ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತನ್ನ ವಿರುದ್ಧ ಕೃಷ್ಣಪ್ರಸಾದ ಅಡ್ಯಂತಾಯ ಎಂಬುವವರು ನೀಡಿದ ದೂರು ಹಾಗೂ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ಪತ್ರಿಕಾ ಪ್ರಕಟಣೆಯಲ್ಲಿ ಹೇಳಿರುವ ವಿಚಾರದಲ್ಲಿ ಯಾವುದೇ ಹುರುಳಿಲ್ಲ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ನನ್ನ ಹೇಳಿಕೆ ದಾಖಲಿಸಿದ್ದು, ಕಾನೂನು ಹೋರಾಟ ಮುಂದುವರಿಸುವುದಾಗಿ ಆರ್.ಟಿ.ಐ ಕಾರ್ಯಕರ್ತ ಕೆ. ವೆಂಕಟೇಶ ಕಾರಂತ್ ಅವರು ತಿಳಿಸಿದ್ದಾರೆ. ನ.6ರಂದು ಕೃಷ್ಣಪ್ರಸಾದ ಅಡ್ಯಂತಾಯ ಎಂಬುವವರು ನೀಡಿರುವ ದೂರಿಗೆ ಪ್ರತಿಕ್ರಿಯೆ ನೀಡಿರುವ ಅವರು ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟೀಕರಣ ನೀಡಿದ್ದಾರೆ. ನಾನು ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಸಂವಿಧಾನದತ್ತ ಮಾಹಿತಿ ಕಾನೂನು ಅಧಿನಿಯಮದ, ನಿಯಮವನ್ನು ಸಿವಿಲ್ ಸಮಾಜದ ಒಳಿತಿಗಾಗಿಯೇ ಬಳಸುತ್ತಿದ್ದು, ಸದ್ರಿ ಅಧಿನಿಯಮದ ಕಾನೂನನ್ನು ಇಲ್ಲಿಯವರೆಗೂ ದುರ್ಬಳಕೆ ಮಾಡಿದ್ದಿಲ್ಲ. ಸಂವಿಧಾನದತ್ತ ಪಡೆದ ಮಾಹಿತಿಯಿಂದ ಯಾರನ್ನೂ ಹಣಕ್ಕಾಗಿ ಇಲ್ಲಿಯವರೆಗೂ ನಾನು ಪೀಡಿಸಿದ್ದಿಲ್ಲ. ಅಥವಾ ನನ್ನ ಪರವಾಗಿ ಅಂತಹ ಅಥವಾ ಬೇರೆಯೇ ಆದ ವಾಮ ಮಾರ್ಗದಲ್ಲಿ ಸಿಗುವ ಹಣ ಪಡೆಯುವ ಬಗ್ಗೆ ಇತರ ಯಾರನ್ನೂ ನನ್ನ ಮತ್ತು ನನ್ನ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಹಾಗೂ ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ “ಕನ್ನಡ ಜಾನಪದ ರಾಜ್ಯೋತ್ಸವ” ಕಾರ್ಯಕ್ರಮ ನಡೆಯಿತು. ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷರಾದ ಡಾ. ಗಣೇಶ್ ಗಂಗೊಳ್ಳಿ ಮಾತನಾಡಿ, ಜನಪದರು ಕುರಿತು ಓದಿದವರಾಗಿರದೆ ಮೌಖಿಕವಾಗಿ ಬಳಸಿ ಉಳಿಸಿ ಬೆಳೆಸಿದವರು ಜನಪದ ನಿತ್ಯ ನೂತನವಾಗಬೇಕು ಎಂದು ಪ್ರಾಸ್ತಾವಿಕವಾಗಿ ನುಡಿದರು. ಸಮಾರಂಭದ ಮುಖ್ಯ ಅತಿಥಿಗಳಾದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ದೋಮ ಚಂದ್ರಶೇಖರ್ ಮಾತನಾಡಿ, ಜನಪದರು ಸುಶಿಕ್ಷಿತರು ಎನ್ನುವುದಕ್ಕಿಂತ ಮೌಖಿಕವಾಗಿ ತಮ್ಮ ಅನುಭವವನ್ನು ಬಿತ್ತಿ ಬೆಳೆಸಿದವರು. ಮಾತೃಭಾಷೆ ಹಾಗೂ ಜಾನಪದವನ್ನು ನಾವೆಲ್ಲ ಪೋಷಿಸಿ ಕಿರಿಯ ತಲೆಮಾರಿಗೆ ಕೊಂಡೊಯ್ಯಬೇಕು ಎಂದು ನುಡಿದರು. ಸಮಾರಂಭದಲ್ಲಿ ಆಂಗ್ಲ ಬಳಸದೆ ಕನ್ನಡ ಮಾತನಾಡುವ ಕನ್ನಡಾಭಿಮಾನಿ ಸಂದೀಪ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀ ಮೂಕಾಂಬಿಕಾ ದೇಗುಲದಲ್ಲಿ 2 ತಿಂಗಳ ಅವಧಿಯಲ್ಲಿ ಭಕ್ತರಿಂದ ಸಂಗ್ರಹವಾದ ಹುಂಡಿ ಕಾಣಿಕೆ ಹಣದ ಲೆಕ್ಕಾಚಾರ ಬುಧವಾರ ನಡೆದಿದ್ದು ದಾಖಲೆಯ 1.36 ಕೋಟಿ ರೂ. ಲಭಿಸಿದೆ. ಇದು ಕ್ಷೇತ್ರದ ದಾಖಲೆ ಮಟ್ಟದ ಹುಂಡಿ ಕಾಣಿಕೆಯಾಗಿದೆ. ಕಳೆದೆರಡು ವರ್ಷಗಳಿಂದ ಕೊರೊನಾ ನಿಯಮಾವಳಿ ಅನುಸಾರವಾಗಿ ಭಕ್ತರ ಪ್ರವೇಶಕ್ಕೆ ದೇಗುಲಗಳಲ್ಲಿ ನಿರ್ಬಂಧ ಇದ್ದ ಹಿನ್ನೆಲೆಯಲ್ಲಿ ಆದಾಯ ಬಹಳಷ್ಟು ಕುಸಿದಿತ್ತು. ಇದೀಗ ನಿರ್ಬಂಧ ಸಡಿಲಿಕೆಯಿಂದ ಕಳೆದ 2 ತಿಂಗಳಿನಿಂದ ಕೊಲ್ಲೂರು ದೇಗುಲಕ್ಕೆ ಪ್ರತಿದಿನ ಕನಿಷ್ಠ 8 ಸಾವಿರದಷ್ಟು ಭಕ್ತರು ಆಗಮಿಸಿ ವಿವಿಧ ಹರಕೆಯೊಡನೆ ಶ್ರೀದೇವಿಗೆ ಕಾಣಿಕೆ ರೂಪದಲ್ಲಿ ಚಿನ್ನಾಭರಣ ಸಹಿತ ನಗದು ಸಮರ್ಪಿಸುತ್ತಿದ್ದಾರೆ. ನ.10ರಂದು ಹುಂಡಿಯಲ್ಲಿ 585 ಗ್ರಾಂ ಚಿನ್ನ ಹಾಗೂ 6,400 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. 2020ನೇ ಸಾಲಿನ ನವರಾತ್ರಿಯಂದು 92,00,000 ರೂ. ಸಂಗ್ರಹವಾಗಿತ್ತು. ಚಿನ್ನ 615 ಗ್ರಾಂ ಹಾಗೂ ಬೆಳ್ಳಿ 3,500 ಗ್ರಾಂ ಸಂಗ್ರಹವಾಗಿತ್ತು. 3 ವರುಷಗಳ ಹಿಂದೆ 3 ತಿಂಗಳ ಅವಧಿಯಲ್ಲಿ 1.11 ಕೋಟಿ ರೂ. ಹುಂಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಜಿಎಸ್ವಿಎಸ್ ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಠಾರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಟಲ್ ಟಿಂಕರಿಂಗ್ ಲ್ಯಾಬ್ಗೆ ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಭೇಟಿ ನೀಡಿ ಲ್ಯಾಬ್ ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿನ ಕೌಶಲ್ಯತೆ ಹೆಚ್ಚಿಸಲು ಮತ್ತು ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಕೇಂದ್ರ ಸರಕಾರ ಶಾಲೆಗಳಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಪ್ರಾರಂಭಿಸುತ್ತಿದೆ. ಗಂಗೊಳ್ಳಿಯ ಎಸ್.