Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ಪಂಡಿತ ಪ್ರಶಸ್ತಿಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್.ಐ.ಡಿ ಬಳಸಿಕೊಂಡು ಆಗಸ್ಟ್ 31 ರ ಒಳಗಾಗಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ರಾಜ್ಯ ವಲಯ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಪಹಣಿ, ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ವಿವರದ ಪ್ರತಿ, ನಿಗಧಿತ ಛಾಪಾ ಕಾಗದದಲ್ಲಿ ಹಬ್ ಪರಭಾರೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಪತ್ರ ಇತ್ಯಾದಿ ಅಗತ್ಯ ದಾಖಲಾತಿಗಳೊಂದಿಗೆ ನಿಗಧಿತ ನಮೂನೆಯಲ್ಲಿ ವಿವರ ಭರ್ತಿ ಮಾಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಆಗಸ್ಟ್ 19ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮನೆಯ ಕಾಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಳಹಳ್ಳಿ ಗ್ರಾಮದ ಮಾವಿನಕಟ್ಟೆಯ ಭಾರತಿ ಜೂ.1ರಂದು ಮದುವೆ ಕಾರ್ಯಕ್ರಮಕ್ಕೆ ಹೋಗಿ ವಾಪಾಸ್ಸು ಬಂದು ಚಿನ್ನಾಭರಣಗಳನ್ನು ಮನೆಯ ಗೋಡ್ರೇಜ್‌ನಲ್ಲಿ ಇಟ್ಟಿದ್ದರು. ಜು.27ರಂದು ಕಾಪಾಟು ತೆರೆದು ನೋಡಿದಾಗ ಕಳವಾಗಿರುವುದು ಕಂಡುಬಂದಿದೆ. ಕಾಪಾಟಿನಲ್ಲಿದ್ದ 7 ಚಿನ್ನದ ಬಳೆ, 7 ಉಂಗುರಗಳು , 7ಕಿವಿ ಓಲೆ, ಒಂದು ಜೊತೆ ಜುಮಕಿ, 3 ಬ್ರಾಸ್‌ಲೈಟ್, ಕರಿಮಣಿ ಸರ, ನೆಕ್ಲೇಸ್, ಮುತ್ತಿನ ಸರ, ಕೆಂಪು ಹರಳಿನ ಸರ, 2 ಚಿನ್ನದ ಚೈನು ಸೇರಿದಂತೆ ಒಟ್ಟು 30ಲಕ್ಷ ರೂ. ಮೌಲ್ಯದ 320 ಗ್ರಾಂ ಚಿನ್ನಾಭರಣವನ್ನು ಭಾರತಿಯ ಸ್ನೇಹಿತನಾದ ಚೇತನ್ ಶೆಟ್ಟಿ ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಾಹಿತ್ಯವೆಂಬುದು ಮನಸ್ಸಿನ ಅತ್ಯಂತ ಸಂತೋಷ ಮತ್ತು ನೆಮ್ಮದಿ. ಮಾನವ ಜೀವನವನ್ನು ಸುಂದರ ಮತ್ತು ಸಾರ್ಥಕ ಮೌಲಯ್ಯುತವಾಗಿಸುತ್ತದೆ. ಸಾಹಿತ್ಯವು ಕೇವಲ ಮನರಂಜನೆಗೆ ಮಾತ್ರವಲ್ಲ ಸಮಾಜಕ್ಕೆ ದಾರಿದೀಪವಾಗುತ್ತದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ನುಡಿದರು. ಅವರು ಭಾನುವಾರ ಕಾರಂತ ಥೀಂ ಪಾರ್ಕ್‌ನಲ್ಲಿ ಜ್ಞಾನಗಂಗಾ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗ ಬೈಂದೂರು, ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇವರ ಸಹಕಾರದಲ್ಲಿ ನಡೆದ ರಾಜ್ಯ ಮಟ್ಟದ ಸಾಹಿತ್ಯ ಸೌರಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅಭ್ಯಾಗತರಾಗಿ ಕೋಟ ಅಮೃತೇಶ್ವರಿ ಕ್ಷೇತ್ರದ ಧರ್ಮದರ್ಶಿ ಆನಂದ ಸಿ. ಕುಂದರ್ ಸಾಹಿತ್ಯವು ಜೀವನದ ಕನ್ನಡಿ ಅದು ಮನಸ್ಸನ್ನು ತಿದ್ದಿ ಸಮಾಜವನ್ನು ರೂಪಿಸಿ ಸಂಸ್ಕೃತಿಯನ್ನು ಉಳಿಸಿ ಮಾನವತೆಯನ್ನು ಬೆಳೆಸುವ ಮಹತ್ವದ ಸಾಧನವಾಗಿದೆ ಎಂದರು. ಜೊತೆಗೆ ಈ ರೀತಿಯ ಸಾಹಿತ್ಯ ಕುಟುಂಬದ ಮೂಲಕ ಸಾಹಿತ್ಯದ ಬೆಳವಣಿಗೆ ಪರಿಪೂರ್ಣವಾಗುತ್ತದೆ ಎಂದು ನುಡಿದರು. ಸಮಾರಂಭದ ಅಧ್ಯಕ್ಷತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ಕಾರ್ಕಳದ ಕ್ರಿಯೆಟಿವ್ ಗ್ಲೋಬಲ್ ಸ್ಕೂಲ್ ನ 2026-27ನೇ ಸಾಲಿನ ನೂತನ ವಿದ್ಯಾರ್ಥಿ ಪರಿಷತ್ತು ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಪ್ತಸ್ವರ ಶುಕ್ರವಾರ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ  ಸಂಸ್ಥೆಯ  ಸಂಸ್ಥಾಪಕರುಗಳಾದ ಅಶ್ವಥ್ ಎಸ್ ಎಲ್,  ಆದರ್ಶ ಎಂ.ಕೆ, ಡಾ. ಗಣನಾಥ್ ಶೆಟ್ಟಿ, ಗಣಪತಿ ಭಟ್ ಕೆ.ಎಸ್, ವಿಮಲ್ ರಾಜ್ ಹಾಗೂ ಅಮೃತ ರೈ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ನಾಯಕರಿಗೆ ಗೌರವದ ಬ್ಯಾಡ್ಜ್ ಗಳನ್ನು ತೊಡಿಸಿದರು. ಸಂಸ್ಥಾಪಕರಾದ ವಿಮಲ್ ರಾಜ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾಥನಾಡಿ, ಶಿಕ್ಷಣದ ಜೊತೆಗೆ ನಾಯಕತ್ವ, ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಳ್ಳಬೇಕು.ನಾಯಕತ್ವ ಕೇವಲ ಅಧಿಕಾರವಲ್ಲ. ಅದು ಜವಾಬ್ದಾರಿ ಶಿಸ್ತು,. ಶಾಲೆಯ ಗೌರವವನ್ನು ಹೆಚ್ಚಿಸುವಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು ಹಾಗೂ ಸಂಸ್ಥಾಪಕರಾದ ಅಶ್ವತ್ ಎಸ್ ಎಲ್ ಇವರು ಮಾತನಾಡಿ ವಿದ್ಯಾರ್ಥಿ ದೆಸೆಯಲ್ಲಿಯೇ ದೊಡ್ಡ ಕನಸುಗಳನ್ನು ಕಾಣುವುದು, ಸಮಾಜದ ಒಳಿತಿಗಾಗಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು ಅಗತ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ  ಇಲಾಖೆ ಮತ್ತು ಸರಕಾರಿ ಪ್ರೌಢಶಾಲೆ ಉಪ್ಪಿನಕುದ್ರು ಇವರು ಜಂಟಿಯಾಗಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ದಾಖಲೆಯ 5 ವಿದ್ಯಾರ್ಥಿಗಳು 7 ಚಿನ್ನದ ಪದಕಗಳಿಕೆಯೊಂದಿಗೆ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಗೆ ನೇರ ಅರ್ಹತೆ ಪಡೆದಿದ್ದಾರೆ . 14ರ ವಯೋಮಾನದ ಬಾಲಕಿಯರ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಅನುಷ್ಕಾ ಪ್ರಥಮ ಸ್ಥಾನ ಹಾಗೂ ಬಾಲಕಿಯರ *ಕಲಾತ್ಮಕ ಯೋಗಾಸನ ಸ್ಪರ್ಧೆಯಲ್ಲಿ ಅಮೂಲ್ಯ ಪ್ರಥಮ ಸ್ಥಾನ, ಬಾಲಕರ ಕಲಾತ್ಮಕ ಯೋಗಾಸನ ಸ್ಪರ್ಧೆಯಲ್ಲಿ ವಂಶಿತ್ ಪ್ರಥಮ ಸ್ಥಾನ ಪಡೆದರು. 