Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಸ್ತುತ ದಿನಗಳಲ್ಲಿ ಸಮಾಜ ಮತ್ತು ದೇಶದಲ್ಲಿ ನೈತಿಕತೆಯನ್ನು ಬೆಳೆಸುವ ಮತ್ತು ಆಧುನಿಕ ಜ್ಞಾನವನ್ನು ಮಾನವೀಯ ಮೌಲ್ಯಗಳೊಂದಿಗೆ ಸಂಯೋಜಿಸುವ ಮೂಲಕ, ಧರ್ಮ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸುವ, ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಿಕೊಳ್ಳುವ ಮತ್ತು ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಶಿಕ್ಷಣದ ಅವಶ್ಯಕತೆಯಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿಪ್ರಾಯಪಟ್ಟಿದ್ದಾರೆ. ಕುಂದಾಪುರ ಶಿಕ್ಷಣ ಸಂಘದ 50ನೇ ವಾರ್ಷಿಕೋತ್ಸವ ಮತ್ತು ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರಾಚೀನ ಕಾಲದಲ್ಲಿ, ನಮ್ಮ ದೇಶವು ತನ್ನ ಜ್ಞಾನ, ವಿಜ್ಞಾನ ಮತ್ತು ಬುದ್ಧಿವಂತಿಕೆಯಿAದಾಗಿ ವಿಶ್ವ ನಾಯಕನ ಸ್ಥಾನವನ್ನು ಹೊಂದಿತ್ತು. ಇದನ್ನು ಮರಳಿ ಪಡೆಯಲು, ನಮ್ಮ ಯುವಕರ ಕೌಶಲ್ಯ, ಪ್ರತಿಭೆ ಮತ್ತು ಶಕ್ತಿಯನ್ನು ಸಂಘಟಿಸಲು ನಾವು ಸಕ್ರಿಯ ಪ್ರಯತ್ನಗಳನ್ನು ಮಾಡಬೇಕು ಎಂದರು. ನಮ್ಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯವು ಬಹಳ ಪ್ರಾಚೀನವಾದುದು ಮತ್ತು ಪ್ರಾಚೀನ ಕಾಲದಿಂದಲೂ “ವಸುಧೈವ ಕುಟುಂಬಕA” ಎಂಬ ತತ್ವದಿಂದ ಪ್ರೇರಿತವಾಗಿದೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಜೆಸಿಐ ಭಾರತ ವಲಯ–15ರ 2026ನೇ ಸಾಲಿನ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆಯಾಗಿದ್ದಾರೆ. ಅವರು 2025ನೇ ಸಾಲಿನಲ್ಲಿ ಉಪ್ಪುಂದ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ‘ಜೇಸಿ ಉತ್ಸವʼ ಎಂಬ ಅಭೂತಪೂರ್ವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಭರತ್ ಅವರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ಸೇರಿದಂತೆ ಹತ್ತುಕ್ಕೂ ಹೆಚ್ಚು ಸಂಘ–ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಾಮಾಜಿಕ, ಸಂಘಟನಾ ಹಾಗೂ ಸೇವಾ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ. ಬೈಂದೂರು: ಬಿಜೆಪಿ ಯುವಮೋರ್ಚಾ ಉಡುಪಿ ಜಿಲ್ಲಾ ಅದ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ವಿದ್ಯಾರ್ಥಿ ಜೀವನದಲ್ಲೇ ರಾಜಕೀಯ ಆರಂಭಮಾಡಿ, ಗ್ರಾಮಪಂಚಾಯತ್ ಅದ್ಯಕ್ಷರಾಗಿ, ಪೇಜಾವರ ವಿಶ್ವಪ್ರಸನ್ನರ ಮಾರ್ಗದರ್ಶನದಲ್ಲಿ ಗೋವಿಗಾಗಿ ಮೇವು ಸಂಘಟನೆಮೂಲಕ ರಾಜ್ಯದ ಮನೆಮಾತದವರು ಯುವಮೋರ್ಚಾ ಉಡುಪಿ ಜಿಲ್ಲಾ ಅದ್ಯಕ್ಷರಾಗಿ ಪಾದರಸದಂತೆ ಸದಾ ಕಾಂಗ್ರೆಸ್ ಪಕ್ಷದ ವಿರುದ್ದ ಗುಡುಗುವ ಇವರನ್ನು ಹತ್ತಿಕ್ಕಲು