Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶ್ರೀ ರಾಮ ಗೆಳೆಯರ ಬಳಗ ಕೋಡಿ ಕನ್ಯಾಣ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರನ್ನು ವಿಶೇಷವಾಗಿ ಅವರ ಮನೆಗೆ ತೆರಳಿ ಸನ್ಮಾನಿಸಲಾಯಿತು. ಈ ಹಿನ್ನಲೆಯಲ್ಲಿ ಸಂಘದ ಅಧ್ಯಕ್ಷರಾದ ಯಾದವ ಕರ್ಕೇರ ಮಾತನಾಡಿ, ನಮ್ಮ ಊರು ಹಾಗೂ ಪರಿಸರವನ್ನು ಸ್ವಚ್ಛವಾಗಿಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಪ್ರತಿನಿತ್ಯ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಸೇವೆಯನ್ನು ಗುರುತಿಸಿ, ನಮ್ಮ ಬಳಗ ಅವರ ಮನೆಗಳಿಗೆ ತೆರಳಿ ಆತ್ಮೀಯವಾಗಿ ಗೌರವ ಸಲ್ಲಿಸಿದ್ದೇವೆ ಇಂತಹ ಕಾರ್ಯ ಭಗವಂತನಿಗೆ ಭಕ್ತಿ ಸಲ್ಲಿಸುವ ಕಾರ್ಯಕ್ಕೆ ಸಮಾನವಾದದ್ದು ಎಂದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ನಮ್ಮ ಜೀವನದಲ್ಲಿ ನಾವೇನಾದರೂ ಒಳ್ಳೆ ಸಾಧನೆ ಮಾಡಿದ್ದೇವೆ, ಸುಖವಾಗಿದ್ದೇವೆ ಎಂದಾದರೆ ಹೆತ್ತ ಅಮ್ಮನಿಗೆ, ಜನ್ಮ ಕೊಟ್ಟ ತಂದೆಗೆ ಮತ್ತು ವಿದ್ಯೆ ಕಲಿಸಿದ ಗುರುವಿಗೆ ಧನ್ಯವಾದವನ್ನು ಹೇಳಬೇಕು. ತಮ್ಮೆಲ್ಲ ಕಷ್ಟಗಳನ್ನು ಮರೆತು ವಿದ್ಯಾರ್ಥಿಗಳ ಬದುಕಿನ ಸಾಧನೆಯ ಕಾರಣಕ್ಕೆ ಶ್ರಮಿಸುವ ಶಿಕ್ಷಕರನ್ನು ಗೌರವಿಸಬೇಕು ಎಂದು ವಾಗ್ಮಿ, ಧಾರ್ಮಿಕ ಚಿಂತಕ ಎನ್. ದಾಮೋದರ ಶರ್ಮಾ ಹೇಳಿದರು. ಅವರು  ರೋಟರಿ ಕ್ಲಬ್ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಎಸ್. ವಿ. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ನಡೆದ ವಲಯ ಮಟ್ಟದ ಮೂಲಭೂತ ಶಿಕ್ಷಣ ಮತ್ತು ಸಾಕ್ಷರತಾ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ವಿದ್ಯಾರ್ಥಿಗಳು ವ್ಯಸನಕ್ಕೆ ತುತ್ತಾಗಬಾರದು. ವಿದ್ಯಾರ್ಥಿ ಜೀವನದಲ್ಲಿ ಎಚ್ಚರ ತಪ್ಪಿದರೆ ಇಡೀ ಜೀವನ ಸಂಪೂರ್ಣ ಹಾಳಾಗುತ್ತದೆ. ವಿದ್ಯಾರ್ಥಿಗಳು ಜೀವನದಲ್ಲಿ ಒಳ್ಳೆಯ ದಾರಿಗೆ ಬಂದು ತಮ್ಮ ಭವಿಷ್ಯವನ್ನು ಸರಿಯಾಗಿ ರೂಪಿಸಿಕೊಳ್ಳಬೇಕು. ಕಾರ್ಯಕ್ರಮ ಉದ್ಘಾಟಿಸಿದ ರೋಟರಿ ವಲಯ-1ರ ಅಸಿಸ್ಟೆಂಟ್ ಗವರ್ನರ್ ಜೆ. ಶ್ರೀನಾಥ ರಾವ್ ಮಾತನಾಡಿ, ಮಕ್ಕಳಿಗೆ ಮೌಲ್ಯಯುತ ಶಿಕ್ಷಣದ ಅವಶ್ಯಕತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ & ರೇಂಜರ್ಸ್ ಘಟಕದ 2026-27ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಬುಧವಾರ ಕಾಲೇಜಿನ ಎ.