Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಲಯ ವೆಲ್ಡಿಂಗ್‌ ಮತ್ತು ಫ್ಯಾಬ್ರಿಕೇಟರ್ಸ್ ಅಸೋಸಿಯೇಶನ್ ರಿ., ಕುಂದಾಪುರ ಇದರ 2026-2028ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಗಣೇಶ್ ಆಚಾರ್ಯ ನಾಯ್ಕನಕಟ್ಟೆ, ಗೌರವಾಧ್ಯಕ್ಷ ಅರುಣ್ ಪಿ. ಆಚಾರ್ಯ ಕುಂದಾಪುರ, ಉಪಾಧ್ಯಕ್ಷರಾಗಿ ಭಾಸ್ಕರ ಆಚಾರ್ಯ ಕೋಟೇಶ್ವರ, ಪ್ರಧಾನ ಕಾರ್ಯದರ್ಶಿ ಸಂತೋಷ ಆಚಾರ್ಯ ಮಧುವನ, ಜೊತೆ ಕಾರ್ಯದರ್ಶಿ ವಿಜಯ ನಾಯಕ್ ಕೋಕ್ಕರ್ಣೆ, ದಿವಾಕರ ಆಚಾರ್ಯ ಕುಂದಾಪುರ, ಕೋಶಾಧಿಕಾರಿ ರಾಘವೇಂದ್ರ ಆಚಾರ್ಯ ವಕ್ವಾಡಿ, ಲಕ್ಷ್ಮೀನಾರಾಯಣ ಆಚಾರ್ಯ ಹಾಲಾಡಿ, ಸಂಘಟನಾ ಕಾರ್ಯದರ್ಶಿ ಗಣಪತಿ ಟಿ. ಶ್ರೀಯಾನ್ ತೆಕ್ಕಟ್ಟಿ, ಮಲ್ಲಿಕಾರ್ಜುನ ಆಚಾರ್ಯ ಕಾಗೇರಿ, ಕೃಷ್ಣಯ್ಯ ಆಚಾರ್ಯ ಮೊಳಹಳ್ಳಿ,, ನಾಗೇಂದ್ರ ಆಚಾರ್ಯ ಗೋಳಿಯಂಗಡಿ, ಮಹೇಶ ಆಚಾರ್ಯ ಹೊಸಕೋಟೆ, ರಾಜೇಶ ಆಚಾರ್ಯ  ಶಂಕರನಾರಾಯಣ, ರಮೇಶ ಆಚಾರ್ಯ ತಲ್ಲೂರು, ಪ್ರಸಾದ ಜೋಗಿ ತೆಕ್ಕಟ್ಟೆ ಆಯ್ಕೆಗೊಂಡಿದ್ದಾರೆ. ಆಡಳಿತ ಮಂಡಳಿ ಸದಸ್ಯರುಗಳಾಗಿ ಸಂತೋಷ ದೇವಾಡಿಗ ಬೀಜಾಡಿ, ರಾಘವೇಂದ್ರ ಕುಂದ‌ರ್ ನಾವುಂದ, ಲಕ್ಷ್ಮಣ ಆಚಾರ್ಯ ತ್ರಾಸಿ, ವಿವೇಕ ನಾಯಕ್ ಕಾಲ್ತೊಡು, ಗಣೇಶ ಆಚಾರ್ಯ ಬೆಳ್ಳೆ, ಅಣ್ಣಪ್ಪ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರಾಷ್ಟ್ರೀಯ ಸ್ವಚ್ಛತಾ ಅಭಿಯಾನದಡಿ ಮೂಡುಗಿಳಿಯಾರಿನ ರೋಟರಿ ಸಮುದಾಯದಳ ಮತ್ತು ಹಿರಿಯ ನಾಗರೀಕ ವೇದಿಕೆ ಗಿಳಿಯಾರು ಇವರ ಸಯುಕ್ತ ಆಶ್ರಯದಲ್ಲಿ ಮೂಡುಗಿಳಿಯಾರು ಶಾಲಾ ವಠಾರ ಹಾಗೂ ಗ್ರಾಮದ ಧಾರ್ಮಿಕ ಸ್ಥಳ ಹೊನ್ನಾರಿ ಬೊಬ್ಬರ್ಯ ದೇವಸ್ಥಾನದ ಆಸುಪಾಸಿನ ರಸ್ತೆ ಬದಿ ಸೇರಿದಂತೆ ವಿವಿಧ ಭಾಗಗಳ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ಜರಗಿತು. ಈ ಸಂದರ್ಭದಲ್ಲಿ ಸ್ಥಳೀಯ ನಾಗರೀಕರಿಗೆ ಸ್ವಚ್ಛತೆ ಮತ್ತು ಆರೋಗ್ಯಕಾಪಾಡುದರ ಬಗ್ಗೆ ಮಾಹಿತಿ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕ ವೇದಿಕೆ ಕೋಟ ಗಿಳಿಯಾರು ಇದರ ಅಧ್ಯಕ್ಷ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಂದ ಕುಂದ ಸೋಮಶೇಖರ್ ಶೆಟ್ಟಿ ಗಿಳಿಯಾರು ಮತ್ತು ವೇದಿಕೆಯ ಸದಸ್ಯರು ಹಾಗೂ ರೋಟರಿ ಸಮುದಾಯದ ದಳದ  ಅಧ್ಯಕ್ಷ ದಯಾನಂದ ಪೂಜಾರಿ, ಮಾಜಿ ಅಧ್ಯಕ್ಷ ಶರಣಯ್ಯ ಹೀರೆಮಠ, ಗೋಪಾಲ ಗರಡಿ ಮಕ್ಕಿ, ಪ್ರಮುಖರಾದ ರಾಘವೇಂದ್ರ ಬಸವನ ಕಲ್ಲು, ಲಲಿತಾ ಪೂಜಾರಿ, ಸದಾನಂದ ಹೊನ್ನಾರಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಂದಿನ ದಿನಗಳಲ್ಲಿ ಶಿಕ್ಷಣ ವ್ಯಾಪಾರೀಕರಣವಾಗುತ್ತಿದ್ದು, ಮಕ್ಕಳಿಗೆ ಬಾಲ್ಯದಲ್ಲಿ ದೊರೆಯಬೇಕಾದ ಶಿಕ್ಷಣ ಸಿಗುತ್ತಿಲ್ಲ. ಈ ಕಾರಣದಿಂದ ಮಕ್ಕಳು ದಾರಿ ತಪ್ಪುತ್ತಿದ್ದು, ದುಶ್ಚಟ, ಭ್ರಷ್ಟಾಚಾರ, ಭಯೋತ್ಪಾದನೆ ಮೊದಲಾದ ಚಟುವಟಿಕೆಗಳತ್ತ ಗಮನ ಹರಿಸುತ್ತಿದ್ದಾರೆ. ಮಕ್ಕಳ ಮೂಲಕ ಮನೆ ಮಂದಿಗೆ ಶಿಕ್ಷಣ ದೊರೆತು ಮನೆ, ಕೇರಿ, ಊರು ಬೆಳಗಬೇಕೆಂಬ ಉದ್ದೇಶದಿಂದ ಶಿಶು ಮಂದಿರಗಳಲ್ಲಿ ಮಕ್ಕಳಿಗೆ ನಮ್ಮ ಸಂಸ್ಕೃತಿ, ಸಂಸ್ಕಾರ, ಆಚಾರ ವಿಚಾರಗಳನ್ನು ತಿಳಿಸುವ ಶಿಕ್ಷಣ ನೀಡಲಾಗುತ್ತಿದೆ ಎಂದು ಕುಂದಾಪುರ ಸೇವಾ ಸಂಗಮ ಟ್ರಸ್ಟ್‌ನ ಕಾರ್ಯನಿರ್ವಾಹಕ ವಿಶ್ವಸ್ಥ ಸುಬ್ರಹ್ಮಣ್ಯ ಹೊಳ್ಳ ಹೇಳಿದರು. ಅವರು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದಲ್ಲಿ ಮಂಗಳವಾರ 2025-26ನೇ ಸಾಲಿನ ಪಾಲಕರ ಮಿಲನ ಕಾರ್ಯಕ್ರಮದಲ್ಲಿ ಪೋಷಕರೊಂದಿಗೆ ಸಂವಾದ ನಡೆಸುತ್ತಾ ಮಾತನಾಡಿದರು. ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಅಧ್ಯಕ್ಷ ಬಿ.ರಾಘವೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸೇವಾ ಸಂಗಮ ಟ್ರಸ್ಟ್‌ನ ವಿಶ್ವಸ್ಥ ಕಾರ್ಯದರ್ಶಿ ಚಂದ್ರಿಕಾ ಧನ್ಯ, ವಿಶ್ವಸ್ಥರಾದ ಕಲ್ಪನಾ ಭಾಸ್ಕರ, ಶಿಶು ಮಂದಿರದ ಕಾರ್ಯದರ್ಶಿ ಅಶ್ವಿತಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಮಹಾಲಿಂಗೇಶ್ವರ ಹಾಗೂ ಹೇರಂಬ ಮಹಾಗಣಪತಿ ದೇವಸ್ಥಾನ ಇದರ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಮಾ. 30ರಿಂದ ಎಪ್ರಿಲ್ 4ರ ವರೆಗೆ ನಡೆಯುವ ಜಾತ್ರೋತ್ಸವದ ವೈಭವವನ್ನು ಬೆಂಗಳೂರು ಉದ್ಯಮಿ ಸೀತಾರಾಮ ಹೊಳ್ಳ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್. ಕುಂದರ್, ದೇಗುಲದ ಟ್ರಸ್ಟಿ ಅಶೋಕ್ ಶೆಟ್ಟಿ ಕೊಯ್ಕೂರು, ಸ್ಥಳೀಯ ಉದ್ಯಮಿ ನವೀನ್ ಶೆಟ್ಟಿ ನಡುಬೆಟ್ಟು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗೋಪಾಲಕೃಷ್ಣ ಮಯ್ಯ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಛಾಯಾ ತರಂಗಿಣಿ ಸಂಗೀತ ಶಾಲೆ ಇವರಿಂದ ಛಾಯಾ ತರಂಗಿಣಿ ಕಲಾಮಂಜರಿ, ಸ್ನೇಹಕೂಟ ಮಣೂರು ಇವರಿಂದ ಹಬ್ಬದೊಳಗೊಂದು ಹಬ್ಬ ಮತ್ತು ಯಕ್ಷಗುರು ಸೀತಾರಾಮ ಶೆಟ್ಟಿ ಕೊಯ್ಕೂರು ಇವರ ನಿರ್ದೇಶನದಲ್ಲಿ ಮಣೂರು ಮಹಾಲಿಂಗೇಶ್ವರ ಯಕ್ಷಗಾನ‌ ಮಂಡಳಿಯ ಬಾಲ ಯಕ್ಷಕಲಾವಿದರಿಂದ ಚಕ್ರವರ್ತಿ ಬಲಿ ಎಂಬ ಯಕ್ಷಪ್ರದರ್ಶನಗೊಂಡಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಇಲ್ಲಿನ ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜಿನ ವತಿಯಿಂದ ಆಯೋಜಿಸಲಾದ “Beyond the Scroll – Rewriting the Social Narrative” ಅಂತರ್ ಕಾಲೇಜು ಉತ್ಸವವು ಭವ್ಯ ಸಮಾರೋಪ ಸಮಾರಂಭದೊಂದಿಗೆ ಮುಕ್ತಾಯಗೊಂಡಿತು. ಸಮಾರೋಪ ಸಮಾರಂಭದಲ್ಲಿ ಆಟೋಮೊಬೈಲ್ ಅಭಿಮಾನಿ ನಿರೀಕ್ಷಿತ್ ಹೆಬ್ರಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ವೇದಿಕೆಗಳು ಅತ್ಯಂತ ಅಗತ್ಯವಾಗಿವೆ. ಇಂದಿನ ಯುವಜನತೆ ಸೃಜನಾತ್ಮಕ ಚಿಂತನೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ವಹಿಸಿಕೊಂಡು, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಇಂತಹ ಉತ್ಸವಗಳಲ್ಲಿ ಭಾಗವಹಿಸುವುದರಿಂದ ಅವರ ಸಮಗ್ರ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ ಎಂದು ಹೇಳಿದರು. ಗೌರವ ಅತಿಥಿಗಳಾಗಿ ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ವನಿತಾ ಮೈಯ್ಯ, ಎಂ.ಜಿ.ಎಂ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಎಂ. ವಿಶ್ವನಾಥ್ ಪೈ ಹಾಗೂ ಬಿಕಾಂ/ಬಿಬಿಎ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಶಿರಿಯಾರ ಗ್ರಾಮದ ಸಾಹೇಬರಕಟ್ಟೆಯಲ್ಲಿ ನಡೆಯುತ್ತಿದ್ದ ಮಟ್ಕಾ ಜುಗಾರಿ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಸೋಮವಾರ ನಡೆದಿದೆ. ಸಾಹೇಬರ ಕಟ್ಟೆಯ ಗಣೇಶ್ ಕಾಂಪ್ಲೆಕ್ಸ್ ನಲ್ಲಿ ಮಟ್ಕಾ ಜುಗಾರಿ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕೋಟ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭ ಮಟ್ಕಾ ಚೀಟಿ ಬರೆಯುತ್ತಿದ್ದ ನಿರಂಜನ ಎನ್ನುವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಆರೋಪಿಯು ರಘು ಹೆಸ್ಕುತ್ತೂರು ಅವರ ಬಳಿ ಕಮಿಷನ್ ಗಾಗಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ. ಆರೋಪಿ ನಿರಂಜನ ಹಾಗೂ ಆತನ ವಶದಲ್ಲಿದ್ದ ಮಟ್ಕಾ ಜುಗಾರಿ ಆಟಕ್ಕೆ ಬಳಸಿದ ಬಾಲ್ ಪೆನ್, ಮಟ್ಕಾ ಚೀಟಿ ನಗದು 1165/- ರೂಪಾಯಿಯನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನ ಎನ್‌ಎಸ್‌ಎಸ್ ಘಟಕ ಹಾಗೂ ಅಂಗದಾನ ಮತ್ತು ನಶಾಮುಕ್ತ ಅಭಿಯಾನ ಸಮಿತಿಗಳ ವತಿಯಿಂದ ಅಂಗದಾನ ಮತ್ತು ನಶಾಮುಕ್ತ ಅಭಿಯಾನ ಕುರಿತು ಜಾಗೃತಿ ರ‍್ಯಾಲಿ ಆಯೋಜಿಸಲಾಯಿತು. ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಕಂಡ್ಲೂರುವರೆಗೆ ನಡೆದ ಈ ರ‍್ಯಾಲಿಗೆ ಡಾ. ಉಮೇಶ್ ನಾಯಕ್ (ವೈದ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟೇಶ್ವರ), ಸಂತೋಷ್ ಕುಮಾರ್ (ಹೆಡ್ ಕಾನ್ಸ್ಟೇಬಲ್, ಕಂಡ್ಲೂರು ಪೊಲೀಸ್ ಠಾಣೆ), ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ (ಪ್ರಾಂಶುಪಾಲರು), ರೂಪಶ್ರೀ ಕೆ.ಎಸ್. (ಉಪ ಪ್ರಾಂಶುಪಾಲರು) ಹಾಗೂ ಎನ್‌ಎಸ್‌ಎಸ್ ಸಂಯೋಜಕರಾದ ಚಂದ್ರಶೇಖರ್ ಅವರು ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು. ರ‍್ಯಾಲಿಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ, ಅಂಗದಾನದ ಮಹತ್ವ ಹಾಗೂ ಮಾದಕ ಪದಾರ್ಥಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಸಮಾಜದಲ್ಲಿ ಆರೋಗ್ಯಕರ ಹಾಗೂ ಜವಾಬ್ದಾರಿಯುತ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಡಾ. ಉಮೇಶ್ ನಾಯಕ್ ಅವರು ಕರೆ ನೀಡಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ರಿ. ಆಶ್ರಯದಲ್ಲಿ ನಡೆಯುತ್ತಿರುವ ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಕಿಂಡರ್‌ ಗಾರ್ಟನ್ ಮಕ್ಕಳ ಪದವಿ ಪ್ರದಾನ ಸಮಾರಂಭವು ವೈಭವಯುತವಾಗಿ ಭಾವನಾತ್ಮಕ ಕ್ಷಣಗಳು ಹಾಗೂ ಸಂಸ್ಕೃತಿಯ ಸೊಗಡಿನಿಂದ ಕಂಗೊಳಿಸಿತು. ಕಾರ್ಯಕ್ರಮವನ್ನು ವಿಶೇಷ ಆಹ್ವಾನಿತರಾಗಿ ಆಗಮಿಸಿದ ವಿನಯ ದಿನೇಶ್ ಶೆಣೈ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಮಕ್ಕಳ ಮನಮೋಹಕ ಪ್ರತಿಭೆಯನ್ನು