Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸ.ಹಿಪ್ರಾ.ಶಾಲೆ ತಗ್ಗರ್ಸೆ ಇಲ್ಲಿ ಕಲಿಕಾ ಸಾಮಗ್ರಿ ವಿತರಣಾ ಸಮಾರಂಭ ಜರಗಿತು. ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಎಸ್ ಡಿ .ಎಮ್.ಸಿ ಅಧ್ಯಕ್ಷರಾದ ಪ್ರಭಾಕರ್ ಗಾಣಿಗ ವಹಿಸಿದ್ದರು. ಟಿ. ನಾರಾಯಣ ಹೆಗ್ಡೆ, ಪ್ರಭಾಕರ್ ಶೆಟ್ಟಿ ನೆಲ್ಯಾಡಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವೆಂಕಟರಮಣ ದೇವಾಡಿಗ, ಮೀನಾಕ್ಷಿ ಸಂಜು ಪೂಜಾರಿ, ಉದ್ಯಮಿ ರವಿದಾಸ್ ಮತ್ತು ನಾಗರಾಜ್ ಹೆಬ್ಬಾಗಿಲು ಇವರು ನೀಡಿದ ಕಲಿಕಾ ಸಾಮಗ್ರಿಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು. ಸಮಾರಂಭದಲ್ಲಿ ಜಿಲ್ಲಾಕೇಂದ್ರ ಗೃಂಥಾಲಯ ನೀಡಿದ 500 ಪುಸ್ತಕಗಳನ್ನು ಸಾಹಿತ್ಯ ಪರಿಷತ್ ಬೈಂದೂರು ಘಟಕದ ಅಧ್ಯಕ್ಷರಾದ ಗಣಪತಿ ಹೋಬಳಿದಾರ್ ಮತ್ತು ಬೈಂದೂರು ಮಾದರಿ ಶಾಲೆಯ ಮುಖ್ಯಶಿಕ್ಷಕರಾದ ಜನಾರ್ದನ ಶಾಲೆಗೆ ಹಸ್ತಾಂತರಿಸಿದರು. ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ತಗ್ಗರ್ಸೆ” ಬಿ” ಒಕ್ಕೂಟದ ಸದಸ್ಯರು ನೀಡಿದ ನಲಿಕಲಿ ಕುರ್ಚಿಗಳನ್ನು ಶಾಲೆಗೆ ಹಸ್ತಾಂತರಿಸಲಾಯಿತು. ಆರೋಗ್ಯ ಕಾರ್ಯಕರ್ತೆ ಶಾಂತಾ ಆರೋಗ್ಯ ಮಾಹಿತಿ ನೀಡಿದರು. ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕರಾದ ತಿಮ್ಮಪ್ಪ ಗಾಣಿಗ ಪ್ರಾಸ್ತಾವಿಕ ಭಾಷಣ ಮಾಡಿದರು. ಸಹಶಿಕ್ಷಕಿ ಭಾಗೀರಥಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬಿಲ್ಲವ ಸಮಾಜ ಸೇವಾ ಸಂಘ ರಿ. ನಾವುಂದ, ಶುಭದಾ ಏಜ್ಯುಕೇಶನಲ್ ಟ್ರಸ್ಟ್ ರಿ. ಮತ್ತು ಬ್ರಹ್ಮ ಬೈದರ್ಕಳ ಗರಡಿ ನಾವುಂದ ಇವರ ಸಹಭಾಗಿತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂದಿರ ಮಸ್ಕಿ-ನಾವುಂದದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕ ಮತ್ತು ವಿದ್ಯಾರ್ಥಿವೇತನ ವಿತರಿಸಲಾಯಿತು. ಶುಭದಾ ಶಾಲೆಗಳ ಸಂಸ್ಥಾಪಕರು, ಬಿಲ್ಲವ ಸಮಾಜ ಸೇವಾ ಸಂಘದ ಗೌರವ ಸಲಹೆಗಾರರು, ಶ್ರೀ ಬ್ರಹ್ಮ ಬೈದರ್ಕಳ ಗರಡಿ ನಾವುಂದ ಇದರ ಆಡಳಿತ ಸಮಿತಿ ಗೌರವಾಧ್ಯಕ್ಷರು ಆಗಿರುವ ಡಾ|| ಎನ್. ಕೆ. ಬಿಲ್ಲವರವರು ಪುಸ್ತಕ ಮತ್ತು ವಿದ್ಯಾರ್ಥಿವೇತನ ವಿತರಿಸಿ ಮಕ್ಕಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ 6ನೇ ತರಗತಿಯಲ್ಲಿ ಓದುತ್ತಿರುವ ಸ್ಥಳಿಯ ಪ್ರತಿಭೆ, ಭರತನಾಟ್ಯ ಪ್ರವೀಣೆ ನಾಲ್ಕು ಚಲನ ಚಿತ್ರದಲ್ಲಿ ಅಭಿನಯಿಸುತ್ತಿರುವ ಬಾಲ ನಟಿ ಕುಮಾರಿ ಧನ್ವಿಗೆ ನಗದು ಪುರಸ್ಕಾರದೊಂದಿಗೆ ಸನ್ಮಾನಿಸಲಾಯಿತು. ಇವಳು ಮರವಂತೆ ಚಂದ್ರಶೇಖರ ಪೂಜಾರಿ ಮತ್ತು ಜ್ಯೋತಿ ದಂಪತಿಗಳ ಸುಪುತ್ರಿಯಾಗಿದ್ದು, ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮುಂದಿನ ದಿನಗಳಲ್ಲಿ ಕನ್ನಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ತಾಲೂಕಿನ ಗಾವಳಿಯ ಅಲಂಕಾರ್ ಟೈಲ್ಸ್ ಆಂಡ್ ಬ್ರಿಕ್ಸ್ ಇಂಡಸ್ಟ್ರಿಸ್‌ನ ಆಡಳಿತ ನಿರ್ದೇಶಕ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ಅವರು 2018-19 ರ ಸಾಲಿನ ರೋಟರಿ ಜಿಲ್ಲೆ 3182 ರ ವಲಯ 1 ರ ಅಸಿಸ್ಟೆಂಟ್ ಗವರ್ನರ್ ಆಗಿ ಆಯ್ಕೆಯಾಗಿದ್ದಾರೆ. ವಲಯ ಹಾಗೂ ಜಿಲ್ಲಾ ಮಟ್ಟದಲ್ಲಿ ಇವರ ರೋಟರಿ ಸೇವೆಯನ್ನು ಗಮನಿಸಿ 2018-19 ರ ಸಾಲಿನ ಜಿಲ್ಲಾ ಗವರ್ನರ್ ಅಭಿನಂದನ್ ಶೆಟ್ಟಿಯವರು ಈ ಆಯ್ಕೆ ಮಾಡಿದ್ದು, ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿಯವರು 2002 ರಲ್ಲಿ ರೋಟರಿ ಕ್ಲಬ್ ಅಂಪಾರಿನ ಸ್ಥಾಪಕ ಸದಸ್ಯರಾಗಿ ರೋಟರಿ ಚಟುವಟಿಕೆಗೆ ಪಾದಾರ್ಪಣೆ ಮಾಡಿದವರು. 2012-13ರಲ್ಲಿ ರೋಟರಿ ಕುಂದಾಪುರದ ಅಧ್ಯಕ್ಷರಾಗಿ ಅತ್ಯುತ್ತಮ ಕಾರ್ಯಕ್ರಮಗಳನ್ನು ಸಂಘಟಿಸಿರುವುದರ ಜೊತೆಗೆ ಕ್ಲಬ್‌ನ ಸದಸ್ಯರ ಸಂಖ್ಯೆಯನ್ನು ನೂರರ ಗಡಿ ದಾಟಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅತ್ಯುತ್ತಮ ಸಂಘಟಕರಾಗಿರುವ ಇವರ ಅಧ್ಯಕ್ಷತೆಯಲ್ಲಿ ರೋಟರಿ ಜಿಲ್ಲೆ 3180 ರಲ್ಲಿ ರೋಟರಿ ಕ್ಲಬ್ ಕುಂದಾಪುರ ದ್ವಿತೀಯ ಅತ್ಯುತ್ತಮ ಕ್ಲಬ್ ಪ್ರಶಸ್ತಿಗೆ ಭಾಜನವಾಗಿತ್ತು. ಅನಂತರದ ವರ್ಷಗಳಲ್ಲಿ ವಲಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಗಂಗೊಳ್ಳಿಯ ರೋಟರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇದರ ವಾರ್ಷಿಕ ಸಂಚಿಕೆ ‘ದೃಷ್ಟಿ’ ಯನ್ನು ಬಿಡುಗಡೆಗೊಳಿಸಲಾಯಿತು.. ಈ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ವಿಶ್ವನಾಥ ಕರಬರವರು ವಿದ್ಯಾರ್ಥಿಗಳ ರುಚಿ ಅಭಿರುಚಿಯ ಕೈಗನ್ನಡಿಯಂತೆ ಪ್ರತಿಭಾ ಪ್ರದರ್ಶನಗಳ ಪ್ರತ್ಯಕ್ಷ ಸಾಕ್ಷಿಯಂತೆ ರೂಪುಗೊಳ್ಳುವ ಕಾಲೇಜಿನ ವಾರ್ಷಿಕ ಸಂಚಿಕೆಗಳು ಸಾಹಿತ್ಯವನ್ನು ಬೆಳೆಸುವಲ್ಲಿ ಉತ್ತಮ ಕೊಡುಗೆಯನ್ನು ನೀಡುತ್ತವೆ. ಜೀವನದಲ್ಲಿನ ಸಮಸ್ಯೆಗಳನ್ನು ಎದುರಿಸುವಂತಹ ಮನೋಬಲವನ್ನು ಸಾಹಿತ್ಯ ಪ್ರೀತಿ ಬೆಳೆಸುತ್ತದೆ ಎಂದು ಅಭಿಪ್ರಾಯಪಟ್ಟರು. ಅಂತರ್ಜಾಲ ವ್ಯಸನದಿಂದಾಗಿ ನಾವು ನಮ್ಮಲ್ಲಿರುವ ಅಂತರ್ಜಲವನ್ನು ಕಂಡುಕೊಳ್ಳುವಲ್ಲಿ ಹಿಂದೆ ಬೀಳುತ್ತಿದ್ದೇವೆ. ಯಶಸ್ಸು ದಕ್ಕಬೇಕಾದರೆ ಉತ್ತಮ ವ್ಯಕ್ತಿತ್ವವನ್ನು ಅಳವಡಿಸಿಕೊಳ್ಳಬೇಕು. ಸಾಹಿತ್ಯದ ಅಭಿರುಚಿ ಅದಕ್ಕೆ ನೆರವಾಗುತ್ತದೆ ಎಂದು ಅವರು ಹೇಳಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು. ಸಂಚಿಕೆಯ ಪ್ರಧಾನ ಸಂಪಾದಕರಾದ ಎಚ್. ಸುಜಯೀಂದ್ರ ಹಂದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂಧರ್ಭದಲ್ಲಿ ಸಂಪಾದಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರು ತಾಲೂಕು ಶ್ರ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಇದರ ವತಿಯಿಂದ ಪರಿಸರ ಸಂರಕ್ಷಣೆ ಜಾಥಾ ಹಾಗೂ ಮಾಹಿತಿ ಕಾರ್ಯಕ್ರಮ ಬೈಂದೂರು ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನಡೆಯಿತು. ಶ್ರ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲಾ ನಿರ್ದೇಶಕ ಪುರುಷೋತ್ತಮ ಪಿ.ಕೆ. ಕಾರ್ಯಕ್ರಮ ಉದ್ಘಾಟಿಸಿದರು. ಪರಿಸರ ಜಾಗೃತಿ ಮತ್ತು ಕಾಳಜಿ ಪ್ರತಿಯೊಬ್ಬರ ಜವಬ್ದಾರಿಯಾಗಿದೆ. ಮುಂದಿನ ಪೀಳಿಗೆಗೆ ಆರೋಗ್ಯಕರ ಸಮಾಜದ ಕೊಡುಗೆ ನೀಡಬೇಕಾದರೆ ಇಂದಿನಿಂದಲೇ ಪರಿಸರದ ಸಂರಕ್ಷಣೆಗೆ ಮುಂದಾಗಬೇಕು ಎಂದ ಸದಸ್ಯರಿಗೆ ಸಲಹೆ ನೀಡಿದರು. ಬೈಂದೂರು ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ವೆಂಕಟ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂದೂರು ತಹಶೀಲ್ದಾರ ಪುರಂದರ ಹೆಗಡೆ, ವಲಯಾಧ್ಯಕ್ಷ ಕೃಷ್ಣ ಪೂಜಾರಿ ಉಪಸ್ಥಿತರಿದ್ದರು. ಕೃಷಿ ಮೇಲ್ವಿಚಾರಕ ಮಂಜುನಾಥ ಸ್ವಾಗತಿಸಿದರು. ಬಂದೂರು ವಲಯ ಮೇಲ್ವಿಚಾರಕ ಕೆ.