ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸಂಘ ಕತಾರ್ನ 2026–2028 ಅವಧಿಗೆ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕರಿಸಿದ್ದು, ಕತಾರ್ನ ಕನ್ನಡ ಸಮುದಾಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಅವರು ಈ ಜವಾಬ್ದಾರಿಯನ್ನು ಅತ್ಯಂತ ನಮ್ರತೆ ಮತ್ತು ಬದ್ಧತೆಯಿಂದ ಸ್ವೀಕರಿಸಿರುವುದಾಗಿ ತಿಳಿಸಿ, ಸಮುದಾಯಕ್ಕೆ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ಗೌರವದ ಸಂಗತಿಯಾಗಿದೆ ಎಂದು ಹೇಳಿದರು. ನಿಕಟ ಪೂರ್ವ ಅಧ್ಯಕ್ಷರಾದ ರವಿ ಶೆಟ್ಟಿ ಹಾಗೂ ಆಡಳಿತ ಸಮಿತಿ (2024–2026) ಅವರ ಸೇವೆ ಮತ್ತು ಕೊಡುಗೆಗಳನ್ನು ಅವರು ಕೃತಜ್ಞತೆಯಿಂದ ಸ್ಮರಿಸಿದರು. ಅವರ ಶ್ರಮದಿಂದ ಸಂಘದ ಅಭಿವೃದ್ದಿಗೆ ಬಲವಾದ ಅಡಿಪಾಯ ನಿರ್ಮಾಣವಾಗಿದೆ ಎಂದು ಹೇಳಿದರು. ಸಂಘದ ಎಲ್ಲಾ ಪೂರ್ವ ಅಧ್ಯಕ್ಷರಾದ ಸತೀಶ್ ದೇಶಪಾಂಡೆ, ನಾಗರಾಜ್, ಪ್ರಕಾಶ್ ಬಾಬು, ಕೆ. ಪ್ರಭಾಕರ್, ಅರವಿಂದ ಪಾಟೀಲ, ಅರುಣ್ ಕುಮಾರ್ ಕೆ.ಎಂ., ವಿ.ಎಸ್. ಮನ್ನಂಗಿ, ದೀಪಕ್ ಶೆಟ್ಟಿ, ಎಚ್.ಕೆ. ಮಧು, ವೆಂಕಟ್ ರಾವ್, ದಿವಂಗತ ಮೈರ್ಪಾಡಿ ನಾಗೇಶ್ ರಾವ್, ಸಂಜಯ ಕುದರಿ, ಮಹೇಶ್ ಗೌಡ ಹಾಗೂ ರವಿ ಶೆಟ್ಟಿ ಅವರ ಸೇವೆಯನ್ನು ಅವರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2025-2026ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗಣೇಶ್ ಮೊಗವೀರರ ನೇತ್ರತ್ವದ ಹೊಸ ಆಡಳಿತ ಮಂಡಳಿಯ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಪರಿಪೂರ್ಣ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳು ರಾಜ್ಯ ಮಟ್ಟ ರ್ಯಾಂಕ್ ಹಾಗೂ 100% ಫಲಿತಾಂಶದೊಂದಿಗೆ ಬೈಂದೂರು ತಾಲ್ಲೂಕಿನಲ್ಲೇ ಪ್ರಶಂಸೆಗೆ ಪಾತ್ರವಾಗಿದೆ. ವಿದ್ಯಾರ್ಥಿಗಳಾದ ಸಮೃದ್ಧಿ ಸಿ. ಖಾರ್ವಿ (616/625) ಹಾಗೂ ಪಂಚಮಿ (616/625) ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 10ನೇ ರ್ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ. ಪರೀಕ್ಷೆಗೆ ಹಾಜರಾದ 68 ವಿದ್ಯಾರ್ಥಿಗಳಲ್ಲಿ ಹಾಗೆಯೇ 25 ವಿದ್ಯಾರ್ಥಿಗಳು