Author: ನ್ಯೂಸ್ ಬ್ಯೂರೋ

ಕುಂದಾಪುರ: ತಾಲೂಕಿನ ಪ್ರಸಿದ್ಧ ಕಾರಣಿಕ ಸ್ಥಳ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರನ ಸನ್ನಿಧಿಯಲ್ಲಿ ವಾರ್ಷಿಕ ಜಾತ್ರೆ ವೈಭವದಿಂದ ಜರುಗಿತು. ಬೆಳಿಗ್ಗಿನಿಂದ ದೇವಳದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಆರಂಭಗೊಂಡವು. ಶ್ರೀ ಬ್ರಹ್ಮಲಿಂಗೇಶ್ವರನಿಗೆ ಪ್ರಿಯವಾದ ಸೇವಂತಿ ಹೂ ಅರ್ಪಣೆ, ಪೂಜೆ, ಹರಕೆ ಅರ್ಪಣೆ ನಡೆಯಿತು. ನಾಡಿನ ವಿವಿಧೆಡೆಗಳಲ್ಲಿ ನೆಲೆಸಿರುವ ಭಕ್ತರು ಜಾತ್ರೆಯ ಸಂದರ್ಭದಲ್ಲಿ ಮಾರಣಕಟ್ಟೆಗೆ ಆಗಮಿಸಿ ದೇವರ ದರ್ಶನ ಪಡೆದು ಪುನೀತರಾಗುತ್ತಾರೆ.

Read More

ಗಂಗೊಳ್ಳಿ : ಸ್ವಾಮಿ ವಿವೇಕಾನಂದರು ದೇಶದ ಯುವ ಶಕ್ತಿಗೆ ಪ್ರೇರಣೆ. ಹಿಂದೆ ವಿದೇಶಿಯರ ದೃಷ್ಟಿಯಲ್ಲಿ ಭಾರತವೆಂದರೆ ಅನಾಗರಿಕರು ಎಂಬ ಕಲ್ಪನೆ ಇದ್ದಿತು. ಆದರೆ ಆ ಕಲ್ಪನೆಯನ್ನು ತೊಡೆದು ಹಾಕಿ ಭಾರತವೆಂದರೆ ಹಿಂದು ಸಂಸ್ಕೃತಿ ಎಂದು ಜಗತ್ತಿಗೆ ತೋರಿಸಿಕೊಟ್ಟವರು ಸ್ವಾಮಿ ವಿವೇಕಾನಂದರು ಎಂದು ಹಿಂದು ಜಾಗರಣ ವೇದಿಕೆಯ ಮಂಗಳೂರು ವಿಭಾಗದ ಸಂಘಟನಾ ಕಾರ್ಯನಿರ್ವಾಹಕ ಪ್ರಕಾಶ ಕುಕ್ಕೆಹಳ್ಳಿ ಹೇಳಿದರು. ಅವರು ಗಂಗೊಳ್ಳಿಯ ದಾಕುಹಿತ್ಲುವಿನ ಶ್ರೀ ರಾಮ ದೇವಸ್ಥಾನದ ವಠಾರದಲ್ಲಿ ಸ್ವಾಮಿ ವಿವೇಕಾನಂದರ ದೇಶ ಪ್ರೇಮಿಗಳ ಬಳಗ ದಾಕುಹಿತ್ಲು ಗಂಗೊಳ್ಳಿ ಇವರ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 153ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಬೌದ್ಧಿಕ್ ನೀಡಿ ಮಾತನಾಡಿದರು. ಹಿಂದು ಜಾಗರಣ ವೇದಿಕೆ ಬೈಂದೂರು ತಾಲೂಕು ಸಂಚಾಲಕ ವಾಸು ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಾಕುಹಿತ್ಲು ಶ್ರೀ ರಾಮ ದೇವಸ್ಥಾನದ ಅಧ್ಯಕ್ಷ ಜಿ.ಪಿ.ನಾಗೇಶ ಖಾರ್ವಿ, ಕರಾವಳಿ ಯುತ್ ಕ್ಲಬ್ ಅಧ್ಯಕ್ಷ ಸಂತೋಷ ಖಾರ್ವಿ, ಸ್ವಾಮಿ ವಿವೇಕಾನಂದರ ದೇಶ ಪ್ರೇಮಿಗಳ ಬಳಗದ ಅಧ್ಯಕ್ಷ ರಾಜೇಶ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ರಘು…

