ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಯೊಂದು ಭಾಷೆಗೆ ಅದರದ್ದೆ ಆದ ಅಸ್ತಿತ್ವ ಹಾಗೂ ಐತಿಹಾಸಿಕ ಹಿನ್ನೆಲೆ ಇರುತ್ತದೆ. ಆ ನೆಲೆಯಲ್ಲಿ ಕನ್ನಡ ಭಾಷಿಕರಾದ ನಾವು ಪುಣ್ಯವಂತರು. ಶ್ರೀಮಂತ ಸಾಂಸ್ಕೃತಿಕ ಹಿನ್ನೆಲೆಯನ್ನು ಹೊಂದಿರುವ ಕನ್ನಡ ಭಾಷೆಯನ್ನು ನಾವು ಉಳಿಸಿ ಬೆಳೆಸಬೇಕು. ಜೊತೆಗೆ ದೇಶಾಭಿಮಾನ, ದೇಶ ಭಕ್ತಿ, ಸೈನ್ಯದ ಕುರಿತಾದ ಅಭಿಮಾನವನ್ನು ನಾವು ಬೆಳೆಸಿಕೊಳ್ಳಬೇಕು ಎಂದು ನಿವೃತ್ತ ಯೋಧ ಹಾಗೂ ಸಾಹಿತಿಗಳಾದ ಬೈಂದೂರು ಚಂದ್ರಶೇಖರ ನಾವಡ ಹೇಳಿದರು. ಅವರು ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ 66ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆದ ‘ಕನ್ನಡಕ್ಕಾಗಿ ನಾವು’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ ಉಮೇಶ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ಸುಕುಮಾರ ಶೆಟ್ಟಿ ಕಮಲಶಿಲೆ ಸ್ವಾಗತಿಸಿದರು, ಉಪನ್ಯಾಸಕರಾದ ಅಮೃತಾ ಅತಿಥಿಗಳನ್ನು ಪರಿಚಯಿಸಿ, ಪ್ರವೀಣಾ ಮಹಾಬಲ ಪೂಜಾರಿ ವಂದಿಸಿ, ರೇಷ್ಮಾ ಶೆಟ್ಟಿ ನಿರೂಪಿಸಿದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ರೋಟರಿ ಕ್ಲಬ್ ವತಿಯಿಂದ ವಕ್ವಾಡಿ ಸರಕಾರಿ ಪ್ರೌಢಶಾಲೆಗೆ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾ ಸೇತು ಪುಸ್ತಕವನ್ನು ವಿತರಿಸಲಾಯಿತು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತ ಹೊಳ್ಳ,ರೋಟರಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಕಾರ್ಯದರ್ಶಿ ಪ್ರಭಾಕರ್ ಬಿ ಕುಂಭಾಶಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಅವಳಿ ಕೊಲೆ ಪ್ರಕರಣದ ಆರೋಪಿ, ಜಿಪಂ ಮಾಜಿ ಸದಸ್ಯ ಬಾರಿಕೆರೆ ರಾಘವೇಂದ್ರ ಕಾಂಚನ್ ಜಾಮೀನು ಅರ್ಜಿಗೆ ತಿರಸ್ಕೃತಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಪ್ರಕರಣದ ವಿಚಾರಣೆಯನ್ನು ಮುಂದಿನ ಆರು ತಿಂಗಳೊಳಗೆ ಪೂರ್ಣಗೊಳಿಸುವಂತೆ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಆದೇಶ ನೀಡಿದೆ. 