ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕರ ಹೋರಾಟದ ಬಳಿಕ ಅಂತಿಮವಾಗಿ ರಾಷ್ಟ್ರೀಯ ಹೆದ್ದಾರಿಯಿಂದ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ನಗರಕ್ಕೆ ಪ್ರವೇಶ ದೊರೆತಿದೆ. ಬೊಬ್ಬರ್ಯನಕಟ್ಟೆ ಜಂಕ್ಷನ್ ಬಳಿ ಚತುಷ್ಪಥ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಕುಂದಾಪುರ ನಗರ ಪ್ರವೇಶಿಸಲು ಶನಿವಾರ ತಾಲೂಕು ಆಡಳಿತ ಅವಕಾಶ ನೀಡಿದೆ. ಚತುಷ್ಪಥ ಕಾಮಗಾರಿಯ ಪ್ಲೈಓವರ್ ನಿರ್ಮಾಣ ಆರಂಭ ಆದಾಗಲಿಂದಲೂ ಕುಂದಾಪುರ ನಗರಕ್ಕೆ ಪ್ರವೇಶ ಪಡೆಯಲು ಹಂಗಳೂರಿನಿಂದಲೇ ಸರ್ವಿಸ್ ರೋಡಿಗೆ ತೆರಳಬೇಕಾಗಿತ್ತು. ನಾಗರಿಕರಿಗೂ ಇದರಿಂದ ಸಾಕಷ್ಟು ಅನಾನುಕೂಲ ಎದುರಾಗಿತ್ತು. ಅದಕ್ಕಾಗಿ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿಯೇ ಪ್ಲೈಓವರ್ ಚತುಷ್ಪಥ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಪ್ರವೇಶ ಕಲ್ಪಿಸಬೇಕೆಂದು ಕುಂದಾಪುರದ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು, ಹಾಗೂ ಪುರಸಭೆ ಹೋರಾಟ ನಡೆಸಿಕೊಂಡು ಬಂದಿದ್ದವು. ಪುರಸಭೆಯ ನಿಯೋಗ ಹಾಗೂ ಸಾರ್ವಜನಿಕರು ಕೇಂದ್ರ ಕೃಷಿಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಗೆ ಪ್ರತ್ಯೇಕ ಮನವಿ ಸಲ್ಲಿಸಿದ್ದರು. ಬಳಿಕ ಸಚಿವರು ಉಡುಪಿ ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿದ್ದರು. ಆದೇಶಕ್ಕೆ ಸ್ಪಂದಿಸಿದ ಜಿಲ್ಲಾಡಳಿತವು ಸ್ಥಳ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವಿ.ವಿ.ವಿ ಮಂಡಳಿ (ರಿ) ಹೆಮ್ಮಾಡಿ ಇದರ ಸಾಮಾನ್ಯ ಸಭೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರನ್ನು ಪದನಿಮಿತ್ತ ನಾಮ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ. ಗಣೇಶ ಮೊಗವೀರ ಅವರು ಸಮರ್ಪಣಾ ಎಜುಕೇಶನ್ ಟ್ರಸ್ಟ್ (ರಿ) ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಚಾಂಪಿಯನ್ಸ್ ಆಗಿ ಹೊರಹೊಮ್ಮುವುರೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 61 ಕೆ.ಜಿ ವಿಭಾಗದಲ್ಲಿ ನಿಶ್ಚಲ್ ಫಿಲಿಪ್ ಬೆಳ್ಳಿ ಪದಕ, 65 ಕೆ.ಜಿ ವಿಭಾಗದಲ್ಲಿ ಕ್ರಮವಾಗಿ ಅನುಲ್ ಚಿನ್ನದ ಪದಕ ಹಾಗೂ ಡೆನ್ಜಿಲ್ ಡಯಸ್ ಬೆಳ್ಳಿಯ ಪದಕ, 70ಕೆ.ಜಿ ಮೇಲ್ಪಟ್ಟ ವಿಭಾಗದಲ್ಲಿ ಸೂರಜ್ ಡಯಾಸ್ ಕಂಚಿನ ಪದಕ, 74 ಕೆ.ಜಿ.ವಿಭಾಗದಲ್ಲಿ ಹರ್ಷ ಬೆಳ್ಳಿಯ ಪದಕ, 79 ಕೆ.ಜಿ.ವಿಭಾಗದಲ್ಲಿ ಶ್ರೀನಿಧಿ ಶೆಟ್ಟಿ ಚಿನ್ನದ ಪದಕ, 86 ಕೆ.ಜಿ.ವಿಭಾಗದಲ್ಲಿ ಪುನಿತ್ ಕಂಚಿನ ಪದಕ, 92 ಕೆ.ಜಿ.ವಿಭಾಗದಲ್ಲಿ ಆರ್ಯ ಬೆಳ್ಳಿಯ ಪದಕ, 92 ಕೆ.ಜಿ.ವಿಭಾಗದಲ್ಲಿ ಗಣೇಶ ಕಂಚಿನ ಪದಕ ,97 ಕೆ.ಜಿ.ವಿಭಾಗದಲ್ಲಿ ಕ್ರಮವಾಗಿ ಚೇತನ್ ಖಾರ್ವಿ ಚಿನ್ನದ…
ಕುಂದಾಪ್ರ ಡಾಟ್ ಕಾಂ ಸುದ್ದಿ,ಕುಂದಾಪುರ: ಮರವಂತೆ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ವಿಶೇಷ ಗ್ರಾಮಸಭಾ ಅಧಿವೇಶನ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ ನಡೆಯಿತು. ಘನ ಮತ್ತು ದ್ರವ ಸಂಪನ್ಮೂಲ ಘಟಕದ ಕಾರ್ಯಕರ್ತರು ಪರಿಸರ ಸ್ವಚ್ಚತೆ ಮಾಡಿದರು. ಪ್ರೌಢಶಾಲೆಯಲ್ಲಿ ನಡೆದ ಗ್ರಾಮಸಭಾ ಅಧಿವೇಶನದಲ್ಲಿ ಕಾರ್ಯದರ್ಶಿ ದಿನೇಶ ಶೇರುಗಾರ್ ಸ್ವಚ್ಛತೆ ಮತ್ತು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಗ್ರಾಮ ಸಂಕಲ್ಪ ಪ್ರತಿಜ್ಞೆ ಬೋಧಿಸಿದರು. ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷ ಲೋಕೇಶ ಖಾರ್ವಿ, ಸದಸ್ಯರಾದ ಎಂ. ವಿನಾಯಕ ರಾವ್, ಸುಜಾತಾ, ನಾಗರಾಜ ಪಟಗಾರ್, ಕರುಣಾಕರ ಆಚಾರ್, ಸುಧಾಕರ ಆಚಾರ್, ಕಿಶನ್ ಪೂಜಾರಿ, ಮಾಜಿ ಅಧ್ಯಕ್ಷರಾದ ಅನಿತಾ ಆರ್. ಕೆ, ಎಸ್. ಜನಾರ್ದನ, ಸಾಧನಾ ಕಾರ್ಯದರ್ಶಿ ದೇವಿದಾಸ ಶ್ಯಾನುಭಾಗ್, ಸದಸ್ಯರಾದ ಎಂ. ಅಣ್ಣಪ್ಪ ಬಿಲ್ಲವ, ಎಂ. ಶಂಕರ ಖಾರ್ವಿ, ನಾಗೇಶ ರಾವ್, ಸೋಮಯ್ಯ ಬಿಲ್ಲವ, ಮಂಜು ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯರಾದ ಸರ್ವೋತ್ತಮ ಭಟ್, ಸೀತಾರಾಮ, ತ್ಯಾಜ್ಯ ಸಂಪನ್ಮೂಲ ಘಟಕದ ಮೇಲ್ವಿಚಾರಕಿ ಸುನೀತಾ, ಶಿಕ್ಷಕರು, ವಿದ್ಯಾರ್ಥಿಗಳು ಪ್ರತಿಜ್ಞೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪುರಾಣ ಪ್ರಸಿದ್ಧ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಅಂಗವಾಗಿ ಚಂಡಿಕಾ ಹವನ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಶುಕ್ರವಾರ ನಡೆಯಿತು. ಬೆಳಿಗ್ಗೆ 8 ಗಂಟೆಗೆ ದೇವತಾ ಪ್ರಾರ್ಥನೆಯೊಂದಿಗೆ ಚಂಡಿಕಾ ಹವನದ ಧಾರ್ಮಿಕ ಅನುಷ್ಠಾನಗಳು ಪ್ರಾರಂಭಗೊಂಡು ಮಧ್ಯಾಹ್ನ ಯಜ್ಞದ ಪೂರ್ಣಾಹುತಿಯೊಂದಿಗೆ ಚಂಡಿಕಾ ಹವನ ಸಂಪನ್ನಗೊಂಡಿತು. ಹರಕೆ ಸೀರೆಗಳ ಏಲಂ, ಭಜನಾ ಕಾರ್ಯಕ್ರಮ, ಬಳಿಕ ಶ್ರೀದೇವಿಗೆ ಮಹಾಪೂಜೆ, ಮಹಾಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ವಿಜೃಂಭಣೆಯಿಂದ ನಡೆಯಿತು. ದೇವಸ್ಥಾನದ ಅರ್ಚಕರು, ಪುರೋಹಿತರು, ದೇವಳದ ಆಡಳಿತ ಮಂಡಳಿ ಸದಸ್ಯರು, ಕುಳಾವಿ ಭಜಕರು, ಸಮಾಜಬಾಂಧವರು, ಭಕ್ತರು ಉಪಸ್ಥಿತರಿದ್ದರು.
