ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಚುನಾವಣೆ ನಡೆಯುವ ಗ್ರಾಮ ಪಂಚಾಯತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು,ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು , ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ,ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು,ರಾಷ್ಟ್ರೀಕ್ರತ ಹಾಗೂ ಇತರ ಬ್ಯಾಂಕುಗಳು ,ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಬ್ಲಿಷ್‌ಮೆಂಟ್‌ಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿಸೆಂಬರ್ 22ರಂದು ಕರ್ನಾಟಕ ಪಂಚಾಯತ್ ರಾಜ್ ಚುನಾವಣೆಯನ್ನು ನಡೆಸುವ ನಿಯಮಗಳು, 1993ರ ನಿಯಮ 114ನ್ನು ಪ್ರಜಾ ಪ್ರತಿನಿಧಿ ಕಾಯ್ದೆ 1954ರ ಸೆಕ್ಷನ್ -135ಬಿ ರಡಿಯಲ್ಲಿ ವೇತನಸಹಿತ ರಜೆಯನ್ನು ಘೋಷಿಸಿದೆ. ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ, ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಾಲಾಡಿ ಲಕ್ಷ್ಮಿದೇವಿ ವಾಸುದೇವ ಕಾಮತ್ ಅವರ ಮನೆಯಲ್ಲಿ ಮನೆ ಭಜನಾ ಮಂಡಳಿಯವರ 184ನೇ ಮನೆ ಮನೆ ಭಜನಾ ಸಂಗಮ ಕಾರ್ಯಕ್ರಮವು ಅಧ್ಯಕ್ಷ ಹರೀಶ್ ಭಂಡಾರಿಯವರ ನೇತೃತ್ವದಲ್ಲಿ ನೆರವೇರಿತು. ಭಜನಾ ಸಂಗಮದ ಪರವಾಗಿ ಅಧ್ಯಕ್ಷೆ ಲಕ್ಷ್ಮಿದೇವಿ ಹಿತನುಡಿಗಳನ್ನಾಡಿ ಹರೀಶ್ ಭಂಡಾರಿಯವರಿಗೆ ಶಾಲು ಹೊದಿಸಿ ಗೌರವಿಸಿದರು. ಇತರ ಸದಸ್ಯರಿಗೆ ಪ್ರೀತಿಯ ಸ್ಮರಣಿಕೆಗಳನ್ನು ನೀಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕಾಲೇಜು ಬೋಧಕ-ಬೋಧಕೇತರ ಸಿಬ್ಬಂದಿ ಸಂಘದ ವಾರ್ಷಿಕ ಸಭೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಮಾತನಾಡಿ, ಸಿಬ್ಬಂದಿ ವರ್ಗದವರು ಪರಸ್ಪರ ಅನ್ಯೋನ್ಯವಾಗಿರುವುದರ ಮೂಲಕ ಪ್ರತಿಯೊಬ್ಬರ ಸುಖ – ದುಃಖಗಳಲ್ಲಿ ಭಾಗಿಗಳಾಗಬೇಕು. ಸಹೋದ್ಯೋಗಿಗಳು ಮಾಡಿದ ಸಾಧನೆಯನ್ನು ಗುರುತಿಸುವುದರ ಜೊತೆಗೆ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಮೂಲಕ ಮಾದರಿ ಸಂಘವಾಗಬೇಕು ಎಂದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ಬೋಧಕ-ಬೋಧಕೇತರ ಸಂಘದ ಕಾರ್ಯದರ್ಶಿ ಸತೀಶ್ ಕಾಂಚನ್ ಆನಗಳ್ಳಿ ವಾರ್ಷಿಕ ವರದಿ ವಾಚಿಸಿದರು. ಕಛೇರಿ ಮೇಲ್ವಿಚಾರಕಿ ಗಾಯತ್ರಿ ಶೇಟ್ ವಂದಿಸಿದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ವಿನಿತಾ ಎಸ್. ಗಾಣಿಗ ನಿರೂಪಿಸಿದರು. ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗೋಲಿ ಕಲೆ ಆದಿ ಮಾನವರ ಕಾಲದಲ್ಲಿ ಆರಂಭವಾಗಿ ಈವರೆಗೆ ವಿಕಸನ ಮತ್ತು ಪರಿಷ್ಕರಣೆಗೊಳ್ಳುತ್ತ ಬಂದಿದೆ. ಅದು ಮನುಷ್ಯನ ಭಾಷೆ ಮತ್ತು ಮಾತಿನ ಹುಟ್ಟಿಗಿಂತ ಹಿಂದಿನ ಅಭಿವ್ಯಕ್ತಿ ಮಾಧ್ಯಮವಾಗಿತ್ತು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ವಿಭಾಗ ಮುಖ್ಯಸ್ಥ ಡಾ. ಚೆಲುವರಾಜು ಹೇಳಿದರು. ಮರವಂತೆಯಲ್ಲಿ ಅವರು ಕನ್ನಡ ಜಾನಪದ ಪರಿಷತ್ತಿನ ಅಂಗ ಸಂಸ್ಥೆಯಾಗಿ ಆರಂಭಗೊಂಡ ರಂಗೋಲಿ ಕಲಾ ಪರಿಷತ್ತು ಉದ್ಘಾಟಿಸಿ ಅವರು ಮಾತನಾಡಿದರು. ‘ರಂಗೋಲಿ ಮೂಲತಃ ರೇಖೆಗಳಿಂದ ಆರಂಭವಾಗಿ, ಆಕೃತಿಗಳಲ್ಲಿ ಮೈದಳೆಯುತ್ತ ಬೆಳೆಯಿತು ನಾವು ಈಗ ಬಳಸುವ ಹಲವು ಚಿಹ್ನೆಗಳ ಮೂಲ ರಂಗೋಲಿ. ರೇಖಾ ಸಂಸ್ಕೃತಿ ರಾಮಾಯಣ, ಮಹಾಭಾರತ ಕಾಲದಲ್ಲೂಇತ್ತುಎನ್ನುವುದಕ್ಕೆನಿದರ್ಶನಗಳಿವೆ. ಇಂದು ಬಳಕೆಯಾಗುತ್ತಿರುವ ನಾಗಮಂಡಲದಂತಹ ಧಾರ್ಮಿಕ ಆಚರಣೆಗಳಲ್ಲಿ ರಂಗೋಲಿ ಸಂಸ್ಕೃತಿ ಇದೆ. ಈ ಕಲೆಯನ್ನು ಅಧ್ಯಯನ ಮಾಡಿ ಡಾಕ್ಟರೇಟ್ ಗಳಿಸಿ, ರಾಜ್ಯ ಜಾನಪದ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕಿ ಆಗಿರುವ ಡಾ. ಭಾರತಿ ಮರವಂತೆ ಅವರ ನೇತ್ರತ್ವದಲ್ಲಿ ಆರಂಭವಾದ ರಂಗೋಲಿ ಕಲಾ ಪರಿಷತ್ತು ಅದಕ್ಕೆ ವಿಶ್ವ ಮಾನ್ಯತೆ ತಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಎಂಬಿಎ ವಿಭಾಗ ಆಯೋಜಿಸಿದ್ದ ಮಂಗಳೂರು ಎಪಿಎಂಸಿ ಕ್ಷೇತ್ರ ಭೇಟಿಯ ವರದಿ ಮಂಡನೆಯ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಮಂಗಳೂರು ಎಪಿಎಂಸಿ ಅಧ್ಯಕ್ಷ ಕೃಷ್ಣರಾಜ್ ಹೆಗ್ಡೆ, ಇಂದಿನ ಯುವ ಪೀಳಿಗೆಯ ಮುಂದೆ ದೊಡ್ಡ ಗುರಿ ಇದ್ದು, ಅದಕ್ಕೆ ತಕ್ಕಂತೆ ಅವರು ತಮ್ಮನ್ನು ತಯಾರಿ ಮಾಡಿಕೊಳ್ಳುತ್ತಿದ್ದು, ಇದು ನಮ್ಮ ಪೀಳಿಗೆ ಹಾಗೂ ಇಂದಿನ ಪೀಳಿಗೆಗಿರುವ ದೊಡ್ಡ ವ್ಯತ್ಯಾಸವಾಗಿದೆ. ಶಾಲೆ ಎಂಬುದು ನಮ್ಮ ಸ್ಪೂರ್ತಿಯನ್ನು ಹೆಚ್ಚಿಸುವ ಸೆಲೆ. ಆ ಹಿನ್ನಲೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆ ಗುಣಮಟ್ಟದ ಶಿಕ್ಷಣ ನೀಡಿ ಸಮಾಜಕ್ಕೆ ಉತ್ತಮ ವಿದ್ಯಾರ್ಥಿಗಳನ್ನು ನೀಡುತ್ತಿದೆ ಎಂದರು. ಕೃಷಿ ಉತ್ಪನ್ನಗಳನ್ನು ತಂದ ರೈತರಿಗೆ ಶೋಷಣೆಯಾಗದಂತೆ, ಅವರಿಗೆ ಸೂಕ್ತ ಮೌಲ್ಯ ಹಾಗೂ ಭದ್ರತೆ ಒದಗಿಸುವ ವೇದಿಕೆಯಾಗಿ ಕೃಷಿ ಉತ್ಪನ್ನ ಮಾರಾಟ ಮಂಡಳಿ ಕೆಲಸ ಮಾಡುತ್ತದೆ. ಎಪಿಎಂಸಿ ವ್ಯಾಪ್ತಿಯಲ್ಲಿ ವ್ಯವಹಾರ ನಡೆಸಿದರೆ ಪ್ರತಿ ವ್ಯವಹಾರದ ಮೇಲೆ ಎಪಿಎಂಸಿ ಚುನಾಯಿತ ಆಡಳಿತ ನಿಗಾ ಇಡಬಹುದಾಗಿದೆ.ಇಲ್ಲಿ ರೈತನಿಗೆ ಮೋಸ ಆಗುವ ಪ್ರಮೇಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಟೆಂಪೊ, ರಿಕ್ಷಾ, ಟ್ಯಾಕ್ಸಿ ಮಾಲಕರ ಮತ್ತು ಚಾಲಕರ ವಿವಿದೋದ್ದೇಶ ಸಹಕಾರಿ ಸಂಘ ಬೈಂದೂರು ಇದರ ವಾರ್ಷಿಕ ಮಹಾಸಭೆ ಶನಿವಾರ ಇಲ್ಲಿನ ರೋಟರಿ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ ಮಾತನಾಡಿ, ಸಂಘದ ಬೆಳವಣಿಗೆ ಉತ್ತಮ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಮತ್ತು ಸಕಾಲದಲ್ಲಿ ಸಾಲ ಮರುಪಾವತಿಸುವ ಬಗ್ಗೆ ಹೇಳಿದರು. ಈ ಸಂದರ್ಭ ನಿರ್ದೇಶಕರಾದ ಮಹಾಬಲ ದೇವಾಡಿಗ, ಪ್ರವೀಣ್ ಕುಮಾರ್, ಮೂಡೂರ ಪೂಜಾರಿ ಯಡ್ತರೆ, ಮಧುಕರ್ ಶೇಟ್, ಮೂಡೂರ ಪೂಜಾರಿ ನೀರ್ಗದ್ದೆ, ಟಿ. ವಿಜಯ, ಮಲ್ಲಿಕಾ ಎ. ಪೂಜಾರಿ, ಗಂಗಾವತಿ ಉಪಸ್ಥಿತರಿದ್ದರು ಕಾರ್ಯದರ್ಶಿ ಸುರೇಶ ಹುದಾರ್ ಲೆಕ್ಕ ಪತ್ರ ಮಂಡನೆ ಮಾಡಿದರು ನಿರ್ದೇಶಕ ಸಂದೀಪ್ ಸ್ವಾಗತಿಸಿದರು. ಉಪದ್ಯಕ್ಷರಾದ ವೆಂಕಟೇಶ್ ಪೂಜಾರಿ ವಂದಿಸಿದರು
