Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು. ಗುರುವಾರ ಬೆಳಗ್ಗೆ ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳು ಆರಂಭಗೊಂಡವು. ತಂತ್ರಿಗಳು ಧಾರ್ಮಿಕ ವಿಧಿ ನೆರವೇರಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಸಂಜೆ ಬಸವನಗುಡಿ ಸನ್ನಿಧಿಯಿಂದ ಶ್ರೀದೇವರಿಗೆ ಅಭಿಮುಖವಾಗಿ ರಥ ಏಳೆದ ಬಳಿಕ ರಥಾಅವರೋಹಣದ ವಿಧಿ ಸಮಾಪನಗೊಳ್ಳುತ್ತದೆ. ಅಪಾರ ಸಂಖ್ಯೆಯ ಜನಸ್ತೋಮ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀಕೋಟಿಲಿಂಗೇಶ್ವರ ದೇವರ ದರ್ಶನ ಪಡೆದು ಪುನೀತರಾದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ದೇವಳದ ರಥೋತ್ಸವದ ಸಂದರ್ಭ ಗರುಡ ದರ್ಶನ ಆಗುವುದು ವಾಡಿಕೆ. ಸಂಜೆಯ ರಥೋತ್ಸವಕ್ಕೆ ಚಾಲನೆ ಸಿಗುತ್ತಿರುವಂತೆಯೇ ಗರುಡ ದರ್ಶನ ಆಗಿದ್ದು ರಥಕ್ಕೆ ಎರಡು ಸುತ್ತು ಬಂದು ನಿರ್ಗಮಿಸಿದೆ. ಗರುಡದರ್ಶನ ವೀಕ್ಷಿಸಲು ಸಹಸ್ರಾರು ಭಕ್ತರು ನೆರೆದಿದ್ದು ಗರುಡ ರಥಕ್ಕೆ ಸುತ್ತು ಹೊಡೆಯುತ್ತಿರುವಂತೆಯೇ ರೋಮಾಂಚನಗೊಂಡರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತ್ತಿಚಿಗೆ ಕಜಕಿಸ್ತಾನದಲ್ಲಿ ನಡೆದ ಏಷ್ಯನ್ ಕ್ಲಾಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮೂರು ಚಿನ್ನ ಹಾಗೂ ಒಂದು ಬೆಳ್ಳಿಯ ಪದಕ ಗೆದ್ದ ಕುಂದಾಪುರದ ಸತೀಶ್ ಖಾರ್ವಿ ಹಾಗೂ ಪವರ್ ಲಿಫ್ಟಿಂಗ್ ಸಬ್ ಜ್ಯೂನಿಯರ್ ವಿಭಾಗದಲ್ಲಿ ಒಂದು ಚಿನ್ನ ಹಾಗೂ ಮೂರು ಬೆಳ್ಳಿಯ ಪದಕವನ್ನು ಗೆದ್ದ ಉಪ್ಪಿನಕುದ್ರುವಿನ ನಾಗಶ್ರೀ ಶೇರುಗಾರ್ ಅವರನ್ನು ಕುಂದಾಪುರದಲ್ಲಿ ಅದ್ದೂರಿಯಾಗಿ ಸ್ವಾಗತಿಸಿಕೊಳ್ಳಲಾಯಿತು. Video ಮಂಗಳೂರಿನಿಂದ ಆಗಮಿಸಿದ ಈರ್ವರನ್ನು ಸಾಲಿಗ್ರಾಮದಲ್ಲಿ ಸ್ವಾಗತಿಸಿಕೊಳ್ಳಲಾಯಿತು. ಅಲ್ಲಿಂದ ಮೆರವಣಿಗೆಯಲ್ಲಿ ಸಾಗಿಬಂದ ಅವರನ್ನು ಕುಂದಾಪುರದ ಶಾಸ್ತ್ರೀವೃತ್ತದ ಬಳಿ ಸ್ವಾಗತಿಸಿಕೊಳ್ಳಲಾಯಿತು. ಬಳಿಕ ಸತೀಶ್ ಖಾರ್ವಿ ಅವರ ನ್ಯೂ ಹರ್ಕ್ಯೂಲಸ್ ಜಿಮ್ ಬಳಿ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ನಾಗರಿಕರು