Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗ್ರಾಮ ಪಂಚಾಯತ್‌ಗಳ ಸಂಪನ್ಮೂಲ ಕ್ರೋಢಿಕರಣಕ್ಕೆ ಹೆಚ್ಚಿನ ಗಮನ ನೀಡಬೇಕು. ಸರಕಾರದ ಹಾಗೂ ಗ್ರಾಮ ಪಂಚಾಯತ್‌ನ ಅನುದಾನಗಳನ್ನು ಸಮಪರ್ಕವಾಗಿ ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ನಡೆಸಬೇಕು. ಖರ್ಚು ಮಾಡಿದ ಅನುದಾನಗಳಿಗೆ ಸರಿಯಾಗಿ ಲೆಕ್ಕಪತ್ರಗಳನ್ನು ನಿರ್ವಹಿಸಿ ಯಾವುದೇ ಲೋಪದೋಷವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕುಂದಾಪುರ ಕೃಷಿ ಇಲಾಖೆಯ ಕೃಷಿ ಅಧಿಕಾರಿ ರಘುರಾಮ ಶೆಟ್ಟಿ ಹೇಳಿದರು. ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಸಭಾಭವನದಲ್ಲಿ ಜರಗಿದ ಗ್ರಾಮ ಪಂಚಾಯತ್‌ನ 2020-21ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂದಿ ಕಾರ್ಯಕ್ರಮದಲ್ಲಿ ಜಮಾಬಂದಿ ಅಧಿಕಾರಿಯಾಗಿ ಅವರು ಮಾತನಾಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ರವೀಂದ್ರ ಪಟೇಲ್, ನಾಗರಾಜ ಕಲೈಕಾರ್, ಬಿ.ಗಣೇಶ ಶೆಣೈ, ನಾಗರಾಜ ಖಾರ್ವಿ ಗುಡ್ಡೆಕೇರಿ, ಬಿ.ರಾಘವೇಂದ್ರ ಪೈ, ರಾಜ್‌ಕಿರಣ್, ನಿರ್ಮಲಾ ಪೂಜಾರಿ, ದೇವು ಮತ್ತಿತರರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ತ್ರಾಸಿ ಗ್ರಾಮ ಪಂಚಾಯತ್‌ನ ಎಸ್‌ಡಿಎ ಶಿವಾನಂದ, ಗಂಗೊಳ್ಳಿ ಗ್ರಾಪಂ ಪಿಡಿಒ ಉಮಾಶಂಕರ, ಗ್ರಾಮ ಪಂಚಾಯತ್ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕಾವ್ರಾಡಿ ಗ್ರಾಮದಲ್ಲಿ ಶೆ.100ರಷ್ಟು ಜನತೆ ಕೋವಿಡ್ ಲಸಿಕೆ ಪಡೆದುಕೊಂಡಿದ್ದು, ಕೋವಿಡ್ ನಿಯಂತ್ರಣದಲ್ಲಿ ಕಾವ್ರಾಡಿ ಮಾದರಿ ಗ್ರಾಮವಾಗಿ ಗುರುತಿಸಿಕೊಂಡಿದೆ. 18 ವರ್ಷ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರೂ ಕೋವಿಡ್ ಪ್ರಥಮ ಡೋಸ್ ಲಸಿಕೆ ಪಡೆಯುವಲ್ಲಿ 100% ಯಶಸ್ವಿಯಾಗಿದ್ದು, ಹಲವು ಮಂದಿ ಎರಡನೇ ಹಂತದ ಲಸಿಕೆಯನ್ನೂ ಸಹ ಪಡೆದಿದ್ದಾರೆ. ಕಾವ್ರಾಡಿ ಮತ್ತು ಹಳ್ನಾಡು ಗ್ರಾಮದಲ್ಲಿ 4032 ಮಂದಿ 18 ವರ್ಷ ಮೇಲ್ಪಟ್ಟ ಗ್ರಾಮಸ್ಥರಿದ್ದು ಇವರೆಲ್ಲರೂ ಮೊದಲ ಹಂತದ ಕೋವಿಡ್ ಲಸಿಕೆ ಪಡೆದಿದ್ದಾರೆ. 45 ವರ್ಷ ಮೇಲ್ಪಟ್ಟವರಲ್ಲಿ ಈ ಮೊದಲೇ 100% ಸಾಧನೆ ಮಾಡಿದ್ದ ಇಲ್ಲಿ, 18 ವರ್ಷ ಮೇಲ್ಪಟ್ಟವವರು ತಾವೇ ಉತ್ಸಾಹದಿಂದ ಬಂದು ಲಸಿಕೆ ಪಡಿದಿದ್ದಾರೆ. ಲಸಿಕೆ ಪಡೆಯದೇ ದೂರ ಉಳಿದಿದ್ದವರನ್ನು ಗುರುತಿಸಿ, ವೈದ್ಯರ ತಂಡದೊಂದಿಗೆ ಅವರ ಮನೆಗಳಿಗೆ ತೆರಳಿ, ಕೋವಿಡ್ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ ಲಸಿಕೆ ನೀಡಲಾಗಿದೆ. ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಲತಾ ನಾಯಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ,ಸೆ02: ಬೈಂದೂರು ಪಟ್ಟಣ ಪಂಚಾಯತ್ 2021-2022 ನೇ ಸಾಲಿನಲ್ಲಿ ಪ.ಜಾತಿ/ಪ.ಪಂಗಡದವರ ಮತ್ತು ಇತರೆ ಹಿಂದುಳಿದ ಬಡ ವರ್ಗದವರ, ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳ ಸವಲತ್ತುಗಳನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೈದ್ಯಕೀಯ ವೆಚ್ಚ ಮರುಪಾವತಿ, ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಮನೆ ದುರಸ್ಥಿ, ಶೌಚಾಲಯ ನಿರ್ಮಾಣ, ವಿಕಲಚೇತನರಿಗೆ ಪೋಷಣಾ ಭತ್ಯೆ ಸೇರಿದಂತೆ ಮತ್ತಿತರ ಸೌಲಭ್ಯ ನೀಡಲಾಗುತ್ತಿದೆ. ಸಂಬAಧಿತ ಕಾರ್ಯಕ್ರಮದಡಿ ಅಭ್ಯರ್ಥಿಗಳು ಸೂಕ್ತ ದಾಖಲೆಗಳನ್ನು ಕಛೇರಿಗೆ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 24 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08254-251058 ನ್ನು ಸಂಪರ್ಕಿಸುವAತೆ ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಾಮಫಲಕವನ್ನು ಕೊಡುಗೆಯಾಗಿ ನೀಡಲಾಯಿತು. ಆರೋಗ್ಯ ಕೇಂದ್ರದ ಸಮೀಪ ಅಳವಡಿಸಲಾಗಿರುವ ನಾಮಫಲಕವನ್ನು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ. ಅವರು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ ಸಮ್ಮುಖದಲ್ಲಿ ಬುಧವಾರ ಅನಾವರಣಗೊಳಿಸಿ ಕೊಡುಗೆಯನ್ನು ಹಸ್ತಾಂತರಿಸಿದರು. ನಾಮಫಲಕವನ್ನು ಕೊಡುಗೆಯಾಗಿ ನೀಡಿದ ಲಿಫ್ಟನ್ ಒಲಿವೇರಾ ಅವರನ್ನು ಗೌರವಿಸಲಾಯಿತು. ರೋಟರಿ ವಲಯ ಸೇನಾನಿ ಕೆ.ರಾಮನಾಥ ನಾಯಕ್, ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗ್ರಾಪಂ ಸದಸ್ಯ ಬಿ.ರಾಘವೇಂದ್ರ ಪೈ, ರೋಟರಿ ಸದಸ್ಯರಾದ ಲಿಫ್ಟನ್ ಒಲಿವೇರಾ, ಗಿರೀಶ ಖಾರ್ವಿ, ಆಸ್ಪತ್ರೆಯ ಶುಶ್ರೂಷಕಿ ಶೋಭಾ, ಆಸ್ಪತ್ರೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ೨೭ ವರ್ಷಗಳಂದ ಆಯಾ ಆಗಿ ಕಾರ್ಯನಿರ್ವಹಿಸಿ ನಿವೃತ್ತರಾಗುತ್ತಿರುವ ಪ್ರೇಮಾ ಇವರನ್ನು ಇಲಾಖಾ ವತಿಯಿಂದ ಸನ್ಮಾನಿಸಲಾಯಿತು. ಇಲಾಖಾ ಪ್ರತಿನಿಧಿಯಾಗಿ ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ ಸನ್ಮಾನ ನೆರವೇರಿಸಿ ನಿವೃತ್ತರ ಅರ್ಪಣಾ ಮನೋಭಾವ, ಶಾಲೆಯ ಕುರಿತಾದ ಕಾಳಜಿಯನ್ನು ಶ್ಲಾಘಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಎಸ್ ಡಿ ಎಂ ಸಿ ಅಧ್ಯಕ್ಷ ಮಂಜುನಾಥ ಎ.