ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾ.ಪಂ.ನ ನೂತನ ಕಟ್ಟಡ ಹಾಗೂ ಹೊಳೆತೋಟ ಅಂಗನವಾಡಿ ಕಟ್ಟಡದ ಉದ್ಘಾಟನೆ ಸಮಾರಂಭ ನಡೆಯಿತು. ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಸ್ಥಳೀಯಾಡಳಿತ ಕಾರ್ಯನಿರ್ವಹಿಸಬೇಕು. ಬಿಜೂರು ಶಾಲೆ ರಸ್ತೆಗೆ ಅನುದಾನ ಮಂಜೂರಾಗಿದ್ದು ಶೀಘ್ರದಲ್ಲಿ ಕಾಮಗಾರಿ ನಡೆಯಲಿದೆ. ಈ ಭಾಗದಲ್ಲಿ ಬಾಕಿ ಇರುವ 94ಸಿ ಸಮಸ್ಯೆಯನ್ನು ಪರಿಹರಿಸುವ ಪ್ರಯತ್ನ ನಡೆಯುತ್ತಿದೆ. ಬಿಜೂರು ಗ್ರಾ.ಪಂ.ನ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಹೆಚ್ಚು ಮನೆಗಳನ್ನು ನೀಡುವ ಭರವಸೆ ನೀಡಿದರು. ಗ್ರಾ.ಪಂ.ಅಧ್ಯಕ್ಷ ರಮೇಶ ವಿ.ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ಹೆರಿಯಣ್ಣ ರಾವ್ ಹೊಸ್ಕೋಟೆ, ಉದ್ಯಮಿ ಗೋವಿಂದಬಾಬು ಪೂಜಾರಿ ಬಿಜೂರು, ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ ಕುಮಾರ್ ಶೆಟ್ಟಿ, ರಾಜ್ಯ ಯೋಜನಾ ಆಯೋಗದ ಸದಸ್ಯೆ ಪ್ರಿಯದರ್ಶಿನಿ ದೇವಾಡಿಗ, ಜಿ.ಪಂ.ಮಾಜಿ ಸದಸ್ಯೆ ಗೌರಿ ದೇವಾಡಿಗ, ಖಂಬದಕೋಣೆ ರೈತರ ಸೇ.ಸ. ಸಂಘದ ನಿರ್ದೇಶಕರಾದ ರಘರಾಮ ಶೆಟ್ಟಿ, ಮಂಜು ದೇವಾಡಿಗ, ಕಂಚಿಕಾನ್ ಪುಂಡಲೀಕ ಕಿಣಿ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯಾರೋ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ, ತಾನು ಮಾಡದ ತಪ್ಪಿಗೆ ಸೌದಿ ಅರೇಬಿಯಾದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕುಂದಾಪುರ ಸಮೀಪದ ಬೀಜಾಡಿ ನಿವಾಸಿ ಹರೀಶ್ ಬಂಗೇರ ಶ್ರೀಘ್ರವೇ ಬಿಡುಗಡೆಗೊಂಡು ತಾಯ್ನಾಡಿಗೆ ಮರಳಲಿದ್ದಾರೆ ಎಂದು ಮಂಗಳೂರು ಅಸೋಸಿಯೆಶನ್ ಸೌದಿ ಅರೇಬಿಯಾ (ಎಂಎಸ್ಎ) ಅಶ್ಯಕ್ಷ ಸತೀಶ್ ಕುಮಾರ್ ತಿಳಿಸಿದ್ದಾರೆ. ಹರೀಶ್ ಬಂಗೇರ ಬಿಡುಗಡೆ ಭಾರತೀಯ ರಾಯಭಾರ ಕಚೇರಿ, ಇಂಡಿಯನ್ ಓವರ್ಸೀಸ್ ಪೋರಂ ಸಹಕರಿಸಿದೆ. ಪ್ರತ್ಯಕ್ಷ, ಪರೋಕ್ಷವಾಗಿ ಸಹಕರಿಸಿದ ಪ್ರತಿಯೊಬ್ಬರಿಗೂ ಅಸೋಸಿಯೆಶನ್ ಕೃತಜ್ಞತೆ ಸಲ್ಲಿಸುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹರೀಶ್ ಬಂಗೇರ ಅವರ ಬಿಡುಗಡೆಯ ನಿರೀಕ್ಷೆಯಲ್ಲಿದ್ದೇವೆ ಎಂದು ಅವರ ಬಂಧನವಾಂದಿನಿಂದ ಈವರೆಗೆ ಬಿಡುಗಡೆಯಾಗಿ ಸಾಕಷ್ಟು ಹೋರಾಟ ನಡೆಸಿಕೊಂಡು ಬಂದಿರುವ ಕೋಟೇಶ್ವರ ಗ್ರಾಪಂ ಸದಸ್ಯ ಅಂಕದಕಟ್ಟೆ ತಿಳಿಸಿದ್ದಾರೆ. ಬಿಜಾಡಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಅವರು ಬದುಕಿನ ತುತ್ತಿಗಾಗಿ ಹೊರ ದೇಶಕ್ಕೆ ಹೋದವರು. ಜೈಲು ಸೇರಿದ ಸಂಗತಿ ತಿಳಿದು ಅವರ ಊರಿನಲ್ಲಿರುವ ಪತ್ನಿ ಪುಟ್ಟ ಮಕ್ಕಳು ಸಂಕಷ್ಟಕ್ಕೆ ತುತ್ತಾಗಿದ್ದರು. ಮಾನವೀಯ ನೆಲೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಂಡ್ಸೆಯ ವಾತ್ಸಲ್ಯ ಕಾಂಪ್ಲೆಕ್ಸ್ನ ಪ್ರಥಮ ಮಹಡಿಯಲ್ಲಿ ಶ್ರೀಬ್ರಹ್ಮಶ್ರೀ ಸೌಹಾರ್ದ ಸಹಕಾರಿ ಶುಭಾರಂಭಗೊಂಡಿತು. ಜ್ಯೋತಿಷ್ಯ ವಿದ್ವಾನ್ ವೇ.ಮೂ. ರಾಮಕೃಷ್ಣ ಭಟ್ ಶಾರ್ಕೆ ಉದ್ಘಾಟಿಸಿದರು. ಶ್ರೀಬ್ರಹ್ಮಶ್ರೀ ಸೌಹಾರ್ದ ಸಹಕಾರಿ ಅಧ್ಯಕ್ಷ ಕೆ.ಬಸವರಾಜ್ ರಾಯಪ್ನಾಡಿ ಅಧ್ಯಕ್ಷತೆ ವಹಿಸಿದ್ದರು. ವಾತ್ಸಲ್ಯ ಕಾಂಪ್ಲೆಕ್ಸ್ ಮಾಲೀಕ ಆನಂದ ಶೆಟ್ಟಿ ಠೇವಣಿ ಪತ್ರ ಬಿಡುಗಡೆಗೊಳಿಸಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಆಡಳಿತ ಧರ್ಮದರ್ಶಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಇ-ಬ್ಯಾಂಕ್ ಸಾಫ್ಟ್ವೇರ್ಗೆ ಚಾಲನೆ ನೀಡಿದರು. ಭದ್ರತಾ ಕೋಶವನ್ನು ನ್ಯಾಯವಾದಿ ಉಮೇಶ್ ಶೆಟ್ಟಿ ಶಾನ್ಕಟ್ಟು ಉದ್ಘಾಟಿಸಿದರು. ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ವಂಡ್ಸೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧಕ್ಷ ಎನ್. ಮಂಜಯ್ಯ ಶೆಟ್ಟಿ ಸಬ್ಲಾಡಿ, ಮುಂಬಯಿ ಉಸ್ಯಮಿ ಚಂದ್ರಶೇಖರ ಹೆರಿಯಣ್ಣ ನಾಯ್ಕ್ ವಂಡ್ಸೆ, ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ವಿ. ಸುಧೀರ್ ಕುಮಾರ್ ಶೆಟ್ಟಿ, ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ಆಲೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬ್ಯಾಂಕಿಂಗ್ ಸೌಲಭ್ಯವನ್ನು ಕೃಷಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘದ ಮೂಲಕ ನೀಡಲಾಗುತ್ತಿದೆ. ಕೃಷಿಕರಿಗೆ ಆರ್ಥಿಕ ಸಹಕಾರದ ಜೊತೆಗೆ ಸರಳ ಬ್ಯಾಂಕಿಂಗ್ ವಿಧಾನ ಇನ್ನಷ್ಟು ಅನುಕೂಲವಾಗುತ್ತದೆ ಎಂದು ಕುಂದಾಪುರ ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಹೇಳಿದರು ಅವರು ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ಮಿತ ಬೈಂದೂರು ಶಾಖೆಯ ನವೀಕೃತ ಕಛೇರಿಯನ್ನು ಉದ್ಘಾಟಿಸಿ ಈ ಮಾತುಗಳನ್ನಾಡಿದರು. ಈ ಸಂದರ್ಭ ಸಂಘದ ಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ,ಉಪಾಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಆಡಳಿತ ಮಂಡಳಿ ನಿರ್ದೇಶಕರಾದ ಎಂ. ಮೋಹನ್ ದಾಸ್ ಶೆಟ್ಟಿ, ಎಸ್. ರಾಜು ಪೂಜಾರಿ, ಕೆ.ಸುಧಾಕರ ಶೆಟ್ಟಿ, ಕೆ. ಭುಜಂಗ ಶೆಟ್ಟಿ, ಕೆ. ಮೋಹನ ಪೂಜಾರಿ, ಆನಂದ ಬಿಲ್ಲವ, ರವಿ ಗಾಣಿಗ, ಪ್ರಭಾಕರ ಶೆಟ್ಟಿ, ಎಸ್. ಜಯರಾಮ ಶೆಟ್ಟಿ, ಎಚ್. ದೀನಪಾಲ್ ಶೆಟ್ಟಿ, ಎಚ್. ಚಂದ್ರಶೇಖರ ಶೆಟ್ಟಿ, ಎಂ. ಮಹೇಶ್ ಹೆಗ್ಡೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಶೋಭಾ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಕೊಡೇರಿ ಎಂಬಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಶ್ರೀ ವರಲಕ್ಷ್ಮೀ ನಿಲಯ’ ನೂತನ ಗೃಹದ ಹಸ್ತಾಂತರ ಸಮಾರಂಭ ಶುಕ್ರವಾರ ಜರುಗಿತು. ಉದ್ಯಮಿ ಹಾಗೂ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರ ತಂದೆ ತಾಯಿ ಬಾಬು ಪೂಜಾರಿ ಹಾಗೂ ಮಂಜಮ್ಮ ದಂಪತಿಗಳು ನೂತನ ಗೃಹವನ್ನು ಉದ್ಘಾಟಿಸಿದರು. ಗೋವಿಂದ ಪೂಜಾರಿ ಅವರ ಮಗ ಪ್ರಜ್ವಲ್ ಜಿ. ಪೂಜಾರಿ ಅವರ ಜನ್ಮದಿನದಂದು ಕೊಡೇರಿಯ ರವಳು ನಾಗಮ್ಮ ಅವರಿಗೆ ಬೀಗದ ಕೈ ಹಸ್ತಾಂತರಿಸಲಾಯಿತು. ಶ್ರೀ ವರಲಕ್ಷ್ಮೀ ಈ ಸಂದರ್ಭ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಟ್ರಸ್ಟೀ ಮೂಲಕ ನಿರ್ಮಿಸಲಾಗಿರುವ ಮೂರನೇ ಮನೆ ಇದಾಗಿದ್ದು, ಇನ್ನು ಒಂದು ಮನೆಗಳು ನಿರ್ಮಾಣ ಹಂತದಲ್ಲಿದೆ. ಆರೋಗ್ಯ ಸೇವೆ, ಅಗತ್ಯವುಳ್ಳವರಿಗೆ ನೆರವು, ಪುಡ್ ಕಿಟ್ ವಿತರಣೆ ಸೇರಿದಂತೆ ಹತ್ತಾರು ಸಾಮಾಜಿಕ ಕಾರ್ಯಗಳನ್ನು ಟ್ರಸ್ಟ್ ಮೂಲಕ ಮಾಡಲಾಗುತ್ತಿದೆ ಎಂದರು. ಈ ಸಂದರ್ಭ ಜಿ.ಪಂ ಮಾಜಿ ಅಧ್ಯಕ್ಷ ಎಸ್.