ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.10: ವಿಶೇಷ ಘಟಕ ಯೋಜನೆಯಡಿ ಪ.ಜಾತಿ ಹಾಗೂ ಪಂಗಡದವರ ಸಮಗ್ರ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಸಂಪೂರ್ಣ ಬಳಕೆ ಮಾಡಿಕೊಳ್ಳುವುದರ ಜೊತೆಗೆ ಪ್ರತಿಶತ 100 ರಷ್ಟು ಅನುಷ್ಠಾನಗೊಳಿಸಬೇಕೆಂದು ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಎಸ್.ಸಿ.ಪಿ/ಟಿ.ಎಸ್.ಪಿ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಪ.ಜಾತಿ ಮತ್ತು ಪಂಗಡದವರ ಕಲ್ಯಾಣಾಭಿವೃದ್ಧಿಗೆ ಸರ್ಕಾರ ಬಜೆಟ್ನಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವುದರೊಂದಿಗೆ ಅವರುಗಳಿಗೆ ಮೂಲಭೂತ ಸೌಕರ್ಯಗಳು ಸೇರಿದಂತೆ ವೈಯಕ್ತಿಕ ಸೌಲಭ್ಯಗಳನ್ನು ಕಲ್ಪಿಸುವ ಕಾರ್ಯವಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ತಲುಪಿಸಲು ಅನುಕೂಲವಾಗುವ ರೀತಿಯಲ್ಲಿ ಜಿಲ್ಲೆಯ ಪ.ಜಾತಿ, ಪಂಗಡದವರ ನಿಖರ ಮಾಹಿತಿ ಸಂಗ್ರಹಿಸುವುದರೊAದಿಗೆ ಅವರುಗಳಿಗೆ ಭೂ ಒಡೆತನ, ನಿವೇಶನ, ವಾಸಿಸುವ ಮನೆ, ವಿದ್ಯುಚ್ಛಕ್ತಿ ಸೌಲಭ್ಯ, ಸೇರಿದಂತೆ ಅವರ ಆರ್ಥಿಕ ಮಾಹಿತಿಗಳನ್ನು ಸಂಗ್ರಹಿಸಿದ್ದಲ್ಲಿ ಅವರುಗಳ ಅವಶ್ಯಕತೆಗನುಗುಣವಾಗಿ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.10: ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ನಿವಾರೋಣಾಪಾಯ ಸೇರಿದಂತೆ ಸಾಮಾಜಿಕ ಭದ್ರತೆಗಳನ್ನು ರೂಪಿಸಲು ಇ ಶ್ರಮ್ ಯೋಜನೆ ನೊಂದಣಿ ನಡೆಯುತ್ತಿದ್ದು, ವಲಸೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರುಗಳು ತಪ್ಪದೇ ನೊಂದಣಿ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ತಿಳಿಸಿದರು. ಅವರು ಕಾರ್ಮಿಕ ಸಮಗ್ರ ರಾಷ್ಟ್ರೀಯ ದತ್ತಾಂಶ ಇ-ಶ್ರಮ್ ಯೋಜನೆಯ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿ ಸರ್ಕಾರ ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ನಿರ್ವಹಣೆ, ಸಾಮಾಜಿಕ ಭದ್ರತೆ, ಹಾಗೂ ಕಲ್ಯಾಣ ಯೋಜನೆಗಳನ್ನು ರೂಪಿಸಲು ಅಸಂಘಟಿತ ಕಾರ್ಮಿಕರ ದತ್ತಾಂಶವನ್ನು ಕ್ರೂಢೀಕರಿಸಿದ್ದಲ್ಲಿ ಉತ್ತವi ಯೋಜನೆಗಳನ್ನು ರೂಪಿಸಲು ಇ-ಶ್ರಮ್ ನೊಂದಣಿ ಸಹಾಯವಾಗಲಿದೆ ಎಂದರು. ನೊಂದಣಿ ದತ್ತಾಂಶದಿಂದ ಸರ್ಕಾರವು ಅಸಂಘಟಿತ ಕಾರ್ಮಿಕರ ವಿವಿಧ ವರ್ಗದವರಿಗೆ ವಿಶೇಷ ನೀತಿ ನಿಯಮ ಯೋಜನೆ ರೂಪಿಸಲು ಸಾಧ್ಯ, ಅಸಂಘಟಿತ ಕಾರ್ಮಿಕರು ನೊಂದಣಿ ಮಾಡಿಕೊಳ್ಳುವುದರಿಂದ ಶೀಘ್ರದಲ್ಲಿಯೇ ಸರ್ಕಾರದ ಹಲವು ಯೋಜನೆಗಳನ್ನು ಪಡೆಯಬಹುದಾಗಿದೆ ಅಲ್ಲದೇ ನೊಂದಾಯಿಸಿದವರಿಗೆ 1 ವರ್ಷದ ಅವಧಿಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಪಿ. ಗಣಪತಿ ಭಟ್ (61ವರ್ಷ) ಅವರು ಭಾನುವಾರ ನಿಧನರಾಗಿದ್ದಾರೆ. ದಕ್ಷಿಣಕನ್ನಡದ ಪುತ್ತೂರು ತಾಲೂಕಿನ ಪಾದೆಕಲ್ಲಿನವರಾದ ಪಿ. ಗಣಪತಿ ಭಟ್ ಉಡುಪಿಯ ಮಹಾತ್ಮಗಾಂಧಿ ಕಾಲೇಜು, ಕಲ್ಯಾಣಪುರದ ಮಿಲಾಗ್ರೀಸ್ ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಅವರು, ಮೂಲ್ಕಿಯ ವಿಜಯ ಕಾಲೇಜಿನಲ್ಲಿ ಖಾಯಂ ಉಪನ್ಯಾಸಕರಾಗಿ ನೇಮಕಗೊಂಡರು. ಬಳಿಕ ಕುಂದಾಪುರದ ಭಂಡಾರ್ಕಾರ‍್ಸ್ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದು ಎಂ.ಫಿಲ್ ಪದವಿಯನ್ನು ಮುಗಿಸಿದ್ದರು. ಅವರು ಪುತ್ರ ನವೀನ, ಮಗಳು ಶ್ರೀರಕ್ಷಾ, ಪತ್ನಿ ಮತ್ತು ಕುಟುಂಬವನ್ನು ಅಗಲಿದ್ದಾರೆ. ಅವರು ಪಾದೆಕಲ್ಲು ವಿಷ್ಣುಭಟ್ ಅವರ ಸಹೋದರಾಗಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್‌ನ ೯ನೇ ವರ್ಷದ ಟ್ರಸ್ಟ್ ದಿನಾಚರಣೆ ಸಂದರ್ಭ ಬಿಜೂರು ಶೇಡಿಮಕ್ಕಿಮನೆ ಗಂಗಮ್ಮ ವೆಂಕಹಿತ್ಲು ಕುಟುಂಬಕ್ಕೆ ಶ್ರೀ ರಾಮ ಗೃಹ ನಿರ್ಮಾಣ ಯೋಜನೆಯಡಿ ಉಚಿತವಾಗಿ ನಿರ್ಮಿಸಿಕೊಡಲಾದ ಮನೆಯನ್ನು ಇತ್ತಿಚಿಗೆ ಹಸ್ತಾಂತರಿಸಲಾಯಿತು. ಬೆಂಗಳೂರು ರಾಮರಾಜ ಕ್ಷತ್ರಿಯ ಸಮಾಜದ ಮಾಜಿ ಅಧ್ಯಕ್ಷ ಡಿ. ಕೆ. ಮಂಜುನಾಥ ನೂತನ ಗೃಹವನ್ನು ಉದ್ಘಾಟಿಸಿದರು. ನಿವೃತ್ತ ಕರ್ನಲ್ ಡಿ. ಕೆ. ನರಸಿಂಹ ನಾಯಕ್ ಬೆಂಗಳೂರು, ಸ್ವರ್ಣವಲ್ಲಿ ರಾಮಕ್ಷತ್ರಿಯ ಸೀಮಾ ಪರಿಷತ್ನ ಅಧ್ಯಕ್ಷರಾದ ಸುರೇಶ್ ಕೃಷ್ಣ ನಾಯ್ಕ್ ಪುನಾ, ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ಆಡಳಿತ ಟ್ರಸ್ಟೀ ಬಿ. ರಾಮಕೃಷ್ಣ ಶೇರುಗಾರ್, ಟ್ರಸ್ಟಿಗಳಾದ ಬಿ. ಶ್ರೀನಿವಾಸ ಶೇರೆಗಾರ್, ಬಿ. ಶ್ರೀಧರ ಪಡುವರಿ, ಶ್ರೀನಿವಾಸ ಜಿ. ಶಿವಮೊಗ್ಗ, ವೆಂಕಟೇಶ ಕೆ.