ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜು ಶೇ.93 ಫಲಿತಾಂಶವನ್ನು ದಾಖಲಿಸಿದ್ದು, ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶವನ್ನು ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ ಮನ್ವಿತಾ (557) ಅಂಕಗಳನ್ನು ಪಡೆದು ಪ್ರಥಮ ಸ್ಥಾನಗಳಿಸಿದ್ದಾರೆ. ಶಾಂಭವಿ (517), ಸಂಕೇತ್ ನಾರಾಯಣ ಪೂಜಾರಿ (512) ಅಂಕಗಳನ್ನು ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಪ್ರೀತಿ (586) ಅಂಕಗಳನ್ನು ಪಡೆಯುವ ಮೂಲಕ ಬೈಂದೂರು ತಾಲೂಕಿಗೆ ಮತ್ತು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿ ಮೂಡಿ ಬಂದಿದ್ದಾರೆ. ವೈಷ್ಣವಿ (578), ಶಕುಂತಲಾ (565), ನಾಗಶ್ರೀ (533), ಧೀರಜ್ (520), ಅಂಕಗಳನ್ನು ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಕೀಲರ ಸಂಘದ ಪದಗ್ರಹಣ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮವನ್ನು ಮಾನ್ಯ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಿರಣ್ ಗಂಗಣ್ಣನವರ್ ಅವರು ಹಾಗೂ ಮಾನ್ಯ ಸಿವಿಲ್ ನ್ಯಾಯಾಧೀಶರಾದ ಕೆ. ಯು. ವಿದ್ಯಾ ಎ. ಎಸ್. ಅವರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭಾಶಯ ಕೋರಿದರು. ಮಾನ್ಯ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರು ‘ವಕಾಲತ್ತಿನ ಪ್ರಮುಖ ಕೌಶಲ್ಯಗಳು’ಕುರಿತು ಉಪನ್ಯಾಸ ನೀಡಿ, ಎಲ್ಲಾ ವಕೀಲರಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಕಾರ್ಯಕ್ರಮದ ಆರಂಭದಲ್ಲಿ ಉಪಾಧ್ಯಕ್ಷರು ಸ್ವಾಗತ ಕೋರಿದರು. ಗಣೇಶ್ ಮೆಸ್ತ ಅವರು ಪ್ರಸ್ತಾವಿಕ ನುಡಿ ಮಂಡಿಸಿದರು. ಈ ಸಂದರ್ಭದಲ್ಲಿ ಮಾನ್ಯ ನ್ಯಾಯಮೂರ್ತಿ ಇ. ಎಸ್. ಇಂದಿರೇಶ್ ಅವರನ್ನು ಬಾರ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಲಾಯಿತು. ಅವರ ಅಮೂಲ್ಯ ಮಾರ್ಗದರ್ಶನ ಮತ್ತು ಗೌರವಾನ್ವಿತ ಹಾಜರಾತಿಗೆ ಕೃತಜ್ಞತೆ ಸೂಚಿಸಲಾಯಿತು. ಕಾರ್ಯದರ್ಶಿ ಲಿಂಗಪ್ಪ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಿವೃತ್ತ ಅಧ್ಯಾಪಕ, ಪ್ರಗತಿಪರ ಕೃಷಿಕ ಶಿರಿಯಾರ ಮೇಲ್ಮನೆ ಶಿವರಾಮ ಶೆಟ್ಟಿ (97) ಅಲ್ಪಕಾಲದ ಅನಾರೋಗ್ಯದಿಂದ ಆದಿತ್ಯವಾರ ಮಧ್ಯಾಹ್ನ 1 ಗಂಟೆಗೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಪತ್ನಿ, ಮೂವರು ಪುತ್ರರು, ಪುತ್ರಿ ಇದ್ದಾರೆ. ಕರ್ಕುಂಜೆ, ಸಾಬರಕಟ್ಟೆ, ಕಾರ್ಕಳ, ಹಕ್ಲಾಡಿ, ರಾಗಿಹಕ್ಲು ಶಾಲೆಗಳಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದರು. ಅಕ್ರಮ-ಸಕ್ರಮ ಸಮಿತಿ ಸದಸ್ಯರಾಗಿ, ಮೇಕೋಡು ಹಾಲು ಉತ್ಪಾದಕರ ಸಂಘದ ನಿರ್ದೇಶಕರಾಗಿ, ಮೇಕೋಡು ದುರ್ಗಾಪರಮೇಶ್ವರಿ ದೇವಳದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಜ್ಞಾನ ವಿಭಾಗದಲ್ಲಿ 598 ಅಂಕಗಳನ್ನು ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿನಿ ರಶ್ಮಿ ಅವರಿಗೆ ಸಮರ್ಪಣಾ ಎಜುಕೇಶನಲ್ ಟ್ರ್ರಸ್ಟ್ ಅಧ್ಯಕ್ಷ, ಪ್ರಾಂಶುಪಾಲ ಗಣೇಶ್ ಆರ್. ಮೊಗವೀರ ಅವರು 2 ಲಕ್ಷ ರೂ. ನಗದು ಘೋಷಣೆ ಮಾಡಿದ್ದಾರೆ. ಹೆಮ್ಮಾಡಿಯ ಮತ್ತ್ವಜ್ಯೋತಿ ಸಭಾಂಗಣದಲ್ಲಿ ರ‍್ಯಾಂಕ್ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ಸಂಸ್ಥೆ ಸ್ಥಾಪನೆಯಾದ ನಾಲ್ವೇ ವರ್ಷಗಳಲ್ಲಿ ಕ್ರೀಡೆ, ಸಾಂಸ್ಕೃತಿಕ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಲವು ಸಾಧನೆಗಳನ್ನು ಮಾಡಿದ್ದೇವೆ. ಕೇವಲ ಒಂದೆರಡು ಅಂಕಗಳಿಂದ ರಾಜ್ಯ ಮಟ್ಟದ ರ‍್ಯಾಂಕ್ ತಪ್ಪುತ್ತಿತ್ತು. ಆದರೆ ಈ ಬಾರಿ ಹಲವು ಯೋಜನೆಗಳನ್ನು ಕಾರ್ಯ ರೂಪಕ್ಕೆ ತಂದು ಭೋದಕ ಸಿಬ್ಬಂದಿಗಳ ಪರಿಶ್ರಮದಿಂದಾಗಿ ವಿದ್ಯಾರ್ಥಿಗಳು ಹಲವು ರಾಜ್ಯ ಮಟ್ಟದ ಸಾಧನೆಗಳನ್ನು ಮಾಡಿ ಜನತಾ ಸಂಸ್ಥೆಯ ಕೀರ್ತಿಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಕಾಲೇಜು ಆರಂಭಗೊಂಡ ದಿನಗಳಿಂದಲೂ ಸಾಕಷ್ಟು ಸಮಸ್ಯೆಗಳು ಎದುರಾಗಿದ್ದು, ಜನತಾ ಎಂದರೆ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಗಳಿಗೆ ಮಾತ್ರ ಸೀಮಿತ ಎನ್ನುವ ಟೀಕೆಗಳು ವ್ಯಕ್ತವಾದವು. ಆದರೆ ನಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಮಾಜದ ಬಗ್ಗೆ ಅಪಾರವಾದ ಗೌರವ ಮನ್ನಡೆ ಪಡೆದ ರಮಾನಾಥ ಜೋಗಿ ಹಾಗೂ ಕೂಸ ಪೂಜಾರಿ ಅವರ ಕೊಡುಗೆ ಅನನ್ಯವಾದದ್ದು ಎಂದು ಕೋಟದ ಸಾಂಸ್ಕೃತಿಕ ಚಿಂತಕ ಕೋಟ ಚಂದ್ರಶೇಖರ ಆಚಾರ್ ಹೇಳಿದರು. ಅವರು ಶುಕ್ರವಾರ ಕೋಟದ ಪಂಚವರ್ಣದ ಕಛೇರಿಯಲ್ಲಿ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇತ್ತೀಚಿಗೆ ಅಗಲಿದ ಕೋಟದ ಇರ್ವರು ಗಣ್ಯರಾದ ಗಾಡಿ ಕೂಸ ಪೂಜಾರಿ ಹಾಗೂ ರಮಾನಾಥ ಜೋಗಿ ಅವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಾಜದೊಂದಿಗೆ ಸಮಾಜಕ್ಕಾಗಿ ಶ್ರಮಿಸಿ ಅಪಾರ ಜನ್ನಮನ್ನಣೆ ಪಡೆದವರು ಇರ್ವರು ಮಹಾನ್ ಚೇತನರು,ಅವರ ಇರುವಿಕೆಯ ಕಾಲಘಟ್ಟದಲ್ಲಿ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಗಾಡಿ ಕೂಸ ಪೂಜಾರಿಯವರ ಕುರಿತಾಗಿ ನ್ಯಾಯವಾದಿ ಕೆ. ಅನಂತಪದ್ಮನಾಭ ಐತಾಳ್ ನುಡಿನಮನ ಸಲ್ಲಿಸಿದರು. ರಮಾನಾಥ ಜೋಗಿ ಅವರ ಪುತ್ರ ಶಶಿಧರ ಜೋಗಿ, ಕೋಟ ಅಮೃತೇಶ್ವರೀ ದೇಗುಲದ ಅರ್ಚಕ ಅಶ್ಚಥ್ ಜೋಗಿ, ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಕೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರಾಜ್ಯ ಪ್ರಶಸ್ತಿ ಪುರಸ್ಕೃತ ನರೇಂದ್ರ ಕುಮಾರ್ ಕೋಟ ಅವರಿಗೆ ಹುಟ್ಟೂರ ಸಾಹಿತ್ಯ ಸಾಧಕ ಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು. ಇತ್ತೀಚಿಗೆ ಕೋಟ ಶಾಲೆಯ ಪೂರ್ವ ಕಟ್ಟದ ಸಭಾಂಗಣದಲ್ಲಿ ಕೋಟದ ಮಿತ್ರ ಮಂಡಳಿ ಆಶ್ರಯದಲ್ಲಿನಡೆದ ಕಾರ್ಯಕ್ರಮದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ ರಿಷಿಕಾ ದೇವಾಡಿಗ ಹಾಗೂ ಪ್ರಥ್ವಿ ಪೂಜಾರಿ ಅವರಿಗೆ ಅಣ್ಣಾಜಿ ಬಲ್ಲಾಳ್ ಬಾಲ ಪುರಸ್ಕಾರ ಪ್ರದಾನಿಸಲಾಯಿತು. ಅಂಬಲಪಾಡಿ ಕ್ಷೇತ್ರದ ಧರ್ಮದರ್ಶಿ ಡಾ. ವಿಜಯ ಬಲ್ಲಾಳ್ ಅವರು ಸಮ್ಮಾನ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗೀತಾನಂದ ಟ್ರಸ್ಟ್ ಪ್ರವರ್ತಕ ಆನಂದ್ ಸಿ. ಕುಂದರ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾರ್ಕಳ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ನಿವೃತ್ತ ಶಿಕ್ಷಕ ನರಸಿಂಹ ಐತಾಳ, ಕೋಟ ವಿವೇಕ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ವೆಂಕಟೇಶ ಉಡುಪ, ಕಸಾಪ ತಾಲೂಕು ಅಧ್ಯಕ್ಷ ರಾಮಚಂದ್ರ ಐತಾಳ, ನಿವೃತ್ತ ಮುಖ್ಯ ಶಿಕ್ಷಕ ಶ್ರೀಪತಿ ಹೇರ್ಳೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಮಣೂರು ಒಡಗಿನ ನಂದಿಕೇಶ್ವರ ದೈವಸ್ಥಾನದ ಕೆರೆ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುಕ್ರವಾರ ಚಾಲನೆ ನೀಡಲಾಗಿದೆ. ಸುಮಾರು 200 ಎಕ್ಕರೆ ಅಧಿಕ ವಿಸ್ತೀರ್ಣದ ಕೃಷಿ ಭೂಭಾಗ ಹೊಂದಿದ ಈ ಪ್ರದೇಶದಲ್ಲಿ ಬಹುದೊಡ್ಡ ಕೆರೆಯಾಗಿ ಗುರುತಿಸಿಕೊಂಡ ನಂದಿಕೇಶ್ವರ ದೈವಸ್ಥಾನದ ಕೆರೆ ಮಾತ್ರ ಹೂಳು ಮತ್ತು ಗಿಡಗಂಟಿಗಳಿಂದ ಹಾಸುಹೋಗಿದೆ. ಈ ಬಗ್ಗೆ ಇಲ್ಲಿನ ಗ್ರಾಮಸ್ಥರು ಕೆಲವರ್ಷಗಳ ಹಿಂದೆ ಮರುಜೀವ ನೀಡುವ ಸಲವಾಗಿ ಹೂಳು ಮತ್ತು ಗಿಡ ಗಂಟೆಗಳನ್ನು ತೆರವುಗೊಳಿಸಿದ್ದರು ಆದರೆ ಇದೀಗ ಪುನಃ ಹೂಳು ತುಂಬಿಕೊಂಡಿದ್ದು ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆಯಲಿದೆ. ಸುಮಾರು ೮೨ವರೆ ಸೆಂಟ್ಸ್ ವಿಸ್ತೀರ್ಣದ ಈ ಕೆರೆ ಗ್ರಾಮದ ಅಂತರ್ಜಲ ವೃದ್ಧಿಗೆ ಪೂರಕ ವಾತಾವರಣ ಕಲ್ಪಿಸಿದ್ದು ಕೆರೆ ಪುನರ್ ನವೀಕರಣದ ಶೆಕೆ ಗ್ರಾಮದ ಕೃಷಿಕರಲ್ಲಿ ಮಂದಹಾಸ ಮನೆ ಮಾಡಿದೆ. ಕೆರೆ ಸಮಿತಿ ಮೂಲಕ ಶ್ರೀ ಕ್ಷೇತ್ರ ಅಣಿ:ಕೆರೆ ಅಭಿವೃದ್ಧಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಳೆದ ಹನ್ನೊಂದು ವರ್ಷಗಳಿಂದ ಮಂಗಳೂರನ್ನು ಕೇಂದ್ರ ಸ್ಥಾನವಾಗಿಸಿಕೊಂಡು ಶಿಕ್ಷಣ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಚಟುವಟಿಕೆಯಲ್ಲಿರುವ ಅರೆಹೊಳೆ ಪ್ರತಿಷ್ಠಾನ, ಪ್ರಸ್ತುತ ಬೈಂದೂರು ತಾಲೂಕಿನ ಅರೆಹೊಳೆಯಲ್ಲಿ, ಅರೆಹೊಳೆ ರೆಪರ್ಟರಿ ಮತ್ತು ಥಿಯೇಟರ್ ಸ್ಕೂಲ್ ಎನ್ನುವ ಹೆಸರಲ್ಲಿ ರಂಗತಂಡ ಹಾಗೂ ರಂಗಶಾಲೆಯನ್ನು ಆರಂಭಿಸಿದೆ. ಅರೆಹೊಳೆಯಂತಹ ಗ್ರಾಮೀಣ ಪ್ರದೇಶದಲ್ಲಿ ರಂಗಚಟುವಟಿಕೆ, ಶಿಕ್ಷಣ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಇದೇ ಎ.16 ರಿಂದ 20ರ ತನಕ ಅರೆಹೊಳೆ ದಿಬ್ಬಣ ಎನ್ನುವ ಕಾರ್ಯಕ್ರಮವನ್ನು ಆಯೋಜಿಸಿದ್ದು, ನಮ್ಮ ಬಹು ಮಹತ್ವಕಾಂಕ್ಷೆಯ ಅರೆಹೊಳೆ ರಂಗಶಾಲೆಯ ನೂತನ ಕಟ್ಟಡ ಲೋಕಾರ್ಪಣೆ ಹಾಗೂ ಸಾಂಸ್ಕೃತಿಕ ಆಡುಂಬೊಲ ನಡೆಯಲಿದೆ ಎಂದು ಅರೆಹೊಳೆ ಪ್ರತಿಷ್ಠಾನದ ಮುಖ್ಯಸ್ಥ ಅರೆಹೊಳೆ ಸದಾಶಿವ ರಾವ್ ತಿಳಿಸಿದರು. ಅರೆಹೊಳೆ ರೆಪರ್ಟರಿ ಮತ್ತು ಥಿಯೇಟರ್ ಸ್ಕೂಲ್‌ನಲ್ಲಿ ಎ.16 ಗುರುವಾರ ಬೆಳಿಗ್ಗೆ 8 ಗಂಟೆಗೆ ಎ.ಎಸ್.ಕೆ ಫೌಂಡೇಶನ್ ಪ್ರಾಯೋಜಿತ ಐದು ದಿನಗಳ ರಂಗ ಶಿಬಿರ ರಂಗಿನಾಟವನ್ನು ಯಕ್ಷಗುರು ಸುಜಯೀಂದ್ರ ಹಂದೆ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಮಹಾಗಣಪತಿ ವಾದ್ಯವೃಂದ ಆಕಳಬೈಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಒನ್ ಟ್ಯಾಕ್, ಮಣಿಪಾಲ್ ಸ್ಕೂಲ್ ಆಫ್ ಕಮ್ಯುನಿಕೇಷನ್ ಮತ್ತು ಉಡುಪಿ ಟೂರಿಸಂ ಸಹಭಾಗಿತ್ವದಲ್ಲಿ ಕ್ರಿಯೇಟರ್ಸ್ ಲ್ಯಾಬ್ ಉಡುಪಿ ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಜಿಲ್ಲಾಡಳಿತವು ಹಮ್ಮಿಕೊಂಡಿದೆ. ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಎಲ್ಲ ಸಕ್ರಿಯ ಪಾಲುದಾರರ ಜೊತೆಯಲ್ಲಿ ವಿಶೇಷ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಉಡುಪಿಯ ಸಂಸ್ಕೃತಿ, ಪರಂಪರೆ, ಆಹಾರ ಶೈಲಿ ಮತ್ತು ಧಾರ್ಮಿಕತೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಪ್ರಚಾರ ನೀಡಲು ಉದ್ದೇಶಿಸಲಾಗಿದ್ದು ಇದಕ್ಕೆ ಡಿಜಿಟಲ್ ಸ್ಪರ್ಶ ನೀಡಲಾಗುವುದು ಎಂದರು. ಕ್ರಿಯೇಟರ್ಸ್ ಲ್ಯಾಬ್ ಉಡುಪಿ ಸಂಸ್ಥೆಯು ರಾಷ್ಟ್ರೀಯ ಮಟ್ಟದಲ್ಲಿ ಡಿಜಿಟಲ್ ಕಂಟೆಂಟ್‌ಗಳನ್ನು ತಯಾರಿಸುತ್ತಿದೆ. ಇದರಲ್ಲಿ ವಿದ್ಯಾರ್ಥಿಗಳು, ಕಂಟೆಂಟ್ ಕ್ರಿಯೇಟರ್ಸ್ ಭಾಗವಹಿಸಿ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಮಾಹಿತಿ ನೀಡುವ ಫೋಟೋ ಮತ್ತು ವೀಡಿಯೋಗಳನ್ನು ಹಂಚಿಕೊಳ್ಳುವ ಅವಕಾಶ ಇದೆ. ವಿಶೇಷವಾಗಿ ಕಾಲೇಜು ಮಟ್ಟದಲ್ಲಿ ಲ್ಯಾಬ್‌ಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2025-2026ನೇ ಸಾಲಿನ ಪದವಿಪೂರ್ವ ಕಾಲೇಜಿನ ಫಲಿತಾಂಶ ಏಪ್ರಿಲ್ 09,2026ರಂದು ಪ್ರಕಟವಾಗಿದ್ದು, ಈ ಫಲಿತಾಂಶದಲ್ಲಿ ಕುಂದಾಪುರ ಸುಜ್ಞಾನ ಪಿಯು ಕಾಲೇಜಿನ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳು ಅಮೋಘ ಸಾಧನೆ ಗೈದಿದ್ದಾರೆ. ಕೇವಲ 11 ವಿದ್ಯಾರ್ಥಿಗಳಿಂದ 2024-2025ರಲ್ಲಿ ಆರಂಭವಾದ ಸುಜ್ಞಾನ ಪಿಯು ಕಾಲೇಜು ದ್ವಿತೀಯ ಪಿಯುಸಿಗೆ ಬೇರೆ ಕಾಲೇಜುಗಳಿಂದ ಸುಮಾರು 100 ವಿದ್ಯಾರ್ಥಿಗಳು ದಾಖಲಾತಿ ಪಡೆದು ಒಟ್ಟು 125 ವಿದ್ಯಾರ್ಥಿಗಳು ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತಮ ಅಂಕ ಗಳಿಸಿ ಕಾಲೇಜಿನ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಸಂಸ್ಥೆಯ ಸ್ಪಂದನಾ ಆರ್. ಶೆಟ್ಟಿ 600 ಅಂಕಕ್ಕೆ 592 ಅಂಕಗಳನ್ನು ಪಡೆದು ರಾಜ್ಯಕ್ಕೆ 9ನೇ ರ‍್ಯಾಂಕ್ ಪಡೆದಿದ್ದಾರೆ. ವಿಶೇಷವೆಂದರೆ ಸ್ಪಂದನಾ ಎಸ್.ಎಸ್.ಎಲ್.ಸಿಯಲ್ಲಿ 84% ಅಂಕ ಪಡೆದರೂ ಕೂಡ ದ್ವಿತೀಯ ಪಿಯುಸಿಯಲ್ಲಿ 98.7% ಅಂಕ ಗಳಿಸುವುದರ ಮೂಲಕ ಶ್ರೇಷ್ಠ ಸಾಧನೆಯನ್ನು ಮೆರೆದಿದ್ದಾರೆ. SSLCಯಲ್ಲಿ 95ಕ್ಕಿಂತ ಅಧಿಕ ಅಂಕ ಗಳಿಸಿದ ಕೇವಲ 9 ವಿದ್ಯಾರ್ಥಿಗಳನ್ನು ಒಳಗೊಂಡು ಒಟ್ಟು 125 ವಿದ್ಯಾರ್ಥಿಗಳು ಸುಜ್ಞಾನ ಪಿಯು…
