ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ ಕಿರುಮಂತ್ರಾಲಯ ವತ್ತಿನೆಣೆ ಬೈಂದೂರು ಇದರ ಪ್ರತಿಷ್ಠಾಪನಾ ವರ್ದಂತಿ ಉತ್ಸವ ನಡೆಯಿತು. ಗುರು ರಾಘವೇಂದ್ರ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಮದ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಕೆ.ಡಿ.ಪಿ ಸದಸ್ಯ ಎಸ್.ರಾಜು ಪೂಜಾರಿ, ಜಯಾನಂದ ಹೋಬಳಿದಾರ್ ಹಾಗೂ ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಎನ್ ಎಸ್ ಎಸ್ ವಿಭಾಗದ 2017-18 ಶೈಕ್ಷಣಿಕ ವರ್ಷದ ಚಟುವಟಿಕಗಳ ಸಮಾರೋಪ ಸಮಾರಂಭ ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್ ನಲ್ಲಿ ಜರುಗಿತು. ಮೂಡಬಿದಿರೆ ರೋಟರಿ ಕ್ಲಬ್‍ನ ಅಧ್ಯಕ್ಷ ಶ್ರೀಕಾಂತ ಕಾಮತ್, ಎನ್‍ಎಸ್‍ಎಸ್ ವಿದ್ಯಾರ್ಥಿಗಳು ಸದಾ ಸ್ವಚ್ಛತಾ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಿ, ಸುಂದರ ಪರಿಸರದ ನಿರ್ಮಾತೃಗಳಾಗಬೇಕು ಮೂಡಬಿದಿರೆ ರೋಟರಿ ಕ್ಲಬ್‍ನ ಮಹತ್ತರ ಯೋಜನೆಯಲ್ಲೊಂದಾದ ಸ್ವಚ್ಛ ಸುಂದರ ಮೂಡಬಿದಿರೆ ನಿರ್ಮಾಣದಲ್ಲಿ ಮುಂದಿನ ದಿನಗಳಲ್ಲಿ ಆಳ್ವಾಸ್ ಕಾಲೇಜಿನ ಎನ್‍ಎಸ್‍ಎಸ್ ವಿಭಾಗವು ಕೈಜೋಡಿಸಬೇಕು ಎಂದು ವಿನಂತಿಸಿದರು. ಕಾಲೇಜಿನ ಎನ್‍ಎಸ್‍ಎಸ್ ಘಟಕಕ್ಕೆ ಐದುಸಾವಿರ ರೂಪಾಯಿಯ ಧನ ಸಹಾಯ ನೀಡಿ, ಸಲಕರಣೆಗಳನ್ನು ಖರೀದಿಸಲು ಸಹಕರಿಸುವುದಾಗಿ ತಿಳಿಸಿದರು. ಕಾಲೇಜಿನ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಒಬ್ಬ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯಲ್ಲಿ ಎನ್‍ಎಸ್‍ಎಸ್ ಪ್ರಮುಖ ಪಾತ್ರ ವಹಿಸುತ್ತದೆ. ಇಂತಹ ಸಂಘಟನೆಯಲ್ಲಿ ಭಾಗಿಯಾಗುವುದರಿಂದ ವಿದ್ಯಾರ್ಥಿಗಳಲ್ಲಿ ಸಮಾಜದೆಡೆಗಿನ ದೃಷ್ಠಿಕೋನ ಬದಲಾಗುವುದರೊಂದಿಗೆ, ಸಮಾಜಕ್ಕೆ ಬೇಕಾಗುವ ಹತ್ತು ಹಲವು ಸಮಾಜಮುಖಿ ಕಾರ್ಯಗಳು ನೆರವೇರುತ್ತವೆ.ಯುವ ಜನತೆ ಸದೃಡ ಸಮಾಜ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕು ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿರುವ ಬೈಂದೂರು ಇತಿಹಾಸದಲ್ಲಿ ಪ್ರಥಮ ಬಾರಿಗೆ ಬೈಂದೂರು-ಗಂಗಾನಾಡು ರಸ್ತೆಯ ಭರತನಗರದಲ್ಲಿ ಸೌಪರ್ಣಿಕ ಡೆವಲಪರ್ಸ್ತ ಹಾಗೂ ಮಹಾವೀರ ಕನ್ಸ್ಸ್ಟ್ರಕ್ಷನ್ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ’ಓಂ ಮಹಾವೀರ ಸುಸಜ್ಜಿತ ವಸತಿ ಸಮುಚ್ಚಯ ಎರಡನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ತಗ್ಗರ್ಸೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಟಿ. ನಾರಾಯಣ ಹೆಗ್ಡೆ ಶಂಕುಸ್ಥಾಪನೆ ನೆರವೇರಿಸಿದರು. ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ಜಯಾನಂದ ಹೋಬಳಿದಾರ್, ಸಂಸ್ಥೆಯ ಆಡಳಿತ ಪಾಲುದಾರರಾದ ಗೋಪಾಲಕೃಷ್ಣ ಜಿ., ಭೀಮೇಶ್ ಕುಮಾರ್, ನಾಗೇಶ ನಾಯ್ಕ್ ಗೊರಟೆ, ಮುಂತಾದವರು ಹಾಜರಿದ್ದರು. ಭರತ್ ನಗರದಲ್ಲಿ ನಿರ್ಮಾಣವಾಗಲಿರುವ 1 ಬಿಹೆಚ್ಕೆ ಹಾಗೂ 2 ಬಿಹೆಚ್ಕೆ ಅಪಾರ್ಟ್ಮೆಂಟ್ಗಳು ಎಲ್ಲಾ ರೀತಿಯಲ್ಲಿಯೂ ಅನುಕೂಲಕರವಾಗಿದೆ. ನೂತನ ಅಪಾರ್ಟ್ಮೆಂಟ್ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಹತ್ತಿರದಲ್ಲಿದೆ. 500ಮೀಟರ್ ದೂರದಲ್ಲಿ ಸರಕಾರಿ ಪ್ರಥಮದರ್ಜೆ ಕಾಲೇಜು, 700 ಮೀಟರ್ ದೂರದಲ್ಲಿ ಸೈಂಟ್ಥಾಮಸ್ ರೆಸಿಡೆನ್ಸಿಯಲ್ ಶಾಲೆ, ಹಾಗೂ 1.5ಕಿ.ಮೀ ದೂರದಲ್ಲಿ ಮುಖ್ಯ ಬಸ್ ನಿಲ್ದಾಣ, ಮಾರ್ಕೆಟ್ ಹಾಗೂ ಇನ್ನಿತರ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಗಿಳಿಯಾರು ಜನಸೇವಾ ಟ್ರಸ್ಟ್ ಅನಾವರಣ ಹಾಗೂ ಅಭಿಮತ ಪತ್ರಿಕೆಯ ದಶಮಾನೋತ್ಸವ ಮಾ.31ರಂದು ಮೂಡುಗಿಳಿಯಾರು ಹಿ.ಪ್ರಾ.ಶಾಲೆ ಮೈದಾನದಲ್ಲಿ ಜರಗಲಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಅಶೋಕ್ ಶೆಟ್ಟಿ ಬನ್ನಾಡಿ ಸೋಮವಾರ ಬ್ರಹ್ಮಾವರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕಾರ್ಯಕ್ರಮ ಬೆಳಗ್ಗೆ 9ಗಂಟೆಗೆ ಉದ್ಘಾಟನೆಗೊಳ್ಳಲಿದ್ದು, ಅನಂತರ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ದೇರಳಕಟ್ಟೆ ಇಲ್ಲಿನ ವೈದ್ಯರ ತಂಡದಿಂದ ಆರೋಗ್ಯ ತಪಾಸಣೆ, ಗಿಳಿಯಾರು ದಿ| ಐತ ಪೂಜಾರಿ ಸ್ಮರಣಾರ್ಥ ನೇತ್ರದಾನಕ್ಕೆ ಹೆಸರು ನೋಂದಣಿ ಶಿಬಿರ ನಡೆಯಲಿದೆ. ಸಂಜೆ 6 ಗಂಟೆಯಿಂದ ಕಾವ್ಯಶ್ರೀ ಅಜೇರು ಇವರಿಂದ ಯಕ್ಷರಸಕಾವ್ಯ, ಜಿಲ್ಲಾ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ, ಮೂಡುಬಿದ್ರೆ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವಾ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರಗಲಿದೆ. ಕರ್ನಾಟಕ ಪಶ್ಚಿಮ ವಲಯ ಐ.ಜಿ.ಪಿ. ಅರುಣ್ ಚಕ್ರವರ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಚಿಕ್ಕಮಂಗಳೂರು ಎಸ್.ಪಿ. ಅಣ್ಣಾಮಲೈ ಜನಸೇವಾ ಟ್ರಸ್ಟ್ ಅನಾವರಣಗೊಳಿಸಲಿದ್ದಾರೆ ಹಾಗೂ ಅನೇಕ ಗಣ್ಯರು ಉಪಸ್ಥಿತರಿರುವರು. ಸಾಮಾಜಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರು ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಅರ್ಥಶಾಸ್ತ್ರ ವಿಭಾಗದ ವತಿಯಿಂದ ಪ್ರಥಮ ದರ್ಜೆ ಕಾಲೇಜುಗಳ ಪ್ರಾಧ್ಯಾಪಕರಿಗಾಗಿ ಸಮಗ್ರ ಗುಣಮಟ್ಟ ನಿರ್ವಹಣೆಯ ಒಂದು ದಿನದ ರಾಜ್ಯ ಮಟ್ಟದ ಕಾರ್ಯಗಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ.ಜಿ ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಇಲ್ಲಿನ ಡಾ.ಉಮೇಶ ಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಧ್ಯಾಪಕರುಗಳಲ್ಲಿ ಗುಣಮಟ್ಟ ನಿರ್ವಹಣೆ ಅವಶ್ಯಕತೆಯ ಬಗೆಗೆ ಕಿವಿ ಮಾತು ಹೇಳಿದರು. ಕಾರ್ಯಗಾರದಲ್ಲಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜು ಸ್ವಾಯತ್ತ ಹಾಸನ ಇಲ್ಲಿನ ಪ್ರಾಂಶುಪಾಲರಾದ ಡಾ.ಡಿ.ಜಿ ಕೃಷ್ಣೇಗೌಡ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ನಾವು ಹೇಗೆ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎನ್ನುವುದರ ಬಗೆಗೆ ವಿವಿಧ ಚಟುವಟಿಕೆಗಳ ಮೂಲಕ ಅರಿವು ಮೂಡಿಸಿದರು. ಕಾರ್ಯಗಾರದಲ್ಲಿ ಮತ್ತೋರ್ವ ಮುಖ್ಯ ಅತಿಥಿಗಳಾಗಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಗಂಧದ ಕೋಠಿ ಹಾಸನ ಇಲ್ಲಿನ ಪ್ರಾಂಶುಪಾಲರಾದ ಪ್ರೊ. ಸುಲೋಚನಾ ಅವರು ಭಾಗವಹಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಭಂಡಾರ್‌ಕಾರ‍್ಸ್ ಕಾಲೇಜಿನಲಿ ನಡೆದ ವಾರ್ಷಿಕೋತ್ಸವದಲ್ಲಿ ಮಂಗಳೂರು ವಿವಿ ಮಟ್ಟದಲ್ಲಿ ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜ್ ಆಡಳಿತ ಮಂಡಳಿ ಅಧ್ಯಕ ಡಾ.ಎಚ್.ಶಾಂತರಾಮ್‌ಅಧ್ಯಕ್ಷತೆ ವಹಿಸಿದ್ದರು.ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ.ಶಾಂತರಾಮ್ ಪ್ರಭು, ರಾಜೇಂದ್ರ ತೋಳಾರ್, ಕೆ.ಪ್ರಜ್ಞೇಶ್ ಪ್ರಭು, ಕೆ.ದೇವದಾಸ್‌ಕಾಮತ್ ಉಪಸ್ಥಿತರಿದ್ದರು. ಕಾಲೇಜಿನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಶೈಕ್ಷಣಿಕ ಸಾಲಿನಲ್ಲಿ ನಿವೃತ್ತರಾದ ಪ್ರಾಧ್ಯಾಪಕ ಪ್ರೊ.ಉದಯಕುಮಾರ್, ಡಾ.ಪಾರ್ವತಿ ಜಿ. ಐತಾಳ್, ಪ್ರೊ.ನಾರಾಯಣತಂತ್ರಿ, ಪ್ರೊ.ಜಿ.ಎಸ್. ಹೆಗಡೆ, ಹಾಗೂ ಬೋಧಕೇತರ ಸಿಬಂದಿ ಸರಸ್ವತಿ ಬಾಯಿ ಅವರನ್ನು ಸಮ್ಮಾನಿಸಲಾಯಿತು.ಮಂಗಳೂರು ವಿಶ್ವವಿದ್ಯಾಲಯ ಮಟ್ಟದಲ್ಲಿ ರ‍್ಯಾಂಕ್ ವಿಜೇತರಾದ ಶಾಂಭವಿ, ಸಂಧ್ಯಾ, ಸಂಗೀತಾ ಯ.ಎಸ್.ಶೆಣೈ, ರಜನಿ ಹಾಗೂ ಕಾರ್ತಿಕ್ ಕಾಮತ್ ಅವರನ್ನು ಗೌರವಿಸಲಾಯಿತು. ವಿಶ್ವಸ್ಥ ಮಂಡಳಿ ಸದಸ್ಯ ಸದಾನಂದಛಾತ್ರ ಸ್ವಾಗತಿಸಿದರು.ಪ್ರಾಂಶುಪಾಲ ಡಾ.ಎನ್. ಪಿ.ನಾರಾಯಣ ಶೆಟ್ಟಿ ವರದಿ ವಾಚಿಸಿದರು.ಉಪನ್ಯಾಸಕ ಹಯವಧನ ಉಪಾಧ್ಯಾಯ ಸಮ್ಮಾನಿತರ ವಿವರ ನೀಡಿದರು. ವಿದ್ಯಾರ್ಥಿನಿಯರಾದ ವಿನಯಾ ಶೆಟ್ಟಿ ಪರಿಚಯಿಸಿದರು. ಮಹಾಲಕ್ಷ್ಮಿ ಕಾರ‍್ಯಕ್ರಮ ನಿರ್ವಹಿಸಿದರು.