Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಜೇಸಿಐ ಕುಂದಾಪುರ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಜೇಸಿಐ ರಾಷ್ಟ್ರೀಯ ಅಧ್ಯಕ್ಷ ಅರ್ಪಿತ್ ಹಾಥಿ ಅವರ ಹುಟ್ಟುಹಬ್ಬದ ದಿನದಂದು ರೆಡ್ ಕ್ರಾಸ್ ಸಂಸ್ಥೆಯಲ್ಲಿ ಜರುಗಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಕುಂದಾಪುರದ ಅಧ್ಯಕ್ಷರಾದ ಶ್ರೀನಾಥ್ ಗಾಣಿಗ ಇವರು ವಹಿಸಿದ್ದರು.ಜೇಸಿಐ ನ ಪೂರ್ವ ರಾಷ್ಟ್ರೀಯ ಕಾನೂನು ಸಲಹೆಗಾರ ಶ್ರೀಧರ್ ಪಿ.ಎಸ್. ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ ಚೇರ್ಮನ್ ಶ್ರೀ ಜಯಕರ್ ಶೆಟ್ಟಿ ಹಾಗೂ ಜೇಸಿಐನ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ರಾದ ಸದಾನಂದ ನಾವಡ ಉಪಸ್ಥಿತರಿದ್ದರು. ಸುಮಾರು17 ಯೂನಿಟ್ ಗಳಷ್ಟು ರಕ್ತವನ್ನು ಜೇಸಿಐ ಸದಸ್ಯರಿಂದ ಸಂಗ್ರಹಿಸಲಾಯಿತು. ಜೇಸಿಐ ಕುಂದಾಪುರದ ಅಧ್ಯಕ್ಷರಾದ ಶ್ರೀನಾಥ್ ಗಾಣಿಗ ಇವರು ಸ್ವಾಗತಿಸಿದರು.ಜೇಸಿಐ ಕುಂದಾಪುರದ ಕಾರ್ಯದರ್ಶಿ ಚೇತನ್ ದೇವಾಡಿಗ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕ್ ಹಾಗೂ ಕಾರು ನಡುವಿನ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಖೇದಕರ ಘಟನೆ ವರದಿಯಾಗಿದೆ. ಬೈಂದೂರು ತಗ್ಗರ್ಸೆ ಮುತ್ತಯ್ಯ ಪೂಜಾರಿ ಎಂಬುವವರ ಪುತ್ರ ಪುನಿತ್ ಪೂಜಾರಿ (22) ಮೃತ ದುರ್ದೈವಿ. ಬೈಕ್ ಹಿಂಬದಿಯ ಸವಾರ ಆಕಾಶ್ ಪೂಜಾರಿ ಗಾಯಗೊಂಡಿದ್ದಾನೆ. ಮರವಂತೆ ಬಸ್ ನಿಲ್ದಾಣ ಬಳಿ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಡಸ್ಕರ್ ಕಾರು ಹಾಗೂ ಬೈಂದೂರು ಕಡೆಗೆ ತೆರಳುತ್ತಿದ್ದ ಪಲ್ಸರ್ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಭ ನುಗ್ಗುಗುಜ್ಜಾಗಿದ್ದರೇ, ಬೈಕಿಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೈಕ್ ಸವಾರನ ಪುನಿತ್ ಪೂಜಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದರೇ, ಹಿಂಬದಿಯ ಸವಾರ ಆಕಾಶ್ ಪೂಜಾರಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಪುನಿತ್ ಬೈಂದೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಹೊಸ ಬೈಕು ಖರೀದಿಸಿ ಮೂರು ದಿನವಷ್ಟೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸಮುದಾಯ, ಕುಂದಾಪುರ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ರಾಜ್ಯ ಬಾಲವಿಕಾಸ ಟ್ರಸ್ಟ್ ಜೊತೆಯಾಗಿ ಸಂಘಟಿಸಿರುವ ರಂಗರಂಗು ರಜಾಮೇಳವನ್ನು ಸೂಪರ್ ಗ್ರೇಡ್ ವಿದ್ಯುತ್ ಗುತ್ತಿಗೆದಾರರೂ ಮತ್ತು ಸಾಮಾಜಿಕ ಚಿಂತಕರೂ ಆಗಿರುವ ಕೆ.ಆರ್ ನಾಯ್ಕ್ ಉದ್ಘಾಟಿಸಿದರು. ಕುಟುಂಬಗಳು ಚಿಕ್ಕದಾಗುತ್ತಾ ಹೋದಂತೆ ಒಡನಾಟದ ಒಡಮೂಡುವ ಸಮಷ್ಟಿಪ್ರಜ್ಞೆಯು ಮಕ್ಕಳಿಗೆ ದುರ್ಲಭವಾಗುತ್ತವೆ. ರಜಾಮೇಳಗಳು ಈ ಕೊರತೆಯನ್ನು ನೀಗಿಸಬೇಕು ಎಂದು ಅವರು ತಮ್ಮ ಉದ್ಘಾಟನಾ ಮಾತುಗಳಲ್ಲಿ ಆಶಿಸಿದರು. ಮೇಳದ ನಿರ್ದೇಶಕ ಶ್ರೀ ವಾಸುದೇವ ಗಂಗೇರ ಮಾತನಾಡಿ ಈ ರಜಾಮೇಳದಲ್ಲಿ ನೆಲಮೂಲದ ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸಲಾಗುವುದು ಮತ್ತು ಜಾತಿ-ಮತ-ಭಾಷೆಗಳ ಹೆಸರಿನಲ್ಲಿ ನಾವು ನಿರ್ಮಿಸಿಕೊಂಡಿರುವ ಗೋಡೆಗಳನ್ನು ಮೀರಿ ಮನುಷ್ಯತ್ವದ ವಿಶಾಲ ಕುಟುಂಬದೊಳಗೆ ಬದುಕುವದನ್ನು ಕಲಿಯಲು ಈ ಮೇಳದಲ್ಲಿ ಒತ್ತು ನೀಡಲಾಗುವುದು ಎಂದರು. ಮೇಳದ ಭಾಗವಾಗಿ ಮಕ್ಕಳು ಹೊರಸಂಚಾರ, ಮಕ್ಕಳ ಸಂತೆ, ಕಛೇರಿ ಭೇಟಿಗಳನ್ನು ಮಾಡುವರು. ಪ್ರತಿ ವರ್ಷದಂತೆ ಮೇಳದ ಮಕ್ಕಳು ಈ ವರ್ಷವೂ ಮೇಳದ ಸಮಾರೋಪ ಸಮಾರಂಭದಲ್ಲಿ ನಾಟಕ ಪ್ರದರ್ಶನವನ್ನು ನೀಡಲಿರುವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಬಿ. ಎಂ. ಸುಕುಮಾರ ಶೆಟ್ಟಿ ಅವರಿಗೆ ಯಡ್ತರೆಯ ಗ್ರಾಮಸ್ಥ ಪ್ರಸಾದ್ ಬೈಂದೂರು ಅವರು ಮೊದಲ ಮನವಿ ಸಲ್ಲಿಸಲಿದ್ದಾರೆ. ಬೈಂದೂರಿನಾದ್ಯಂತ ಇರುವ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಸಕರು ಶ್ರಮಿಸಬೇಕಿದ್ದು, ಶಾಶ್ವತ ಯೋಜನೆಯನ್ನು ಅನುಷ್ಠಾನಗೊಳಿಸುವ ಮೂಲಕ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅವರು ಮನವಿಯಲ್ಲಿ ತಿಳಿಸಿದ್ದಾರೆ. ಮನವಿಗೆ ಪ್ರತಿಕ್ರಿಯಿಸಿದ ನೂತನ ಶಾಸಕರು, ಬೈಂದೂರು ಭಾಗದ ಕುಡಿಯುವ ನೀರಿನ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಎಂದು ಭರವಸೆ ನೀಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರಿನ ನೂತನ ಶಾಸಕರಾಗಿ ಆಯ್ಕೆಗೊಂಡಿರುವ ಬಿ. ಎಂ. ಸುಕುಮಾರ್ ಶೆಟ್ಟಿ ವಿಜಯೋತ್ಸವ ಯಾತ್ರೆ ಅವರ ಅಭಿಮಾನಿಗಳು ವಿವಿಧೆಡೆ ವಿಜಯೋತ್ಸವ ಆಚರಿಸಿದರು. ಬೈಂದೂರಿಗೆ ಆಗಮಿಸುತ್ತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರ ಹರ್ಷಾಚರಣೆ ಮುಗಿಲು ಮುಟ್ಟಿದ್ದು, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಅಭಿಮಾನಿಗಳ ಜಯಘೋಷದೊಂದಿಗೆ ಇಲ್ಲಿನ ರಥಬೀದಿಯಲ್ಲಿ ವಿಜಯೋತ್ಸವ ನಡೆಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಬಿ.ಎಂ ಸುಕುಮಾರ ಶೆಟ್ಟಿ ಅವರು 24393 ಮತಗಳ ಅಂತರದಿಂದ ಮುನ್ನಡೆ ಸಾಧಿಸಿ ಗೆಲುವಿನ ಮೆಟ್ಟಿಲೇರಿದ್ದಾರೆ. ಅವರು ತಮ್ಮ ಸಮೀಪದ ಸ್ವರ್ಧಿ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರನ್ನು ಮಣಿಸಿ ಗೆಲುವು ಕಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ವರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು 56,405 ಮತಗಳ ಮುನ್ನಡೆ ಸಾಧಿಸಿ, ಜಯಭೇರಿ ಭಾರಿಸಿದ್ದಾರೆ, ಅವರು ತಮ್ಮ ಸಮೀಪದ ಸ್ವರ್ಧಿ ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ಅವರನ್ನು ಮಣಿಸಿ ಭರ್ಜರಿ ಜಯ ಕಂಡಿದ್ದಾರೆ. ಕುಂದಾಪುರದಲ್ಲಿ ಹಾಲಾಡಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮತದಾರರ ಜಾಗೃತಿ ಮತ್ತು ಪಾಲ್ಗೊಳ್ಳುವಿಕೆ ಸಮಿತಿ (ಸ್ವೀಪ್) ಮತದಾನದ ಪ್ರಮಾಣ ಹೆಚ್ಚಿಸಲು ಹಮ್ಮಿಕೊಂಡ ಕಾರ್ಯಕ್ರಮಗಳು ಫಲ ನೀಡಿದ್ದು, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತದಾನ ನಡೆದಿದೆ. ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಅವರ ಅಧ್ಯಕ್ಷತೆಯ ಸ್ವೀಪ್ ಸಮಿತಿ ಜಿಲ್ಲೆಯಾದ್ಯಂತ ಮತದಾನ ಜಾಗೃತಿಗಾಗಿ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಕಾಲೇಜು ವಿದ್ಯಾರ್ಥಿಗಳನ್ನು ಈ ಅಭಿಯಾನದಲ್ಲಿ ಭಾಗವಹಿಸುವಂತೆ ಮಾಡಿ ಯುವ ಮತದಾರರಿಗೆ ಮತದಾನದ ಮಹತ್ವದ ಸಂದೇಶ ತಲುಪಿಸಲಾಯಿತು. ಹೊಸ ಮತದಾರರ ಮೇಲೆ ಇದು ತುಂಬಾ ಪ್ರಭಾವ ಬೀರಿತು. ಸಾಂಪ್ರದಾಯಿಕ ಕಾರ್ಯಕ್ರಮಗಳ ಜೊತೆಗೆ ಕೆಲವು ವಿನೂತನ ಪ್ರಯತ್ನಗಳನ್ನು ಮಾಡಿದ್ದನ್ನು ಸ್ಮರಿಸಬಹುದು. ಅಂಗವಿಕಲರನ್ನು ಮತಗಟ್ಟೆಗೆ ಕರೆತರಲು ಯೋಜನೆ ರೂಪಿಸಲಾಯಿತು. ಅಂಗವಿಕಲರು ಹೆಚ್ಚಾಗಿರುವ 58 ಮತಗಟ್ಟೆಗಳನ್ನು ಗುರುತಿಸಿ ಅಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲಾಯಿತು. ಅಲ್ಲದೆ ಮತದಾನದ ಸಂದೇಶ ಎಲ್ಲ ಅಂಗವಿಕಲರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಯಿತು. ಅಗತ್ಯಕ್ಕೆ ಅನುಗುಣವಾಗಿ ಮತಗಟ್ಟೆಗಳ ಸಂಖ್ಯೆಯನ್ನು ಹೆಚ್ಚಿಸಲಾಯಿತು. ಅಲ್ಲದೆ ಗುಡ್ಡಗಾಡು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಚಿನ್ನಭಾರಣ ಕಳವು ಪ್ರಕರಣ ನಡೆದು 2 ವರ್ಷ ಸಂದರೂ ಈ ವರೆಗೂ ಆರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಸಿಲ್ಲ ಅಲ್ಲದೇ ಕಳವಾದ ಸುಮಾರು 75 ಲಕ್ಷಕ್ಕೂ ಹೆಚ್ಚು ಮೌಲ್ಯದ 2.289ಕೆ.ಜಿ ಚಿನ್ನಾಭರಣದ ಪೈಕಿ 400 ಗ್ರಾಂ ಚಿನ್ನಾಭರಣ ಈವರೆಗೂ ಪತ್ತೆಯಾಗಿಲ್ಲ. ದೇವಿಯ ಆಭರಣ ಕಳವು ಪ್ರಕರಣ ರಾಜ್ಯ ಹೊರರಾಜ್ಯಗಳಲ್ಲೂ ಸುದ್ದಿಯಾಗಿದ್ದವು. ಅಂದಿನ ದೇಗುಲದ ಕಾರ್ಯನಿರ್ವಹಣಾಧಿಕಾರಿ ಟಿ. ಆರ್. ಉಮಾ ನಿತ್ಯ ಸಂಗ್ರಹವಾದ ಕಾಣಿಕೆ, ಹರಿಕೆ ಆಭರಣಗಳ ಬಗ್ಗೆ ಲೆಕ್ಕಪರಿಶೋಧನೆ ಮಾಡುತ್ತಿದ್ದಾಗ ಅದರಲ್ಲಿ ವ್ಯತ್ಯಾಸವನ್ನು ಕಂಡುಹಿಡಿದಿದ್ದರು. ಈ ಬಗ್ಗೆ ಮೇಲ್ವಿಚಾರಣೆ ನಡೆಸುತ್ತಿದ್ದ ಶಿವರಾಮ ಮಡಿವಾಳ ಎಂಬಾತನನ್ನು ಸಂಪರ್ಕಿಸಿದ್ದರು. ಆತ ನೀಡಿದ ಉತ್ತರ ನೀಡಲು ಅಸಮರ್ಥನಾದ್ದರಿಂದ ಅವರು ಕೊಲ್ಲೂರು ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಪೊಲೀಸರಿಗೆ ಶರಣಾದ ಶಿವರಾಮ್ ತಾನು ಬ್ಯಾಂಕ್ ಇನ್ನಿತರ ಲೇವಾದೇವಿ ಸಂಸ್ಥೆಗಳಲ್ಲಿ ಚಿನ್ನಾಭರಣ ಅಡವಿಟ್ಟ ಬಗ್ಗೆ ಪೂರ್ಣ ಮಾಹಿತಿ ನೀಡಿದ್ದ. ಆತನೊಡನೆ…

Read More