Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ಆಶ್ರಯದಲ್ಲಿ ಶ್ರೀ ವ್ಯಾಸರಾಜ ಕಲ್ಯಾಣ ಮಂಟಪದಲ್ಲಿ ಸೋಮವಾರ ಶಿಕ್ಷಕರ ದಿನಾಚರಣೆ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ವಿಜಯ ಎಸ್. ಪೂಜಾರಿ ಮಾತನಾಡಿ ಶಿಕ್ಷಕರು ಅಕ್ಷರ ಕಲಿಸುವುದಕ್ಕಷ್ಟೇ ಸೀಮಿತವಲ್ಲ. ಮಾರ್ಗದರ್ಶಕರಾಗಿ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಮಕ್ಕಳ ತಿದ್ದಿತೀಡಿ ಬಲಿಷ್ಠ ಸಾಮಾಜ ನಿರ್ಮಾಣದ ಬುನಾದಿ ಶಿಕ್ಷಕರಾಗಿದ್ದಾರೆ. ದೇಶ ಬೆಳಗುವ ಮಕ್ಕಳ ಭವಿಷ್ಯ ಬೆಳಗಿಸುವ ಮಹತ್ತರ ಕೆಲಸ ಶಿಕ್ಷರಿಂದ ಆಗುತ್ತದೆ ಎಂದರು. ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಅಧ್ಯಕ್ಷತೆ ವಹಿಸಿದ್ದರು. ಬಸ್ರೂರು ನಿವೇದಿತಾ ಪ್ರೌಢಸಾಲೆ ನಿವೃತ್ತ ಮುಖ್ಯಶಿಕ್ಷಕ ದಿನಕರ ಆರ್.ಶೆಟ್ಟಿ ಉಪನ್ಯಾಸ ಮಾಡಿದರು. ಕುಂದಾಪುರ ತಾಪಂ ಇಒ ಮಹೇಶ್ ಕುಮಾರ ಹೊಳ್ಳ, ಯುವ ಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಜಯಶೀಲ ಶೆಟ್ಟಿ, ಕುಂದಾಪುರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲಿ ಸರ್ವೇಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ನಡೆಯಿತು. ಕಾಲೇಜ್ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ ಮೊಗವೀರ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪ್ರೌಢಶಾಲೆ ಸಿದ್ಧಾಪುರ ಸಹಶಿಕ್ಷಕಿ ವಸಂತಿ ಭಟ್ಮನಕ್ಕಿ ಶಿಕ್ಷಣ-ವಿದ್ಯಾರ್ಥಿ ಕುರಿತು ಮಾತನಾಡಿದರು. ಪ್ರಗತಿ ಮಹಿಳಾ ವಿವಿಧೋದ್ದೇಶ ಕೋ-ಆಪರೇಟಿವ್ ಸೊಸೈಟಿ ಕಾರ್ಯದರ್ಶಿ ರಾಘವೇಂದ್ರ ಕುಲಾಲ್ ಉಪಸ್ಥಿತರಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಅಭಿಜಿತ್ ಅತಿಥಿಗಳ ಪರಿಚಯಿಸಿ, ಅರ್ಥಶಾಸ್ತ್ರ ಉಪನ್ಯಾಸಕ ಶ್ರೀಹರ್ಷ ಸ್ವಾಗತಿಸಿ, ಕನ್ನಡ ಉಪನ್ಯಾಸಕ ಉದಯಾ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ಆಂಗ್ಲ ಭಾಷಾ ಉಪನ್ಯಾಸಕಿ ಪ್ರಿಯಾಂಕ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೇಧಾವಿಗಳು ತಿಳಿದವರು ಶಿಕ್ಷಣದ ಕುರಿತು ಸಾಕಷ್ಟು ವ್ಯಾಖ್ಯಾನ ಪ್ರಕಾರ ಶಿಕ್ಷಣ ಕೇವಲ ಪರೀಕ್ಷೆಗೆ ಮಾತ್ರ ಸೀಮಿತವಾಗಬಾರದು. ಅದರಾಚೆಗೂ ನಮ್ಮ ಬದುಕಿಗೆ ಪೂರಕವಾದ ಶಿಕ್ಷಣವು ದೊರೆತಾಗ ಆ ಶಿಕ್ಷಣಕ್ಕೆ ಅರ್ಥ ಬರುತ್ತದೆ ಎಂದು ಕೋಟ ವಿವೇಕ ಪ್ರೌಢಶಾಲಾ ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು. ಕುಂದಾಪುರ ಭಂಡಾರ್‌ಕಾರ್ಸ್ ಕಲಾ ವಿಜ್ಞಾನ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಂಡಾರ್ಕಾರ್ಸ್ ಕಾಲೇಜು ಪ್ರಾಂಶುಪಾಲ ಡಾ. ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ. ಜಿ. ಎಂ. ಗೊಂಡ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ. ಸತ್ಯನಾರಾಯಣ ಉಪಸ್ಥಿತರಿದ್ದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಲಲಿತಾದೇವಿ ಸ್ವಾಗತಿಸಿದರು. ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ಸರೋಜ ಎಂ ವಂದಿಸಿದರು. ಅರ್ಥಶಾಸ್ತ್ರ ವಿಭಾಗ ಉಪನ್ಯಾಸಕ ದುರ್ಗಾಪ್ರಸಾದ್ ಅತಿಥಿಗಳ ಪರಿಚಯಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುಮಾ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮೋಹನ ಪೂಜಾರಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ ವರದಿ ವರ್ಷದಲ್ಲಿ ರೂ. 96.80 ಕೋಟಿ ವ್ಯವಹಾರ ನಡೆಸಿ, ರೂ. 40.15 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಮುಂದಿನ ದಿನಗಳಲ್ಲಿ 100 ಕೋಟಿ ರೂ. ವ್ಯವಹಾರದ ಗುರಿಯಿರಿಸಿಕೊಳ್ಳಲಾಗಿದೆ. ಸಂಘವು ಪ್ರಾರಂಭದಿಂದಲೂ ಲಾಭದಲ್ಲಿಯ್ಲೇ ಮುನ್ನಡೆಯುತ್ತಿದ್ದು, ಕಳೆದ 30 ವರ್ಷಗಳಿಂದ ನಿರಂತರ ಡಿವಿಡೆಂಟ್ ನೀಡಿರುವ ಹೆಗ್ಗಳಿಕೆ ಗಳಿಸಿದೆ. ಈ ಭಾರಿ 10% ಡಿವಿಡೆಂಟ್ ಘೋಷಿಸಲಾಗಿದೆ. ಪ್ರಧಾನ ಕಚೇರಿಗೆ ಸುಸಜ್ಜಿತವಾದ ಸಹಕಾರಿ ಸಂಕೀರ್ಣ ನಿರ್ಮಾಣ ಯೋಜನೆಯಿದ್ದು, ಅದಕ್ಕಾಗಿ ಜಾಗ ಮೀಸಲಿರಿಸಲಾಗಿದೆ. ಸಂಘದ ಕಾರ್ಯ ಕ್ಷೇತ್ರದಲ್ಲಿ ಎರಡನೇ ಶಾಖೆ ತೆರೆಯುವುದು ಸೇರಿದಂತೆ ಹಲವು ಯೋಜನೆಗಳನ್ನು ಕಾರ್ಯಕತಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು. ಸಂಘದ ಹಿರಿಯ ಸದಸ್ಯರುಗಳನ್ನು ಗೌರವಿಸಲಾಯಿತು. ವೈದ್ಯಕೀಯ ಪದವಿ ಪೂರೈಸಿದ ಡಾ. ನಿಖಿತಾ ಎಂ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಉಡುಪಿ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಅಗ್ನಿಪಥಕ್ಕೆ ಪೂರಕವಾಗಿ ಸೇನಾ ಆಯ್ಕೆ ಪೂರ್ವ ತರಬೇತಿ ಸಂಸ್ಥೆಗಳನ್ನು ಆರಂಭಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀರ ರಾಣಿ ಅಬ್ಬಕ್ಕಳ ಹೆಸರಿನಲ್ಲಿ, ಉಡುಪಿ ಜಿಲ್ಲೆಯಲ್ಲಿ ಕೋಟಿ-ಚೆನ್ನಯರ ಹೆಸರಿನಲ್ಲಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಯೋಧ ಹೆಂಜ ನಾಯ್ಕ್ ಹೆಸರನ್ನು ಈಗಾಗಲೇ ಇಲಾಖೆ ಸೇನಾ ಪೂರ್ವ ತರಬೇತಿ ಸಂಸ್ಥೆಗಳಿಗೆ ಇಡುವುದಾಗಿ ಈಗಾಗಲೇ ಪ್ರಕಟಿಸಿದೆ. ಉಡುಪಿ ನಗರದ ಹೋಟೆಲ್ ಕಿದಿಯೂರಿನ ಸೇಷಶಯನ ಸಭಾಂಗಣದಲ್ಲಿ ಇತಿಹಾಸ ಪುರುಷರಾದ ಕೋಟಿ ಚೆನ್ನಯರ ಹೆಸರಿನಲ್ಲಿ ಸೆಪ್ಟೆಂಬರ್ 5ರಂದು ಸೇನಾ ಪೂರ್ವ ತರಬೇತಿ ಸಂಸ್ಥೆಯನ್ನು ಅಧಿಕೃತವಾಗಿ ಉದ್ಘಾಟನೆ ಆಗಲಿದೆ. ಪ್ರತಿ ತರಬೇತಿ ಸಂಸ್ಥೆಯಲ್ಲಿ ನೂರು ಜನ ಯುವಕರನ್ನು ಆಯ್ಕೆ ಮಾಡಿಕೊಂಡು ಸೇನಾಪೂರ್ವ ತರಬೇತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡಲಿದ್ದು, ಮುಂದಿನ ಅಗ್ನಿಪಥಕ್ಕೆ ಅರ್ಜಿ ಆಹ್ವಾನಿಸಿದಾಗ ಈ ಕಠಿಣವಾದ ನಾಲ್ಕು ತಿಂಗಳ ತರಬೇತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.04: ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಸಂಧ್ಯಾ ಅವರು ದಾಳಿ ನಡೆಸಿ 4 ಲಾರಿ ಸಹಿತ, 8 ಮೆಟ್ರಿಕ್ ಟನ್ ಮರಳು, 14 ಮೆಟ್ರಿಕ್ ಟನ್ ಕೆಂಪುಕಲ್ಲು ವಶಕ್ಕೆ ಪಡೆದಿದ್ದಾರೆ. ಕುಂದಾಪುರ ತಾಲೂಕು ಹಕ್ಲಾಡಿ ಗ್ರಾಮದ ಬಟ್ಟೆಕುದ್ರು ಪರಿಸರದ ಚಕ್ರ ನದಿಯಲ್ಲಿ ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಣಿಕೆ ನಡೆಸುತ್ತಿರುವ ಬಗ್ಗೆ ರಾತ್ರಿ ಬಂದ ಸಾರ್ವಜನಿಕರ ಮಾಹಿತಿ ಮೇರೆಗೆ ಇಲಾಖೆಯ ಭೂ ವಿಜ್ಞಾನಿ ಸಂಧ್ಯಾ ಅವರು ಮುಂಜಾನೆ 5.30ಕ್ಕೆ ದಾಳಿ ನಡೆಸಿ 8 ಮೆಟ್ರಿಕ್ ಟನ್ ಮರಳು ಸಹಿತ ಒಂದು ಲಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನೂಂದು ಪ್ರಕರಣದಲ್ಲಿ ಸಾರ್ವಜನಿಕರ ಮಾಹಿತಿ ಮೇರೆಗೆ ಕುಂದಾಪುರ ತಾಲೂಕು ಆಲೂರು ಗ್ರಾಮದಲ್ಲಿನ ಅನಧಿಕೃತ ಕೆಂಪುಕಲ್ಲು ಕ್ವಾರಿಗಳಿಂದ ಕೆಂಪು ಕಲ್ಲು ಸಾಗಣೆ ಮಾಡುತ್ತಿದ್ದ ಮೂರು ಲಾರಿ ಮತ್ತು 14 ಮೆಟ್ರಿಕ್ ಟನ್ ಕೆಂಪುಕಲ್ಲುಗಳನ್ನು ಹೊಸಾಡು ಗ್ರಾಮದ ಬಂಟ್ವಾಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2022-23ನೇ ಸಾಲಿನ ಶಿಕ್ಷಕರ ದಿನದ ಅಂಗವಾಗಿ ನೀಡಲಾಗುವ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕುಂದಾಪುರ ವಲಯದ ನಾಲ್ವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕೆಳಸುಂಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಸುಜಾತ ಕೆ., ಹಿರಿಯ ಪ್ರಾಥಮಿಕ ವಿಭಾದಲ್ಲಿ ಹೆಂಗವಳ್ಳಿಯ ದುರ್ಗಾಪರಮೇಶ್ವರಿ ಅನುದಾನಿತ ಹಿ.