ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎನ್. ಪಿ.ನಾರಾಯಣ ಶೆಟ್ಟಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಯೊಂದಿಗೆ ಸಾಕಷ್ಟು ಪ್ರಯತ್ನ ಮತ್ತು ತಯಾರಿ ಬೇಕಾಗುತ್ತದೆ. ಅದಕ್ಕೆ ಪೂರಕವಾಗಿ ನಿಮ್ಮ ಪರಿಶ್ರಮ ಇರಲಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಜಿ. ಎಂ. ಗೊಂಡ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಎಂಬಿಎ ವಿಭಾಗದ ವತಿಯಿಂದ ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಐಆರ್ಎಸ್ ಅಧಿಕಾರಿ ಜಯಪ್ರಕಾಶ್ ರಾವ್ ಮಾತನಾಡಿ, ಯೋಚಿತ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಹಠ ನಮ್ಮಲ್ಲಿ ಬೆಳೆಸಿಕೊಳ್ಳಬೇಕು. ನಮ್ಮ ಜನನಾಯಕರನ್ನು ಆಯ್ಕೆ ಮಾಡುವಾಗ ಅವರು ತಮ್ಮ ಕ್ಷೇತ್ರದಲ್ಲಿ ಯಾವ ಪ್ರಮಾಣದ ಅಭಿವೃದ್ಧಿ ಮಾಡುತ್ತಾರೆ ಎನ್ನುವ ಆಧಾರದ ಮೇಲೆ ಆಯ್ಕೆ ಮಾಡಬೇಕೆ ಹೊರತು ಜಾತಿ, ಧರ್ಮ ನೋಡಿ ಆಯ್ಕೆ ಮಾಡಬಾರದು. ನಮ್ಮ ಭವಿಷ್ಯ ನಮ್ಮ ಕೈಯಲ್ಲಿದೆ ಅದನ್ನು ನಾವೇ ರೂಪಿಸಬೇಕು ಎಂದರು. ಔಪಚಾರಿಕ ಶಿಕ್ಷಣದಲ್ಲಿ ಕಲಿತ ವಿದ್ಯೆಯನ್ನು ನಾವು ಜೀವನದಲ್ಲಿ ಎಷ್ಟು ಅಳವಡಿಸಿಕೊಳ್ಳುತ್ತವೆಯೋ ಅಷ್ಟು ಉನ್ನತಿಯನ್ನು ಹೊಂದಲು ಸಾಧ್ಯ. ನಮಗೆ ಶಿಕ್ಷಣ ನೀಡಿದ ಶಿಕ್ಷಕರಿಗೆ, ಆಹಾರ ಪದಾರ್ಥಗಳನ್ನು ನೀಡುವ ರೈತರಿಗೆ ಮತ್ತು ದೇಶ ಕಾಯುವ ಯೋಧರಿಗೆ ನಾವು ಸದಾ ಕೃತಜ್ಞರಾಗಿರಬೇಕು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟ್ ವಿವೇಕ್ ಆಳ್ವ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಎಂಬಿಏ ವಿಭಾಗದ ಸಂಯೋಜಕಿ ಡಾ. ಕ್ಲಾರೆಟ್ ಮೆಂಡೊನ್ಸಾ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕಶ್ವಿ ಚೆಸ್ ಸ್ಕೂಲ್ನಲ್ಲಿ ಸಾಧಕರಿಗೆ ಶನಿವಾರ ಉತ್ತಮ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಶ್ವಿ ಚೆಸ್ ಸ್ಕೂಲ್ನ ವಿದ್ಯಾರ್ಥಿಗಳಾದ ಬ್ರಹ್ಮಾವರ ಲಿಟಲ್ ರಾಕ್ ಇಂಡಿಯನ್ ಆಂಗ್ಲ ಮಾಧ್ಯಮ ಶಾಲೆಯ ಸನಾ ಶೆಟ್ಟಿ (ಡೈಮಂಡ್ ಗ್ರೂಪ್), ಯುರೋ ಆಂಗ್ಲ ಮಾಧ್ಯಮ ಶಾಲೆ ದಾವಣಗೆರೆ ಯ ನಿಶ್ಚಲ್ ಜಿ. ಎಸ್. (ಗೋಲ್ಡನ್ ಗ್ರೂಪ್) ಬ್ರಹ್ಮಾವರ ಲಿಟಲ್ ರಾಕ್ ಇಂಡಿಯನ್ ಆಂಗ್ಲ ಮಾಧ್ಯಮ ಶಾಲೆಯ ಮನನ್ ಶೆಟ್ಟಿ (ಸಿಲ್ವರ್ ಗ್ರೂಪ್) ಅವರುಗಳ ಸತತ ಪರಿಶ್ರಮ ಮತ್ತು ಚೆಸ್ ಆಟದಲ್ಲಿನ ತಲ್ಲೀನತೆಯನ್ನು ಉತ್ತೇಜಿಸುವ ಸಲುವಾಗಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವ ಕಾರ್ಯ ಪುನರ್ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರಿಗೆ ಹೊಸದಾಗಿ ಆದ್ಯತಾ ಪಡಿತರ ಚೀಟಿ ಹೊಂದಲು ಅವಕಾಶ ಕಲ್ಪಿಸಲಾಗಿದೆ. ಈ ಕೆಳಕಂಡ ಮಾನದಂಡಗಳನ್ನು ಹೊಂದಿರುವವರು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಾಗಿರುವುದಿಲ್ಲ ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ ಮಂಡಳಿಗಳು/ ನಿಗಮಗಳು/ ಸ್ವಾಯತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ / ಸೇವಾ ತೆರಿಗೆ / ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು, ಗ್ರಾಮೀಣ ಭಾಗದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು , ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಆರ್ಥಿಕವಾಗಿ ಸಂಸ್ಥೆಯನ್ನು ಕಟ್ಟಿ ಸದೃಢವಾಗಿ ಬೆಳೆಸಿದ ಸಂಸ್ಥೆಯ ಸ್ಥಾಪಕರು ಹಾಗೂ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದವರನ್ನು ಸ್ಮರಿಸಿಕೊಳ್ಳಬೇಕು. ಸಂಸ್ಥಾಪಕರ ಧ್ಯೇಯೋದ್ದೇಶಗಳನ್ನು ಈಡೇರಿಸುವಲ್ಲಿ ಆಡಳಿತ ವರ್ಗ ಶ್ರಮಿಸಬೇಕು. ಅನೇಕ ಕುಟುಂಬಗಳಿಗೆ ಬೆಳಕಾಗಿ, ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಾ ಸಹಕಾರಿ ರಂಗದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಅಮೃತ ಮಹೋತ್ಸವ ವರ್ಷ ಆಚರಿಸುತ್ತಿರುವುದು ಗ್ರಾಹಕರು ಈ ಸಂಸ್ಥೆಯ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ಸಾಕ್ಷಿಯಾಗಿದೆ ಎಂದು ಸ್ಟೇಟ್ ಬ್ಯಾಂಕಿನ ನಿವೃತ್ತ ಅಧಿಕಾರಿ ಗಣಪತಿ ಶೇರುಗಾರ್ ಗಂಗೊಳ್ಳಿ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ಅಮೃತ ಮಹೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಬ್ಯಾಂಕಿನ ಅಧ್ಯಕ್ಷ ಆನಂದ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ವಾಸುದೇವ ಶೇರುಗಾರ್, ನಿರ್ದೇಶಕರಾದ ಹರೀಶ ಮೇಸ್ತ, ಮಾಧವ ಖಾರ್ವಿ, ಶ್ರೀನಿವಾಸ ಜತ್ತನ್, ಚಂದ್ರಶೇಖರ ಪೂಜಾರಿ, ನಾಗರಾಜ ಪೂಜಾರಿ, ಗೋಪಾಲ ನಾಯ್ಕ್, ಆಶಾಲತಾ, ಯಮುನಾ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯಾರ್ಥಿ ಜೀವನವು ಸೇವಾಭಾವ ಮತ್ತು ಪರಿಸರ ಕಾಳಜಿ ರೂಢಿಸಿಕೊಳ್ಳಲು ಸೂಕ್ತ ಘಟ್ಟ ಎಂದು ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಹೇಳಿದರು. ಅವರು ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವನ್ನು ಈಚೆಗೆ ಉದ್ಘಾಟಿಸಿ ಮಾತನಾಡಿದರು. ಅರಣ್ಯ ಇಲಾಖೆಯಲ್ಲಿ ಇರುವ ಹುದ್ದೆಗಳ ವಿವರ ಮತ್ತು ಉದ್ಯೋಗ ಮಾಹಿತಿ ನೀಡಿದರು.ಪ್ರಾಂಶುಪಾಲ ಡಾ. ರಘು ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಯೋಜನೆ ಘಟಕ–2ರ ಯೋಜನಾಧಿಕಾರಿ ಲತಾ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ಸುಶ್ಮಿತಾ ಸ್ವಾಗತಿಸಿದರು. ರಮ್ಯಾ ನಾಯಕ್ ವಂದಿಸಿದರು. ಸೌಮ್ಯಾ ನಿರೂಪಿಸಿದರು. ಘಟಕ–1ರ ಯೋಜನಾಧಿಕಾರಿ ನಾಗರಾಜ ಶೆಟ್ಟಿ, ಉಪನ್ಯಾಸಕರು, ಘಟಕಗಳ ವಿದ್ಯಾರ್ಥಿ ಸದಸ್ಯರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಸ್ತೆ ಅಪಘಾತದಲ್ಲಿ ಯುವಜನತೆಯೇ ಹೆಚ್ಚು ಸಾವಿಗೀಡಾಗುತ್ತಿರುವುದು ವಿಷಾದನೀಯ, ರಸ್ತೆಯ ಸಾಮಾನ್ಯ ನಿಯಮಗಳಾದ ಹೆಲ್ಮೆಟ್, ಸೀಟ್ಬೆಲ್ಟ್ ಧರಿಸುವುದು, ವೇಗದ ಮಿತಿ ಕಡಿಮೆಗೊಳಿಸುವುದು ಇಂತಹ ಸರಳ ನಿಯಮಗಳ ಮೂಲಕ ಅಮೂಲ್ಯವಾದ ಜೀವನ ರಕ್ಷಣೆಯಾಗಬೇಕು ಎಂದು ಕುಂದಾಪುರ ಸಂಚಾರಿ ಪೊಲೀಸ್ ಅಧಿಕಾರಿಯಾದ ಸುದರ್ಶನ್ ಡಿ. ಎನ್. ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಯೋಜನಾ ಘಟಕ ಆಯೋಜಿಸಿದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಪೊಲೀಸ್ ಉಪನಿರೀಕ್ಷಕ, ಸದಾಶಿವ ಗವರೋಜಿ, ಪೊಲೀಸ್ ಸಿಬ್ಬಂದಿ ನವೀನ್ ಕೊಡ ಸಂಚಾರಿ ನಿಯಮಗಳ ಪಾಲನೆಯ ಅಗತ್ಯತೆಯ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಎನ್.ಎಸ್.