ವಿ.ಶಾಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಅತ್ಯುತ್ತಮವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಶಿಕ್ಷಕರು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಪ್ರಯತ್ನ ನಡೆಸಬೇಕು ಎಂದರು. ಗಂಗೊಳ್ಳಿಯ ಜಿಎಸ್ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ, ಕಾರ್ಯದರ್ಶಿ ಎಚ್.ಗಣೇಶ ಕಾಮತ್, ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಗಂಗೊಳ್ಳಿ ಗ್ರಾಪಂ ಸದಸ್ಯರಾದ ಬಿ. ರಾಘವೇಂದ್ರ ಪೈ, ಬಿ. ಲಕ್ಷ್ಮೀಕಾಂತ ಮಡಿವಾಳ, ದಾನಿ ಯು. ನಾರಾಯಣ ಪೈ, ಶಾಲಾ ಆಡಳಿತ ಮಂಡಳಿ ಸದಸ್ಯರಾದ ಗೋವಿಂದ್ರಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುವುವಾಗ ಎಲ್ಲಾ ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸುವುದರಿಂದ ಅಪಘಾತಗಳಾಗುವುದನ್ನು ತಪ್ಪಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಸ್ತೆಯಲ್ಲಿ ವಾಹನ ಚಾಲನಾ ಸಂದರ್ಭದಲ್ಲಿ ಸೀಟ್ ಬೆಲ್ಟ್ ಧರಿಸುವುದು, ಹೆಲ್ಮೆಟ್ ಧರಿಸುವುದರಿಂದ ಅಪಘಾತಗಳಾದರೂ ಸುರಕ್ಷಿತವಾಗಿರಬಹುದು, ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ಅಪಘಾತಗಳಿಂದ ಮುಕ್ತವಾಗಬಹುದು ಎಂದರು. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈಗಾಗಲೇ ಗುರುತಿಸಲಾಗಿರುವ 34 ಬ್ಲಾಕ್ ಸ್ಪಾಟ್ಗಳನ್ನು, 2 ತಿಂಗಳ ಅವಧಿಯಲ್ಲಿ ಸಂಪೂರ್ಣವಾಗಿ ಸಂಚಾರಕ್ಕೆ ಸುರಕ್ಷಿತ ಸ್ಥಳಗಳನ್ನಾಗಿ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದ ಅವರು, ಪ್ರಾದೇಶಿಕ ಸಾರಿಗೆ ಅಧಿಕಾರಿ,ಪೊಲೀಸ್ ಮತ್ತು