Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 3 ಮಂದಿ ಕ್ರೀಡಾಪಟುಗಳಿಗೆ ರಾಜ್ಯ ಸರಕಾರ ಕೊಡಮಾಡಲ್ಪಡುವ 2020ನೇ ಸಾಲಿನ ಕರ್ನಾಟಕ ಕ್ರೀಡಾರತ್ನಪ್ರಶಸ್ತಿ ದೊರೆತಿದೆ. ಬಾಲ್‌ಬ್ಯಾಡ್ಮಿಂಟನ್‌ನಲ್ಲಿ ಕಿರಣ್‌ಕುಮಾರ್, ಕುಸ್ತಿಯಲ್ಲಿ ಲಕ್ಷ್ಮೀರೇಡೇಕರ್ ಹಾಗೂ ಖೋಖೋ ದಲ್ಲಿ ದೀಕ್ಷಾ ಕ್ರೀಡಾರತ್ನ ಪ್ರಶಸ್ತಿಗೆ ಭಾಜನರಾದ ಕ್ರೀಡಾಪಟುಗಳು. ಕಿರಣ್‌ಕುಮಾರ್ಪ್ರಸಕ್ತ ಕರ್ನಾಟಕ ರಾಜ್ಯ ಬಾಲ್‌ಬ್ಯಾಡ್ಮಿಂಟನ್ ತಂಡದ ನಾಯಕರಾಗಿರುವ ಕಿರಣ್ ಒಟ್ಟು 16 ಬಾರಿ ರಾಜ್ಯ ತಂಡವನ್ನು ರಾಷ್ಟ್ರೀಯ ಸೀನಿಯರ್ ಹಾಗೂ ಫೆಡರೇಶನ್‌ಕಪ್ ಚಾಂಪಿಯನ್‌ಶಿಪ್‌ಗಳಲ್ಲಿ ಪ್ರತಿನಿಧಿಸಿದ್ದು ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಒಟ್ಟು 4 ಬಾರಿಚಿನ್ನ, 4೪ ಬಾರಿ ಬೆಳ್ಳಿ ಹಾಗೂ 8 ಬಾರಿ ಕಂಚಿನ ಪದಕ ಪಡೆದಿರುವರು. ಅಖಿಲ ಭಾರತ ಅಂತರ್ ವಿ.ವಿ ಕೂಟ ಚಾಂಪಿಯನ್ ತಂಡದ ನಾಯಕರಾಗಿ ಅತ್ಯುತ್ತಮ ಆಟಗಾರ ಪ್ರಶಸ್ತಿ ಪಡೆದಿದ್ದು, 4 ಬಾರಿ ಮಂಗಳೂರು ವಿ.ವಿಯನ್ನು ಪ್ರತಿನಿಧಿಸಿದ್ದಾರೆ. ಲಕ್ಷ್ಮೀರೇಡೇಕರ್ಒಟ್ಟು 5 ಬಾರಿ ರಾಷ್ಟ್ರೀಯ ಸೀನಿಯರ್ ಹಾಗೂ ಜೂನಿಯರ್ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ಇವರು ರಾಷ್ಟ್ರೀಯ ಜೂನಿಯರ್ ಕೂಟದಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ. 2…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಲ್ಪೆ ಬಂದರಿನಿಂದ ಭಟ್ಕಳಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ ಭಟ್ಕಳ ಬಂದರು ಸಮೀಪ ಮುಳುಗಡೆಯಾಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಬೋಟಿನಲ್ಲಿದ್ದ 7 ಜನ ಮೀನುಗಾರರನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ದಡಕ್ಕೆ ಕರೆತರಲಾಗಿದೆ. ಮಲ್ವೆಯ ತೊಟ್ಟಂ ನಿವಾಸಿ ದೀಕ್ಷಿತ್ ಎಂಬುವರಿಗೆ ಸೇರಿದ ಸಿಹಾನ್ ಫಿಶರಿಸ್ ಎಂಬ ಬೋಟ್ ಸೋಮವಾರ ಬೆಳಿಗ್ಗೆ ಭಟ್ಕಳ ಬಂದರಿನಿಂದ 14 ನಾಟಿಕಲ್ ಮೈಲು ದೂರದಲ್ಲಿ ಕಲ್ಲು ಬಂಡೆಗೆ ತಾಗಿ ಒಳಗೆ ನೀರು ನುಗ್ಗಿ ಮುಳುಗಡೆಯಾಗಿದೆ. ದೋಣಿಯಲ್ಲಿದ್ದ ರವಿ, ನಾಗಪ್ಪ ಮೊಗೇರ ಮತ್ತು ಸಹಚರರನ್ನು, ಸ್ಥಳೀಯ ಜೈಶ್ರೀರಾಮ್ ಬೋಟಿನ ಮೀನುಗಾರರು ರಕ್ಷಣೆ ಮಾಡಿ ದಡಕ್ಕೆ ತಂದಿದ್ದಾರೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.5: ಜಿಲ್ಲೆಯಲ್ಲಿನ ಗ್ರಾಮೀಣ ರಸ್ತೆ, ಜಿಲ್ಲಾ ರಸ್ತೆ, ಮೀನುಗಾರಿಕಾ ರಸ್ತೆ, ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿಗಳನ್ನು ವಿಸ್ತರಿಸಿ, ಮೇಲ್ದರ್ಜೆಗೇರಿಸಲು ರೂಪಿಸಿರುವ ನಿಯಮಗಳಿಂದ ರಸ್ತೆ ಪಕ್ಕದಲ್ಲಿನ ಜನ ಸಾಮಾನ್ಯರಿಗೆ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲು ತೀವ್ರ ಸಮಸ್ಯೆಗಳಾಗುತ್ತಿದ್ದು, ಕೂಡಲೇ ಈ ನಿಯಮಗಳನ್ನು ಬದಲಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಸೇರಿದಂತೆ ವಿವಿಧ ರಸ್ತೆ ಕಾಮಗಾರಿ ಕೈಗೊಳ್ಳುವ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ ನೀಡಿದರು. ಅವರು ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ನಡೆದ, ಜಿಲ್ಲೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಶಾಸಕರುಗಳಿಂದ ಅವರ ವ್ಯಾಪ್ತಿಯಲ್ಲಿ ಕೈಗೊಳ್ಳುತ್ತಿರುವ ರಸ್ತೆ ಅಗಲೀಕರಣ ಮತ್ತು ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಂದ ತೊಂದರೆಗೆ ಒಳಗಾಗುವ ಯೋಜನೆಗಳ ಪಟ್ಟಿಯನ್ನು ಪಡೆದು, ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ನಿಯಮಗಳಲ್ಲಿ ಬದಲಾವಣೆ ತರುವ ಕುರಿತಂತೆ ಸರ್ಕಾರಕ್ಕೆ ಪತ್ರ ಬರೆಯುವಂತೆ ಸೂಚಿಸಿದ ಸಚಿವರು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಫೆ.5: ದೈವಸ್ಥಾನದ ಕಾರ್ಯಕ್ರಮಕ್ಕೆ ಚಪ್ಪರ ಹಾಕುತ್ತಿದ್ದ ವೇಳೆ ಅಡಿಕೆ ಮರದ ಕಂಬ ಕುತ್ತಿಗೆ ಮೇಲೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಕಡೆಪೇಟೆ ನಿವಾಸಿ ರಾಮಚಂದ್ರ ಭಂಡಾರ್ಕರ್ (58) ಮೃತ ದುರ್ದೈವಿ. ಹೊಸಂಗಡಿ ಗ್ರಾಮದ ಅನಗಳ್ಳಿಬೈಲು ಎಂಬಲ್ಲಿನ ದೈವಸ್ಥಾನದ ಧಾರ್ಮಿಕ ಕಾರ್ಯಕ್ರಮಕ್ಕಾಗಿ ರಾಮಚಂದ್ರ ಭಂಡಾರ್ಕರ್ ಅವರು ಸ್ಥಳಿಯರೊಂದಿಗೆ ಸೇರಿ ಚಪ್ಪರ ಹಾಕುತ್ತಿದ್ದರು. ಈ ಸಂದರ್ಭ ಅಡಿಕೆ ಮರದ ಕಂಬವು ಮೇಲಿಂದ ಜಾರಿದ್ದು, ಅದನ್ನು ತಡೆಯಲು ಹೋದ ಸಮಯ ಆಯ ತಪ್ಪಿ ಕೆಳಗೆ ಬಿದಿದ್ದಾರೆ. ಇದೇ ಸಮಯದಲ್ಲಿ ಅಡಿಕೆ ಮರದ ಕಂಬವು ರಾಮಚಂದ್ರ ಅವರ ಕುತ್ತಿಗೆ ಮೇಲೆ ಬಿದ್ದು ಗಾಯಗೊಂಡಿದ್ದರು. ತಕ್ಷಣ ಅವರನ್ನು ಸಿದ್ಧಾಪುರ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದರೂ ಅಷ್ಟರಲ್ಲಿಯೇ ಅವರು ಮೃತಪಟ್ಟಿದ್ದರೆನ್ನಲಾಗಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮಚಂದ್ರ ಭಂಡಾರ್ಕರ್ ಅವರು ಹೊಸಂಗಡಿಯ ಪೇಟೆ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರಾಗಿದ್ದು ರಾಮ್ ಮಾಮ್ ಎಂದು ಪ್ರಸಿದ್ಧರಾಗಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಾಲ್ತೋಡು ಗ್ರಾಮ ಶ್ರೀ ಕ್ಷೇತ್ರ ಬೊಳಂಬಳ್ಳಿ ಶ್ರೀ ಪಾರ್ಶ್ವನಾಥ ಸ್ವಾಮಿ, ಆಳುಪ ರಾಜ ಮನೆತನದ ದೇವಿ ಮಹಾಮಾತೆ ಪದ್ಮಾವತಿ ಅಮ್ಮನವರ ದೇವಸ್ಥಾನ ಬಸದಿಯ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ, ನೂತನ ಶಿಲಾಮಯ ಮಾನಸ್ತಂಭ ಪ್ರತಿಷ್ಠಾಪನೆ, ಶ್ರೀ ಪದ್ಮಾವತಿ ಅಮ್ಮನವರ ಬಸದಿಯ ನೂತನ ರಥೋತ್ಸವ ಮಹೋತ್ಸವವು ಎಪ್ರಿಲ್ 6 ರಿಂದ 10ನೇ ತಾರೀಕಿನ ತನಕ ಜರುಗಲಿದೆ. ಮೂಡಬಿದ್ರೆ ಜೈನಮಠ ಚಾರುಕೀರ್ತಿ ಭಟ್ಟಾರಕರ ಮಾರ್ಗದರ್ಶನದಲ್ಲಿ, ಶ್ರೀ ಕ್ಷೇತ್ರ ಹೊಂಬುಜ ಜೈನ ಮಠ ದೇವೇಂದ್ರಕೀರ್ತಿ ಭಟ್ಟಾರಕ ಹಾಗೂ ಸೋಂದೆ ಮಠ ಭಟ್ಟಾಕಳಂಕ ಸ್ವಾಮೀಜಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಜರುಗುವ ಕಾರ್ಯಕ್ರಮದಲ್ಲಿ ಪ್ರತಿದಿನ ಬೆಳಗ್ಗಿನಿಂದ ರಾತ್ರಿಯವರೆಗೆ ದೇವಪೂಜಾ ಕಾರ್ಯಗಳು, ಮಹಾಮಾತೆ ಪದ್ಮಾವತಿಯ ಆರಾಧನೆ, ಸಂಜೆ 5.30ಕ್ಕೆ ಸಭಾ ಕಾರ್ಯಕ್ರಮಗಳು, ರಾತ್ರಿ 8 ರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಯಕ್ಷಗಾನ ಜೋಡಾಟ, ನಾಟಕಗಳು, ಮನುಹಂದಾಡಿ ಅವರಿಂದ ಹಾಸ್ಯಸಂಜೆ, ಮಹೇಶ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯದಲ್ಲಿ ಸಹಕಾರಿ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು, ಸರಕಾರ ಪರಿಕಲ್ಪನೆಯ ಮೂಲಕವೇ ಲಕ್ಷಾಂತರ ಮಂದಿ ಸ್ವಾವಲಂಬಿಗಳಾಗಿದ್ದಾರೆ ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದರು. ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 110ನೇ ನೂತನ ಉಪ್ಪುಂದ ಶಾಖೆ ಉದ್ಘಾಟಿಸಿ ಈ ಮಾತನಾಡಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತನ್ನ ಅತ್ಯುತ್ತಮ ಕಾರ್ಯಸಾಧನೆಗಳ ಮೂಲಕ ಇತರರಿಗೂ ಮಾದರಿಯಾಗಿದೆ ಎಂದರು. ನವೋದಯ ಸ್ವ-ಸಹಾಯ ಸಂಘಗಳ ಸಾಧನಾ ಸಮಾವೇಶ ಉದ್ಘಾಟಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಮಾತನಾಡಿ ರಾಜ್ಯ ಸರಕಾರ ರೈತರ ಅಭಿವೃದ್ಧಿಯ ಜೊತೆಗೆ ರೈತ್ಯೋದ್ಯಮದ ಬಗ್ಗೆ ಹಲವು ಮಹತ್ತರ ಯೋಜನೆಗಳನ್ನು ಜಾರಿಗೆ ತರುವ ಚಿಂತನೆಯಲ್ಲಿದೆ. ನವೋದಯ ಸ್ವ-ಸಹಾಯ ಸಂಘಗಳು ಹಲವರ ಬದುಕಿಗೆ ಬೆಳಕಾಗಿದೆ. ಕೃಷಿಕರ ಮತ್ತು ಮಹಿಳೆಯರಿಗೆ ಸ್ವಾವಲಂಬನೆಯ ಜೀವನ ನೀಡಿದೆ ಎಂದರು. ಹೊಸ ಸ್ವ-ಸಹಾಯ ಗುಂಪುಗಳನ್ನು ಉದ್ಘಾಟಿಸಿದ ಕೃಷಿ ಸಚಿವ ಬಿ. ಸಿ ಪಾಟೀಲ್ ಮಾತನಾಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರಗ್ನ್ಯಾ ಸಾಗರ್ ಹೋಟೆಲ್ಸ್ & ರೆಸಾರ್ಟ್ಸ್ ಸಂಸ್ಥೆಯ ಆಡಳಿತದೊಂದಿಗೆ ತಾಲೂಕಿನ ಉಪ್ಪುಂದದಲ್ಲಿ ‘ನಂದನವನ ಹಾಸ್ಪಿಟಾಲಿಟಿ & ಸರ್ವಿಸಸ್’ (ರೆಸ್ಟೋರೆಂಟ್, ಲಾಡ್ಜಿಂಗ್ & ಆಡಿಟೋರಿಯಂ) ಸಂಸ್ಥೆಯ ಪುನರಾರಂಭ ಕಾರ್ಯಕ್ರಮದಲ್ಲಿ ಸೋಮವಾರ ಜರುಗಿತು. ನವೀಕೃತ ಉದ್ಯಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರಿ ಸಚಿವಎಸ್.ಟಿ. ಸೋಮಶೇಖರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮುರುಗೇಶ್ ನಿರಾಣಿ, ಸಮಾಜ ಕಲ್ಯಾಣ ಹಾಗೂ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೃಷಿ ಸಚಿವ ಬಿ.ಸಿ ಪಾಟೀಲ್, ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ, ಸಹಕಾರಿ ಧುರೀಣರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು ಶುಭಕೋರಿದರು. ಪ್ರಗ್ನ್ಯಾ ಸಾಗರ್ ಹೋಟೆಲ್ಸ್ & ರೆಸಾರ್ಟ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಗೋವಿಂದ ಬಾಬು ಪೂಜಾರಿ ಅವರು ಅತಿಥಿಗಳನ್ನು ಸ್ವಾಗತಿಸಿದರು.  