ಅಪಪ್ರಚಾರಕ್ಕೆ ಕಾಂಗ್ರೆಸ್ ಪಕ್ಷ ಮುಂದಾಗಿದೆ. ಇದನ್ನು ಖಂಡಿಸುವುದಾಗಿ ಬಿಜೆಪಿ ಯುವಮೋರ್ಚಾ ಬೈಂದೂರು ಮಂಡಲ ಅದ್ಯಕ್ಷ ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ ವ್ಯಕ್ತಪಡಿಸಿದರು ಬಾರ್ಕೂರಿನಲ್ಲಿ ಪ್ರಥ್ವಿರಾಜ್ ಅವರ ಮಾಲಕತ್ವದ ಸಂಕಮ್ಮ ತಾಯಿ ರೆಸಾರ್ಟ್ ನಲ್ಲಿ ನೇಪಾಳ ಮೂಲದ ಪ್ರಜೆ ಗಳು ಕೆಲಸದಲ್ಲಿರುವುದನ್ನೇ ದೊಡ್ಡ ದೇಶದ್ರೋಹ ಎನ್ನುವ ರೀತಿ ಬಿಂಬಿಸಿ ಅವರ ತೇಜೆವಧೆ ಮಾಡುತ್ತೇವೆ ಎನ್ನುವ ಭ್ರಮೆಯಲ್ಲಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಯುವಮೋರ್ಚಾ ಬೈಂದೂರು ಮಂಡಲ ಅದ್ಯಕ್ಷ ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ ವ್ಯಕ್ತಪಡಿಸಿದರು ಹಾಗೆಯೇ ಸಾಮಾಜಿಕ ಜಾಲತಾಣದಲ್ಲಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷರ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ದ ಕಾನೂನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಬ್ಯಾಂಕ್ ಮಿತ್ರ ಹಾಗೂ ಮೋಟಾರ್ ರಿವೈಂಡಿಂಗ್ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಣಿಪಾಲ ಕೆನರಾ ಬ್ಯಾಂಕ್ ಉಪ ಮಹಾಪ್ರಬಂಧಕರಾದ ಪಭಿತ್ರ ಕುಮಾರ್ ದಾಸ್ ಅವರು ಮಾತನಾಡಿ, ಕೆನರಾ ಬ್ಯಾಂಕ್ ದೇಶದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ನಾಲ್ಕನೇ ಅತಿ ದೊಡ್ಡ ಬ್ಯಾಂಕ್, ಸುಮಾರು 20ಲಕ್ಷ ಕೋಟಿ ವ್ಯವಹಾರವನ್ನು ನಡೆಸುತ್ತಿದೆ, ಜೊತೆಗೆ ಲಕ್ಷಾಂತರ ಜನರಿಗೆ ಸ್ವ ಉದ್ಯೋಗಿಗಳಿಗೆ, ಹಣಕಾಸಿನ ನೆರವನ್ನು ನೀಡಿ, ಅವರ ಆರ್ಥಿಕತೆಗೆ ಹಾಗೂ ದೇಶದ ಆರ್ಥಿಕತೆಗೆ ಸುಧಾರಣೆಗೆ ಹೆಚ್ಚು ಒಲವು ನೀಡಿದೆ ಎಂದರು. ಅದೇ ರೀತಿ ಸಾಮಾಜಿಕ ಭದ್ರತಾ ಯೋಜನೆಗಳಾದ PMJJY, PMSBY, APY, PMJDY ಕುರಿತಾಗಿ ಹಾಗೂ ಬ್ಯಾಂಕ್ ಮಿತ್ರ  ಬಗ್ಗೆ ಸವಿಸ್ಥಿರವಾಗಿ, ಮಾಹಿತಿ ನೀಡಿದರು. ಹಾಗೆಯೇ ,  ರುಡ್ ಸೆಟ್, RSETI ಸಂಸ್ಥೆಗಳಲ್ಲಿ ತರಬೇತಿಯನ್ನು ಕೊಡುವುದರ ಜೊತೆಗೆ ವಿವಿಧ ರೀತಿಯ ಸಬ್ಸಿಡಿ ಲೋನ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜನವರಿ ಎರಡನೇ ವಾರದಲ್ಲಿ ನಗರದಲ್ಲಿ ಸಾಂಸ್ಕೃತಿಕ ಉತ್ಸವ ಆಚರಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವುದರೊಂದಿಗೆ ವಿಜೃಂಭಣೆಯಿಂದ ಆಚರಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಸಾಂಸ್ಕೃತಿಕ ಉತ್ಸವ ಆಯೋಜಿಸುವ ಕುರಿತು ಚರ್ಚಿಸಲು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ನಾಡಿನ ಕಲೆ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವಂತಹ ಅದರಲ್ಲೂ ವಿಶೇಷವಾಗಿ ಯುವಜನರು ಈ ಬಗ್ಗೆ ಉತ್ತೇಜಿಸುವ ರೀತಿಯಲ್ಲಿ ಸಾಂಸ್ಕೃತಿಕ ಉತ್ಸವವನ್ನು ಉಡುಪಿ ನಗರದಲ್ಲಿ ಆಯೋಜಿಸಲು ವ್ಯವಸ್ಥಿತವಾದ ರೂಪು ರೇಷೆಗಳನ್ನು ಮಾಡಿಕೊಳ್ಳುವುದರೊಂದಿಗೆ ಆಯೋಜಿಸಲು ಇಂದಿನಿಂದಲೇ ತಯಾರಿ ನಡೆಸಬೇಕೆಂದು ಸೂಚನೆ ನೀಡಿದರು. ಉತ್ಸವದ ಅಂಗವಾಗಿ ನಗರದ ಪ್ರಮುಖ ಬೀದಿಗಳನ್ನು ವಿದ್ಯುತ್ ದೀಪಾಲಂಕಾರಗಳಿಂದ ಆಕರ್ಷಕವಾಗಿ ಪ್ರಜ್ವಲಿಸುವಂತಹ ರೀತಿಯಲ್ಲಿ ದೀಪಗಳನ್ನು ಅಳವಡಿಸಬೇಕು. ಇವುಗಳ ಅಳವಡಿಕೆಗೆ ಖರ್ಚು ವೆಚ್ಚಗಳನ್ನು ಭರಿಸಲು ಅನುಕೂಲವಾಗುವಂತೆ ಪ್ರಾಯೋಜಕರನ್ನು ಸಂಪರ್ಕಿಸಬೇಕು. ಉತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಸ್ಥಳೀಯ ಉತ್ತಮ ಕಲಾವಿದರು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಕ್ಕಳು ಈ ದೇಶದ ಆಸ್ತಿ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎನ್ನುವ ಮಾತು ದೇಶದಲ್ಲಿ ಪ್ರಚಲಿತವಾಗಿದೆ. ಆದರೆ ಮಕ್ಕಳ ರಕ್ಷಣೆಯ ಕ್ಷೇತ್ರದಲ್ಲಿ ತೊಡಗಿರುವ ಕಾರ್ಯಕರ್ತರಿಗೆ ಮಕ್ಕಳಿಗೆ ಸಂಬಂಧಿಸಿದ ಮಾಹಿತಿ, ಅವರ ಹಕ್ಕುಗಳು, ರಕ್ಷಣೆ ಮತ್ತು ಕಾಯ್ದೆಗಳ ಬಗ್ಗೆ ಮಾಹಿತಿಯ ಕೊರತೆ ಇದ್ದು ಅದನ್ನು ನೀಗಿಸುವ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳ ರಕ್ಷಣೆಯ ಕ್ಷೇತ್ರದಲ್ಲಿ ತೊಡಗಿರುವವರು ಮಕ್ಕಳ ಕಾನೂನುಗಳ ಬಗ್ಗೆ ಸ್ಪಷ್ಟ ಮಾಹಿತಿ ಹೊಂದಿದ್ದಾಗ ಮಕ್ಕಳಿಗೆ ಪರಿಣಾಮಕಾರಿಯಾಗಿ  ನ್ಯಾಯ ದೊರೆಯುತ್ತದೆ. ಮಕ್ಕಳ ನ್ಯಾಯವನ್ನು ಖಚಿತ ಪಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು ಸರ್ಕಾರ ಮಕ್ಕಳ ಹಕ್ಕುಗಳ ರಕ್ಷಣೆಗೆ ಬದ್ದವಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಹೇಳಿದರು. ಅವರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆಯು ಸಂಸ್ಥೆಯ ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಕುಂದಾಪುರ ಪೋಲಿಸ್ ಸಬ್ ಇನ್ಸಪೆಕ್ಟರ್ ನಂಜಾ ನಾಯ್ಕ್ ಎನ್. ಅವರು ಮಾತನಾಡಿ, ಎಸ್.ಎಸ್.ಎಲ್.ಸಿ ಪರೀಕ್ಷಾ ತಯಾರಿಯಲ್ಲಿ ಪೋಷಕರ ಪಾತ್ರ ಹಾಗೂ ಫೋನಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪೋಷಕರು ತಮ್ಮ ಮಕ್ಕಳ ಎಲ್ಲಾ ಚಲನವಲನಗಳನ್ನು ನಿಗಾವಹಿಸಿ, ಅವರನ್ನು ಸಮಾಜದ ಹಾಗೂ ದೇಶದ ಉತ್ತಮ ಪ್ರಜೆಗಳನ್ನಗಿ ರೂಪಿಸಬೇಕೆಂದು ತಿಳಿಸಿದರು. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದಾ ಸಂದೀಪ್ ಗಾಣಿಗ ಹಾಗೂ ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಅವರು ಉಪಸ್ಥಿತರಿದ್ದರು. ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ ಅವರು ಸ್ವಾಗತಿಸಿ, ಸಹ ಶಿಕ್ಷಕಿ ಆಶಾಬಾಯಿ ಕಾರ್ಯಕ್ರಮ ನಿರೂಪಿಸಿ, ಪ್ರೌಢಶಾಲಾ ವಿಭಾಗದ ಸಂಯೋಜಕ ಶಿಕ್ಷಕರಾದ ಮಾಧವ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ಬೀದಿ ನಾಯಿಗಳು ಹಾಗೂ ಬೀಡಾಡಿ ದನಗಳ ನಿಯಂತ್ರಣಕ್ಕೆ ಹಾಗೂ ಎಲ್ಲಾ ಪ್ರಾಣಿಗಳ ಜನನ ನಿಯಂತ್ರಣಕ್ಕೆ ಈಗಾಗಲೇ ಸವೋಚ್ಛ ನ್ಯಾಯಾಲಯವು ನಿರ್ದೇಶನ ನೀಡಿದ್ದು, ಅವುಗಳನ್ನು ಅನುಷ್ಠಾನಗೊಳಿಸಬೇಕು. ಬೀಡಾಡಿ ಪ್ರಾಣಿಗಳ ಆಶ್ರಯಕ್ಕೆ ಅಗತ್ಯವಿರುವ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಖಾಸಗಿ, ಸರ್ಕಾರಿ ಶಿಕ್ಷಣ ಸಂಸ್ಥೆಗಳು,ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ಬೀದಿ ನಾಯಿಗಳ ಹೆಚ್ಚುತ್ತಿರುವ ಹಾವಳಿ, ಅದರ ಪರಿಣಾಮವಾಗಿ ಉಂಟಾಗಬಹುದಾದದ ಅಪಾಯಗಳನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯವು ನಿರ್ದೇಶನಗಳನ್ನು ನೀಡಿದ್ದು, ಅವುಗಳನ್ನು ತಪ್ಪದೇ ಪಾಲಿಸುವುದರೊಂದಿಗೆ ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದರು. ಈಗಾಗಲೇ ರೈಲ್ವೆ ಹಾಗೂ ಬಸ್ ನಿಲ್ದಾಣ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರಾಮಕೃಷ್ಣ – ವಿವೇಕಾನಂದ ಭಾವ ಪ್ರಚಾರ ಪರಿಷತ್ ಕರ್ನಾಟಕ ವಿವೇಕ ವಿದ್ಯಾರ್ಥಿ – 2025, ಅವರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸುವ ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ಕೋಟ ವಿವೇಕ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಸಂಕಲ್ಪ್ ಕುಮಾರ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಗಳಿಸಿರುತ್ತಾನೆ. ಈತ ಕುಂಭಾಶಿಯ ಶಿಲ್ಪ ಹಾಗೂ ಡಾ. ಸಂಪತ್ ಕುಮಾರ್ ಅವರ ಪುತ್ರ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೇಂದ್ರ ತೆಂಗು ಅಭಿವೃದ್ಧಿ ಮಂಡಳಿಯ ವತಿಯಿಂದ ಜಿಲ್ಲಾ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರವು ಜನವರಿ 12ರಂದು ನಡೆಯಲಿದೆ ಎಂದು ಉಡುಪಿ – ಚಿಕ್ಕಮಂಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ತೆಂಗು ಅಭಿವೃದ್ಧಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರವನ್ನು ಕುಂದಾಪುರ ತಾಲೂಕಿನಲ್ಲಿ ಆಯೋಜಿಸಲು ತಿಳಿಸಿದ ಅವರು, ಇದಕ್ಕಾಗಿ ಎರಡು ದಿನಗಳ ಒಳಗಾಗಿ ಸ್ಥಳ ಗುರುತಿಸುವುದರೊಂದಿಗೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ 16,252 ಹೆಕ್ಟೇರ್ ತೆಂಗು ಬೆಳೆ ಪ್ರದೇಶವನ್ನು ಹೊಂದಿದ್ದು, ಕರಾವಳಿ ಭಾಗದಲ್ಲಿ ಜೇಡಿ ಮತ್ತು ಮರಳು ಮಿಶ್ರಿತ ಮಣ್ಣು ಜೊತೆಗೆ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮಳೆಯಾಗಿರುವುದರಿಂದ ತೆಂಗು…

Read More