ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೇರಳದಿಂದ ಬಂದು ಖಂಬದಕೋಣೆಯಲ್ಲಿ ನೆಲೆಸಿ ಸುದೀರ್ಘ ಕಾಲ ಆಯುರ್ವೇದ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಶತಾಯುಷಿ ಕೆ. ವಿ. ಗೋವಿಂದನ್ ನಂಬಿಯಾರ್(೧೦೧) ಕೇರಳದ ತಳಿಪರಂಂಬದ ತಮ್ಮ ಮಗನ ಮನೆಯಲ್ಲಿ ಗುರುವಾರ ನಿಧನರಾದರು. ಅವರು ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ವೈದ್ಯಕೀಯ ಸೌಲಭ್ಯ ಅಲಭ್ಯವಾಗಿದ್ದ ಕಾಲದಲ್ಲಿ ಖಂಬದಕೋಣೆ ಸುತ್ತಲಿನ ಜನರ ಮನೆವೈದ್ಯರಾಗಿ ಸೇವೆ ಸಲ್ಲಿಸಿದ್ದ ನಂಬಿಯಾರ್, ವಿಷಜಂತು ಚಿಕಿತ್ಸೆಯಲ್ಲಿ ಪರಿಣತಿ ಹೊಂದಿ, ಹಲವು ಜೀವಗಳನ್ನು ಉಳಿಸಿರುವುದನ್ನು ಅಲ್ಲಿನ ಜನ ಸ್ಮರಿಸುತ್ತಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಟ್ರಸ್ಟ್ ನಾವುಂದ ಗರಡಿಯ ಆಡಳಿತ ಮೊಕ್ತೇಸರ ಹಾಗೂ ಕಾರ್ಯದರ್ಶಿ ಶೇಖರ ಎಮ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಿದ ಗರಡಿಯ ಆಡಳಿತ ಸಮಿತಿಯ ಸಭೆಯಲ್ಲಿ ಗರಡಿಯ ಮುಂಬೈ ಕಮಿಟಿಯ ಈಗಿನ ಅಧ್ಯಕ್ಷರಾಗಿರುವ ಡಾ. ಎನ್ ಕೆ ಬಿಲ್ಲವ ಇವರನ್ನು ಬ್ರಹ್ಮ ಬೈದರ್ಕಳ ಗರಡಿ ಟ್ರಸ್ಟ್ ನಾವುಂದ ಇದರ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಹಾಗೂ ಉಪಾಧ್ಯಕ್ಷರಾಗಿ ಗರಡಿ ಮನೆಯ ನಾಗೇಶ್ ಪಿ ಪೂಜಾರಿ ಇವರನ್ನು ಆಯ್ಕೆ ಮಾಡಲಾಯಿತು, ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಮುತ್ತ ಬಿಲ್ಲವ ಇವರನ್ನು ಗೌರವಿಸಿದರು. ಗರಡಿಯ ಬಲ್ಲಾಳ ಚಂದ್ರಶೇಖರ ಶೆಟ್ಟಿ, ನಿವೃತ್ತ ಶಿಕ್ಷಕ ಸೀತಾರಾಮ ಪೂಜಾರಿ, ಆರ್ ಕೆ ಬಿಲ್ಲವ, ರಾಜು ಪೂಜಾರಿ ಬಾಳಿತ್ಲು, ಮೋಹನ ಪೂಜಾರಿ ಬಾಳಿತ್ಲು ಉಪಸ್ಥಿತರಿದ್ದರು. ತಾಲೂಕು ಪಂಚಾಯತಿ ಸದಸ್ಯ ಹಕ್ಕಾಡಿ ಜಗದೀಶ ಪೂಜಾರಿ, ರಾಜೀವ ಶೆಟ್ಟಿ ನೂತನ ಅಧ್ಯಕ್ಷರಿಗೆ ಅಭಿನಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ದುರ್ಗಮ್ಮ ಖಾರ್ವಿ ಹಾಗೂ ಮಾಜಿ ಉಪಾಧ್ಯಕ್ಷೆ ಸಿಂಗಾರಿ ಶೆಡ್ತಿಯವರು ಕಾಂಗ್ರೇಸ್ ಪಕ್ಷದ ಕಾರ್ಯ ವೈಖರಿಗೆ ಬೇಸತ್ತು, ಭಾರತೀಯ ಜನತಾ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಪರ್ವವನ್ನು ಮೆಚ್ಚಿ ಭಾರತೀಯ ಜನತಾ ಪಕ್ಷದ ಬೈಂದೂರು ಕ್ಷೇತ್ರಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿಯವರ ಸಮ್ಮುಖದಲ್ಲಿ ಬಿಜೆಪಿಗೆ ಬೈಂದೂರು ಬಿಜೆಪಿ ಕಚೇರಿಯಲ್ಲಿ ಇಂದು ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ ಉಪ್ಪುಂದ, ಜಿಲ್ಲಾ ಯುವ ಮೊರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಬೈಂದೂರು ಮಂಡಲ ಉಪಾಧ್ಯಕ್ಷ ಗಣೇಶ್ ಗಾಣಿಗ ಉಪ್ಪುಂದ, ಶಿರೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ ಮೊಗವೀರ ಉಪ್ಪುಂದ, ಉಪ್ಪುಂದ ಶಕ್ತಿ ಕೇಂದ್ರದ ಅಧ್ಯಕ್ಷ ದಿವಾಕರ ಶೆಟ್ಟಿ ನೆಲ್ಯಾಡಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಮೋಹನ ಚಂದ್ರ ಉಪ್ಪುಂದ ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಬುಧವಾರ ನಡೆದ ಪಕ್ಷದ ಕಾರ್ಯಕರ್ತರ ಹಾಗೂ ಪದಾಧಿಕಾರಿಗಳ ಸಭೆ ನಡೆಯಿತು. ಮಾಜಿ ಸಚಿವ ವಿನಯ ಕುಮಾರ ಸೊರಕೆ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಶೇ 60 ರಷ್ಟು ಅನುದಾನಗಳು ಗ್ರಾಮ ಪಂಚಾಯಿತಿ ಯೋಜನೆಗಳ ಮೂಲಕವೇ ಅನುಷ್ಠಾನ ಆಗುವುದರಿಂದ ರಾಜಕೀಯ ಪಕ್ಷಗಳಿಗೆ ಅತ್ಯಂತ ಪ್ರಾಮುಖ್ಯ ಚುನಾವಣೆ ಇದಾಗಿದ್ದು, ಗ್ರಾಮ ಮಟ್ಟದಿಂದಲೇ ಪಕ್ಷ ಸಂಘಟನೆಗೆ ಕಾಂಗ್ರೆಸ್ ಪ್ರಯತ್ನ ನಡೆಸಲಿದೆ’ ಕೋವಿಡ್ ಹೆಸರಿನಲ್ಲಿ ಭ್ರಷ್ಟಾಚಾರ ಮಾಡಿರುವುದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ. ಸಿದ್ದರಾಮಯ್ಯ ಸರ್ಕಾರ ನೀಡಿದ ಅನ್ನಭಾಗ್ಯದ ಸಹಾಯ ದೊರಕದೆ ಇದ್ದರೆ ಎಷ್ಟೋ ಜನರು ಉಪವಾಸ ಬೀಳುವ ಸಾಧ್ಯತೆಗಳಿದ್ದವು. ನರೇಗಾದಿಂದ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಲಭಿಸಿದೆ. ಸಂಬಳ, ಪರಿಹಾರ, ಅಭಿವೃದ್ಧಿಗೆ ಅನುದಾನ ನೀಡಲು ಹಣ ಇಲ್ಲದೆ ಇರುವ ಸರ್ಕಾರ ರಾಜ್ಯದಲ್ಲಿ ಇದ್ದೂ ಇಲ್ಲದಂತೆ ಇದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಭಾವನಾತ್ಮಕ ಹಾಗೂ ಸುಳ್ಳು ಪ್ರಚಾರದೊಂದಿಗೆ ಚುನಾವಣೆ ಎದುರಿಸುವ ಬಿಜೆಪಿಯವರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಾಧನಾ ಸಮುದಾಯ ಭವನದಲ್ಲಿ ನಡೆಯಿತು. ಕಳೆದ ಸಾಲಿನಲ್ಲಿ ರೂ7.19 ಲಕ್ಷ ನಿವ್ವಳ ಲಾಭ ಗಳಿಸಿದೆ. ಆ ಹಿನ್ನೆಲೆಯಲ್ಲಿ ಸದಸ್ಯರಿಗೆ ಶೇ 20 ಡಿವಿಡೆಂಡ್ ನೀಡಲು ನಿರ್ಧರಿಸಲಾಯಿತು. ಸಂಘದ ಅಧ್ಯಕ್ಷ ಶಂಕರ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದಿನ ವರ್ಷದ ವರದಿ ಮತ್ತು ಆಯವ್ಯಯ ಮಂಡಿಸಿದ ವಿಮಲಾ, ಸಂಘವು ಈಗ ದಿನಕ್ಕೆ 850 ಲಿಟರ್ ಹಾಲು ಸಂಗ್ರಹಿಸುತ್ತಿದೆ. ವರ್ಷದಲ್ಲಿ ಒಟ್ಟು ರೂ 1.2ಕೋಟಿ ಮೌಲ್ಯದ ಹಾಲು ಸಂಗ್ರಹಿಸಿ, ಒಕ್ಕೂಟಕ್ಕೆ ರೂ 1.21 ಕೋಟಿ ಮತ್ತು ಸ್ಥಳೀಯವಾಗಿ ರೂ 12 ಲಕ್ಷ ಬೆಲೆಯ ಹಾಲನ್ನು ಮಾರಾಟ ಮಾಡಿದೆ. ಪಶು ಆಹಾರ ವ್ಯವಹಾರದಿಂದ ರೂ12.92ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಸರ್ಕಾರದಿಂದ ರೂ 20.24 ಲಕ್ಷ ಪ್ರೋತ್ಸಾಹಧನ ಲಭಿಸಿದೆ ಎಂದರು. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಕೆ. ಮನೋಹರ, ವಿಸ್ತರಣಾಧಿಕಾರಿ ರಾಜಾರಾಮ ಸಂಘದ ಸಾಧನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಶೀತ, ಕೆಮ್ಮು, ಜ್ವರ ಹಾಗೂ ಐ.ಎಲ್.ಐ ಚಿಕಿತ್ಸೆಗೆ ಬರುವ ರೋಗಿಗಳಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ಗಳನ್ನು ಮಾಡಿಸಬೇಕು, ತಪ್ಪಿದ್ದಲ್ಲಿ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳ ನೊಂದಣಿಯನ್ನು ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಾ ಪ್ರಾಧಿಕಾರದ ಕುಂದು ಕೊರತೆ ನಿವಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಜನರು ಕೋವಿಡ್ ಸೋಂಕಿನ ಬಗ್ಗೆ ನಿರ್ಲಕ್ಷ ವಹಿಸುತ್ತಿದ್ದಾರೆ. ಇದರಿಂದಾಗಿ ಎರಡನೇ ಅಲೆ ಪ್ರಾರಂಭವಾಗುವ ಸಾಧ್ಯತೆಗಳಿವೆ. ಇದಕ್ಕೆ ಕಡಿವಾಣ ಹಾಕಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೆಮ್ಮು, ಶೀತ, ಜ್ವರ ಹಾಗೂ ಐ.ಎಲ್.ಐ ಚಿಕಿತ್ಸೆ ಪಡೆಯಲು ಬಂದಂತಹ ರೋಗಿಗಳಿಗೆ ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಸಬೇಕು. ಖಾಸಗಿ ವೈದ್ಯಕೀಯ ಸಂಸ್ಥೆಗಳು ರೋಗಿಗಳ ಬಗ್ಗೆ ನಿಖರ ಮಾಹಿತಿಯನ್ನು ನೀಡಬೇಕು ಎಂದರು. ಜಿಲ್ಲೆಯಲ್ಲಿ ವೈದ್ಯಕೀಯ ವೃತ್ತಿಯನ್ನು ಪ್ರಾರಂಭಿಸುವ ಮುನ್ನ ಜಿಲ್ಲಾ ಮಟ್ಟದ ನೋಂದಣಿ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಂಕರನಾರಾಯಣದಿಂದ ಹಾಲಾಡಿ ಕಡೆಗೆ ಬರುತ್ತಿದ್ದ ಶಿಫ್ಟ್ ಕಾರು ಹಾಲಾಡಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ (60) ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಹದ್ದೂರು ರಾಜೀವ ಶೆಟ್ಟಿ ಅವರು ಶಂಕರನಾರಾಯಣದಿಂದ ಹಾಲಾಡಿ ಕಡೆಗೆ ಬರುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿಯಾದ ಪರಿಣಾಮ ರಾಜೀವ ಶೆಟ್ಟಿ ಅವರು ಗಂಭೀರ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿಮಧ್ಯೆಯೇ ಅವರು ಅಸುನೀಗಿದ್ದಾರೆ. ಹದ್ದೂರು ರಾಜೀವ ಶೆಟ್ಟಿಯವರು ವಿವಿಧ ಸಮಾಜಸೇವಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು ಶಂಕರನಾರಾಯಣ ಮಂಡಲ ಪಂಚಾಯತ್ ಅಧ್ಯಕ್ಷರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ತಾಲೂಕು ಪಂಚಾಯತ್ ಸದಸ್ಯರಾಗಿ, ಕೆ.ಎಂ.ಎಫ್. ನಿರ್ದೇಶಕರಾಗಿ, ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪ್ರಸ್ತುತ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಉಡುಪಿ ಜಿಲ್ಲಾ ರೈತ ಸಂಘದ ಸದಸ್ಯರಾಗಿರುವ ಇವರು ಓರ್ವ ಪ್ರಗತಿಪರ ಕೃಷಿಕರು. ಹೈನುಗಾರಿಕೆಯಲ್ಲೂ ತೊಡಗಿಸಿಕೊಂಡಿದ್ದು ಬೈಲೂರು ಹಾಲುತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉತ್ತರ ಪ್ರದೇಶದ ಉನ್ನವೊ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಬಿಜೆಪಿಯ ಹಿರಿಯ ಸಂಸದ ಸಾಕ್ಷಿ ಮಹಾರಾಜ್ ತೆಕ್ಕಟ್ಟೆಯ ಸಮೀಪದ ಕೊಮೆಯಲ್ಲಿ ಡಾ.ತನ್ಮಯ ಗೋಸ್ವಾಮಿ ನಡೆಸುತ್ತಿರುವ ಆಯುರ್ವೇದ ಆಶ್ರಮದಲ್ಲಿ ಪಂಚಕರ್ಮ ಹಾಗೂ ಪ್ರಕೃತಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಉತ್ತರ ಪ್ರದೇಶದಿಂದ ದೂರದ ಕರ್ನಾಟಕದ ಕರಾವಳಿಯ ಸೊಬಗಿಗೆ ಮನಸೋತು ಇಲ್ಲಿಗೆ ಬಂದಿರುವುದೇ ವಿಶೇಷ. ದೇಶದ ಕೆಲವೇ ಮಂದಿಗೆ ಇರುವ ವೈ – ಪ್ಲಸ್ ಭದ್ರತೆಯನ್ನು ಹೊಂದಿರುವ ಅವರು ಇದನ್ನೆಲ್ಲ ಮರೆತು ಆಯುರ್ವೇದ ಆಶ್ರಮದ ವೈದ್ಯ ಡಾ. ತನ್ಮಯ ಗೋಸ್ವಾಮಿ ಅವರ ಸಲಹೆಗೆ ಮೈ ಚೆಲ್ಲಿ ವಿಶ್ರಾಂತಿ ಅನುಭವಿಸುತ್ತಿದ್ದಾರೆ. ಸಾಕ್ಷಿ ಮಹಾರಾಜ್ ಅವರಿಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ಮಾತನಾಡಿದ ಆಶ್ರಮದ ಮುಖ್ಯಸ್ಥ ಡಾ.ತನ್ಮಯ್ ಗೋಸ್ವಾಮಿ ಬೆಳಿಗ್ಗೆ ಯೋಗಾಭ್ಯಾಸದಿಂದ ಚಿಕಿತ್ಸೆ ಪ್ರಾರಂಭವಾಗುತ್ತದೆ. ಮಧ್ಯಾಹ್ಮದವರೆಗೂ ಪಂಚಕರ್ಮದ ಪದ್ಧತಿಯಲ್ಲಿ ಚಿಕಿತ್ಸೆ ನೀಡಿ ದೇಹವನ್ನು ಹದಗೊಳಿಸಲಾಗುತ್ತದೆ. ಮಧ್ಯಾಹ್ಮ ಹಾಗೂ ರಾತ್ರಿ ಲಘು ಆಹಾರ. ಸಂಜೆ ಧ್ಯಾನ ಹಾಗೂ ಸಮುದ್ರ ದಂಡೆಯಲ್ಲಿ ವಾಯುವಿಹಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಮತ್ತು