ಈರ್ವರನ್ನು ಅಭಿನಂದಿಸಿದರು. ಜಿಮ್‌ನಲ್ಲಿ ಸತೀಶ್ ಖಾರ್ವಿ ಹಾಗೂ ನಾಗಶ್ರೀ ಅವರಿಗೆ ಸನ್ಮಾನಿಸಿ ಬಳಿಕ ಮೆರವಣಿಗೆಯಲ್ಲಿ ಕುಂದಾಪುರ ಖಾರ್ವಿಕೇರಿಗೆ ತಲುಪಿದರು. ಮಾರ್ಗಮಧ್ಯೆ ವಿಜೇತರಿಗೆ ಹಾರ ಹಾಕಿ ಗೌರವಿಸಿದ್ದು, ಶಾಸ್ತ್ರೀ ವೃತ್ತದ ಬಳಿ ಖಾರ್ವಿಕೇರಿಯ ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿಕೊಂಡದ್ದ ವಿಶೇಷವಾಗಿತ್ತು. ಕುಂದಾಪುರದ ಬಳಿಕ ಉಪ್ಪಿನಕುದ್ರುವಿನಲ್ಲಿಯೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ, ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಹಾಗೂ ನಕಲಿ ಟಿವಿ ಚಾನೆಲ್‌ಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ಕಾಯಿದೆಯ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ( ಟ್ರಾಯ್) ಅಡಿ ಚಾನೆಲ್‌ಗಳು ನೋಂದಣಿಯಾಗಿರಬೇಕಿದೆ. ಆದರೆ, ಇತ್ತೀಚೆಗೆ ಟಿವಿ ಚಾನೆಲ್‌ಗಳ ಹೆಸರಿನಲ್ಲಿ ಸರಕಾರಿ ಕಚೇರಿಗಳು ಸೇರಿದಂತೆ ಸಾರ್ವಜನಿಕರನ್ನು ಬ್ಲಾಕ್‌ಮೇಲ್ ಮಾಡುತ್ತಿರುವ ಕೆಲವು ನಕಲಿ ಚಾನೆಲ್‌ಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಅಸ್ತಿತ್ವದಲ್ಲಿರುವ ಸ್ಥಳೀಯ ಚಾನೆಲ್‌ಗಳ ದಾಖಲೆ ಪರಿಶೀಲನೆ ನಡೆಸಿ, ನಕಲಿ ಚಾನೆಲ್‌ಗಳನ್ನು ಪತ್ತೆ ಹಚ್ಚಿ ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡಲು ಅವರು ವಾರ್ತಾ ಇಲಾಖೆಗೆ ಸೂಚಿಸಿದರು. ಕೇಬಲ್ ಆಪರೇಟರ್‌ಗಳ ನೋಂದಣಿ ಕಡ್ಡಾಯ: ಜಿಲ್ಲೆಯಲ್ಲಿರುವ ಎಲ್ಲಾ ಕೇಬಲ್ ಆಪರೇಟರ್‌ಗಳು ನಿಯಮನುಸಾರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಿರಂತರ ಕೃಷಿ ಕಾಯಕದ ನಡುವೆ ಕೃಷಿಕರ ಜೀವಾಳ ಸಾಕು ಪ್ರಾಣಿಗಳು. ಅವುಗಳನ್ನು ಸಲಹಿ ಕ್ರೀಡೆಯಲ್ಲಿ ಭಾಗವಹಿಸುವಂತೆ ತರಬೇತಿ ನೀಡಿ ಊರಿನ ಜನರೆಲ್ಲಾ ಸಂಭ್ರಮಿಸುವ ಕಂಬಳೋತ್ಸವವು ನಿರಂತರವಾಗಿ ನಡೆಯುತ್ತಿರಲಿ ಎಂದು ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಹೇಳಿದರು. ಅವರು ತಗ್ಗರ್ಸೆ ಹೆಗ್ಡೆಯವರ ಮನೆ ಕಂಬಳಗದ್ದೆಯಲ್ಲಿ ಭಾನುವಾರ ನಡೆದ ಸಾಂಪ್ರದಾಯಿಕ ಕಂಬಳೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಐಎಫ್‌ಎಸ್ ಅಧಿಕಾರಿ ಜಗನ್ನಾಥ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಕೆ. ಬಾಬು ಶೆಟ್ಟಿ, ಕಂಬಳ ಸಮಿತಿ ಬೈಂದೂರು ತಾಲೂಕು ಅಧ್ಯಕ್ಷ ವೆಂಕಟ ಪೂಜಾರಿ ಸಸಿಹಿತ್ಲು ಉಪಸ್ಥಿತರಿದ್ದರು. ತಗ್ಗರ್ಸೆ ಹೆಗ್ಡೆ ಕುಟುಂಬದ ಟಿ. ನಾರಾಯಣ ಹೆಗ್ಡೆ ತಗ್ಗರ್ಸೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಜನ್ಮನೆ ರತ್ನಾಕರ ಶೆಟ್ಟಿ ಅರೆಶಿರೂರು ಧನ್ಯವಾದ ಸಲ್ಲಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಸ್ವರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸ್ವರ್ಧೆಗಳ ವಿಜೇತರು: ಕಂಬಳೋತ್ಸವ ಹಲಗೆ ವಿಭಾಗದಲ್ಲಿ ಆತ್ಮಜ &…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ಬೈಂದೂರು ತಾಲ್ಲೂಕು ಭಾರತ ಸೇವಾ ದಳದ ಆಶ್ರಯದಲ್ಲಿ ಇಲ್ಲಿನ ಗಾಧಿ ಮೈದಾನದಲ್ಲಿ ಸೋಮವಾರ ಭಾರತ ಸೇವಾದಳದ ರಾಷ್ಟ್ರೀಯ ಭಾವೈಕ್ಯತಾ ಮೇಳ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ಭಾವೈಕ್ಯತೆ ಮೂಡಿಸುವ ಉದ್ದೇಶ ಹೊಂದಿರುವ ರಾಷ್ಟ್ರೀಯ ಭಾವೈಕ್ಯತಾ ಮೇಳದಲ್ಲಿ ಭಾಗವಹಿಸುವ ಮಕ್ಕಳಲ್ಲಿ ದೇಶಭಕ್ತಿ, ದೇಶದ ಎಲ್ಲರೂ ಒಂದೇ ಎಂಬ ಭಾವನೆ ಮೂಡುವಂತಾದರೆ ಕಾರ್ಯಕ್ರಮ ಸಾರ್ಥಕವೆನಿಸುತ್ತದೆ. ಮೇಳದ ಜತೆಗೆ ಶಾಲೆಗಳಲ್ಲಿ ಮಕ್ಕಳಿಗೆ ಸೇವಾದಳದ ಧ್ಯೇಯವನ್ನು ರೂಢಿಸಿಕೊಳ್ಳಲಾಗುವ ತರಬೇತಿ ನೀಡಬೇಕು ಎಂದು ಹೇಳಿದರು. ಮಕ್ಕಳ ಭವಷ್ಯ ರೂಪಿಸುವ ಇಂತಹ ಕಾರ್ಯಕ್ರಮಗಳನ್ನು ನಡೆಸಲು ಶಾಲೆಗಳಿಗೆ ಸರ್ಕಾರದಿಂದ ಅನುದಾನ ಇಲ್ಲದಿರುವುದು ಸರಿಯಲ್ಲ. ಆ ನಿಟ್ಟಿನಲ್ಲಿ ಪ್ರಯತ್ನ ನಡೆಸುವ ಭರವಸೆ ನೀಡಿದ ಅವರು ಶೀಘ್ರದಲ್ಲಿ ಬೈಂದೂರಿನಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದರು. ತಾಲ್ಲೂಕು ಸೇವಾದಳದ ಅಧ್ಯಕ್ಷ ದೀಪಕ್‌ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಉಬ್ಜೇರಿ ಸ್ವಾಗತಿಸಿದರು. ಜಿಲ್ಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಲ್ಲೂರು