ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಭೆಗಳಲ್ಲಿ ಕೊರತೆಯಲ್ಲಿ ಆದರೆ ಮೂಲಭೂತ ಸೌಲಭ್ಯಗಳ ಕೊರತೆ ಎದುರಾಗುತ್ತದೆ ಅಂತಹ ಸಂದರ್ಭದಲ್ಲಿ ಸಮಾಜ ಸ್ಪಂದಿಸುವ, ಅದನ್ನು ಅಭಿವೃದ್ಧಿಪಡಿಸುವ ಕಾರ್ಯ ಮಾಡಬೇಕಾಗುತ್ತದೆ ಎಂದು ಕರ್ನಾಟಕ ಬ್ಯಾಂಕ್ ಎಂ.ಡಿ ಮಹಾಬಲೇಶ್ವರ ಎಂ. ಎಸ್ ಹೇಳಿದರು. ಅವರು ಬೈಂದೂರಿನ ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಯು.ಬಿ ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ನೂತನ ಶಾಲಾ ವಾಹನಗಳನ್ನು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಯು. ಬಿ. ಶೆಟ್ಟಿ ನೀಡುತ್ತಿರುವ ಶೈಕ್ಷಣಿಕ ಕೊಡುಗೆ ಅಭಿನಂದನೀಯ. ಉತ್ತಮ ಶೈಕ್ಷಣಿಕ ವಾತಾವರಣ, ಶಿಕ್ಷಕರ ತಂಡ ಆಡಳಿತ ಮಂಡಳಿ ಸಹಕಾರ ಇಲ್ಲಿರುವುದು ತಿಳಿಯುತ್ತದೆ. ಸಾಮಾಜಿಕ ಚಿಂತನೆ ಹಾಗೂ ಕಳಕಳಿ ಇದ್ದಾಗ ಇಂತಹ ಕಾರ್ಯ ಸಾಧ್ಯವಾಗುತ್ತದೆ ಎಂದರು. ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ (ಐ.ಪಿ.ಎಸ್) ಮಾತನಾಡಿ ವಿದ್ಯೆ ಅತ್ಯಮೂಲ್ಯ ಆಸ್ತಿ. ವಿದ್ಯಾರ್ಥಿಗಳು ಪಾಲಕರ ಕನಸನ್ನು ಸಾಕಾರಗೊಳಿಸುವ ಜವಾಬ್ದಾರಿಯ ಜೊತೆಗೆ ಸಮರ್ಪಕ ಗುರಿಯೊಂದಿಗೆ ಮುನ್ನಡೆಯುವುದು ಅಗತ್ಯ. ಹೀಗಾಗಿ ಶೈಕ್ಷಣಿಕ ಬದುಕನಲ್ಲಿ ವಿದ್ಯಾರ್ಥಿಗಳು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಮೆಮೋರಿಯಲ್ ಆಂಗ್ಲಮಾಧ್ಯಮ ಪ್ರೌಢಶಾಲೆಗಳಲ್ಲಿ 6, 7 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸುರಕ್ಷತಾ ಕಾರ್ಯಾಗಾರ ಜರುಗಿತು. ಕುಂದಾಪುರದ ಸಂಚಾರಿ ಪೊಲೀಸ್ ಠಾಣೆಯ ಆರಕ್ಷಕ ನವೀನ್ ಕುಮಾರ್ ಮಾತನಾಡಿ, ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಸಂಸ್ಥೆಯ ಉಪಪ್ರಾಂಶುಪಾಲೆ ಶುಭಾ ಕೆ ಎನ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯಶಿಕ್ಷಕಿ ಕವಿತಾ ಭಟ್, ಪ್ರೌಢಶಾಲಾ ಸಂಯೋಜಕ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ಶಾಲಾ ಸಂಯೋಜಕ ಶಿಕ್ಷಕರಾದ ಕವಿತಾ ಪಿ ಮತ್ತು ವೀರೇಂದ್ರ ನಾಯಕ್ ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕಿ ಭಾಗ್ಯ ಸ್ವಾಗತಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಹಟ್ಟಿಯಂಗಡಿ ವಲಯದ ದೇವಲ್ಕುಂದ ಕಾರ್ಯಕ್ಷೇತ್ರದ ದೃಷ್ಟಿಗಣಪತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ, ಮತ್ತು ಒಕ್ಕೂಟದ ಮಹಾಸಭೆ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಕಟ್‌ಬೇಲ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್ ಪುತ್ರನ್ ಉದ್ಘಾಟಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಯಿಂದ ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ ಬದಲಾವಣೆ ಹೊಂದಿದ್ದಾರೆ. ಶಿಸ್ತು, ಸಮಯಪ್ರಜ್ಞೆ, ಧೈರ್ಯ, ಆತ್ಮವಿಶ್ವಾಸ ಮೂಡಿದೆ ಎಂದರು. ಧ.ಗ್ರಾ ಯೋಜನೆಯ ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕ ಗಣೇಶ್, ಬಿ ಅವರು, ಜ್ಞಾನವಿಕಾಸ ಕಾರ್ಯಕ್ರಮ ಉದ್ದೇಶ ಆಶಯಗಳ ಮಾಹಿತಿ ನೀಡಿದರು. ಜ್ಞಾನವಿಕಾಸ ಕಾರ್ಯಕ್ರಮ ಬೈಂದೂರು ತಾಲೂಕಿನಲ್ಲಿ ಕೇವಲ 1000 ಮಹಿಳೆಯರಿಗೆ ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸದುಪಯೋಗಗೊಳಿಸಿಕೊಳ್ಳಬೇಕು. ಜೀವನದಲ್ಲಿ ಪ್ರಗತಿ ಸಾಧಿಸಬೇಕು ಎಂದರು. ಅಶೋಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯೆ ಶೋಭಾ ಜಿ ಪುತ್ರನ್, ಗ್ರಾಮ ಪಂಚಾಯಿತಿ ಸದಸ್ಯ ಶರತ್ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಒಕ್ಕೂಟದ ಮಾಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ, ಡಿ. 21: ವಡ್ಡರ್ಸೆ ರಘುರಾಮ ಶೆಟ್ಟಿಯವರು ಈ ನಾಡು ಕಂಡ ಶ್ರೇಷ್ಠ ಸಮಾಜವಾದಿ ನಿಲುವಿನ ಪತ್ರಕರ್ತರಾಗಿದ್ದು ಅವನರನ್ನು ಇಡೀ ರಾಜ್ಯವೇ ಗೌರವಿಸುತ್ತದೆ ಎಂದು ಬ್ರಹ್ಮಾವರ ಸ್ಟೋಟ್ಸ್ ಕ್ಲಬ್ನ ಅಧ್ಯಕ್ಷ ಚಂದ್ರಶೇಖರ್ ಹೆಗ್ಡೆ ತಿಳಿಸಿದರು. ಅವರು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಮುಂಗಾರು ಪತ್ರಿಕೆಯ ಸಂಪಾದಕ ದಿ| ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿನಲ್ಲಿ ಕೊಡಮಾಡುವ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಡಿ. ೨೧ರಂದು ವಡ್ಡರ್ಸೆಯವರ ಮನೆಯಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು. ಅವರ ಹುಟ್ಟೂರಿನ ಮನೆಯಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸಂಘಟಿಸುತ್ತಾ ಬಂದಿರುವುದು ಶ್ಲಾಘನೀಯ. ನಿಮ್ಮ ಕಾರ್ಯಕ್ರಮಕ್ಕೆ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನಿರತಂತರ ಸಹಕಾರ ನೀಡಲಿದೆ ಎಂದರು. ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಮಾತನಾಡಿ, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಅತ್ಯುತ್ತಮವಾದ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಎಲ್ಲಾ ಸಂಘಟನೆಗಳಿಗೆ ಇದು ಆದರ್ಶವಾಗಿದೆ. ನಿಮ್ಮ ಒಗ್ಗಟ್ಟು ಇದೇ ರೀತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮನದಲ್ಲಿ ಮೂಡುವ ನೂರಾರು ತುಡಿತಗಳ ದಾಖಲಿಕರಣವೇ ಸಾಹಿತ್ಯ, ಸಾಹಿತ್ಯದ ಕಡೆ ಒಲವು ಇರುವವರ ಬದುಕಿನ ಅಂಗವಾಗಿ ಪುಸ್ತಕಗಳಿರುತ್ತೆ, ನಾವು ರಚಿಸಿದ ಕವನ, ಕಥೆಗಳು ನಮ್ಮೊಳಗೆ ಉಳಿಯದೆ ಇಂತಹ ಸಾಹಿತ್ಯ ಸಮ್ಮೇಳನ ಅನಾವರಣಗೊಳಿಸಬೇಕು. ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆಯರು ತಮ್ಮ ಇರುವಿಕೆಯನ್ನು ತೋರಿಸಿಕೊಳ್ಳಬೇಕು ಎಂದು ಸಮ್ಮೇಳನಾಧ್ಯಕ್ಷೆ ಅಮಿತಾಂಜಲಿ ಕಿರಣ್ ಹೇಳಿದರು. ಕೋಟ ಕಾರಂತ ಥೀಂ ಪಾರ್ಕ್ನ ಹೊರಾಂಗಣದ ಸಂಗೀತ ಕಾರಂಜಿಯ ವೀಕ್ಷಣಾ ಗ್ಯಾಲರಿಯಲ್ಲಿ ಕೋಟ ಡಾ.ಶಿವರಾಮ ಕಾರಂತ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಕಾರಂತರ ೨೪ನೇ ಪುಣ್ಯ ಸ್ಮೃತಿ ದಿನಾಚರಣೆಯ ಅಂಗವಾಗಿ ಕೋಟದ ಕಾರಂತ ಥಿಂ ಪಾರ್ಕ್ನಲ್ಲಿ ಭಾನುವಾರ ನಡೆದ ಉಡುಪಿ ಜಿಲ್ಲೆಯ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಚಿನಂಪ-2021(ಕವಿತನದ ಹೂ ಕಂಪನ)ದಲ್ಲಿ ಅವರು ಮಾತನಾಡಿದರು. ಇದಕ್ಕೂ ಮುನ್ನ ಕಾರ್ಯಕ್ರಮ ಉದ್ಘಾಟಿಸಿದ ಸಾಹಿತಿ ಹಾಗೂ ಉಪನ್ಯಾಸಕಿ ಅಂಬಲಪಾಡಿಯ ವಾಸಂತಿ ಶೆಟ್ಟಿ ಮಾತನಾಡಿ ಎಲ್ಲದರಲ್ಲೂ ಶಕ್ತಿ ಅಡಗಿದೆ. ವೈಜ್ಞಾನಿಕ ಯುಗದಲ್ಲಿ ಅಗೋಚರ ಶಕ್ತಿಗಳಿಂದ ಕೂಡಿದ ಪ್ರಕೃತಿಯೊಂದಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.21: ಕೊಲ್ಲೂರು ವ್ಯಾಪ್ತಿಯ ಗ್ರಾಮ ಪಂಚಾಯತ್ಗಳ ಜನರ ಆರ್ಥಿಕ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸುವ ಯೋಜನೆಗಳನ್ನು ರೂಪಿಸುವುದರೊಂದಿಗೆ, ನಿಗದಿತ ಕಾಲಾವಧಿಯೊಳಗೆ ಅವುಗಳನ್ನು ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ, ಕೊಲ್ಲೂರು ದೇವಸ್ಥಾನ ವ್ಯಾಪ್ತಿಯಲ್ಲಿ ಆರ್ಥಿಕ ಚಟುವಟಿಕೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಲ್ಲಿ ಕಿರು ಉದ್ಯಮಗಳ ಸ್ಥಾಪನೆ ಕುರಿತ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಅಭಿವೃದ್ಧಿ ಮಂತ್ರಾಲಯದ ವತಿಯಿಂದ ದೇಶದ ಪ್ರತಿಷ್ಠಿತ 6 ದೇವಸ್ಥಾನದ ನಗರಗಳಲ್ಲಿ ಸಣ್ಣ ಉದ್ದಿಮೆಗಳನ್ನು ಉತ್ತೇಜಿಸಲು ಹಾಗೂ ಮೇಲ್ವಿಚಾರಣೆ ನಡೆಸಲು ಮುಂದಾಗಿದ್ದು, ಅವುಗಳಲ್ಲಿ ಹರಿದ್ವಾರ, ಬುದ್ದಗಯಾ, ಪಂಡರಾಪುರ, ಪುರಿ, ವಾರಣಾಸಿ ದೇವಸ್ಥಾನಗಳೂ ಸೇರಿದಂತೆ, ಜಿಲ್ಲೆಯ ಕೊಲ್ಲೂರು ದೇವಸ್ಥಾನವು ಸೇರಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು. ಕೊಲ್ಲೂರು ದೇವಸ್ಥಾನಕ್ಕೆ ಪ್ರತಿವರ್ಷವೂ ದೇಶದ ಅನೇಕ ರಾಜ್ಯಗಳಿಂದ ಅಸಂಖ್ಯಾತ ಭಕ್ತಾಧಿಗಳು ಬರುವುದರಿಂದ ಧಾರ್ಮಿಕ ಪ್ರವಾಸಿ ಕೇಂದ್ರವಾಗಿದೆ. ಪ್ರವಾಸೋದ್ಯಮಕ್ಕೆ ಪೂರಕವಾಗುವ ಆರ್ಥಿಕ ಚಟುವಟಿಕೆಗಳು ವ್ಯವಸ್ಥಿತ ರೀತಿಯಲ್ಲಿ ನಡೆಯುವ ಹಾಗೆ ಉತ್ತೇಜಿಸಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಲೆಯ ಪ್ರತಿಯೊಬ್ಬ ಪ್ರಾಕ್ತನ ವಿದ್ಯಾರ್ಥಿಗಳಲ್ಲಿ ನನ್ನ ಶಾಲೆ ಎಂಬ ಪ್ರೀತಿ ಬೆಳೆದಾಗ, ಶಾಲೆಯ ಬಗ್ಗೆ ಅಭಿಮಾನ ಮೂಡಿದಾಗ ಶಾಲೆಯ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಲಿದೆ. ಶಾಲೆಯ ಆಗುಹೋಗುಗಳಿಗೆ ಸ್ಪಂದಿಸುತ್ತಾ ಶಾಲೆಯ ಅಭಿವೃದ್ಧಿಗೆ ಶ್ರಮಿಸಿದಾಗ ನಮ್ಮಲ್ಲಿ ಆತ್ಮತೃಪ್ತಿ ಭಾವನೆ ಮೂಡುತ್ತದೆ. ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿರುವ ಈ ಕಾಲಘಟ್ಟದಲ್ಲಿ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತವಾಗಬಾರದು. ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ ಶಾಲೆಯ ಮಕ್ಕಳ ಕಷ್ಟಸುಖಗಳಿಗೆ ಸ್ಪಂದಿಸುವ ಮನೋಭಾವ ಎಲ್ಲರಲ್ಲೂ ಬೆಳೆಯಬೇಕು ಎಂದು ಶಾಲೆಯ ಹಳೆ ವಿದ್ಯಾರ್ಥಿ ರಾಘವೇಂದ್ರ ಕೋಟಾನ್ ಬೆಂಗಳೂರು ಹೇಳಿದರು. ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ೬,೭ ಮತ್ತು ೮ನೇ ತರಗತಿಯ ಸುಮಾರು ೧೦೫ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್‌ಗಳನ್ನು ಸೋಮವಾರ ವಿತರಿಸಿ ಅವರು ಮಾತನಾಡಿದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಪಂ ಸದಸ್ಯ ಬಿ.ರಾಘವೇಂದ್ರ ಪೈ ಶುಭಾಶಂಸನೆಗೈದರು. ಎಸ್‌ಡಿಎಂಸಿ ಉಪಾಧ್ಯಕ್ಷೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ನಾಗರಿಕರಾಗಿ ನಮಗೆ ಲಭ್ಯವಿರುವ ಹಕ್ಕುಗಳ ಅರಿವನ್ನು ಹೊಂದಿರಬೇಕಾದದ್ದು ನಮ್ಮ ಜವಾಬ್ದಾರಿಯಾಗಿದೆ. ಮಾಹಿತಿ ಹಕ್ಕು ಕಾಯಿದೆ ಮತ್ತು ಕೇಂದ್ರ ವಿಚಕ್ಷಣಾ ಆಯೋಗವನ್ನು ಸಮರ್ಥವಾಗಿ ಬಳಸಿಕೊಂಡಲ್ಲಿ, ಖಂಡಿತ ಭ್ರಷ್ಟಚಾರ ನಿರ್ಮೂಲನೆಯಲ್ಲಿ ಪ್ರಮುಖ ಪಾತ್ರ ವಹಿಸಬಲ್ಲದು ಎಂದು ಯುವ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡ ಆರ್.ಟಿ.ಐ ಮತ್ತು ಸಿವಿಸಿ ಕುರಿತಾಗಿನ ಅರಿವು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಇನ್ನಿತರ ಸಾಮಾನ್ಯ ಕಾಯಿದೆಗಳ ಬಗೆಗಿನ ಅರಿವು ಮತ್ತದರ ಬಳಕೆಯಿಂದ ನಮ್ಮಲ್ಲಿನ ಆತ್ಮವಿಶ್ವಾಸ ಹೆಚ್ಚುವುದರ ಜೊತೆಗೆ ವಿಶೇಷವಾಗಿ ಸರಕಾರಿ ವಲಯಗಳಲ್ಲಿನ ಕಾರ್ಯಗಳಲ್ಲಿ ಧನಾತ್ಮಕ ಬದಲಾವಣೆಯನ್ನು ನಿರೀಕ್ಷಿಸಲು ಸಾಧ್ಯವಿದೆ. ಇಡೀ ಸಮಾಜಕ್ಕೆ ಈ ಕುರಿತಾದ ಅರಿವನ್ನು ಮೂಡಿಸುವಲ್ಲಿ ನಾವು ಕೈಜೋಡಿಸಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು. ಸರಸ್ವತಿ ವಿದ್ಯಾಲಯದ ಪ್ರಾಂಶುಪಾಲೆ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಶ್ರೇಯ ಎನ್. ಖಾರ್ವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ವಿಭಾಗದ ವಿದ್ಯಾರ್ಥಿ ಸಂಘ “ಸಿವಿಯೇಶನ್” ವತಿಯಿಂದ “ಸ್ವಾದ ಸಾಧನ” ಆಹಾರ ಮೇಳವು ಕಾಲೇಜಿನ ಆವರಣದಲ್ಲಿ ನಡೆಯಿತು. ಆಳ್ವಾಸ್ ಪದವಿ ಕಾಲೇಜಿನ ಹೋಟೆಲ್ ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥ ಟೆರೆನ್ಸ್ ರೋಡ್ರಿಗಸ್ ಮೇಳವನ್ನು ಉದ್ಘಾಟಿಸಿದರು. ಇತ್ತೀಚಿಗಿನ ಜನರ ಬದಲಾಗುತ್ತಿರುವ ಜೀವನ ಶೈಲಿಯಿಂದ, ಆಹಾರ, ತಿಂಡಿ ತಿನಿಸುಗಳ ಬಗ್ಗೆ ಬೇಡಿಕೆ ಹೆಚ್ಚಿದ್ದು, ಮುಂದಿನ ದಿನಗಳಲ್ಲಿ ಆಹಾರೋದ್ಯಮವು ಬೃಹತ್ತಾಗಿ ಬೆಳೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಆಳ್ವಾಸ್ ಶಿಕ್ಷಣ ಪ್ರತಿ?