Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನಡೆಯುತ್ತಿರುವ ಜೆಟ್ಟಿ ನಿರ್ಮಾಣ ಕಾರ್ಯದ ವೇಳೆ ಜೆಟ್ಟಿ ಭಾಗ ಕುಸಿತಕ್ಕೊಳಗಾಗಿದ್ದು, ಸ್ಥಳೀಯ ಮೀನುಗಾರರು ಆತಂಕಕ್ಕೀಡಾಗಿದ್ದಾರೆ ಬುಧವಾರ ಸಂಜೆ 5.30 ರ ಹೊತ್ತಿಗೆ ಘಟನೆ ನಡೆದು ನಿರಂತರವಾಗಿ ಕುಸಿದಿದ್ದು 150 ಮೀಟರಿಗೂ ಅಧಿಕ ಜೆಟ್ಟಿ ಕುಸಿದಿದೆ ಎನ್ನಲಾಗಿದೆ. ಕಳೆದ 13 ವರ್ಷದ ಹಿಂದೆ ಗಂಗೊಳ್ಳಿ ಜೆಟ್ಟಿ ನಿರ್ಮಾಣವಾಗಿದ್ದು ಇದು ಕೂಡ ಕುಸಿತಕ್ಕೊಳಗಾಗಿತ್ತು. ಬಳಿಕ ಶಿವಮೊಗ್ಗ ಸಂಸದ ಹಾಗೂ ಬೈಂದೂರು ಶಾಸಕರ ಮುತುವರ್ಜಿಯಲ್ಲಿ 12 ಕೋಟಿ ಅನುದಾನದಲ್ಲಿ ನೂತನ ಜೆಟ್ಟಿ ಕಾಮಗಾರಿಗೆ ಮಂಜೂರಾಗಿ 180 ಮೀಟರ್ ಕೆಲಸವೂ ನಡೆದಿತ್ತು. ಮುಂದಿನ ಕಾಮಗಾರಿಗಾಗಿ ಹಳೆ ಜೆಟ್ಟಿಯ ಡಯಪ್ರಮ್ ಹಾಲ್ ನಡುವೆಯಿದ್ದ ರಾಡ್ ತುಂಡರಿಸಿ ಹೊಸ ಪಿಲ್ಲರ್ ಹಾಕಿದ್ದು ಎರಡಕ್ಕೂ ಕೊಂಡಿಯಾಗಿದ್ದ ರಾಡು ತುಂಡರಿಸಿ ಅವೈಜ್ಞಾನಿಕ ಕಾಮಗಾರಿ ಮಾಡಿದ್ದರಿಂದ ಹಳೆ ಜೆಟ್ಟಿ ಕುಸಿತಕ್ಕೊಳಗಾಗಿ ಈಗ ನಡೆಯುತ್ತಿರುವ ಕಾಮಗಾರಿಗಾಗಿ ಮಾಡಿದ ಪಿಲ್ಲರ್ ಮೇಲೆ ಬಿದ್ದು ಹಲವು ಪಿಲ್ಲರ್ ಕುಸಿದಿದೆ. ಈ ಭಾಗದಲ್ಲಿ 40 ದೊಡ್ಡ ಬೋಟುಗಳು, 100ಕ್ಕೂ ಅಧಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ದೇಶದ ವಿದ್ವಾಂಸಕ ಕೃತ್ಯಗಳಲ್ಲಿ ಭಾಗಿಯಾಗಿ, ಭಯೋತ್ಪಾದನೆ ದೇಶದ ಭದ್ರತೆ, ಅಂತರಿಕ ಸುರಕ್ಷತ ಹಿನ್ನಲೆಯಲ್ಲಿ PFI ಹಾಗೂ ಅದರ ಅಂಗಸಂಸ್ಥೆಗಳನ್ನು ದೇಶದಲ್ಲಿ 5 ವರ್ಷಗಳ ಅವಧಿಗೆ ನಿಷೇಧಿಸಿ, ಕೇಂದ್ರ ಭಾರತೀಯ ಜನತಾ ಪಕ್ಷದ ಸರ್ಕಾರ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ರಾಷ್ಟ್ರದಲ್ಲಿ ಭಯೋತ್ಪಾದನಾ ಕೃತ್ಯಗಳನ್ನು ಎಸಿಗುತ್ತಿದ್ದ ಈ ಸಂಘಟನೆಗಳನ್ನು ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ. 