಕೆಂದರೆ ಸಮಯವೆಂದಿಗೂ ನಮಗಾಗಿ ಕಾಯುವುದಿಲ್ಲ ಅಲ್ಲದೇ ನಮ್ಮ ಶ್ರೇಷ್ಠ ವಿಚಾರಗಳು ನಮ್ಮೊಳಗೆ ಪರಿಪೂರ್ಣತೆಯನ್ನು ರೂಪಿಸುತ್ತದೆ. ನಿರಂತರವಾಗಿ ಉದಾತ್ತ ಮೌಲ್ಯಗಳ ನೆಲೆಯಲ್ಲಿ ನಮ್ಮ ಬದುಕು ನಡೆಸಬೇಕು. ನಮ್ಮ ನಿತ್ಯದ ಬದುಕಿನಲ್ಲಿ ಆದಷ್ಟು ಒಳ್ಳೆಯ ವಿಚಾರ ಮತ್ತು ಮೌಲ್ಯಗಳನ್ನು ಅಳವಡಿಸಿಕೊಂಡು ನಮ್ಮ ಬದುಕನ್ನು ಖುಷಿಯಾಗಿರಿಸಬೇಕು ಎಂದು ಹೇಳಿದರು ಭಂಡಾರ್ಕಾರ್ಸ್ ಕಾಲೇಜು ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಶಾಂತಾರಾಮ್ ಎ.ಭಂಡಾರ್ಕಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಜೀವನದ ಗುರಿಯನ್ನು ತಿಳಿಯಬೇಕೆಂದರೆ ಭಗವದ್ಗೀತೆಯನ್ನು ಅರ್ಥೈಸಿಕೊಳ್ಳಬೇಕು. ಅಲ್ಲದೇ ದೇವರ ಭಯವೇ ಜ್ಞಾನದ ಮೂಲವಾಗಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉಡುಪಿ ಜಿಲ್ಲೆ ಕುಂದಾಪುರ ಹಾಗೂ ಬೈಂದೂರು ತಾಲೂಕು ಘಟಕದ ವತಿಯಿಂದ ಬೈಂದೂರು ಶೈಕ್ಷಣಿಕ ವಲಯದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಮುಂದಿನಮನಿ ಅವರಿಗೆ ಗೌರವಾರ್ಪಣೆ ನಡೆಯಿತು. ಸ್ವೀಕರಿಸಿ ಮಾತನಾಡಿದ ಮುಂದಿನಮನಿ, ಎಸ್ಡಿಎಂಸಿ ಸಮನ್ವಯ ವೇದಿಕೆಯ ಉತ್ತಮ ಪ್ರಯತ್ನದಿಂದಾಗಿ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ ಎಂದು ಹೇಳಿದರು. ಉಡುಪಿ ಜಿಲ್ಲಾ ಘಟಕದ ಎಸ್ಡಿಎಂಸಿ ಸಮನ್ವಯ ವೇದಿಕೆಯ ಅಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಮಾತನಾಡಿದರು ಈ ಸಂದರ್ಭದಲ್ಲಿ ಎಸ್ಡಿಎಂಸಿ ಸಮನ್ವಯ ವೇದಿಕೆಯ ಪರವಾಗಿ ಸರಕಾರ ತತ್ಕ್ಷಣವೇ ಸುರಕ್ಷಾ ಕ್ರಮಗಳೊಂದಿಗೆ ಶಾಲೆಗಳನ್ನು ಪುನಾರಂಭಿಸುವಂತೆ ಅಥವಾ ವಿದ್ಯಾಗಮ ಶೈಕ್ಷಣಿಕ ಚಟುವಟಿಕೆಯನ್ನು ಮುಂದುವರಿಸುವಂತೆ ಕ್ಷೇತ್ರ ಶಿಕ್ಷಣಧಿಕಾರಿ ಮೂಲಕ ಸರಕಾರಕ್ಕೆ ಹಾಗೂ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು ಬೈಂದೂರು ತಾಲೂಕು ಘಟಕದ ಅಧ್ಯಕ್ಷ ಅವನೀಶ ಹೊಳ್ಳ ಶಿಕ್ಷಣಧಿಕಾರಿಯವರನ್ನು ಗೌರವಿಸಿದರು. ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಲಯದ ಶಾಲೆಗಳ ಎಸ್ಡಿಎಂಸಿ ಅಧ್ಯಕ್ಷರು ತಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕದಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ಕುಂದಾಪುರ ಪುರಸಭೆಯ 50 ಮಂದಿ ಪೌರ ಕಾರ್ಮಿಕರಿಗೆ ಸಮ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪುರಸಭೆ ಮುಖ್ಯಾಧಿಕಾರಿ ಕೆ. ಗೋಪಾಲಕೃಷ್ಣ ಶೆಟ್ಟಿ, ಪೌರ ಕಾರ್ಮಿಕರನ್ನು ಸಮ್ಮಾನಿಸಿದರು ಲಯನ್ಸ್ ಕ್ಲಬ್ ಕುಂದಾಪುರದ ಕಾರ್ಯದರ್ಶಿ ರಾಜೇಂದ್ರ ಮಾತನಾಡಿದರು ಸುಮಾರು 180 ಜನರು ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡರು. ರೆಡ್ ಕ್ರಾಸ್ ಕುಂದಾಪುರ ತಾಲೂಕು ಘಟಕದ ಸಭಾಪತಿ ಎಸ್ .ಜಯಕರ ಶೆಟ್ಟಿ ಪ್ರಾಸ್ತಾವಿಕ ಮಾತುಗನ್ನಾಡಿದರು. ಈ ಸಂಧರ್ಭದಲ್ಲಿ ಲಯನ್ಸ್ ಸಂಸ್ಥೆ ಹಾಗೂ ಲೈಪ್ ಕೇರ್ನ ಮಾಲಕ ಸೋಮನಾಥ್, ಲಯನ್ಸ್ ಕ್ಲಬ್ನ ಅಧ್ಯಕ್ಷ ಕೆ. ಚಂದ್ರಶೇಖರ್, ರೆಡ್ಕ್ರಾಸ್ ಘಟಕದ ಕಾರ್ಯದರ್ಶಿ ವೈ ಸೀತರಾಮ ಶೆಟ್ಟಿ ಖಜಾಂಚಿ ಶಿವರಾಮ ಶೆಟ್ಟಿ ಕಾರ್ಯಕಾರಿ ಸಮಿತಿ ಸದಸ್ಯರು, ಇತರ ಲಯನ್ಸ್ ಕ್ಲಬ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಖಂಬದಕೋಣೆ ನಿರ್ಮಲಾ ಸಭಾಭವನ ದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ನಾಯ್ಕನಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ರಮೇಶ ಪೈ, ಹೈನುಗಾರರು ಹಾಲಿನ ಗುಣಮಟ್ಟ ಕಾಪಾಡುವುದರ ಜತೆಗೆ, ಸ್ವಚ್ಛತೆ ಕಡೆಗೆ ಹೆಚ್ಚು ಗಮನ ನೀಡಬೇಕು ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ವೈಜ್ಞಾನಿಕ ಹೈನುಗಾರಿಕೆ ಮತ್ತು ಹೈನುರಾಸು ವಿಮೆ ಕುರಿತು ಮಾಹಿತಿ ನೀಡಿದರು. ಒಕ್ಕೂಟದ ವಿಸ್ತರಣಾಧಿಕಾರಿ ರಾಜಾರಾಮ ಒಕ್ಕೂಟದಿಂದ ದೊರೆಯುವ ಸೌಲಭ್ಯಗಳನ್ನು ವಿವರಿಸಿದರು. ಸಂಘ ಕಳೆದ ವರ್ಷ ₹2 ಲಕ್ಷ ನಿವ್ವಳ ಲಾಭ ಗಳಿಸಿದ ಪ್ರಯುಕ್ತ ಸದಸ್ಯರಿಗೆ ಶೇ 12 ಲಾಭಾಂಶ ಮತ್ತು ಬೋನಸ್ ವಿತರಿಸಲು ನಿರ್ಧರಿಸಲಾಯಿತು. ಉಪಾಧ್ಯಕ್ಷ ಹೆರಿಯ ಪೂಜಾರಿ, ಕಾರ್ಯದರ್ಶಿ ದಿವ್ಯಾ ಭಟ್ , ಪ್ರಮೋದಾ ಪೈ , ನಿರ್ದೇಶಕರಾದ ಗೋಪಾಲ ಗಾಣಿಗ, ರಾಮ ಪೂಜಾರಿ, ಕೃಷ್ಣಮೂರ್ತಿ ಹೆಬ್ಬಾರ್, ವಿಜಯಾ ಪ್ರಭು, ರುಕ್ಕು ಪೂಜಾರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಜಯಪ್ರಕಾಶ್ ಹೆಗ್ಡೆ ಮೊದಲ ಬಾರಿ ಕುಂದಾಪುರಕ್ಕೆ ಬಂದ ಅವರನ್ನು ಅಭಿಮಾನಿಗಳು ಸ್ವಾಗತಿಸಿದರು. ಬಳಿಕ ಸುದ್ದಿಗಾರೊಂದಿಗೆ ಮಾತನಾಡಿ, ರಾಜ್ಯ ಹಿಂದುಳಿದ ವರ್ಗಗಳ ನೂತನ ಸಮಿತಿ ಅಸ್ತಿತ್ವಕ್ಕೆ ಬಂದ ಬಳಿಕ ವರದಿಯ ಅಧ್ಯಯನ ಹಾಗೂ ಪರಾಮರ್ಶೆ ನಡೆಸಿದ ಬಳಿಕವೇ ಸರ್ಕಾರಕ್ಕೆ ನೀಡಲಾಗುವುದು ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕಾಂತರಾಜು ಅವರ ನೇತೃತ್ವದ ಸಮಿತಿ ಸಿದ್ಧಪಡಿಸಿದ ಜಾತಿ ಗಣತಿ ಆಯೋಗದ ಬಳಿ ಇದ್ದರೂ, ಅದು ಇನ್ನೂ ಸರ್ಕಾರಕ್ಕೆ ಸಲ್ಲಿಕೆಯಾಗಿಲ್ಲ ಆಯೋಗಕ್ಕೆ 5 ಸದಸ್ಯರಲ್ಲಿ ಸಾಮಾಜಿಕ ವಿಜ್ಞಾನ ಪರಿಣಿತೆ, ಮಹಿಳೆ ಸದಸ್ಯೆಯ ನೇಮಕ ಬಾಕಿ ಇದೆ. ಸದಸ್ಯರ ನೇಮಕಾತಿಯ ಮುಖ್ಯಮಂತ್ರಿಗಳ ವಿವೇಚನೆಯದ್ದಾಗಿದೆ’ ಎಂದರು. ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಬಿ.ಕಿಶೋರ್ಕುಮಾರ್, ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ಕೆ.ಎಂ.ಗೋಪಾಲ ಕಳಂಜಿ, ಪ್ರಮುಖರಾದ ಸೋಮಶೇಖರ ಶೆಟ್ಟಿ ಕೆಂಚನೂರು, ಸತೀಶ್ ಹೆಗ್ಡೆ ಮೇರ್ಡಿ, ಶ್ರೀನಿವಾಸ ಕುಂದರ್, ಮೇರ್ಡಿ ದಿನಕರ ಶೆಟ್ಟಿ, ಪ್ರತಾಪ್ ಶೆಟ್ಟಿ ಕೈಲ್ಕೆರೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 2019-20ನೇ ಸಾಲಿನ ಪ್ರೋತ್ಸಾಹಕ ಬಹುಮಾನ ಲಭಿಸಿದೆ. ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಂದ ಸಂಘದ ಪರವಾಗಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಅಳ್ವೆಗದ್ದೆ ಗೌರವ ಸ್ವೀಕರಿಸಿದರು. ಈ ಸಂದರ್ಭ ಸಹಕಾರಿ ಸಂಘಗಳ ಉಪ ನಿಬಂಧಕ ಪ್ರವೀಣ್ ನಾಯಕ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ. ಜಿ. ರಾಜಾರಾಮ ಭಟ್, ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರುಗಳಾದ ವಿನಾಯಕ ರಾವ್, ನರಸಿಂಹ ದೇವಾಡಿಗ, ಸಿಬ್ಬಂದಿ ಜಯರಾಮ ಮೊದಲಾದವರು ಉಪಸ್ಥಿತರಿದ್ದರು.
