ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಡಿ ಕನ್ಯಾಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 32 ವರ್ಷಗಳ ದೀರ್ಘ ಸೇವೆ ಸಲ್ಲಿಸಿದ ನಿವೃತ್ತರಾದ ವಿಜಯ ಕೆ. ನಾಯರಿ ಅವರಿಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯಿಂದ ನಿವೃತ್ತಿ ಸನ್ಮಾನ ಸಮಾರಂಭವನ್ನು ಶುಕ್ರವಾರ ಶಾಲಾ ಸಭಾಂಗಣದಲ್ಲಿ ಜರಗಿತು. ನಿವೃತ್ತ ಶಿಕ್ಷಕ ವಿಜಯ ನಾಯರಿ ಅವರನ್ನು ಸನ್ಮಾನಿಸಿ ಗೌರವಿಸಿ ಬಿಳ್ಕೋಡುಗೆ ಗೌರವ ನೀಡಲಾಯಿತು. ಸಹದ್ಯೋಗಿ ಬಂಧುಗಳು, ಅಭಿಮಾನಿಗಳು, ಗ್ರಾಮಸ್ಥರು, ದೈಹಿಕ ಶಿಕ್ಷಕರ ಸಂಘ ಬ್ರಹ್ಮಾವರ, ಶ್ರೀ ರಾಮಪ್ರಸಾದಿತ ಯಕ್ಷಗಾನ ಮಂಡಳಿ ಕೋಡಿ ಕನ್ಯಾಣ ಅವರುಗಳ ವತಿಯಿಂದ ಗೌರವಿಸಲಾಯಿತು. ಇದೇ ವೇಳೆ ವರ್ಗಾವಣೆಗೊಂಡ ಶಿಕ್ಷಕಿ ರಮಣಿ ಅವರನ್ನು ಗೌರವಿಸಿಕೊಳ್ಳಲಾಯಿತು. ಸಮಾರಂಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ, ಉದ್ಯಮಿ ಶಿವ ಕರ್ಕೇರ, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್, ಕೋಟ ಮೂರ್ತೆದಾರ ಸಹಕಾರಿ ಸಂಘದ ಅಧ್ಯಕ್ಷ ಕೊರಗ ಪೂಜಾರಿ, ಕೋಡಿ ಪಂಚಾಯತ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ಆತ್ಮಯೋಜನೆಯಡಿ ಇಲಾಖೆಯ ಇತರೆ ಯೋಜನೆಗಳಾದ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗೆ ಸಮಾನಾಂತರವಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿ ರೈತರ ಸಾಧನೆಯನ್ನು ಗುರುತಿಸಿ ಪುರಸ್ಕರಿಸುವ ಕಾರ್ಯಕ್ರಮವಿರುತ್ತದೆ. ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಯ್ಕೆಯಾದ ಜಿಲ್ಲೆಯ ಒಟ್ಟಾರೆ 10 ಮಂದಿ ರೈತರಿಗೆ (ತಲಾ ರೂ. 25,000/-) ಹಾಗೂ ತಾಲ್ಲೂಕು ಮಟ್ಟದ ಪ್ರಶಸ್ತಿಯನ್ನು ಆಯ್ಕೆಯಾದ ಆಯಾ ತಾಲ್ಲೂಕಿನ ಒಟ್ಟಾರೆ ೫ ಮಂದಿ ರೈತರಿಗೆ (ತಲಾ ರೂ. 10,000/-) ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ತೀರ್ಮಾನದಂತೆ ವಿತರಿಸಲಾಗುವುದು. ಸದರಿ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರು ಹಾಗೂ ರೈತ ಮಹಿಳೆಯರು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ ೩೧.೦೮.೨೦೨೬ ರೊಳಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ. ತಡವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ಪಂಡಿತ ಪ್ರಶಸ್ತಿಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್.ಐ.