Read More

ಕುಂದಾಪುರ: ಅವಿಭಕ್ತ ಕುಂಟುಂಬ ಕಣ್ಮರೆಯಾಗಿ ಪ್ಲಾಟ್ ಸಂಸ್ಕೃತಿ ಹೆಚ್ಚುತ್ತಿದ್ದು, ಸನಾತನ ಸಂಸ್ಕೃತಿ ಬಗ್ಗೆ ಜಾಗೃತಿ ಮೂಡಿಸುವ, ಸಮಾಜ ತಪ್ಪು ದಾರಿಹಿಡಿದರೆ ಕಿವಿಹಿಂಡಿ ಬುದ್ದಿ ಹೇಳುವ ಕೆಲಸ ಯುವಕ ಮತ್ತು ಯುವ ಸಂಘಟನೆಯಿಂದ ಆಗಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯ ಪಟ್ಟಿದ್ದಾರೆ. ಹೊಸೂರು ಕಾನ್ಬೇರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆದ ಹೊಸೂರು ಸ್ಪೂರ್ತಿ ಯುವ ವೇದಿಕೆ ವಾರ್ಷಿಕ ಉತ್ಸವ ಮತ್ತು ಸೌಲತ್ತು ವಿತರಣೆ ಸನ್ಮಾನ ಕಾರ‍್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಭಾಗದ ಸಮಸ್ಯೆಗೆ ಯುವಕರು ಕಣ್ಣಾಗಬೇಕು ಎಂದ ಅವರು, ಯುವಕರು ಸಮಸ್ಯೆ ನಡುವೆ ಕೆಲಸ ಮಾಡುವ ಅನಿವಾರ್ಯತೆಯಿದ್ದರೂ, ದಿಕ್ಕೆಡದೆ ಸಮಸ್ಯೆ ಮಟ್ಟೆನಿಂತಿ ಊರಿನ ಅಭಿವೃದ್ಧಿಗೆ ಸಂಘಟಿಕರಾಗುವ ಅನಿವಾರ್ಯತೆ ಇದೆ. ಯುವಕರು ಸಾಗಬೇಕಿದ್ದ ದಾರಿ ಬಹಳವಿದ್ದು, ಕಠಿಣ ನಿ ಲುವುಗಳ ಮೂಲಕ ಊರಿನ ಅಭಿವೃದ್ಧಿಗೆ ಹೆಚ್ಚು ಗಮನ ಹರಿಬೇಕು ಎಂದು ಸಲಹೆ ಮಾಡಿದರು. ರಾಜಕಾರಣ ಹೊರತಾದ ಸಂಘಟನಾ ತಂಡ ಕಟ್ಟಬೇಕು ಎಂದು ಸಲಹೆ ಮಾಡಿದ ಅವರು, ಜನ ಜಾಗೃತಿ ಮೂಡಿಸುವ…

Read More

ಕುಂದಾಪುರ: ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಉಡುಪಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ರೋಟರಿ ಕ್ಲಬ್ ಕುಂದಾಪುರ, ಕೆ.ಎಸ್.ಎಸ್. ಪ್ರೌಢಶಾಲೆ ಹಕ್ಲಾಡಿ ಹಾಗೂ ಸ್ಪಂದನ ಯುವಕ ಮಂಡಲ ಗುಜ್ಜಾಡಿ ಇವರ ಜಂಟಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ ಬುಧವಾರ ಹಕ್ಲಾಡಿಯ ಕೆ.ಎಸ್.ಎಸ್. ಪ್ರೌಢಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗೇಶ ಶೆಣೈ ಉದ್ಘಾಟಿಸಿದರು. ಕಿಶೋರ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಫುರ ರೋಟರಿ ಕ್ಲಬ್‌ನ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಸಂತೋಷ ಕೋಣಿ, ಉಡುಪಿ ನೆಹರು ಯುವಕೇಂದ್ರದ ಜಿಲ್ಲಾ ಸಲಹೆಗಾರ ನರಸಿಂಹ ಗಾಣಿಗ, ಗುಜ್ಜಾಡಿ ಸ್ಪಂದನ ಯುವಕ ಮಂಡಲದ ಅಧ್ಯಕ್ಷ ರಾಘವೇಂದ್ರ ಮೊದಲಾದವರು ಉಪಸ್ಥಿತರಿದ್ದರು. ವಸುಧಾ ಎಸ್.ಎಸ್. ಸ್ವಾಗತಿಸಿದರು. ಸುಜಾತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಯೋಗೇಶ ಹೆಬ್ಬಾರ್ ವಂದಿಸಿದರು.

