Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ಬೈಂದೂರು ವಲಯ ಅರಣ್ಯ ಇಲಾಖೆ ಹಾಗೂ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ರೈತರಿಗೆ ಗಿಡ ವಿತರಣಾ ಕಾರ್ಯಕ್ರಮ ಸಂಘದ ಹೆರೂರು ಶಾಖಾ ಆವರಣದಲ್ಲಿ ಸೋಮವಾರ ಜರುಗಿತು. ಈ ಸಂದರ್ಭ ಬೈಂದೂರು ವಲಯ ಅರಣ್ಯಧಿಕಾರಿ ಟಿ. ಕಿರಣ್ ಬಾಬು ಮಾತನಾಡಿ ವಲಯ ವ್ಯಾಪ್ತಿಯಲ್ಲಿ ಈ ಭಾರಿ ಹೆಚ್ಚಿನ ಗಿಡಗಳನ್ನು ನೆಡಲು ಉದ್ದೇಶಸಲಾಗಿದೆ. ಕೃಷಿ ಅರಣ್ಯ ಪ್ರೋತ್ಸಾಹಕ ಯೋಜನೆಯಡಿ ಕೃಷಿಕರ ಬೇಡಿಕೆಗನುಗುಣವಾಗಿ ಇಲಾಖೆಯಿಂದ ಗಿಡಗಳನ್ನು ವಿತರಿಸಲಾಗುತ್ತದೆ ಎಂದರು. ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್ ರಾಜು ಪೂಜಾರಿ ಕೃಷಿಕರಿಗೆ ಗೀಡಗಳನ್ನು ವಿತರಿಸಿದರು. ಈ ಸಂದರ್ಭ ಹೇರೂರು ಗ್ರಾಮ ಪಂಚಾಯತ್ ಸದಸ್ಯರಾದ ಸುಧಾಕರ ಮತ್ತು ಸುಶೀಲ ಆಚಾರ್ತಿ, ಉಪ ವಲಯ ಅರಣ್ಯಧಿಕಾರಿ ಸದಾಶಿವ, ಅರಣ್ಯ ರಕ್ಷಕ ಜನಾರ್ಧನ, ಅರಣ್ಯ ವೀಕ್ಷಕರು ಸುರೇಶ, ಗುರುರಾಜ್ ಪಡುವರಿ, ಸಂಸ್ಥೆಯ ನಿರ್ದೇಶಕರಾದ ಭೋಜ ನಾಯ್ಕ, ರಾಮಕೃಷ್ಣ ಖಾರ್ವಿ, ನಾರಾಯಣ ಶೆಟ್ಟಿ, ವಿನಾಯಕ ರಾವ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ವತಿಯಿಂದ ಹನ್ನೊಂದು ಜನ ವೈದ್ಯರಿಗೆ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಗೌರವ ಸಮರ್ಪಣೆ ಸಲ್ಲಿಸಲಾಯಿತು. ಹಿರಿಯ ಸದಸ್ಯರುಗಳಾದ ಡಾ. ಮಲ್ಲಿ, ಡಾ. ರಾಜೀವ ಶೆಟ್ಟಿ ,ಡಾ. ಕಮಲ್ ಅವರನ್ನು ಅಧ್ಯಕ್ಷರಾದ ರೋಟೇರಿಯನ್ ಶಶಿಧರ ಹೆಗ್ಡೆ ಕಾರ್ಯದರ್ಶಿಗಳಾದ ಕುಮಾರ ಎಸ್. ಕಾಂಚನ್ ಹಾಗೂ ರೋಟರಿ ಮಾಜಿ ಸಹಾಯಕ ರಾಜ್ಯಪಾಲರಾದ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ಹಿರಿಯ ವಕೀಲರಾದ ರೋಟೇರಿಯನ್ ಕೆ.ಸಿ ಶೆಟ್ಟಿ ಇವರುಗಳ ಸಮ್ಮುಖದಲ್ಲಿ ಅವರ ಮನೆಯಲ್ಲಿಯೇ ಸನ್ಮಾನಿಸಲಾಯಿತು ಹಾಗೂ ಅದೇ ದಿನ ನಡೆದ ಕ್ಲಬ್ಬಿನ ಸಭೆಯಲ್ಲಿ ರೋಟರಿ ಕುಂದಾಪುರದ ಸದಸ್ಯರಾದ ಪ್ರೋ ಡಾಕ್ಟರ್ ರಾಜರಾಮ್ ಶೆಟ್ಟಿ , ಡಾ. ಹರಿಪ್ರಸಾದ್ ಶೆಟ್ಟಿ, ಪ್ರೋ ಡಾಕ್ಟರ್ ಎಮ್.ಎನ್ ಅಡಿಗ, ಡಾ. ರಾಜೇಂದ್ರ ಶೆಟ್ಟಿ ಹಾಗೂ ಕೋವಿಡ್ ವಾರಿಯರ್ಸ್ ಆಗಿ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ಅತ್ಯುತ್ತಮ ಸೇವೆಸಲ್ಲಿಸಿದ ಯುವ ವೈದ್ಯರುಗಳಾದ ಡಾ. ನಮಿತ, ಡಾ. ನಿವೇದಿತಾ, ಡಾಕ್ಟರ್ ರಜತ್, ಡಾ. ಆಶಿಥ್, ಡಾ. ವಿಪುಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಅವರು ಭೇಟಿ ನೀಡಿ ಕಾರಂತರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ರಂಗ ಮಂದಿರ, ಆರ್ಟ್ ಗ್ಯಾಲರಿ, ಗ್ರಂಥಾಲಯ, ಕಾರಂತ ಸಿರಿ ಪುಸ್ತಕ ಮಾರಾಟ ಮಳಿಗೆ ವೀಕ್ಷಿಸಿದರು. ಥೀಮ್ ಪಾರ್ಕ್ ವ್ಯವಸ್ಥೆ ಬಗ್ಗೆ ಮೆಚ್ಚುಗೆ ಕಾರಂತರು ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯವಾಗಿದ್ದು, ಈ ನಿಟ್ಟಿನಲ್ಲಿ ಕಾರಂತರ ಹೆಸರು ಅeರಾಮರವಾಗಿರಲು ಥೀಮ್ ಪಾರ್ಕ್ ಸಹಕಾರಿ. ಇಲ್ಲಿನ ಸ್ವಚ್ಚತೆ, ದಿನ ನಿತ್ಯ ನಡೆಯುವ ಕಾರ್ಯಕ್ರಮಗಳು, ಮಕ್ಕಳಿಗಾಗಿ ನಡೆಯುವ ತರಗತಿಗಳು ವ್ಯವಸ್ಥಿತವಾಗಿ ನಡೆಯುತ್ತಿರುವ ಸಂತಸದ ವಿಷಯ. ಗ್ರಾಮ ಪಂಚಾಯತ್ ಗ್ರಂಥಾಲಯವಾದರೂ ತುಂಬಾನೇ ಸುಂದರವಾಗಿ ಕಾರ್ಯನಿರ್ವಹಿಸುತ್ತಿದ್ದು ಇದರ ಪ್ರಯೋಜನ ಹೆಚ್ಚಿನ ಜನ ಪಡೆಯುವಂತಾಗಬೇಕು, ಗ್ರಂಥಾಲಯದಲ್ಲಿರುವ ಕಾರಂತರ ಪೈಟಿಂಗ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಒಂದು ಜೊತೆ ಶಾಲಾ ಪಠ್ಯ ಪುಸ್ತಕದ ಗ್ರಂಥಾಲಯಕ್ಕೆ ನೀಡುವಂತೆ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ಮತ್ತು ರಾಜ್ಯ ವಲಯದ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೀನುಗಾರಿಕೆಯಲ್ಲಿ ಆಸಕ್ತಿ, ಅನುಭವ ಇರುವ ಅರ್ಹ ಫಲಾನುಭವಿಗಳು ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟುಗಳು (ವಿಶೇಷ ಘಟಕ ಯೋಜನೆ), ಮೀನು ಮಾರಾಟಕ್ಕೆ ವಾಹನ ಖರೀದಿಗೆ ಸಹಾಯ, ಜೀವರಕ್ಷಕ ಸಾಧನಗಳನ್ನು ಮತ್ತು ಇತರ ಕಾರ್ಯಕ್ರಮಗಳ ಲಾಭ ಪಡೆಯಬಹುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮ ಸರ್ಕಾರವಾದ ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ನಾಗರಿಕ ಸೌಲಭ್ಯಗಳ ಸೃಷ್ಟಿಗಷ್ಟೇ ತಮ್ಮನ್ನು ಸೀಮಿತಗೊಳಿಸಿಕೊಳ್ಳದೆ, ಸಮಗ್ರ ಅಭಿವೃದ್ಧಿಯ ಗುರಿ ಸಾಧಿಸಬೇಕು. ತಮ್ಮ ಕಾರ್ಯಸೂಚಿಯಲ್ಲಿ ಮಹಿಳೆಯರ, ಮಕ್ಕಳ ಮತ್ತು ಹಿರಿಯ ನಾಗರಿಕರ ರಕ್ಷಣೆ ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ಹೇಳಿದರು. ಅವರು ಇಲಾಖೆಯಿಂದ ಯೂಟ್ಯೂಬ್ ಮೂಲಕ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಶಿಕ್ಷಣ ಕಾರ್ಯಪಡೆಗಳ ಸದಸ್ಯರ ಒಂದು ದಿನದ ರಾಜ್ಯವ್ಯಾಪಿ ತರಬೇತಿಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೇಶ ಇಂದು ಸ್ವಾತಂತ್ರ್ಯದ 75ನೇ ವರ್ಷಾಚರಣೆ ಮಾಡುತ್ತಿರುವಾಗ ಗಾಂಧೀಜಿಯವರ ಗ್ರಾಮ ಸ್ವರಾಜ್ ಕನಸು ನನಸು ಮಾಡುವ ಹೊಣೆ ನಮ್ಮ ಮೇಲಿದೆ. ಅದೇ ವೇಳೆ ಕೋವಿಡ್ ಸೋಂಕಿನ ಕಾರಣ ಮಕ್ಕಳು, ಮಹಿಳೆಯರು, ಹಿರಿಯರು ವಿವಿಧ ಸಂಕಷ್ಟ ಎದುರಿಸುತ್ತಿದ್ದಾರೆ. ಶಾಲೆ ತ್ಯಜಿಸಿದ ಮಕ್ಕಳನ್ನು ಶಾಲೆಗೆ ತರುವ, ಮಹಿಳೆಯರ ವಿರುದ್ಧ ನಡೆಯುವ ದೌರ್ಜನ್ಯಗಳನ್ನು ತಡೆಯುವ, ಹಿರಿಯ ನಾಗರಿಕರಿಗೆ ಸಾಂತ್ವನ ನೀಡುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. 50 ರೂ. ಹೆಚ್ಚುವರಿ ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನವಾಗಿದೆ. ಅರ್ಜಿ ನಮೂನೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ, ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂ. ಮನಿಯಾರ್ಡರ್ ಮಾಡಿದರೆ ಅಂಚೆ ಮೂಲಕ ಅಥವಾ ವೆಬ್ಸೈಟ್ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು ದೂರವಾಣಿ ಸಂಖ್ಯೆ: 080-26623584 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಶ್ಚಿಮ ವಾಹಿನಿ ಹೆಸರಿನಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ನಿರ್ಮಿಸಲ್ಪಡುತ್ತಿರುವ ವೆಂಟೆಡ್ ಡ್ಯಾಮ್ ಕಾಮಗಾರಿಗಳು ಕಳಪೆಯಾಗಿದ್ದು ಮತ್ತು ಈ ಕಾಮಗಾರಿಗಳಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಹಣ ದುರುಪಯೋಗ ಆಗುತ್ತಿದೆ. ಕಳಪೆ ಕಾಮಗಾರಿಗಳ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಉಡುಪಿ ಜಿಲ್ಲಾ ರೈತ ಸಂಘದ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಪಶ್ಚಿಮ ವಾಹಿನಿ ಯೋಜನೆಯ ಅಡಿಯಲ್ಲಿ 1400ಕ್ಕೂ ಹೆಚ್ಚು ವೆಂಟೆಡ್ ಡ್ಯಾಮ್ ಗಳು ಮಂಜೂರಾಗಿದ್ದು, ಉಡುಪಿ ಜಿಲ್ಲೆಯಲ್ಲೂ ಈ ಯೋಜಯ ಅಡಿ ಹಲವು ವೆಂಟೆಡ್ ಡ್ಯಾಂ ನಿರ್ಮಾಣವಾಗಿದ್ದು ಇನ್ನು ಕೆಲವು ನಿರ್ಮಾಣದ ಹಂತದಲ್ಲಿವೆ, ಈ ಡ್ಯಾಂಗಳು ರೈತರ ಬೇಡಿಕೆ ಹಾಗೂ ಆಗ್ರಹಕ್ಕೆ ನಿರ್ಮಾಣವಾಗದೆ ಜನಪ್ರತಿನಿಧಿಗಳು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಗುತ್ತಿಗೆದಾರರ ಮರ್ಜಿಗೆ ಒಳಗಾಗಿ ಅವರಿಗೆ ಲಾಭವಾಗುವಲ್ಲಿ ಡ್ಯಾಂ ಮಂಜೂರು ಮಾಡುತ್ತಿದ್ದಾರೆ ಹಾಗೂ ಈ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು ಅನುಪಯುಕ್ತ ಕಾಮಗಾರಿಗಳಾಗಿವೆ ಹಾಗೂ ಕಾಮಗಾರಿಯ ಅಂದಾಜು ಮೊತ್ತ ಕಾಮಗಾರಿ ಮುಕ್ತಾಯವಾಗುವಾಗ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಜುಲೈ 5ರಿಂದ ರಿಂದ 19ರವರೆಗೆ ಜಾರಿಯಲ್ಲಿರುವಂತೆ ಅನ್’ಲಾಕ್ 3.0 ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೂರನೇ ಅನ್ ಲಾಕ್ ಘೋಷಣೆ ಮಾಡಿದರು. ಸರ್ಕಾರಿ, ಖಾಸಗಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆಗಳು, ಮಾಲ್ ಗಳಿಗೆ ಅನುಮತಿ, ಮೆಟ್ರೋ, ಕಾರ್ಮಿಕ ಕಾರ್ಯಗಳಿಗೆ ಅವಕಾಶ ನೀಡಲಾಗಿದೆ ಎಂದರು. ಯಾವುದಕ್ಕೆಲ್ಲ ವಿನಾಯಿತಿ ನೀಡಲಾಗಿದೆ? 1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. 2. ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. 3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ.100ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ. 4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. 5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ…

Read More

ಅಡುಗೆ ಮಾಡುವಾಗ, ಇತರರು ಊಟಕ್ಕೆ ಬಂದಾಗ ಇಂಥಾ ಜಿರಳೆಗಳನ್ನು ಅಸಹ್ಯಕರ ಎನಿಸುವುದುಂಟು. ಬಹುಪಾಲು ಜನರು ಜಿರಳೆ ಎಂಬರೆ ಮುಖ ತಿರುಗಿಸುವುದನ್ನೂ ನೋಡಿದ್ದೇವೆ. ಜಿರಲೆ ಬರಬಾರದೆಂದು ನೀವು ಎಷ್ಟೇ ಕಷ್ಟಪಟ್ಟು ನಿತ್ಯ ಸ್ವಚ್ಛಗೊಳಿಸಿದರೂ, ಯಾವೆಲ್ಲಾ ಔಷಧಗಳನ್ನು ಸಿಂಪಡಿಸಿದರೂ ಕೇವಲ ತಾತ್ಕಾಲಿಕವಷ್ಟೇ ಆಗಿರುತ್ತದೆ, ಹಾಗೂ ಹೀಗೂ ಮತ್ತೆ ಅಡುಗೆ ಮನೆ ಸೇರಿಸುತ್ತವೆ. ಅಷ್ಟೇ ಅಲ್ಲದೇ ಇದು ಅರೋಗ್ಯಕ್ಕೆ ಸಾಕಷ್ಟು ಹಾನಿಕಾರಕ ಮತ್ತು ಹಲವಾರು ಕಾಯಲೆಗಳಿಗೆ ಸಹ ಕಾರಣವಾಗಬಹುದು. ಈ ಸಮಸ್ಯೆಗಳಿಗೆ ಹೆಚ್ಚಿನ ಖರ್ಚಿಲ್ಲದೆ, ಮನೆಯಲ್ಲೇ ಇರುವ ಮದ್ದುಗಳ ಮೂಲಕ ಜಿರಳೆ ಕಾಟವನ್ನು ನಿಧಾನವಾಗಿ ನಿವಾರಿಸಬಹುದು. ಬಿಸಿನೀರು, ನಿಂಬೆ ಮತ್ತು ಅಡಿಗೆ ಸೋಡಾ ಒಂದು ಚಮಚ ನಿಂಬೆ ರಸ, 2 ಚಮಚ ಬೇಕಿಂಗ್ ಸೋಡಾವನ್ನು 1 ಲೀಟರ್ ಬಿಸಿನೀರಿನಲ್ಲಿ ಹಾಕಿ ಚೆನ್ನಾಗಿ ಬೆರೆಸಿ. ಇದನ್ನು ಸಿಂಕ್ ಅಥವಾ ನೀರು ಹೋಗುವ ಸ್ಥಳಗಳಲ್ಲಿ ಸುರಿಯಿರಿ ಅಥವಾ ಸಿಂಕ್ ಹಾಗೂ ಅಡುಗೆ ಮನೆಯ ಚಪ್ಪಡಿಗಳನ್ನು ಇದನ್ನು ಹಾಕಿ ತೊಳೆಯಿರಿ. ಇದು ಪರಿಣಾಮಕಾರಿಯಾಗಿ ಅಡುಗೆಮನೆಯಲ್ಲಿನ ಜಿರಳೆಗಳ ಸಂತಾನೋತ್ಪತ್ತಿಯನ್ನು ನಿಲ್ಲಿಸುತ್ತದೆ. ಬಿಸಿನೀರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ 3ನೇ ಅಲೆಯು ಮಕ್ಕಳನ್ನು ಬಾಧಿಸಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಹಿನ್ನಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮಕ್ಕಳನ್ನು ಕೋವಿಡ್ 3ನೇ ಅಲೆಯಿಂದ ರಕ್ಷಿಸುವ ಕುರಿತಂತೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮೆಡಿಕಲ್ ಎಕ್ಸ್ಪರ್ಟ್ ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳನ್ನು ಕೋವಿಡ್ 3 ನೇ ಅಲೆಯಿಂದ ರಕ್ಷಿಸುವ ಕುರಿತಂತೆ ಈಗಾಗಲೇ ಭಾರತೀಯ ಮಕ್ಕಳ ವೈದ್ಯರ ಸಂಘವು ಸಿದ್ದಪಡಿಸಿರುವ ಮಾರ್ಗಸೂಚಿಯನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡಲು ಈಗಿನಿಂದಲೇ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಮಕ್ಕಳ ಚಿಕಿತ್ಸೆಗಾಗಿ ಕೆಎಂಸಿ ಯಲ್ಲಿ 40 ಐಸಿಯು ಬೆಡ್ ಗಳು ಮತ್ತು ಜಿಲ್ಲಾಸ್ಪತ್ರೆ ಮತ್ತು ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಒಟ್ಟು 60 ಬೆಡ್ ಗಳನ್ನು ಸಿದ್ದಪಡಿಸುವಂತೆ ತಿಳಿಸಿದರು. ಮಕ್ಕಳಿಗೆ ಕೋವಿಡ್ ಚಿಕಿತ್ಸೆ ನೀಡುವ ಕುರಿತಂತೆ ಜಿಲ್ಲೆಯ ಸರ್ಕಾರಿ ಮಕ್ಕಳ ವೈದ್ಯರೊಂದಿಗೆ , ಎಲ್ಲಾ ಖಾಸಗಿ ಆಸ್ಪತ್ರೆಗಳ ಮಕ್ಕಳ…

Read More