Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳವು ಪ್ರಕರಣ ಆರೋಪಿ ಜೈಲಿಗೆ ಕರೆದೊಯ್ಯುವಾಗ ಪೊಲೀಸರಿಂದ ಎಸ್ಕೇಪ್ ಆದ ಘಟನೆ ನಡೆದಿದೆ. ಮೊಬೈಲ್ ಅಂಗಡಿಯಲ್ಲಿ ಕಳವು ಮಾಡಿದ ಮೊಹಮ್ಮದ್ ರಾಹಿಕ್ (22) ಎಂಬಾತನನ್ನು ಕರೆದೊಯ್ಯುವಾಗ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಆರೋಪಿಯನ್ನು ಕುಂದಾಪುರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದರಿಂದ ಹಿರಿಯಡ್ಕ ಸಬ್ ಜೈಲಿಗೆ ಕರೆದೊಯ್ಯುವಾಗ ಜೈಲ್ ಸಮೀಪವೇ ಆರೋಪಿ ತಪ್ಪಿಸಿಕೊಂಡಿದ್ದಾನೆ. ಕೆಲ ತಿಂಗಳ ಹಿಂದೆ ಬೀಜಾಡಿ ಸಮೀಪದಲ್ಲಿ ಮೊಬೈಲ್ ಅಂಗಡಿ ಕಳವು ಪ್ರಕರದಲ್ಲಿ ರಾಹೀಕ್ ಎಂಬಾತನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದರು. ತಪ್ಪಿಸಿಕೊಂಡ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಭಾಷ್ಯ ಬರೆದ ಕರ್ಣಾಟಕ ಬ್ಯಾಂಕ್ ಎಂ.ಡಿ. ಮಹಾಬಲೇಶ್ವರ ಭಟ್ ಎಂ.ಎಸ್ ಅವರು ಆಯ್ಕೆಯಾಗಿದ್ದಾರೆ. ಕೋಟದ ಪಂಚವರ್ಣ ಯುವಕ ಮಂಡಲ ರಜತಮಹೋತ್ಸವ ಸಂಭ್ರಮಾಚರಣೆಯ ಹಿನ್ನಲ್ಲೆಯಲ್ಲಿ ಕೋಟದ ಅಮೃತೇಶ್ವರಿ ದೇವಳದ ಸಮೀಪ ವರುಣತೀರ್ಥ ಕೆರೆ ಸನಿಹದಲ್ಲಿ ನ.15 ಹಾಗೂ 16 ರಂದು ಆಯೋಜಿಸಲಾಗುವ ಕನ್ನಡರಾಜ್ಯೋತ್ಸವ ಕಾರ್ಯಕ್ರಮ ಸದ್ಭಾವನಾ 2022 ಶೀರ್ಷಿಕೆಯಡಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯೊಂದಿಗೆ ಬೆಳ್ಳಿಯ ಶಾಶ್ವತ ಫಲಕ ನೀಡಿ ಗೌರವಿಸಲಾಗುತ್ತದೆ. ಪಂಚವರ್ಣ ವಿಶೇಷ ಪುರಸ್ಕಾರವನ್ನು ಸಮೃದ್ಧಿ ಮಹಿಳಾ ಮಂಡಲ ಚೇರ್ಕಾಡಿ ಬ್ರಹ್ಮಾವರ, ವಿಶೇಷ ಅಭಿನಂದನೆಯನ್ನು ಮಂಗಳೂರಿನ ಸೇವ್ ಲೈಫ್ ಚಾರಿಟಬಲ್ ಟ್ರಸ್ಟ್ ಮುಖ್ಯಸ್ಥ ಅರ್ಜುನ್ ಭಂಡಾರ್ಕರ್, ನಿಸ್ವಾರ್ಥ ಸೇವಾ ಟ್ರಸ್ಟ್ ಕೋಟ, ಪ್ರತಿಭಾ ಪುರಸ್ಕಾರವನ್ನು ಡ್ರಾಮ ಜೂನಿಯರ್ ಪ್ರಶಸ್ತಿ ವಿಜೇತ ಸಮೃದ್ಧಿ ಕುಂದಾಪುರ ನೀಡಿ ಗೌರವಿಸಲಾಗುತ್ತದೆ. ಎರಡು ದಿನಗಳ ಕಾಲ ಹಮ್ಮಿಕೊಳ್ಳುವ ರಜತ ಸಂಭ್ರಮದಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಗೆ ದತ್ತಿನಿಧಿ, ಅನಾರೋಗ್ಯ ಪಿಡಿತರಿಗೆ, ಅಶಕ್ತರಿಗೆ ಸಹಾಯ, ವಿದ್ಯಾರ್ಥಿ ವೇತನ,…

Read More

ಕುಂದಾಪುರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು 76ನೇ ತಿಂಗಳ ಕಾರ್ಯಕ್ರಮ ಜರುಗಿತು. ಗೊಂಬೆಯಾಟ ಅಕಾಡೆಮಿಗೆ ಜನರೇಟರ್ ಕೊಡುಗೆಯಾಗಿ ನೀಡಿದ ಉಡುಪಿ ವೆಂಟನಾ ಫೌಂಡೇಶನ್ ಟ್ರಸ್ಟೀ ಶಿಲ್ಪಾ ಭಟ್ ಅವರು ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿ, ತಮ್ಮ ಫೌಂಡೇಶನ್ ನಿಂದ ಕಲೆ ಮತ್ತು ಸಂಸ್ಕೃತಿಯ ವಿಭಾಗದಲ್ಲಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಗೆ ಪ್ರಥಮ ಕೊಡುಗೆಯಾಗಿ ಜನರೇಟರ್ ನೀಡಿದ್ದೇವೆ. ಮುಂದೆ ಈ ಸಂಸ್ಥೆ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ ಅಂತ ಶುಭ ಹಾರೈಸಿದರು. ವಸಂತಿ ಆರ್. ಪಂಡಿತ್ ಹಾಗೂ ತಂಡದವರ ವಿಷ್ಣು ಸಹಸ್ರನಾಮದಿಂದ ಪ್ರಾರಂಭವಾಯಿತು. ವೇದಿಕೆಯಲ್ಲಿ ಕುಂದಪ್ರಭ ವಾರ ಪತ್ರಿಕೆಯ ಸಂಪಾದಕರಾದ ಯು.ಎಸ್. ಶೆಣೈ, ರೂಪಾ ಪ್ರಭು, ವೆಂಟನಾ ಫೌಂಡೇಶನ್ ಸದಸ್ಯರಾದ ರವೀಂದ್ರ ರಾವ್, ಶೈಲಜಾ ರಾವ್, ರಮೇಶ್ ಭಟ್, ಗಾಯಕಿ ಜಯಮಾಲಾ ಶೆಣೈ ಹಾಗೂ ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ಉಪಸ್ಥಿತರಿದ್ದರು. ತಮ್ಮ ಸಂಸ್ಥೆಗೆ ಬೆಳಕು ನೀಡಿದ ವೆಂಟನಾ ಫೌಂಡೇಶನ್, ಉಡುಪಿ ಇವರಿಗೆ…

Read More

ಕುಂದಾಪುರ ಡಾಟ್ ಕಾಂ ಸುದ್ದಿ.ಉಡುಪಿ,ಅ.19: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನ.1ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನ.1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ. ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹರಕ್ಷಕ, ಎನ್.ಸಿ.ಸಿ. ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಕವಾಯತು ನಡೆಯಲಿದ್ದು, ನಂತರದಲ್ಲಿ ಶಾಲಾ ವಿದ್ಯಾಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದ ಅವರು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಆಯ್ಕೆಯಾದ ಗಣ್ಯರಿಗೆ ಸನ್ಮಾನ ನಡೆಯಲಿದೆ ಎಂದರು. ಕಾರ್ಯಕ್ರಮಕ್ಕೆ ಜನಪ್ರನಿಧಿಗಳು, ಗಣ್ಯರು ಸೇರಿದಂತೆ ಶಿಷ್ಠಾಚಾರದಂತೆ ಎಲ್ಲರನ್ನೂ ಆಹ್ವಾನಿಸಬೇಕು. ಸಾರ್ವಜನಿಕರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದ ಕರಾವಳಿಯ ಜಿಲ್ಲೆಗಳ ಮೀನುಗಾರಿಕೆಗೆ ಕೇಂದ್ರದಿಂದ ಸೀಮೆಎಣ್ಣೆಯನ್ನು ಕೂಡಲೆ ರಾಜ್ಯಕ್ಕೆ ಬಿಡುಗಡೆ ಮಾಡಲು ಕ್ರಮವಹಿಸುವಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು, ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇಲಾಖೆಯ ಜಂಟಿ ಕಾರ್ಯದರ್ಶಿ ನವನೀತ್ ಕೊಠಾರಿ, ಭಾ ಆ ಸೇ, ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಈಗಾಗಲೇ ರಾಜ್ಯಕ್ಕೆ 2472 KL ಮಂಜೂರಾತಿ ಮಾಡಿದ್ದು ಬಾಕಿ ಉಳಿದಿರುವ 21618 KL ಸೀಮೆಎಣ್ಣೆಯನ್ನು ಸಹ ಕೂಡಲೇ ಬಿಡುಗಡೆ ಮಾಡುವಂತೆ ಸಂಸದರು ಕೋರಿಕೊಂಡರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ, ಜಂಟಿ ಕಾರ್ಯದರ್ಶಿಗಳು ಒಂದು ವಾರದ ಒಳಗಾಗಿ ಮಂಜೂರಾತಿ ಆದೇಶವನ್ನು ಹೊರಡಿಸುವುದಾಗಿ ಭರವಸೆ ನೀಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದೇಶ ಭಾಷೆಗಳ ಉಪಯೋಗ ಹೇಗೆ ಆಗಬೇಕೆಂಬ ಉನ್ನತ ಯೋಚನೆಗಳು ನಮ್ಮ ನಡುವೆ ಜರಗುತಿದ್ದರೂ, ಅವುಗಳನ್ನು ಕಾರ್ಯಗೊಳಿಸಲು ಇರುವ ಯೋಜನೆಗಳು ಸರಿಯಾದ ದಾರಿಯಲ್ಲಿ ಸಾಗುತ್ತಿಲ್ಲ ಎಂದು ಕನ್ನಡ ಕೀಬೋರ್ಡ ಜನಕ ಹಾಗೂ ಮಣಿಪಾಲ ಎಂಐಟಿ ನಿವೃತ್ತ ಪ್ರಾಧ್ಯಾಪಕ ಡಾ. ಕೆ.ಪಿ ರಾವ್ ನುಡಿದರು. ಅವರು ಮಿಜಾರಿನ ಆಳ್ವಾಸ್ ತಾಂತ್ರಿಕ ವಿದ್ಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ತಾಲೂಕು ಘಟಕದ ಸಹಯೋಗದೊಂದಿಗೆ ಕನ್ನಡ ಸಂಘದ ವಾರ್ಷಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ 2022ರಲ್ಲಿ ಮುಖ್ಯ ಅತಿಥಿಗಳಾಗಿ “ಭಾರತೀಯ ಭಾಷೆಗಳು ಮತ್ತು ತಾಂತ್ರಿಕ ಶಿಕ್ಷಣ” ವಿಷಯದ ಕುರಿತು ಮಾತನಾಡಿದರು. ನಮ್ಮ ಸರ್ಕಾರಗಳ ಕನ್ನಡ ಸಂವೇಧಿ ನಿಲುವು ಸಂಶಯಾಸ್ಪದವಾಗಿದೆ. ಭಾಷೆಯನ್ನು ಉಳಿಸಿ ಬೆಳಸುವಲ್ಲಿ ಕೆಲಸಗಳಾಗಬೇಕು. ಆಗ ಭಾಷೆಯ ಜತೆಗೆ ಸೇರಿಕೊಂಡಿರುವ ಆಚಾರ, ವಿಚಾರ, ಸಂಸ್ಕೃತಿಗಳು ಉಳಿಯಲು ಸಾಧ್ಯ ಎಂದರು. ಸೃಜನಾತ್ಮಕ ಶಿಸ್ತಿನ ಮೂಲಕ ತೊಡಗುವ ಯಾವುದೇ ಕೆಲಸ ಸಫಲವಾಗಬಲ್ಲದು. ತಾವು ಕೆ ಪಿ ರಾವ್ ಕೀಬೋರ್ಡ ತಯಾರಿಸದ ಬಗೆಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯ ವೆಂಟನಾ ಫೌಂಡೇಶನ್ ವತಿಯಿಂದ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ 15 ಕೆ.ವಿ.ಯ ಜೆನರೇಟರನ್ನು ಇತ್ತೀಚಿಗೆ ಕೊಡುಗೆಯಾಗಿ ನೀಡಲಾಯಿತು. ಉಡುಪಿಯ ಮಾಹಿತಿ ತಂತ್ರಜ್ಞಾನದ ದಿಗ್ಗಜ ಸಂಸ್ಥೆ 99 ಗೇಮ್ಸ್ ಆನ್‌ಲೈನ್ ಉಪಾಧ್ಯಕ್ಷೆ ಹಾಗೂ ವೆಂಟನಾ ಫೌಂಡೇಶನ್ ಟ್ರಸ್ಟಿ ಶಿಲ್ಪಾ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಜೆನರೇಟರ್ ಹಸ್ತಾಂತರಿಸಿ ಮಾತನಾಡಿ ವೆಂಟನಾ ಫೌಂಡೇಶನ್ ಮೂಲಕ ಉಡುಪಿ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸರಕಾರಿ ಕನ್ನಡ ಮಾಧ್ಯಮ ಶಾಲೆಗೆ ಮೂಲ ಸೌಕರ್ಯವನ್ನು ಒದಗಿಸುವುದು. ಪರಿಸರ ಹಾಗೂ ಜಲ ಸಂರಕ್ಣಣೆ ವಿಭಾಗದಲ್ಲಿ ಕೆರೆಯ ಸ್ವಚ್ಚತೆ, ಗಿಡಗಳನ್ನು ಬೆಳೆಸಿ ಕಾಡಿನ ನಿರ್ಮಾಣ, ಕಲೆ, ಸಂಸ್ಕೃತಿಯ ಉಳಿವು ಮುಂತಾದ ಆಯಾಮದಲ್ಲಿ ಧನಸಹಾಯ ನೀಡಲಿದ್ದೇವೆ. ರೋಹಿತ್ ಭಟ್ ಅವರ ನೇತೃತ್ವದಲ್ಲಿರುವ ಈ ಫೌಂಡೇಶನ್ ಸಮಾನ ಮನಸ್ಕರೊಂದಿಗೆ ಆರಂಭಗೊಂಡಿದೆ ಎಂದರು. ಗ್ರಾಮೀಣ ಭಾಗದಲ್ಲಿರುವ ಈ ಅಕಾಡೆಮಿ ದೇಶ ವಿದೇಶಗಳಲ್ಲಿ ಯಕ್ಷಗಾನ ಗೊಂಬೆಯಾಟದ ಪ್ರದರ್ಶನ ನೀಡಿ ಹೆಸರುವಾಸಿಯಾಗಿದೆ. ಈ ಅಕಾಡೆಮಿಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚು ಕಾರ್ಯಕ್ರಮ ನಡೆಯಲಿ. ಗೊಂಬೆಯಾಟಕ್ಕೆ ಸಂಬಂದಿಸಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಮತ್ತು ಮಾನವೀಯ ಮೌಲ್ಯಗಳು’ ಎಂಬ ವಿಷಯದ ಕುರಿತು ಕಾರ್ಯಾಗಾರ ನಡೆಯಿತು. ಸಿದ್ಧಾಪುರ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ರಮಾನಂದ ನಾಯಕ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ವ್ಯಕ್ತಿತ್ವ ವಿಕಸನ ಹಾಗೂ ಜೀವನ ಮೌಲ್ಯಗಳಿಗೆ ಸಂಬಂಧಿಸಿದಂತೆ ಪರಿಣಾಮಕಾರಿಯಾಗಿ ಮಾತನಾಡಿದರು. ಸಮಾರಂಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿರುವ ಮಂಜು ಕಾಳಾವರರವರು ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶಿಸ್ತು, ಸನ್ನಡತೆ, ಸಂಸ್ಕಾರ, ಮಾವೀಯತೆಯ ಗುಣಗಳನ್ನು ಅಳವಡಿಸಿಕೊಂಡು ಸತ್ಪ್ರಜೆಯಾಗಿ ಬಾಳುವಂತೆ ಕರೆ ನೀಡಿದರು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ,ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾಗಿರುವ ಉದಯ್ ನಾಯ್ಕ್ ರವರು ಅತಿಥಿಗಳನ್ನು ಪರಿಚಯಿಸಿ, ವಿದ್ಯಾರ್ಥಿನಿಯರಾದ ಲಾವಣ್ಯ ಸ್ವಾಗತಿಸಿ, ನಿಖಿತಾ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ಶ್ರೀಶ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಂತಾರ ಸಿನಿಮಾದಲ್ಲಿ ದೈವ ನರ್ತನದಲ್ಲಿ ಕಾಣಿಸಿಕೊಳ್ಳುವ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರನ್ನು ಕೇಂದ್ರವಾಗಿರಿಸಿಕೊಂಡು ಸ್ಯಾಂಡ್ ಥೀಮ್ ಉಡುಪಿ ತಂಡದ ಕಲಾವಿದರಾದ ಹರೀಶ್ ಸಾಗಾ, ಸಂತೋಷ ಭಟ್ ಹಾಲಾಡಿ, ಪ್ರಸಾದ್ ಆರ್ ಅವರು ಕೋಟೇಶ್ವರದ ಹಳೇ ಅಳಿವೆ ಬೀಚ್ ಬಳಿ ರಚಿಸಿದ 4 ಅಡಿ ಎತ್ತರದ ಮರಳುಶಿಲ್ಪ ಪ್ರವಾಸಿಗರ ಗಮನ ಸೆಳೆಯುತ್ತಿದೆ.

Read More