ವಿಶೇಷ ಶ್ರೇಣಿ, 41 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯನ್ನು ಹೊಂದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ ಮೊಗವೀರರು ಹಾಗೂ ಕಾರ್ಯದರ್ಶಿಯಾಗಿರುವ ಶ್ಯಾಮಲಾ ಗಣೇಶ್ ಮೋಗವೀರರು ಮತ್ತು ಬೋಧಕ, ಬೋಧಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಮೈನ್ಸ್ (ಸೆಷನ್-2) 2026ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 3 ಮಂದಿ ವಿದ್ಯಾರ್ಥಿಗಳು 99 ಪರ್ಸೆಂಟೈಲ್ ಗಿಂತ ಅಧಿಕ ಅಂಕವನ್ನು ಪಡೆದು ವಿಶಿಷ್ಟ ಸಾಧನೆ ಗೈದು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ತೇರ್ಗಡೆಯನ್ನು ಹೊಂದಿದ್ದಾರೆ. ವಿದ್ಯಾರ್ಥಿಗಳಾದ ನಮಿತ್ ಕೃಷ್ಣಮೂರ್ತಿ ಹೆಗಡೆ 99.4981217 ಪರ್ಸೆಂಟೈಲ್, ನಾಗದೇವ್ ಎಂ.ಜಿ. – 99.5970242 ಪರ್ಸೆಂಟೈಲ್, ಪ್ರಥಮ್ ತಮ್ಮಣ್ಣ ಗೌಡರ್ – 99.1416986 ಪರ್ಸೆಂಟೈಲ್ ಪಡೆದುಕೊಳ್ಳುವ ಮೂಲಕ ವಿಶಿಷ್ಟ ಶ್ರೇಣಿಗಳಿಸಿದ್ದಾರೆ. ಬಸವರೆಡ್ಡಿ ವಿಷ್ಣುರೆಡ್ಡಿ – 98.9823753ತೇಜಸ್ ಆರ್. ಬಿ.- 98.9615457ನಿನಾದ್ ರಾಜೇಶ್ ನಾಯ್ಕ್- 98.946358ಧನುಷ್ ಹೆಚ್. ಎ.- 98.8634496ಸಂವಿತ್ ಅಮಿತ್ ಗೋಕರ್ಣ- 98.5729919ದೃಶ್ಯ್- 98.4130581ಸುಕ್ಷಿತ್ ಗಿರೀಶ್ ಗೌಡ- 98.3503888ತೇಜಸ್ ಎನ್. ಇ. – 98.3454350ತೇಜಸ್ ಹೆಗಡೆ ಎಚ್. ಡಿ.-98.1925416ಅಕ್ಷತಾ ಮೋಹನ್ ಹೆಗಡೆ -98.168271ಪ್ರಜ್ವಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಿಸಿದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶದಲ್ಲಿ ಕುಂದಾಪುರದ ಯಡಾಡಿ-ಮತ್ಯಾಡಿಯ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯು ಉತ್ತಮ ಸಾಧನೆ ಮಾಡಿದೆ. ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಒಟ್ಟು 625 ಅಂಕಗಳಿಗೆ 621 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಮಟ್ಟದಲ್ಲಿ 5ನೇ ರ್ಯಾಂಕ್ ಪಡೆದು ಶಾಲೆಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಈ ಬಾರಿ ಪರೀಕ್ಷೆಗೆ ಹಾಜರಾದ ಶಾಲೆಯ ಒಟ್ಟು 129 ವಿದ್ಯಾರ್ಥಿಗಳ ಪೈಕಿ ಎಲ್ಲರೂ ಉತ್ತೀರ್ಣರಾಗುವ ಮೂಲಕ ಶಾಲೆಗೆ ಶೇ. 100ರಷ್ಟು ಫಲಿತಾಂಶ ಲಭಿಸಿದೆ. ಶ್ರೇಯಸ್ ಎಸ್ ಚಿಕ್ಕಮಠ (615) ಆಯಿಷ ಆನಾಮ್ (611) ಮನ್ವಿತ್ ಬಿ (611) ಅಭಿಕ್ಷಾ(610) ಸೂರ್ಯಪ್ರಕಾಶ್ ಬಿ.ಗಾಣಿಗ (610) ನಿವೇದಿತಾ ಚಂದ್ರ ಮೌಳೇಶ್ವರ ಬಾದಾಮಿ (609) ಶ್ರೀಹರಿ ಮನೀಷ್ (607) ಸನ್ವಿತ್ ಜಿ ಪೂಜಾರಿ (607) ಚಾರ್ವಿ ಪಿ ಶೆಟ್ಟಿ (605) ಕೌಶಿಕ್ ಶೆಣೈ (600) ಶ್ರೇಯಾ (599)…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣದ ಮದರ್ ತೆರೆಸಾ ಪಿಯು ಕಾಲೇಜಿನಲ್ಲಿ ವಿಜ್ಞಾನಾಧಾರಿತ ಶಿಕ್ಷಣವನ್ನು ಸ್ಪರ್ಧಾತ್ಮಕ ಯುಗದ ಅಗತ್ಯಗಳಿಗೆ ತಕ್ಕಂತೆ ರೂಪಿಸುತ್ತಾ ಬರಲಾಗುತ್ತಿದ್ದು, ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ಚಿಂತನೆ ಹಾಗೂ ಲಕ್ಷ್ಯಾಧಾರಿತ ಅಭ್ಯಾಸಕ್ಕೆ ಒತ್ತು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆಗೈಯುತ್ತಿದ್ದಾರೆ. PCMB ಹಾಗೂ PCMCs ಸಂಯೋಜನೆಗಳ ಮೂಲಕ ಪಿಯು ಬೋರ್ಡ್ ಪಠ್ಯಕ್ರಮದ ಜೊತೆಗೆ JEE Mains, NEET ಹಾಗೂ KCET ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಮನ್ವಯಿತ ತರಬೇತಿ ನೀಡಲಾಗುತ್ತಿದೆ. ಅಧ್ಯಾಯವಾರು ಅಭ್ಯಾಸ, ನಿಯಮಿತ Mock Testಗಳು ಹಾಗೂ ತೀವ್ರ ತರಬೇತಿ ಮೂಲಕ ವಿದ್ಯಾರ್ಥಿಗಳ ಸಿದ್ಧತೆಯನ್ನು ಬಲಪಡಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಯಾವುದೇ ಒತ್ತಡ ನೀಡದೆ, ಸ್ವಾಭಾವಿಕವಾಗಿ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತಾ ಉತ್ತಮ ಫಲಿತಾಂಶ ಸಾಧನೆಗೆ ಶ್ರಮಿಸಲಾಗುತ್ತಿದೆ. ಜೊತೆಗೆ ಪಿಯು ಬೋರ್ಡ್ ಪರೀಕ್ಷೆಗೂ ಸಮಾನ ಮಹತ್ವ ನೀಡಲಾಗುತ್ತಿದ್ದು, ಪಠ್ಯಕ್ರಮದ ಅವಿಭಾಜ್ಯ ಭಾಗವಾದ ಪ್ರಯೋಗಾಲಯ ತರಗತಿಗಳನ್ನು ಯಾವುದೇ ತಾತ್ಕಾಲಿಕ ಕ್ರಮಕ್ಕೆ ಸೀಮಿತಗೊಳಿಸದೆ, ವರ್ಷಪೂರ್ತಿ ನಿಯಮಿತವಾಗಿ ಹಾಗೂ ಕ್ರಮಬದ್ಧವಾಗಿ ನಡೆಸಲಾಗುತ್ತಿದೆ. ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ಸಮತೋಲಿತ ಸಾಧನೆಗೆ ಒತ್ತು ನೀಡಲಾಗುತ್ತಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ.ಏ.23: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 5 ರಡಿ ಹಾಗೂ 308 (ಇ) (ಎಫ್) ರ ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಉಡುಪಿ ಜಿಲ್ಲೆಯ ಏಳು ತಾಲೂಕುಗಳಿಂದ ಆಯ್ಕೆಯಾಗುವ ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರ ಸಂಖ್ಯೆಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ. ಕುಂದಾಪುರ ತಾಲೂಕು ಗ್ರಾಮ ಪಂಚಾಯಿತಿಗಳು : ಆಲೂರು ಮತ್ತು ಕೆರಾಡಿ ತಲಾ -14, ಚಿತ್ತೂರು-8, ವಂಡ್ಸೆ-7, ಹಕ್ಲಾಡಿ-16, ತ್ರಾಸಿ-8, ಗುಜ್ಜಾಡಿ-16, ಹೆಮ್ಮಾಡಿ-11, ತಲ್ಲೂರು-16, ಹಟ್ಟಿಯಂಗಡಿ-14, ಕರ್ಕುಂಜೆ-11, ಆಜ್ರಿ-19, ಹೊಸಂಗಡಿ-13, ಸಿದ್ಧಾಪುರ-19, ಶಂಕರನಾರಾಯಣ -18, ಅಂಪಾರು-13, ಕಾವ್ರಾಡಿ-16, ಬಳ್ಕೂರು-8, ಬಸ್ರೂರು-17, ಆನಗಳ್ಳಿ-8, ಹಂಗಳೂರು-12, ಕೋಣಿ-10, ಕೋಟೇಶ್ವರ-26, ಬೀಜಾಡಿ-16, ಕುಂಭಾಶಿ ಹಾಗೂ ತೆಕ್ಕಟ್ಟೆ ತಲಾ-14, ಬೇಳೂರು-9, ಕೆದೂರು-10, ಕಾಳಾವರ ಹಾಗೂ ಹೊಂಬಾಡಿ ಮಂಡಾಡಿ ತಲಾ-17, ಮೊಳಹಳ್ಳಿ-11, ಹಾರ್ದಳ್ಳಿ ಮಂಡಳ್ಳಿ-13, ಹಾಲಾಡಿ-11, ಹೆಂಗವಳ್ಳಿ-9, ಅಮಾಸೆಬೈಲು-19, ಇಡೂರು ಕುಂಜ್ಞಾಡಿ-12, ಹೊಸಾಡು-15, ಕಟ್ ಬೆಲ್ತೂರು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮದರ್ ತೆರೆಸಾ ಪಿಯು ಕಾಲೇಜು, ಶಂಕರನಾರಾಯಣವು ಮೌಲ್ಯಾಧಾರಿತ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ದು, ಅಂಕಗಳ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಸಮಾನ ಆದ್ಯತೆ ನೀಡುತ್ತಾ ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ನಾಗರಿಕರಾಗಿ ರೂಪಿಸುತ್ತಾ ಬರುತ್ತಿದೆ. ಹೊರಗಿನ ಹೋಲಿಕೆಗಳಿಗಿಂತ, ತನ್ನದೇ ಹಿಂದಿನ ಸಾಧನೆಗಳನ್ನು ಮೀರಿಸುವುದೇ ಸಂಸ್ಥೆಯ ಪ್ರಮುಖ ಧ್ಯೇಯವಾಗಿದೆ ಹಾಗೂ ಪ್ರವೇಶಾತಿ ಸಮಯದಲ್ಲಿ ಅಂಕಗಳ ಮಿತಿ ಇಲ್ಲದೆ ಎಲ್ಲಾ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತಿದ್ದು, ಕಡಿಮೆ ಅಂಕ ಗಳಿಸಿ ಬಂದವರೂ ಕೂಡ ಇಲ್ಲಿ ಉನ್ನತ ಸಾಧನೆ ಮಾಡುವಂತಹ ವಾತಾವರಣವನ್ನು ಕಲ್ಪಿಸಲಾಗುತ್ತದೆ. ಇಲ್ಲಿನ ವಾಣಿಜ್ಯ ವಿಭಾಗದಲ್ಲಿ EBACs ಹಾಗೂ EBAS ಸಂಯೋಜನೆಗಳು ಲಭ್ಯವಿದ್ದು, ವಿಭಾಗದ ಮುಖ್ಯಸ್ಥರು ಹಾಗೂ ಕಾಲೇಜಿನ ಉಪಪ್ರಾಂಶುಪಾಲರಾದ ಕುಮಾರಿ ಗೀತಾ ಇವರ ನೇತೃತ್ವದಲ್ಲಿ ನುರಿತ ಶಿಕ್ಷಕವೃಂದವನ್ನು ವಿಭಾಗವು ಹೊಂದಿಕೊಂಡಿದೆ. ಈ ಅನುಭವಿ ಉಪನ್ಯಾಸಕರ ಮಾರ್ಗದರ್ಶನದ ಮೂಲಕ ಸಂಸ್ಥೆಯು ವಿದ್ಯಾರ್ಥಿಗಳಲ್ಲಿನ ಸಾಮರ್ಥ್ಯವನ್ನು ಹೊರತೆಗೆದು, ಅವರನ್ನು ರಾಜ್ಯಮಟ್ಟದ ಸಾಧನೆ ಮಾಡುವ ದಿಕ್ಕಿನೆಡೆಗೆ ಪ್ರೇರೇಪಿಸುತ್ತಿದೆ. ಈ ವರ್ಷದ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದ 65 ವಿದ್ಯಾರ್ಥಿಗಳಲ್ಲಿ 64 ಮಂದಿ ತಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ ಮೇಲ್‌ಗಂಗೊಳ್ಳಿ ಗಂಗೊಳ್ಳಿ ಇದರ 39ನೇ ವಾರ್ಷಿಕೋತ್ಸವ, ಅಮೃತಾ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್‌ಗಂಗೊಳ್ಳಿ ಇದರ 39ನೇ ವಾರ್ಷಿಕೋತ್ಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಮೇಲ್‌ಗಂಗೊಳ್ಳಿಯ ಪೋರ್ಟ್ ಬಂಗ್ಲೆ ಬಳಿ ಮಂಗಳವಾರ ನಡೆಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಚಂದ್ರ ಖಾರ್ವಿ ಧ್ವಜಾರೋಹಣ ನೆರವೇರಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ಜೈ ಭೀಮ್ ಸಂಘಟನೆಯ ಪ್ರಧಾನ ಸಂಚಾಲಕ ಜಗದೀಶ ಗಂಗೊಳ್ಳಿ, ಬೈಂದೂರು ಯುವ ಬಂಟರ ಸಂಘದ ಅಧ್ಯಕ್ಷ ಗುರುರಾಜ್ ಶೆಟ್ಟಿ ಶುಭ ಹಾರೈಸಿದರು. ಈ ಸಂದರ್ಭ ಸಮಾಜಸೇವಕ ಕೊತ್ವಾಲ್ ಪದ್ಮನಾಭ ಶೇರುಗಾರ್, ರಾಷ್ಟ್ರ ಮಟ್ಟದ ಕ್ರೀಡಾಪಟು ಕೀರ್ತನಾ ಎಸ್. ಕಿರಿಮಂಜೇಶ್ವರ, ಯಕ್ಷಗಾನ ಭಾಗವತ ಶಂಕರ ಬಾಳ್ಕುದ್ರು, 2025ರ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ‍್ಯಾಂಕ್ ಪಡೆದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕರಾವಳಿ ಹಾಗೂ ಮಲೆನಾಡಿನ ಸಮಸ್ತ ಜೈನ ಬಾಂಧವರ ಸಹಯೋಗದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವವನ್ನು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ಆದಿತ್ಯವಾರ ಹಮ್ಮಿಕೊಳ್ಳಲಾಯಿತು. ಸಂಜೆ 4ಕ್ಕೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಮೊದಲಿಗೆ ಆಳ್ವಾಸ್ ವಿದ್ಯಾರ್ಥಿಗಳಿಂದ ಜಿನಭಜನೆ ನಡೆಯಿತು. ಕೊಂಬು ವಾದ್ಯ, ನಾದಸ್ವರ, ಪೂರ್ಣಕುಂಭದೊಂದಿಗೆ ಮಹಾವೀರ ಸ್ವಾಮಿ ಜಿನಬಿಂಬದ ಮೆರವಣಿಗೆ, ತೋರಣ ಮುಹೂರ್ತ, ದ್ರವ್ಯಾಭಿಷೇಕ, ಅಷ್ಟವಿಧಾರ್ಚನೆ ಪೂಜೆ, ಮಹಾಮಂಗಳಾರತಿ ಹಮ್ಮಿಕೊಳ್ಳಲಾಯಿತು. ಹೊರನಾಡಿನ ಜಯಶ್ರೀ ಧರಣೇಂದ್ರ ಜೈನ್ ಮತ್ತು ಬಳಗದವರಿಂದ ಜಿನಭಕ್ತಿ ಗಾಯನ ನಡೆಯಿತು.ಸುತ್ತಮುತ್ತಲಿನ ವಾತಾವರಣಕ್ಕೆ ಧಾರ್ಮಿಕ ವೈಭವದ ಸ್ಪರ್ಶ ನೀಡುವ ಉದ್ದೇಶದಿಂದ 24 ತೀರ್ಥಂಕರರ ವಿಗ್ರಹಗಳನ್ನುಇಡಲಾಗಿತ್ತು. ಸಭಾಂಗಣದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಲು ಬೃಹತ್ ಆಕಾರದ 20 ವಿದ್ಯುತ್ ದೀಪಗಳನ್ನು ಅಳವಡಿಸಲಾಗಿತ್ತು. ಜಲಾಭಿಷೇಕದಿಂದ ಆರಂಭಗೊಂಡ ಪೂಜಾ ವಿಧಿಗಳು ಏಳನೀರು, ಇಕ್ಷುರಸ, ಕ್ಷೀರ, ಕಷಾಯ, ಕಾಶ್ಮೀರಿ ಕೇಸರಿ, ಕಲ್ಕಚೂರ್ಣ, ಅರಿಶಿನ, ಚತುಷ್ಕೋನ ಕಳಶ, ಚಂದನ ಹಾಗೂ ಅಷ್ಟಗಂಧದ ದ್ರವ್ಯಗಳಿಂದ ಭಕ್ತಿಭಾವದಿಂದ ನೆರವೇರಿಸಲ್ಪಟ್ಟವು. ಬಳಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ದಿನದಿಂದ ದಿನಕ್ಕೆ ಹೆಚ್ಚುದ್ದು ಇದರ ಬಗ್ಗೆ ಮಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಇಒ ಹರ್ಷ ಪೂಜಾರಿ ಖೇಧ ವ್ಯಕ್ತಪಡಿಸಿದ್ದಾರೆ. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್ ಸಹಯೋಗದೊಂದಿಗೆ ಕೋಟ ಗ್ರಾ.ಪಂ ಎಸ್ ಎಲ್ ಆರ್ ಎಂ ಘಟಕ ಇವರ ಸಂಯೋಜನೆಯೊಂದಿಗೆ 299ನೇ ಭಾನುವಾರದ ಸ್ವಚ್ಛತಾ ಅಭಿಯಾನದಲ್ಲಿ ಮಾತನಾಡಿದರು. ಪಂಚವರ್ಣ ಈ ಸ್ವಚ್ಛತಾ ಅಭಿಯಾನ ರಾಷ್ಟ್ರೀಯ ಹೆದ್ದಾರಿಯಲ್ಲುಂಟಾಗುವ ದೊಡ್ಡ ಪ್ರಮಾಣದ ತ್ಯಾಜ್ಯದ ಕೊಂಪೆಯನ್ನು ಇನ್ನಿಲ್ಲದಂತ್ತಾಗಿಸಿದ್ದಾರೆ ಆದರೆ ಕಸ ಎಸೆಯುವ ಮನಸ್ಥಿತಿ ಅತ್ಯಂತ ಹೀನ ವ್ಯವಸ್ಥೆ ತಳ್ಳಲ್ಪಟ್ಟಿದೆ ಎಂದು ಪಂಚವರ್ಣ ನಿತ್ಯನಿರಂತ ಪಕೃತಿ ಮಾತೆಯ ಸೇವೆಯನ್ನು ಮುಕ್ತಕಂಠದಿಂದ ಪ್ರಶಂಸಿದರು. ಈ ಸಂದರ್ಭದಲ್ಲಿ ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್,ಗಿರೀಶ್ ಆಚಾರ್,ಉಪಾಧ್ಯಕ್ಷ ದಿನೇಶ್ ಆಚಾರ್,ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ,ಟ್ರಾವೆಲಿಂಕ್ಸ್…
