ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವದಲ್ಲಿ ಕೋಟ್ಯಾಂತರ ಜನರು ಕಣ್ಣಿನ ವಿವಿಧ ದೋಷಗಳಿಂದ ಬಳಲುತ್ತಿದ್ದು, ಅನೇಕರು ದೃಷ್ಟಿಯನ್ನು ಕಳೆದು ಕೊಂಡಿದ್ದಾರೆ. ಹೀಗಾಗಿ ಜನರು ಕಣ್ಣಿನ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕು. ಕಾಲಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವುದರಿಂದ ಕಣ್ಣಿನ ದೋಷಗಳನ್ನು ನಿವಾರಿಸಿಕೊಳ್ಳಲು ಸಾಧ್ಯವಿದೆ. ಕಣ್ಣಿನ ಆರೋಗ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಿ, ಕಣ್ಣಿನ ತಪಾಸಣಾ ಶಿಬಿರಗಳ ಮೂಲಕ ಜನರ ಪಾಲಿಗೆ ಬೆಳಕಾಗಬೇಕಾದದ್ದು ಸಂಘ ಸಂಸ್ಥೆಗಳ ಕರ್ತವ್ಯವಾಗಿದೆ ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು. ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನ ಟ್ರಸ್ಟ್ ಬಸ್ರೂರು ಮತ್ತು ಜಿಎಸ್‌ಬಿ ಸಮಾಜ ಬಸ್ರೂರು ಇವರ ಜಂಟಿ ಆಶ್ರಯದಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆ ಸಹಯೋಗದೊಂದಿಗೆ ಬಸ್ರೂರು ಮಂಡಿಕೇರಿಯ ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಸಭಾಭವನದಲ್ಲಿ ನಡೆದ ಉಚಿತ ನೇತ್ರ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಟಿ.ನಾರಾಯಣ ಪೈ ಅಧ್ಯಕ್ಷತೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ತಾಲೂಕು ಮಟ್ಟದಲ್ಲಿ ಜಯಗಳಿಸಿದ ಎರಡು ತಂಡಗಳ ಸಹಿತ ಒಟ್ಟು 14 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದು ಸುಮಾರು 200 ಕ್ಕೂ ಹೆಚ್ಚಿನ ಆಟಗಾರರು ಭಾಗವಹಿಸಿದರು.ಲೀಗ್ ಹಂತದ ರೋಚಕ ಹೋರಾಟದ ಬಳಿಕ ಸೆಮಿಫೈನಲ್ ನಲ್ಲಿ ಚೇತನಾ ಉಡುಪಿ ಟೊರ್ಪೆಡೋಸ್ ಕುಂದಾಪುರ ತಂಡವನ್ನು ಹಾಗೂ ಕಲಾಕಿರಣ ಕೊರಂಗ್ರಪಾಡಿ ತಂಡ ಇಲೆವೆನ್ಸ್ ಬೆಳ್ಮಣ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶ ಪಡೆದರು. ಫೈನಲ್ ಪಂದ್ಯ ರವಿವಾರ ನಡೆಯಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆರ್ಕಟ್ಟೆ ದಾರುಲ್ ಉಲಮ್ ಮದ್ರಾಸದ ವಿದ್ಯಾರ್ಥಿ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮದಲ್ಲಿ ಸೀನಿಯರ್ ವಿಭಾಗದ ಉರ್ದು ನಾತ್ತ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿ ಸಿರಾಜುಲ್ ಉಲೂಂ ಮದ್ರಾಸದ 8ನೇ ತರಗತಿ ವಿದ್ಯಾರ್ಥಿ ನವಾಝ್ ಎಸ್.