Read More

ಗಂಗೊಳ್ಳಿ: ಸ್ವಾಮಿ ವಿವೇಕಾನಂದರು ಬಿಟ್ಟು ಹೋದ ಆದರ್ಶಗಳು, ಚಿಂತನೆಗಳಿಂದ ವಿಶ್ವದಲ್ಲಿಯೇ ಓರ್ವ ಮಹಾನ್ ಪುರುಷರಾಗಿ ಗುರುತಿಸಲ್ಪಡುತ್ತಿದ್ದಾರೆ. ಹಿಂದು ಧರ್ಮವನ್ನು ಜಗತ್ತಿಗೇ ಸಾರುವ ಕೈಂಕರ್ಯವನ್ನು ಮಾಡುತ್ತಿದ್ದ ವಿವೇಕಾನಂದರಿಗೆ ಹಿಂದು ಧರ್ಮದ ಬಗ್ಗೆ ಅಪಾರ ಪ್ರೀತಿ ಕಾಳಜಿ ಇದ್ದಿತ್ತು. ಹಿಂದು ಧರ್ಮದ ಉನ್ನತಿಗಾಗಿ ವಿಶ್ವದೆಲ್ಲೆಡೆ ಸಂಚಾರ ಮಾಡಿದ ನಮ್ಮ ದೇಶದ ಸ್ವಾಮೀ ವಿವೇಕಾನಂದರ ಜನ್ಮ ದಿನವನ್ನು ಆಚರಿಸಿ ಅವರಿಗೆ ಗೌರವ ಸಲ್ಲಿಸಬೇಕಾಗಿರುವುದು ಈ ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ ಎಂದು ವಿಶ್ವ ಹಿಂದೂ ಪರಿಷತ್‌ನ ಉಡುಪಿ ಜಿಲ್ಲಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ಕ್ರಾಂತಿ ವೀರರ ಅಭಿಮಾನಿ ಬಳಗದ ಆಶ್ರಯದಲ್ಲಿ ಜರಗಿದ ಸ್ವಾಮಿ ವಿವೇಕಾನಂದರ 153ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಸ್ವಾಮಿ ವಿವೇಕಾನಂದ ಆದರ್ಶ ಚಿಂತನೆಗಳು ನಮ್ಮ ಯುವ ಜನಾಂಗಕ್ಕೆ ಮಾದರಿಯಾಗಬೇಕು. ಅತಿ ಚಿಕ್ಕ ವಯಸ್ಸಿನಲ್ಲಿ ಇವರು ಚಿಕಾಗೋದಲ್ಲಿ ಮಾಡಿದ ಭಾಷಣ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ. ಎಲ್ಲರಲ್ಲೂ ಸಹೋದರ ಸಹೋದರಿಯರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅತಿಥಿ ಉಪನ್ಯಾಸಕರು ಹಲವು ವರ್ಷಗಳಿಂದ ಕಡಿಮೆ ಸಂಬಳದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಆ ಸಂಬಳವನ್ನೂ ಮೂರು ತಿಂಗಳಿನಿಂದ ನೀಡದೆ ಸತಾಯಿಸುತ್ತಿರುವುದಲ್ಲದೇ ನಮ್ಮ ಬೇಡಿಕೆಗಳಿಗೂ ಸರಕಾರ ಕಿವಿಗೊಡುತ್ತಿಲ್ಲ. ಇದು ಹೀಗೆಯೇ ಮುಂದುವರಿದರೆ ತರಗತಿ ಪಾಠಗಳನ್ನು ನಿಲ್ಲಿಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಉಡುಪಿ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ರಂಜಿತ್‌ಕುಮಾರ್ ಶೆಟ್ಟಿ ವಕ್ವಾಡಿ ಹೇಳಿದರು. ಕುಂದಾಪುರ ಮಿನಿ ವಿಧಾನಸೌಧದ ಎದುರು ಅತಿಥಿ ಉಪನ್ಯಾಸಕರ ಬಾಕಿ ಇರುವ ಸಂಬಳ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಹಾಗೂ ಕುಂದಾಪುರ ತಾಲೂಕು ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು. (ಕುಂದಾಪ್ರ ಡಾಟ್ ಕಾಂ ಸುದ್ದಿ) ಅತಿಥಿ ಉಪನ್ಯಾಸಕರುಗಳು ಹಲವಾರು ವರ್ಷಗಳಿಂದ ಸೇವೆಯಲ್ಲಿದ್ದರೂ ಅವರನ್ನು ಸೇವಾ ಭದ್ರತೆ ಕಾಡುತ್ತಿದೆ. ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿ ತಿಂಗಳಿಗೆ ಇಪ್ಪತ್ತೈದು ಸಾವಿರ ವೇತನ ನಿಗದಿಪಡಿಸಬೇಕು ಹಾಗೂ ಖಾಯಂಗೊಳಿಸುವವರೆಗೆ ಅವರ ಸೇವಾ ಅವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಿ ಕ್ಲಪ್ತ…

Read More

ಕೊಲ್ಲೂರು: ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಟ ಶರತ್ ಕುಮಾರ್ ಹಾಗೂ ಅವರ ಪತ್ನಿ ರಾಧಿಕಾ  ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು ವ್ಯವಸ್ಥಾಪನಾ ಸಮಿತಿ ಅದ್ಯಕ್ಷರಾದ ಕೃಷ್ಣಪ್ರಸಾದ್ ಅಡ್ಯಂತಾಯ ಹಾಗೂ ಕಾರ್ಯನಿರ್ವಹಣಾಧಿಕಾರಿ ಟಿ.ಆರ್. ಉಮ ಬರಮಾಡಿಕೊಂಡು ದೇವಳದ ವತಿಯಿಂದ ಗೌರವಿಸಿದರು ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಹೆಚ್, ಕೃಷ್ಣಮೂರ್ತಿ , ಅಧೀಕ್ಷಕ ಕೆ, ರಾಮಕೃಷ್ಣ ಅಡಿಗ ಉಪಸ್ಥಿತರಿದ್ದರು.

Read More

ಗಂಗೊಳ್ಳಿ: ಕಳೆದ ಹಲವು ತಿಂಗಳಿನಿಂದ ಕಾಡುತ್ತಿರುವ ಮತ್ಸ್ಯಕ್ಷಾಮವನ್ನು ನಿವಾರಿಸುವಂತೆ ಹಾಗೂ ಹೇರಳ ಮತ್ಸ್ಯಸಂಪತ್ತಿಗಾಗಿ ಪ್ರಾರ್ಥಿಸಿ ಇಂದು ಗಂಗೊಳ್ಳಿಯ ಬಂದರು ಪ್ರದೇಶದಲ್ಲಿ ಮೀನುಗಾರ ಮಹಿಳಾ ಕಾರ್ಮಿಕರು ವಿಶೇಷ ಸಮುದ್ರ ಪೂಜೆ ಹಾಗೂ ಗಂಗಾ ಪೂಜೆ ನೆರವೇರಿಸಿದರು. ಕಳೆದ ಹಲವು ತಿಂಗಳಿನಿಂದ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕೆ ಇಲ್ಲದೆ ಸ್ತಬ್ಧಗೊಂಡಿದೆ. ದೋಣಿಗಳು, ಬೋಟುಗಳು ದಡ ಸೇರಿರುವುದರಿಂದ ಮೀನುಗಾರರು ಮೀನುಗಾರಿಕೆ ಇಲ್ಲದೆ ಜೀವನ ಸಾಗಿಸಲು ಕಷ್ಟಪಡುತ್ತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಹೇರಳ ಮತ್ಸ್ಯ ಸಂಪತ್ತು ದೊರೆಯುವಂತಾಗಲಿ ಆ ಮೂಲಕ ಮೀನುಗಾರರ ಜೀವನ ಉತ್ತಮವಾಗಲಿ ಎಂದು ಮಹಿಳಾ ಮೀನುಗಾರರು ಶ್ರೀದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