ಫ್ಯಾಮಿಲಿ ಟ್ರಸ್ಟ್ ಹಾಗೂ ರುಡ್‌ಸೆಡ್ ಬ್ರಹ್ಮಾವರ ಈ ಸಂಸ್ಥೆಗಳ ಜಂಟಿ ಅಶ್ರಯದಲ್ಲಿ ನಾರಾಯಣ ವಿಶೇಷ ಮಕ್ಕಳ ಶಾಲೆಯ ಮಕ್ಕಳು ಮತ್ತು ಅವರ ಹೆತ್ತವರಿಗಾಗಿ ೧೦ ದಿನಗಳ ಕಾಲ ನಡೆದ ಬಟ್ಟೆ ಬ್ಯಾಗ್, ಪೆಪರ್ ಬ್ಯಾಗ್ ಮತ್ತು ಎನ್ವಲಪ್ ತಯಾರಿ ಕುರಿತು ವೃತ್ತಿ ತರಬೇತಿ ಶಿಬಿರ ಸಮಾರೋಪ ಸಮಾರಂಭ ಭಾನುವಾರ ನಡೆಯಿತು. ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ವೇದಿಕೆಯಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಚಂದ್ರ ನಾಯ್ಕ್., ರುಡ್‌ಸೆಟ್ ನಿರ್ದೇಶಕರಾದ ಪಾಪ ನಾಯಕ್, ಉಪ್ಪಿನಕುದ್ರು ಗೊಂಬೆಮನೆಯ ಅಧ್ಯಕ್ಷರಾದ ಭಾಸ್ಕರ ಕೂಗ್ಗ ಕಾಮತ್, ರುಡ್‌ಸೆಡ್ ಉಪನ್ಯಾಸಕ ಸಂತೋಷ್, ತಲ್ಲೂರು ಪ್ಯಾಮಿಲಿ ಟ್ರಸ್ಟ್ ಮ್ಯಾನೆಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಉಪಸ್ಥಿತರಿದ್ದರು. ಆಡಳಿತಾಧಿಕಾರಿ ಚಂದ್ರಶೇಖರ್ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಪ್ರೇಮ ವಂದಿಸಿದರು. ಟ್ರಸ್ಟಿವಸಂತ ಶ್ಯಾನುಭೋಗ ಅವರು ಕಾರ್ಯಕ್ರಮ ನಿರೂಪಿಸಿದರು. ವಿಶೇಷ ಮಕ್ಕಳು ಮತ್ತು ಅವರ ಪೋಷಕರು ತಯಾರಿಸಿದ ಬಟ್ಟೆ ಬ್ಯಾಗ್ ಮತ್ತು ಪೇಪರ್…

Read More

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಶತಮಾನದ ಇತಿಹಾಸ ಹೊಂದಿರುವ ಸಾಂಪ್ರದಾಯಿಕ ತಗ್ಗರ್ಸೆ ಕಂಬಳವು ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ವಿಧಿವತ್ತಾಗಿ, ವಿಜೃಂಭಣೆಯಿಂದ ನಡೆಯಿತು. ಹಲವು ಜೊತೆ ಕೋಣಗಳು ಹರಕೆ ಹಾಗೂ ಸ್ವರ್ಧೆಯಲ್ಲಿ ಭಾಗವಹಿಸಿ ಕಂಬಳದ ಮೆರಗು ಹೆಚ್ಚಿಸಿದವು. ಕಂಬಳದ ದಿನ ಬೆಳಿಗ್ಗೆ ಗದ್ದೆಯ ಅಲಂಕಾರ, ಪೂಜೆ ಕಾರ್ಯಾದಿಗಳು ನೆರವೇರಿದ ಬಳಿಕ ಮಧ್ಯಾಹ್ನ ಕಂಬಳಕ್ಕೆ ಬರುವ ಕೋಣಗಳನ್ನು ವೀಳ್ಯ, ತೆಂಗಿನಕಾಯಿ ನೀಡಿ ಬರಮಾಡಿಕೊಳ್ಳಲಾಯಿತು.