ನದ ಮ್ಯಾನೆಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ತಾಂತ್ರಿಕ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳೆ ಆಯೋಜಿಸಿದ ಇಂತಹ ಕಾರ್ಯಕ್ರಮಗಳಿಂದ ಅವರ ಆತ್ಮಸ್ಥೈರ್ಯ ಹೆಚ್ಚಾಗಲಿದ್ದು ಮುಂದಿನ ಜೀವನಕ್ಕೆ ಉಪಯೋಗವಾಗಲಿದೆ ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ| ಪೀಟರ್ ಫೆನಾಂಡೀಸ್‌ರವರು ಮಾತನಾಡಿ, ಭಾರತೀಯ ಪರಂಪರೆ ಶೈಲಿಯ ಖಾದ್ಯಗಳ ಮಹತ್ವ, ಆಧುನಿಕ ಆಹಾರ ಪದ್ಧತಿ, ಆಹಾರ ಕ್ಷೇತ್ರದಲ್ಲಿ ಸಂಶೋಧನೆ ಇತ್ಯಾದಿ ವಿ?ಯಗಳ ಬಗ್ಗೆ ಮಾಹಿತಿ ನೀಡಿದರು. ಮೇಳದಲ್ಲಿ ಕರ್ನಾಟಕದ ವಿವಿಧ ಶೈಲಿಯ ಖಾದ್ಯಗಳು, ಈಶಾನ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಗಾಂಜಾ-ಡ್ರಗ್ಸ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದ್ದು ಗೃಹ ಸಚಿವರು, ಜಿಲ್ಲಾ ಪೊಲೀಸ್ ವರಿಷ್ಠರು ಇದನ್ನು ಗಂಭೀರವಾಗಿ ಪರಿಗಣಿಸಿ ಮಾದಕ ವಸ್ತು ಮಾರಾಟ ಜಾಲದಲ್ಲಿ ತೊಡಗಿರುವವರಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದ್ದಾರೆ. ಅವರು ಸದನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ್ದು, 2019ರಲ್ಲಿ 203 ಪ್ರಕರಣ, 2020ರಲ್ಲಿ 250 ಪ್ರಕರಣ ಹಾಗೂ 2021ರಲ್ಲಿ ಮತ್ತೂ ಹೆಚ್ಚು ಪ್ರಕರಣ ವರದಿಯಾಗಿದೆ. ವೆಬ್ಸೈಟ್ ಮೂಲಕವೂ ಮಾರಾಟ ಮಾಡಲಾಗುತ್ತಿದೆ. ಯುವ ಜನತೆ ಇದರಿಂದ ದಾರಿ ತಪ್ಪುತ್ತಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಾದಕ ವ ವಸ್ತು ಮಾರಾಟ ಜಾಲದಲ್ಲಿ ತೊಡಗಿರುವವರಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದಿದ್ದಾರೆ. ಇದರೊಂದಿಗೆ ಮಟ್ಕಾ ದಂದೆ ಸ್ಪಲ್ವ ಕಡಿವಾಣಕ್ಕೆ ಬಂದಿದೆ ಆದರೆ ಗೂಡಂಗಡಿಗಳಲ್ಲಿ ಮಧ್ಯ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆಯೂ ಗಮನ ಹರಿಸುವಂತೆಯೂ ಅವರು ಬಿ.ಎಂ ಸುಕುಮಾರ ಶೆಟ್ಟಿ ಅವರು…