ವಿ. ಹಾಲ್‌ನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ, ಉಡುಪಿ ಜಿಲ್ಲೆ ಇದರ ಕಾರ್ಯದರ್ಶಿಗಳಾದ ಆನಂದ ಅಡಿಗ ಅವರು ಉದ್ಘಾಟಕರಾಗಿ ಆಗಮಿಸಿ ಸ್ವಯಂ ಸೇವಕರ ಜವಾಬ್ದಾರಿ ಹಾಗೂ ಸೇವೆಯ ಮಹತ್ವದ ಕುರಿತು ತಿಳಿಸಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ಸೀನಿಯರ್ ರೋವರ್ಸ್ ಮೇಟ್ ಶ್ರೇಯಸ್ ಪ್ರಭು ಉಪಸ್ಥಿತರಿದ್ದರು. ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಪ್ರವೀಣ್ ಮೊಗವೀರ ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೆಂಜರ್ಸ್ ಸ್ವಯಂಸೇವಕಿ ಅಶ್ವಿನಿ ಉದ್ಘಾಟಕರನ್ನು ಪರಿಚಯಿಸಿದರು. ಪೂಜಾಶ್ರೀ ಸ್ವಾಗತಿಸಿದರು. ರೇಂಜರ್ ಲೀಡರ್ ರೇವತಿ ಡಿ. ವಂದಿಸಿದರು. ಸೀನಿಯರ್ ರೆಂಜರ್ಸ್ ಮೇಟ್ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕತಾರ್:‌ ಭಾರತೀಯ ರಾಯಭಾರ ಕಚೇರಿ, ದೋಹಾ ಆಶ್ರಯದ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಯೋಗಿ ಸಂಸ್ಥೆಯಾದ ಕರ್ನಾಟಕ ಸಂಘ ಕತಾರ್ ವತಿಯಿಂದ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಅಭಿಯಂತರ ದಿನಾಚರಣೆಯನ್ನು ಭಾರತೀಯ ಸಾಂಸ್ಕೃತಿಕ ಕೇಂದ್ರದ ಮುಂಬೈ ಹಾಲ್‌ನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. “ಭವಿಷ್ಯವನ್ನು ನಿರ್ಮಿಸುವ ದೂರದೃಷ್ಟಿಯ ಸಾಧಕರಿಗೆ ನಮನ” ಎಂಬ ಆಶಯದೊಂದಿಗೆ ನಡೆದ ಕಾರ್ಯಕ್ರಮವು ಸರ್ ಎಂ. ವಿಶ್ವೇಶ್ವರಯ್ಯ ಅವರ ದೂರದೃಷ್ಟಿ, ಅಭಿಯಂತ್ರಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ದೇಶದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಅವರ ಪಾತ್ರವನ್ನು ಸ್ಮರಿಸುವ ಮೂಲಕ ಆರಂಭಗೊಂಡಿತು. ಕರ್ನಾಟಕ ಸಂಘ ಕತಾರ್‌ನ ಮಾಧ್ಯಮ, ಸಾರ್ವಜನಿಕ ಸಂಪರ್ಕ ಮತ್ತು ಬೆನಿವೊಲೆಂಟ್ ಕಾರ್ಯದರ್ಶಿ ಪ್ರಶಾಂತ್ ಹಿರೇಮಠ್ ಅವರು ಆರಂಭಿಕ ಮಾತುಗಳೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಸರ್ ಎಂ. ವಿಶ್ವೇಶ್ವರಯ್ಯ ಅವರ ಜೀವನ ಮತ್ತು ಅಭಿಯಂತ್ರಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಳನ್ನು ಬಿಂಬಿಸುವ ವಿಡಿಯೊ ಪ್ರದರ್ಶನ ನಡೆಯಿತು. ಕರ್ನಾಟಕ ಸಂಘ ಕತಾರ್‌ನ ಪ್ರಧಾನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ (ಆಡಳಿತ) ಉಡುಪಿ ಜಿಲ್ಲೆ ಇವರ ಆಸರೆಯಲ್ಲಿ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ವಿವೇಕ ಬಾಲಕಿಯರ ಪ್ರೌಢಶಾಲೆಯ ಮೂವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸೃಷ್ಠಿ ಆರ್. (73 ಕೆಜಿ), ಜನನಿ (49 ಕೆಜಿ), ಅಮೂಲ್ಯ( 40 ಕೆಜಿ) ವಿಭಾಗದಲ್ಲಿ ಆಯ್ಕೆಯಾಗಿದ್ದು ರಾಜ್ಯ ಮಟ್ಟಕ್ಕೆ ಅರ್ಹತೆ ಹೊಂದಿರುತ್ತಾರೆ. ಒಟ್ಟು ಜಿಲ್ಲಾ ಸ್ಪರ್ಧೆಯಲ್ಲಿ ಒಂಬತ್ತು ಪುರಸ್ಕಾರಗಳು ಪಡೆದಿದ್ದು ವಿಜೇತರನ್ನು ಮತ್ತು ತರಬೇತಿಗೊಳಿಸಿದ ದೈಹಿಕ ಶಿಕ್ಷಕಿಯಾದ ಮಮತಾ ಅವರನ್ನು ಶಾಲಾ ಮುಖ್ಯೋಪಾಧ್ಯಾಯರಾದ ಪ್ರೇಮಾನಂದ್  ಮತ್ತು ಆಡಳಿತ ಮಂಡಳಿ ಅಭಿನಂದಿಸಿ ಶುಭ ಹಾರೈಸಿದೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜು ವತಿಯಿಂದ ‘ಮೊಬೈಲ್ ಛಾಯಾಗ್ರಹಣದ ಮೂಲಕ ದೃಶ್ಯ ಸಂವಹನ’ ಕಾರ್ಯಕ್ರಮ ಎಂಬ ವಿಷಯದ ಕುರಿತು ವಿಶೇಷ ಕಾರ್ಯಕ್ರಮವು ಬುಧವಾರ ಕಾಲೇಜಿನ ಟಿ. ಮೋಹಂದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್‌ನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಉದಯವಾಣಿಯ ಹಿರಿಯ ಸುದ್ದಿ ಛಾಯಾಗ್ರಾಹಕ ಹಾಗೂ ಫೋಟೋ ಜರ್ನಲಿಸ್ಟ್ ಆಸ್ಟ್ರೋ ಮೋಹನ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮೊಬೈಲ್ ಛಾಯಾಗ್ರಹಣದ ಮೂಲಕ ಪರಿಣಾಮಕಾರಿ ದೃಶ್ಯ ಸಂವಹನ ನಡೆಸುವ ವಿಧಾನಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಛಾಯಾಚಿತ್ರದ ಮಹತ್ವ, ಸರಿಯಾದ ದೃಷ್ಟಿಕೋನ, ಬೆಳಕು, ಸಂಯೋಜನೆ ಹಾಗೂ ಸುದ್ದಿಯೊಂದನ್ನು ಚಿತ್ರಗಳ ಮೂಲಕ ಪರಿಣಾಮಕಾರಿಯಾಗಿ ಕಟ್ಟಿಕೊಡುವ ಕುರಿತು ಅವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್ ನಾಯಕ್ ಉಪಸ್ಥಿತರಿದ್ದರು. ಪ್ರಥಮ ಬಿಬಿಎ ವಿದ್ಯಾರ್ಥಿ ವಿಹಾನ್ ಸ್ವಾಗತ ಭಾಷಣ ಮಾಡಿದರು. ಕಾರ್ಯಕ್ರಮವನ್ನು ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಭೂಮಿಕಾ ಪಾಟ್ಕರ್ ನಿರೂಪಿಸಿದರು. ದ್ವಿತೀಯ ಬಿಬಿಎ ವಿದ್ಯಾರ್ಥಿನಿ ಕಮಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗೋಕರ್ಣ: ತುಪ್ಪದ ಬೆಲೆ ಸಮಾಜಕ್ಕೆ ತಿಳಿದಿಲ್ಲ. ಪುರಾಣ ಘೃತ, ಮಹಾಘೃತಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇವುಗಳ ಮೌಲ್ಯ ಸಮಾಜಕ್ಕೆ ಗೊತ್ತಾದರೆ ಬಹುಶಃ ಇವುಗಳಿಗೆ ಬಿಗಿ ಭದ್ರತೆಯನ್ನು ಒದಗಿಸುವ ಸಂದರ್ಭ ಬರಬಹುದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಹತ್ತು ವರ್ಷ ಹಳೆಯದಾದ ತುಪ್ಪವನ್ನು