ಕಾಂತಾರ, ಗುರುಶಿಷ್ಯರು ಎರಡು ಅತ್ಯುತ್ತಮ ಸಿನೆಮಾಗಳಲ್ಲಿ ಅಭಿನಯಿಸಿದ ಬಗ್ಗೆ ಖುಷಿಯಿದೆ – ಯೋಗೀಶ್ ಬಂಕೇಶ್ವರ Watch interview on 10th Oct 5:45pm
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಕೋಟ ಶಿವರಾಮ ಕಾರಂತ ಜನ್ಮೋತ್ಸವ ಕಾರ್ಯಕ್ರಮ ಈ ಭಾರಿ ಕೋಟದ ರಾಷ್ಟ್ರೀಯ ಹೆದ್ದಾರಿ ಶ್ರೀ ಶಾಂಭವಿ ಶಾಲೆಯ ಮೈದಾನದಲ್ಲಿ ನಡೆಯಲಿದ್ದು, ಸಭಾ ವೇದಿಕೆ ನಿರ್ಮಾಣ ಸೇರಿದಂತೆ ಪೂರ್ವ ಸಿದ್ಧತೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ವೀಕ್ಷಿಸಿದರು. ಅಕ್ಟೋಬರ್ 10ರಂದು ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕಾರಂತರ ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಈ ಬಾರಿ ಪ್ರಶಸ್ತಿಗೆ ಕಲಾವಿದ ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆ. ಸುಮಾರು 2000 ಮಂದಿ ಕುಳಿತು ವೀಕ್ಷಿಸಬಹುದಾದ ವಿಶಾಲ ಸುಸಜ್ಜಿತ ಸಭಾ ವೇದಿಕೆ ಸಿದ್ಧತೆ ಮಾಡಲಾಗುತ್ತಿದ್ದು, ಕಾರ್ಯಕ್ರಮದ ನಂತರ ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವಿದ್ದು, ಅಪಾರ ಜನ ಸೇರುವ ನಿರೀಕ್ಷೆ ಇದೆ. ಅಕ್ಟೋಬರ್ 10ರ ಮಧ್ಯಾಹ್ನ 3:30ಕ್ಕೆ ಕೋಟತಟ್ಟು ಗ್ರಾಮ ಪಂಚಾಯತ್ ನಿಂದ ಪ್ರಶಸ್ತಿ ಪುರಸ್ಕತರೊಂದಿಗೆ ಸಾಂಸ್ಕೃತಿಕ ಮೆರವಣಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೂರು ಶ್ರೀ ನಾಗ, ಯಕ್ಷೇ ಮತ್ತು ಹ್ಯಾಗುಳಿ ದೈವಸ್ಥಾನ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಮಯ್ಯಾಡಿಯ ಶ್ರೀ ರಾಮ ಭಜನಾ ಮಂಡಳಿ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ ವತಿಯಿಂದ ಶ್ರೀ ಸೀತಾರಾಚಂದ್ರ ದೇವಸ್ಥಾನದಲ್ಲಿ ಆಯೋಜಿಸಲಾದ 36ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭ ನಾಲ್ಕು ದಿನಗಳ ಕಾಲ ವಿಜೃಂಭಣೆಯಿಂದ ಜರುಗಿತು. ಮೂರನೇ ದಿನದ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್‌ನ ಆಡಳಿತ ಟ್ರಸ್ಟೀ ಬಿ. ರಾಮಕೃಷ್ಣ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಹಿಂದು ಧರ್ಮದ ಸಂಸ್ಕೃತಿ ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ ನಮ್ಮೆಲ್ಲರದ್ದೂ ಆಗಿದ್ದು, ಸಮಾಜದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಬಹುಮುಖ್ಯ. ಸಮಾಜದ ಎಲ್ಲಾ ಸ್ತರದ ವ್ಯಕ್ತಿಗಳೂ ಒಂದುಗೂಡಿ ನಡೆಸುವ ಕಾರ್ಯಕ್ರಮ ಯಶಸ್ವಿಯಾಗುವುದಲ್ಲದೇ, ಸಂಘಟನೆಯೂ ಬಲಗೊಳ್ಳುತ್ತದೆ ಎಂದರು. ಕಾರ್ಯಕ್ರಮದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ್, ಕೋಟೇಶ್ವರದ ವಿಘ್ನೇಶ್ವರ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಮಾಲಕ ಮಹೇಶ್ ಬೆಟ್ಟಿನ್, ಹೊನ್ನಾವರದ ಗೋಲ್ ಕಾರ್ಪೋರೇಷನ್ ಎಂ.ಡಿ ಎ.ಆರ್. ನಾಯಕ್, ಉಡುಪಿ ಅರಣ್ಯ ವಿಚಕ್ಷಣಾದಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ನವರಾತ್ರಿ ಅಂಗವಾಗಿ ಒಂಬತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ವಿಜಯ ದಶಮಿಯಂದು ಧಾರ್ಮಿಕ ಪಠಣ ಹಾಗೂ ಸಂಗೀತ ತರಬೇತಿ ಶಿಬಿರ – ‘ವಿದ್ಯಾದಾನ’ಕ್ಕೆ ಜಿಲ್ಲಾ ಭಗವದ್ಗೀತಾ ಅಭಿಯಾನದ ಪ್ರಶಿಕ್ಷಕಿ ಯಶೋದಾ ಅಡಿಗ ಅವರು ಚಾಲನೆ ನೀಡಿದರು. ಈ ವೇಳೆ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ, ನಾಗಶ್ರೀ ಮಧ್ಯಸ್ಥ ಹಾಗೂ ಕುಟೀರದ ವಿದ್ಯಾರ್ಥಿಗಳು ಹಾಜರಿದ್ದರು. ಆಶ್ರಮದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಶರನ್ನವರಾತ್ರಿಯ ಪ್ರತಿದಿನ ಬೆಳಿಗ್ಗೆ ಬ್ರಾಹ್ಮಿ ಮಹೂರ್ತದಲ್ಲಿ ಪ್ರಾತಃ ಪೂಜೆ, ಚಂಡಿಕಾ ಪಾರಾಯಣ, ಆಶ್ರಮದ ವಿದ್ಯಾರ್ಥಿಗಳಿಂದ ಸಪ್ತ ಶತಿಯಲ್ಲಿ ಬರುವ ದೇವಿ ಸ್ತುತಿಗಳು, ಲಕ್ಷ್ಮೀ ಅಷ್ಟೋತ್ತರ, ಮಹಾಕಾಳಿ ಮಹಾಲಕ್ಷ್ಮಿ, ಮಹಾಸರಸ್ವತಿಯ ಅಷ್ಟಕ ಹಾಗೂ ವಿವಿಧ ಸ್ತೋತ್ರಗಳ ಪಠಣ, ಉಪನಿಷತ್ ಪಠಣ ಪೂಜೆ, ಪ್ರಸಾದ ವಿತರಣೆ, ವಿವಿಧ ದೇವಿ ಸ್ತುತಿಗಳೊಂದಿಗೆ ಭಜನೆ, ಚಂಡಿಕಾ ಪಾರಾಯಣ, ಪೂಜೆ, ಪ್ರಸಾದ ವಿತರಣೆ ನಡೆಯಿತು. ನವರಾತ್ರಿಯ ವಿವಿಧ ದಿನಗಳಲ್ಲಿ ಗಣಹೋಮ, ಲಲಿತಾ…
