Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯದ ಆಶ್ರಯದಲ್ಲಿ ನಾಗೂರು ಶ್ರೀ ಕೃಷ್ಣ ಲಲಿತಾ ಕಲಾಮಂದಿರದಲ್ಲಿ ಪಂಚಾಂಗ ಪಠಣ ಮತ್ತು ಉಪನ್ಯಾಸ ಕಾರ್ಯಕ್ರಮ ಆದಿತ್ಯವಾರ ದಿನ ಜರಗಿತು. ಪಂಚಾಂಗ ಪಠಣ ಮಾಡಿ ಧಾರ್ಮಿಕ ಉಪನ್ಯಾಸ ನೀಡಿದ ವೇದಮೂರ್ತಿ ವಾಸುದೇವ ಐತಾಳ್ ಕೆಳಮಠ ಮಾತನಾಡಿ ಜ್ಯೋತಿಷ್ಯ ಶಾಸ್ತ್ರವು ವೈಜ್ಞಾನಿಕತೆಯಿಂದ ಕೂಡಿದು ಸತ್ಯವಾಗಿರುತ್ತದೆ. ಜ್ಯೋತಿಷಿ ಶಾಸ್ತ್ರ ಹೆಚ್ಚಿನ ವಿಜ್ಞಾನಿಗಳು ಸಹ ಸಹಮತವನ್ನು ವ್ಯಕ್ತಪಡಿಸಿದ್ದಾರೆ. ಅದರಂತೆ ಪಂಚಾಗವು ಸಹ ಸಂಪೂರ್ಣ ಗಣಿತದ ಲೆಕ್ಕ ಚಾರದಿಂದ ರಚಿತವಾಗಿರುತ್ತದೆ. ಧಾರ್ಮಿಕವಾಗಿ ಪಂಚಾಂಗ ಶೃವಣ ಮಾಡುವುದರಿಂದ ಪುಣ್ಯಾಂಶ ಲಭಿಸುತ್ತದೆ. ಎಂದು ಶಾಸ್ತ್ರಕಾರರು ಉಲ್ಲೇಖಿಸಿದ್ದಾರೆ ಎಂದು ಹೇಳಿದ್ದರು. ಉಪ್ಪುಂದ ವಲಯದ ಅಧ್ಯಕ್ಷರಾದ ಬಿ. ವಿಶ್ವೇಶ್ವರ ಅಡಿಗ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಘದ ಪ್ರಮುಖರಾದ ಉದ್ಯಮಿ ಉಮೇಶ ಶ್ಯಾನುಬೋಗ್ ಗೌರವಧ್ಯಕ್ಷ ಮಂಜುನಾಥ್ ಉಡುಪ, ದೀಟಿ ಸೀತರಾಮ ಮಯ್ಯ, ವಾಸು ದೇವ ನಾವುಡ, ಪ್ರಕಾಶ ಐತಾಳ್, ವಾಸುದೇವ ಕಾರಂತ, ರಮೇಶ ವೈದ್ಯ, ಗಣೇಶ ಕಾರಂತ, ಕಾರ್ಯದರ್ಶಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹೊಸಾಡು ಗ್ರಾಪಂ ವ್ಯಾಪ್ತಿಯ ಹೊಸಾಡು-ಬಂಟ್ವಾಡಿ ಸಂಪರ್ಕ ಸೇತುವೆ ಸಮೀಪ ಕೆಲವರು ಚಟ್ಲಿಕೆರೆ ನಿರ್ಮಾಣಕ್ಕಾಗಿ ಹೊಳೆ ಪರಂಬೋಕು ಜಾಗ ಅತಿಕ್ರಮಿಸಿ ರಸ್ತೆ ನಿರ್ಮಿಸುತ್ತಿದ್ದು, ಹೊಳೆಬದಿಯಲ್ಲಿನ ಅಪಾರ ಕಾಂಡ್ಲಾ ವೃಕ್ಷಗಳನ್ನು ನಾಶಪಡಿಸಿದ್ದಾರೆ. ಸಾರ್ವಜನಿಕರ ದೂರಿಗೆ ಸ್ಪಂದಿಸಿ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಕಂದಾಯ ಇಲಾಖಾಧಿಕಾರಿಗಳು ಭೇಟಿ ನೀಡಿದ್ದರೂ ರಸ್ತೆ ನಿರ್ಮಾಣ ಮತ್ತು ಕಾಂಡ್ಲಾ ಗಿಡಗಳ ಮಾರಣಹೋಮ ಮುಂದುವರಿದಿದೆ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂಟ್ವಾಡಿ ಸೇತುವೆ ಪೂರ್ವಭಾಗದಲ್ಲಿ ಸೌಪರ್ಣಿಕಾ ನದಿ ತೀರದಲ್ಲಿ ಚಟ್ಲಿ ಉದ್ಯಮಕ್ಕಾಗಿ ಖಾಸಗಿ ವ್ಯಕ್ತಿಗಳು ನದಿತೀರ ಬಗೆದು ರಸ್ತೆ ನಿರ್ಮಿಸುತ್ತಿದ್ದು, ನದಿತೀರದಲ್ಲಿ ತೀರ ಸಂರಕ್ಷಣೆಗಾಗಿ ಅರಣ್ಯ ಇಲಾಖೆ ಬೆಳೆಸಿದ್ದ ನೂರಾರು ಕಾಂಡ್ಲಾ ವೃಕ್ಷಗಳನ್ನು ನಾಶ ಪಡಿಸಲಾಗಿದೆ. ನದಿತೀರ ಬಗೆದು ಮಣ್ಣು ತುಂಬಿಸುವ ಸಂದರ್ಭದಲ್ಲಿ ಇಲ್ಲಿನ ಕಾಂಡ್ಲಾ ವೃಕ್ಷಗಳು ಸಮಾಧಿಯಾಗಿರುವುದು ಕಂಡುಬಂದಿದೆ. ಈ ಹಿಂದೆ ಇದೇ ತೀರದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲಾಗಿದ್ದು, ನಿರಂತರವಾಗಿ ಕಾಂಡ್ಲಾ ನಾಶ ನಡೆದಿದೆ. ಹೊಸಾಡು-ಬಂಟ್ವಾಡಿ ನದಿಯ ಇಕ್ಕೆಲದಲ್ಲಿ ಸೊಂಪಾಗಿ ಬೆಳೆದಿದ್ದ ಕಾಂಡ್ಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸೋಮವಾರ ತಾಲೂಕು ಪಂಚಾಯತ್ ಅನುದಾನದಡಿಯಲ್ಲಿ ಬೈಂದೂರು ತಾಲೂಕು ಪಂಚಾಯತ್ ಸದಸ್ಯೆ ಮಾಲಿನಿ ಕೆ. ಅವರ ಕಾರ್ಯವ್ಯಾಪ್ತಿಯ ಬೈಂದೂರು ಗ್ರಾಮ ಪಂಚಾಯತ್‌ನ ವಿವಿಧೆಡೆಗಳಲ್ಲಿ ಅಳವಡಿಸಲಾದ ಸೋಲಾರ್ ದೀಪಗಳಿಗೆ ಚಾಲನೆ ನೀಡಲಾಯಿತು. ಈ ಸಂದರ್ಭ ಬೈಂದೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ಭಾಸ್ಕರ ನಾಯ್ಕ್, ಬಾಲಕೃಷ್ಣ ಶೆಟ್ಟಿ, ಭಾಗೀರಥಿ ಮೊದಲಾದವರು ಉಪಸ್ಥಿತರಿದ್ದರು.