ಉಪನ್ಯಾಸಕಿ ರೋಹಿಣಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಭಂಡಾರ್‌ಕಾರ‍್ಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೊತ್ಸವ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆಯಿತು. ಸಮಾರಂಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಡಾ.ಪಾರ್ವತಿ ಜಿ. ಐತಾಳ್, ಜಿ.ಎಂ. ಉದಯ ಕುಮಾರ್, ನಾರಾಯಣ ತಂತ್ರಿ, ಗಣಪತಿ ಎಸ್.ಹೆಗ್ಡೆ, ಬೋಧಕೇತರ ಸಿಬ್ಬಂದಿ ಸರಸ್ವತಿ ಬಾ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಹೆಚ್.ಶಾಂತಾರಾಮ್ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಅರುಣಾಚಲ ಮಯ್ಯ, ರಾಜೇಂದ್ರ, ಯು.ಎಸ್. ಶೆಣೈ, ಸಂದೇಶ ಶೆಟ್ಟಿ, ರಾಘವೇಂದ್ರಚರಣ ನಾವಡ ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಕಾರ್ತಿಕೇಯ ಮಧ್ಯಸ್ಥ ಸ್ವಾಗತಿಸಿದರು. ಪ್ರಾಧ್ಯಾಪಕ ಪ್ರಶಾಂತ ಹೆಗ್ಡೆ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಪ್ರಪಂಚದಲ್ಲಿ ಬಿಟ್ಟಿ ಸಲಹೆಗಳು ಬಹಳಷ್ಟು ಸಿಗುತ್ತದೆ. ಆದರೆ ನಮ್ಮ ಜೀವನಕ್ಕೆ ಅರ್ಥ ತುಂಬಬಲ್ಲ ಹಾಗೂ ಸ್ಪಷ್ಟವಾದ ಗುರಿ ತಲುಪಲು ಈ ಸಲಹೆಗಳು ಹೇಗೆ, ಎಷ್ಟು, ಮತ್ತು ಇದರಿಂದಾಗುವ ಒಳ್ಳೆಯ ಹಾಗೂ ಕೆಟ್ಟ ವಿಚಾರಗಳನ್ನು ನಿರ್ಧರಿಸಿ ಸಾಗುವುದು ಉತ್ತಮ ಎಂದು ಗಂಗೊಳ್ಳಿ ಎಸ್.ವಿ.ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ, ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಹೇಳಿದರು. ಅವರು ಬೈಂದೂರಿನ ಲಾವಣ್ಯ ಆಶ್ರಯದಲ್ಲಿ ಇಲ್ಲಿನ ಶಾರದಾ ವೇದಿಕೆಯಲ್ಲಿ ನಡೆಯುತ್ತಿರುವ ರಂಗಪಂಚಮಿ -2018 ನಾಟಕೋತ್ಸವದ ಎರಡನೆಯ ದಿನದ ಕಾರ್ಯಕ್ರಮದಲ್ಲಿ ಶುಭಾಶಂಸನೆಗೈದು ಮಾತನಾಡಿ ಟಿ.ವಿ ಮಾಧ್ಯಮದಲ್ಲಿ ಪ್ರಸಾರವಾಗುವ ಅಶ್ಲೀಲತೆ, ಅನೈತಿಕತೆಯಿಂದ ತುಂಬಿರುವ ಹಲವು ಧಾರಾವಾಹಿಗಳು ನಮ್ಮ ಸಂಸ್ಕೃತಿಗೆ ಪೂರಕವಾಗಿರುವುದಿಲ್ಲ. ಅವುಗಳನ್ನು ಕುಟುಂಬದ ಹಿರಿಯರು ಮಕ್ಕಳೊಡನೆ ಕುಳಿತು ನೋಡಲು ಆಗದು. ಮಕ್ಕಳ ಸೂಕ್ಷ್ಮ ಮನಸುಗಳ ಮೇಲೆ ಸದಾ ಕೆಡುಕನ್ನೇ ಪ್ರಚೋದಿಸುತ್ತಿರುವ ಧಾರಾವಾಹಿಗಳಿಂದ ಉತ್ತಮ ನಾಟಕಗಳತ್ತ ಆಕರ್ಷಿಸುವ ಮೂಲಕ ಅವರನ್ನು ವಿಮುಖಗೊಳಿಸಬೇಕು ಎಂದು ಸಲಹೆ ನೀಡಿದ ಅವರು ಸೃಜನಶೀಲ ಮನಸುಗಳು ಒಂದಾಗಿರುವ ಲಾವಣ್ಯ ತನ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ಚಂದ್ರ ಶೆಟ್ಟಿಯವರನ್ನು ನೇಮಕಗೊಳಿಸಲಾಗಿದೆ. ಶಾಸಕ ಗೋಪಾಲ ಪೂಜಾರಿಯವರ ಶಿಫಾರಸಿನ ಮೇರೆಗೆ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ನೇಮಕ ಪ್ರಕ್ರಿಯೆಯನ್ನು ಅಂತಿಮಗೊಳಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಪುತ್ರನ್‌ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪ್ರಸ್ತುತದ ಪೈಪೋಟಿ ಯುಗದಲ್ಲಿ ನಾವಿದ್ದೇವೆ. ಇನ್ನೊಬ್ಬರನ್ನು ಹಿಂದಿಕ್ಕಿ ಅಥವಾ ಸೋಲಿಸಿ ಗೆಲುವು ಪಡೆಯುವುದಕ್ಕೆ ಕಾರ್ಪೋರೇಟ್ ವಲಯzಲ್ಲಿ ಹೆಚ್ಚು ಪ್ರಾಮುಖ್ಯತೆ ಪಡೆಯುವುದಿಲ್ಲ. ಜೀವನದಲ್ಲಿ ನಮ್ಮೊಂದಿಗಿರುವವರನ್ನು ಗೆಲ್ಲಿಸಿ ನಾವು ಗೆಲ್ಲಬೇಕು ಜೊತೆಗೆ ಸಾಧಿಸಬೇಕು. ಆ ಇನ್ನೊಬ್ಬರನ್ನು ಗೆಲ್ಲಿಸಿ ನಾವು ಗೆಲ್ಲುವುದು ನಿಜವಾದ ಮತ್ತು ಪರಿಪೂರ್ಣ ಗೆಲುವು ಎನಿಸಿಕೊಳ್ಳುತ್ತದೆ. ವಿದ್ಯಾರ್ಥಿಗಳು ಮನೋಭಾವವನ್ನು ಅರಿತುಕೊಂಡು ಮುಂದೆ ಸಾಗಬೇಕು ಎಂದು ಕರ್ನಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ಎಂ.ಎಸ್. ಹೇಳಿದರು. ಅವರು ಭಂಡಾರ್‌ಕಾರ‍್ಸ್ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ವಿಶ್ವದಾದ್ಯಂತ ಯಾವುದೇ ಕ್ಷೇತ್ರದಲ್ಲಿ ಕಾರ‍್ಯ ನಿರ್ವಹಿಸುವ ಸಂದರ್ಭ ಬಂದೊದಗಿದಲ್ಲಿ ಆಯಾ ಪರಿಸರ, ಸಂಸ್ಕೃತಿಯನ್ನು ಕುರಿತು ಚೆನ್ನಾಗಿ ಅರಿತುಕೊಂಡು ಅವರೊಂದಿಗೆ ನಮ್ಮ ಕಾರ್ಯವೈಖರಿಯನ್ನು ನಿರ್ವಹಿಸಬೇಕು. ಅಲ್ಲದೇ ಈ ವಿದ್ಯಾರ್ಥಿ ಜೀವನದಲ್ಲಿ ಸಿಗುವಂತಹ ಅವಕಾಶಗಳನ್ನು ಉಪಯೋಗಿಸಿಕೊಂಡು ಎಲ್ಲಾ ಒಳ್ಳೆಯ ಕ್ಷೇತ್ರಗಳಲ್ಲಿ ಸಕ್ರೀಯರಾಗಿ ತೊಡಗಿಸಿಕೊಳ್ಳಬೇಕು. ಹಾಗಾದಲ್ಲಿ ಮಾತ್ರ ಭವಿಷ್ಯದ ಜೀವನವನ್ನು ಸುಖಮಯವಾಗಿಸಿಕೊಳ್ಳಲು ಸಾಧ್ಯ. ಕಾಲೇಜು ಎನ್ನುವುದು…