ಟಿ ಬಿಜೂರು, ಹೆಚ್. ಸುಬ್ರಾಯ ಶೇರೆಗಾರ್, ಜಯಾನಂದ ಹೋಬಳಿದಾರ್, ಜಯಂತಿ ನಾರಾಯಣ ರಾವ್,ಗೋಪಾಲಕೃಷ್ಣ ಕಲ್ಮಕ್ಕಿ, ಶ್ರೀಧರ ಪಿ. ಪಡುವರಿ, ಅಶೋಕ ಕುಮಾರ್ ಬಾಡ, ಚಂದ್ರಶೇಖರ ಕಲ್ಪತರು, ಕೃಷ್ಣಯ್ಯ ವಿ. ಮದ್ದೋಡಿ, ವೆಂಕಟರಮಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಕಾರ್ಡುದಾರರಿಗೆ ಇನ್ನುಮುಂದೆ ಪಡಿತರ ಕೇಂದ್ರಗಳಲ್ಲಿ ಇನ್ನುಮುಂದೆ ಕುಚ್ಚಿಲಕ್ಕಿ ದೊರೆಯಲಿದೆ. ಕೇಂದ್ರ ಸರಕಾರ ಅನುಮತಿ ನೀಡಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಘೋಷಣೆ ಮಾಡಿದ್ದಾರೆ. ಪ್ರತಿ ತಿಂಗಳು ಪಡಿತರ ಕಾರ್ಡ್ ಮೂಲಕ ಬಡವರಿಗೆ ಕುಚ್ಚಿಲಕ್ಕಿ ವಿತರಣೆ ಮಾಡಲು ಕೇಂದ್ರ ಅನುಮತಿ ನೀಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ತಿಂಗಳಿಗೆ 1 ಲಕ್ಷ ಕ್ವಿಂಟಾಲ್ ಅಕ್ಕಿ ಬಿಡುಗಡೆಯಾಗುತ್ತದೆ. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಹೋರಾಟವನ್ನು ಮಾತುಕತೆಯನ್ನು ಮಾಡಿದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಕುಚ್ಚಿಲಕ್ಕಿ ವಿತರಿಸಲು ಶಿಫಾರಸು ಮಾಡಿದ ಮುಖ್ಯಮಂತ್ರಿ, ಆಹಾರ ಸಚಿವ ಉಮೇಶ್ ಕತ್ತಿ, ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿಗೆ ಧನ್ಯವಾದ ಸಲ್ಲಿಕೆ ಮಾಡುತ್ತೇನೆ. ಎಂ4, ಜಯಾ ತಳಿಯ ಅಕ್ಕಿಯನ್ನು ಖರೀದಿ ಮಾಡಿ ವಿನಿಯೋಗಿಸುತ್ತೇವೆ ಎಂದರು. ಈಗಾಗಲೇ ಕೆಲವೆಡೆಯಿಂದ ಭತ್ತ ಖರೀದಿಯಾಗಿದೆ. ಖರೀದಿ ಮಾಡಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ/ಬೈಂದೂರು: ಕೋವಿಡ್ – ಓಮಿಕ್ರಾನ್ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಜಾರಿಗೊಳಿಸಿದ ವೀಕೆಂಡ್ ಕರ್ಪ್ಯೂಗೆ ಶನಿವಾರ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರ ಪ್ರದೇಶಗಳಲ್ಲಿ ಅಗತ್ಯ ವಸ್ತುಗಳ ಸೇವೆಯನ್ನು ಹೊರತುಪಡಿಸಿ ಬಹುಪಾಲು ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಜನಸಂಚಾರವೂ ವಿರಳವಾಗಿತ್ತು. ಗ್ರಾಮೀಣ ಭಾಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಸಂಚಾರ ವಿರಳವಾಗಿದ್ದರೂ, ನಿಗದಿತ ಕಾರ್ಯಕ್ರಮಗಳು ನಡೆದವು. ಅಂಗಡಿಗಳನ್ನು