ಕಂಬಳ ಗದ್ದೆಯನ್ನು ಖುರ್ಜು ನಿಲ್ಲಿಸಿ, ತೋರಣಗಳಿಂದ ಅಲಂಕರಿಸಲಾಗಿತ್ತು. ಊರಿನ ಒಂದು ನಿರ್ದಿಷ್ಟ ಕುಟುಂಬದ ಕೋಣಗಳನ್ನು ಗದ್ದೆಗೆ ಇಳಿಸಿದ ಬಳಿಕ ಕಂಬಳಕ್ಕೆ ಅಧಿಕೃತ ಚಾಲನೆ ದೊರೆಯಿತು. ವಿಶೇಷ ವೇಷಭೂಷಣ, ವಾದ್ಯ ಮುಂತಾದವುಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿಬಂದ  ಕೋಣಗಳ ಪೈಕಿ ಕೆಲವನ್ನು ಕಂಬಳ ಗದ್ದೆಯಲ್ಲಿ ಹರಕೆಯ ಸಲುವಾಗಿ ಕೋಣಗಳನ್ನು ಓಡಿಸಿದರೇ, ಉಳಿದ ಕೋಣಗಳು ಸ್ವರ್ಧೆಯಲ್ಲಿ ಪಾಲ್ಗೊಂಡವು. ಕಂಠದಮನೆ ಕುಟುಂಬದ ನಾರಾಯಣ ಹೆಗ್ಡೆಯವರ ಸಾರಥ್ಯದಲ್ಲಿ ಸಾಂಪ್ರದಾಯಿಕ ಕಂಬಳ ಮುನ್ನಡೆಯುತ್ತಿದ್ದು ಊರಿನ ಜನ ಹಬ್ಬದಂತೆ ಸಂಭ್ರಮಿಸಿದರು. ವಿಶಾಲ ಗದ್ದೆಯ ಅಂಚುಗಳಲ್ಲಿ ನಿಂತು ಕಂಬಳದ ಸೊಬಗನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರದ ನೀತಿಗಳಿಂದಾಗಿ ಕಳೆದ ಮೂರು ವರ್ಷಗಳಲ್ಲಿ ಕೋಟ್ಯಂತರ ಉದ್ಯೋಗ ನಾಶವಾಗಿದೆ. ಮೇಲ್ನೋಟಕ್ಕೆ ಅಭಿವೃದ್ಧಿ ಹೊಂದಿದಂತೆ ಭಾಸವಾದರೂ ನೋಟು ಬ್ಯಾನ್, ಜಿಎಸ್‌ಟಿ ಕಾರಣದಿಂದ ನೇರವಾಗಿ ಕಟ್ಟಡ ಕಾರ್ಮಿಕರುಗಳ ಹೊಟ್ಟೆಗೆ ಹಿಟ್ಟಿಲ್ಲದಂತಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಹೇಳಿದರು. ಭಾನುವಾರ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಬೈಂದೂರು ತಾಲೂಕು ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಆಶ್ರಯದಲ್ಲಿ ಜರುಗಿದ ಕಟ್ಟಡ ಕಾರ್ಮಿಕರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿ ದುಡಿಮೆಯ ಪಾಲು ಕಾರ್ಮಿಕರಿಗೆ ಸಿಗುತ್ತಿಲ್ಲ. ಕೇಂದ್ರ ಸರಕಾರ 2012ರ ಬೆಲೆಗಳ ಆಧಾರದಲ್ಲಿ ಕಾರ್ಮಿಕರ ಕೂಲಿಯನ್ನು ನಿಗದಿಗೊಳಿಸಿದೆ. ಆದರೆ 2019ರ ಬೆಲೆಯಲ್ಲಿ ಸರಕಾರ ನಿಗದಿ ಮಾಡಿರುವ ಕೂಲಿ ತೆಗೆದುಕೊಂಡ ಕಾರ್ಮಿಕನ ಕುಟುಂಬ ಬದುಕಲಾರದ ಸ್ಥಿತಿ ಇದೆ. ಕೂಲಿ ಹೆಚ್ಚಿಸಬೇಕು, ಸರಕಾರದ ದುಡ್ಡಿನಿಂದಲೇ ಕಾರ್ಮಿಕರಿಗೆ ಸೌಲಭ್ಯ ಒದಗಿಸಬೇಕು ಮುಂತಾದ 12 ಬೇಡಿಕೆಗಳನ್ನು ಇರಿಸಿಕೊಂಡು ಜ.೮ರಂದು ದೊಡ್ಡ ಮುಷ್ಕರ ನಡೆಸಲು ಉದ್ದೇಶಿಸಲಾಗಿದೆ ಎಂದರು. ಈರುಳ್ಳಿ ಬೆಲೆ ಹೆಚ್ಚಿದ್ದರಿಂದ ರೈತನಿಗೆ ಅದರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶದಲ್ಲಿ ಸಂವಿಧಾನದ ಕಾರಣದಿಂದಾಗಿ ಕೋಟ್ಯಾಂತರ ದಮನಿತರು ಮುಖ್ಯವಾಹಿನಿಗೆ ಬರಲು