ಜಿ. ನಿವೃತ್ತರ ಸೇವಾವೈಖರಿ ಪ್ರಶಂಸಿಸಿದರು. ಮುಖ್ಯ ಶಿಕ್ಷಕ ಚಂದ್ರ ನಾಯ್ಕ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿ ಆಶಾ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜತೆಗೆ ತಾವು ಮಾಡುತ್ತಿರುವ ಉದ್ಯೋಗದಲ್ಲಿ ಅವರನ್ನು ಸಾಧ್ಯವಾದಷ್ಟು ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಸಂಘದ ಉಪ್ಪುಂದದ ರೈತಸಿರಿ ಸಭಾಭವನದಲ್ಲಿ ಸಂಘ ಪ್ರಾಯೋಜಿತ ರೈತಸಿರಿ ರೈತ ಸೇವಾ ಒಕ್ಕೂಟದ ಆಶ್ರಯದಲ್ಲಿ ಈಚೆಗೆ ನಡೆದ ರೈತಕೂಟ ಸಭೆ ಹಾಗೂ ಸ್ವ ಉದ್ಯೋಗ ಮಾಹಿತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮನೆಯವರು ನಡೆಸುವ ಉದ್ಯೋಗದಲ್ಲಿ ಮಕ್ಕಳು ಭಾಗಿಗಳಾಗುವುದರಿಂದ ಅವರಿಗೆ ಉದ್ಯೋಗದ ಕಲೆ, ಕೌಶಲ ಕರಗತವಾಗುವುದರ ಜತೆಗೆ ಶ್ರಮದ ಬಗೆಗೆ ಗೌರವ ಮೂಡುತ್ತದೆ ಎಂದು ಅವರು ಹೇಳಿದರು. ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ಸ್ವ ಉದ್ಯೋಗ, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಕ್ರಮ ಮತ್ತು ರುಡ್‌ಸೆಟ್ ಸಂಸ್ಥೆಯ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಕೃಷಿ ಸಹಾಯಕ ಈಶ್ವರ ಜೆ. ನಾಯ್ಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.02: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಿದ ಹಿನ್ನೆಲೆ ಇಂದು ಹೊಸ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ವಾರಾಂತ್ಯ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಿದೆ. ಹೊಸ ಮಾರ್ಗಸೂಚಿ ಪ್ರಕಾರ ಜಿಲ್ಲೆಯಾದ್ಯಂತ ಪ್ರತಿ ಶುಕ್ರವಾರ ರಾತ್ರಿ 9.00 ರಿಂದ ಪ್ರತಿ ಸೋಮವಾರ ಬೆಳಿಗ್ಗೆ 5.00 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತವೆ . ಹಾಗೂ ಜಿಲ್ಲೆಯಾದ್ಯಂತ ಪ್ರತಿ ದಿನ ರಾತ್ರಿ 9.