17ರ ವಯೋಮಾನದ ಬಾಲಕಿಯರ ಕಲಾತ್ಮಕ ಯೋಗಾಸನ ಸ್ಪರ್ಧೆಯಲ್ಲಿ ಸಾನಿಧ್ಯಾ ಪ್ರಥಮ ಸ್ಥಾನ ಹಾಗೂ ಬಾಲಕಿಯರ *ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಅನಿಷ್ಕಾ ಪ್ರಥಮ ಸ್ಥಾನದೊಂದಿಗೆ ವೈಯಕ್ತಿಕ ಚಿನ್ನದ ಪದಕವನ್ನು ಮುಡಿಗೆರಿಸಿಕೊಂಡರು. 14 ವರ್ಷ ವಯೋಮಾನದ ಕಲಾತ್ಮಕ ಯೋಗಾಸನದ ಗುಂಪು ಸ್ಪರ್ಧೆಯಲ್ಲಿ ಅನುಷ್ಕಾ ಮತ್ತು ಅಮೂಲ್ಯ ಜೋಡಿಯು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆಯಿತು. 17ರ ವಯೋಮಾನದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವವಿನಾಯಕ ಪಿಯು ಕಾಲೇಜಿನ ವಿದ್ಯಾರ್ಥಿಗಳ ವಾಣಿಜ್ಯ ವಿಭಾಗ ವತಿಯಿಂದ ಬ್ಯಾಂಕ್ ಆಫ್ ಬರೋಡ ಕುಂಭಾಶಿ ಶಾಖೆಗೆ ಭೇಟಿ ನೀಡಿದರು. ಬ್ಯಾಂಕಿನ ಮ್ಯಾನೇಜರ್ ಬಿ. ಕರುಣಾಕರ್ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಬ್ಯಾಂಕ್ ಎನ್ನುವುದು ಹಣವನ್ನು ಇಡುವ ಸುರಕ್ಷಿತ ಸ್ಥಳ, ಜನರಿಗೆ ಹಣವನ್ನು ಉಳಿಸುವ ಮತ್ತು ನಿರ್ವಹಿಸುವ, ಉಳಿತಾಯ ಖಾತೆ ತೆರೆಯುವ, ಸಾಲ ನೀಡುವ, ಬಡ್ಡಿಗಳಿಸಲು ಹಣವನ್ನು ಠೇವಣಿ ಇಡುವ, ಇಂಟರ್ನೆಟ್ ಬ್ಯಾಂಕಿಂಗ್, ಆನ್ಲೈನ್ ಬ್ಯಾಂಕಿಂಗ್‌ಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನೋಜ್ ಕುಮಾರ್, ಆಡಳಿತ ನಿರ್ದೇಶಕ ಹರೀಶ್ ಎನ್., ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೇಯ, ಸೌಜನ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಾರ್ಥನಾ ಕಾಮತ್ ಮತ್ತು ಸಾಕೇತ್ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂಸ ಉದ್ದಿ.ಕೋಟ: ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಾಸ್ತಾನ ಇವರ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಇತ್ತೀಚಿಗೆ ಜರಗಿತು. ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೆರೆದ ಪರಿಸರದ ಗರ್ಭಿಣಿಯರು, ಬಾಣಂತಿಯರನ್ನು ಉದ್ದೇಶಿಸಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ  ಡಾ. ರಾಘವೇಂದ್ರ ರಾವ್ ಮಾತನಾಡಿ, ನವಜಾತ ಶಿಶುವಿಗೆ ತಾಯಿಯ ಎದೆಹಾಲು ಅಮೃತ ಸಮಾನ, ಹೆರಿಗೆಯಾದ ಒಂದು ಗಂಟೆಯ ಒಳಗೆ ನೀಡುವ ಎದೆ ಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ತಿಳಿಸಿದರು. ಗರ್ಭಿಣಿ ಹಾಗೂ ಬಾಣಂತಿಯರಿಗೆ ಆರೋಗ್ಯ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ನೆರೆದಿದ್ದ ಎಲ್ಲಾ ತಾಯಂದಿರಿಗೆ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ವತಿಯಿಂದ ಪೌಷ್ಟಿಕ ಆಹಾರವನ್ನು ವಿತರಿಸಲಾಯಿತು. ಸಮಾರಂಭವನ್ನು ರೋಟರಿ ಅಧ್ಯಕ್ಷೆ ಕುಸುಮಾ ಮನೋಜ್ ಉದ್ಘಾಟಿಸಿ, ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ರೋಟರಿ ಕ್ಲಬ್ ವತಿಯಿಂದ ಶಿಶುವಿಗೆ ಹಾಲುಣಿಸುವಾಗ ತಾಯಂದಿರು ವಹಿಸಬೇಕಾದ ಎಚ್ಚರಿಕೆ ಕುರಿತು…