ಪುರಾಣ ಘೃತ, ಹತ್ತು ವರ್ಷದ ನಂತರದ ತುಪ್ಪವನ್ನು ಪ್ರಪುರಾಣ ಘೃತ, ನೂರು ವರ್ಷದ ತುಪ್ಪವನ್ನು ಕುಂಭ ಸರ್ಪಿ, ಮಹಾಘೃತ ಎಂದು ಕರೆಯಲಾಗಿದ್ದು, ಇವುಗಳು ಮಹೌಷಧವಾಗಿ ಕಾರ್ಯ ನಿರ್ವಹಿಸುತ್ತವೆ. ಯೋಗರತ್ನಾಕರವು ಮಹಾಘೃತದ ಕುರಿತಾಗಿ ಹೇಳುತ್ತಾ ಇದಕ್ಕೆ ಭೂತೋಚ್ಚಾಟನೆ ಮಾಡುವ ದೈವೀಶಕ್ತಿಯೂ ಇದೆ ಎಂಬುದನ್ನು ಉಲ್ಲೇಖಿಸಿದೆ. ತುಪ್ಪದ ಗುಣಗಳನ್ನು ಹೇಳಿ ಮುಗಿಯುವುದಲ್ಲ ಎಂದರು. ಕ್ಷೀರ ಕುಟುಂಬದ ವಿವಿಧ ಪದಾರ್ಥಗಳ ಆಯಸ್ಸು ಸಂಸ್ಕಾರವಾದಂತೆ ಹೆಚ್ಚುತ್ತಾ ಹೋಗುತ್ತದೆ. ಹಾಲು, ಮೊಸರು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿವರಾಮ ಕಾರಂತರ ಕಾದಂಬರಿಗಳಲ್ಲಿ ಬರುವ ಕಾರಂತಜ್ಜಿಯರು ಬರೇ ಸುಕ್ಕುಗಟ್ಟಿದ ವಯಸ್ಸಾದ ಅಜ್ಜಿಯರಲ್ಲ ಶತಶತಮಾನಗಳ ಪ್ರಬುದ್ಧತೆಯನ್ನು ವಿಚಾರಧಾರೆಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಮುದುಕಿಯರು ಎಂದು ಭಂಡಾರಕಾರ್ಸ್ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕಿಯಾದ ಡಾ. ರೇಖಾ ವಿ. ಬನ್ನಾಡಿ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಇಲ್ಲಿನ ಕನ್ನಡ ವಿಭಾಗ ಮತ್ತು ‘ಗಿಳಿವಿಂಡು’ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆ ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಹಯೋಗದೊಂದಿಗೆ “ಬಾರಿಸು ಕನ್ನಡ ಡಿಂಡಿಮವ” “ಗಿಳಿವಿಂಡು ಯಾನ ಮರಳಿ ಮನೆಗೆ” ಎಂಬ ಕಾರ್ಯಕ್ರಮದ ಅಂಗವಾಗಿ ನಡೆದ ‘ಕಾರಂತಜ್ಜಿಯರು’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು ಗಿಳಿವಿಂಡು ಇದರ ಅಧ್ಯಕ್ಷರಾದ ಬಿ. ಶಿವರಾಮ ಶೆಟ್ಟಿ ಅವರು ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ತಾನು ಕಲಿತ ಸಂಸ್ಥೆಯ ಋಣವಿರುತ್ತದೆ ಹಾಗಾಗಿ ಕಲಿತ ಸಂಸ್ಥೆಯನ್ನು ಎಂದಿಗೂ ಮರೆಯಬಾರದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸಾಹಿತ್ಯದ ಓದಿನ ಪ್ರಾಮುಖ್ಯತೆ ತಿಳಿಸಿ ನಮ್ಮದು ಕೊಲ್ಲುವ ಸಂಸ್ಕೃತಿಯಲ್ಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೂಟ ಮಹಾಜಗತ್ತು ಅಂಗಸಂಸ್ಥೆ ಸಾಲಿಗ್ರಾಮ ಅಂಗ ಸಂಸ್ಥೆಯ ಮಹಿಳಾ ವೇದಿಕೆಯ ಮಹಾಸಭೆ ಇತ್ತೀಚಿಗೆ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಜ್ಞಾನ ಮಂದಿರದಲ್ಲಿ ಜರಗಿತು.  ಮಹಿಳಾ ವೇದಿಕೆ ಅಧ್ಯಕ್ಷೆ ಯಶೋದ. ಸಿ.  