ರಾಷ್ಟಿçÃಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಮತ್ತೊಮ್ಮೆ ಈ ಎಲ್ಲಾ ಬ್ಲಾಕ್ ಸ್ಪಾಟ್ ಸ್ಥಳಗಳನ್ನು ಪರಿಶೀಲಿಸಿ, ಅಲ್ಲಿನ ಸ್ಥಿತಿಗತಿ ಮತ್ತು ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ವಿವರವಾದ ವರದಿಯನ್ನು ನೀಡಬೇಕು, ರಾಷ್ಟ್ರೀಯ ಹೆದ್ದಾರಿಯಲ್ಲಿ ಅಗತ್ಯ ಸೂಚನಾ…
ಕುಂದಾಪ್ರ ಡಾಟ್ ಕಾಂ ಸುದ್ದಿಕೆನಡಾ: ವಿದೇಶದಲ್ಲಿರುವ ನಾವು ನಮ್ಮ ಅನುಭವ ಕಥನಗಳನ್ನು ದಾಖಲಿಸುವ ಮೂಲಕ ಇಲ್ಲಿ ಬೆಳೆಯುತ್ತಿರುವ ನಮ್ಮ ಮಕ್ಕಳಿಗೆ ನಮ್ಮ ಸಂಸ್ಕೃತಿ ಮತ್ತು ಪರಂಪರೆಗಳ ಅರಿವು ಮೂಡಿಸ ಬೇಕು. ಈ ಕೃತಿ ಆ ಕೆಲಸವನ್ನು ಮಾಡುತ್ತಿದೆ’ ಎಂದು ಕೆನೆಡಿಯನ್ ಹವ್ಯಕ ಸಂಘದ ಅಧ್ಯಕ್ಷರಾದ ಡಾ.ಡಿ.ಪರಮೇಶ್ವರ ಭಟ್ ಹೇಳಿದರು. ಅವರು ಟೊರೊಂಟೋದ ಶೃಂಗೇರಿ ವಿದ್ಯಾಭಾರತಿ ಸಮುದಾಯ ಭವನದಲ್ಲಿ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಬಾಳಿಕೆ ರಾಮ ಭಟ್ ಬರೆದು ಕುಂದಾಪುರದ ಜನಪ್ರತಿನಿಧಿ ಪ್ರಕಾಶನವು ಪ್ರಕಟಿಸಿದ ‘ಬಾಳಿಕೆಯಿಂದ ಕೆನಡಾಕ್ಕೆ’ ಎಂಬ ಅನುಭವ ಕಥನ ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕೆನಡಾದ ಕಾನ್ ಕಾರ್ಡಿಯಾ ವಿ.ವಿ.ದಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರಾದ ಮತ್ತು ಈಗಾಗಲೇ ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ನಾಲ್ಕು ಕೃತಿಗಳನ್ನು ಬರೆದಿರುವ ಬಾಳಿಕೆ ರಾಮ ಭಟ್ ತಮ್ಮ ಪ್ರಸ್ತುತ ಕೃತಿಯ ಹಿನ್ನೆಲೆ ಹಾಗೂ ಉದ್ದೇಶಗಳ ಕುರಿತು ಮಾತನಾಡಿದರು. ಈ ಸಂದರ್ಭ ಶಾರದಾ ಡಿ.ಪಿ.ಭಟ್ ಮತ್ತು ರಾಮ ಭಟ್ಟರ ಪತ್ನಿ ಪಾರ್ವತಿ ಭಟ್ ಉಪಸ್ಥಿತರಿದ್ದರು. ವಾಟರ್ಲೂ ವಿ.ವಿ.ಪ್ರಾಧ್ಯಾಪಕ ಡಾ.ನವೀನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಎರಡನೇ ಅಲೆಯ ಸಹಾಯಧನ ಮೊತ್ತ 3,000 ರೂ. ಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ. ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಈಗಾಗಲೇ 3,000 ರೂ. ಗಳ ಮೊತ್ತವನ್ನು ನೇರ ನಗದು ವರ್ಗಾವಣೆ ((DBT Aadhaar)) ಮೂಲಕ ಪಾವತಿಸಲು E-Governance ಇಲಾಖೆಗೆ ಕಳುಹಿಸಲಾಗಿದ್ದು, ಸದರಿ ಕಳುಹಿಸಲಾದ ಡೇಟಾದಲ್ಲಿ ಶೇ.90 ರಷ್ಟು ಪಾವತಿಯಾಗಿರುತ್ತದೆ ಹಾಗೂ ಉಳಿದ ಶೇ.10 ರಷ್ಟು ಡೇಟಾದಲ್ಲಿ ಫಲಾನುಭವಿ ಆಧಾರ್ ಸಂಖ್ಯೆ ಅವರ ಬ್ಯಾಂಕ್ ಖಾತೆಗೆ ಜೋಡಣೆ ಆಗಿರುವುದಿಲ್ಲ ಹಾಗೂ ಬ್ಯಾಂಕ್ನವರು ಸದರಿ ಬ್ಯಾಂಕ್ ಖಾತೆಯನ್ನು ಎನ್.ಪಿ.ಸಿ.ಎಲ್ ಗೆ ಮ್ಯಾಪಿಂಗ್ ಮಾಡದಿರುವ ಕಾರಣ ನೋಂದಾಯಿತ ಕಟ್ಟಡ ಕಾರ್ಮಿಕರ ಖಾತೆಗೆ ಸಹಾಯಧನ ಮೊತ್ತವು ಪಾವತಿಯಾಗಿರುವುದಿಲ್ಲ. ಆದ್ದರಿಂದ ಇದುವರೆಗೂ ಕೋವಿಡ್-19, 2ನೇ ಅಲೆಯ ಒಂದು ಬಾರಿ ಸಹಾಯಧನ 3,000 ರೂ. ವನ್ನು ಮಂಡಳಿಯಿಂದ ಸ್ವೀಕರಿಸದೇ ಇರುವ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಸಾರಿಗೆ ಪ್ರಾಧಿಕಾರಕ್ಕೆ ಸಲ್ಲಿಸುವ ಸಾರ್ವಜನಿಕರ ದೂರುಗಳ ಕುರಿತಂತೆ ಶೀಘ್ರದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸುಧೀರ್ ಕಾಂಚನ್ ಶಿರಿಯಾರ ಮಾತನಾಡಿ, ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಸರ್ಕಾರಿ ಬಸ್ ಗಳನ್ನು ಓಡಿಸಬೇಕು, ಹಳ್ಳಿಗಳಿಗೆ ಸಂಚರಿಸಲು ಪರವಾನಗಿ ಪಡೆದು, ಸಂಚರಿಸಿದೇ ಇರುವ ಖಾಸಗಿ ಬಸ್ ಗಳ ಪರವಾನಗಿ ರದ್ದುಗೊಳಿಸಬೇಕು, ಖಾಸಗಿ ಬಸ್ ಗಳಲ್ಲಿ ಹಿರಿಯ ನಾಗರೀಕರಿಗೆ ರಿಯಾಯತಿ ದರ ನೀಡಬೇಕು, ಪರವಾನಗಿ ಇಲ್ಲದೇ ಸಂಚರಿಸುತ್ತಿರುವ ಬಸ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದರು. ಕರ್ನಾಟಕ ಪ್ರಾಂತ್ಯ ರೈತ ಸಂಘದ ಶಶಿಧರ್ ಮಾತನಾಡಿ, ಬಸ್ ಗಳಲ್ಲಿ ದರ ಹೆಚ್ಚಳ ಹಿಂಪಡೆಯಬೇಕು, ಮಣಿಪಾಲ-ಮಂಗಳೂರು ಮಾರ್ಗವಾಗಿ ಸಂಚರಿಸುತ್ತಿದ್ದ ಸರ್ಕಾರಿ ಬಸ್ ಸೇವೆಯನ್ನು ಪುನರಾರಂಭಿಸಬೇಕು, ಸರ್ಕಾರಿ ಬಸ್ ಗಳ ರೂಟ್ ಸಂಖ್ಯೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಾಸ್ಥ್ಯ ಸಮಾಜಕ್ಕೆ ಕಾನೂನಿನ ಅರಿವು ಅಗತ್ಯ ಸಂವಿದಾನ-ಮೂಲಭೂತ ಹಕ್ಕು-ಕರ್ತವ್ಯ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ, ಕಡ್ಡಾಯ ಶಿಕ್ಷಣ ಹಕ್ಕು ಇದರ ಅರಿವು ಅರಿತಾಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಕೋಡಿ ಬ್ಯಾರೀಸ್ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಾಘವೇಂದ್ರ ಕಿಣಿ ಹೇಳಿದರು. ಅವರು ಕಾಲೇಜಿನಲ್ಲಿ ಮತದಾರರ ಸಾಕ್ಷರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಅಬ್ದುಲ್ ರೆಹಮಾನ್ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಶಮೀರ್, ರಾಜ್ಯಶಾಸ್ತ್ರ ಉಪನ್ಯಾಸಕಿ ನಿಲುಫರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಕಲಾ ವಿದ್ಯಾರ್ಥಿನಿ ರುಕ್ಸಾನ ಸ್ವಾಗತಿಸಿ, ಪ್ರಥಮ ಕಲಾ ವಿದ್ಯಾರ್ಥಿನಿ ಫಾಯಿಝಾ ವಂದಿಸಿದರು, ಪ್ರಥಮ ಕಲಾ ವಿದ್ಯಾರ್ಥಿನಿ ರಿಫಾನ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಟ ಪುನೀತ್ ರಾಜಕುಮಾರ್ ಸಮಾಜಕ್ಕೆ ಬಹುದೊಡ್ಡ ಶಕ್ತಿಯನ್ನು ನೀಡಿದವರು. ಏನೂ ಪ್ರಚಾರ ಬಯಸದೆ ಸಮಾಜದ ಏಳಿಗೆಗಾಗಿ ಸಾಕಷ್ಟು ಶ್ರಮಿಸಿದ ಅಪರೂಪದ ವ್ಯಕ್ತಿತ್ವದ ಪುನೀತ್ ಪರಿಪೂರ್ಣ ವ್ಯಕ್ತಿತ್ವ ಅನಾವರಣಗೊಂಡದ್ದೆ ಅವರ ಸಾವಿನ ಬಳಿಕ ಎನ್ನುವುದು ದುರಂತ ಎಂದು ಶಿಕ್ಷಕ ಉದಯ್ ಬಳೆಗಾರ್ ಹೇಳಿದರು. ಅವರು ಹೆಮ್ಮಾಡಿ ರಿಕ್ಷಾ ನಿಲ್ದಾಣದಲ್ಲಿ ಶ್ರೀ ಲಕ್ಷ್ಮೀನಾರಾಯಣ ರಿಕ್ಷಾ ಚಾಲಕ-ಮಾಲಕರ ಸಂಘದ ವತಿಯಿಂದ, ಇತ್ತೀಚೆಗಷ್ಟೇ ಅಗಲಿದ ನಟ ಪುನೀತ್ ರಾಜಕುಮಾರ್ ಅವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಮೊದಲು ಪುನೀತ್ ಅವರ ಸಾಮಾಜಿಕ ಕಾರ್ಯಗಳ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಎಲ್ಲಾ ಮಾಧ್ಯಮಗಳಲ್ಲೂ ಅವರ ಸಾಮಾಜಿಕ ಕಾರ್ಯದ ಕಳಕಳಿಯ ಚಿಂತನೆಗಳು ಹೊರಹೊಮ್ಮಿದ್ದು ಅವರ ಮರಣದ ನಂತರದ ದಿನಗಳಲ್ಲಿ. ಯಾವುದೇ ಸಿನಿ ತಾರೆಯರು ಮರಣ ಹೊಂದಿದಾಗ ಇಡೀ ಕರಾವಳಿ ಇಷ್ಟೊಂದು ನೋವುಂಡಂತಹ ಇತಿಹಾಸವೇ ಇಲ್ಲ. ಹೆಚ್ಚೆಂದರೆ ಒಂದೆರಡು ದಿನ ಮರೆತು ಎಲ್ಲರೂ ತಮ್ಮ ಕಾಯಕದಲ್ಲಿ ತೊಡಗಿಕೊಳ್ಳುತ್ತಾರೆ. ಆದರೆ ಪುನೀತ್ ರಾಜಮಾರ್ ನಮ್ಮನ್ನಗಲಿ ಹತ್ತು ದಿನಗಳು ಕಳೆದರೂ…