ಪಿ ಪ್ರಕಾಶ್ ಕುಮಾರ್ ನಿರ್ವಹಿಸಿದರು. ಜ್ಞಾನ ವಿಕಾಸದ ಸಮನ್ವಯಾಧಿಕಾರಿ ಸುಮತಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಜಡ್ಕಲ್ ಚರ್ಚ್‌ನಲ್ಲಿ ಉಡುಪಿ ಜಿಪಂ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖಾ ಸಹಯೋಗದಲ್ಲಿ ಬೈಂದೂರು ಹೋಬಳಿ ಮಟ್ಟದಲ್ಲಿ ನಡೆದ ಕೃಷಿ ಅಭಿಯಾನ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಮಾತನಾಡಿ ನಮ್ಮಲ್ಲಿ ಯಾವುದೇ ಸಮಸ್ಯೆಗಳಿದ್ದರೂ ಕೂಡಾ ಕೃಷಿಯನ್ನು ಉಳಿಸಿಕೊಳ್ಳುವ ಅನಿವಾರ್ಯತೆಯಿದೆ. ಕೃಷಿ ಇಂದು ವೈಜ್ಞಾನಿಕವಾಗಿದ್ದು ರೈತರು ಕೃಷಿ ಇಲಾಖೆಗಳ ಮಾಹಿತಿ ಪಡೆದು ಆಧುನಿಕತೆಗೆ ತಕ್ಕಂತೆ ಯಂತ್ರೋಪಕರಣವನ್ನು ಬಳಸಿಕೊಳ್ಳಬೇಕು, ಹೊಸ ಆವಿಷ್ಕಾರಗಳ ಮೂಲಕ ಯೋಜನೆ ಹಾಗೂ ಪೂರಕ ಅಂಶಗಳಿಂದ ಕೃಷಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಬಹುದು. ಜತೆಗೆ ಯುವ ಪೀಳಿಗೆ ಕೃಷಿಯಿಂದ ವಿಮುಖರಾಗದಂತೆ ತಡೆಯಬಹುದು ಎಂದು ಹೇಳಿದರು. ಇಂದಿನ ಕಾಲಘಟ್ಟದಲ್ಲಿ ರೈತರು ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಒಂದೆಡೆ ಕಾಡುಪ್ರಾಣಿಗಳ ಹಾವಳಿ, ಕೃಷಿ ಕಾರ್ಮಿಕರ ಕೊರತೆಯಿದ್ದರೆ ಇನ್ನೊಂದೆಡೆ ತಮ್ಮ ಬೆಳೆಗೆ ಸೂಕ್ತವಾದ ಮಾರುಕಟ್ಟೆ ಮತ್ತು ಬೆಲೆ ಪಡೆಯಲು ಹರಸಾಹಸ ಪಡೆಯುವ ಸ್ಥಿತಿಯಲ್ಲಿದ್ದಾರೆ. ಈ ನೆಲೆಯಲ್ಲಿ ಕೃಷಿ ಸಂಬಂಧಿತ ಎಲ್ಲ…

Read More

ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು: ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಟದ ಬಯಲಿನಲ್ಲಿರುವ ಗ್ರಾಮ ಪಂಚಾಯಿತಿಯ ನೀರಿನ ಒವರ್‌ಹೆಡ್ ಟ್ಯಾಂಕ್‌ನ ಕೆಲವಡೆ ಬಿರುಕು ಕಾಣಿಸಿಕೊಂಡಿದ್ದು, ಅದರ ಭದ್ರತೆಯ ಬಗ್ಗೆ ಈಗ ಕಳವಳ ಉಂಟಾಗಿದೆ. ಈ ಆಟದ ಬಯಲನ್ನು ವಿದ್ಯಾರ್ಥಿಗಳು ಬಳಸುತ್ತಾರೆ. ಟ್ಯಾಂಕ್ ಬಳಿಯೇ ಅಂಗನವಾಡಿ, ಕೆಲವು ಮನೆಗಳು, ಅಂಗಡಿಗಳು, ಜನ, ವಾಹನ ಸಂಚರಿಸುವ ರಸ್ತೆಗಳು ಇವೆ. ಅದು ನಿಜವಾಗಿಯೂ ಶಿಥಿಲವಾಗಿ, ಕುಸಿಯುವ ಸಾಧ್ಯತೆ ಇದ್ದರೆ ಗಂಭೀರ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಜನರು ಆತಂಕಿತರಾಗಿದ್ದಾರೆ. ಟ್ಯಾಂಕ್‌ನ ತಳಭಾಗದ ಸ್ವಲ್ಪ ಗಾರೆ ಕಿತ್ತುಬಿತ್ತು. ಅಲ್ಲಿದ್ದವರು ಗಾಬರಿಗೊಂಡ ಟ್ಯಾಂಕ್‌ನತ್ತ ನೋಡಿದಾಗ ಅದರ ಒಂದು ಕಂಬದಲ್ಲಿ, ಎರಡು ಟೈಬೀಮ್‌ನಲ್ಲಿ ಬಿರುಕು ಬಂದಿರುವುದನ್ನು ಗಮನಿಸಿ ಪಂಚಾಯಿತಿಯ ಗಮನಕ್ಕೆ ತಂದರು. ಅಧ್ಯಕ್ಷೆ ಅನಿತಾ ಆರ್. ಕೆ. ಉಪಾಧ್ಯಕ್ಷ ಗಣೇಶ ಪೂಜಾರಿ, ಅಭಿವೃದ್ಧಿ ಅಧಿಕಾರಿ ವೀರಶೇಖರ್ ಬಂದು ನೋಡಿ ಅದರಲ್ಲಿ ಸಂಗ್ರಹವಾಗಿದ್ದ ನೀರನ್ನು ಬರಿದುಮಾಡಿದರು. ಅದರ ಸಮೀಪದಲ್ಲಿದ್ದ ಅಂಗನವಾಡಿಯ ಮಕ್ಕಳನ್ನು ಮನೆಗೆ ಕಳುಹಿಸಿದರು. ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಜಿ.ಎಸ್.ವಿ.ಎಸ್ ಅಸೋಷಿಯೇಷನ್ 2017-18ರ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 85ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಮತ್ತು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಭೋಧಕರನ್ನು ಗೌರವಿಸುವ ಅಭಿನಂದನಾ ಕಾರ‍್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಂಬೈನ ದೇವೂ ಟೂಲ್ಸ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕರಾದ ದೇವರಾಯ ಎಮ್ ಶೇರುಗಾರ್ ಮಾತನಾಡಿ ಈಗಿನ ಜಗತ್ತಿನಲ್ಲಿ ವಿದ್ಯಾರ್ಥಿಗಳ ಉನ್ನತಿಗೆ ಹೇರಳ ಅವಕಾಶಗಳು ಲಭ್ಯವಿದೆ.ಅವುಗಳನ್ನು ವಿಶ್ಲೇಷಿಸಿ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಖಚಿತಪಡಿಸಿಕೊಂಡು ಅದನ್ನು ಸಾಧಿಸುವಲ್ಲಿ ಅಗತ್ಯವಾದ ಪರಿಶ್ರಮವನ್ನು ಧಾರೆಯೆರೆಯಬೇಕು ಆಗ ನಿಖರ ಯಶಸ್ಸು ಸಿಗುತ್ತದೆ ಎಂದು ಹೇಳಿದರು. ನಾವು ಬಾಲ್ಯದ ಎಲ್ಲಾ ಅನುಭವಗಳನ್ನು ಧನಾತ್ಮಕವಾಗಿ ಸ್ವೀಕರಿಸಿ ಸುತ್ತಲಿನ ಪ್ರೇರಣೆಗಳನ್ನು ಬಳಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ಹೊಂದುವುದು ಪ್ರತಿಯೊಬ್ಬರ ಮೊದಲ ಆದ್ಯತೆಯಾಗಬೇಕು ಎಂದು ಅವರು ಹೇಳಿದರು ಚಿನ್ಮಯೀ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ.ಉಮೇಶ್ ಪುತ್ರನ್ ಶುಭ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಮಲೇರಿಯಾ ನಿರ್ಮೂಲನಾ ಮಾಸಾಚರಣೆ ಕಾರ್ಯಕ್ರಮ ಜರುಗಿತು. ಇದರ ಅಂಗವಾಗಿ ಕುಂದಾಪುರ ಸರಕಾರಿ ಆಸ್ಪತ್ರೆಯ ಹಿರಿಯ ಆರೋಗ್ಯ ಸಹಾಯಕ ಅಧಿಕಾರಿಗಳಾದ ಸದಾನಂದ ಹೆಬ್ಬಾರ್ ಇವರು ಮಲೇರಿಯಾ ರೋಗದ ಲಕ್ಷಣಗಳು, ಪರಿಣಾಮ ಮತ್ತು ಮಲೇರಿಯಾವನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ನಾಗರೀಕ ಸಹಾಯವಾಣಿ ಕೇಂದ್ರದ ಅಧಿಕಾರಿಯಾದ ಕು. ಶಾರದಾ ಇವರು ಸಾರ್ವಜನಿಕರಿಗೆ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ದೊರೆಯವ ವಿವಿಧ ಆರೋಗ್ಯ ಸೇವೆಗಳು ಮತ್ತು ಸೌಲಭ್ಯಗಳ ಬಗ್ಗೆ ತಿಳಿಸಿದರು. . ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ್ ಶೆಟ್ಟಿ, ಉಪನ್ಯಾಸಕರಾದ ರವಿ ಉಪಾಧ್ಯಾಯ, ಕುಮಾರಿ ಕವಿತಾ ಆಚಾರ್ಯ ಹಾಗೂ ಸಿಬ್ಬಂದಿಗಳಾದ ಮಂಜುನಾಥ ಶೆಟ್ಟಿ ಮತ್ತು ನಾಗರಾಜ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹಿಂದಿ ಉಪನ್ಯಾಸಕಿ ಜಯಶೀಲಾ ಪೈ ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ದೇಶದ ಪ್ರತಿಷ್ಟಿತ ವಿದ್ಯಾಸಂಸ್ಥೆ ಐಐಟಿಗೆ ಪ್ರವೇಶ ಪಡೆಯಲು ನಡೆದ ಜೆಇಇ ಅಡ್ವಾನ್ಡ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 11 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಸಾಮಾನ್ಯ ವಿಭಾಗದಲ್ಲಿ ಶಶಾಂಕ್ ಡಿ.(4601), ಸಚಿನ್ ಕುಮಾರ್(9827), ಯಶಸ್ಸ್ ಎಸ್.ವಿ( 10,497), ಎಸ್‍ಸಿ ಎಸ್‍ಟಿ ಕೆಟಗರಿಯಲ್ಲಿ ಸುದರ್ಶನ್ ಜಿ.ಎಸ್(121), ಹರೀಶ್ ಡಿ.ಜಿ(363), ಶಶಾಂಕ್ ಡಿ.(617), ಸಚಿನ್ ಪಿ ಲಮಾಣಿ(621), ವಂಶಿತೇಜ್(786), ರಾಘವೇಂದ್ರ ಜೆ.ಪಿ(1357), ದರ್ಶನ್( 1363). ಗೌತಮಬುದ್ಧ(1430), ಸಚಿನ್ ಕುಮಾರ್ (1850), ಮನೋಜ್ (1974) ರ‍್ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More