ಎಸ್. ಯೋಜನಾಧಿಕಾರಿಯಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಸ್ವಾಗತಿಸಿ, ಕನ್ನಡ ಉಪನ್ಯಾಸಕ ಸುಕುಮಾರ ಶೆಟ್ಟಿ ವಂದಿಸಿದರು. ಎನ್.ಎಸ್.ಎಸ್. ಸಹ ಯೋಜನಾಧಿಕಾರಿಯಾದ ರೇಷ್ಮಾ ಶೆಟ್ಟಿ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಮಾಧ್ಯಮವು ವಿವಿಧ ಆಯಾಮಗಳನ್ನು ಹೊಂದಿರುವುದರಿಂದ ಸಮಾಜದಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಆಳ್ವಾಸ್ ಸ್ನಾತಕೋತ್ತರ ಎಂ.ಕಾಂ ವಿಭಾಗದ ಸಂಯೋಜಕ ಪ್ರೊ. ಪವನ್ ಕಿರಣಕೆರೆ ಹೇಳಿದರು. ಅವರು ಆಳ್ವಾಸ್ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ಫೋರಂ ‘ಅಭಿವ್ಯಕ್ತಿ’ಯ ಪ್ರಸ್ತುತ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಸೂಕ್ಷ್ಮವಾದುದನ್ನು ಸ್ಥೂಲವಾಗಿಸುವುದು ಅಭಿವ್ಯಕ್ತಿ ಅದ್ದರಿಂದ ಸಮಾಜದ ಮುಂದೆ ಅನಾವರಣಗೊಳ್ಳದ ವಿಚಾರಗಳಿಗೆ ಬೆಳಕು ಚೆಲ್ಲುವ ಕೆಲಸ ಮಾಧ್ಯಮದಿಂದಾಗಬೇಕು. ಪ್ರಸ್ತುತ ಮಾರುಕಟ್ಟೆಯಲ್ಲಿ ವೃತ್ತಿಗೆ ಅವಕಾಶವಿದ್ದರೂ ಜನರಲ್ಲಿ ಕೌಶಲ್ಯಗಳ ಕೊರತೆಯಿದೆ. ಪ್ರಶ್ನಿಸುವ ಹವ್ಯಾಸವು ಹೊಸ ಯೋಚನೆಗಳಿಗೆ ದಾರಿಯಾಗುತ್ತದೆ ಇದರಿಂದ ಉದ್ಯೋಗ ಕ್ಷೇತ್ರದಲ್ಲಿ ಬೇಡಿಕೆ ಹೆಚ್ಚುತ್ತದೆ. ಶಿಕ್ಷಣ ಮತ್ತು ಔದ್ಯೋಗಿಕ ಕ್ಷೇತ್ರದ ನಡುವಿನ ಅಂತರವನ್ನು ಭರಿಸಬೇಕಾದರೆ ವಿದ್ಯಾರ್ಥಿಗಳಿಗೆ ತಮ್ಮ ಅಭಿರುಚಿಯನ್ನು ವ್ಯಕ್ತಪಡಿಸಲು ಸೂಕ್ತ ವೇದಿಕೆಗಳ ಅಗತ್ಯವಿದೆಯೆಂದರು. ಕಾರ್ಯಕ್ರಮದಲ್ಲಿ ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ, ಉಪನ್ಯಾಸಕರಾದ ಡಾ. ಸಫಿಯಾ, ಶ್ರೀಗೌರಿ ಜೋಷಿ, ನಿಶಾನ್, ಅಕ್ಷಯ್ ರೈ, ವಿದ್ಯಾರ್ಥಿ ಸಂಘಟಕರಾದ ಚೈತ್ರಾ ಹಾಗೂ ಕೀರ್ತನಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಸಮುದ್ರ ಹಾಗೂ ನದಿ ವ್ಯಾಪ್ತಿಯಲ್ಲಿನ ಹಿನ್ನೀರಿನ ಪ್ರದೇಶದಲ್ಲಿ ಪ್ರವಾಸಿಗರ ಆಕರ್ಷಣೆಗಾಗಿ ತೇಲುವ ರೆಸ್ಟೋರೆಂಟ್ಗಳನ್ನು ಅಭಿವೃದ್ಧಿಪಡಿಸಬಹುದಾಗಿದ್ದು, ಈ ಕುರಿತಂತೆ ಖಾಸಗಿ ಸಂಸ್ಥೆ/ವ್ಯಕ್ತಿಗಳಿಂದ ಆಸಕ್ತಿ ವ್ಯಕ್ತಪಡಿಸುವ ಕುರಿತು ಅರ್ಜಿ ಆಹ್ವಾನಿಸಿ, ನಂತರ ಟೆಂಡರ್ ಕರೆಯುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಲು ಸಾಕಷ್ಟು ಅವಕಾಶಗಳಿದ್ದು, ಪಡುಬಿದ್ರೆಯ ನಂತರ ಕುಂದಾಪುರದ ಕೋಡಿ ಬೀಚ್ನ್ನು ಬ್ಲೂಫ್ಲಾಯಗ್ ಮಾನ್ಯತೆ ಪಡೆಯುವ ಕುರಿತಂತೆ ಅಭಿವೃದ್ಧಿ ಪಡಿಸಲು ಪ್ರಾಥಮಿಕ ಸರ್ವೆ ನಡೆಸಲಾಗಿದೆ. ಪಡುವರಿ ಬೀಚ್ನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ತಯಾರಿಸಲಾಗುತ್ತಿದೆ. ಒತ್ತಿನೆಣೆಯಲ್ಲಿ ಟ್ರೀಪಾರ್ಕ್, ರೆಸ್ಟೋರೆಂಟ್ ಸೇರಿದಂತೆ ವಿವಿಧ ಸೌಲಭ್ಯಗಳುಳ್ಳ ಟೂರಿಸಂ ಹಬ್ ಮಾಡಲು ಮಾಸ್ಟರ್ ಪ್ಲಾನ್ ಮಾಡಲಾಗುತ್ತಿದೆ. ಜಿಲ್ಲೆಯ ಎಲ್ಲಾ ಬೀಚ್ಗಳು ತಮ್ಮದೇ ಆದಾಯದಿಂದ, ಬೀಚ್ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ, ಆರ್ಥಿಕವಾಗಿ ಸಶಕ್ತ ಬೀಚ್ಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಹಾರಾಷ್ಟ್ರದ ಸೊಲ್ಲಾಪುರದಿಂದ ಕಾಸರಗೋಡಿಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾರಿಯನ್ನು ಶುಕ್ರವಾರ ಬೆಳಗಿನ ಜಾವ ತ್ರಾಸಿ ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದ ಪೊಲೀಸರ ತಂಡ 16 ಜಾನುವಾರುಗಳನ್ನು ರಕ್ಷಿಸಿ ವಾಹನದಲ್ಲಿದ್ದ ಹಾಸನದ ನಜರುಲ್ಲಾ (43) ಹಾಗೂ ಮೈಸೂರು ಮೂಲದ ರಾಘವೇಂದ್ರ(25) ಎನ್ನುವವರನ್ನು ವಶಕ್ಕ ಪಡೆದಿದ್ದಾರೆ. ತ್ರಾಸಿ ಜಂಕ್ಷನ್ ಬಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭ ಮಹಾರಾಷ್ಟ್ರ ಕೊಲ್ಲಾಪುರದಿಂದ ಮಂಗಳೂರಿಗೆ ಲಾರಿಯಲ್ಲಿ ಸಾಗಿಸುತ್ತಿದ್ದ 18 ಎತ್ತುಗಳನ್ನು ಕೊಂಡೊಯ್ಯುತ್ತಿರುವುದು ಗಮನಕ್ಕೆ ಬರುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕರನನ್ನು ವಶಕ್ಕೆ ಪಡೆದು ವಾಹನವನ್ನು ಮುಟ್ಟುಗೊಲು ಹಾಕಿಕೊಳ್ಳಲಾಗಿದೆ. ಲಾರಿಯಲ್ಲಿದ್ದ ಎತ್ತುಗಳಲ್ಲಿ ಎರಡು ಎತ್ತುಗಳು ಮೃತಪಟ್ಟಿವೆ. 16 ಗೋವುಗಳನ್ನು ರಕ್ಷಿಸಲಾಗಿದೆ. ಖಚಿತ ಮಾಹಿತಿ ಆಧರಿಸಿ ತಪಾಸಣೆ ನಡೆಸಿದ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ ಹಾಗೂ ಬೈಂದೂರು ಸರ್ಕಲ್ ಇನಸ್ಪೆಕ್ಟರ್ ಸಂತೋಷ ಕಾಯ್ಕಿಣಿ ಹಾಗೂ ಸಿಬ್ಬಂದಿಗಳ ತಂಡದ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