2019ರ ಜ.26ರಂದು ಗೆಳೆಯರಾದ ಯತೀಶ್ ಕಾಂಚನ್ ಹಾಗೂ ಭರತ್ ರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾರಿಕೆರೆ ರಾಘವೇಂದ್ರ ಕಾಂಚನ್ ಸೇರಿದಂತೆ ಒಟ್ಟು 18 ಮಂದಿ ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದರು. ಆರೋಪಿಗಳ ಪೈಕಿ ರಾಘವೇಂದ್ರ ಕಾಂಚನ್ಗೆ ಹೈಕೋರ್ಟ್ 2019ರಲ್ಲಿ ಜಾಮೀನು ನೀಡಿತ್ತು. ಆದರೆ ಭರತ್ ತಾಯಿ ಪಾರ್ವತಿ, ಈ ಜಾಮೀನು ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ 2020ರ ಜ.20ರಂದು ರಾಘವೇಂದ್ರ ಕಾಂಚನ್ನ ಜಾಮೀನು ವಜಾಗೊಳಿಸಿ ಆದೇಶ ನೀಡಿತ್ತು. ಇದೀಗ ಎರಡನೇ ಬಾರಿಗೆ ರಾಘವೇಂದ್ರ ಕಾಂಚನ್ ಜಾಮೀನಿಗಾಗಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.ಈ ಅರ್ಜಿಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾರ್ವಜನಿಕ ಸ್ಥಳಗಳ ಸ್ವಚ್ಚತೆಯನ್ನು ಕಾಪಾಡಲು ಪ್ರತಿಯೊಬ್ಬರೂ ಕ್ರಿಯಾಶೀಲ ಪ್ರಯತ್ನಗಳನ್ನು ಮಾಡಿದರೆ ಸ್ವಚ್ಛ ಭಾರತ ಪರಿಕಲ್ಪನೆ ಸಾಕಾರಗೊಳ್ಳುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು. ಅವರು, ಭಾರತ ಸರ್ಕಾರದ ನೆಹರು ಯುವ ಕೇಂದ್ರ ಉಡುಪಿ ಜಿಲ್ಲೆ ನೇತೃತ್ವದಲ್ಲಿ, ಭಾರತೀಯ ರೈಲ್ವೆ, ರೋವರ್ಸ್ ರೇಂಜರ್ಸ್, ಲಯನ್ಸ್ ಕ್ಲಬ್ ಸಂತೆಕಟ್ಟೆ ಹಾಗೂ ಇತರ ಸಹಯೋಗದೊಂದಿಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದ ಕ್ಲೀನ್ ಇಂಡಿಯಾ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರವಾಸಿ ಸ್ಥಳಗಳ ಸ್ವಚ್ಛತೆಯನ್ನು ಕಾಪಾಡಲು ಪ್ರವಾಸಿಗರು ಮಹತ್ವದ ಪಾತ್ರವನ್ನು ನಿರ್ವಹಿಸಬೇಕು. ಮರುಬಳಕೆಯ ವಸ್ತುಗಳನ್ನು ಹೆಚ್ಚೆಚ್ಚು ಉಪಯೋಗಿಸಿದರೆ ತ್ಯಾಜ್ಯ ಉತ್ಪತ್ತಿ ಕಡಿಮೆಯಾಗುತ್ತದೆ. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಿದರೆ ಕ್ಲೀನ್ ಇಂಡಿಯಾ ಪರಿಕಲ್ಪನೆ ಸಾಕಾರಗೊಳ್ಳುತ್ತದೆ ಎಂದರು. ಲಯನ್ಸ್ ಕ್ಲಬ್ ಸಂತೆಕಟ್ಟೆ ಅಧ್ಯಕ್ಷರಾದ ಶಿಲ್ಪ ಸುದರ್ಶನ್, ರೈಲ್ವೇ ಇಲಾಖೆಯ ಸ್ಟೀವನ್ ಜಾರ್ಜ್, ಕಮರ್ಷಿಯಲ್ ಸೂಪರ್ವೈಸರ್ ಎಸ್.