Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಗಂಗೊಳ್ಳಿಯ ಮಡಿ ಲೈಟ್‌ಹೌಸ್ ಸಮೀಪದಲ್ಲಿನ ಶ್ರೀ ರಾಮನಾಥ ಸುಹಾಸಿನಿ ಮತ್ತು ಸಪರಿವಾರ ದೇವರ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಹಾಗೂ ನಂದಿಕೇಶ್ವರ, ಮಹಾಸತಿ, ಯಕ್ಷೀ ಸಪರಿವಾರ ದೇವರ ಸಹಿತ ಶ್ರೀ ರಾಮನಾಥ ಸುಹಾಸಿನಿ ದೇವರ ಪುನರ್ ಪ್ರತಿಷ್ಠಾಪನೆ ಮತ್ತು ಬ್ರಹ್ಮ ಕಲಶೋತ್ಸವ ಸಮಾರಂಭ ಜರುಗಿತು. ಈ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದ ಹಂಗಾರಕಟ್ಟೆ ಶ್ರೀ ಬಾಳೆಕುದ್ರು ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ ಜ್ಞಾನ ವಿಜ್ಞಾನಕ್ಕೆ ಋಷಿ ಮುನಿಗಳ ಕೊಡುಗೆ ಅಪಾರವಾದುದು. ಆಧ್ಯಾತ್ಮಿಕ ಹಾಗೂ ಮಾನಸಿಕ ಶಾಂತಿಗೆ ಜ್ಞಾನಯಜ್ಞ ಅವಶ್ಯಕ. ದೇವಾಲಯಗಳು ಶ್ರದ್ಧೆ ಮತ್ತು ಭಕ್ತಿಯನ್ನು ಪ್ರಕಟಪಡಿಸುವ ಮಾಧ್ಯಮ. ಮಂದಿರಗಳ ಮಹತ್ವವನ್ನು ಸೂಕ್ಷ್ಮವಾಗಿ ತಿಳಿದುಕೊಳ್ಳಬೇಕು. ದೇವಾಲಯಗಳಿಗೆ ನಿತ್ಯ ನಿರಂತರ ಹೋಗುವುದರಿಂದ ಜೀವನದಲ್ಲಿ ಆಧ್ಯಾತ್ಮಿಕ ಚಿಂತೆಗಳು ಬೆಳೆದು ಜೀವನಲ್ಲಿ ಸುಖ ಶಾಂತಿ ನೆಮ್ಮದಿ ದೊರೆಯುತ್ತದೆ. ದೇವಾಲಯಗಳಲ್ಲಿ ಭಜನೆ ಪ್ರತಿನಿತ್ಯ ನಡೆಯಬೇಕು. ದೇವರ ನಾಮಸ್ಮರಣೆಯಿಂದ ಜೀವನದಲ್ಲಿ ಸಿದ್ಧಿ ಪ್ರಾಪ್ತಿಯಾಗುತ್ತದೆ ಎಂದು ಹೇಳಿದರು. ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಆಳ್ವಾಸ್ ಪ್ರೌಢಶಾಲೆಯಲ್ಲಿ `ಪ್ಲಾಸ್ಟಿಕ್ ಮುಕ್ತ ಪರಿಸರ’ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ ಪರಿಸರ ನಮ್ಮ ಬದುಕಿಗೆ ಬೇಕಾದ ಎಲ್ಲವನ್ನೂ ಕೊಟ್ಟಿದೆ. ಆದರೆ ಪರಿಸರದ ಕೊಡುಗೆಯನ್ನು ನಾವು ಹಾಳು ಮಾಡುತ್ತಿದ್ದೇವೆ. ಪರಿಸರಕ್ಕೆ ನಾವೇನು ಕೊಟ್ಟಿದ್ದೇವೆ ಎಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಪರಿಸರ ಜಾಗೃತಿ ಎಳವೆಯ ಹಂತದಲ್ಲಿ ಮನೆಯಲ್ಲಿಯೇ ಮೂಡಬೇಕು. ಮತ್ತು ಅದು ನಿತ್ಯದ ದಿನಚರಿಯಾಗಬೇಕು ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಕಾಶ್ ಶೆಟ್ಟಿ ಮಾತನಾಡಿ ನಮ್ಮ ಆರ್ಥಿಕ ಸಮತೋಲನ ಕಾಯ್ದುಕೊಳ್ಳಲು ನಾವು ಪರಿಸರವನ್ನು ನಾಶಮಾಡುತಿದ್ದೇವೆ. ಪರಿಸರವನ್ನು ನಿರ್ಮಾಣ ಮಾಡಲು ನಮ್ಮಿಂದ ಸಾಧ್ಯವಿಲ್ಲ. ಇರುವ ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ. ಪರಿಸರಕ್ಕೆ ಹಾನಿ ಮಾಡದಿರುವುದೇ ಪರಿಸರಕ್ಕೆ ನಾವು ನೀಡುವ ದೊಡ್ಡ ಕೊಡುಗೆಯಾಗಿದೆ ಎಂದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಪ್ರಶಾಂತ್, ಸಹನಾ ಹೆಗ್ಡೆ, ಪ್ರಾಥಮಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ:‌ ಜೇಸಿಐ ಕುಂದಾಪುರ ಇವರ ವತಿಯಿಂದ ಜೇಸಿ‌ ಭವನದಲ್ಲಿ ಸಾಂಕೇತಿಕವಾಗಿ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಜೇಸಿಐ ಅಧ್ಯಕ್ಷರಾದ ಶ್ರೀನಾಥ್ ಗಾಣಿಗ , ಜೇಸಿಐ ಪೂರ್ವ ರಾರ್ಷ್ತ್ರೀಯ ಕಾನೂನು ಸಲಹೆಗಾರರಾದ ಶ್ರೀಧರ್ ಪಿ.ಎಸ್, ವಕೀಲರಾದ ವಸಂತ್ ರಾವ್, ಜೇಸಿಐ ಪೂರ್ವಧ್ಯಕ್ಷಾರದ ಪ್ರಕಾಶ್ ಮಂಡ್ಯ, ಉಪಾಧ್ಯಕ್ಷ ರಾದ ರಾಘು ವಿಠಲವಾಡಿ, ಕಾರ್ತಿಕ್ ಉಡುಪ, ಚೇತನ್ ದೇವಾಡಿಗ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಾಥಾ ಹಾಗೂ ಬೀಚ್ ಸ್ವಚ್ಛತಾ ಕಾರ್ಯಕ್ರಮ ಜರಗಿತು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಗಂಗೊಳ್ಳಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಪ್ರಮುಖ ಬೀದಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಜಾಥಾ ನಡೆಸಿದರು. ಬಳಿಕ ಗಂಗೊಳ್ಳಿಯ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗಂಗೊಳ್ಳಿ ಗ್ರಾಮ ಪಂಚಾಯತ್ ಪಿಡಿಒ ಬಿ.ಮಾಧವ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ತ್ಯಾಜ್ಯಗಳನ್ನು ಬೇಕಾಬಿಟ್ಟಿ ಸಾರ್ವಜನಿಕ ಸ್ಥಳಗಳಲ್ಲಿ ಎಸೆಯುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ ಮತ್ತು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ, ಪ್ರಯೋಗಾಲಯ ಎಟೆಂಡರ್ ವಿಜಯಕುಮಾರ್, ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆಯ ಸಹಶಿಕ್ಷಕಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: 2018 ನೇ ಸಾಲಿನಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಕೋರ್ಸ್‌ನ ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಗುರುಕುಲ ಪದವಿ ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳು ವೈದ್ಯಕೀಯ ಕೋರ್ಸ್‌ಗೆ ಅರ್ಹತೆ ಹೊಂದಿದ್ದಾರೆ . ಜೀವನ್ ಫರ್ನಾಂಡಿಸ್ , ವಿನಯಾ ಎಸ್ ನಾಯ್ಕ್ , ಜೋಯಲ್ ಡಿ’ಸೋಜಾ , ರಾಜೇಶ್ , ಹೃತ್ವಿಕ್ ಶೆಟ್ಟಿ , ಅಭಿಷೇಕ್ , ಮನೋಜ್ ಕುಮಾರ್ , ಮೊಹಮ್ಮದ್ ಅನಾಸ್ , ಶಮಾಯಿಲ್ ಅರ್ಹತೆ ಪಡೆದ ವಿದ್ಯಾರ್ಥಿಗಳಾಗಿದ್ದಾರೆ. ಅವರು ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿ ನೀಟ್ ಪರೀಕ್ಷಾ ತರಬೇತಿ ಪಡೆದಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೈದಾಂತಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ನೈಕಂಬ್ಳಿಯ ನಾಗರಾಜ ಶೆಟ್ಟಿ ಎಂಬುವವರ ವಿರುದ್ಧ ಸುಳ್ಳು ಅತ್ಯಾಚಾರದ ಆರೋಪ ಹೊರಿಸಿ ಎಡಿಟ್ ಮಾಡಲಾಗಿರುವ ಚಿತ್ರವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಘಟನೆಯಿಂದ ನೊಂದಿರುವ ನಾಗರಾಜ ಶೆಟ್ಟಿ ನೈಕಂಬ್ಳಿ ಅವರು ಸೈಬರ್ ಕ್ರೈ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ವೃತ್ತಿಯಲ್ಲಿರುವ ನಾಗರಾಜ ಅವರು ಹವ್ಯಾಸಿ ಯಕ್ಷಗಾನ ಸಂಘಟಕರಾಗಿಯೂ ಗುರುತಿಸಿಕೊಂಡವರು. ಇತ್ತಿಚಿಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭ ಬಿಜೆಪಿ ಅಭ್ಯರ್ಥಿಯ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ನಡೆಸಿದ್ದರು. ಇದೇ ಇದೇ ಸಂದರ್ಭವನ್ನು ಗಮನದಲ್ಲಿರಿಸಿಕೊಂಡು ನಾಗರಾಜ ಅವರ ತೇಜೋವಧೆಗೆ ಮುಂದಾಗಿರಬಹುದು ಎಂದು ಶಂಕಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ರಾಜ್ಯದ ಸುದ್ದಿವಾಹಿನಿಯೊಂದರಲ್ಲಿ ಪ್ರಕಟವಾದ ಸುದ್ದಿ ಎಂಬಂತೆ ಬಿಂಬಿಸಿ ನಾಗರಾಜ ಶೆಟ್ಟಿ ಹಾಗೂ ಅಪರಿಚಿತ ಮಗುವೊಂದರ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಅವರ ವಿರುದ್ಧ ಕಾನೂನು ಸಮರ ಮುಂದುವರಿಸುವುದಾಗಿ ನಾಗರಾಜ ಶೆಟ್ಟಿ ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ : 2018ರಲ್ಲಿ ನಡೆದ ರಾಷ್ಟ್ರೀಯ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆಗೆ ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 3,648 ವಿದ್ಯಾರ್ಥಿಗಳು ಹಾಜರಾಗಿದ್ದು, ಅವರಲ್ಲಿ 3,284 ವಿದ್ಯಾರ್ಥಿಗಳು ಅರ್ಹತೆಯನ್ನು ಪಡೆಯುವ ಮೂಲಕ ಶೇ.90.02 ದಾಖಲೆಯ ಫಲಿತಾಂಶವನ್ನು ದಾಖಲಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 26 ವಿದ್ಯಾರ್ಥಿಗಳು 500ಕ್ಕೂ ಹೆಚ್ಚು ಅಂಕಗಳನ್ನು ಪಡೆದಿರುತ್ತಾರೆ. ಇದಲ್ಲದೆ 224 ವಿದ್ಯಾರ್ಥಿಗಳು 400ಕ್ಕಿಂತಲೂ ಅಧಿಕ ಅಂಕಗಳನ್ನು ಪಡೆದಿರುತ್ತಾರೆ. ರಾಷ್ಟ್ರೀಯ ಮಟ್ಟದಲ್ಲಿ ಕೆಟಗೆರೆ ವಿಭಾಗದಲ್ಲಿ ಪದ್ಮಾವತಿ (33), ಯತೀಶ (140), ಗುಣಶೀಲ (195), ವಂಶಿತೇಜ(305), ವೆಂಕಟೇಶ ದೊರೆ (409), ಗೌತಮ ಬುದ್ಧ (457), ನಂದೀಶ್ (458) ಮತ್ತು ನೇತ್ರೇಶ್ (561) ರ‍್ಯಾಂಕ್‌ಗಳನ್ನು ಪಡೆದಿರುತ್ತಾರೆ. ಭಿನ್ನಚೇತನರ ಪಟ್ಟಿಯಲ್ಲಿ ಮಂಜುನಾಥ್ ದೊಂಬಾರ್ (286), ರಕ್ಷಿತಾ ಬಿ.