ಸಾಧ್ಯವಾಯಿತು. ಸಮಾನತೆ, ಶಿಕ್ಷಣ, ಸ್ವಾವಲಂಭನೆ ಸೇರಿದಂತೆ ದೇಶದಲ್ಲಿ ರಚನಾತ್ಮಕ ಬದಲಾವಣೆಗಳಾದವು ಎಂದು ನ್ಯಾಯವಾದಿ ಟಿ. ಮಂಜುನಾಥ ಗಿಳಿಯಾರು ಹೇಳಿದರು. ಅವರು ನೆಹರು ಯುವ ಕೇಂದ್ರ ಉಡುಪಿ, ಡಾ. ಬಿ. ಆರ್. ಅಂಬೇಡ್ಕರ್ ಮಹಿಳಾ ಸಂಘ ರಿ. ಬೈಂದೂರು, ದಲಿತ ಸಂಘರ್ಷ ಸಮಿತಿ ಬೈಂದೂರು ತಾಲೂಕು ಇವುಗಳ ಸಂಯುಕ್ತ ಆಶ್ರಯದಲ್ಲಿ ಬೈಂದೂರಿನ ಪರಿಶಿಷ್ಟ ವರ್ಗದ ಆಶ್ರಮ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸಂವಿಧಾನ ದಿನ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೬೩ನೇ ಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ಅವರು ಸಂವಿಧಾನ ರಚನೆಯಲ್ಲಿ ಮಹತ್ತರವಾದ ಪಾತ್ರ ವಹಿಸಿದ್ದರು. ಎರಡು ವರ್ಷಗಳ ಕಾಲ ೨೭ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತಕ್ಕೆ ಪ್ರಜಾಪ್ರಭುತ್ವ ಮಾದರಿಯ, ಸಮಾನತೆಯಿಂದ ಆಡಳಿತ ಮಾಡುವ ಸಂವಿಧಾನವನ್ನು ನೀಡಿದ್ದಾರೆ ಎಂದರು. ಬೈಂದೂರು ಪೊಲೀಸ್ ವೃತ್ತನಿರೀಕ್ಷಕ ಸುರೇಶ್ ಜಿ. ನಾಯಕ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಜಾಕಿಸ್ತಾನದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಏಷ್ಯಾನ್ ಕ್ಲಾಸಿಕ್ ಪವರ್ ಲಿಪ್ಟ್ಂಗ್ ಸ್ಪರ್ಧೆ ಸಬ್ ಜ್ಯೂನಿಯರ್ 63 ಕೆ.ಜಿ ವಿಭಾಗದಲ್ಲಿ ವಿಭಾಗದಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಕುಂದಾಪುರ ತಾಲೂಕಿನ ಉಪ್ಪಿನಕುದ್ರುವಿನ ನಾಗಶ್ರೀ ಅವರು ಒಂದು ಚಿನ್ನ ಹಾಗೂ ಮೂರು ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ. ಸ್ಕ್ವಾಟ್, ಬೆಂಚ್‌ಪ್ರೆಸ್‌ನಲ್ಲಿ ಬೆಳಿ, ಡೆಡ್ ಲಿಫ್ಟಿಂಗ್‌ನಲ್ಲಿ ಚಿನ್ನ ಹಾಗೂ ಬೌಂಡೇಜ್‌ನಲ್ಲಿ ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ. ಸ್ವರ್ಧೆಯಲ್ಲಿ ಒಟ್ಟು 27 ದೇಶಗಳು ಈ ಸ್ವರ್ಧೆಯಲ್ಲಿ ಭಾಗವಹಿಸಿದ್ದವು. ಇದನ್ನೂ ಓದಿ: ► ಪವರ್ ಲಿಪ್ಟ್ಂಗ್‌ ಚಾಂಪಿಯನ್‌ಶಿಪ್: ಸತೀಶ್ ಖಾರ್ವಿಗೆ 3 ಚಿನ್ನ, 1 ಬೆಳ್ಳಿ – https://kundapraa.com/?p=34057 .

Read More