ಕುಂದಾಪ್ರ ಡಾಟ್ ಕಾಂ ಸುದ್ದಿ.ಶಿವಮೊಗ್ಗ: ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ ತಾಲೂಕಿನ ವ್ಯಾಪ್ತಿಯ ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತ ಅವಘಡದ ಕುರಿತು ಸಮಗ್ರ ವಿವರ ಪಡೆದು, ತಪ್ಪಿತಸ್ಥರ ವಿರುದ್ದ ಕಾನೂನಾತ್ಮಕ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು. ಅವರು ಹೊಸನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿ, ಕಾಮಗಾರಿ ಮತ್ತು ಮಣ್ಣು ಕುಸಿತದ ಪ್ರದೇಶವನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದ ನಂತರ ಅವರು ಮಾತನಾಡಿದರು. ಹುಲಿಕಲ್ ರಸ್ತೆ ತಡೆಗೋಡೆ ನಿರ್ಮಾಣ ವೇಳೆ ಮಣ್ಣು ಕುಸಿತ ಅವಘಡ ಸಂಭವಿಸಿ ಮೂರು ಕಾರ್ಮಿಕರು ಮೃತಪಟ್ಟಿದ್ದು, ಸೂಕ್ತ ರೀತಿಯ ಮುನ್ನೆಚ್ಚರಿಕೆ ವಹಿಸದೆ ಕಾಮಗಾರಿ ನಡೆಸಿದ ತಪ್ಪಿತಸ್ಥ ಅಧಿಕಾರಿ, ಗುತ್ತಿಗೆದಾರರ ವಿರುದ್ದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯು ಫಲಿತಾಂಶದಲ್ಲಿ ಜನತಾ ಪಿಯು ಕಾಲೇಜು ಹೆಮ್ಮಾಡಿ ರಾಜ್ಯ ಮಟ್ಟದ ದ್ವಿತೀಯ ರ್ಯಾಂಕ್ ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ರ್ಯಾಂಕ್ ಗಳಿಸಿದ್ದರು. ಮರು ಮೌಲ್ಯಮಾಪನದಿಂದ ಜನತಾ ಪಿಯು ಕಾಲೇಜಿನ 22 ವಿದ್ಯಾರ್ಥಿಗಳು ಟಾಪ್ 10 ರ್ಯಾಂಕ್ ನಲ್ಲಿ ರಾಜ್ಯಕ್ಕೆ ಅಗ್ರಸ್ಥಾನ ಪಡೆದು ಮತ್ತೊಮ್ಮೆ ರಾಜ್ಯ ಮಟ್ಟದಲ್ಲಿ ಗುರುತಿಸಲಾಗಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಪ್ರಥಮ ಜಿ. ಕಾಂಚನ 597 ಅಂಕ ಪಡೆದು ರಾಜ್ಯಕ್ಕೆ 4ನೇ ರ್ಯಾಂಕ್, ಆಕಾಶ್ 594 ಅಂಕ ಪಡೆದು 7ನೇ ರ್ಯಾಂಕ್, ತನ್ವಿತಾ ವಿ 593 ಅಂಕ ಪಡೆದು 8ನೇ ರ್ಯಾಂಕ್, ಐಶ್ವರ್ಯ 592 ಅಂಕ ಪಡೆದು 9ನೇ ರ್ಯಾಂಕ್, ಶ್ರೇಷ್ಠ 591 ಅಂಕ ಪಡೆದು 10ನೇ ರ್ಯಾಂಕ್, ತನ್ವಿಲವ 591 ಅಂಕ ಪಡೆದು 10ನೇ ರ್ಯಾಂಕ್ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಗಣೇಶ ಮೊಗವೀರ, ಬೋಧಕ, ಬೋಧಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ‘ಅರ್ಹ ಕೌಶಲ್ಯಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ, ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು’ ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು. ಅವರು ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ವಿವಿಧ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪ್ರಸ್ತುತ ಔದ್ಯೋಗಿಕ ಬೇಡಿಕೆಗೆ ಅನುಗುಣವಾದ ಶಿಕ್ಷಣವನ್ನು ಪಡೆದರೆ, ಉದ್ಯೋಗದ ಅವಕಾಶ ಹೆಚ್ಚುತ್ತದೆ. ಆಳ್ವಾಸ್ ಕಾಲೇಜಿನಲ್ಲಿ ‘ಮಾಧ್ಯಮ’ ಶಿಕ್ಷಣವು ಅತ್ಯುತ್ತಮವಾಗಿದ್ದು, ಪ್ರಾಯೋಗಿಕ ಅವಕಾಶಗಳು ವಿಫುಲವಾಗಿವೆ. ಧನಾತ್ಮಕ ಧೋರಣೆಯನ್ನು ಸೃಜಿಸುವಲ್ಲಿ ಆಳ್ವಾಸ್ ಕೊಡುಗೆ ಅನನ್ಯವಾಗಿದೆ ಎಂದರು. ಮುದ್ರಣ ಮಾಧ್ಯಮ, ಟೆಲಿವಿಷನ್ ಮಾಧ್ಯಮ, ರೇಡಿಯೊ ಹಾಗೂ ಡಿಜಿಟಲ್ ಮಾಧ್ಯಮದ ಪ್ರಾಯೋಗಿಕ ತರಗತಿಗಳನ್ನು ತಜ್ಞರು ನಡೆಸಿಕೊಟ್ಟರು. ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬನ್ನಡ್ಕ ವಿಶ್ವವಿದ್ಯಾನಿಲಯ ಕಾಲೇಜು, ಮೂಡುಬಿದಿರೆ ಮಹಾವೀರ ಕಾಲೇಜು, ಕಟೀಲು ಎಸ್ಡಿಟಿ ಪ್ರಥಮ ದರ್ಜೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಮಾವಾಸೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ತಮ್ಮ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳು, ನಂತರ ಪಿಯುಸಿ ವಿದ್ಯಾಭ್ಯಾಸಕ್ಕೆ ಮದರ್ ತೆರೆಸಾ ಪದವಿ ಪೂರ್ವ ಕಾಲೇಜನ್ನು ಆಯ್ಕೆ ಮಾಡಿಕೊಂಡು, ದ್ವಿತೀಯ ಪಿಯುಸಿಯಲ್ಲಿ ರಾಜ್ಯಮಟ್ಟದ ಸಾಧನೆ ಮಾಡುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. 2025–26ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಈ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸಿದ್ದು, , ರಿಷಿತಾ ಮತ್ತು ಕ್ಷಮಾ 593 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ 8ನೇರ್ಯಾಂಕ್, ಪ್ರಗತಿ 591 ಅಂಕಗಳೊಂದಿಗೆ 10ನೇ ರ್ಯಾಂಕ್, ರಾಶಿ 590 ಅಂಕಗಳೊಂದಿಗೆ 11ನೇ ರ್ಯಾಂಕ್ ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ಸ್ಥಾನ ಪಡೆದಿದ್ದಾರೆ. ಇವರ ಈ ಸಾಧನೆ, ಗ್ರಾಮೀಣ ಹಿನ್ನೆಲೆಯಿಂದ ಬಂದ ವಿದ್ಯಾರ್ಥಿಗಳಿಗೂ ಉತ್ತಮ ಅವಕಾಶ ಮತ್ತು ಮಾರ್ಗದರ್ಶನ ದೊರೆತರೆ ಎತ್ತರದ ಸಾಧನೆ ಸಾಧ್ಯವೆಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಅಮಾವಾಸೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದ ಈ ವಿದ್ಯಾರ್ಥಿಗಳು, ಪದವಿ ಪೂರ್ವ ಹಂತದಲ್ಲಿ ಮದರ್ ತೆರೆಸಾ ಪಿಯು ಕಾಲೇಜಿನ ಶೈಕ್ಷಣಿಕ ವಾತಾವರಣ ಮತ್ತು ಗುಣಮಟ್ಟದ ಮಾರ್ಗದರ್ಶನದಿಂದ ತಮ್ಮ ಪ್ರತಿಭೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪ Çರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 2006ರ ಏಪ್ರಿಲ್ 27 ರಿಂದ 2009 ರ ಏಪ್ರಿಲ್ 27 ರ ಅವಧಿಯಲ್ಲಿ ಜನಿಸಿರುವ ಅರ್ಹ ಅಭ್ಯರ್ಥಿಗಳಿಂದ (ಬಾಲಕರು ಮಾತ್ರ) ತರಬೇತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 13 ರ ವರೆಗೆ ವಿಸ್ತರಿಸಲಾಗಿದೆ. ತರಬೇತಿಯು ಬ್ರಹ್ಮಾವರ ತಾಲೂಕು ಬಾರ್ಕೂರು ಹನೆಹಳ್ಳಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ರ್ಯಾಲಿಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574881,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಎ.29: ತಾಲೂಕಿನ ತ್ರಾಸಿ – ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭೀಕರ ಅಪಘಾತದಲ್ಲಿ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ. ಬೈಂದೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬಸ್, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ಯಾಂಕರ್ ಮತ್ತು ಲಾರಿಗೆ ನಿಯಂತ್ರಣ ತಪ್ಪಿ ಮಧ್ಯಾಹ್ನ 1:30ರ ಸಮಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಬಸ್ಸಿನ ಹೆಚ್ಚುವರಿ ಚಾಲಕ ರಘು, ಕ್ಲೀನರ್ ರಂಗನಾಥ್ ಹಾಗೂ ಅಡುಗೆ ಸಹಾಯಕ ಹೇಮಂತ್ ಮೃತಪಟ್ಟಿದ್ದಾರೆ. ಇವರ ಜೊತೆಯಲ್ಲಿದ್ದ ವಿದ್ಯಾರ್ಥಿಯೋರ್ವನಿಗೂ ಗಂಭೀರ ಗಾಯವಾಗಿದೆ. ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜಿನಿಂದ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳು, ಉಪನ್ಯಾಸಕರೊಂದಿಗೆ 3 ದಿನಗಳ ಪ್ರವಾಸಕ್ಕೆ ಹೊರಟ್ಟಿದ್ದರು. ನಿನ್ನೆ ಹೊನ್ನಾವರದಲ್ಲಿ ಪ್ರವಾಸಿ ಮುಗಿಸಿ ಅಲ್ಲಿಯೇ ಉಳಿದು, ಇಂದು ಉಡುಪಿ ಕಡೆಗೆ ಹೊರಟಿದ್ದರು. ಮರವಂತೆಯಲ್ಲಿ ಬಸ್ ನಿಲ್ಲಿಸಿ ಬೀಚ್ಗೆ ತೆರಳಿ ಅಲ್ಲಿಂದ ಪ್ರಯಾಣ ಮುಂದುವರಿಸುವ ವೇಳೆ ಏಕಾಏಕಿ ಈ ಅವಘಡ ನಡೆದಿದೆ. ಮರವಂತೆಯಿಂದ ಒಂದು ಕಿ.ಮೀ ಸಾಗಿದ್ದ ಬಸ್ಸು ಏಕಾಎಕಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರಿನ ಮುಂಭಾಗಕ್ಕೆ ಡಿಕ್ಕಿಯಾಗಿದೆ. ಬಳಿಕ ಅಲ್ಲೇ ಎದುರಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾಗಿ ನಿಂತಿದೆ. ಅಪಘಾತದ ತೀವ್ರತೆಗೆ ನಾಲ್ವರು ಗಂಭೀರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲೇ ಮುಳುಗಿರುವ ಮಕ್ಕಳಿಗೆ ತುಳುನಾಡಿನ ವೀರ ಕ್ರೀಡೆ ‘ಕಂಬಳ’ ಹಾಗೂ ಕೃಷಿ ಸಂಸ್ಕೃತಿಯನ್ನು ಪರಿಚಯಿಸುವ ಅಪೂರ್ವ ಪ್ರಯತ್ನವೊಂದು ಯಡಾಡಿ-ಮತ್ಯಾಡಿಯಲ್ಲಿ ಜರುಗಿತು. ಇಲ್ಲಿನ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ‘ಮಂಥನ’ಬೇಸಿಗೆ ಶಿಬಿರದ ಎರಡನೇ ದಿನದ ಅಂಗವಾಗಿ, ವಿದ್ಯಾರ್ಥಿಗಳಿಗಾಗಿ ಸಾಂಕೇತಿಕವಾಗಿ ಆಯೋಜಿಸಲಾಗಿದ್ದ ‘ಕಂಬಳ ಪ್ರದರ್ಶನ’ವು ಅತ್ಯಂತ ವೈಭವದಿಂದ ನಡೆಯಿತು. ಹೊಂಬಾಳೆ ಬಿಡಿಸುವ ಮೂಲಕ ಕಂಬಳಕ್ಕೆ ಚಾಲನೆ:ಉಡುಪಿ ಜಿಲ್ಲಾ ಕಂಬಳ ಸಮಿತಿಯ ಸಂಚಾಲಕರಾದ ಶಾಂತರಾಮ ಶೆಟ್ಟಿ ಅವರು ಹೂವಿನ ಹೊಂಬಾಳೆಯನ್ನು ಬಿಡಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇಂದಿನ ಮಕ್ಕಳಿಗೆ ನಮ್ಮ ನೆಲದ ಕಲೆ, ಆಚಾರ-ವಿಚಾರ ಹಾಗೂ ಸಂಪ್ರದಾಯಗಳ ಬಗ್ಗೆ ಅರಿವು ಕಡಿಮೆಯಾಗುತ್ತಿದೆ. ಕಂಬಳದಂತಹ ಕ್ರೀಡೆಯನ್ನು ಪರಿಚಯಿಸುವ ಮೂಲಕ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಮಕ್ಕಳಲ್ಲಿ ಮಣ್ಣಿನ ಸಂಸ್ಕೃತಿಯ ಬಗ್ಗೆ ಅಭಿಮಾನ ಮೂಡಿಸುವ ಮಹತ್ತರ ಕಾರ್ಯ ಮಾಡುತ್ತಿದೆ” ಎಂದು ಶ್ಲಾಘಿಸಿದರು. ಕೆಸರು ಗದ್ದೆಯಲ್ಲಿ ಓಡಿದ ಕೋಣಗಳು: ಮಕ್ಕಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೇಂದ್ರ ಸರ್ಕಾರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಬೆಳಿಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ತಗ್ಗರ್ಸೆ ಹಾಗೂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಭೂಮಿ ದಿನಾಚರಣೆ’ ಸಲುವಾಗಿ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ಕ್ರಿಯೇಟಿವ್ನ ಸಪ್ತ ಸ್ವರ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಕೋಮಲ ಆರ್. ಸಿ. ಗೌರವಾನ್ವಿತ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರು ಕಾರ್ಕಳ ಅವರು, ಪ್ರಸ್ತುತ ದಿನಮಾನಗಳಲ್ಲಿ ಪರಿಸರವು ಮಾಲಿನ್ಯಗೊಳ್ಳುತ್ತಿದ್ದು ಶುದ್ಧವಾದ ಗಾಳಿ, ನೀರು ಸಿಗದೇ ಸಮಾಜ ಶೋಚನೀಯ ಸ್ಥಿತಿಯಲ್ಲಿದೆ ಎಂದು ಕಳವಳವನ್ನು ವ್ಯಕ್ತಪಡಿಸಿ ಪರಿಸರ ಸಂರಕ್ಷಣೆಯಲ್ಲಿ ನಾವೆಲ್ಲರೂ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ಮುಖ್ಯ ಅತಿಥಿಗಳಾದ ಕಾರ್ಕಳದ ನ್ಯಾಯವಾದಿ ಸಂಘಗಳ ಪ್ರಧಾನ ಕಾರ್ಯದರ್ಶಿಗಳಾದ ಪದ್ಮಪ್ರಸಾದ್ ಜೈನ್ , ನಾವೆಲ್ಲರೂ ಕಾನೂನಿನ ಚೌಕಟ್ಟಿನಲ್ಲಿ ಸಮಾಜದಲ್ಲಿ ಜೀವನವನ್ನು ನಡೆಸಬೇಕು ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ಜನ ಸಮುದಾಯ ಕಾರ್ಯಪ್ರವೃತ್ತರಾಗಬೇಕು ಎಂದು ನುಡಿದರು. ಸಂಪನ್ಮೂಲ ವ್ಯಕ್ತಿಗಳಾದ ಸುದೇಶ್ ಶೆಟ್ಟಿ ನ್ಯಾಯವಾದಿಗಳು ಕಾರ್ಕಳ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ, ಭೂಮಿಯ ತಾಪಮಾನ ದಿನದಿಂದ ದಿನಕ್ಕೆ ಏರುಗತಿಯಾಗುತ್ತಿದ್ದು ಇದಕ್ಕೆಲ್ಲ ಮೂಲ ಕಾರಣ ಪರಿಸರ ನಾಶ. ಮುಂದಿನ ಪೀಳಿಗೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅವಳಿ ಸಹೋದರಿಯರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಮಾನ ಅಂಕ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ-ನೆಂಪು ಇಲ್ಲಿನ 10ನೇ ತರಗತಿ ವಿದ್ಯಾರ್ಥಿನಿಯರಾದ ಸಮೀಕ್ಷಾ ಎಸ್. ಪೂಜಾರಿ ಹಾಗೂ ಪ್ರತೀಕ್ಷಾ ಎಸ್. ಪೂಜಾರಿ ಇಬ್ಬರೂ ಕೂಡಾ 602 ಅಂಕ ಪಡೆದಿದ್ದಾರೆ. ಸಹೋದರಿಯರು 7ನೇ ತರಗತಿ ತನಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯಲ್ಲಿ ಓದಿದ್ದು, ಬಳಿಕ ಕೆಪಿಎಸ್ ನೆಂಪುವಿನಲ್ಲಿ ಪ್ರೌಢಶಿಕ್ಷಣ ಮುಂದುವರಿಸಿದ್ದರು. ಅವರು ಬಸ್ರೂರು ಸರಕಾರಿ ಪ್ರೌಢಶಾಲೆಯ ಶಿಕ್ಷಕ, ಇಸಿಓ ಆಗಿ ಕರ್ತವ್ಯ ನಿರ್ವಹಿಸಿದ ಸಂತೋಷ್ ಹಾಗೂ ಪ್ರೇಮಾ ಅವರ ಪುತ್ರಿಯರು.