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯ ಮಾರ್ಗಸೂಚಿಗಳಂತೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹೊಸ ಮಾರ್ಗಸೂಚಿಯಲ್ಲಿ ಏನಿದೆ ?ಪಬ್‌ ಗಳಿಗೆ ಅನುಮತಿ ಇರುವುದಿಲ್ಲಕೋವಿಡ್-19 ಸೂಕ್ತ ನಡವಳಿಕೆಯನ್ನು ಹಾಗೂ ಸಂಬಂಧಪಟ್ಟ ಇಲಾಖೆಯವರು ಹೊರಡಿಸುವ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಸ್ಪರ್ಧಾತ್ಮಕ ತರಬೇತಿಗಳಿಗೆ ಮಾತ್ರ ಈಜು ಕೊಳಗಳನ್ನು ತೆರೆಯಲು ಅನುಮತಿಸಿದೆ. ಕೋವಿಡ್-19 ಸೂಕ್ತ ಶಿಷ್ಟಾಚಾರವನ್ನು ಅನುಸರಿಸುವ ಷರತ್ತುಗಳೊಂದಿಗೆ ಕ್ರೀಡಾಪಟುಗಳ ಅಭ್ಯಾಸಕ್ಕೆ ಮಾತ್ರ ಕ್ರೀಡಾ ಸಂಕೀರ್ಣಗಳನ್ನು/ ಸ್ಟೇಡಿಯಂಗಳನ್ನು ತೆರೆಯಲು ಅನುಮತಿಸಿದೆ. ಆದರೆ ಪ್ರೇಕ್ಷಕರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಿಂದುಳಿದಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ವಿವಿಧ ಯೋಜನೆಗಳಿಗಾಗಿ ದಾಖಲೆ ಮೊತ್ತದ ಅನುದಾನ ಬಿಡುಗಡೆಯಾಗುತ್ತಿದೆ. ಆದರೆ ಇಲಾಖೆಗಳ ಅಧಿಕಾರಿಗಳ ಕೆಲಸದ ವೇಗ ನಿರೀಕ್ಷಿತ ಮಟ್ಟದಲ್ಲಿ ಇರದ ಕಾರಣ ಅನುಷ್ಠಾನ ಕುಂಠಿತವಾಗುತ್ತಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಇಲ್ಲಿ ಬುಧವಾರ ಅವರು ಅಧಿಕಾರಿಗಳ ಸಭೆಯಲ್ಲಿ ಇಲಾಖೆಗಳ ಪ್ರಗತಿ ಪರಿಶೀಲನೆ ವೇಳೆ ಮಾತನಾಡಿದರು. ಕೆಲವು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಚುರುಕು ಮುಟ್ಟಿಸಿದರು. ಮುಂದುವರಿದು ಮಾತನಾಡಿ ಜವುಳಿ ಪಾರ್ಕ್, ಪೀಠೋಪಕರಣ ತಯಾರಿ ಸಂಕೀರ್ಣ, ಕ್ರೀಡಾ ಸಂಕೀರ್ಣ, ನ್ಯಾಯಾಲಯ, ಕ್ರೀಡಾಂಗಣ, ವಸತಿ ಶಾಲೆಗಳೀಗೆ ಜಮೀಣು ಗುರುತಿಸಬೇಕು. ಮೂಕಾಂಬಿಕಾ ವನ್ಯಪ್ರಾಣಿ ಸಂರಕ್ಷಣಾ ತಾಣ, ಮರಿನಾ, ಬೀಚ್‌ವಾಕ್, ಉದ್ಯಾನ, ವಿಶ್ರಾಂತಿ ತಾಣ ನಿರ್ಮಾಣ ಯೋಜನೆಗಳು ಬರಲಿದ್ದು, ಅವುಗಳ ಅನುಷ್ಠಾನಕ್ಕೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. ವೈದ್ಯಕೀಯ ಕಾಲೇಜಿಗೆ ಹಣ ಹೂಡಲು ಒಬ್ಬರು ಮುಂದಾಗಿದ್ದು, ಅದಕ್ಕೂ ಸ್ಥಳ ಮೀಸಲಿಡಲು ಕ್ರಮ ತೆಗೆದುಕೊಳ್ಳಬೇಕು. ಯಾವುದೇ ಯೋಜನೆ ಅಗತ್ಯ ಎನಿಸಿದರೆ, ಹಣ ಮಂಜೂರು ಮಾಡಲಾಗುವುದು ಎಂದರು. ಕಂದಾಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನೀಡಲಾದ ಅಂಬುಲೆನ್ಸ್ ಹಾಗೂ ಕೆಎಸ್‌ಐಐಡಿಸಿಯಿಂದ ನೀಡಲಾದ ಮಿನಿ ಅಂಬ್ಯುಲೆನ್ಸ್‌ನ್ನು ಬುಧವಾರ ಲೋಕಾರ್ಪಣೆಗೊಳಿಸಲಾಯಿತು. ಹಿಂದೂಳಿದ ಮತ್ತು ಸಮಾಜ ಕಲಾಖ್ಯ ಕಲ್ಯಾಣಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅಂಬುಲೆನ್ಸ್ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಸಂಸದ ಬಿ. ವೈ. ರಾಘವೇಂದ್ರ, ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆ.ಎಸ್.ಐ.ಐ.ಡಿ.ಸಿ) ನಿರ್ದೇಶಕ ಸಿ. ಆರ್. ಗಾಯತ್ರಿದೇವಿ, ಕರ್ನಾಟಕ ಬಾಲ ಭವನ ಬೆಂಗಳೂರು ಇದರ ನಿರ್ದೇಶಕರಾದ ಪದ್ಮಿನಿ, ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ., ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್‌ಕುಮಾರ್ ಶೆಟ್ಟಿ, ಕಾರ‍್ಯದರ್ಶಿ ಪ್ರಕಾಶ್ ಜಿಡ್ಡು, ಜಿಪಂ ಮಾಜಿ ಸದಸ್ಯರಾದ ಬಾಬು ಶೆಟ್ಟಿ, ಸುರೇಶ್ ಬಟವಾಡಿ, ರಾಜ್ಯ ಯೋಜನಾ ಆಯೋಗ ಮಂಡಳಿಯ ಅಧಿಕಾರೇತರ ಸದಸ್ಯೆ ಪ್ರಿಯದರ್ಶಿನಿ ಕಮಲೇಶ್ ಮೊದಲಾದವರು ಉಪಸ್ಥಿತರಿದ್ದರು. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಬಿ. ವೈ. ರಾಘವೇಂದ್ರ ಅವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲೆಯ ಜನತೆ ತೋರಿರುವ ಅಭಿಮಾನ, ಪ್ರೀತಿ ಎಂದಿಗೂ ಮರೆಯಲು ಸಾಧ್ಯವಿಲ್ಲ, ಇಲ್ಲಿಯ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯ ಉನ್ನತ ಹುದ್ದೆಗೆ ಹೋಗಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ರಜತಾದ್ರಿಯ ಇಂದು ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಹೆಚ್ಚಿನ ಅವಧಿಯಲ್ಲಿ ಕೊರೋನಾ ನಿಯಂತ್ರಣಕ್ಕೆ ಮೀಸಲಿಡಲಾಯಿತು ಆದ್ದರಿಂದ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗಲಿಲ್ಲ ಎಂಬ ಕೊರಗು ಇದೆ, ಆದರೆ ಕೋವಿಡ್ ನಿಂದ ಜಿಲ್ಲೆಯಲ್ಲಿ ಹೆಚ್ಚು ಸಾವುಗಳು ಸಂಭವಿಸದAತೆ ಅಗತ್ಯ ನಿಯಂತ್ರಣ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರಿAದ, ಸೋಂಕು ಹೆಚಿದ್ದರೂ ಅತೀ ಕಡಿಮೆ ಸಾವು ಸಂಭವಿಸಿರುವ ಜಿಲ್ಲೆ ಎಂಬ ಹೆಗ್ಗಳಿಕೆ ಜಿಲ್ಲೆಗೆ ದೊರೆತಿದೆ ಎಂದರು. ಜಿಲ್ಲೆಯಲ್ಲಿ ಪ್ರವಾಸೋಧ್ಯಮವನ್ನು ಅಭಿವೃಧ್ದಿಪಡಿಸುವ ಅನೇಕ ಯೋಜನೆಗಳನ್ನು ರೂಪಿಸಿ ಅವುಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ,ಕಂದಾಯ ಸೇವೆಗಳನ್ನು ಒದಗಿಸುವಲ್ಲಿ ಜಿಲ್ಲೆ ಇಂದಿಗೂ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ…

Read More