Read More

ಡಾ. ಪಾರ್ವತಿ ಜಿ.ಐತಾಳ್ | ಕುಂದಾಪ್ರ ಡಾಟ್ ಕಾಂ ಲೇಖನ ಭಾರತೀಯ ಸಂಗೀತ ಕಲಾ ಪರಂಪರೆಗೆ ಜಗತ್ತಿನಲ್ಲಿ ಅದರದ್ದೇ ಆದ ಅನನ್ಯತೆಯಿದೆ. ಭಾವಪೂರ್ಣ ಸೊಬಗನ್ನು ಹೊಂದಿದ ಅದು ಕೇಳುಗನನ್ನು ದೈವೀಕವಾದ ಆತ್ಮಾನಂದದತ್ತ ಕರೆದೊಯ್ಯುವ ಶಕ್ತಿಯನ್ನು ಹೊಂದಿದೆ. ಅದನ್ನು ಕೇಳಿ ಆನಂದಿಸಬೇಕಾದರೆ ಸುಸಂಸ್ಕೃತವಾದ ಒಂದು ಮನಸ್ಸು ಬೇಕು. ಆದರೆ ಇಂದಿನ ವೇಗದ ಯುಗದಲ್ಲಿ ನಮ್ಮ ಈ ಶ್ರೀಮಂತ ಪರಂಪರೆಯ ಬಗ್ಗೆ ಗಮನ ಹರಿಸದೆ, ಮನಸ್ಸನ್ನು ಉದ್ರೇಕಗೊಳಿಸುವ ಉನ್ಮಾದಪೂರ್ಣ ಪಾಶ್ಚಾತ್ಯ ಜನಪ್ರಿಯ ಸಂಗೀತವನ್ನು ಅಳವಡಿಸಿಕೊಂಡ ಗೀತೆಗಳನ್ನು ಕೇಳುವ ಹುಚ್ಚನ್ನು ಬೆಳೆಸಿಕೊಂಡ ಜನರನ್ನು ನಾವು ನೋಡುತ್ತೇವೆ. ಕುಂದಾಪುರದಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತದ ಬಗ್ಗೆ ಒಲವುಳ್ಳ ವಾತಾವರಣ ಇಲ್ಲದಿರುವುದನ್ನು ಮನಗಂಡ ಅನೇಕ ಸಂಸ್ಥೆಗಳು ಅದನ್ನು ಪ್ರೋತ್ಸಾಹಿಸಲು ಈ ಹಿಂದೆಯೂ ಪ್ರಯತ್ನಿಸಿದ್ದಿದೆಯಾದರೂ ಇನ್ನೂ ಅದು ಸಾಕಷ್ಟು ಪುಷ್ಟಿಗೊಂಡಿಲ್ಲವೆಂಬ ಕಾರಣಕ್ಕೆ ಕೋಟೇಶ್ವರದ ಶಾಂತಿಧಾಮ ಟ್ರಸ್ಟ್(ರಿ) ಇವರು ಕುಂದಾಪುರದ ಸಂಗೀತ ಭಾರತಿ ಟ್ರಸ್ಟ್,(ರಿ), ಸಾಧನಾ ಕಲಾ ಸಂಗಮ (ರಿ), ಕಲಾಕ್ಷೇತ್ರ ಮತ್ತು ನಾಟ್ಯಚಂದ್ರಿಕಾ ಎಂಬ ಇತರ ನಾಲ್ಕು ಸಂಸ್ಥೆಗಳ ಸಹಯೋಗದೊಂದಿಗೆ ಶಾಂತಿಧಾಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಉಡುಪಿ ಜಿಲ್ಲಾ ಉತ್ತಮ ಆಶಾ ಕಾರ್ಯಕರ್ತೆ ಪ್ರಶಸ್ತಿ ವಿಜೇತ ಗಂಗೊಳ್ಳಿಯ ಕಲ್ಪನಾ ಯಾನೆ ಜ್ಯೋತಿ ಶೇರುಗಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ಗುರುವಾರ ಜರಗಿದ ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆಯಲ್ಲಿ ಅವರನ್ನು ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಸನ್ಮಾನಿಸಿ ಗೌರವಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೀತಾರಾಮ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಅಂಜಲಿ ಹುಂಡೇಕರ್, ಗ್ರಾಪಂ ಸದಸ್ಯ, ಮಕ್ಕಳ ಮಿತ್ರ ಬಿ.ಲಕ್ಷ್ಮೀಕಾಂತ ಮಡಿವಾಳ, ಅಂಗನವಾಡಿ ಕಾರ್ಯಕರ್ತೆ ಹಾಗೂ ಮಹಿಳಾ ಮಿತ್ರ ಫಿಲೋಮಿನಾ ಫೆರ್ನಾಂಡಿಸ್, ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸವಿತಾ ಶೆಟ್ಟಿ, ಆರೋಗ್ಯ ಇಲಾಖೆಯ ಕಿರಿಯ ಸಹಾಯಕಿ ಅರ್ಪಿತಾ, ಗ್ರಾಪಂ ಸದಸ್ಯರಾದ ಅಬ್ದುಲ್ ಹಾದಿ, ಸರೋಜಿನಿ ಕೋಡಿಕಾರ್, ಶಾರದಾ ಶೇರುಗಾರ್, ರೋಜಿ ಫೆರ್ನಾಂಡಿಸ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿ.ಮಾಧವ, ನಮ್ಮ ಭೂಮಿ ಸಂಸ್ಥೆಯ ಶಾರದಾ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸರ್ವರಿಗೂ ಸಮಬಾಳು, ಸಮಪಾಲು ಸಿದ್ದಾಂತದ ಸಂವಿಧಾನವನ್ನು ನೀಡುವ ಮೂಲಕ ದೇಶದ ಜನರ ಜೀವನಮಟ್ಟವನ್ನು ಉನ್ನತಿಗೇರಿಸಿದ ಕೀರ್ತಿ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂದಿರಾಜಿಯವರ ೨೦ ಅಂಶದ ಕಾರ್ಯಕ್ರಮದ ಮೂಲಕ ಶಿಕ್ಷಣ, ಆರೋಗ್ಯ, ವಿಜ್ಞಾನ, ಬ್ಯಾಂಕಿಂಗ್, ಕೃಷಿ ಮುಂತಾದ ಕ್ಷೇತ್ರಗಳಿಗೆ ಪ್ರಾಧಾನ್ಯತೆ ನೀಡುವ ಮೂಲಕ ವಿಶ್ವದ ಮುಂದುವರೆದ ರಾಷ್ಟ್ರಗಳ ಸಾಲಿನಲ್ಲಿ ನಮ್ಮ ಭಾರತ ದೇಶವು ಮುಂಚೂಣಿಯ ಸ್ಥಾನಕ್ಕೇರಲು ಸಾಧ್ಯವಾಯಿತು. ಕಾಂಗ್ರೆಸ್ ಎಂದರೆ ಅದು ಕೇವಲ ಪಕ್ಷವಲ್ಲ. ಅದು ಅಭಿವೃದ್ಧಿಯ ಸಂಕೇತವಾಗಿದೆ ಎಂದು ರಾಜ್ಯ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿ ಹೇಳಿದ್ದಾರೆ. ಅವರು ಶನಿವಾರ ಸಂಜೆ ಬಳ್ಕೂರಿನಲ್ಲಿ ನಡೆದ ಬಸ್ರೂರು ತಾ.ಪಂ.ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ನಾನು ಕುಂದಾಪುರ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿಯಾಗಿದ್ದು ಪಕ್ಷದ ನಾಯಕರುಗಳ ನಿರ್ದೇಶನದ ಮೇರೆಗೆ ಕ್ಷೇತ್ರದಾದ್ಯಂತ ಪಕ್ಷದ ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸುತ್ತಿದ್ದೇನೆ. ಆ ಮೂಲಕ ಈ ಕ್ಷೇತ್ರದ ರೈತರ ಮತ್ತು ಕಾರ್ಮಿಕರ ಸಮಸ್ಯೆಗಳನ್ನು ಅರಿತಿದ್ದೇನೆ. ದಯವಿಟ್ಟು ಈ ಬಾರಿ ನನ್ನನ್ನು ಬೆಂಬಲಿಸುವ ಮೂಲಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಧುಮೇಹದಂತಹ ರೋಗ ಉಲ್ಬಣದಿಂದ ಉಂಟಾಗುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಎಸ್‌ಸಿಡಿ ಚಿಕಿತ್ಸಾಲಯವು ಕಾರ್ಯೋನ್ಮಕವಾಗಿದ್ದು, ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆದುಕೊಳ್ಳುವುದರಿಂದ ಮುಂದಾಗಬಹುದಾದ ಅಪಾಯದಿಂದ ಪಾರಾಗಬಹುದಾಗಿದೆ ಎಂದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ. ಪ್ರಶಾಂತ್ ಭಟ್ ಹೇಳಿದರು. ಶನಿವಾರ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಸರ್ವೇಕ್ಷಣ ಘಟಕ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು, ಎಸ್.ಸಿ.ಡಿ ಚಿಕಿತ್ಸಾಲಯ ಬೈಂದೂರು, ವಿಶ್ವ ಮಧುಮೇಹ ಪ್ರತಿಷ್ಠಾನ ಹಾಗೂ ರೋಟರಿ ಕ್ಲಬ್ ಬೈಂದೂರು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಮಧುಮೇಹ ರಕ್ತ ಪರೀಕ್ಷೆ, ರಕ್ತದೋತ್ತಡ ಮತ್ತು ಮಧುಮೇಹಿಗಳಿಗೆ ಪಾದಗಳ ತಪಾಸಣಾ ಶಿಬಿರದಲ್ಲಿ ಮಾಹಿತಿ ನೀಡಿದರು. ಸಾಂಕ್ರಾಮಿಕವಲ್ಲದ ಕಾಯಿಲೆಯನ್ನು ಶೀಘ್ರ ಪತ್ತೆಮಾಡಿ ಸೂಕ್ತ ಚಿಕಿತ್ಸೆಯ ಮೂಲಕ ಗುಣಮುಖರನ್ನಾಗಿಸುವ ಉದ್ದೇಶದಿಂದ ಬೈಂದೂರು ಭಾಗದಲ್ಲಿ ಎರಡನೇ ಭಾರಿಗೆ ಈ ಶಿಬಿರವನ್ನು ಆಯೋಜಿಸಲಾಗಿದೆ ಎಂದರು. ಬೈಂದೂರು ರೋಟರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಡೊಂಬಿವಲಿ: ಕೇವಲ 30, 40 ವರ್ಷಗಳ ಹಿಂದೆ ಮನೆಯಲ್ಲಿ ಉಪಯೋಗಿಸುತ್ತಿದ್ದ ಪಾತ್ರೆಗಳಾದ ಕೊಡಪಾನ , ತಂಬಿಗೆ, ಹರಿವಾಣ ತಟ್ಟೆ , ಚಮಚ , ದೀಪ, ಮೂರ್ತಿ ಇತ್ಯಾದಿಗಳು ಈಗ ಕಣ್ಮರೆ ಆಗುತ್ತಿದೆ. ಆ ಜಾಗದಲ್ಲಿ ಅಲ್ಯೂಮಿನಿಯಂ, ಸ್ಟೀಲ್ ಪಾತ್ರೆ , ಮಿಕ್ಸರ್, ಹೀಟರ್, ಕುಕ್ಕರ್ ಮೊದಲಾದ ಉಪಕರಣಗಳು ಹೆಚ್ಚಾಗುತ್ತಿದೆ. ಹಳೆಯ ಪರಿಕರಗಳಿಗೆ ಜಾಗವಿಲ್ಲವೆಂದು ಅವುಗಳನ್ನು ಅತ್ಯಲ್ಪ ಕಡಿಮೆ ಕ್ರಯಕ್ಕೆ ಮಾರಾಟ ಮಾಡುತ್ತಿದ್ದೇವೆ. ಆದರೆ ಅವುಗಳು ನಮ್ಮ ಜೀವನ ರೀತಿ , ಸಂಸ್ಕೃತಿ , ಜಾನಪದವನ್ನು ಎತ್ತಿ ತೋರಿಸುತ್ತದೆ ಎಂಬುದನ್ನು ಮರೆತಿದ್ದೇವೆ. ಆದರೂ ಕಾಲ ಮಿಂಚಿಲ್ಲ. ಇನ್ನಾದರೂ ಇಂತಹ ವಸ್ತುಗಳನ್ನು ಉಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರಾಧ್ಯಾಪಕರಾದ ವೆಂಕಟೇಶ ಪೈ ಡೊಂಬಿವಲಿಯ ಗೆಳೆಯರ ಸ್ವಾವಲಂಬನಾ ಕೇಂದ್ರದ ಕಚೇರಿಯಲ್ಲಿ ಇಂತಹ ವಸ್ತುಗಳನ್ನು ಸಂಗ್ರಹ ಮಾಡಲು ಪ್ರಾರಂಭಿಸಿದ್ದಾರೆ. ಚಿಕ್ಕಂದಿನಲ್ಲಿಯೇ ಹಳೆಯ ನಾಣ್ಯ, ಸ್ಟಾಂಪ್, ವಿವಿಧ ಪ್ರಕಾರದ ಡಬ್ಬಿ, ಮಾಪನ ಮಾಡುವ ಸೇರು ಹಾಗೂ ಅಚ್ಚೇರುಗಳು ಇವರ ಸಂಗ್ರಹದಲ್ಲಿವೆ. ಎಲ್ಲರೂ ತಮ್ಮ ತಮ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಯಡ್ತರೆ ಗ್ರಾ. ಪಂ. ನ ಹೊಸೂರು ವ್ಯಾಪ್ತಿಯ ಮುಲ್ಲಿಬಾರು ಸ.ಹಿಪ್ರಾಶಾಲೆಯಲ್ಲಿ ಜ್ಞಾನ ಸಂವಹನ ಕಾರ್ಯಕ್ರಮ ಜರುಗಿತು. ಈ ಸಂದರ್ಭ ವಿಶೇಷ ಆಹ್ವಾನಿತರಾಗಿ ರೀಡ್ ಸಂಸ್ಥೆಯ ಸಂಸ್ಥಾಪಕ ಮಂಜುನಾಥ ಗಾಣಿಗರವರು ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದು, ಪ್ರಸ್ತುತ ಗ್ರಾಮೀಣ ಭಾಗದ ಪ್ರತಿಭಾನ್ವಿತ ಮಕ್ಕಳ ಪ್ರತಿಭೆಯು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೇಗೆ ಪ್ರಚುರಪಡಿಸಬೇಕು ಹಾಗೂ ಅದರ ಹಿಂದಿನ ಶ್ರಮ ಮತ್ತು ಕಾರ್ಯ ವೈಖರಿಯ ಬಗ್ಗೆ ತಿಳಿಸುತ್ತಾ ಆ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಮುಲ್ಲಿಬಾರು ಶಾಲೆಯ ವಿದ್ಯಾರ್ಥಿಗಳು ಕಾರ್ಯ ಪ್ರವೃತ್ತರಾಗಬೇಕು, ಆದಿಸೆಯಲ್ಲಿ ಉಪಗ್ರಹ ಆಧಾರಿತ ಕಲಿಕೆಗೆ ಸಂಬಂಧಿಸಿದಂತೆ ತಮ್ಮ ರೀಡ್ ಸಂಸ್ಥೆಯ ಮೂಲಕ ಹೆಚ್ಚಿನ ಸೌಕರ್ಯ ನೀಡಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಸ್ವಾಮೀ ವಿವೇಕಾನಂದರ ವಿದ್ಯುತ್ ವಾಣಿ ಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಿದರು. ಈ ಸಂದರ್ಭದಲ್ಲಿ ಪಾಲಕರ ಪ್ರತಿನಿಧಿ ಸರಸ್ವತಿ ಮರಾಠಿ ಎಸ್‌ಡಿಎಮ್‌ಸಿ ಉಪಾಧ್ಯಕ್ಷೆ ಸಾವಿತ್ರಿ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದು, ಅಧ್ಯಕ್ಷೆ ಚಂದ್ರ ಪೂಜಾರಿ ಅಧ್ಯಕ್ಷತೆಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೇಸ್- ಬಿಜೆಪಿ ಒಂದು ನಾಣ್ಯದ ಎರಡು ಮೂಖಗಳಿದ್ದಂತೆ ಅವರು ಆರೋಪ ಪ್ರತ್ಯಾರೋಪದಲ್ಲಿಯೂ ದಿನಕಳೆಯುತ್ತಿದೆ. ಜನರ ಬಗ್ಗೆ ಕಾಳಜಿ ಇಲ್ಲ ರಾಜ್ಯದ ಹಿತಕ್ಕಿಂತ ಪಕ್ಷಗಳ ಅಸ್ಥಿತ್ವವೇ ಅವರಿಗೆ ಮುಖ್ಯವಾಗಿದ್ದು ರಾಜ್ಯದ ಜನತೆಯ ಕಣ್ಣೋರಿಸುವ ಕೆಲಸವಾಗುತ್ತಿದ್ದು ಜನತೆ ಭ್ರಮೆ ನಿರಸನಗೊಂಡಿದ್ದಾರೆ. ಎಂದು ಜೆಡಿಎಸ್ ಪಕ್ಷದ ಜಿಲಾಧ್ಯಕ್ಷ ಯೋಗೀಶ್ ಶೆಟ್ಟಿ ಹೇಳಿದರು. ಅವರು ಉಪ್ಪುಂದ ಶಂಕರಕಲಾಮಂದಿರ ಸಮೃಧ್ಧಿ ಸಭಾ ಭವನ ಬೈಂದೂರು ಬ್ಲಾಕ್ ಜೆಡಿಎಸ್ ಪಕ್ಷದ ಪದಾಧಿಕಾರಿಗಳ ಮತ್ತು ಪ್ರಮುಖ ಕಾರ್ಯಕರ್ತರ ವಿಧಾನ ಸಭಾ ಚುನಾವಣೆಯ ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿ ಜೆಡಿಎಸ್ ಪಕ್ಷವು ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದೆ. ಅದಕ್ಕಾಗಿಯೇ ಪ್ರಣಾಳಿಕೆಯಲ್ಲಿ ರೈತರ, ಮೀನುಗಾರರ, ನೌಕರರ ಸಂಪೂರ್ಣ ಸಾಲ ಮನ್ನಾ ಮಾಡುವ ಘೋಷಣೆಯೊಂದಿಗೆ ಹಲವಾರು ಜನಪರ ಯೋಜನೆಗಳನ್ನು ಪೋಷಿಸಿದ್ದಾರೆ. ಅದಕ್ಕಾಗಿ ೨ ರಾಷ್ಟ್ರೀಯ ಪಕ್ಷಗಳನ್ನು ಅಧಿಕಾರದಿಂದ ದೂರವಿಡಲು ಇಂದು ಸಕಾಲವೆಂದು ಹೇಳಿದರು. ವೇದಿಕೆಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ ಅಲ್ಪಸಂಖ್ಯಾತರ…

Read More