ಮನೆಲ್ ಶ್ರೀನಿವಾಸ ನಾಯಕ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಮಂಗಳೂರು ಇವರು, ಎರಡೂ ಸಂಸ್ಥೆಗಳ ಪ್ರಾಧ್ಯಾಪಕರ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಕೊಡುಕೊಳ್ಳುವಿಕೆಗಾಗಿ ಒಡಂಬಡಿಕೆ ಪತ್ರಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹಾಗೂ ಮನೆಲ್ ಶ್ರೀನಿವಾಸ ನಾಯಕ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮಂಗಳೂರಿನ ನಿರ್ದೇಶಕರಾದ ಡಾ. ಮೋಲಿ ಚೌಧರಿ ಸಹಿ ಹಾಕುವ ಮೂಲಕ ಸಮ್ಮತಿ ಸೂಚಿಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಮನೆಲ್ ಶ್ರೀನಿವಾಸ ನಾಯಕ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಹಾಯಕ ಪ್ರಾಧ್ಯಾಪಕ ಡಾ. ಶರಣ್ ಕುಮಾರ್ ಶೆಟ್ಟಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್, ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥೆ ನಂದಾ ರೈ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರಿನಲ್ಲಿ ನ್ಯಾಯಾಲಯಗಳಿಗೆ ನಿವೇಶನ ಕಾಯ್ದಿರಿಸುವ ಪ್ರಕ್ರಿಯೆ ನಡೆಯುತ್ತಿದೆ. ಕಂದಾಯ ಇಲಾಖೆ ನ್ಯಾಯಾಂಗ ಇಲಾಖೆಗೆ ನಿವೇಶನ ಹಸ್ತಾಂತರಿಸಿದ ಬಳಿಕ ನ್ಯಾಯಾಲಯ ಆರಂಭಿಸಲಾಗುವುದು ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ(ಆಡಳಿತ) ಅಶೋಕ ಎಸ್. ಕಿಣಗಿ ಭರವಸೆ ನೀಡಿದರು. ಉಡುಪಿ ಜಿಲ್ಲಾ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ. ಎನ್ ಅವರೊಂದಿಗೆ ಬೈಂದೂರಿಗೆ ಭೇಟಿನೀಡಿ ಸ್ಥಳ ಪರಿಶೀಲನೆ ನಡೆಸಿದ ಅವರನ್ನು ಭೇಟಿಯಾದ ಬೈಂದೂರು ಹಿತರಕ್ಷಣಾ ವೇದಿಕೆಯ ನಿಯೋಗಕ್ಕೆ ಭರವಸೆ ನೀಡಿದರು. ಬೈಂದೂರು ತಾಲ್ಲೂಕು ರಚನೆಯಾಗಿ ಮೂರು ವರ್ಷಗಳು ಕಳೆದಿವೆ. ಕುಂದಾಪುರದಿಂದ 35 ಕಿ.ಮೀ. ದೂರದಲ್ಲಿರುವ ಬೈಂದೂರಿನಲ್ಲಿ ನ್ಯಾಯಾಲಯ ಸ್ಥಾಪಿಸಬೇಕು ಎಂಬ ಆಗ್ರಹ ಅದಕ್ಕಿಂತ ಹಿಂದಿನದು. ಈಗಾಗಲೇ ಅದಕ್ಕೆ ಎರಡು ಎಕರೆ ನಿವೇಶನ ಗುರುತಿಸಲಾಗಿದೆ. ಶೀಘ್ರ ಬಾಡಿಗೆ ಕಟ್ಟಡದಲ್ಲಿ ನ್ಯಾಯಾಲಯ ಆರಂಭಿಸಬೇಕು’ ಎಂದು ನಿಯೋಗ ಅವರನ್ನು ವಿನಂತಿಸಿ ಮನವಿ ಸಲ್ಲಿಸಿತು. ವೇದಿಕೆಯ ಅಧ್ಯಕ್ಷ ಜಗದೀಶ ಪಟವಾಲ್, ಕಾರ್ಯದರ್ಶಿ ಪ್ರಕಾಶ ಬೈಂದೂರು, ಸದಸ್ಯ ಸುಬ್ರಹ್ಮಣ್ಯ ಶೇಟ್, ವಕೀಲ ಧನಂಜಯ ಶೆಟ್ಟಿ ನಿಯೋಗದಲ್ಲಿದ್ದರು.