ಡಿ ಬಳಸಿಕೊಂಡು ಆಗಸ್ಟ್ 31 ರ ಒಳಗಾಗಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ರಾಜ್ಯ ವಲಯ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಪಹಣಿ, ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ವಿವರದ ಪ್ರತಿ, ನಿಗಧಿತ ಛಾಪಾ ಕಾಗದದಲ್ಲಿ ಹಬ್ ಪರಭಾರೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಪತ್ರ ಇತ್ಯಾದಿ ಅಗತ್ಯ ದಾಖಲಾತಿಗಳೊಂದಿಗೆ ನಿಗಧಿತ ನಮೂನೆಯಲ್ಲಿ ವಿವರ ಭರ್ತಿ ಮಾಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಆಗಸ್ಟ್ 19ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮನೆಯ ಕಾಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಳಹಳ್ಳಿ ಗ್ರಾಮದ ಮಾವಿನಕಟ್ಟೆಯ ಭಾರತಿ ಜೂ.1ರಂದು ಮದುವೆ ಕಾರ್ಯಕ್ರಮಕ್ಕೆ ಹೋಗಿ ವಾಪಾಸ್ಸು ಬಂದು ಚಿನ್ನಾಭರಣಗಳನ್ನು ಮನೆಯ ಗೋಡ್ರೇಜ್‌ನಲ್ಲಿ ಇಟ್ಟಿದ್ದರು. ಜು.27ರಂದು ಕಾಪಾಟು ತೆರೆದು ನೋಡಿದಾಗ ಕಳವಾಗಿರುವುದು ಕಂಡುಬಂದಿದೆ. ಕಾಪಾಟಿನಲ್ಲಿದ್ದ 7 ಚಿನ್ನದ ಬಳೆ, 7 ಉಂಗುರಗಳು , 7ಕಿವಿ ಓಲೆ, ಒಂದು ಜೊತೆ ಜುಮಕಿ, 3 ಬ್ರಾಸ್‌ಲೈಟ್, ಕರಿಮಣಿ ಸರ, ನೆಕ್ಲೇಸ್, ಮುತ್ತಿನ ಸರ, ಕೆಂಪು ಹರಳಿನ ಸರ, 2 ಚಿನ್ನದ ಚೈನು ಸೇರಿದಂತೆ ಒಟ್ಟು 30ಲಕ್ಷ ರೂ. ಮೌಲ್ಯದ 320 ಗ್ರಾಂ ಚಿನ್ನಾಭರಣವನ್ನು ಭಾರತಿಯ ಸ್ನೇಹಿತನಾದ ಚೇತನ್ ಶೆಟ್ಟಿ ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಹಿತ್ಯವೆಂಬುದು ಮನಸ್ಸಿನ ಅತ್ಯಂತ ಸಂತೋಷ ಮತ್ತು ನೆಮ್ಮದಿ. ಮಾನವ ಜೀವನವನ್ನು ಸುಂದರ ಮತ್ತು ಸಾರ್ಥಕ ಮೌಲಯ್ಯುತವಾಗಿಸುತ್ತದೆ. ಸಾಹಿತ್ಯವು ಕೇವಲ ಮನರಂಜನೆಗೆ ಮಾತ್ರವಲ್ಲ ಸಮಾಜಕ್ಕೆ ದಾರಿದೀಪವಾಗುತ್ತದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ನುಡಿದರು. ಅವರು ಭಾನುವಾರ ಕಾರಂತ ಥೀಂ ಪಾರ್ಕ್‌ನಲ್ಲಿ ಜ್ಞಾನಗಂಗಾ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗ ಬೈಂದೂರು, ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇವರ ಸಹಕಾರದಲ್ಲಿ ನಡೆದ ರಾಜ್ಯ ಮಟ್ಟದ ಸಾಹಿತ್ಯ ಸೌರಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅಭ್ಯಾಗತರಾಗಿ ಕೋಟ ಅಮೃತೇಶ್ವರಿ ಕ್ಷೇತ್ರದ ಧರ್ಮದರ್ಶಿ ಆನಂದ ಸಿ. ಕುಂದರ್ ಸಾಹಿತ್ಯವು ಜೀವನದ ಕನ್ನಡಿ ಅದು ಮನಸ್ಸನ್ನು ತಿದ್ದಿ ಸಮಾಜವನ್ನು ರೂಪಿಸಿ ಸಂಸ್ಕೃತಿಯನ್ನು ಉಳಿಸಿ ಮಾನವತೆಯನ್ನು ಬೆಳೆಸುವ ಮಹತ್ವದ ಸಾಧನವಾಗಿದೆ ಎಂದರು. ಜೊತೆಗೆ ಈ ರೀತಿಯ ಸಾಹಿತ್ಯ ಕುಟುಂಬದ ಮೂಲಕ ಸಾಹಿತ್ಯದ ಬೆಳವಣಿಗೆ ಪರಿಪೂರ್ಣವಾಗುತ್ತದೆ ಎಂದು ನುಡಿದರು. ಸಮಾರಂಭದ ಅಧ್ಯಕ್ಷತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಕ್ರಿಯೆಟಿವ್ ಗ್ಲೋಬಲ್ ಸ್ಕೂಲ್ ನ 2026-27ನೇ ಸಾಲಿನ ನೂತನ ವಿದ್ಯಾರ್ಥಿ ಪರಿಷತ್ತು ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಪ್ತಸ್ವರ ಶುಕ್ರವಾರ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂಸ್ಥೆಯ ಸಂಸ್ಥಾಪಕರುಗಳಾದ ಅಶ್ವಥ್ ಎಸ್ ಎಲ್, ಆದರ್ಶ ಎಂ.ಕೆ, ಡಾ. ಗಣನಾಥ್ ಶೆಟ್ಟಿ, ಗಣಪತಿ ಭಟ್ ಕೆ.ಎಸ್, ವಿಮಲ್ ರಾಜ್ ಹಾಗೂ ಅಮೃತ ರೈ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ನಾಯಕರಿಗೆ ಗೌರವದ ಬ್ಯಾಡ್ಜ್ ಗಳನ್ನು ತೊಡಿಸಿದರು. ಸಂಸ್ಥಾಪಕರಾದ ವಿಮಲ್ ರಾಜ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾಥನಾಡಿ, ಶಿಕ್ಷಣದ ಜೊತೆಗೆ ನಾಯಕತ್ವ, ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಳ್ಳಬೇಕು.ನಾಯಕತ್ವ ಕೇವಲ ಅಧಿಕಾರವಲ್ಲ. ಅದು ಜವಾಬ್ದಾರಿ ಶಿಸ್ತು,. ಶಾಲೆಯ ಗೌರವವನ್ನು ಹೆಚ್ಚಿಸುವಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು ಹಾಗೂ ಸಂಸ್ಥಾಪಕರಾದ ಅಶ್ವತ್ ಎಸ್ ಎಲ್ ಇವರು ಮಾತನಾಡಿ ವಿದ್ಯಾರ್ಥಿ ದೆಸೆಯಲ್ಲಿಯೇ ದೊಡ್ಡ ಕನಸುಗಳನ್ನು ಕಾಣುವುದು, ಸಮಾಜದ ಒಳಿತಿಗಾಗಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು ಅಗತ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಮತ್ತು ಸರಕಾರಿ ಪ್ರೌಢಶಾಲೆ ಉಪ್ಪಿನಕುದ್ರು ಇವರು ಜಂಟಿಯಾಗಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ದಾಖಲೆಯ 5 ವಿದ್ಯಾರ್ಥಿಗಳು 7 ಚಿನ್ನದ ಪದಕಗಳಿಕೆಯೊಂದಿಗೆ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಗೆ ನೇರ ಅರ್ಹತೆ ಪಡೆದಿದ್ದಾರೆ . 14ರ ವಯೋಮಾನದ ಬಾಲಕಿಯರ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಅನುಷ್ಕಾ ಪ್ರಥಮ ಸ್ಥಾನ ಹಾಗೂ ಬಾಲಕಿಯರ *ಕಲಾತ್ಮಕ ಯೋಗಾಸನ ಸ್ಪರ್ಧೆಯಲ್ಲಿ ಅಮೂಲ್ಯ ಪ್ರಥಮ ಸ್ಥಾನ, ಬಾಲಕರ ಕಲಾತ್ಮಕ ಯೋಗಾಸನ ಸ್ಪರ್ಧೆಯಲ್ಲಿ ವಂಶಿತ್ ಪ್ರಥಮ ಸ್ಥಾನ ಪಡೆದರು. 17ರ ವಯೋಮಾನದ ಬಾಲಕಿಯರ ಕಲಾತ್ಮಕ ಯೋಗಾಸನ ಸ್ಪರ್ಧೆಯಲ್ಲಿ ಸಾನಿಧ್ಯಾ ಪ್ರಥಮ ಸ್ಥಾನ ಹಾಗೂ ಬಾಲಕಿಯರ *ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಅನಿಷ್ಕಾ ಪ್ರಥಮ ಸ್ಥಾನದೊಂದಿಗೆ ವೈಯಕ್ತಿಕ ಚಿನ್ನದ ಪದಕವನ್ನು ಮುಡಿಗೆರಿಸಿಕೊಂಡರು. 