ಪಿ (295), ಭಾಗ್ಯಶ್ರೀ (271), ಅಜಯ್ ಕುಮಾರ್ (519) ನೇಯ ರ‍್ಯಾಂಕ್‌ ರಾಷ್ಟ್ರೀಯ ಮಟ್ಟದಲ್ಲಿ ಪಡೆದಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಜೂ. 8ರಂದು ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಮತಯಾಚನೆ ನಡೆಸಿದರು. ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮತಯಾಚನೆ ನಡೆಸುವ ಸಂದರ್ಭ ಬಿಜೆಪಿ ಮುಖಂಡ ಕಿಶೋರ್‌ಕುಮಾರ್, ರಾಜೇಶ್ ಕಾವೇರಿ, ಗಿರೀಶ್ ಮೊದಲಾದವರು ಜೊತೆಗಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಪ್ಲಾಸ್ಟಿಕ್ ಜಾಗೃತಿ ಕಾರ‍್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಭಂಡಾರ್‌ಕರ್ಸ್ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ಶಾಲಿನಿ ಉಡುಪ ಮಾತನಾಡಿ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಸಮಾಜ ಎನ್ನುವುದು ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯ. ಆದರೆ ನಾವು ನಮ್ಮ ದಿನನಿತ್ಯದ ಬಳಕೆಯಲ್ಲಿ ಪ್ಲಾಸ್ಟಿಕನ್ನು ಮಿತವಾಗಿ ಬಳಸಿ ಪರಿಸರಕ್ಕೆ ಸಾಧ್ಯವಾದಷ್ಟು ಹಾನಿಯಾಗದ ರೀತಿಯಲ್ಲಿ ನೋಡಿಕೊಳ್ಳುವಂತಹ ಕಾರ‍್ಯವನ್ನು ತಪ್ಪದೇ ಮಾಡಬೇಕಿದೆ.ಆ ಮೂಲಕ ಮತ್ತಷ್ಟು ಸುಂದರ ಪರಿಸರದ ನಿರ್ಮಾಣಕ್ಕೆ ಕಾರಣರಾಗಬೇಕಿದೆ ಎಂದು ಅಭಿಪ್ರಾಯಪಟ್ಟರು. ಪರಿಸರದ ರಕ್ಷಣೆ ಎಂದರೆ ಅದು ನಮ್ಮ ರಕ್ಷಣೆ. ಅದನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಆ ನಿಟ್ಟಿನಲ್ಲಿ ಪ್ರತೀ ಮನೆಯಲ್ಲೂ ಮನಸುಗಳಲ್ಲೂ ಈ ಬಗೆಗೆ ಜಾಗೃತಿ ಮೂಡಬೇಕಿದೆ ಎಂದು ಅವರು ಹೇಳಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ದರ್ಶನ್, ಮಂಜುನಾಥ, ಶ್ವೇತಾ, ಸೃಷ್ಟಿ, ರುತು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವಿಶ್ವಪರಿಸರ ದಿನದ ಅಂಗವಾಗಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧೆಡೆಗಳಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಕುಂದಾಪುರದಲ್ಲಿ ಜರುಗಿದ ಕಾರ್ಯಕ್ರಮಕ್ಕೆ ಸಹಾಯಕ ಕಮಿಷನರ್ ಭೂಬಾಲನ್ ಅವರು ಚಾಲನೆ ನೀಡಿದರು. ಕುಂದಾಪುರ ಪುರಸಭೆಯ ಸದಸ್ಯರು, ಪೌರಕಾರ್ಮಿಕರು, ಕಾಲೇಜು ವಿಧ್ಯಾರ್ಥಿಗಳು, ಸ್ವಸಹಾಯ ಸಂಘದ ಸದಸ್ಯರಗಳು, ಕುಂದಾಪುರದಲ್ಲಿ ವಿಶ್ವಪರಿಸರ ದಿನದ ಅಂಗವಾಗಿ ಜನಜಾಗೃತಿ ಜಾಥಾ ನಡೆಸಿದರು.

Read More