ಅರ್ಧ ತೆರೆದು ವ್ಯವಹಾರ ನಡೆಸುತ್ತಿರುವುದು ಸಹಜವಾಗಿತ್ತು. ಕುಂದಾಪುರದ ನಗರದಲ್ಲಿ ವಿರಳ ಬಸ್ ಸಂಚಾರವಿದ್ದರೂ, ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರಲಿಲ್ಲ. ಅಂಗಡಿ ಮುಂಗಟ್ಟು ತರೆದಿದ್ದರೂ ಗ್ರಾಹಕರ ಇರಲಿಲ್ಲ. ಶನಿವಾರ ಸಂತೆ ರದ್ದಾಗಿದ್ದು, ಸಂಗಮ ಬಳಿ ಸಣ್ಣಪುಟ್ಟ ತರಕಾರಿ ಮೀನು ಮಾರಾಟ ನಡೆಯಿತು. ಹೂ, ಹಣ್ಣು ಹಂಪಲು, ತರಕಾರಿ ಅಂಗಡಿಗಳು ಕೂಡಾ ಬಿಕೋ ಎನ್ನುವಂತೆ ಇತ್ತು. ಶಿರೂರು ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿ ವಾಹನಗಳನ್ನು ಬಿಡಲಾಗುತ್ತಿತ್ತು. ಕುಂದಾಪುರ ನಗರದ ಶಾಸ್ತ್ರೀವೃತ್ತ ಸಹಿತ ಕೆಲವೆಡೆ ಪೊಲೀಸರು, ವಾಹನಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.4: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ವರ್ಗದ ಜಮೀನು ಹೊಂದಿರುವ ರೈತರಿಗೆ ಬಿದಿರು ಕೃಷಿ ಮಾಡಲು, ಪ್ರತೀ ಎಕರೆಗೆ ಪ್ರತೀ ವರ್ಷ 18,000 ರೂ. ನಂತೆ ಮೂರು ವರ್ಷಗಳ ಕಾಲಾವಧಿಗೆ ಸಹಾಯಧನ ಒದಗಿಸುವ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574814 ಅನ್ನು ಸಂಪರ್ಕಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೊರೆತ ಹಣವನ್ನು ವಾರಿಸುದಾರರಿಗೆ ಹಿಂದಿರುಗಿಸುವ ಮೂಲಕ ಎಸ್ಸಿಾಡಿಸಿಸಿ ಬ್ಯಾಂಕ್ ವಾಹನ ಚಾಲಕ ರಾಜೇಶ್ ಮೊಗವೀರ ಪ್ರಾಮಾಣಿಕತೆ ಮೆರೆದಿದ್ದಾರೆ. ಕಾರ್ಯಕ್ರಮಕ್ಕೆ ಬಂದಿದ್ದ ಮರವಂತೆ ರತ್ನಾಕರ ಪೂಜಾರಿ ಎಂಬುವವರು ರೂ.36350 ಹಣ ಕಳೆದುಕೊಂಡಿದ್ದು, ಅದು ರಾಜೇಶ್ ಮೊಗವೀರ ಅವರಿಗೆ ದೊರಕಿತ್ತು. ಕೂಡಲೇ ಕೂಡಲೇ ಮೈಕ್ ಮೂಲಕ ಮಾಹಿತಿ ರವಾನಿಸಿದ್ದು, ಅದು ರತ್ನಾಕರ ಪೂಜಾರಿ ಅವರ ಹಣ ಎಂಬುದು ತಿಳಿದುಬಂದಿತ್ತು. ಬಳಿಕ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರ ಮೂಲಕ ರತ್ನಾಕರ ಪೂಜಾರಿಯವರಿಗೆ ಹಣವನ್ನು ಹಸ್ತಾಂತರಿಸಲಾಯಿತು. ಬಳಿಕ ರಾಜು ಪೂಜಾರಿ ಅವರು ರಾಜೇಶ್ ಮೊಗವೀರ ಅವರನ್ನು ಅಭಿನಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಕೊಪ್ಪರಿಗೆಬೆಟ್ಟುವಿನಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಶ್ರೀ ವರಲಕ್ಷ್ಮೀ ನಿಲಯ’ ನೂತನ ಗೃಹದ ಹಸ್ತಾಂತರ ಸಮಾರಂಭ ಜ.7ರ ಶುಕ್ರವಾರ ಜರುಗಿತು. ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ನೂತನ ಗೃಹವನ್ನು ಉದ್ಘಾಟಿಸಿ ಆಶೀರ್ವದಿಸಿ, ಮನುಷ್ಯನಲ್ಲಿ ಉತ್ತಮ ಗುಣದೊಂದಿಗೆ ಸಂಸ್ಕಾರವೂ ಅತೀ ಅಗತ್ಯವಾಗಿದೆ. ಧರ್ಮ, ಸಂಸ್ಕೃತಿ, ಸಂಸ್ಕಾರದಿಂದಾಗಿ ಮನುಷ್ಯನ ಉನ್ನತಿ ಹಾಗೂ ರಾಮರಾಜ್ಯದ ಕಲ್ಪನೆ ಸಾಕಾರಗೊಳ್ಳಲು ಸಾಧ್ಯವಿದೆ. ಆ ನಿಟ್ಟಿನಲ್ಲಿ ನಾರಿ ಜಾಗೃತಿಯ ಅಗತ್ಯವಿದೆ. ಹೆಣ್ಣು ಮಕ್ಕಳಿಗೆ ಇದರ ಅರಿವು ಮೂಡಿದರೆ ಕುಟುಂಬ ಹಾಗೂ ಸಮಾಜವನ್ನು ಸರಿದಾರಿಯಲ್ಲಿ ಕೊಂಡೊಯ್ಯಲು ಸಾಧ್ಯವಿದೆ ಎಂದರು. ಗೋವಿಂದ ಬಾಬು ಪೂಜಾರಿ ಅವರು ಸಣ್ಣ ಪ್ರಾಯದಲ್ಲಿಯೇ ದೊಡ್ಡ ಪ್ರಮಾಣದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಈ ಭಾಗದಲ್ಲಿ ಆ ಮಟ್ಟದಲ್ಲಿ ಸೇವೆಯಲ್ಲಿ ತೊಡಗಿಕೊಂಡಿರುವವರು ಕಡಿಮೆ. ಅವರಿಗೆ ದೇವರ ಆಶೀರ್ವಾದ ಸದಾ ಇರಲಿ ಎಂದರು. ಮ್ಯಾನೇಜಿಂಗ್ ಟ್ರಸ್ಟೀ ಡಾ. ಗೋವಿಂದ ಬಾಬು ಪೂಜಾರಿ…
ಸಹಕಾರಿ ಸಂಘಗಳು ಜನರ ಜೀವನಾಡಿಯಾಗಿ ಬೆಳೆದಿದೆ: ಡಾ. ಎಂ. ಎನ್. ರಾಜೇಂದ್ರ ಕುಮಾರ್ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮರವಂತೆ ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಶಾಖೆಯ ಆವರಣದಲ್ಲಿ ಶುಕ್ರವಾರ ಸರಳವಾಗಿ ಜರುಗಿತು. ದ.ಕ ಜಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಯಾವುದೇ ಸೌಲಭ್ಯಗಳಿದ್ದರೂ ನೇರವಾಗಿ ಫಲಾನುಭವಿಯನ್ನು ತಲುಪುತ್ತದೆ. ಸೇವಾಧರ್ಮದಿಂದಾಗಿ ಸಹಕಾರ ಕ್ಷೇತ್ರವಿಂದು ಜನರ ಬ್ಯಾಂಕುಗಳಾಗಿ ಪರಿವರ್ತನೆಗೊಂಡಿದೆ. ಗ್ರಾಮೀಣ ಪ್ರದೇಶದ ಕಟ್ಟಕಡೆಯ ಜನರನ್ನೂ ತಲುಪುವ ಕೊಂಡಿಯಾಗಿ, ಸದಸ್ಯರ ನೋವು-ನಲಿವುಗಳಲ್ಲಿ ಸ್ಪಂದಿಸುವ ಸ್ವಾತಂತ್ರ್ಯದಿಂದ ಸಹಕಾರಿ ಸಂಘಗಳು ಜನರ ಜೀವನಾಡಿಯಾಗಿ ಬೆಳೆದಿದೆ ಎಂದರು. ಅವಿಭಜಿತ ದ.ಕ ಜಿಲ್ಲೆಯಲ್ಲಿ ಕೃಷಿಪತ್ತಿನ ಸಹಕಾರ ಸಂಘಗಳು ಲಾಭದಲ್ಲಿ ಮುನ್ನೆಡೆಯುತ್ತಿದೆ. 26 ವರ್ಷಗಳಿಂದ ದೇಶದಲ್ಲಿಯೇ ಕೃಷಿ ಸಾಲ ಸಮರ್ಪಕವಾಗಿ ಮರುಪಾವತಿಯಲ್ಲಿ ನಮ್ಮ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಇಂಥಹ ಸಹಕಾರ ಸಂಘಗಳು ಸದೃಢವಾಗಿ ಬೆಳೆದರೆ…
