Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೇಂದ್ರ ತೆಂಗು ಅಭಿವೃದ್ಧಿ ಮಂಡಳಿಯ ವತಿಯಿಂದ ಜಿಲ್ಲಾ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರವು ಜನವರಿ 12ರಂದು ನಡೆಯಲಿದೆ ಎಂದು ಉಡುಪಿ – ಚಿಕ್ಕಮಂಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ತೆಂಗು ಅಭಿವೃದ್ಧಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರವನ್ನು ಕುಂದಾಪುರ ತಾಲೂಕಿನಲ್ಲಿ ಆಯೋಜಿಸಲು ತಿಳಿಸಿದ ಅವರು, ಇದಕ್ಕಾಗಿ ಎರಡು ದಿನಗಳ ಒಳಗಾಗಿ ಸ್ಥಳ ಗುರುತಿಸುವುದರೊಂದಿಗೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ 16,252 ಹೆಕ್ಟೇರ್ ತೆಂಗು ಬೆಳೆ ಪ್ರದೇಶವನ್ನು ಹೊಂದಿದ್ದು, ಕರಾವಳಿ ಭಾಗದಲ್ಲಿ ಜೇಡಿ ಮತ್ತು ಮರಳು ಮಿಶ್ರಿತ ಮಣ್ಣು ಜೊತೆಗೆ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮಳೆಯಾಗಿರುವುದರಿಂದ ತೆಂಗು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲುಕಟ್ಟೆ ತಾಂತ್ರಿಕ ವಿದ್ಯಾಲಯ ಎಂಬಿಎ ವಿಭಾಗದ ವತಿಯಿಂದ ಏಳು ದಿನಗಳ ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮೊದಲ ಮೂರು ದಿನ  ಐಸ್ ಕ್ಯೂ ಲರ್ನಿಂಗ್ ನಾಗೇಶ್ವರ್ ರಾವ್ ಅವರು ಆಗಮಿಸಿ ಆಪ್ಟಿಟ್ಯೂಡ್ ಸ್ಕಿಲ್ ಹಾಗೂ ನಂತರದ ನಾಲ್ಕು ದಿನ ಕಾರ್ಪೊರೇಟ್ ಟ್ರೈನರ್ ಆಶಾ ಅವರು ಆಗಮಿಸಿ ವಿದ್ಯಾರ್ಥಿಗಳಿಗೆ ಎಕ್ಸೆಲ್ ಮತ್ತು ಪವರ್ ಬಿಐ ತರಬೇತಿ ಕೈಕೊಂಡರು. ಈ ತರಬೇತಿಯಲ್ಲಿ ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಾಳಾವರ ಗ್ರಾಮದ ಅರೆಕಲ್ಲು ಜನತಾ ಕಾಲೂನಿ ಹತ್ತಿರದ ಹಾಡಿಯಲ್ಲಿ ಹಣವನ್ನು ಪಣವಾಗಿಟ್ಟು ಇಸ್ಪೀಟ್ ಜೂಗಾರಿ ಆಟ ಆಡುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿದ ಕುಂದಾಪುರ ಪೊಲೀಸರು ಮೂವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಾದ ರಾಕೇಶ್ (24), ಮ್ಯಾಕ್ಸಿ ರೋಶನ್‌ (39), ಸತೀಶ್‌ (37) ಎಂಬುವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಇಸ್ಪೀಟ್ ಜುಗಾರಿ ಆಟಕ್ಕೆ ಬಳಸಿದ ಹಣ 4,450/- ರೂಪಾಯಿ, ಇಸ್ಪೀಟ್ ಎಲೆಗಳು 52, ಹಳೆಯ ನ್ಯೂಸ್‌ ಪೇಪರ್ ಸ್ವಾದೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಹಕಾರ ಕ್ಷೇತ್ರ ಪ್ರಬಲವಾಗಿ ಬೆಳೆದಿದ್ದು ವಾಣಿಜ್ಯ ಬ್ಯಾ೦ಕುಗಳಿಗಿ೦ತ ಸಹಕಾರ ವ್ಯವಸ್ಥೆ ಜನಸಾಮಾನ್ಯರಿಗೆ ಆಪ್ತವಾಗಿದೆ. ಗ್ರಾಮೀಣ ಜನರಿಗೆ ಸಹಕಾರ ಕ್ಷೇತ್ರದ ಮೂಲಕ ಸಹಾಯ ಮಾಡಲು ಸಾಧ್ಯವಿದೆ. ಹಾಗಾಗಿ ಸಹಕಾರ ಭಾರತಿ ಈ ಕ್ಷೇತ್ರ ಸದಾ ಕ್ರಿಯಾಶೀಲವಾಗಿದ್ದು, ಪ್ರಾಬಲ್ಯತೆ ಸಾಧಿಸಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಸಹಕಾರ ಭಾರತಿ, ಕು೦ದಾಪುರ ತಾಲೂಕು ವತಿಯಿಂದ ಇಲ್ಲಿನ ಮೊಗವೀರ ಭವನದಲ್ಲಿ ನಡೆದ ತಾಲೂಕು ಅಭ್ಯಾಸ ವರ್ಗ-2025 ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಹಕಾರ ಭಾರತಿ ಇನ್ನಷ್ಟು ಪ್ರಬಲವಾಗಲು ನಮ್ಮ ಸಹಕಾರಿಗಳು ಪ್ರಯತ್ನಿಸಬೇಕು. ಸಹಕಾರ ಸಂಸ್ಥೆಗಳ ಚುನಾವಣೆ ಸಂದರ್ಭದಲ್ಲಿ ಮಾತ್ರ ಸನ್ನದ್ಧರಾಗದೆ ಸದಾ ಚಟುವಟಿಕೆಯಿಂದ ಇರಬೇಕು. ನಮ್ಮ ಉದ್ದೇಶ ಜನರಿಗೆ ಹೆಚ್ಚು ಸಹಕಾರ ನೀಡುವುದು. ಸಹಕಾರ ವ್ಯವಸ್ಥೆಯ ಮೂಲಕ ಸಾರ್ವಜನಿಕರಿಗೆ ನೆರವಾಗೋಣ ಎಂದರು. ಮುಖ್ಯ ಅತಿಥಿಯಾಗಿದ್ದ ಸಹಕಾರ ಭಾರತಿ ಜಿಲ್ಲಾ ಅಧ್ಯಕ್ಷರಾದ ದಿನೇಶ ಹೆಗ್ಡೆ ಅತ್ರಾಡಿ ಮಾತನಾಡಿ, ಉಡುಪಿ ಜಿಲ್ಲೆಯ ಎಲ್ಲಾ ತಾಲೂಕು ಸಹಕಾರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ದೇವಾಡಿಗ ನವೋದಯದ ಸಂಘ ಬೆಂಗಳೂರು ರಿ. ಇವರ ಆಶ್ರಯದಲ್ಲಿ 2026ನೇ ಇಸವಿಯ ದಿನದರ್ಶಿಕೆ ಬಿಡುಗಡೆ ಸಮಾರಂಭವು ಭಾನುವಾರ ಹೋಟೆಲ್ ಸಿಂಧೂರ ಗಾರ್ಡೆನಿಯ ಸಭಾಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ದೇವಾಡಿಗ ನವೋದಯದ ಸಂಘದ ಅದ್ಯಕ್ಷರಾದ ಟಿ.ಎಮ್ ಹರಿ ದೇವಾಡಿಗ, ಉಪಾಧ್ಯಕ್ಷರಾದ ಮಂಜುನಾಥ ದೇವಾಡಿಗ, ಗೌರವ ಅಧ್ಯಕ್ಷರಾದ ಬಿ. ಆರ್. ದೇವಾಡಿಗ, ಖಜಾಂಚಿ ಗೋಪಾಲ ಸೇರಿಗಾರ, ಸದಸ್ಯರಾದ ಅಶೋಕ ದೇವಾಡಿಗ, ಕದಂ ಮಾಜಿ ಕಾರ್ಯದರ್ಶಿ ನಾರಾಯಣ ದೇವಾಡಿಗ, ಲೆಕ್ಕಪರಿಶೋಧಕ ಸೂರ್ಯಕಾಂತ ದೇವಾಡಿಗ, ಸುದ್ದಿ ವಾಹಿನಿ ನಿರೂಪಕಿ ಅಶ್ವಿನಿ ದೇವಾಡಿಗ, ಶ್ರೀನಿವಾಸ ದೇವಾಡಿಗ ಸೇರಿದಂತೆ ದೇವಾಡಿಗ ನವೋದಯ ಸಂಘ ರಿ. ಇದರ ನೂರಾರು ಸದಸ್ಯರು ಕಾರ್ಯಕ್ರಮದಲ್ಲಿ ಕರಾವಳಿ ಶೈಲಿಯ ಆಹಾರವನ್ನು ಸವಿದ ಸಂಭ್ರಮದಿಂದ ಪಾಲ್ಗೊಂಡರು. ಚರಣ್ ಬೈಂದೂರು ಕಾರ್ಯಕ್ರಮ ನಿರೂಪಿಸಿ, ಸುಧೀರ್ ಮುದ್ರಾಡಿ ವಂದನೆ ಸಲ್ಲಿಸಿದರು. ವರದಿ: ರಾಘವೇಂದ್ರ ಹಾರ್ಮಣ್

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟ ಹೋಬಳಿಯ ಕೋಡಿಕನ್ಯಾಣದಲ್ಲಿ ವೈಭವದ ಉಂಜಲೋತ್ಸವ ಪುಷ್ಭಯಾಗ ಭಾನುವಾರ ಸಂಪನ್ನಗೊಂಡಿತು. ಸಾವಿರಾರು ಭಕ್ತರು ಉಂಜಲೋತ್ಸವದಲ್ಲಿ ಪಾಲ್ಗೊಂಡು ಶ್ರೀನಿವಾಸನ ಕೃಪೆಗೆ ಪಾತ್ರರಾದರು. ವಿಶೇಷವಾದ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀದೇವಿ -ಭೂದೇವಿ ಸಹಿತ ಶ್ರೀನಿವಾಸ ದೇವರ ಉಂಜಲೋತ್ಸವ ತಿರುಮಲ ತಿರುಪತಿ ದೇವಸ್ಥಾನದ ದಾಸ ಸಾಹಿತ್ಯ ಪ್ರಾಜೆಕ್ಟ್‌ನ ವಿಶೇಷ ಅಧಿಕಾರಿ ವಿ| ಆನಂದತೀರ್ಥಾಚಾರ್ಯ ಪಗಡಲ್ ಅವರ ನೇತೃತ್ವದಲ್ಲಿ ಉಚಿಜಲೋತ್ಸವದ ಧಾರ್ಮಿಕ ಕಾರ್ಯಕ್ರಮ ನೆರವೇರಿತು. ಸುಮಾರು ಮೂರು ಗಂಟೆಗೂ ಅಧಿಕ ಧಾರ್ಮಿಕ ವಿಧಿವಿಧಾನಗಳ ನಡುವೆ ಉಂಜಲೋತ್ಸವ ಪುಷ್ಭಯಾಗ ಗೋವಿಂದನ ಸ್ಮರಣೆಗೈಯುತ್ತಾ ಗೀತಗಾನದಲ್ಲಿ ಶ್ರೀನಿವಾಸನ ಭಕ್ತರು ಭಾಗಿಯಾದರು.ಉಂಜಲೋತ್ಸವದಲ್ಲಿ ಪ್ರಸಾದ ರೂಪದಲ್ಲಿ ನಾನಾ ರೀತಿಯ ಫಲಹಾರದ ವ್ಯವಸ್ಥೆ ಕಲ್ಪಿಸಲಾಯಿತು. ಸಾಲಿಗ್ರಾಮದಿಂದ ಹೊರಟ ಪುರಮೆರವಣಿಗೆ:ಸಾಲಿಗ್ರಾಮ ಗುರುನರಸಿಂಹ ದೇಗುಲದ ವಠಾರಲ್ಲಿ ಉಂಜಲೋತ್ಸವದ ದೇವರ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ಅಧ್ಯಕ್ಷ ಡಾ. ಕೆ.ಎಸ್ ಕಾರಂತ, ಕೋಟ ಅಮೃತೇಶ್ವರೀ ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಸಮ್ಮುಖದಲ್ಲಿ ಮೆರವಣಿಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಸಾವಿರಾರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಅಧಿಕೃತ ವೆಬ್‌ಸೈಟ್ ನ್ನು ಹೋಲುವ ನಕಲಿ ವೆಬ್‌ಸೈಟ್ ಸೃಷ್ಟಿಸಿ ಭಕ್ತರಿಗೆ ವಂಚಿಸುತ್ತಿದ್ದ ಅನ್ಯಧರ್ಮೀಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ತಿಜಾರಿ ಜಿಲ್ಲೆಯ ನಾಸೀರ್ ಹುಸೇನ್ ಬಂಧಿತ. ಆತನು ದೇವಸ್ಥಾನದ ವಸತಿಗೃಹಗಳಲ್ಲಿ ಮುಂಗಡವಾಗಿ ಕೊಠಡಿ ಕಾದಿರಿಸುವ ಬಗ್ಗೆ ತನ್ನ ನಕಲಿ ವೆಬ್‌ಸೈಟ್ ಮೂಲಕ ಹಣವನ್ನು ಪಡೆದು ನಕಲಿ ರಶೀದಿ ನೀಡಿ ವಂಚಿಸುತ್ತಿದ್ದ ಎಂದು ದೇಗುಲದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್ ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯಿಂದ ಕೃತ್ಯಕ್ಕೆ ಬಳಸಿದ ಲ್ಯಾಪ್‌ಟಾಪ್ ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿಗೆ ಬೈಂದೂರು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬೈಂದೂರು ಪೊಲೀಸ್‌ ವೃತ್ತ ನಿರೀಕ್ಷಕರಾದ ಶಿವಕುಮಾರ್ ಬಿ. ಹಾಗೂ ಸಂತೋಷ್ ಎ. ಕಾಯ್ಕಿಣಿ, ಕೊಲ್ಲೂರು ಠಾಣೆಯ ಎಸ್‌ಐ ವಿನಯ ಎಂ. ಕೊರ್ಲಹಳ್ಳಿ ಹಾಗೂ ಭೀಮಶಂಕರ, ಕೊಲ್ಲೂರು ಠಾಣೆಯ ನಾಗೇಂದ್ರ, ಗಂಗೊಳ್ಳಿ ಠಾಣೆಯ ರಾಘವೇಂದ್ರ ಶೆಟ್ಟಿ, ಕೃಷ್ಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮೊಜಮ್ ಪದವಿ ಪೂರ್ವ ಕಾಲೇಜಿನ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಜೇತನಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಹಾಸನಜಿಲ್ಲೆ ಬೇಲೂರಿನ ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಗೆಲ್ಲುವ ಮೂಲಕ ವಿದ್ಯಾರ್ಥಿಯು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತ ತಾಲೂಕಿನ ಬಸ್ರೂರು ನಿವಾಸಿ ಅಬ್ದುಲ್‌ ಮುಬಿನ್ ತಸ್ಮಿಯಾ ದಂಪತಿಯ ಪುತ್ರ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ. ರಂಜನ್ ಬಿ. ಶೆಟ್ಟಿ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಡಿ ಕನ್ಯಾಣದ ಶ್ರೀ ಶನೀಶ್ವರ ದೇಗುಲದ ವಠಾರದಲ್ಲಿ ನಡೆದ ಉಂಜಲೋತ್ಸವದ ಪ್ರಯುಕ್ತ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದಿಂದ ಕಾರ್ಯಕ್ರಮ ನಡೆಯುವ ಕೋಡಿ ಕನ್ಯಾಣದ ಉಂಜಲೋತ್ಸವದವರೆಗೆ ವೈಭವದ ಮೆರವಣಿಗೆ ಹಮ್ಮಿಕೊಂಡಿತು. ಈ ಸಂದರ್ಭದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಸ್ವಚ್ಛತಾ ಸೇನಾನಿಗಳು ಸುಮಾರು ಐದು ಕೀ.ಮಿ ವರೆಗಿನ ಮೆರವಣಿಗೆಯಲ್ಲಿ ನೀರು ಬಾಟಲಿಗಳನ್ನು ತೆರವುಗೊಳಿಸುವ ಮೂಲಕ ಸ್ವಚ್ಛತಾ ಕೈಂಕರ್ಯ ಕೈಗೊಂಡಿತು. ಕಾರ್ಯಕ್ರಮಕ್ಕೆ ಆಗಮಿಸಿದ ನಾಡೋಜ ಡಾ. ಜಿ. ಶಂಕರ್ ಅವರು ಪಂಚವರ್ಣ ಸ್ವಚ್ಛತಾ ಕಾರ್ಯವನ್ನು ಪ್ರಶಂಸಿದರು. ಈ ಸಂದರ್ಭದಲ್ಲಿ ಪಂಚವರ್ಣ ಸಂಘಟನೆ ಪದಾಧಿಕಾರಿಗಳು ಸದಸ್ಯರು ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿ ಪೂರ್ವ ಶಾಲಾ ಶಿಕ್ಷಣ ( ಪದವಿ ಪೂರ್ವ) ಇಲಾಖೆ  ಚಿಕ್ಕಮಂಗಳೂರಿನಲ್ಲಿ ಆಯೋಜಿಸಿದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ 2025 – 26ನೇ ಸಾಲಿನ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಯ್ ಕುಮಾರ್ – 85 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಅನುಪಮ ಸಾಧನೆ ಮೆರೆದಿದ್ದಾನೆ. ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Read More