ರಾಜು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರವನ್ನು ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಯಿತು. ಕೋವಿಡ್-19 ಹಿನ್ನಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಯವರ ಸೂಚನೆಯಂತೆ ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿ ಹಾಗೂ ಶೌಚಾಲಯವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಸದಸ್ಯ ಬಿ. ರಾಘವೇಂದ್ರ ಪೈ, ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಉಮೇಶ ಕರ್ಣಿಕ್, ಸಿಬ್ಬಂದಿ ಶ್ರೀಧರ ಗಾಣಿಗ, ಪ್ರಭಾಕರ ಶೇರುಗಾರ್, ಗ್ರಾಪಂ ಸಿಬ್ಬಂದಿಗಳಾದ ನಾರಾಯಣ ಶ್ಯಾನುಭಾಗ್, ಅನಿಲ್ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಭಾರತೀಯ ಅಂಚೆ ಇಲಾಖೆಯ ವತಿಯಿಂದ ನಗರದ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮಾ ಏಜೆಂಟ್ ಆಗಿ ಕಾರ್ಯ ನಿರ್ವಹಿಸಲು 18 ರಿಂದ 50 ವರ್ಷದೊಳಗಿನ, ಕನಿಷ್ಟ ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಧಾರ್ ಕಾರ್ಡ್, ಪಾನ್ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮೂಲ ಪ್ರತಿ ಹಾಗೂ ಝೆರಾಕ್ಸ್ ಪ್ರತಿ ಮತ್ತು ಎರಡು ಪಾಸ್ಪೋರ್ಟ್ ಸೈಜಿನ ಭಾವಚಿತ್ರದೊಂದಿಗೆ ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಜುಲೈ 30ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಸಂದರ್ಶನದಲ್ಲಿ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2520471 ಅಥವಾ ಮೊ.ನಂ: 9448291071 ಅನ್ನು ಸಂಪರ್ಕಿಸುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ಕೇರಳದ ವಿರೋಧ ಪಕ್ಷ ನಾಯಕರಾದ ಸತೀಶನ್ ಅವರು ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭ ದೇವಸ್ಥಾನದ ಪರವಾಗಿ ವ್ಯವಸ್ಥಾಪನಾ ಮಂಡಳಿಯ ಸದಸ್ಯರಾದ ಜಯನಂದ ಹೋಬಳಿದಾರ್ ಅವರು ಶಾಲು ಹಾಗೂ ದೇವಿಯ ಪ್ರಸಾದ ನೀಡಿ ಗೌರವಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಭಾಗವಾಗಿ ‘ಆಳ್ವಾಸ್ ನಿರಾಮಯ ‘ ಮಲ್ಟಿಸ್ಪೆಷಾಲಿಟಿ ಆಯುಷ್ ಆಸ್ಪತ್ರೆಯ ಹೊರರೋಗಿ ಹಾಗೂ ಒಳರೋಗಿ ವಿಭಾಗವನ್ನು ವಿದ್ಯಾಗಿರಿಯಲ್ಲಿ ಇಂದು ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಉದ್ಘಾಟಿಸಿದರು. ಆಳ್ವಾಸ್ ನಿರಾಮಯ ಮಲ್ಟಿಸ್ಪೆಷಾಲಿಟಿ ಆಯುಷ್ ಆಸ್ಪತ್ರೆಯು