ಈ ಸಂದರ್ಭ ಬಿ. ಎಸ್. ಸುರೇಶ್ ಶೆಟ್ಟಿ, ಶರತ್ ಕುಮಾರ್ ಶೆಟ್ಟಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂರೂರು ಶ್ರೀ ಮಹಾಲಿಂಗೇಶ್ವರ ಸಾಂಸ್ಕೃತಿಕ ಸಂಘದ ರಜತ ವರ್ಷದ ಅಧ್ಯಕ್ಷರಾಗಿ ಮಹೇಶ್ ಪೂಜಾರಿ ಕೋಣೆ ಪ್ರಧಾನ ಕಾರ್ಯದರ್ಶಿಯಾಗಿ ಗಜೇಂದ್ರ ಆಚಾರ್ ಕೋಣಿ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಸುಬ್ಬಣ್ಣ ಕೋಣಿ, ಉಪಾಧ್ಯಕ್ಷರಾಗಿ ಸಂದೇಶ ಕಾಂಚನ್, ಜೊತೆ ಕಾರ್ಯದರ್ಶಿಯಾಗಿ ಗಜೇಂದ್ರ ಪೂಜಾರಿ ಕಟ್ಕೇರಿ, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ, ಪ್ರವೀಣ್ ಭಂಡಾರಿ, ಶ್ರೀಧರ ಚಂದನ್, ಮಂಜುನಾಥ ಪೂಜಾರಿ, ಅಂಕಿತಾ ತನುಜ, ಕ್ರೀಡಾ ಕಾರ್ಯದರ್ಶಿಗಳಾಗಿ ಈಶ್ವರ ಪೂಜಾರಿ, ಸುಧೀರ್ ಚಂದನ್, ರಾಮಲಲ್ಲಾ ಆಚಾರ್, ವಿಖ್ಯಾತ ಬಂಗೇರ ರಾಜೇಶ್ ಬಂಗೇರ ಕೋಶಾಧಿಕಾರಿಗಳಾಗಿ ಪ್ರದೀಪ್ ಚಂದನ್ ಸುಮಂತ್ ಬಂಗೇರ, ಜಯಪ್ರಶಾಂತ ಪೂಜಾರಿ ಪ್ರಶಾಂತ ಬಂಗೇರ, ರಘು ವಿ ಪೂಜಾರಿ, ಲೆಕ್ಕ ಪರಿಶೋಧಕರಾಗಿ ಅಶೋಕ ಭಂಡಾರಿ,ದಿನೇಶ್ ಆಚಾರ್, ವಸಂತ ಬಂಗೇರ, ಸುಬ್ರಹ್ಮಣ್ಯ ಆಚಾರ್, ಗಣೇಶ ಮೂರೂರು ಅಚ್ಚುತ ಮೂರೂರು, ಆಯ್ಕೆಯಾಗಿದ್ದಾರೆ. ಧಾರ್ಮಿಕ,ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸತತ 24 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕೋಣಿ ಮೂರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಆಚರಣೆಯನ್ನು ವಿಶೇಷವಾಗಿ ನೆರವೇರಿಸುತ್ತ ಮುಂದಿನ ವರ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಅಧ್ಯಾಪಕರ ಸಂಘದ ವಾರ್ಷಿಕ ಸ್ನೇಹಕೂಟ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾದ ಡಾ. ರೇಖಾ ವಿ.ಬನ್ನಾಡಿ ಮತ್ತು ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಪ್ರೊ. ಸಂಧ್ಯಾ ಜಿ. ಕೆ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಅಧ್ಯಾಪಕರ ಸಂಘದ ಅಧ್ಯಕ್ಷರಾದ ಡಾ. ಲಲಿತಾದೇವಿ ವಹಿಸಿದ್ದರು. ಕಾಲೇಜಿನ ವಿಶ್ವಸ್ಥರಾದ ಕೆ.