2001 ಸೆಪ್ಟೆಂಬರ್ 27ರಂದು SIMI ಸಂಘಟನೆಯನ್ನು ಬ್ಯಾನ್ ಮಾಡಲಾಗಿತ್ತು, 2022 ಸೆಪ್ಟೆಂಬರ್ 27ರಂದು PFI ಸೇರಿದಂತೆ 5 ಮಾಡಲಾಗಿದೆ ಸಂಘಟನೆಗಳನ್ನು ಬ್ಯಾನ್ ಮಾಡಲಾಗಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ & ಪಿಎಫ್ಐ ಅಂಗ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಅಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIC), ನ್ಯಾಷನಲ್ ಕಾನ್ಫಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪಟ್ಟಣ ಪಂಚಾಯತ್ ರಚನೆಯಾಗಿ ಒಂದು ವರ್ಷ ಎಂಟು ತಿಂಗಳಾಗಿದೆ. ಈ ಅವಧಿಯಲ್ಲಿ 125 ಕೋಟಿ ಅನುದಾನ ಬಂದಿದೆ. ರಾಜ್ಯದಲ್ಲಿಯೇ ಹೆಚ್ಚು ಅನುದಾನ ಪಡೆದ ಕ್ಷೇತ್ರ ಬೈಂದೂರಾಗಿದೆ. ಈ ಕ್ಷೇತ್ರ ಸಾಕಷ್ಟು ಹಿಂದುಳಿದಿದ್ದು ಅಭಿವೃದ್ದಿಯಾಗುತ್ತಿದೆ. ಅಧಿಕಾರಿಗಳು ಯಾವ ಕೆಲಸ ಆಗಬೇಕು, ಅನುದಾನ ಅವಶ್ಯಕತೆ ಇತ್ಯಾದಿಗಳನ್ನು ನನ್ನ ಗಮನ ತರಬೇಕು ಎಂದು ಬೈಂದೂರು ಕ್ಷೇತ್ರದ ಶಾಸಕ ಬಿ. ಎಂ.ಸುಕುಮಾರ ಶೆಟ್ಟಿ ಹೇಳಿದರು. ಅವರು ಬೈಂದೂರು ಅಂಬೇಡ್ಕರ್ ಭವನದಲ್ಲಿ ನಡೆದ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮತ್ತು ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಪರಿಹರಿಸುವ ಕೆಲಸ ಮಾಡಬೇಕು. ಜನರಿಗೆ ವ್ಯವಸ್ಥೆಯ ಬಗ್ಗೆ ಬೇಸರ ಮೂಡದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಜನರ ನೋವನ್ನು ಅರ್ಥ ಮಾಡಿಕೊಂಡು ಸ್ಪಂದಿಸುವ ಕೆಲಸ ಮಾಡಬೇಕು ಎಂದರು. ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಕಾಮಗಾರಿಯ ಪ್ರಗತಿಯನ್ನು ವಿಚಾರಿಸಿದ ಶಾಸಕರು ತೀವ್ರ ಅಸಮಾಧಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶರವನ್ನವರಾತ್ರಿ ಉತ್ಸವಕ್ಕೆ ಸೋಮವಾರ ಚಾಲನೆ ದೊರೆಯಿತು. ದೇವಸ್ಥಾನದ ಸೇವಾಸಮಿತಿ ವ್ಯವಸ್ಥಾಪನಾ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ ಉತ್ಸವಕ್ಕೆ ಚಾಲನೆ ನೀಡಿದರು. ಪ್ರಧಾನ ಅರ್ಚಕರಾದ ಬಿ. ಕೃಷ್ಣಮೂರ್ತಿ ನಾವಡ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು ಈ ಸಂದರ್ಭದಲ್ಲಿ ಸೇವಾಸಮಿತಿ ವ್ಯವಸ್ಥಾಪನಾ ಕಾರ್ಯದರ್ಶಿ ಎಸ್. ಶಿವರಾಮ ಪೂಜಾರಿ, ಸದಸ್ಯರಾದ ಶಂಕರ ಮೊಗವೀರ, ಸತ್ಯ ಪ್ರಸನ್ನ, ದೊಟ್ಟಯ್ಯ ಪೂಜಾರಿ, ಪಾತ್ರಿಗಳಾದ ಅಣ್ಣಪ್ಪ ಪೂಜಾರಿ, ಸ್ಥಳೀಯರಾದ ನಾಗರಾಜ ಗಾಣಿಗ ಬಂಕೇಶ್ವರ, ರವೀಂದ್ರ ಶ್ಯಾನುಭೋಗ್ ಹಾಗೂ ಭಕ್ತಾದಿಗಳು ಹಾಜರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀರಾಮ ಫೈನಾನ್ಸ್ ಕೋ. ಲಿ. ಇದರ ಸ್ಥಳಾಂತರಿತ ಶಾಖಾ ಕಛೇರಿ ಇಲ್ಲಿನ ಸೈಂಟ್ ಮರಿಯಾ ಕಟ್ಟಡದಲ್ಲಿ ಸೋಮವಾರ ಶುಭಾರಂಭಗೊಂಡಿತು. ಶ್ರೀರಾಮ ಫೈನಾನ್ಸ್ ಉಪಾಧ್ಯಕ್ಷ ಹಾಗೂ ಝೋನಲ್ ಬಿಸಿನೆಸ್ ಹೆಡ್ ಶರಶ್ಚಂದ್ರ ಭಟ್ ಕಕ್ಕುಂಜೆ ನವೀಕೃತ ಶಾಖೆಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕುಂದಾಪುರ ಪುರಸಭಾ ಅಧ್ಯಕ್ಷೆ ವೀಣಾ ಭಾಸ್ಕರ್, ಉದ್ಯಮಿಗಳಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ದೇವಾನಂದ್ ಶೆಟ್ಟಿ, ಮಂಗಳೂರು ಝೋನ್ ಕಲೆಕ್ಷನ್ ಹೆಡ್ ನಾಗರಾಜ ಬಿ., ಟೆರಿಟರಿ ಲೀಗಲ್ ಹೆಡ್ ಉಲ್ಲಾಸ್ ವಿ. ನಾಯಕ್ ಅತಿಥಿಗಳಾಗಿದ್ದರು. ರೀಜನಲ್ ಕ್ರೆಡಿಟ್ ಹೆಡ್ ಮಹೇಶ್ ಕುಮಾರ್ ಸಿ.ಹೆಚ್., ರೀಜನಲ್ ಬಿಸಿನೆಸ್ ಹೆಡ್ ಸದಾಶಿವ್, ರೀಜನಲ್ ಕಛೇರಿ ಸಿಬ್ಬಂದಿಗಳಾದ ಗಣಪತಿ ನಾಯ್ಕ್, ನವೀನ್ ಕುಮಾರ್, ಯೋಗೀಶ್, ಅಮಿತ್, ಕುಂದಾಪುರ ಬ್ರ್ಯಾಂಚ್ ಮ್ಯಾನೇಜರ್ ಸಂದೀಪ್ ಕುಮಾರ್, ಕಲೆಕ್ಷನ್ ಮ್ಯಾನೇಜರ್ ರಾಘವೇಂದ್ರ ಜಿ., ಉಪಸ್ಥಿತರಿದ್ದರು. ಈ ವೇಳೆ ಸಂಸ್ಥೆಯಿಂದ 14 ಮಂದಿ ಗ್ರಾಹಕರನ್ನು ಸನ್ಮಾನಿಸಲಾಯಿತು. ರೀಜನಲ್ ಬಿಜಿನೆಸ್ ಹೆಡ್ ಸದಾಶಿವ್ ಸ್ವಾಗತಿಸಿ, ರೀಜನಲ್ ಸೇಲ್ಸ್ ಹೆಡ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಗಂಗಾನಾಡು-ನೀರೋಡಿಯಲ್ಲಿ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ 9ನೇ ಗೃಹ ’ಶ್ರೀ ವರಲಕ್ಷ್ಮೀ ನಿಲಯ’ ಸೋಮವಾರ ಉದ್ಘಾಟನೆಗೊಂಡಿತು. ನಿಪ್ಪಾಣಿ ಸಧರ್ಮ ಓಂಶಕ್ತಿ ಮಠದ ಪೀಠಾಧಿಪತಿ ಶ್ರೀ ಅರುಣಾನಂದ ಸ್ವಾಮೀಜಿ ನೂತನ ಗೃಹವನ್ನು ಉದ್ಘಾಟಿಸಿ ಆಶೀರ್ವದಿಸಿ, ಜೀವನದಲ್ಲಿ ಪಂಚಯಜ್ಞಗಳನ್ನು ಮಾಡುವುದು ಅಗತ್ಯವಾಗಿದೆ. ನಮ್ಮನ್ನು ಸೃಷ್ಠಿಸಿದ ದೇವರಿಗೆ ಸಲ್ಲಿಸುವ ದೇವಯಜ್ಞ, ನಮ್ಮನ್ನು ಪ್ರಪಂಚಕ್ಕೆ ಪರಿಚಯಿಸಿದ ಹೆತ್ತವರಿಗೆ ಸಲ್ಲಿಸುವ ಪಿತೃಯಜ್ಞ, ನಮಗೆ ಸಂಸ್ಕಾರ, ಸಂಸ್ಕೃತಿ ತಿಳಿಸಿಕೊಡುವ ಮೂಲಕ ಬದುಕಿಗೆ ಉತ್ತಮ ಮಾರ್ಗ ತೋರಿದ ಗುರು, ಹಿರಿಯರಿಗಾಗಿ ಸಲ್ಲಿಸುವ ಋಷಿಯಜ್ಞ, ಯಾವುದೇ ಫಲಾಪೇಕ್ಷೆ ಇಲ್ಲದೇ ಉಪಕಾರ ಮಾಡುತ್ತಿರುವ ಪಕೃತಿ ಪೂಜೆಯ ಭೂತಯಜ್ಞ, ಸಮಾಜದಲ್ಲಿ ಬದುಕುತ್ತಿರುವ ನಾವು ಸಮಾಜಕ್ಕೇನು ನೀಡಿದ್ದೇವೆ ಎನ್ನುವ ಕಲ್ಪನೆಯೇ ಸ್ವಯಜ್ಷ ಎಂದರು. ತನ್ನ ಸಂಪಾದನೆಯ ಒಂದು ಭಾಗವನ್ನು ಈ ಭಾಗದ ಬಡವರ ಅಭ್ಯುದಯಕ್ಕಾಗಿ ವಿನಿಯೋಗಿಸುತ್ತಿರುವುದು ದೇವರಿಗೂ ಪ್ರೀಯವಾದ ಕಾರ್ಯವಾಗಿದೆ. ಸತ್ಪಾತ್ರರಿಗೆ ಮಾಡಿದ ದಾನ ಪರಿಪೂರ್ಣ ಎಂದೆನಿಕೊಳ್ಳುತ್ತದೆ. ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಕಳಕಳಿ ಹೊಂದಿರುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಸೆ.26: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಮಹೋತ್ಸವಕ್ಕೆ ಸೋಮವಾರಚಾಲನೆ ನೀಡಲಾಯಿತು. ಬೆಳಗ್ಗೆ 8:30 ಗಂಟೆಗೆ ಗಣಪತಿ ಪೂಜೆಯೊಂದಿಗೆ ನವರಾತ್ರಿ ಪರ್ವಕ್ಕೆ ಚಾಲನೆ ನೀಡಿ ಶ್ರೀದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಯಿತು. ಬಳಿಕ ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಮಾತನಾಡಿ 9 ದಿನಗಳ ಕಾಲ ನಡೆಯುವ ಉತ್ಸವಕ್ಕೆ ದೇವಳ ಸಕಲ ಸಿದ್ಧತೆ ಮಾಡಿಕೊಂಡಿದ್ದು ಊರ- ಪರವೂರಿನಿಂದ ಭಕ್ತರಿಗೋಸ್ಕರ ವಿಶೇಷ ಸೌಕರ್ಯ ಒದಗಿಸಲಾಗಿದೆ. ಪ್ರತಿದಿನ ಶತರುದ್ರದೊಂದಿಗೆ ತಾಯಿಯ ಸನ್ನಿಧಿಯಲ್ಲಿ ಪೂಜೆ, ಸುಹಾಸನಿಯರ ಪೂಜೆ, ಚಂಡಿಕಾ ಯಾಗ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನವರಾತ್ರಿ ಸಂದರ್ಭ ನಡೆಯುತ್ತವೆ. ಪ್ರತಿದಿನ ನಡೆಯುವ ಸಾಂಸ್ಕೃತಿಕ ಉತ್ಸವದಲ್ಲಿ ಚಂಡೆ, ಸಂಗೀತ, ನೃತ್ಯ, ಯಕ್ಷಗಾನ, ಭಜನೆ ಎಲ್ಲವೂ ನಡೆಯಲಿದೆ. ವಿಜಯ ದಶಮಿಯಂದು ವಿಶೇಷವಾಗಿ ದೇವಿಗೆ ಸೇವೆಯಾಗಿ ಹುಲಿವೇಷ ನೃತ್ಯ ಇರಲಿದೆ. ಈ ಭಾರಿ ರಥೋತ್ಸವ ಅ.04ರಂದು ರಥೋತ್ಸವ ಮಧ್ಯಾಹ್ನ 1-30 ಗಂಟೆಗೆ ನಡೆಯಲಿದೆ. ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮಲ್ಲಿನ ಕೌಶಲ್ಯದ ಮೂಲಕ ಸಮುದಾಯವನ್ನು ಅಭಿವೃದ್ಧಿಗೆ ಪ್ರತಿಯೊಬ್ಬರೂ ನೆರವಾಗಬಹುದಾಗಿದೆ. ಆಸಕ್ತಿ ಆಧಾರಿತ ಕಲಿಕೆಯಿಂದ ವಿವಿಧ ಕ್ಷೇತ್ರದಲ್ಲಿ ಪರಿಣತಿಯನ್ನು ಹೊಂದಲು ಸಾಧ್ಯವಿದೆ ಅಲ್ಲದೇ ಅದರಿಂದ ಸಮಾಜಕ್ಕೂ ಒಳಿತಾಗಲಿದೆ ಎಂದು ಜಿಲ್ಲಾ ಲಿಟರೆಸಿ ಛೇರ್ಮನ್ ಶ್ರೀಕಾಂತ್ ಪ್ರಭು ಹೇಳಿದರು. ರೋಟರಿ ಜಿಲ್ಲೆ 3182 ರೋಟರಿ ಕ್ಲಬ್ ಬೈಂದೂರು ಆಶ್ರಯದಲ್ಲಿ ಇಲ್ಲಿನ ರೋಟರಿ ಭವನದಲ್ಲಿ ಆಯೋಜಿಸಲಾದ ಝೋನಲ್ ಸೆಮಿನಾರ್ ಆನ್ ಲಿಟರಸಿ ‘ಜ್ಞಾನಾಂಬುಧಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಡಿಗ್ರಿ ಗಳಿಸುವುದಕ್ಕೂ, ಸಾಕ್ಷರರಾಗುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ರೋಟರಿ ಜಿಲ್ಲೆ 3182 ಝೋನ್ 1ರ ಅಸಿಸ್ಟೆಂಟ್ ಗವರ್ನರ್ ಉಮೇಶ್ ಪುತ್ರನ್, ಝೋನಲ್ ಟ್ರೇನರ್ ರವಿರಾಜ್ ಶೆಟ್ಟಿ, ಝೋನಲ್ ಲೆಫ್ಟಿನೆಂಟ್ಗಳಾದ ಪ್ರವೀಣ ಶೆಟ್ಟಿ, ಸಂದೀಪ್ ಕುಮಾರ್ ಶೆಟ್ಟಿ, ಪೂರ್ಣಿಮಾ ಭವಾನಿಶಂಕರ್, ಝೋನಲ್ ಲಿಟರಸಿ ಕೋ-ಆರ್ಟಿನೇಟರ್ ಮಂಜುನಾಥ ಶೆಟ್ಟಿ, ಡಿಸ್ಟಿಕ್ ಲಿಟರಸಿ ಸಬ್ ಕಮಿಟಿ ಉಪಾಧ್ಯಕ್ಷ ಐ. ನಾರಾಯಣ, ಬೈಂದೂರು ರೋಟರಿ ಲಿಟರೆಸಿ ಛೇರ್ಮನ್ ಸುಬ್ರಹ್ಮಣ್ಯ ಜಿ. ಬೈಂದೂರು ರೋಟರಿ ಅಧ್ಯಕ್ಷ ಎಚ್. ಉದಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಳಮದ್ದಳೆ ಜ್ಞಾನಯಜ್ಞ ಕಾರ್ಯಕ್ರಮಕ್ಕೆ ಹೆಚ್ಚು ಹೆಚ್ಚು ಯುವಪೀಳಿಗೆಯನ್ನು ಕರೆತರುವ ಪ್ರಯತ್ನ ಮಾಡಿದರೆ ಇದು ಇನ್ನಷ್ಟು ಜನಪ್ರೀಯತೆ ಪಡೆದುಕೊಳ್ಳಬಹುದು. ನಮ್ಮ ಬದುಕಿಗೆ ಬೇಕಾದ ಪ್ರತಿಯೊಂದು ಜೀವನ ಸಂದೇಶಗಳು ಈ ಯಕ್ಷಗಾನ ತಾಳಮದ್ದಳೆಯಲ್ಲಿ ದೊರೆಯುತ್ತದೆ. ಎಂದು ಮಾಜಿ ಸಚಿವ ಪ್ರಮೋದ ಮಧ್ವರಾಜ್ ಹೇಳಿದರು. ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಪ್ರಸ್ತುತಿಯಲ್ಲಿ ನಾಗೂರು ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದ ಕೋಟ ವೈಕುಂಠ ನಾಯ್ಕರ ಸ್ಮರಣ ವೇದಿಕೆಯಲ್ಲಿ ನಡೆದ ೮ನೇ ವರ್ಷದ ಯಕ್ಷಗಾನ ತಾಳಮದ್ದಲೆ ಸಮಾರೋಪದಲ್ಲಿ ಅವರು ಮಾತನಾಡಿದರು. ಧಾರೇಶ್ವರರಂತಹ ಪ್ರತಿಭಾವಂತ ಮತ್ತು ಅನುಭವಿ ವೃತ್ತಿ ಕಲಾವಿದರು ಯಕ್ಷಗಾನ ಸಂಘಟನೆ, ಪ್ರಸಾರದಲ್ಲಿ ತೊಡಗಿರುವುದು ಆಶಾದಾಯಕ ಬೆಳವಣಿಗೆ ಎಂದು ಅವರು ಅಭಿಪ್ರಾಯಪಟ್ಟರು. ಮಂಗಳೂರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರು ಮಾತನಾಡಿ, ನಮ್ಮ ಸಮಾಜವು ಉತ್ತಮ ಸಂಸ್ಕಾರಯುತವಾಗಿ ಮೂಡಿಬಂದು ನಮ್ಮ ಸಂಸ್ಕೃತಿ, ಪರಂಪರೆ, ಧರ್ಮ, ಆಧ್ಯಾತ್ಮಿಕತೆಗಳ ಏಳಿಗೆಗಳು ಯಕ್ಷಗಾನದಿಂದಲೇ ಉಳಿದು ಬೆಳೆಯಬಲ್ಲದು. ಇಂದು ಪರಿಶುದ್ಧ ಕನ್ನಡ ಭಾಷೆ ಉಳಿದು ಅಭಿವೃದ್ಧಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಕರ್ನಾಟಕ ಮುಸ್ಲಿಂ ಜಮಾಅತ್ ಬೈಂದೂರು ತಾಲೂಕು ಅಧ್ಯಕ್ಷರಾಗಿ ನ್ಯಾಯವಾದಿ ಇಲ್ಯಾಸ್ ಕೆ. ಎಂ., ಪ್ರಧಾನ ಕಾರ್ಯದರ್ಶಿಯಾಗಿ ಶಭ್ಬೀರ್ ಬೈಂದೂರು ಆಯ್ಕೆಯಾಗಿದ್ದಾರೆ. ನೂತನ ಸಮಿತಿ ಪದಾಧಿಕಾರಿಗಳಾಗಿ ಕೋಶಾಧಿಕಾರಿ ಸಯ್ಯಿದ್ ಅಜ್ಮಲ್ ಶಿರೂರು, ಸಂ.ಕಾರ್ಯದರ್ಶಿಯಾಗಿ ಮುಸ್ತಫ ಬಡಾಕೆರೆ, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಖಾದರ್ ಬಡಾಕೆರೆ, ಅಂದು ಕಾಯಿ ಹಾಜಿ ಚಾತನಕೆರೆ, ಅಬ್ದುಲ್ ಗಫ್ಫಾರ್ ಶಿರೂರು, ಸುಲ್ತಾನ್ ಬೈಂದೂರು, ಕಾರ್ಯದರ್ಶಿಗಳಾಗಿ ಕೊಂಬಾಳಿ ಕೆ.ಎಂ.ಎಚ್ ಝುಹುರಿ, ಖಾಸಿಂ ನಾವುಂದ, ಜಾಫರ್ ಬೈಂದೂರು, ಅಬ್ಬಾಸ್ ಮರವಂತೆ ಆಯ್ಕೆಯಾಗಿದ್ದಾರೆ.

Read More