Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಮೆಸ್ಕಾಂ ಉಪವಿಭಾಗ ವ್ಯಾಪ್ತಿಯಲ್ಲಿ ಸುಮಾರು 9 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕೊಲ್ಲೂರು ಶಾಖೆಯ 33/11 ಕೆವಿ ಉಪಕೇಂದ್ರ ರಚನೆಗೆ ಗೋಳಿಹೊಳೆ ಗ್ರಾಪಂ ವ್ಯಾಪ್ತಿಯ ಎಲ್ಲೂರಿನಲ್ಲಿ ಶುಕ್ರವಾರ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ, ಶಾಸಕ ಕೆ. ಗೋಪಾಲ ಪೂಜಾರಿ ಶಿಲಾನ್ಯಾಸ ಮಾಡಿದರು. ನಂತರ ಮಾತನಾಡಿದ ಅವರು, ರಾಜ್ಯದ ಇಂಧನ ಸಚಿವ ಡಿ.ಕೆ. ಶಿವಕುಮಾರ ಗ್ರಾಮೀಣ ಭಾಗದ ಕೃಷಿಕರಿಗೆ ಗುಣಮಟ್ಟದ ವಿದ್ಯುತ್ ನೀಡಲು ಅಗತ್ಯ ಕ್ರಮ ಕೈಗೊಂಡಿದ್ದು, ಒಣಭೂಮಿಗಳಲ್ಲಿ ಸೋಲಾರ್ ಪಾರ್ಕ್‌ಗಳನ್ನು ನಿರ್ಮಿಸುವ ಮೂಲಕ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಿದ್ದಾರೆ. ಬೈಂದೂರಿಗೆ ಹೆಚ್ಚುವರಿ 110/11 ಕೆ.ವಿ. ಉಪಕೇಂದ್ರ ಮಂಜೂರು ಮಾಡಿಸಿದ್ದು, ಉದ್ದೇಶಿತ ಕಾಮಗಾರಿಗೆ ಈಗಾಗಲೇ ಸ್ಥಳ ಪರಿಶೀಲನಾ ಕಾರ್ಯ ನಡೆಯುತ್ತಿದೆ, ಅಲ್ಲದೆ ಸಿಬ್ಬಂದಿಗಳ ವಸತಿಗಹ ನಿರ್ಮಾಣಕ್ಕೆ ಒಂದು ಕೋಟಿ ರೂ, ಹಾಗೂ ಅತಿಥಿಗೃಹ ನಿರ್ಮಾಣಕ್ಕೆ 80 ಲಕ್ಷ ರೂ. ಮಂಜೂರಾಗಿದೆ. ಮಲೆನಾಡು ಭಾಗದ ಮಾವಿನಕಾರು, ಹಳ್ಳಿಬೇರು, ಬಸ್ರಿಬೇರು, ಗೋಳಿಗುಡ್ಡೆ, ಬಾವಡಿ, ಹೊಸೂರು, ಬೆಳಿಕೊಡ್ಲು, ಮಣ್‌ವ್ಮಣ್‌ಹರ, ಚಾರ‍್ಸಾಲು, ದೊಡ್ಡಹರ, ಮೇಘ್ನಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಲೋಕಕಲ್ಯಾಣಾರ್ಥವಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ಅಮ್ಮನವರಿಗೆ ಶುಕ್ರವಾರ ಗಜಾನನ ಜೋಶಿ ನೇತೃತ್ವದಲ್ಲಿ ಸಾಮೂಹಿಕ ಸಿಯಾಳಾಭಿಷೇಕ ನಡೆಯಿತು. ರಾಷ್ಟ್ರದ ಪ್ರಜೆಗಳು ಸದಾ ಸುಖ, ಸಂತೋಷ, ನೆಮ್ಮದಿ ಹಾಗೂ ಪರಸ್ಪರ ಸಹಬಾಳ್ವೆಯೊಂದಿಗೆ ಬಾಳುವಂತಾಗಬೇಕು. ಕಾಲಕ್ಕೆ ತಕ್ಕಂತೆ ಮಳೆ-ಬೆಳೆಯಾಗಬೇಕು. ದೇಶ ಇನ್ನಷ್ಟು ಸಧೃಡವಾಗಬೇಕೆಂಬ ಸಂಕಲ್ಪದೊಂದಿಗೆ ಬೆಳಿಗ್ಗೆ ಶ್ರೀ ಮೂಕಾಂಬಿಯಲ್ಲಿ ಪ್ರಾರ್ಥಿಸಿ ಎರಡನೇ ವರ್ಷದ ವಿಶೇಷ ಸೇವಾ ಕಾರ್ಯಕ್ರಮ ಆರಂಭಗೊಂಡಿತು. ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಸಿಯಾಳಗಳ ಅಭಿಷೇಕ ಜತೆಗೆ ಕ್ಷೀರ, ಪಂಚಾಮೃತ ಅಭಿಷೇಕಗಳನ್ನು ಮಾಡಲಾಯಿತು. ಅಲ್ಲದೇ ಗುಡಾನ್ನ, ಕ್ಷೀರಾನ್ನ ನೈವೇದ್ಯ, ಶತರುದ್ರಾಭಿಷೇಕ, ವಸ್ತ್ರ, ಫಲ-ಪುಷ್ಪಗಳ ಸಮರ್ಪಣೆಯೂ ಜರುಗಿತು. ದೇವರಿಗೆ ಮಲ್ಲಿಗೆ ಹೂವಿನಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ಊರ, ಪರವೂರ ಅನೇಕ ಭಕ್ತರು ಈ ವಿಶೇಷ ದಿನವನ್ನು ಕಣ್ತುಂಬಿಕೊಂಡು ಕೃತಾರ್ತರಾದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಶಿರೂರು: ಶಿರೂರು ಕರಾವಳಿ ಸಮೀಪದ ಪಡಿಯಾರಹಿತ್ಲು ಎಂಬಲ್ಲಿ ದನಗಳನ್ನು ಕದ್ದು ಸಾಗಿಸುತ್ತಿದ್ದ ವಾಹನವನ್ನು ಬಂದೂರು ಪೋಲಿಸರು ಶನಿವಾರ ಮುಂಜಾನೆ ವಶಪಡಿಸಿಕೊಂಡಿದ್ದಾರೆ. ಟಾಟಾ ಎಸ್ ವಾಹನದಲ್ಲಿ ೧೨ ಚಿಕ್ಕ ಕರುಗಳನ್ನು ಸಾಗಿಸುತ್ತಿದ್ದ ವೇಳೆ ಪೋಲಿಸರನ್ನು ಕಂಡ ತಕ್ಷಣ ಆರೋಪಿಗಳು ವಾಹನವನ್ನು ಸ್ಥಳದಲ್ಲೆ ಬಿಟ್ಟು ಪರಾರಿಯಾಗಿದ್ದಾರೆ. ಬಂದೂರು ಪೋಲಿಸರು ವಾಹನವನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನಲ್ಲಿ ಕುಡಿಯುವ ನೀರು ಅಗತ್ಯವಿರುವಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದ್ದು, ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿದ ತಾಲೂಕು ಜಾಗೃತಿ ಸಮಿತಿ ಅಭೆಯಲ್ಲಿ ಕುಡಿಯುವ ನೀರು, ೯೪ಸಿ, ಡೀಮ್ಡ್ ಫಾರೆಸ್ಟ್ ಸಮಸ್ಯೆ ಕುರಿತ ಅಹವಾಲು ಆಲಿಸಿ ಬಳಿಕ ಮಾತನಾಡಿದರು. ಕೆಲವು ಕಡೆಗಳಲ್ಲಿ ಗ್ರಾಮ ಪಂಚಾಯತ್‌ನವರು ಕುಡಿಯುವ ನೀರಿನ ಪೂರೈಕೆಗೆ ಸರಕಾರದಿಂದ ಅನುದಾನ ಪಡೆಯುತ್ತಿದ್ದರೂ ತಮ್ಮದೇ ಅನುದಾನ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ. ಈ ಭಾರಿ ನೀರು ಪೂರೈಕೆ ಮಾಡುವ ಎಲ್ಲಾ ಟ್ಯಾಂಕರ್‌ಗಳ ಮೇಲೆಯೂ ಸರಕಾರದಿಂದ ಕೊಡಲ್ಪಟ್ಟ ನೀರು ಎಂಬ ಬ್ಯಾನರ್ ಹಾಕಿಸಿ ಎಂದು ಸೂಚಿಸಿದರು. ಕಳೆದ ವರ್ಷವೂ ನೀರು ಪೂರೈಕೆ ಮಾಡುತ್ತಿದ್ದ ಗ್ರಾಮ ಪಂಚಾಯತ್‌ನ ಅಧಿಕಾರಿಗಳು ಈ ಭಾರಿ ಹೆಚ್ಚಿನ ಅನುದಾನಕ್ಕೆ ಬೇಡಿಕೆಯಿಟ್ಟರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳಿಂದ ಮಂಜೂರಾದ ಒಟ್ಟು 14.81 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಹಾಗೂ ಕಿರು ಸೇತುವೆ ಕಾಮಗಾರಿಗಳಿಗೆ ಶಾಸಕ ಕೆ. ಗೋಪಾಲ ಪೂಜಾರಿ ಅವರು ಗುದ್ದಲಿಪೂಜೆ ನೆರವೇರಿಸಿದರು. ಬೆಳ್ಳಾಲ ಮೋರ್ಟು ಎಂಬಲ್ಲಿ 2.49ಕೋಟಿ ರೂ. ವೆಚ್ಚದಲ್ಲಿ ಸೇತುವೆ ಕಾಮಗಾರಿ, ವಂಡ್ಸೆ ನಂದ್ರೋಳಿ ಬೆಳ್ಳಾಲ ರಸ್ತೆ 4.35 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ, ದೇವಲ್ಕುಂದ ಗ್ರಾಮದ ಬಾಳಿಕೆರೆ ದೈವದ ಮನೆ ರಸ್ತೆ 10 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ, ಕಟ್‌ಬೇಲ್ತೂರು ಗ್ರಾಮದ ಭದ್ರ ಮಹಾಂಕಾಳಿ ದೇವಸ್ಥಾನ ರಸ್ತೆ 65ಲಕ್ಷ ರೂ ವೆಚ್ಚದಲ್ಲಿ ಅಭಿವೃದ್ಧಿ, ಗುಜ್ಜಾಡಿ ಗ್ರಾಮದ ಮಂಕಿ ಮಯ್ಯರ ಮನೆಗೆ ಹೋಗುವ ರಸ್ತೆ ಹಾಗೂ ವಾಸು ಅಂಗಡಿಗೆ ಹೋಗುವ ರಸ್ತೆ 2.50 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ, ತ್ರಾಸಿ ಗ್ರಾಮದ ಮೊವಾಡಿ ಮುಖ್ಯರಸ್ತೆಯಿಂದ ದೇವಳಿ ರಸ್ತೆ, ತ್ರಾಸಿ ಚರ್ಚ್‌ನಿಂದ ಆನಗೋಡು ರಸ್ತೆ ಹಾಗೂ ಡಾನ್ ಬಾಸ್ಕೋ ಶಾಲೆ ರಸ್ತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕರಾವಳಿಯ ವಿಶಿಷ್ಟ, ವಿಶೇಷ ಪರಂಪರೆ ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಯ ಹರಿಕಾರ, ಸೂತ್ರಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣ ಕಾಮತ್ ರ ಹೆಸರಿನಲ್ಲಿ ನೀಡುವ 2017-18 ರ ಸಾಲಿನ ಪ್ರಶಸ್ತಿಯನ್ನು ಬೆಂಗಳೂರಿನ ನಾದೋಪಾಸಕ ವಿದ್ವಾನ್ ವಾಗೀಶ್ ಭಟ್ ರವರಿಗೆ ನೀಡಲು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಸಮಿತಿ ಆಯ್ಕೆ ಮಾಡಿದೆ. ವೇದಮೂರ್ತಿ ಗಣಪತಿ ಶರ್ಮಾ ದಂಪತಿಗಳ ಸುಪುತ್ರರಾದ ವಾಗೀಶ್ ಭಟ್‌ರು ಬಾಲ್ಯದಿಂದಲೇ ಸಂಗೀತವನ್ನು ಅಭ್ಯಸಿಸಿ ಮೇರು