ಶಾಂತಾರಾಮ್ ಪ್ರಭು ನಿವೃತ್ತ ಉಪನ್ಯಾಸಕರನ್ನು ಗೌರವಿಸಿ ಮಾತನಾಡಿದರು. ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ. ನಾರಾಯಣ ಶೆಟ್ಟಿ ಮತ್ತು ಭಂಡಾರ್ಕಾರ‍್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಮ್.ಗೊಂಡ ಉಪಸ್ಥಿತರಿದ್ದರು. ಕಾಲೇಜಿನಲ್ಲಿ ಸೇವೆ ಸಲ್ಲಿಸಿ ಉನ್ನತ ಉದ್ಯೋಗ ನಿಮಿತ್ತ ತೆರಳಿದ ಉಪನ್ಯಾಸಕರಾದ ಗುರುದಾಸ ಪ್ರಭು ಮತ್ತು ಅಮರ್ ಸಿಕ್ವೆರಾ ಅವರನ್ನು ಗೌರವಿಸಲಾಯಿತು. ಕಾಲೇಜಿನಲ್ಲಿ ಸೇವೆ ಸಲ್ಲಿಸುವುದರೊಂದಿಗೆ ಶೈಕ್ಷಣಿಕ ಮತ್ತು ಶೈಕ್ಷಣಿಕೇತರ ಕ್ಷೇತ್ರದಲ್ಲಿ ವಿವಿಧ ಸಾಧನೆ ಮಾಡಿದವರನ್ನು ಗುರುತಿಸಲಾಯಿತು. ಅಧ್ಯಾಪಕರ ಸಂಘದ ವಾರ್ಷಿಕ ಸ್ನೇಹಕೂಟ-2022 ಪ್ರಯುಕ್ತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.04: ರಾಜ್ಯದಾದ್ಯಂತ ಗ್ರಾಮಗಳಲ್ಲಿ ಸಂಗ್ರಹವಾಗುವ ಒಣ ತ್ಯಾಜ್ಯವನ್ನು ಸಪರ್ಮಕವಾಗಿ ವಿಲೇವಾರಿ ಮಾಡಲು ಒಟ್ಟು 50 ಸಮಗ್ರ ಘನತ್ಯಾಜ್ಯ ನಿರ್ವಹಣಾ ಘಟಕಗಳನ್ನು (ಎಂ.ಆರ್.ಎಫ್ ) ಈ ವರ್ಷ ಆರಂಭಿಸಲಾಗುವುದು ಎಂದು ರಾಜ್ಯ ಗ್ರಾಮೀಣಾಭಿವೃಧ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಅವರು ನಿಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪದವು ನಲ್ಲಿ, ಗ್ರಾಮೀಣಾಭಿವೃಧ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಕಾರ್ಕಳ, ಗ್ರಾಮ ಪಂಚಾಯತ್ ಕಾರ್ಕಳ ಇವರಸಂಯುಕ್ತ ಆಶ್ರಯದಲ್ಲಿ, ಸ್ವಚ್ಛ ಬಾರತ್ ಮಿಷನ್(ಗ್ರಾಮೀಣ) ಯೋಜನೆಯಡಿ ನಿರ್ಮಾಣವಾದ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ನಿಟ್ಟೆ ಗ್ರಾ.ಪಂ ವ್ಯಾಪ್ತಿಯಲ್ಲಿ ಇಂದು ಆರಂಭವಾದ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರದ ಕಾರ್ಯವೈಖರಿ ಅತ್ಯುತ್ತಮವಾಗಿದ್ದು, ಇದರಿಂದ ಗ್ರಾಮ ಪಂಚಾಯತ್ ಗಳು ಎದುರಿಸುತ್ತಿರುವ ಘನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಸಮರ್ಪಕ ಪರಿಹಾರ ದೊರೆಯಲಿದ್ದು, ಇಂತಹ 50 ಘಟಕಗಳನ್ನು ರಾಜ್ಯಾದ್ಯಂತ ಈ ವರ್ಷ ಆರಂಭಿಸಲಾಗುವುದು, ಈ ಘಟಕಗಳ ಸ್ಥಾಪನೆಯಿಂದ…

Read More