ಪ್ರಾ ಶಾಲೆ ತೊಂಭತ್ತು ಇದರ ಸಹಶಿಕ್ಷಕ ನವೀನ್ ಚಂದ್ರ ಹೆಗ್ಡೆ, ಬಿದ್ಕಲಕಟ್ಟೆಯ ಕೆಪಿಎಸ್ ಪ್ರಾಥಮಿಕ ಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕ ಉದಯ ಕುಮಾರ್ ಶೆಟ್ಟಿ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಕಾಳವರ ಸರಕಾರಿ ಪ್ರೌಢಶಾಲಾ ಶಿಕ್ಷಕ ಗಣೇಶ್ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ. ಸೆ.5ರಂದು ಮಣಿಪಾಲ ರಜತಾದ್ರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಆತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದವರನ್ನು ಗೌರವಿಸಲಾಗುವುದು. ಇದನ್ನೂ ಓದಿ:► ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಬೈಂದೂರು ವಲಯದ ಐವರು ಆಯ್ಕೆ – https://kundapraa.com/?p=61850 .► ಉದಯ ಕುಮಾರ್ ಎಂ.ಪಿ ಅವರಿಗೆ ಉತ್ತಮ ಉಪನ್ಯಾಸಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: 2022-23ನೇ ಸಾಲಿನ ಶಿಕ್ಷಕರ ದಿನದ ಅಂಗವಾಗಿ ನೀಡಲಾಗುವ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಬೈಂದೂರು ತಾಲೂಕಿನ ಐವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಆಲಂದೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕ ಮಾಧವ ಬಿಲ್ಲವ, ಆಜ್ರಿಗದ್ದೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ದಿನೇಶ್, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಹೊಸೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲಲಿತ ಚಂದ್ರ ಪಟಗಾರ್ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಬೈಂದೂರು ಜ್ಯೂನಿಯರ್ ಕಾಲೇಜಿನ ಹಿಂದಿ ಭಾಷಾ ಶಿಕ್ಷಕ ರವೀಂದ್ರ ಪಿ. ಕೊಲ್ಲೂರು ಮೂಕಾಂಬಿಕಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಹಶಿಕ್ಷಕ ಸಚಿನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಸೆ.5ರಂದು ಮಣಿಪಾಲ ರಜತಾದ್ರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಆತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದವರನ್ನು ಗೌರವಿಸಲಾಗುವುದು. ಇದನ್ನೂ ಓದಿ:► ಉದಯ ಕುಮಾರ್ ಎಂ.ಪಿ ಅವರಿಗೆ ಉತ್ತಮ ಉಪನ್ಯಾಸಕ ರಾಜ್ಯ ಪ್ರಶಸ್ತಿ – https://kundapraa.com/?p=61808 .►…

