ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಆ.24: ಸೈಂಟ್ ಕ್ಷೇವಿಯರ್ ಆಂಗ್ಲ ಮಾದ್ಯಮ ಸ್ಕೂಲ್ ಉದ್ಯಾವರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ದೆಯಲ್ಲಿ ಕುಂದಾಪುರದ ಶ್ರೀ ಸಿದ್ಧಿವಿನಾಯಕ ಚೆಸ್ ಅಕಾಡೆಮಿಯ ಒಂಬತ್ತು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ವಿದ್ಯಾರ್ಥಿಗಳಾದ ಯಶಸ್ವಿ ಪೂಜಾರಿ, ವರ್ನಿತ ಕುಂದರ್, ಜೋಷ್ವಿನ್, ಶ್ರೀದನ್ ಇವರೆಲ್ಲ ಹೈಸ್ಕೂಲ್ ವಿಭಾಗದಲ್ಲಿ ಶ್ರಾವ್ಯ, ಜೋಶ್ವಿನ್, ನಮಿಶ್ ಪೂಜಾರಿ, ಪ್ರದ್ಯುಮ್ನ ಅಡಿಗ, ವರ್ಷಿನಿ ಕುಂದರ್ ಪ್ರೈಮರಿ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಆ.24: ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಬೈಂದೂರು ತಾಲೂಕು ಕೇಂದ್ರ ಸಮಿತಿ ಮತ್ತು ಬೈಂದೂರು ತಾಲೂಕು ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಕೇಂದ್ರ ಸಮಿತಿ ಅಧ್ಯಕ್ಷರಾದ ರಘುರಾಮ ಕೆ. ಪೂಜಾರಿ, ಭಜನಾ ಪರಿಷತ್ ಅಧ್ಯಕ್ಷರಾದ ಕೃಷ್ಣ ಪೂಜಾರಿ ಶಿರೂರು, ನಿಕಟಪೂರ್ವ ಕೇಂದ್ರ ಸಮಿತಿ ಅಧ್ಯಕ್ಷರಾದಕೃಷ್ಣ ಪೂಜಾರಿ, ವಂಡ್ಸೆ ವಲಯಅಧ್ಯಕ್ಷರಾದ ವೀಣಾ ಆಚಾರ್ಯ, ಕಿರಿಮಂಜೇಶ್ವರ ವಲಯಾಧ್ಯಕ್ಷರಾದ ದಿನೇಶ್ ಆಚಾರ್ಯ, ತ್ರಾಸಿ ವಲಯ ಅಧ್ಯಕ್ಷರಾದ ನಾಗರಾಜ ಖಾರ್ವಿ, ಕೊಲ್ಲೂರು ವಲಯಾಧ್ಯಕ್ಷರಾದ ಜಯರಾಮ್ ಪೂಜಾರಿ, ಗೋಳಿಹೊಳೆ ವಲಯಾಧ್ಯಕ್ಷರಾದ ಮಂಜುನಾಥ್ ಪೂಜಾರಿ, ಹಟ್ಟಿಯಂಗಡಿ ವಲಯಾಧ್ಯಕ್ಷರಾದ ನಿತ್ಯಾನಂದ ಆಚಾರ್ಯ, ಭಜನಾ ಪರಿಷತ್ ವಲಯ ಸಂಯೋಜಕರಾದ ಮಂಜುನಾಥ್ ಉಪ್ಪುಂದ, ಮಂಜುನಾಥ್ ಕಿರಿಮಂಜೇಶ್ವರ, ಕಿರಿಮಂಜೇಶ್ವರ ವಲಯದ ನಿಕಟಪೂರ್ವ ಅಧ್ಯಕ್ಷರಾದ ಸುಮಾ ಆಚಾರ್ಯ, ಬೈಂದೂರು ತಾಲ್ಲೂಕು ಯೋಜನಾಧಿಕಾರಿ ಕೆ. ವಿನಾಯಕ್ ಪೈ, ಬೈಂದೂರು ವಲಯ ಮೇಲ್ವಿಚಾರಕ ರಾಮಚಂದ್ರ, ಬೈಂದೂರು ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಆ.24: ಕುಂದಾಪುರದ ಫೈಓವರ್ ತಡೆಗೋಡೆಯಲ್ಲಿ ವಿದ್ಯುತ್ ಸಂಚಾರವಾಗುತ್ತಿರುವ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆತಂಕಕ್ಕೆ ಕಾರಣವಾಗಿತ್ತು. ದಾರಿದೀಪಕ್ಕಾಗಿ ವಿದ್ಯುತ್ ಸಂಪರ್ಪ ಕಲ್ಪಿಸುವ ವೇಳೆ ಮಾಡಲಾಗಿರುವ ತಾಂತ್ರಿಕ ದೋಷವೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಸ್ಪಷ್ಟನೆ ನೀಡಿರುವ ಮೆಸ್ಕಾಂ ಅಧಿಕಾರಿಗಳು, ವಿದ್ಯುತ್ ಸಂಪರ್ಕ ಕಲ್ಪಿಸುವ ವೇಳೆ ತಾಂತ್ರಿಕ ಸಮಸ್ಯೆಯಿಂದ ಈ ರೀತಿಯಾಗಿದೆ. ಮುಂಜಾಗೃತಾ ಕ್ರಮವಾಗಿ ತಕ್ಷಣ ಹೆದ್ದಾರಿ ದಾರಿದೀಪದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ ಎಂದಿದ್ದಾರೆ. ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು ಘಟನೆಯ ಬಗ್ಗೆ ಪ್ರತಿಕ್ರಿಯಿಸಿ ಹೆದ್ದಾರಿ ದಾರಿದೀಪದ ನಿರ್ವಹಣೆ ನವಯುಗ ಕಂಪೆನಿ ಜವಾಬ್ದಾರಿಯಾಗಿದ್ದು ಅವರಿಗೆ ಸೂಚನೆ ನೀಡಲಾಗಿದೆ. ತಕ್ಷಣ ಸಮಸ್ಯೆ ಪರಿಹರಿಸುವ ಬಗ್ಗೆ ಆದೇಶ ನೀಡಲಾಗಿದೆ ಎಂದಿದ್ದಾರೆ. ಮಳೆಯ ಹಿನ್ನೆಲೆ ವಾಹನ ಸವಾರರು ಫೈಓವರ್ ಮೇಲೆ ನಿಂತಿದ್ದ ಸಂದರ್ಭ ಫೈಓವರ್ ತಡೆಗೋಡೆ ಭೀಮ್ ನಲ್ಲಿ ಒಂದು ಕಡೆ ವಿದ್ಯುತ್ ಪ್ರವಹಿಸುತ್ತಿರುವ ಅನುಭವವಾಗಿದೆ ಎನ್ನಲಾಗಿದೆ. ಟೆಸ್ಟರ್ ಮೂಲಕ ಪರಿಶೀಲಿಸಿದಾಗ ಟೆಸ್ಟರ್ ನಲ್ಲಿ ಬೆಳಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಅವರು 84ನೇ ಹುಟ್ಟುಹಬ್ಬವನ್ನು ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಿರೂರಿನಲ್ಲಿ ಪ್ರತ್ಯೇಕವಾಗಿ ಮಂಗಳವಾರ ಅವರ ಅಭಿಮಾನಿಗಳು ಆಚರಿಸಿದರು. ಮಾದರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಸಿಹಿತಿಂಡಿ ಹಾಗೂ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಕಲಿಕಾ ಉಪಕರಣಗಳನ್ನು ವಿತರಿಸಿ ಮಾತನಾಡಿದ ಅವರು, ಮಕ್ಕಳಿಗೆ ಸುಂದರ ಜೀವನ ರೂಪಿಸಿಕೊಳ್ಳುವುದಕ್ಕೆ ವಿದ್ಯಾರ್ಥಿ ಜೀವನ ಅಮೂಲ್ಯ ಅವಕಾಶ. ಉತ್ತಮ ನಡವಳಿಕೆ ಮೂಲಕ ಅದರ ಸದುಪಯೋಗಪಡಿಸಿಕೊಳ್ಳಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಸದಾಶಿವ ಡಿ. ಪಡುವರಿ, ಶಾಲಾ ಅಭಿವೃದ್ಧಿ ಹಾಗೂ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸಂಜಯ್ ದೇವಾಡಿಗ, ಸಿಟಿ ಜೆಸಿಐನ ಪೂರ್ವಾಧ್ಯಕ್ಷರಾದ ಶ್ರೀಧರ ಆಚಾರ್ಯ, ಶಾಲಾ ಅಭಿವೃದ್ಧಿ ಸಮಿತಿಯ ಭಾಸ್ಕರ್ ದೇವಾಡಿಗ, ದಯಾನಂದ ಉಪಸ್ಥಿತರಿದ್ದರು. ಸಹ ಶಿಕ್ಷಕಿ ಸರಸ್ವತಿ ಸ್ವಾಗತಿಸಿದರು. ಶಾಲಾ ಪದವೀಧರ ಮುಖ್ಯೋಪಾಧ್ಯಾಯರಾದ ಜನಾರ್ದನ ದೇವಾಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ವೀಣಾ ಹೆಗಡೆ ವಂದನಾರ್ಪಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ಯಾನ ಬಾಡಬೆಟ್ಟು ಶ್ರೀ ಶನೀಶ್ವರ ಮತ್ತು ಶ್ರೀ ಚೌಡೇಶ್ವರಿ ಟ್ರಸ್ಟ್ ನೇತೃತ್ವದಲ್ಲಿ ಮಣಿಪಾಲ ಕೆಎಂಸಿ ರಕ್ತನಿಧಿ ವಿಭಾಗ ಹಾಗೂ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ ತಲ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.21ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಕುಂದಾಪುರ ಮನೀಶ್ ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀ ತಜ್ಞೆ ಡಾ. ಪ್ರಮೀಳಾ ನಾಯಕ್ ಉದ್ಘಾಟಿಸಿದರು. ವಕೀಲರಾದ ಟಿ.ಬಿ. ಶೆಟ್ಟಿ, ಶ್ರಿ ಶನಿಶ್ವರ ಮತ್ತು ಚೌಡೇಶ್ವರಿ ದೇವಸ್ಥಾನ ಬಾಡಬೆಟ್ಟು ಕನ್ಯಾನದ ಧರ್ಮದರ್ಶಿಗಳಾದ ಜಯರಾಮ, ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಡಾ.ರಂಗನಾಥ್ ವೈ ಪಿ., ತಲ್ಲೂರು ಗ್ರಾಪಂ ಅಧ್ಯಕ್ಷೆ ಭೀಮವ್ವ, ಸದಸ್ಯರಾದ ಉದಯಕುಮಾರ್ ತಲ್ಲೂರು, ರಕ್ತದ ಆಪತ್ಭಾಂಧವ ಸತೀಶ್ ಸಾಲ್ಯಾನ್, ರಕ್ತದಾನ ಶಿಬಿರದ ಆಯೋಜಕರಾದ ಪ್ರಶಾಂತ್ ತಲ್ಲೂರು ಹಾಗೂ ಅರವಿಂದ್ ಉಪ್ಪಿನಕುದ್ರು ಉಪಸ್ಥಿತ್ತರಿದ್ದರು. ಈ ಸಂದರ್ಭದಲ್ಲಿ ರಕ್ತದಾನಿಗಾದ ವಿಜಯ್ ಕುಂದಾಪುರ, ಚೇತನ್ ಖಾರ್ವಿ ಹಾಗೂ ಕರಣ ಉಪ್ಪಿನಕುದ್ರು ಅವರನ್ನು ಸನ್ಮಾನಿಸಲಾಯಿತು. ಅರುಣ್ ಉಪ್ಪಿನಕುದ್ರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಿಶ್ವನಾಥ್ ಉಪ್ಪಿನಕುದ್ರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಹಕಾರಿ ಸಂಸ್ಥೆಯ ಲಾಭ ಗಳಿಸುವ ಜೊತೆಗೆ ಸಾಮಾಜಿಕ ಕಾರ್ಯಗಳಿಗೆ ಅದನ್ನು ವಿನಿಯೋಗಿಸುವ ಮೂಲಕ ತನ್ನ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸುತ್ತಿರುವುದು ಶ್ಲಾಘನಾರ್ಹ ಎಂದು ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಹೇಳಿದರು. ಅವರು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ವತಿಯಿಂದ ಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯಿಂದ ಪ್ರೋತ್ಸಾಹ ಪಡೆದವರು ಅದನ್ನು ನೆನಪಿಸಿರಿಸಿಕೊಂಡು ಹೆಚ್ಚಿನ ಸಾಧನೆ ಮಾಡುವಂತಾಗಬೇಕು ಮತ್ತು ಅದು ಮತ್ತೊಬ್ಬರಿಗೆ ಸ್ಪೂರ್ತಿಯಾಗಬೇಕು ಎಂದ ಅವರು ಶ್ರೀ ರಾಮ ಸೌಹಾರ್ದ ಸಂಸ್ಥೆ ಕಳೆದ ಒಂದು ದಶಕದಿಂದ ಜನಮಾನಸದಲ್ಲಿ ಗುರುತಿಸುವಂತ ಕಾರ್ಯ ಮಾಡುತ್ತಿದೆ ಎಂದರು. ಈ ವೇಳೆಯಲ್ಲಿ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಸಾಧಕ ಗುರುರಾಜ ಪೂಜಾರಿ ಹಾಗೂ ಸೈನ್ಯಕ್ಕೆ ಸೇರ್ಪಡೆಗೊಂಡ ಉಡುಪಿ ಜಿಲ್ಲೆಯ ಪ್ರಥಮ ಯುವತಿ ವಿದ್ಯಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ನೂತನ ಪಿಎಸ್ಐ ಆಗಿ ಪವನ್ ನಾಯಕ್ ಅವರು ಅಧಿಕಾರ ಸ್ವೀಕರಿದ್ದಾರೆ. 2016 ಬ್ಯಾಚಿನ ಅಧಿಕಾರಿಯಾಗಿರುವ ಪವನ್ ನಾಯಕ್ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲದವರು. ಈ ಹಿಂದೆ ಉಪ್ಪಿನಂಗಡಿಯಲ್ಲಿ ಪ್ರೊಬೇಷನರಿ ಅವಧಿ ಮುಗಿಸಿ ಧರ್ಮಸ್ಥಳ ಹಾಗೂ ಬೈಂದೂರಿನಲ್ಲಿ ತಲಾ ಒಂದೂವರೆ ವರ್ಷಗಳ ಕಾಲ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದರು. ಗ್ರಾಮಾಂತರ ಠಾಣೆಯ ಪಿಎಸ್ಐ ಆಗಿದ್ದ ನಿರಂಜನ್ ಗೌಡ ಅವರನ್ನು ಬೈಂದೂರು ಠಾಣೆಗೆ ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಪವನ್ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರು ಆದೇಶಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತಲ್ಲೂರು ಹೊಯ್ಸಳ ಸ್ಟುಡಿಯೋ ಮಾಲಿಕ ಶ್ರೀಧರ ಉಪ್ಪಿನಕುದ್ರು ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತಲ್ಲೂರಿನಲ್ಲಿ ಸ್ಟೂಡಿಯೋ ಹೊಂದಿದ್ದ ಅವರು ತನ್ನ ವೃತ್ತಿಯ ಮೂಲಕ ಈ ಭಾಗದಲ್ಲಿ ಪ್ರಸಿದ್ಧಿ ಪಡೆದಿದ್ದರು. ಮೃತರು ಪತ್ನಿ, ಮಗು ಹಾಗೂ ಕುಟುಂಬಿಕರನ್ನು ಅಗಲಿದ್ದಾರೆ.
ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ದೊರಕದ ಪ್ರವೇಶಾತಿ – ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ಉಡುಪಿ ಜಿಲ್ಲೆಗೆ 300 ಮಕ್ಕಳ ಹಾಸ್ಟೆಲ್ ಮಂಜೂರು – ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲೆಯ ೫ ವಿಧಾನಸಭಾ ಕ್ಷೇತ್ರಕ್ಕೆ ಕನಕದಾಸ ಹಾಸ್ಟೆಲ್ ಮಂಜೂರು ಕುಂದಾಪುರದಲ್ಲಿ 100 ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗಿದೆ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಟೇಲ್ ಸೀಟು ಸಿಗದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಕೋಟ ಬೈಂದೂರಿನಲ್ಲಿ ಬಿಜೆಪಿ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವರು ಹಿಂದೂಳಿದ ವರ್ಗಗಳ ಇಲಾಖೆಯ ವಿವಿಧ ಯೋಜನೆಗಳ ಮಾಹಿತಿ ನೀಡಿದ ಸಚಿವ ಕೋಟ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬೈಂದೂರು ಘಟಕದ ಸಹಯೋಗದೊಂದಿಗೆ ಕಾಲೇಜು ಸಭಾಂಗಣದಲ್ಲಿ ಸೋಮವಾರ ‘ಮಾದಕ ವ್ಯಸನದ ದುಷ್ಪರಿಣಾಮಗಳು ಮತ್ತು ಅಪರಾಧ ಮುಕ್ತ ಸಮಾಜ’ ಎಂಬ ಕಾರ್ಯಾಗಾರ ಆಯೋಜಿಸಲಾಗಿತ್ತು. ಭ್ರಷ್ಟಾಚಾರ ನಿಗ್ರಹ ದಳದ ವೃತ್ತ ನಿರೀಕ್ಷಕರಾದ ವಿನಾಯಕ ಬಿಲ್ಲವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಯುವಜನತೆ ವ್ಯಸನಮುಕ್ತ ಸಮಾಜ ಕಂಡುಕೊಳ್ಳುವ ಬಗೆ, ವಿವಿಧ ರೀತಿಯ ಮಾದಕ ವ್ಯಸನಗಳು, ವ್ಯಸನದಿಂದಾಗಿ ದುಶ್ಚಟಗಳಿಂದಾಗಿ ವ್ಯಕ್ತಿಯೋರ್ವ ಹೇಗೆ ಅಪರಾಧಗಳಿಗೆ ಬಲಿಯಾಗುತ್ತಾನೆ, ಅಲ್ಲದೆ ವ್ಯಸನಗಳಿಗಾಗಿ ಅಪರಾಧಗಳು ನಡೆಯುವ ಬಗೆ, ಡ್ರಗ್ಸ್ ಗಳಿಂದಾಗಿ ಮನುಷ್ಯನ ಮೇಲೆ ಪ್ರಭಾವ ಬೀರುವ ಅಂಶಗಳು, ಅದರಿಂದಾಗುವ ದುಷ್ಪರಿಣಾಮಗಳ ಕುರಿತು ರಾಜ್ಯದ ಮೂಲೆ ಗಳಲ್ಲಿ ದಾಖಲಾಗಿರುವ ಕೇಸ್ ಸಹಿತ ಉದಾಹರಣೆಗಳ ಮೂಲಕ ವಿದ್ಯಾರ್ಥಿಗಳಿಗೆ ಅಪರಾಧಮುಕ್ತ ಸಮಾಜ ನಿರ್ಮಾಣ ಮತ್ತು ಮಾದಕ ವ್ಯಸನಗಳ ಅರಿವಿನ ಕುರಿತು ಮಾಹಿತಿ ನೀಡಿದರು. ಬೈಂದೂರು ವೃತ್ತ…