ಸುಸಜ್ಜಿತವಾದ ಹೊರರೋಗಿ ಹಾಗೂ ಒಳರೋಗಿ ವಿಭಾಗವನ್ನು ಹೊಂದಿದ್ದು, ಒಳರೋಗಿಗಳಿಗೆ ಸಕಲ ಸೌಲಭ್ಯಗಳಿರುವ ಸ್ಪೆಷಲ್, ಡಿಲಕ್ಸ್ ಹಾಗೂ ಸೂಟ್ ರೂಮ್ ಲಭ್ಯವಿರುತ್ತದೆ. ರೋಗಿಗಳಿಗೆ ಆಯುರ್ವೇದ, ನ್ಯಾಚುರೋಪತಿ ಹಾಗೂ ಫಿಸಿಯೋತೆರಪಿ ಸೇವೆಗಳು ಆರಂಭಗೊಂಡಿದೆ. ಕಾರ್ಯಕ್ರಮದಲ್ಲಿ ಸಂಸ್ಥೆಯ ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ. ವಿನಯ್ ಆಳ್ವ, ಡಾ. ಹನಾ ಶೆಟ್ಟಿ, ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಜಿತ್ ಎಂ, ‘ಆಳ್ವಾಸ್ ನಿರಾಮಯ’ ಮಲ್ಟಿಸ್ಪೆಷಾಲಿಟಿ ಆಯುಷ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾಗಿರುವ ಡಾ. ಸುರೇಖಾ ಪೈ, ವೈದ್ಯಾಧಿಕಾರಿ ಡಾ. ಪ್ರಜ್ಞಾ ಉಪಸ್ಥಿತರಿದ್ದರು. ಆಳ್ವಾಸ್ ಹೆಲ್ತ್ ಸೆಂಟರ್ನ ಜನರಲ್ ಸರ್ಜನ್ ಡಾ ಡಾ ಹರೀಶ ನಾಯಕ್, ಆಳ್ವಾಸ್ ಕಾಲೇಜಿನ ಪ್ರಾಚಾರ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೋವಿಡ್ ಮಹಾಮಾರಿಯಿಂದಾಗಿ ಕಳೆದ ಎರಡು ವರ್ಷಗಳಿಂದ ಜಿಲ್ಲೆಯ ಸಂಘಟನೆಯ ಎಲ್ಲಾ ಮಾಲಕರು ಹಾಗೂ ಕಾರ್ಮಿಕರು ಉದ್ಯೋಗವಿಲ್ಲದೇ ಇವರ ಆಶ್ರಿತ ಕುಟುಂಬಗಳು ವಿವಿಧ ರೀತಿಯ ಕಷ್ಟ-ನಷ್ಟಗಳಿಗೆ ಸಿಲುಕಿದ್ದು, ನಮ್ಮ ನೆರವಿಗೆ ಯಾರೂ ಬಾರದ ಹಿನ್ನೆಲೆಯಲ್ಲಿ ನಮಗೆ ನಾವೇ ಸಾಂತ್ವಾನ ಹೇಳಿಕೊಂಡು ಮುಂದೆ ಸಾಗಬೇಕಿದೆ ಎಂದು ಧ್ವನಿ ಬೆಳಕು ಸಂಯೋಜಕರ ಸಂಘಟನೆಯ ಜಿಲ್ಲಾಧ್ಯಕ್ಷ ಕಾಪು ಶಿವರಾಜ್ ಮಲ್ಲಾರ್ ಹೇಳಿದರು. ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ನಡೆದ ಬೈಂದೂರು ವಲಯ ಧ್ವನಿ-ಬೆಳಕು ಸಂಯೋಜಕರ ಹತ್ತನೇ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು. ನಮ್ಮ ವೃತ್ತಿ ಬಾಂಧವರು (ಸೌಂಡ್ ಪಾರ್ಟಿ) ಲಕ್ಷಾಧೀಶ್ವರರು. ಇವರಿಗೆ ಹಣದ ಅವಶ್ಯಕತೆ ಇರುವುದಿಲ್ಲ ಎಂಬ ತಪ್ಪು ಭಾವನೆಯಿಂದ ಕೊರೊನಾ ಸಂಕಷ್ಟದಲ್ಲಿ ಸರ್ಕಾರ, ಜನಪ್ರತಿನಿಧಿಗಳು ನಮ್ಮ ಹತ್ತಿರ ಸುಳಿಯಲಿಲ್ಲ. ಆದರೆ ನಾವು ಲಕ್ಷಗಟ್ಟಲೆ ಸಾಲ ಮಾಡಿ ಉದ್ಯಮದಲ್ಲಿ ತೊಡಗಿಸಿ ನಷ್ಟದ ದಾರಿಯಲ್ಲಿ ಸಾಗುತ್ತಿರುವ ಸತ್ಯ ಇವರ್ಯಾರಿಗೂ ತಿಳಿಯದಿರುವುದು ಮಾತ್ರ ದುರಂತ. ಪ್ರತಿಯೊಂದು ಸಭೆ-ಸಮಾರಂಭಗಳಿಗೆ ನಾವು ಬೇಕು, ಆದರೆ ಕಷ್ಟದ ದಿನಗಳಲ್ಲಿ…