ಹೊಳ್ಳ ಅವರು ಅಧ್ಯಕ್ಷತೆ ವಹಿಸಿದ್ದರು. ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ ಕಾರಂತ್ ಶುಭಾಶಂಸನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇಗುಲದ ಅಧ್ಯಕ್ಷ ಪ್ರಕಾಶ್ ಕಾರಂತ್ ಸಹ ಧರ್ಮದರ್ಶಿಗಳಾದ ಚಂದ್ರಶೇಖರ ಉಪಾಧ್ಯ ಚಿತ್ರಪಾಡಿ, ಪರಶುರಾಮ ಭಟ್ಟ ಎಡಬೆಟ್ಟು, ಎಂ. ಲಕ್ಷ್ಮೀನಾರಾಯಣ ಹೊಳ್ಳ, ಮರಿಕಾಪು, ಬಿ. ಚಂದ್ರಶೇಖರ ನಾವಡ ಬೈಂದೂರು, ಬಿ.ಜಿ .ಕೃಷ್ಣಮೂರ್ತಿ ಮಯ್ಯ ಕಾಸರವಳ್ಳಿ, ಕೆ. ತಾರಾನಾಥ ಹೊಳ್ಳ ಕಾರ್ಕಡ, ಪ್ರಸನ್ನ ತುಂಗ ಐರೋಡಿ, ಇವರನ್ನು ಗೌರವಿಸಲಾಯಿತು. ಕೋಟತಟ್ಟು ಪಡುಕೆರೆಯ  ಡಾ. ಮೇಘನಾ ನಾವಡ ಆಯುರ್ವೇದದ ಎಂ.ಡಿ. ಪದವಿಯಲ್ಲಿ (ಹ್ಯೂಮನ್ ಎನೋಟಮಿ) ಬೆಂಗಳೂರಿನ ಸರಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಚಿನ್ನದ ಪದಕ ಪಡೆದ ಹೆಗ್ಗಳಿಕೆಗಾಗಿ  ಸನ್ಮಾನಿಸಲಾಯಿತು.  ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ,ಅಶಕ್ತರಿಗೆ ನೆರವು ನೀಡಲಾಯಿತು. ಸಭೆಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) 2025–26ನೇ ಶೈಕ್ಷಣಿಕ ಸಾಲಿನ ವಿವಿಧ ಎಂಜಿನಿಯರಿಂಗ್ ವಿಭಾಗಗಳ ರ‍್ಯಾಂಕ್‌ ಪಟ್ಟಿಯಲ್ಲಿ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ (ಎಐಇಟಿ) ವಿದ್ಯಾರ್ಥಿಗಳು ಒಟ್ಟು 9 ರ‍್ಯಾಂಕ್‌ಗಳನ್ನು ಗಳಿಸಿ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಕೃಷಿ ಎಂಜಿನಿಯರಿಂಗ್ ವಿಭಾಗದಲ್ಲಿ ಪ್ರಜ್ಞಾಶ್ರೀ 2ನೇ ರ‍್ಯಾಂಕ್‌, ಪ್ರಾಪ್ತಿ ಎನ್.ಎಸ್. 4ನೇ ರ‍್ಯಾಂಕ್‌, ತೇಜಸ್ ಎ.ವಿ. 5ನೇ ರ‍್ಯಾಂಕ್‌ ಹಾಗೂ ನಿಹಾರ್ ಎಸ್. ಆಚಾರ್ಯ 7ನೇ ರ‍್ಯಾಂಕ್‌ ಗಳಿಸಿದ್ದಾರೆ. ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ (ಐಒಟಿ) ವಿಭಾಗದಲ್ಲಿ ಪ್ರಜ್ವಲ್ ಎಸ್.ಬಿ. 6ನೇ ರ‍್ಯಾಂಕ್‌ ಪಡೆದಿದ್ದಾರೆ. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗದಲ್ಲಿ ಮಧು ಮಹಾಂತೇಶ್ ಅವ್ವಕ್ಕನವರ್ 8ನೇ ರ‍್ಯಾಂಕ್‌ ಹಾಗೂ ಸಹನಾ ಬಸವರಾಜ ಅಸುಂಡಿ 10ನೇ ರ‍್ಯಾಂಕ್‌ ಗಳಿಸಿದ್ದಾರೆ. ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಎಲ್ವಿನ್ ಕ್ರಿಸ್ ಡಿಸೋಜಾ 4ನೇ ರ‍್ಯಾಂಕ್‌ ಹಾಗೂ ಕಂಪ್ಯೂಟರ್ ಸೈನ್ಸ್ ಮತ್ತು ಡಿಸೈನ್ ವಿಭಾಗದಲ್ಲಿ ಮೌನಶ್ರೀ ಡಿ.ಪಿ. 6ನೇ ರ‍್ಯಾಂಕ್‌ ಗಳಿಸಿದ್ದಾರೆ. ವಿದ್ಯಾರ್ಥಿಗಳ…

Read More