Read More

ಕುಂದಾಪ್ರ ಡಾಟ್‌ ಕಾಂ | ಯಾಕೂಬ್ ಖಾದರ್ ಗುಲ್ವಾಡಿ.ಚಿತ್ರರಂಗ ಎನ್ನುವುದು ಬರಿ ವೈಭವದ ಜಗತ್ತಷ್ಟೇ ಅಲ್ಲ; ಅದೊಂದು ಆಳವಾದ ಅಧ್ಯಯನ, ನಿರಂತರ ಚಿಂತನೆ ಮತ್ತು ಸಾಮಾಜಿಕ ಜವಾಬ್ದಾರಿಯ ಮಾಧ್ಯಮ ಎಂಬುದನ್ನು ತಮ್ಮ ಬರವಣಿಗೆ ಹಾಗೂ ನಿರ್ದೇಶನದ ಮೂಲಕ ಸಾಬೀತುಪಡಿಸಿದವರು ಡಾ. ಪ್ರದೀಪ್ ಕುಮಾರ್ ಶೆಟ್ಟಿ ಕೆಂಚನೂರು. ಬಾಲ್ಯದ ಗೆಳೆಯನಾಗಿ, ಅವರ ಈ ಶೈಕ್ಷಣಿಕ ಹಾಗೂ ಸೃಜನಶೀಲ ಹಾದಿಯನ್ನು ಹತ್ತಿರದಿಂದ ಕಂಡ ನನಗೆ, ಇಂದು ಅವನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಡೆಯುತ್ತಿರುವ ಗೌರವಗಳು ಅತ್ಯಂತ ಹೆಮ್ಮೆಯ ಕ್ಷಣಗಳನ್ನು ತಂದಿತ್ತಿವೆ. ಇತ್ತೀಚೆಗಷ್ಟೇ ಪ್ರಕಟಗೊಂಡ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (2024) ಯಲ್ಲಿ, ಡಾ. ಪ್ರದೀಪ್ ಬರಹದ ‘ನಾನಿರುವುದು ನಮಗಾಗಿ ನಾಡಿರುವುದು ನಮಗಾಗಿ: ಕನ್ನಡ ಸಿನಿಮಾದ ತತ್ವ ಮತ್ತು ರಾಜಕೀಯ’(ಮಿರರ್ ಪುಸ್ತಕ, ಕುಂದಾಪುರ) ಪ್ರಕಟಿಸಿರುವ ಕೃತಿಗೆ ಅತ್ಯುನ್ನತ “ಸ್ವರ್ಣ ಕಮಲ” ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಚಲನಚಿತ್ರ ಕುರಿತ ಅತ್ಯುತ್ತಮ ಕೃತಿಗೆ ನೀಡಲಾಗುವ ಈ ಪ್ರಶಸ್ತಿಯು ಕನ್ನಡ ಸಾಹಿತ್ಯ ಲೋಕಕ್ಕೆ ಹಾಗೂ ನಮ್ಮ ಕರಾವಳಿ ಭಾಗಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯ ಮೂಲಕ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ (ಕ್ಯಾಟರಿಂಗ್), ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಹಾಗೂ ಹಸು ಸಾಕಾಣಿಕೆಯಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಒದಗಿಸುತ್ತಿದ್ದು ಯೋಜನೆಯ ಅಡಿಯಲ್ಲಿ 18 ರಿಂದ 65 ವರ್ಷದ ಒಳಗಿನ ಅಭ್ಯರ್ಥಿಗಳಿಗೆ ಕನಿಷ್ಠ 1 ಲಕ್ಷ ಹಾಗೂ ಗರಿಷ್ಠ 2 ಲಕ್ಷಗಳ ರೂ.ಗಳ ಸಾಲ-ಸಹಾಯಧನ ನೀಡಲಾಗುವುದು. ಇದರಲ್ಲಿ ಶೇ.20 ಸಬ್ಸಿಡಿ ಇದ್ದು ಉಳಿಕೆ ಶೇ.80 ಸಾಲದ ಮೊತ್ತಕ್ಕೆ ಶೇ. 4ರಷ್ಟು ಬಡ್ಡಿಯಂತೆ ಒಟ್ಟು 34 ಕಂತುಗಳಲ್ಲಿ ಸಾಲ ಮರು ಪಾವತಿಸಬಹುದಾಗಿದೆ. ಮಹಿಳೆಯರಿಗೆ ಶೇ. 33 ಹಾಗೂ ವಿಶೇಷಚೇತನರಿಗೆ ಶೇ. 5 ಮೀಸಲಾತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು ಆಸಕ್ತರು Ksbdb.karnataka.gov.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8762249230 ಸಂಪರ್ಕಿಸಬಹುದು ಎಂದು…

Read More