ಕೆ. ಭಟ್, ಸುದರ್ಶನ್ ನಾಯಕ್, ಭಾರತ್ ಸ್ಕೌಟ್ಸ್ ಆಂಡ್ ಗೈಡ್ಸ್ ಉಡುಪಿ ಜಿಲ್ಲೆಯ ಆನಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ದೇಶದ ಆರ್ಥಿಕ, ಸಾಮಾಜಿಕ ಸೇರಿದಂತೆ ಎಲ್ಲಾ ಅಭಿವೃದ್ದಿಗೆ ಭ್ರಷ್ಠಾಚಾರವು ಪ್ರಮುಖ ಅಡಚಣೆಯಾಗಿದ್ದು, ಇದರ ನಿರ್ಮೂಲನೆಯಿಂದ ದೇಶದ ಅಭಿವೃದ್ದಿ ಸಾಧ್ಯವಾಗಲಿದ್ದು, ಇದರ ನಿರ್ಮೂಲನೆಗೆ ಪ್ರತಿಯೊಬ್ಬರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಉಡುಪಿ ಮತ್ತು ದ.ಕನ್ನಡ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ ಹೇಳಿದರು. ಅವರು ಉಡುಪಿಯ ಅಬಕಾರಿ ಭವನದಲ್ಲಿ, ಜಾಗೃತ ಅರಿವು ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರಿ ಕಚೇರಿಗಳಲ್ಲಿ, ಸಮಾಜದಲ್ಲಿ ಭ್ರಷ್ಠಾಚಾರ ಆಳವಾಗಿ ಬೇರೂರಿದ್ದು, ಕೆಟ್ಟ ಪಿಡುಗು ಆಗಿದೆ. ಇದನ್ನು ನಿರ್ಮೂಲನೆ ಮಾಡಲು ಎಲ್ಲಾ ನಾಗರೀಕರು,ಸರ್ಕಾರಿ ನೌಕರರು ಒಟ್ಟಾಗಿ ಕೆಲಸ ಮಾಡಬೇಕಿದೆ, ನೌಕರರು ಸಾರ್ವಜನಿಕರ ಕೆಲಸಗಳಲ್ಲಿ ಅನಗತ್ಯ ವಿಳಂಬಕ್ಕೆ ಆಸ್ಪದ ನೀಡದೇ , ಸಕಾಲದಲ್ಲಿ , ಪ್ರಾಮಾಣಿಕವಾಗಿ ಮಾಡಿಕೊಡಬೇಕು, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ ಮುಂದಿನ ಪೀಳಿಗೆಗೆ ಸ್ಪೂರ್ತಿ ಮತ್ತು ಆದರ್ಶಪ್ರಾಯವಾಗಬೇಕು. ಭ್ರಷ್ಠಾಚಾರ ಪ್ರಕರಣಗಳಲ್ಲಿ ಸಿಲುಕಿದರೆ ಮಾನಸಿಕ ಮತ್ತು ದೈಹಿಕ ಖಿನ್ನತೆ ಅನುಭವಿಸಬೇಕಾಗುತ್ತದೆ. ಭ್ರಷ್ಠಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಲು ಲೋಕಾಯುಕ್ತ ಸಂಸ್ಥೆಯೊಂದಿಗೆ ಸಮಾಜದ ಎಲ್ಲರೂ ಕೈ ಜೋಡಿಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಕಂಬಳ ಸಮಿತಿಯ ಅಧ್ಯಕ್ಷ ವೆಂಕಟ ಪೂಜಾರಿ ಸಸಿಹಿತ್ಲು ಅಧ್ಯಕ್ಷತೆಯಲ್ಲಿ 2021-22ನೇ ಸಾಲಿನ ಕಂಬಳದ ಪೂರ್ವಭಾವಿ ಸಭೆ ಉಪ್ಪುಂದದ ಮಾತಾಶ್ರೀ ಸಭಾ ಭವನದಲ್ಲಿ ನಡೆಯಿತು. ಕಂಬಳ ಸಮಿತಿಯ ಕಾರ್ಯಕಾರಿಯನ್ನು ಮುಂದಿನ ಒಂದು ವರ್ಷದ ಅವಧಿಗೆ ಪುನರಾಯ್ಕೆ ಮಾಡಲಾಯಿತು. ಗಂತಿನಲ್ಲಿ ಕೋಣವನ್ನು ಸ್ಪರ್ಧೆಗೆ ಅಣಿಮಾಡುವ ಸಮಯವನ್ನು ಗರಿಷ್ಠ ಐದು ನಿಮಿಷಕ್ಕೆ ಸೀಮಿತ ಗೊಳಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಈ ಸಂದರ್ಭ ಸಮಿತಿ ಉಪಾಧ್ಯಕ್ಷರಾದ ವೆಂಕಟರಮಣ ಗಾಣಿಗ, ಶ್ರೀರಾಮ್ ಚೈತ್ರ ಪರಮೇಶ್ವರ ಭಟ್ ಬೋಳಂಬಳ್ಳಿ, ರಾಜು ದೇವಾಡಿಗ ಮಿಯ್ಯಾಣಿ, ಕೊಡೇರಿ ಕಂಬಳದ ಯಜಮಾನ ಚನ್ನಕೇಶವ್ ಕಾರಂತ್, ಗುಡಾಡಿ ಶೆಖರ ಪೂಜಾರಿ, ಸುರೇಶ್ ಕಾಡಿತಾರ್, ಕಂಬಳ ಸಮಿತಿಯ ಕಾರ್ಯದರ್ಶಿ ಸುಧೀರ್ ದೇವಾಡಿಗ, ಕೋಶಾಧಿಕಾರಿ ಜನಾರ್ದನ ದೇವಾಡಿಗ, ಕಂಬಳ ಗದ್ದೆ ಯಜಮಾನರು, ಹಗ್ಗದ ಜೋಟಗಾರರು, ಗೋರಿ ಸವಾರಿಗರು, ಕಂಬಳ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಶಿರೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಒಂದರಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ, ದಟ್ಟ ಹೊಗೆ ಕಾಣಿಸಿಕೊಂಡ ಘಟನೆ ಶನಿವಾರ ಅರಾಟೆಯಲ್ಲಿ ರಾ.ಹೆ. 66ರಲ್ಲಿ ಸಂಭವಿಸಿದೆ. ಬಸ್ಸಿನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ಹಾಗೂ ನಿರ್ವಾಹಕರು ಪ್ರಯಾಣಿಕರನ್ನು ಕೆಳಗಿಳಿಸಿ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹೆಚ್ಚಿನ ಅವಘಢ ಸಂಭವಿಸುವುದನ್ನು ತಪ್ಪಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಂಡ್ಸೆ ಶ್ರೀ ಬ್ರಹ್ಮಶ್ರೀ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ ನೂತನ ಆಯ್ಕೆ ಪಕ್ರಿಯೆ ಇತ್ತಿಚೆಗೆ ನಡೆಯಿತು. ಅಧ್ಯಕ್ಷರಾಗಿ ಕೆ. ಬಸವರಾಜ್ ರಾಯಪ್ನಾಡಿ ಮತ್ತು ಉಪಾಧ್ಯಕ್ಷರಾಗಿ ವೆಂಕಟೇಶ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಶಿವರಾಮ ಶೆಟ್ಟಿ ವಂಡ್ಸೆ, ಉದಯ ಕೆ. ನಾಯ್ಕ ವಂಡ್ಸೆ, ಉದಯ ಕೆ. ನಾಯ್ಕ ವಂಡ್ಸೆ, ರವೀಂದ್ರ ಎಸ್. ಬಂಗೇರ ಕುಂದಾಪುರ, ಶಂಕರ್ ಗಾಣಿಗ ಹೋಸಾಡು, ಜಲಜ ಪೂಜಾರಿ ಮಾವಿನಕಟ್ಟೆ, ಶಶಿಕಲಾ ಎಸ್. ವಂಡ್ಸೆ, ಚಂದ್ರ ರಾಯಪ್ನಾಡಿ, ದಿವಾಕರ ವಂಡ್ಸೆ, ದೇವು ಮೆಂಡನ್ ರಾಯಪ್ನಾಡಿ, ನಾಗರಾಜ ಪುತ್ರನ್ ಅಂಬ್ಲಾಡಿ, ಹರೀಶ್ ನಾಯ್ಕ್ ವಂಡ್ಸೆ ಆಯ್ಕೆಯಾಗಿದ್ದಾರೆ. ಈ ಸಂದರ್ಭ ಸಹಕಾರಿ ಕಾನೂನು ಸಲಹೆಗಾರರಾದ ಉಮೇಶ್ ಶೆಟ್ಟಿ, ಸತ್ಯನಿಧಿ ಸಂಗ್ರಾಹಕ ಗುರುರಾಜ ಗಾಣಿಗ ಉಪಸ್ಥಿತರಿದ್ದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಆರ್. ಸಂತೋಷ ಸ್ವಾಗತಿಸಿದರು. ಶಾಖಾ ಸಿಬ್ಬಂದಿ ಅಭಿಷೇಕ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಭಾರತದ ಮುಂಚೂಣಿ ಸಂಗೀತ ನಿರ್ದೇಶಕ, ಕುಂದಾಪುರ ತಾಲೂಕಿನ ರವಿ ಬಸ್ರೂರು ಬಾಲಿವುಡ್ಗೆ ಲಗ್ಗೆಯಿಟ್ಟಿದ್ದು, ಸಲ್ಮಾನ್ ಖಾನ್ ಅವರು ಅಭಿಮಾನದ ಮಾತನಾಡಿದ್ದಾರೆ. ಬಾಲಿವುಡ್ ಕಿಂಗ್ ಸಲ್ಮಾನ್ ಖಾನ್ ನಿರ್ಮಾಣದ ಅಂತಿಮ್ ಸಿನಿಮಾನದ ಹಿನ್ನಲೆ ಸಂಗೀತ ಹಾಗೂ ಚಿತ್ರದ ಹಾಡುಗಳಿಗೆ ಸಂಗೀತ ನೀಡುವ ಮೂಲಕ ರವಿ ಬಸ್ರೂರು ಅವರು ಬಾಲಿವುಡ್ನಲ್ಲಿ ಸದ್ದು ಮಾಡಿದ್ದಾರೆ. ಕನ್ನಡದ ಅನೇಕ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿರುವ ರವಿ ಬಸ್ರೂರು ಅವರಿಗೆ ‘ಉಗ್ರಂ’ ಸಿನಿಮಾ ದೊಡ್ಡ ಬ್ರೇಕ್ ನೀಡಿತ್ತು. ‘ಕೆಜಿಎಫ್’ ಸಿನಿಮಾ ದೇಶದ್ಯಾಂತ ಸಿನಿಮಾ ದಿಗ್ಗಜರು ಇವರತ್ತ ನೋಡುವಂತೆ ಮಾಡಿತ್ತು. ಪ್ರಸ್ತುತ ಶ್ರೀಮುರುಳಿ ಅಭಿನಯದ ‘ಮದಗಜ’ ಸಿನಿಮಾ ಪೂರ್ಣಗೊಳಿಸಿದ್ದಾರೆ. ಕಡಲ್ ಹೆಸರಿನ ಚಲನಚಿತ್ರವೊಂದನ್ನು ಸ್ವಂತ ಬ್ಯಾನರ್ನಡಿ ನಿರ್ಮಿಸುತ್ತಿದ್ದಾರೆ. ದಕ್ಷಿಣ ಭಾರತದ ಬಹುತೇಕ ಭಾಷೆಗಳಿಗೆ ಸಂಗೀತ ಸಂಯೋಜನೆ ಮಾಡಿರುವ ರವಿ ಬಸ್ರೂರು ಹುಟ್ಟೂರು ಬಸ್ರೂರಿನಲ್ಲಿ ಅತ್ಯಾಧುನಿಕ ಸ್ಟುಡಿಯೊ ನಿರ್ಮಿಸಿಕೊಂಡಿದ್ದು, ಸಿನಿಮಾ ದಿಗ್ಗಜರು ಬಸ್ರೂರಿನತ್ತ ಕಣ್ಣು ಹಾಯಿಸುವಂತೆ ಮಾಡಿದ್ದಾರೆ. ಇತ್ತಿಚೆಗೆ ಮುಂಬಯಿಯಲ್ಲಿ ನಡೆದ ಚಿತ್ರದ ಟ್ರೇಲರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಲಕ್ಷ ಕಂಠ ಗಾಯನ ಕಾರ್ಯಕ್ರಮದಡಿ ,ನಾಡಗೀತೆ ಜಯ ಭಾರತ ಜನನಿಯ ತನುಜಾತೆ ಸೇರಿದಂತೆ, ಕನ್ನಡದ ಶ್ರೇಷ್ಠತೆಯನ್ನು ಸಾರುವ, ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು, ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದ ಆವರಣ ಸೇರಿದಂತೆ ಜಿಲ್ಲೆಯಾದ್ಯಂತ ಬೆಳಗ್ಗೆ 11 ಗಂಟೆಗೆ ಏಕಕಾಲದಲ್ಲಿ ಹಾಡುವ ಮೂಲಕ ಜಿಲ್ಲೆಯಾದ್ಯಂತ ಕನ್ನಡದ ಕಂಪನ್ನು ಹರಡಲಾಯಿತು. ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದ ಆವರಣದಲ್ಲಿ ಸುಮಾರು 750 ಕ್ಕೂ ಅಧಿಕ ಮಂದಿಯಿಂದ ಕನ್ನಡ ಗೀತೆಗಳ ಗಾಯನ ನಡೆಯಿತು, ಪ್ರಬಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಸೇರಿದಂತೆ ವಿವಿಧ ಇಲಾಖೆಗಳು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಮಣಿಪಾಲ ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮಕ್ಕಾಗಿ ಬಹುತೇಕ ಪುರುಷ ಸಿಬ್ಬಂದಿಗಳು ಬಿಳಿ ಬಣ್ಣದ ಶರ್ಟ್ ಗಳು ಮತ್ತು ಮಹಿಳಾ…