ಮಟ್ಟಕ್ಕೇರಿ ಸಂಗೀತವೇ ತನ್ನುಸಿರು ಎಂಬ ಧ್ಯೇಯವನ್ನಿರಿಸಿ ಮುನ್ನೆಡೆಯುತ್ತಿದ್ದಾರೆ. ಶ್ರೀಯುತರ ಅಜ್ಜ ವೇದಮೂರ್ತಿ ಜ್ಯೋತಿಷಿ ಅಪ್ಪಾ ಭಟ್ ರವರೇ ಇವರ ಮೊದಲ ಗುರು. ನಂತರ ಭಟ್ಟರು ಕುಂದಾಪುರದ ಸುಪ್ರಸಿದ್ಧ ಸದಾರಂಗ್ ಸಂಗೀತ ವಿದ್ಯಾಲಯದ ಪ್ರೊ. ಗೋವರ್ಧನ ಶ್ಯಾನುಭಾಗರಿಂದ ಸಂಗೀತದ ದೀಕ್ಷೆಯನ್ನು ಪಡೆದರು. ಮುಂದೆ ಬೆಂಗಳೂರಿನ ಸರಸ್ವತಿ ಸಂಗೀತ ವಿದ್ಯಾಲಯದ ಸಂಪರ್ಕ ಪಡೆದು ಗುರು ಶಿಷ್ಯ ಪರಂಪರೆಯನ್ನು ಉಳಿಸಿ ಬೆಳೆಸಿದರು. ಸುಮಾರು ಮೂರು ದಶಕಗಳ ಸುಧೀರ್ಘ ಸಾಧನೆಯನ್ನು ಸುಪ್ರಸಿದ್ಧ ಸಂಗೀತಕಾರರಾಗಿದ್ದ ದಿ. ವಿದುಷಿ ಲಕ್ಷ್ಮೀ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೃಷಿಯಲ್ಲಿ ಖುಷಿಯನ್ನು ಕಂಡವರಲ್ಲಿ ನಾನೂ ಒಬ್ಬ. ಕೃಷಿ ಮಾಡಬೇಕಾದರೆ ಎಕರೆಗಟ್ಟಲೆ ಭೂಮಿಯ ಅಗತ್ಯವಿಲ್ಲ.ಹತ್ತು ಸೆಂಟ್ಸ್ ಜಾಗದಲ್ಲಿಯೂ ಸಹ ಒಳ್ಳೆಯ ಕೃಷಿಯನ್ನು ಮಾಡಿ ಬದುಕು ನಡೆಸಬಹುದು. ಮಿತ್ರ ಸಂಗಮ ಸಂಸ್ಥೆ ಕೃಷಿಕನಾದ ನನ್ನನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಿರುವುದು ನನಗೆ ಅತೀವ ಸಂತಸ ತಂದಿದೆ ಎಂದು ಮೂಡುಗೋಪಾಡಿಯ ಪ್ರಗತಿಪರ ಕೃಷಿಕ ರಫೀಕ್ ಬ್ಯಾರಿ ಹೇಳಿದರು. ಅವರು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಬೀಜಾಡಿ ಗೋಪಾಡಿ ಮಿತ್ರ ಸಂಗಮದ 21ನೇಯ ವಾರ್ಷಿಕೋತ್ಸವದಲ್ಲಿ ಸಂಸ್ಥೆ ಕೊಡಮಾಡುವ ನಮ್ಮೂರ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಗನ್ನಡದ ವಾಟ್ಸಪ್ ರಾಯಭಾರಿ ಮನು ಹಂದಾಡಿ ಮಾತನಾಡಿ,ಮಿತ್ರ ಸಂಗಮ ಅನ್ನ ನೀಡುವ ರೈತನನ್ನು ಸನ್ಮಾನಿಸಿ ಇತರ ಸಂಸ್ಥೆಗೆ ಮಾದರಿ ಎನಿಸಿದೆ. ಒಂದು ಸಂಸ್ಥೆ 21 ವರ್ಷಗಳಿಂದ ನಿರಂತರವಾಗಿ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಬೇಕಾದರೆ ಅದರ ಹಿಂದೆ ಒಂದಷ್ಟು ಸದಸ್ಯರ ಉತ್ಸಾಹ ಪೂರ್ಣವಾದ ದುಡಿಮೆ ಇದೆ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಉದ್ಯಮಿ ಕೆ.ಆರ್.ನಾಯ್ಕ ವಹಿಸಿದ್ದರು.ಇದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಪುರಾತನ ಪ್ರಸಿದ್ಧ ಬಿಜೂರು ಮೂರ‍್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ ಏ.14 ರಿಂದ 16ರ ವರೆಗೆ ನಡೆಯುವ ಶ್ರೀ ನಂದಿಕೇಶ್ವರ ಪರಿವಾರ ದೈವಗಳ ವಾರ್ಷಿಕೋತ್ಸವದ ಅಂಗವಾಗಿ ಚಪ್ಪರ ಮೂಹೂರ್ತ ಕಾರ್ಯಕ್ರಮ ನಡೆಯಿತು. ಉಪ್ಪುಂದ ಸಂದೇಶ ಭಟ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಏ.14ರಂದು ಶ್ರೀ ನಂದಿಕೇಶ್ವರ ಪರಿವಾರ ದೈವಗಳ ಹಾಗೂ ನಾಗದೇವರ ವಾರ್ಷಿಕ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಏ.15ರಂದು ಏಕಾಹ ಅಖಂಡ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡು ಏ.15ರಂದು ಪ್ರದೀಪ ವಿಸರ್ಜನೆಯೊಂದಿಗೆ ಭಜನಾ ಮಂಗಲೋತ್ಸವ ನಡೆಯಲಿದೆ. ಅತಿಥಿ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ನಡೆಯಲಿದ್ದು, ರಾತ್ರಿ ೮ಗಂಟೆಗೆ ಗೆಂಡ ಸೇವೆ ಹಾಗೂ ಮಹಾಮಂಗಳಾರತಿ ನಡೆಯಲಿರುವುದು. ಮೂರು ದಿನದ ಕಾರ್ಯಕ್ರಮದಲ್ಲಿ ಅನ್ನಸಂತರ್ಪಣೆ ನಡೆಯಲಿದೆ. ಈ ಸಂದರ್ಭ ದೈವಸ್ಥಾನದ ಅಧ್ಯಕ್ಷ ಕೃಷ್ಣಮೂರ್ತಿ ದೇವಾಡಿಗ ಮತ್ತು ಸಮಿತಿ ಸದಸ್ಯರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಮರವಂತೆಯ ಕಡಲು-ನದಿಗಳ ನಡುವಿನ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ ಮರವಂತೆಯ ಗ್ರಾಮಸ್ಥರು ಭಾನುವಾರ ಆಯೋಜಿಸಿದ್ದ ಆಭಾರಿ ಸೇವೆಯು ವಿವಿಧ ಧಾರ್ಮಿಕ ವಿಧಿ ಮತ್ತು ಮಹಾ ಅನ್ನಸಂತರ್ಪಣೆಯೊಂದಿಗೆ ಸಂಪನ್ನಗೊಂಡಿತು. ವಿವಿಧೆಡೆಯ ಕೃಷಿಕರು ಮತ್ತು ಮೀನುಗಾರರು ಸಮೃದ್ಧ ಫಸಲಿಗಾಗಿ, ಪ್ರಕೃತಿ ವಿಕೋಪ ದೂರಮಾಡುವುದಕ್ಕಾಗಿ ಇಲ್ಲಿನ ಅಧಿದೇವತೆಯಾದ ವರಾಹನಿಗೆ ಹರಕೆ ಹೊತ್ತು ಸಲ್ಲಿಸುವ ವಿಶಿಷ್ಟ ಸೇವೆ ಆಭಾರಿ. ಇಂದಿನ ಆಭಾರಿಯ ಸಿದ್ಧತೆಗಳು ಸ್ವಯಂಸೇವಾ ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಡೆದಿದ್ದುವು. ದೇವಾಲಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ತಯಾರಿ ನಡೆದಿದ್ದರೆ, ವರಾಹ ಮತ್ತು ಗಂಗಾಧರ ದೇವಸ್ಥಾನಗಳ ನಡುವೆ ಭಕ್ತರಿಗೆ ಅನ್ನಪ್ರಸಾದ ನೀಡುವುದಕ್ಕಾಗಿ ಬೃಹತ್ ಚಪ್ಪರವನ್ನು ಸಜ್ಜುಗೊಳಿಸಲಾಗಿತ್ತು. ದೇವಾಲಯದಲ್ಲಿ ಪೂಜೆಗೊಳ್ಳುವ ವರಾಹ, ವಿಷ್ಣು, ನಾರಸಿಂಹ ದೇವರಿಗೆ ಮತ್ತು ಸನಿಹದ ಗಂಗಾಧರೇಶ್ವರನಿಗೆ ವಿಶೇಷ ಅಭಿಷೇಕ, ಪೂಜೆ ಸಲ್ಲಿಸಲಾಯಿತು. ದೇವಾಲಯದ ಮುಂದೆ ನವಗ್ರಹ ಪೂಜೆ, ವಿಷ್ಣು ಹವನ, ಕಲಾವೃದ್ಧಿ ಹೋಮ ಮತ್ತು ಚಂಡಿಕಾ ಹೋಮಗಳು ನಡೆದುವು. ಬಳಿಕ ವರಾಹ ದೇವಾಲಯದಲ್ಲಿ ಮೂರೂ ದೇವರಿಗೆ ಮಹಾ ಮಂಗಳಾರತಿ ಮಾಡಲಾಯಿತು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಮಕ್ಕಳಿಗೆ ಬಾಲ್ಯದಲ್ಲಿ ಭಾರತೀಯ ಸಂಸ್ಕೃತಿ ಆಧಾರಿತ ಶಿಕ್ಷಣ ನೀಡುವ ಮೂಲಕ ಮಕ್ಕಳಲ್ಲಿ ದೇಶಪ್ರೇಮ ಬೆಳೆಸಲು ಪೋಷಕರು ಸಹಕರಿಸಬೇಕು. ಗುರುಹಿರಿಯರನ್ನು ಗೌರವಿಸುವ ಪ್ರವೃತಿಯನ್ನು ಮಕ್ಕಳಲ್ಲಿ ಬೆಳೆಸಬೇಕು. ಬಾಲ್ಯದಲ್ಲಿ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾವಹಿಸಿ ಮಕ್ಕಳು ದಾರಿ ತಪ್ಪದಂತೆ ಎಚ್ಚರವಹಿಸಬೇಕು. ಮಕ್ಕಳಲ್ಲಿ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣ, ಭಾರತೀಯ ಸಂಸ್ಕೃತಿ ಸಂಸ್ಕಾರ ಬೆಳೆಸುವಂತಹ ಮಹತ್ಕಾರ್ಯವನ್ನು ಶಿಶು ಮಂದಿರಗಳು ನಡೆಸುತ್ತಿದ್ದು, ಶಿಶು ಮಂದಿರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಾತಾಜಿಯವರ ಸೇವೆ ಮತ್ತು ತ್ಯಾಗ ಅವಿಸ್ಮರಣೀಯ ಎಂದು ಶಿವಮೊಗ್ಗದ ಉದ್ಯಮಿ ವಿನೋದ ಭಂಡಾರಿ ಹೇಳಿದರು. ಅವರು ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದ ಶ್ರೀ ವಿಜಯ ವಿಠಲ ಮಂಟಪದಲ್ಲಿ ಶನಿವಾರ ಜರಗಿದ ಗಂಗೊಳ್ಳಿ ಸೇವಾ ಸಂಗ ನಿವೇದಿತಾ ಶಿಶು ಮಂದಿರದ ೩೧ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ 30 ವರ್ಷಗಳಿಂದ ನಿರಂತರವಾಗಿ ಗಂಗೊಳ್ಳಿಯಂತಹ ಗ್ರಾಮೀಣ ಪ್ರದೇಶದಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ…

Read More