ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜನವರಿ ಎರಡನೇ ವಾರದಲ್ಲಿ ನಗರದಲ್ಲಿ ಸಾಂಸ್ಕೃತಿಕ ಉತ್ಸವ ಆಚರಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವುದರೊಂದಿಗೆ ವಿಜೃಂಭಣೆಯಿಂದ ಆಚರಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಸಾಂಸ್ಕೃತಿಕ ಉತ್ಸವ ಆಯೋಜಿಸುವ ಕುರಿತು ಚರ್ಚಿಸಲು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ನಾಡಿನ ಕಲೆ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವಂತಹ ಅದರಲ್ಲೂ ವಿಶೇಷವಾಗಿ ಯುವಜನರು ಈ ಬಗ್ಗೆ ಉತ್ತೇಜಿಸುವ ರೀತಿಯಲ್ಲಿ ಸಾಂಸ್ಕೃತಿಕ ಉತ್ಸವವನ್ನು ಉಡುಪಿ ನಗರದಲ್ಲಿ ಆಯೋಜಿಸಲು ವ್ಯವಸ್ಥಿತವಾದ ರೂಪು ರೇಷೆಗಳನ್ನು ಮಾಡಿಕೊಳ್ಳುವುದರೊಂದಿಗೆ ಆಯೋಜಿಸಲು ಇಂದಿನಿಂದಲೇ ತಯಾರಿ ನಡೆಸಬೇಕೆಂದು ಸೂಚನೆ ನೀಡಿದರು. ಉತ್ಸವದ ಅಂಗವಾಗಿ ನಗರದ ಪ್ರಮುಖ ಬೀದಿಗಳನ್ನು ವಿದ್ಯುತ್ ದೀಪಾಲಂಕಾರಗಳಿಂದ ಆಕರ್ಷಕವಾಗಿ ಪ್ರಜ್ವಲಿಸುವಂತಹ ರೀತಿಯಲ್ಲಿ ದೀಪಗಳನ್ನು ಅಳವಡಿಸಬೇಕು. ಇವುಗಳ ಅಳವಡಿಕೆಗೆ ಖರ್ಚು ವೆಚ್ಚಗಳನ್ನು ಭರಿಸಲು ಅನುಕೂಲವಾಗುವಂತೆ ಪ್ರಾಯೋಜಕರನ್ನು ಸಂಪರ್ಕಿಸಬೇಕು. ಉತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಸ್ಥಳೀಯ ಉತ್ತಮ ಕಲಾವಿದರು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಕ್ಕಳು ಈ ದೇಶದ ಆಸ್ತಿ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎನ್ನುವ ಮಾತು ದೇಶದಲ್ಲಿ ಪ್ರಚಲಿತವಾಗಿದೆ. ಆದರೆ ಮಕ್ಕಳ ರಕ್ಷಣೆಯ ಕ್ಷೇತ್ರದಲ್ಲಿ ತೊಡಗಿರುವ ಕಾರ್ಯಕರ್ತರಿಗೆ ಮಕ್ಕಳಿಗೆ ಸಂಬಂಧಿಸಿದ ಮಾಹಿತಿ, ಅವರ ಹಕ್ಕುಗಳು, ರಕ್ಷಣೆ ಮತ್ತು ಕಾಯ್ದೆಗಳ ಬಗ್ಗೆ ಮಾಹಿತಿಯ ಕೊರತೆ ಇದ್ದು ಅದನ್ನು ನೀಗಿಸುವ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳ ರಕ್ಷಣೆಯ ಕ್ಷೇತ್ರದಲ್ಲಿ ತೊಡಗಿರುವವರು ಮಕ್ಕಳ ಕಾನೂನುಗಳ ಬಗ್ಗೆ ಸ್ಪಷ್ಟ ಮಾಹಿತಿ ಹೊಂದಿದ್ದಾಗ ಮಕ್ಕಳಿಗೆ ಪರಿಣಾಮಕಾರಿಯಾಗಿ ನ್ಯಾಯ ದೊರೆಯುತ್ತದೆ. ಮಕ್ಕಳ ನ್ಯಾಯವನ್ನು ಖಚಿತ ಪಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು ಸರ್ಕಾರ ಮಕ್ಕಳ ಹಕ್ಕುಗಳ ರಕ್ಷಣೆಗೆ ಬದ್ದವಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಹೇಳಿದರು. ಅವರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆಯು ಸಂಸ್ಥೆಯ ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಕುಂದಾಪುರ ಪೋಲಿಸ್ ಸಬ್ ಇನ್ಸಪೆಕ್ಟರ್ ನಂಜಾ ನಾಯ್ಕ್ ಎನ್. ಅವರು ಮಾತನಾಡಿ, ಎಸ್.ಎಸ್.ಎಲ್.ಸಿ ಪರೀಕ್ಷಾ ತಯಾರಿಯಲ್ಲಿ ಪೋಷಕರ ಪಾತ್ರ ಹಾಗೂ ಫೋನಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪೋಷಕರು ತಮ್ಮ ಮಕ್ಕಳ ಎಲ್ಲಾ ಚಲನವಲನಗಳನ್ನು ನಿಗಾವಹಿಸಿ, ಅವರನ್ನು ಸಮಾಜದ ಹಾಗೂ ದೇಶದ ಉತ್ತಮ ಪ್ರಜೆಗಳನ್ನಗಿ ರೂಪಿಸಬೇಕೆಂದು ತಿಳಿಸಿದರು. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದಾ ಸಂದೀಪ್ ಗಾಣಿಗ ಹಾಗೂ ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಅವರು ಉಪಸ್ಥಿತರಿದ್ದರು. ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ ಅವರು ಸ್ವಾಗತಿಸಿ, ಸಹ ಶಿಕ್ಷಕಿ ಆಶಾಬಾಯಿ ಕಾರ್ಯಕ್ರಮ ನಿರೂಪಿಸಿ, ಪ್ರೌಢಶಾಲಾ ವಿಭಾಗದ ಸಂಯೋಜಕ ಶಿಕ್ಷಕರಾದ ಮಾಧವ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಬೀದಿ ನಾಯಿಗಳು ಹಾಗೂ ಬೀಡಾಡಿ ದನಗಳ ನಿಯಂತ್ರಣಕ್ಕೆ ಹಾಗೂ ಎಲ್ಲಾ ಪ್ರಾಣಿಗಳ ಜನನ ನಿಯಂತ್ರಣಕ್ಕೆ ಈಗಾಗಲೇ ಸವೋಚ್ಛ ನ್ಯಾಯಾಲಯವು ನಿರ್ದೇಶನ ನೀಡಿದ್ದು, ಅವುಗಳನ್ನು ಅನುಷ್ಠಾನಗೊಳಿಸಬೇಕು. ಬೀಡಾಡಿ ಪ್ರಾಣಿಗಳ ಆಶ್ರಯಕ್ಕೆ ಅಗತ್ಯವಿರುವ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಖಾಸಗಿ, ಸರ್ಕಾರಿ ಶಿಕ್ಷಣ ಸಂಸ್ಥೆಗಳು,ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ಬೀದಿ ನಾಯಿಗಳ ಹೆಚ್ಚುತ್ತಿರುವ ಹಾವಳಿ, ಅದರ ಪರಿಣಾಮವಾಗಿ ಉಂಟಾಗಬಹುದಾದದ ಅಪಾಯಗಳನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯವು ನಿರ್ದೇಶನಗಳನ್ನು ನೀಡಿದ್ದು, ಅವುಗಳನ್ನು ತಪ್ಪದೇ ಪಾಲಿಸುವುದರೊಂದಿಗೆ ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದರು. ಈಗಾಗಲೇ ರೈಲ್ವೆ ಹಾಗೂ ಬಸ್ ನಿಲ್ದಾಣ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರಾಮಕೃಷ್ಣ – ವಿವೇಕಾನಂದ ಭಾವ ಪ್ರಚಾರ ಪರಿಷತ್ ಕರ್ನಾಟಕ ವಿವೇಕ ವಿದ್ಯಾರ್ಥಿ – 2025, ಅವರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸುವ ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ಕೋಟ ವಿವೇಕ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಸಂಕಲ್ಪ್ ಕುಮಾರ್ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಗಳಿಸಿರುತ್ತಾನೆ. ಈತ ಕುಂಭಾಶಿಯ ಶಿಲ್ಪ ಹಾಗೂ ಡಾ. ಸಂಪತ್ ಕುಮಾರ್ ಅವರ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇಂದ್ರ ತೆಂಗು ಅಭಿವೃದ್ಧಿ ಮಂಡಳಿಯ ವತಿಯಿಂದ ಜಿಲ್ಲಾ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರವು ಜನವರಿ 12ರಂದು ನಡೆಯಲಿದೆ ಎಂದು ಉಡುಪಿ – ಚಿಕ್ಕಮಂಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ತೆಂಗು ಅಭಿವೃದ್ಧಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರವನ್ನು ಕುಂದಾಪುರ ತಾಲೂಕಿನಲ್ಲಿ ಆಯೋಜಿಸಲು ತಿಳಿಸಿದ ಅವರು, ಇದಕ್ಕಾಗಿ ಎರಡು ದಿನಗಳ ಒಳಗಾಗಿ ಸ್ಥಳ ಗುರುತಿಸುವುದರೊಂದಿಗೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ 16,252 ಹೆಕ್ಟೇರ್ ತೆಂಗು ಬೆಳೆ ಪ್ರದೇಶವನ್ನು ಹೊಂದಿದ್ದು, ಕರಾವಳಿ ಭಾಗದಲ್ಲಿ ಜೇಡಿ ಮತ್ತು ಮರಳು ಮಿಶ್ರಿತ ಮಣ್ಣು ಜೊತೆಗೆ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮಳೆಯಾಗಿರುವುದರಿಂದ ತೆಂಗು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲುಕಟ್ಟೆ ತಾಂತ್ರಿಕ ವಿದ್ಯಾಲಯ ಎಂಬಿಎ ವಿಭಾಗದ ವತಿಯಿಂದ ಏಳು ದಿನಗಳ ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮೊದಲ ಮೂರು ದಿನ ಐಸ್ ಕ್ಯೂ ಲರ್ನಿಂಗ್ ನಾಗೇಶ್ವರ್ ರಾವ್ ಅವರು ಆಗಮಿಸಿ ಆಪ್ಟಿಟ್ಯೂಡ್ ಸ್ಕಿಲ್ ಹಾಗೂ ನಂತರದ ನಾಲ್ಕು ದಿನ ಕಾರ್ಪೊರೇಟ್ ಟ್ರೈನರ್ ಆಶಾ ಅವರು ಆಗಮಿಸಿ ವಿದ್ಯಾರ್ಥಿಗಳಿಗೆ ಎಕ್ಸೆಲ್ ಮತ್ತು ಪವರ್ ಬಿಐ ತರಬೇತಿ ಕೈಕೊಂಡರು. ಈ ತರಬೇತಿಯಲ್ಲಿ ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಾಳಾವರ ಗ್ರಾಮದ ಅರೆಕಲ್ಲು ಜನತಾ ಕಾಲೂನಿ ಹತ್ತಿರದ ಹಾಡಿಯಲ್ಲಿ ಹಣವನ್ನು ಪಣವಾಗಿಟ್ಟು ಇಸ್ಪೀಟ್ ಜೂಗಾರಿ ಆಟ ಆಡುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿದ ಕುಂದಾಪುರ ಪೊಲೀಸರು ಮೂವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಾದ ರಾಕೇಶ್ (24), ಮ್ಯಾಕ್ಸಿ ರೋಶನ್ (39), ಸತೀಶ್ (37) ಎಂಬುವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಇಸ್ಪೀಟ್ ಜುಗಾರಿ ಆಟಕ್ಕೆ ಬಳಸಿದ ಹಣ 4,450/- ರೂಪಾಯಿ, ಇಸ್ಪೀಟ್ ಎಲೆಗಳು 52, ಹಳೆಯ ನ್ಯೂಸ್ ಪೇಪರ್ ಸ್ವಾದೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಹಕಾರ ಕ್ಷೇತ್ರ ಪ್ರಬಲವಾಗಿ ಬೆಳೆದಿದ್ದು ವಾಣಿಜ್ಯ ಬ್ಯಾ೦ಕುಗಳಿಗಿ೦ತ ಸಹಕಾರ ವ್ಯವಸ್ಥೆ ಜನಸಾಮಾನ್ಯರಿಗೆ ಆಪ್ತವಾಗಿದೆ. ಗ್ರಾಮೀಣ ಜನರಿಗೆ ಸಹಕಾರ ಕ್ಷೇತ್ರದ ಮೂಲಕ ಸಹಾಯ ಮಾಡಲು ಸಾಧ್ಯವಿದೆ. ಹಾಗಾಗಿ ಸಹಕಾರ ಭಾರತಿ ಈ ಕ್ಷೇತ್ರ ಸದಾ ಕ್ರಿಯಾಶೀಲವಾಗಿದ್ದು, ಪ್ರಾಬಲ್ಯತೆ ಸಾಧಿಸಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಸಹಕಾರ ಭಾರತಿ, ಕು೦ದಾಪುರ ತಾಲೂಕು ವತಿಯಿಂದ ಇಲ್ಲಿನ ಮೊಗವೀರ ಭವನದಲ್ಲಿ ನಡೆದ ತಾಲೂಕು ಅಭ್ಯಾಸ ವರ್ಗ-2025 ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಹಕಾರ ಭಾರತಿ ಇನ್ನಷ್ಟು ಪ್ರಬಲವಾಗಲು ನಮ್ಮ ಸಹಕಾರಿಗಳು ಪ್ರಯತ್ನಿಸಬೇಕು. ಸಹಕಾರ ಸಂಸ್ಥೆಗಳ ಚುನಾವಣೆ ಸಂದರ್ಭದಲ್ಲಿ ಮಾತ್ರ ಸನ್ನದ್ಧರಾಗದೆ ಸದಾ ಚಟುವಟಿಕೆಯಿಂದ ಇರಬೇಕು. ನಮ್ಮ ಉದ್ದೇಶ ಜನರಿಗೆ ಹೆಚ್ಚು ಸಹಕಾರ ನೀಡುವುದು. ಸಹಕಾರ ವ್ಯವಸ್ಥೆಯ ಮೂಲಕ ಸಾರ್ವಜನಿಕರಿಗೆ ನೆರವಾಗೋಣ ಎಂದರು. ಮುಖ್ಯ ಅತಿಥಿಯಾಗಿದ್ದ ಸಹಕಾರ ಭಾರತಿ ಜಿಲ್ಲಾ ಅಧ್ಯಕ್ಷರಾದ ದಿನೇಶ ಹೆಗ್ಡೆ ಅತ್ರಾಡಿ ಮಾತನಾಡಿ, ಉಡುಪಿ ಜಿಲ್ಲೆಯ ಎಲ್ಲಾ ತಾಲೂಕು ಸಹಕಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ದೇವಾಡಿಗ ನವೋದಯದ ಸಂಘ ಬೆಂಗಳೂರು ರಿ. ಇವರ ಆಶ್ರಯದಲ್ಲಿ 2026ನೇ ಇಸವಿಯ ದಿನದರ್ಶಿಕೆ ಬಿಡುಗಡೆ ಸಮಾರಂಭವು ಭಾನುವಾರ ಹೋಟೆಲ್ ಸಿಂಧೂರ ಗಾರ್ಡೆನಿಯ ಸಭಾಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ದೇವಾಡಿಗ ನವೋದಯದ ಸಂಘದ ಅದ್ಯಕ್ಷರಾದ ಟಿ.ಎಮ್ ಹರಿ ದೇವಾಡಿಗ, ಉಪಾಧ್ಯಕ್ಷರಾದ ಮಂಜುನಾಥ ದೇವಾಡಿಗ, ಗೌರವ ಅಧ್ಯಕ್ಷರಾದ ಬಿ. ಆರ್. ದೇವಾಡಿಗ, ಖಜಾಂಚಿ ಗೋಪಾಲ ಸೇರಿಗಾರ, ಸದಸ್ಯರಾದ ಅಶೋಕ ದೇವಾಡಿಗ, ಕದಂ ಮಾಜಿ ಕಾರ್ಯದರ್ಶಿ ನಾರಾಯಣ ದೇವಾಡಿಗ, ಲೆಕ್ಕಪರಿಶೋಧಕ ಸೂರ್ಯಕಾಂತ ದೇವಾಡಿಗ, ಸುದ್ದಿ ವಾಹಿನಿ ನಿರೂಪಕಿ ಅಶ್ವಿನಿ ದೇವಾಡಿಗ, ಶ್ರೀನಿವಾಸ ದೇವಾಡಿಗ ಸೇರಿದಂತೆ ದೇವಾಡಿಗ ನವೋದಯ ಸಂಘ ರಿ. ಇದರ ನೂರಾರು ಸದಸ್ಯರು ಕಾರ್ಯಕ್ರಮದಲ್ಲಿ ಕರಾವಳಿ ಶೈಲಿಯ ಆಹಾರವನ್ನು ಸವಿದ ಸಂಭ್ರಮದಿಂದ ಪಾಲ್ಗೊಂಡರು. ಚರಣ್ ಬೈಂದೂರು ಕಾರ್ಯಕ್ರಮ ನಿರೂಪಿಸಿ, ಸುಧೀರ್ ಮುದ್ರಾಡಿ ವಂದನೆ ಸಲ್ಲಿಸಿದರು. ವರದಿ: ರಾಘವೇಂದ್ರ ಹಾರ್ಮಣ್