ಹೃದಯಪೂರ್ವಕವಾಗಿ ಶ್ಲಾಘಿಸಿ, “ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ತರ. ಪ್ರೀತಿಯ ಜೊತೆಗೆ ಸಕಾಲಿಕ ಮಾರ್ಗದರ್ಶನ ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಅತ್ಯಗತ್ಯ ಎಂದು ನುಡಿದರು. ಸಭಾದ್ಯಕ್ಷತೆ ವಹಿಸಿದ್ದ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ಶಾಲೆಯ ಹಾಗೂ ಟ್ರಸ್ಟ್ ನ ದ್ಯೇಯೋದ್ಧೇಶವನ್ನು ಸಭೆಯಲ್ಲಿ ಹಂಚಿಕೊಂಡರು . ಗೌರವ ಅತಿಥಿಯಾಗಿ ಭಾಗವಹಿಸಿದ್ದ ಶಾಲೆಯ ಶೈಕ್ಷಣಿಕ ಸಂಚಾಲಕರು ಹಾಗೂ ಟ್ರಸ್ಟ್‌ನ ಖಜಾಂಚಿಯೂ ಆದ ಕೊಡ್ಲಾಡಿ ಸುಭಾಷ್ಚಂದ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ “ಹಟ್ಟಿಯಂಗಡಿ ಶಾಂತಾನಂದ ಭಟ್ ಸ್ಮಾರಕ” ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ ಉದ್ಘಾಟಿಸಿದರು. ದಾನಿಗಳಾದ ವಿಜಯಾ ಕಾರ್ಕಳ ಅವರು ತಮ್ಮ ಸಹೋದರ ಹಟ್ಟಿಯಂಗಡಿ ಶಾಂತಾನಂದ ಭಟ್ ಅವರ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ವಿದ್ಯಾರ್ಥಿಗಳಿಗಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್.ಶೆಣೈ, ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ದಾನಿಗಳಾದ ಪ್ರಾಕ್ತನ ವಿದ್ಯಾರ್ಥಿಗಳಾದ ಕಿರಣ್ ಹಟ್ಟಿಯಂಗಡಿ, ಚಂದ್ರಶೇಖರ್ ಕೊತ್ವಾಲ್, ಭಾಸ್ಕರ ಗಾಣಿಗ, ನಾಮದೇವ ಖಾರ್ವಿ, ರಾಮಚಂದ್ರ, ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀಹರಿ ಚಾತ್ರ ಹಾಜರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಸರ್ಕಲ್ ಬಳಿ ಭಾನುವಾರ ಸಂಜೆ ನಡೆದಿದೆ. ಗಾಯಗೊಂಡ ಸವಾರನನ್ನು ಸ್ಥಳೀಯ ನಿವಾಸಿ ಪರಮೇಶ್ವರ್ ಭಟ್ ಎಂದು ಗುರುತಿಸಲಾಗಿದೆ. ಪರಮೇಶ್ವರ್ ಭಟ್ ಅವರು ಸರ್ವಿಸ್ ರಸ್ತೆಯ ಮುಖಾಂತರ ಬಂದು ಸಾಲಿಗ್ರಾಮ ಪೇಟೆಗೆ ತೆರಳಲು ಹೆದ್ದಾರಿ ದಾಟುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಉಡುಪಿಯಿಂದ ಕುಂದಾಪುರದ ಕಡೆಗೆ ಅತೀ ವೇಗವಾಗಿ ಚಲಿಸುತ್ತಿದ್ದ ಕಾರು ಬೈಕ್‌ಗೆ ನೇರವಾಗಿ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಕಾರ್ಯಪ್ರವೃತ್ತರಾದ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More