14 ವರ್ಷ ವಯೋಮಾನದ ಕಲಾತ್ಮಕ ಯೋಗಾಸನದ ಗುಂಪು ಸ್ಪರ್ಧೆಯಲ್ಲಿ ಅನುಷ್ಕಾ ಮತ್ತು ಅಮೂಲ್ಯ ಜೋಡಿಯು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆಯಿತು. 17ರ ವಯೋಮಾನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವವಿನಾಯಕ ಪಿಯು ಕಾಲೇಜಿನ ವಿದ್ಯಾರ್ಥಿಗಳ ವಾಣಿಜ್ಯ ವಿಭಾಗ ವತಿಯಿಂದ ಬ್ಯಾಂಕ್ ಆಫ್ ಬರೋಡ ಕುಂಭಾಶಿ ಶಾಖೆಗೆ ಭೇಟಿ ನೀಡಿದರು. ಬ್ಯಾಂಕಿನ ಮ್ಯಾನೇಜರ್ ಬಿ. ಕರುಣಾಕರ್ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಬ್ಯಾಂಕ್ ಎನ್ನುವುದು ಹಣವನ್ನು ಇಡುವ ಸುರಕ್ಷಿತ ಸ್ಥಳ, ಜನರಿಗೆ ಹಣವನ್ನು ಉಳಿಸುವ ಮತ್ತು ನಿರ್ವಹಿಸುವ, ಉಳಿತಾಯ ಖಾತೆ ತೆರೆಯುವ, ಸಾಲ ನೀಡುವ, ಬಡ್ಡಿಗಳಿಸಲು ಹಣವನ್ನು ಠೇವಣಿ ಇಡುವ, ಇಂಟರ್ನೆಟ್ ಬ್ಯಾಂಕಿಂಗ್, ಆನ್ಲೈನ್ ಬ್ಯಾಂಕಿಂಗ್‌ಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನೋಜ್ ಕುಮಾರ್, ಆಡಳಿತ ನಿರ್ದೇಶಕ ಹರೀಶ್ ಎನ್., ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೇಯ, ಸೌಜನ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಾರ್ಥನಾ ಕಾಮತ್ ಮತ್ತು ಸಾಕೇತ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂಸ ಉದ್ದಿ.ಕೋಟ: ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಾಸ್ತಾನ ಇವರ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಇತ್ತೀಚಿಗೆ ಜರಗಿತು. ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೆರೆದ ಪರಿಸರದ ಗರ್ಭಿಣಿಯರು, ಬಾಣಂತಿಯರನ್ನು ಉದ್ದೇಶಿಸಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಘವೇಂದ್ರ ರಾವ್ ಮಾತನಾಡಿ, ನವಜಾತ ಶಿಶುವಿಗೆ ತಾಯಿಯ ಎದೆಹಾಲು ಅಮೃತ ಸಮಾನ, ಹೆರಿಗೆಯಾದ ಒಂದು ಗಂಟೆಯ ಒಳಗೆ ನೀಡುವ ಎದೆ ಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ತಿಳಿಸಿದರು. ಗರ್ಭಿಣಿ ಹಾಗೂ ಬಾಣಂತಿಯರಿಗೆ ಆರೋಗ್ಯ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ನೆರೆದಿದ್ದ ಎಲ್ಲಾ ತಾಯಂದಿರಿಗೆ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ವತಿಯಿಂದ ಪೌಷ್ಟಿಕ ಆಹಾರವನ್ನು ವಿತರಿಸಲಾಯಿತು. ಸಮಾರಂಭವನ್ನು ರೋಟರಿ ಅಧ್ಯಕ್ಷೆ ಕುಸುಮಾ ಮನೋಜ್ ಉದ್ಘಾಟಿಸಿ, ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ರೋಟರಿ ಕ್ಲಬ್ ವತಿಯಿಂದ ಶಿಶುವಿಗೆ ಹಾಲುಣಿಸುವಾಗ ತಾಯಂದಿರು ವಹಿಸಬೇಕಾದ ಎಚ್ಚರಿಕೆ ಕುರಿತು…