Read More

ಕುಂದಾಪ್ರ ಡಾಟ್ ಕಾಂ ವರದಿ.ಬೈಂದೂರು,ಸೆ.04: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೇರಿದ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಲು ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಕಂದಾಯ ಇಲಾಖೆಯಿಂದ ಮರು ಸರ್ವೇ ನಡೆಸಿ ಅನಧಿಕೃತವಾಗಿ ಹಾಕಲಾಗಿದ್ದ ಶೆಡ್’ಗಳನ್ನು ತೆರವುಗೊಳಿಸಲಾಗಿದೆ. ಬೈಂದೂರು ಪ್ರಥಮ ದರ್ಜೆ ಕಾಲೇಜಿಗೆ ಸೇರಿದ 12 ಎಕರೆ ಜಾಗದಲ್ಲಿ ಅಕ್ರಮ ಒತ್ತುವರಿಗೆ ಪ್ರಯತ್ನಿಸಿರುವುದು ಕಂಡುಬಂದಿದೆ. ಏಕಾಏಕಿ 10ಕ್ಕೂ ಹೆಚ್ಚು ಗುಡಿಸಲು ನಿರ್ಮಿಸಿರುವುದು ಹಾಗೂ ಗಿಡಗಳನ್ನು ಕಡಿದು ಅಲ್ಲಲ್ಲಿ ಗಡಿ ಗುರುತು ಮಾಡಿರುವುದು ಕಾಲೇಜು ಆಡಳಿತದ ಗಮನಕ್ಕೆ ಬಂದಿತ್ತು. ತಕ್ಷಣ ಬೈಂದೂರು ತಹಶಿಲ್ದಾರರಿಗೆ ಮನವಿ ಸಲ್ಲಿಸಿ ಬಳಿಕ ಸರ್ವೆಯನ್ನು ನಡೆಸಲಾಗಿತ್ತು. ಕಾಲೇಜಿಗೆ ಸಂಬಂಧಪಟ್ಟ ಜಾಗಕ್ಕೆ ಮತ್ತೆ ಗಡಿ ಗುರುತು ನಿಗದಿಪಡಿಸಿ ಅಕ್ರಮ ಗುಡಿಸಲನ್ನು ಸರ್ವೇ ಅಧಿಕಾರಿಗಳು ಕಿತ್ತುಹಾಕಿದ್ದಾರೆ. ಕಾಲೇಜು ಜಾಗಕ್ಕೆ ಅಕ್ರಮ ಪ್ರವೇಶಿಸಿ ವಾಸ್ತವ್ಯ ಹೂಡಿ ಹಕ್ಕುಪತ್ರ ಪಡೆಯಲು ಹೊರಟಿರುವ ಹುನ್ನಾರದ ಹಿಂದೆ ಪ್ರಭಾವಿಗಳ ಕೈವಾಡವಿದೆ ಎನ್ನುವ ಶಂಕೆಯಿದೆ. ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು ವಿದ್ಯಾನಗರದ ಸರ್ವೆ ನಂಬರ್ 336ರಲ್ಲಿ ದಾಖಲೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಬೈಂದೂರು ತಾಲೂಕಿನ ಪ್ರೌಢಶಾಲಾ ವಿಭಾಗದಲ್ಲಿ ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಹಿಂದಿ ಶಿಕ್ಷಕ ರವೀಂದ್ರ ಪಿ. ಬೈಂದೂರು ಆಯ್ಕೆಯಾಗಿದ್ದಾರೆ. ಹಿಂದಿ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ರವೀಂದ್ರ ಅವರು ಈತನಕ ವಿದ್ಯಾರ್ಥಿಗಳ ಸುಲಭ ಕಲಿಕೆಗಾಗಿ ಐದು ವ್ಯಾಕರಣ ಸಂಬಂಧಿ ಪುಸ್ತಕಗಳನ್ನು ಬರೆದು ಪ್ರಕಟಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿರುವ ಅವರು ಈವರೆಗೆ ಭಕ್ತಿಗೀತೆ, ಭಾವಗೀತೆ, ಪರಿಸರ ಸಂಬಂಧಿತ ಗೀತೆಗಳನ್ನು ರಚಿಸಿ ಧ್ವನಿ ಸುರುಳಿಗಳನ್ನು ಬಿಡುಗಡೆ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Read More