Read More

ಬೈಂದೂರು: ರಂಗಭೂಮಿ (ರಿ.) ಉಡುಪಿ ಇವರ ಆಶ್ರಯದಲ್ಲಿ ಜರುಗಿದ 36ನೇ ರಾಜ್ಯಮಟ್ಟದ ನಾಟಕ ಸ್ಪರ್ಧೆಯಲ್ಲಿ ಲಾವಣ್ಯ (ರಿ.) ಬೈಂದೂರು ತಂಡವು ರಾಜೇಂದ್ರ ಕಾರಂತ ಬೆಂಗಳೂರು ಇವರು ರಚಿಸಿದ ಮುದ್ದಣ್ಣನ ಪ್ರಮೋಷನ್ ಪ್ರಸಂಗ ನಾಟಕವನ್ನು ಪ್ರದರ್ಶಿಸಿ ತೃತೀಯ ಬಹುಮಾನವನ್ನುಗಳಿಸಿದೆ. ಇತ್ತೀಚೆಗೆ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಕಲಾವಿದರು ಪ್ರಶಸ್ತಿಯನ್ನು ಸ್ವೀಕರಿಸಿದರು.

Read More

ಬೈಂದೂರು: ಕೇವಲ ಬಾಹ್ಯ ಮೆರಗನ್ನು ನೀಡುವ, ಮಾನಸಿಕ ಸಂತೋಷವನ್ನು ನೀಡದ ಸಂಸ್ಕೃತಿ ಪಾಶ್ಚಾತ್ಯ ದೇಶಗಳಲ್ಲಿ ಬೆಳೆದು ಬಂದಿದೆ. ಭಾರತೀಯ ಸಂಸ್ಕೃತಿಯಲ್ಲಿನ ಸಭ್ಯತೆ, ಮನಸ್ಸನ್ನು ಸಂಸ್ಕರಿಸುವ ಚಿಕಿತ್ಸಕ ಗುಣವನ್ನು ಅಲ್ಲಿ ಕಾಣಲು ಸಾಧ್ಯವಿಲ್ಲ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ. ಸಯ್ಯದ್ ಜಮಿರುಲ್ಲಾ ಷರೀಫ್ ಹೇಳಿದರು ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಇದರ 16ನೇ ವರ್ಷದ ಸಂಭ್ರಮ ’ಸುರಭಿ ಜೈಸಿರಿ’ಯಲ್ಲಿ ಅವರು ಸಮಾರೋಪ ನುಡಿಗಳನ್ನಾಡಿ ಮನಸ್ಸನ್ನು ತಿದ್ದುವ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯವ ಸಂಸ್ಕೃತಿಗೆ ಹತ್ತಾರು ಮುಖಗಳಿವೆ. ಅದು ಕಲೆ, ಸಾಹಿತ್ಯ, ಸಂಗೀತ, ನೃತ್ಯದ ರೂಪದಲ್ಲಿ ಪ್ರಕಟಗೊಳ್ಳುತ್ತದೆ. ಈ ಒಂದಾದರೂ ಪ್ರಕಾರದಲ್ಲಿ ತೊಡಗಿಸಿಕೊಂಡು ನನ್ನನ್ನು ನಾವು ಸಂಸ್ಕರಿಸಿಕೊಳ್ಳುವುದರೊಂದಿಗೆ ಸಂಸ್ಕೃತಿಯ ಉಳಿವಿಗೂ ಕಾರಣರಾಗಬೇಕಿದೆ ಎಂದರು. ಯಡ್ತರೆ ಗ್ರಾ.ಪಂ ಅಧ್ಯಕ್ಷ ನಾಗರಾಜ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಗಣೇಶ್ ಕೊರಗ, ಸುರಭಿಯ ನಿರ್ದೇಶಕ ಸುಧಾಕರ ಪಿ., ವ್ಯವಸ್ಥಾಪಕ ಕೃಷ್ಣಮೂರ್ತಿ ಉಡುಪ ಉಪಸ್ಥಿತರಿದ್ದರು. ವಿಶ್ವಮಾನ್ಯ ಕನ್ನಡಿಗ…

Read More