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಡಿ. 22 ಮತ್ತು ಡಿ. 27 ರಂದು ಚುನಾವಣೆ ನಡೆಯಲಿದ್ದು, ಮತದಾನದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮತ್ತು ಸಾರ್ವಜನಿಕರು ಮತ ಹಾಕಲು ಅನುಕೂಲವಾಗುವಂತೆ ಜಿಲ್ಲೆಯ ಈ ಕೆಳಕಂಡ ತಾಲೂಕಿನ ಚುನಾವಣೆ ನಡೆಯಲಿರುವ ಗ್ರಾಮಪಂಚಾಯತ್‌ನ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಅಡಿಯಲ್ಲಿ ಚುನಾವಣೆ ನಡೆಯುವ ದಿನಗಳಂದು ಸಂತೆ ಮತ್ತು ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ. ಡಿ. 22 ರ ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ಬೈಂದೂರು ತಾಲೂಕು ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಪ್ಪುಂದ ಗ್ರಾಮದ ವಾರದ ಸಂತೆ, ಬ್ರಹ್ಮಾವರ ತಾಲೂಕು ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುದ್ದೂರಿನಲ್ಲಿ ನಡೆಯುವ ಸಂತೆ, ಉಪ್ಪೂರು ಗ್ರಾಮ ಪಂಚಾಯತ್‌ನ ಕೊಳಲಗಿರಿ ಪ್ರದೇಶದಲ್ಲಿ ನಡೆಯುವ ಸಂತೆಯನ್ನು ನಿಷೇಧಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆಯು ನಾವುಂದದ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಇಂದು ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಮಾತನಾಡಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಹಿಂದಿನ ಸಾಲಿನಲ್ಲಿ ರೂ 200 ಕೋಟಿಗೂ ಮಿಕ್ಕಿದ ವ್ಯವಹಾರ ನಡೆಸಿ, ರೂ 70. 09 ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ 10 ಡಿವಿಡೆಂಡ್ ನೀಡಲು ಉದ್ದೇಶಿಸಲಾಗಿದೆ. ಸಂಘವು ಹಿಂದಿನ ಸಾಲಿನಲ್ಲಿ ರೂ 32.73 ಕೋಟಿ ಠೇವಣಿ ಹೊಂದಿತ್ತು. ಸದಸ್ಯರಿಗೆ ರೂ 30.51 ಕೋಟಿ ಸಾಲ ನೀಡಿದೆ. ಅದರಲ್ಲಿ ಕೃಷಿ ಸಾಲದ ಮೊತ್ತ ರೂ 6.1 ಕೋಟಿ. ಸಂಘ ನಡೆಸಿದ ವ್ಯಾಪಾರದಿಂದ ರೂ 10.3 ಲಕ್ಷ ಲಾಭ ದೊರಕಿದೆ. ಸಂಘವು 205 ಸ್ವಸಹಾಯ ಸಂಘಗಳನ್ನು ರಚಿಸಿದ್ದು, ಅವು ರೂ 50.11 ಲಕ್ಷ ಠೇವಣಿ ಸಂಗ್ರಹಿಸಿವೆ ಎಂದರು. ನಾವುಂದದಲ್ಲಿರುವ ಸಂಘದ ಪ್ರಧಾನ ಕಚೇರಿ, ಹೇರೂರು, ಬಡಾಕೆರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೈಮಗ್ಗ ಮತ್ತು ಜವಳಿ ಇಲಾಖೆಯ ನೂತನ ಜವಳಿ ನೀತಿ ಯೋಜನೆಯಡಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಅಪರೇಟರ್ ತರಬೇತಿ ಪಡೆದ ಸಾಮಾನ್ಯ/ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮಹಿಳಾ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಖರೀದಿಸಲು ಶೇ.50 ರಷ್ಟು ಸಹಾಯಧನದೊಂದಿಗೆ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ನಿಧಿ ಯೋಜನೆಯನ್ನು ಮುಂದುವರಿಸಲಾಗಿದೆ. ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡಲಾಗದ ಗ್ರಾಮೀಣ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ರೂ. 30,000 ಘಟಕ ವೆಚ್ಚದಲ್ಲಿ ಒಂದು ಇಂಡಸ್ಟ್ರಿಯಲ್ ಹೊಲಿಗೆ ಯಂತ್ರ ಖರೀದಿಸಲು ಶೇ. 50 ರಷ್ಟು ಸಹಾಯಧನ ಒದಗಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ರಜತಾದ್ರಿ, ಮಣಿಪಾಲ, ಮೊಬೈಲ್ ಸಂಖ್ಯೆ: 9481628584 ನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಲಿಗೆ ಸರಪಳಿ ಕಟ್ಟಿಕೊಂಡು ಪದ್ಮಾಸನ ಭಂಗಿಯಲ್ಲಿ ಸಮುದ್ರದಲ್ಲಿ ಯಶಸ್ವಿಯಾಗಿ ಒಂದು ಕಿ.ಮೀ. ಈಜಿರುವ ಗುಜ್ಜಾಡಿ ಗ್ರಾಮದ ಕಂಚುಗೋಡಿನ ಶಿಕ್ಷಕ ನಾಗರಾಜ ಖಾರ್ವಿ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲೆ ಬರೆದಿದ್ದಾರೆ. ಮಂಗಳೂರಿನ ತಣ್ಣೀರುಬಾವಿ ಬೀಚ್‌ನಲ್ಲಿ ಶುಕ್ರವಾರ ಬೆಳಿಗ್ಗೆ 25 ನಿಮಿಷ 16 ಸೆಕೆಂಡ್ 63 ಫ್ರಾಕ್ಷನ್‌ನಲ್ಲಿ ಒಂದು ಕಿ.ಮೀ ಈಜುವ ಮೂಲಕ ಅವರು ಗುರಿ ತಲುಪಿದರು. ಬೆಳಿಗ್ಗೆ8.55ಕ್ಕೆ ತಣ್ಣೀರುಬಾವಿಯ ದಡದಿಂದ ಈಜು ಆರಂಭಿಸಿದ ನಾಗರಾಜ ಖಾರ್ವಿ, 9.20ಕ್ಕೆ ಮರಳಿ ದಡಸೇರಿದರು. ಸಾಧನೆಗಾಗಿ ತಣ್ಣೀರುಬಾವಿ ಬೀಚ್ ಅನ್ನು ಆಯ್ದುಕೊಂಡ ನಾಗರಾಜ ಖಾರ್ವಿ ಸಮುದ್ರದಲ್ಲಿ ಬೆಳಗಿನ ಗಾಳಿ ಉತ್ತರದ ಕಡೆಗಿದ್ದರೂ, ತಮ್ಮ ಸಂಪೂರ್ಣ ಶಕ್ತಿ ಬಳಸಿ ದಕ್ಷಿಣದ ಕಡೆಗೆ ನೆಟ್ಟಿದ್ದ ಧ್ವಜವನ್ನು ತಲುಪಿ ಗುರಿ ಮುಟ್ಟಿದರು ಎಂದು ತರಬೇತುದಾರ ಬಿ.ಕೃಷ್ಣ ನಾಯ್ಕ್ ಹೇಳಿದರು. ‘ಧರ್ಮಸ್ಥಳದ ಶಾಂತಿವನದಲ್ಲಿ ಯೋಗ ಕಲಿತು, ಪದ್ಮಾಸನ ಹಾಕಿ ನೀರಿನಲ್ಲಿ ಈಜುತ್ತಾ ಅಭ್ಯಾಸ ಮಾಡಿದೆ. ಸತತ ಅಭ್ಯಾಸ ಮಾಡಿ, ನೀರಿನ ಮೇಲೆ ತೇಲಲು…
