Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರಕಾರದ ‘ಸ್ವಚ್ಛ ಭಾರತ ಅಭಿಯಾನ’ದ ಅಂಗವಾಗಿ ಪೊಲೀಸ್ ಇಲಾಖೆ ಕುಂದಾಪುರ ಉಪ ವಿಭಾಗ ಅಧೀನದಲ್ಲಿರುವ ಎಲ್ಲಾ ಠಾಣೆ ಮತ್ತು ಸಂಚಾರಿ ಠಾಣೆಗಳಲ್ಲಿ ಠಾಣಾಧಿಕಾರಿ ನೇತೃತ್ವದಲ್ಲಿ ಹಾಗೂ ಸ್ಥಳೀಯ ಸಂಘ ಸಂಸ್ಥೆಯ ಸಹಕಾರದೊಂದಿಗೆ ಸಂಜೆ ಠಾಣೆಗಳಲ್ಲಿ ಸ್ವಚ್ಚತಾ ಕಾಯ೯ ನಡೆಯಿತು. ಸ್ವಚ್ಚತಾ ಕಾರ್ಯದಲ್ಲಿ ಠಾಣಾಧಿಕಾರಿ, ಸಿಬ್ಬಂಧಿ ವರ್ಗ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು ಪಾಲ್ಗೊಂಡಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ ಮಸ್ಜಿದ್ ಎ ನೂರುಲ್ ಇಸ್ಲಾಮ್ ಆದಿಉಡುಪಿಯ ಸಹಕಾರದೊಂದಿಗೆ ಆಯುಷ್ಮಾನ್ ಕಾರ್ಡ್ ಹಾಗೂ ವಿದ್ಯಾರ್ಥಿ ವೇತನ ಶಿಬಿರ ನಡೆಯಿತು. ಜಿಲ್ಲಾಧ್ಯಕ್ಷರಾದ ಜನಾಬ್ ಮುಷ್ತಾಕ್ ಅಹ್ಮದ್ ಬೆಳ್ವೆ ನಮ್ಮ ನಾಡ ಒಕ್ಕೂಟದ ಧ್ಯೇಯೊದ್ದೇಶ ಮತ್ತು ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿದರು. ಉಡುಪಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಜಿಲ್ಲಾ ಸಂಯೋಜಕರಾದ ಡಾ. ತೇಜಸ್ವಿನಿ ಎ. ಆಯುಷ್ಮಾನ್ ಕಾರ್ಡ್ ನ ಉಪಯುಕ್ತತೆ ಮತ್ತು ಪ್ರಯೋಜನದ ಬಗ್ಗೆ ಹೇಳಿದರು. ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಸಮೀ ಹಳಗೇರಿ ಎನ್.ಎಸ್.ಪಿ ವಿಧ್ಯಾರ್ಥಿ ವೇತನದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ನಝೀರ್ ಸಾಹೇಬ್ ನೇಜಾರ್ ಅಧ್ಯಕ್ಷತೆ ವಹಿಸಿದ್ದರು, ಆದಿಉಡುಪಿ ಮಸ್ಜಿದ್ ಎ ನೂರುಲ್ ಇಸ್ಲಾಮ್ ಖತೀಬರಾದ ಮುಫ್ತಿ ಮೊಹಮ್ಮದ್ ಸುಹೇಲ್ ಕಿರಾತ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗಲಾರದು. ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದಿದ್ದರೆ ಸಾಧನೆ ಮಾಡಲು ಸಾಧ್ಯವಿದೆ. ಆದರೆ ನಿರಂತರ ಪರಿಶ್ರಮವಿಲ್ಲದೇ ಏನನ್ನೂ ಸಾಧಿಸಲಾಗದು ಎಂದು ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ಗೋವಿಂದ ಬಾಬು ಪೂಜಾರಿ ಹೇಳಿದರು. ಸೋಮವಾರ ಬೈಂದೂರು ರತ್ತುಬಾಯಿ ಜನತಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನೀಡಲಾದ ಉಚಿತ ಸಮವಸ್ತ್ರವನ್ನು ವಿತರಿಸಿ ಮಾತನಾಡಿ ಯಶಸ್ಸನ್ನು ಕಾಣಲು ಮುನ್ನಡೆಯುವವರಿಗೆ ಯಾವುದಾದರೂ ರೂಪದಲ್ಲಿ ಸಹಕಾರ ಸಿಕ್ಕೇ ಸಿಗುತ್ತದೆ. ಅದನ್ನು ಸದುಪಯೋಗಪಡಿಸಿಕೊಳ್ಳುವ ಜಾಣ್ಮೆ ಇರಬೇಕು ಎಂದರು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ದೇಣಿಗೆ ನೀಡಲಾಗುತ್ತಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬುದು ನನ್ನ ಉದ್ದೇಶವಾಗಿದೆ ಎಂದರು. ರತ್ತುಬಾಯಿ ಜನತಾ ಪ್ರೌಢಶಾಲೆಯ 155 ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರ ವಿತರಿಸಿದರು. ಸಂಸ್ಥೆಯ ವತಿಯಿಂದ ಡಾ. ಗೋವಿಂದ ಬಾಬು ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ವಿವಿವಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಶ್ವಿ ಚೆಸ್ ಸ್ಕೂಲ್‌ನಲ್ಲಿ ಓಪನ್ ರ‍್ಯಾಪಿಡ್ ಚೆಸ್ ಪಂದ್ಯಾವಳಿ ನಡೆಯಿತು. ಮುಕ್ತ ವಿಭಾಗದ ಚೆಸ್ ಪಂದ್ಯಾಟದಲ್ಲಿ ಕಶ್ವಿ ಚೆಸ್ ಸ್ಕೂಲ್‌ನ ವಿದ್ಯಾರ್ಥಿಗಳಾದ ನಿಶಾಂತ್ ಡಿಸೋಜ್ ಪ್ರಥಮ ಸ್ಥಾನ, ದಿವ್ಯ ದ್ವೀತಿಯ ಸ್ಥಾನ ಕಾರ್ತಿಕ್ ತೃತೀಯ ಸ್ಥಾನಗಳಿಸಿದರು. ಗೋಲ್ಡನ್ ಗ್ರೂಪ್ನ ಮುಕ್ತ ವಿಭಾಗದಲ್ಲಿ ಮನನ್ ಶೆಟ್ಟಿ ಪ್ರಥಮ ಸ್ಥಾನ, ಸನತ್ ಎಸ್. ಸಿರಿಯಾನ್ ದ್ವಿತೀಯ ಸ್ಥಾನ, ಹರಿದಾಸ್ ಆರ್. ಮಲ್ಯ ತೃತೀಯ ಸ್ಥಾನಗಳಿಸಿದರು. ಹಾಗೂ ಸ್ಟಾರ್ ಗ್ರೂಪ್‌ನ ಮುಕ್ತ ವಿಭಾಗದಲ್ಲಿ ರೀತೇಶ್ ವಿ. ಪ್ರಭು ಪ್ರಥಮ ಸ್ಥಾನ, ತೇಜಸ್ ದ್ವಿತೀಯ ಸ್ಥಾನ, ನವಮ್ ಹೆಗ್ಡೆ ತೃತೀಯ ಸ್ಥಾನ ಪಡೆದರು. ಸಮಾರೋಪ ಸಮಾರಂಭದ ವೇದಿಕೆಯಲ್ಲಿ ಮುಖ್ಯ ಅಥಿತಿಯಾಗಿ ಕೋಟೇಶ್ವರ ಅಂಕದಕಟ್ಟೆಯ ಸುಧನ್ವ ಮಲ್ಟಿ ಕಲ್ಚರಲ್ ಅಂಡ್ ಕೋಚಿಂಗ್ ಸೆಂಟರ್ ಸಂಸ್ಥಾಪಕರಾದ ಸುಮಲತಾ ಶೆಟ್ಟಿ ಅವರು ಮಾತನಾಡಿ, ಚೆಸ್ ಕಲಿಕೆ ಮತ್ತು ಆಟವು ವಿದ್ಯಾರ್ಥಿಗಳನ್ನು ಬೌದ್ಧಿಕ ಮತ್ತು ಶಾರೀರಿಕವಾಗಿ ಉತ್ತಮಗೊಳ್ಳಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು. ಕಶ್ವಿ ಚೆಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಟ್ರಸ್ಟ್‌ನ ಬೆಳ್ಳಿ ಹಬ್ಬದ ಸಂಭ್ರಮ (1995-2020) ಹಾಗೂ ಸೂತ್ರಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣ ಕಾಮತ್ ಜನ್ಮ ಶತಮಾನೋತ್ಸವ (1921-2021)ದ ಅಂಗವಾಗಿ ಗೊಂಬೆಮನೆಯಲ್ಲಿ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ನಿರಂತರ ಸರಣಿ ಕಾರ್ಯಕ್ರಮದಡಿ 66ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಸೂತ್ರಕ್ರೀಡೆಯ ಗಾರುಡಿಗರಾದ ದೇವಣ್ಣ ಪದ್ಮನಾಭ ಕಾಮತ್ ಮತ್ತು ಕೊಗ್ಗ ದೇವಣ್ಣ ಕಾಮತ್ರ ತೈಲಚಿತ್ರ ಗಳನ್ನು ಅತಿಥಿಗಳು ಅನಾವರಣಗೊಳಿಸಿದರು . ನನ್ನ ದೃಷ್ಟಿಯಲ್ಲಿ ಉಪ್ಪಿನಕುದ್ರು ಗೊಂಬೆಯಾಟಆನ್ ಲೈನ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪೂಜಾ ತೀರ್ಥಹಳ್ಳಿ, ದ್ವಿತೀಯ ಸ್ಥಾನ ಸೃಗ್ವಿ ಸತೀಶ, ನನ್ನ ಸೂತ್ರದ ಗೊಂಬೆ ಆನ್ ಲೈನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪೂರ್ವಿಕ ಆರ್. ತಾಳಿಕೋಟಿ, ದ್ವಿತೀಯ ಸ್ಥಾನ ಶ್ರೇಯಸ್ ಪೈ, ಸಮಾಧಾನಕರ ಬಹುಮಾನವಾಗಿ ಸಂಜನಾ ಶೆಟ್ಟಿ , ಸೀಮಾ ಬಾಳಿಗಾ ಕಾಮತ್ ಮತ್ತು ಶತಮಾನೋತ್ಸವದ ವಿಶೇಷ ಬಹುಮಾನವಾಗಿ ಮಂಡ್ಯ ಗೊಂಬೆಯಾಟ ತಂಡದ ರೂವಾರಿ ಮೂರ್ತಾಚಾರ್ಯ ಎನ್ ಟಿ. ರವರಿಗೆ ಪ್ರಶಸ್ತಿ ಪತ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾನೂನಿನ ಚೌಕಟ್ಟಿನಲ್ಲಿ ಶೋಷಣೆಗೆಗೆ ಒಳಗಾದವರಿಗೆ ಪ್ರಾಮಾಣಿಕವಾಗಿ ನ್ಯಾಯ ದೊರಕುವಂತಗಾಬೇಕು ಸಮಾಜದ ಪ್ರತಿಯೊಬ್ಬರು ಈ ನಿಟ್ಟಿನಲ್ಲಿ ಕಾರ್ಯವೆಸಗಿದಾಗ ಅನ್ಯಾಯದ ವಿರುದ್ದ ಧ್ವನಿ ಎತ್ತಿದಾಗ ಇದು ಸಾಧ್ಯ, ಕಾನೂನಿನ ರ್ದುಬಳಕೆ ಮಾಡಿಕೊಳ್ಳದೇ ಕಾನೂನಿನ ಮೂಲಕ ಸುಸ್ಥಿರ ಸಮಾಜ ನಿರ್ಮಾಣಕ್ಕೆ ನಾಗರಿಕರು ಮುಂದೆ ಬಂದು , ಕಾನೂನಿನ ಉದ್ದೇಶದ ತಿಳುವಳಿಕೆ ಪಡೆದುಕೊಂಡು ಅದರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸಮಿತಿ , ಕುಂದಾಪುರ ಅಧ್ಯಕ್ಷರಾದ ರಂಗೇಗೌಡ ಅವರು ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ, ವಕೀಲರ ಸಂಘ ರಿ. ಕುಂದಾಪುರ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಸಿಟಿ ರೋಟರಿ ಕೋಟ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ 75 ನೇ ಸ್ವಾತಂತ್ರೋತ್ಸವದ ಆಚರಣೆ ಅಂಗವಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸೃಷ್ಟಿ ಹಾಗೂ ಚರ್ಪ್ ಕ್ಲಬ್ ವತಿಯಿಂದ ಸರ್ಫಿಂಗ್ ಸ್ವಾಮಿ ಫೌಂಡೇಶನ್ ಹಾಗೂ ಕಾನ್ಫೆಡೆರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ ಭಾಗವಾಗಿರುವ ‘ಯಂಗ್ ಇಂಡಿಯನ್ಸ್’ ಸಹಯೋಗದಲ್ಲಿ ‘ಸಸಿಹಿತ್ಲು ಮಂತ್ರ ಬೀಚ್ ಸ್ವಚ್ಛತಾ ಕಾರ್ಯಕ್ರಮ’ ಹಮ್ಮಿಕೊಳ್ಳಲಾಯಿತು. ಸುಮಾರು104 ಚೀಲಗಳಲ್ಲಿ ಸುಮಾರು 1.5 ಟನ್ ಕಸವನ್ನು ಸ್ವಚ್ಛಗೊಳಿಸಿ ಬೈಕಂಪಾಡಿ ಕಸ ಪುನರ್ವಿಲೇವಾರಿ ಘಟಕಕ್ಕೆ ನೀಡಲಾಯಿತು. ಸ್ವಚ್ಛತೆಯಲ್ಲಿ ಸೃಷ್ಟಿ ಹಾಗೂ ಚರ್ಪ್ ಕ್ಲಬ್‌ನ 80 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸರ್ಫಿಂಗ್ ಸ್ವಾಮಿ ಫೌಂಡೇಶನ್ ನಿರ್ದೇಶಕ ಗೌರವ್ ಹೆಗ್ಡೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಸೃಷ್ಟಿ ಹಾಗೂ ಚರ್ಪ್ ಕ್ಲಬ್ ಸಂಯೋಜಕರು, ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜನರ ಬೇಜವಬ್ದಾರಿಯಿಂದ ಪ್ಲಾಸ್ಟಿಕ್, ರಬ್ಬರ್, ಔಷಧೀಯ ತ್ಯಾಜ್ಯ, ಫೋಮ್, ಮದ್ಯದ ಬಾಟಲಿಗಳು ಸೇರಿದಂತೆ ಅನೇಕ ವಿಷಕಾರಿ ವಸ್ತುಗಳು ನದಿಯ ಒಡಲು ಸೇರಿ ಸಮುದ್ರದ ಮೂಲಕ ದಡದಲ್ಲಿ ಶೇಖರಣೆಗೊಳ್ಳುತ್ತಿವೆ. ಇದರಿಂದ ಹೆಜಮಾಡಿ ಕೋಡಿಯಂತಹ ಅಳಿವೆ ಪ್ರದೇಶಗಳ ಜಲಮೂಲ ಸಸ್ಯಗಳು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಸರಸ್ವತಿ ವಿದ್ಯಾನಿಧಿ ವತಿಯಿಂದ ಜಿಎಸ್‌ಬಿ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದ ಸಂಸ್ಥೆಯ ಹಿರಿಯ ಸದಸ್ಯ ಯು.ನಾರಾಯಣ ಪಿ.ಪೈ, ಸಂಸ್ಥೆಯ ಈ ಕಾರ್ಯದ ಉದ್ದೇಶ ಉತ್ತಮವಾಗಿದ್ದು, ಹಿರಿಯರ ಆಶಯದಂತೆ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ನೆರವು ಕಲ್ಪಿಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿವೇತನ ಪಡೆದುಕೊಂಡವರು ನಿಧಿಯ ಸದುಪಯೋಗಪಡಿಸಿಕೊಂಡು ಪರಿಶ್ರಮಪಟ್ಟು ಉತ್ತಮ ವಿದ್ಯಾರ್ಜನೆಗೈದು ವಿದ್ಯಾರ್ಥಿ ಜೀವನದಲ್ಲಿ ಯಶಸ್ವಿಗಳಾಗಿ ಸಮಾಜಕ್ಕೆ, ಊರಿಗೆ ಸಹಕಾರ ನೀಡಿ ಸತ್ಪ್ರಜೆಗಳಾಗುವಂತೆ ಕರೆ ನೀಡಿದರು. ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಬಿ. ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ಕೆನರಾ ಬ್ಯಾಂಕ್ ಸಿಬ್ಬಂದಿ ಜಿ.ಗಂಗಾಧರ ಪೈ ಶುಭಾಶಂಸನೆಗೈದರು. ಸುಮಾರು 87 ಸಾವಿರ ರೂಪಾಯಿ ವಿದ್ಯಾರ್ಥಿ ವೇತನವನ್ನು ಅರ್ಹ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಜಿ.ವೆಂಕಟೇಶ ಶೆಣೈ ಸ್ವಾಗತಿಸಿದರು. ಕೆ.ರಾಮನಾಥ್ ನಾಯಕ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಬಿ.ರಾಘವೇಂದ್ರ ಪೈ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಾವಣಗೆರೆಯ ಹರಿಹರದಲ್ಲಿ ನಡೆದ ರಾಜ್ಯಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ನಾಗರಾಜ ಖಾರ್ವಿ ಅವರು ಬ್ರೆಸ್ಟ್ ಸ್ಟ್ರೋಕ್ 50 ಮೀ ಚಿನ್ನ, ಬ್ರೆಸ್ಟ್ ಸ್ಟ್ರೋಕ್ 100 ಮೀ ಚಿನ್ನ, ಬ್ರೆಸ್ಟ್ ಸ್ಟ್ರೋಕ್ 200 ಮೀ ಬೆಳ್ಳಿ, 50×4 ಮೆಡ್ಲೆ ರಿಲೇ ಕಂಚು,100X4 ಫ್ರೀ ಸ್ಟೈಲ್ ರಿಲೇ ಕಂಚು ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಹಿಂದೆ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಬಿಗಿದು ಬೀಗ ಹಾಕಿ ಅರಬ್ಬಿ ಸಮುದ್ರದಲ್ಲಿ ಬ್ರೆಸ್ಟ್ ಸ್ಟ್ರೋಕ್ನಲ್ಲಿ ಒಂದು ಕಿ.ಮೀ. ದೂರವನ್ನು ಅತ್ಯಂತ ವೇಗವಾಗಿ ಈಜಿ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಸ್ಥಾನ ಪಡೆದುಕೊಂಡಿದ್ದ ಅವರು, ರೇಷ್ಮೆ ಇಲಾಖೆಯ ಇನ್ಸ್ಪೆಕ್ಟರ್ ಬಿ.ಕೆ.ನಾಯ್ಕ್ ಅವರಿಂದ ತರಬೇತಿ ಪಡೆದುಕೊಂಡಿದ್ದಾರೆ. ಅವರು, ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿಯಾಗಿದ್ದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಚುಗೋಡು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ, ಸರಸ್ವತಿ ವಿದ್ಯಾಲಯ ಗಂಗೊಳ್ಳಿಯ ಹಳೆವಿದ್ಯಾರ್ಥಿಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ಕುಂಜೆ ಗ್ರಾಮದ ಖ್ಯಾತ ಉದ್ಯಮಿ, ಕೃಷಿಕ, ನೇರಳಕಟ್ಟೆ ರಂಗಪ್ಪ ನಾಯಕ್ (93) ನಿಧನರಾದರು. ಅವರು, ಕೃಷಿ , ತೋಟಗಾರಿಕೆಯಲ್ಲಿ ಆಸಕ್ತಿ ಹೊಂದಿದ್ದು, ತಮ್ಮ ವಾಮನ ನಾಯಕ್ ರೈಸ್‌ಮಿಲ್ ಮೂಲಕ ಅಕ್ಕಿ ಉತ್ಪಾದನೆ, ವ್ಯವಹಾರ ನಡೆಸುತ್ತಿದ್ದರು , ಧಾರ್ಮಿಕ , ಸಾಮಾಜಿಕ ಕಾರ್ಯಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ಮೃತರು, ಪತ್ನಿ ಹಾಗೂ ಖ್ಯಾತ ಸಾಮಾಜಿಕ ಧುರೀಣ ಎನ್.ನಾರಾಯಣ ನಾಯಕ್ ಸೇರಿದಂತೆ ಮೂವರು ಪುತ್ರರು ಐವರು ಪುತ್ರಿಯರನ್ನು ಅಗಲಿದ್ದಾರೆ.

Read More