ಜೆ.ಎಂ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮದಲ್ಲಿ ಸೀನಿಯರ್ ವಿಭಾಗದ ಕ್ಯಾಲಿಗ್ರಫಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ಸಿರಾಜುಲ್ ಉಲೂಂ ಮದ್ರಾಸದ ಗುರುಗಳು ಅಭಿನಂದಿಸಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಹಾಗೂ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ ಇವರುಗಳ ಸಂಯುಕ್ತ ಆಶ್ರಯದಲ್ಲಿ “69ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರೋಪ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವ ಧನ ವಿತರಣಾ ಸಮಾರಂಭ”
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವದಾದ್ಯಂತ ಸದ್ದು ಮಾಡುತ್ತಾ, ಭಾರತೀಯ ಚಿತ್ರರಂಗದಲ್ಲಿ ಹತ್ತಾರು ದಾಖಲೆಗಳನ್ನು ಬರೆದ ಕರಾಳಿಯ ಮಣ್ಣಿನ ಕಥೆಯ ಎಳೆಯನ್ನು ಒಳಗೊಂಡ ‘ಕಾಂತಾರ’ ಸಿನಿಮಾ 50 ದಿನಗಳನ್ನು ಪೂರೈಸಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ದುಬೈ ಪ್ರವಾಸದಲ್ಲಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪ್ರಗತಿ ರಿಷಬ್ ಶೆಟ್ಟಿ ಅವರು ದಂಪತಿಗಳು ಶುಕ್ರವಾರ ದುಬೈನ ಹಯತ್ ರೆಜೆನ್ಸಿ ಥಿಯೇಟರ್’ನಲ್ಲಿ ಅಭಿಮಾನಿಗಳೊಂದಿಗೆ ಸಿನಿಮಾ ವೀಕ್ಷಿಸಿ 50 ದಿನಗಳ ಗೆಲುವನ್ನು ಸಂಭ್ರಮಿಸಿದರು. ಈ ವೇಳೆ ಫಾರ್ಚೂನ್ ಗ್ರೂಪ್ಸ್ ಪ್ರವರ್ತಕ, ನಮ್ಮ ಕುಂದಾಪ್ರ ಕನ್ನಡ ಬಳಗದ ಗೌರವಾಧ್ಯಕ್ಷರಾದ ವಕ್ವಾಡಿ ಪ್ರವೀಣ ಕುಮಾರ್ ಶೆಟ್ಟಿ, ಅಬುದಾಬಿ ಕನ್ನಡ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಉದ್ಯಮಿ ಹರೀಶ್ ಶೇರಿಗಾರ್, ಕನ್ನಡ ಪಾಠಶಾಲಾ ಮುಖ್ಯಸ್ಥರಾದ ಶಶಿಧರ್ ನಾಗರಾಜಪ್ಪ, ಯುಎಇನ ಓಎಂಜಿ ಸಿನಿಮಾ ವಿತರಕರಾದ ಸೆಂಥಿಲ್ ಹಾಗೂ ಈಶ್ವರಿದಾಸ್ ಶೆಟ್ಟಿ ದುಬೈ ಕನ್ನಡಿಗ ಮಲ್ಲಿಕಾರ್ಜುನ ಗೌಡ ಮೊದಲಾದವರು ಉಪಸ್ಥಿತರಿದ್ದರು. ಥಿಯೇಟರಿನಲ್ಲಿ 300ಕ್ಕೂ ಹೆಚ್ಚು ಅಭಿಮಾನಿಗಳು ಹಾಗೂ ಹಿತೈಷಿಗಳೊಂದಿಗೆ ಸಂಪೂರ್ಣ ಸಿನಿಮಾ ವೀಕ್ಷಿಸಿದ ರಿಷಬ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ನೇತೃತ್ವದಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ 2022ರಲ್ಲಿ ತಾಲೂಕಿನ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸಂಸ್ಥೆಗೆ ಉತ್ತಮ ಸೌಹಾರ್ದ ಸಹಕಾರಿ ಸಂಘ ಪ್ರಶಸ್ತಿ ಪ್ರದಾನಿಸಲಾಯಿತು. ರಾಜ್ಯ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಹಾಗೂ ಕಾರ್ಯದರ್ಶಿ ಕಿಟ್ಟಣ್ಣ ರೈ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ರಾಜ್ಯ ಸಹಕಾರಿ ಮಾರಾಟ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕರಾದ ವೇದವ್ಯಾಸ ಡಿ. ಕಾಮತ್, ಮಂಗಳೂರು ಕ್ಷೇತ್ರ ಶಾಸಕರಾದ ಯು.ಟಿ. ಖಾದರ್, ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅರಣ್ಯ ಇಲಾಖೆ ಸುಮಾರು ಒಂಬತ್ತು ಲಕ್ಷ ಹೆಕ್ಟೇರಿಗೂ ಹೆಚ್ಚು ಪ್ರದೇಶವನ್ನು ಡೀಮ್ಡ್ ಅರಣ್ಯ ಎಂದು ಗುರುತಿಸಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಾದ ದೋಷವನ್ನು ಸರಿಪಡಿಸುವ ಬದಲಿಗೆ ರಾಜ್ಯದ ಸಚಿವರು ಹಾಗೂ ಶಾಸಕರುಗಳು ಡೀಮ್ಡ್ ಸಮಸ್ಯೆ ಪರಿಹಾರವಾಗಿದೆ ಎನ್ನುವ ಹಾರಿಕೆಯ ಉತ್ತರವನ್ನು ಕೊಟ್ಟು ಮುಗ್ದ ಜನರನ್ನು ದಾರಿತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ರೈತ ಸಂಘದ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಮೇರೆಗೆ ಅರಣ್ಯ ಇಲಾಖೆ ಸುಮಾರು ಒಂಬತ್ತು ಲಕ್ಷ ಹೆಕ್ಟೇರಿಗೂ ಹೆಚ್ಚು ಪ್ರದೇಶವನ್ನು ಡೀಮ್ಡ್ ಅರಣ್ಯ ಎಂದು ಗುರುತಿಸಿ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿತ್ತು. ಆದರೆ ಈ ಪಟ್ಟಿಯಲ್ಲಿ ರೈತರ ಕೃಷಿ ಭೂಮಿ, ಕೊಟ್ಟಿಗೆ, ಮನೆ, ತೋಟ ಮೊದಲಾದವುಗಳು ಕೂಡ ಸೇರಿದೆ. ಇದರಿಂದ ರೈತರು ಇದರಿಂದ ಅತೀವ ತೊಂದರೆಗೆ ಈಡಾಗಿದ್ದಾರೆ. ಇದರಿಂದ ಅರ್ಜಿ ನಮೂನೆ 94ಸಿ, 53, 57 ಯಾವುದರಲ್ಲೂ ಭೂ ಮಂಜೂರಾತಿ ಆಗುತ್ತಿಲ್ಲ. ಹಿಂದೆ ಮಂಜೂರಾದ ಭೂಮಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಗೀತ ಭಾರತಿ ಟ್ರಸ್ಟ್ ಕುಂದಾಪುರ ಮತ್ತು ಆರ್. ಕೆ. ಸಂಜೀವ ರಾವ್ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ಖಂಬದಕೋಣೆ ಆಶ್ರಯದಲ್ಲಿ ಕುಂದಾಪುರದ ಹೋಟೆಲ್ ಪಾರಿಜಾತದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ವಿದುಷಿ ಸುಜಾತ ಗುರವ್ ಅವರಿಂದ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮ ನಡೆಯಿತು. ತಬಲಾದಲ್ಲಿ ಟಿ. ರಂಗ ಪೈ ಮಣಿಪಾಲ, ಹಾರ‍್ಮೋನಿಯಂನಲ್ಲಿ ಶಶಿಕಿರಣ ಮಣಿಪಾಲ ಸಹಕರಿಸಿದ್ದರು. ಪ್ರಮೀಳಾ ಕುಂದಾಪುರ ಮಾತನಾಡಿ ಶ್ರೀಮತಿ ಸುಶೀಲಾ ಸಂಜೀವ ರಾವ್, ಶ್ರೀಮತಿ ನಿರ್ಮಲಾ ಪ್ರಕಾಶ್ ರಾವ್ ಹಾಗೂ ಪ್ರಕಾಶ್ ರಾವ್ ಸ್ಮಾರಕವಾಗಿ ಸಂಗೀತ ಕಾರ್ಯಕ್ರಮ ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ ಎಂದರು. ಸಂಗೀತ ಭಾರತಿ ಕಾರ್ಯದರ್ಶಿ ಕೆ. ನಾರಾಯಣ ಕಲಾವಿದರನ್ನು ಪರಿಚಯಿಸಿದರು. ಸಂಗೀತ ಭಾರತಿ ಟ್ರಸ್ಟಿಗಳಾದ ಸೀತಾರಾಮ ನಕ್ಕತ್ತಾಯ, ಕೆ. ಶಾಂತಾರಾಮ ಪ್ರಭು, ಡಾ. ಎಚ್. ಆರ್. ಹೆಬ್ಬಾರ್ ಕಲಾವಿದರನ್ನು ಗೌರವಿಸಿದರು. ರೇಖಾ ಕಾರಂತ, ಸುಪ್ರಸನ್ನ ನಕ್ಕತ್ತಾಯ ಉಪಸ್ಥಿತರಿದ್ದರು. ಯು. ಎಸ್. ಶೆಣೈ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ವೇಗದ ಓಟಗಾರ್ತಿ ಕ್ರೀಡಾಪಟು, ಅಥ್ಲೇಟಿ ಅಶ್ವಿನಿ ಅಕ್ಕುಂಜಿ ಅವರ ಜೀವಮಾನದ ಸಾಧನೆಗಾಗಿ ಧ್ಯಾನ್ ಚಂದ್ ಜೀವಮಾನದ ಸಾಧನೆ ಪ್ರಶಸ್ತಿ 2022 ಘೋಷಣೆಯಾಗಿದೆ. ಕುಂದಾಪುರದ ತಾಲೂಕಿನ ಸಿದ್ದಾಪುರ ಅಕ್ಕುಂಜೆಯ ಯಶೋದಾ ಶೆಟ್ಟಿ ಮತ್ತು ಚಿದಾನಂದ ಶೆಟ್ಟಿಯವರ ಪುತ್ರಿಯಾದ ಅಶ್ವಿನಿ ಅಕ್ಕುಂಜೆ 2010ರಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ನಲ್ಲಿ 4×400 ರಿಲೆಯಲ್ಲಿ ಚಿನ್ನ, 2011ರಲ್ಲಿ ಏಷ್ಯನ್ ಗೇಮ್ಸ್ನಲ್ಲಿ 4×400 ರಿಲೆ ಮತ್ತು 400 ಹರ್ಡ್ಸಲ್ ವೈಯಕ್ತಿಕ ವಿಭಾಗದಲ್ಲಿ ಸ್ವರ್ಣ ಪದಕ ಗೆದ್ದಿದ್ದರು. ಕರ್ನಾಟಕದ ಸರ್ಕಾರ ಕೊಡಮಾಡುವ ರಾಜ್ಯೋತ್ಸವ ಪ್ರಶಸ್ತಿಯನ್ನು 2010ರಲ್ಲಿ ಪಡೆದಿದ್ದರು. ಪ್ರಸ್ತುತ ಅವರು ಪಟಿಯಾಲ, ಪಂಜಾಬ್ ಯುನಿಯನ್ ಬ್ಯಾಂಕ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. 16 ವರ್ಷಗಳ ಕ್ರೀಡಾ ಬದುಕಿನ ಬಳಿಕ 2019ರ ಬಳಿಕ ಕ್ರೀಡಾ ಕ್ಷೇತ್ರದಿಂದ ನಿವೃತ್ತಿ ಪಡೆದುಕೊಳ್ಳುವುದಾಗಿ ತಿಳಿಸಿದ್ದರು. ಧ್ಯಾನ್ ಚಂದ್ ಪ್ರಶಸ್ತಿಯನ್ನು ಕ್ರೀಡಾಪಟುಗಳ ಜೀವಮಾನದ ಸಾಧನೆ, ಕ್ರೀಡಾಕ್ಷೇತ್ರಕ್ಕೆ ಕೊಡುಗೆ ಮತ್ತು ನಿವೃತ್ತಿಯ ನಂತರವೂ ಕ್ರೀಡಾಕೂಟದ ಪ್ರಚಾರದಲ್ಲಿ ಅವರು ತೊಡಗಿಸಿಕೊಳ್ಳುವ ಬಗೆಯನ್ನು ಆಧರಿಸಿ ಈ…
