ಕುಂದಾಪ್ರ ಡಾಟ್ ಕಾಂ ಸುದ್ದಿ ಕನ್ನಡ ಮಾಧ್ಯಮದಲ್ಲಿ ಹತ್ತನೇ ತರಗತಿಯವರೆಗೆ ಕಲಿತು ಬಳಿಕ ಇತರ ಪದವಿಗಳನ್ನು ಪಡೆದವರಿಗೆ ಡಿಸೆಂಬರ್ 3, 2017 ರಂದು ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಉದ್ಯೋಗಸಿರಿ” ವಿಶೇಷ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗಸಿರಿಯು ಆಳ್ವಾಸ್ ನುಡಿಸಿರಿಯ ಹಿನ್ನೆಲೆಯಲ್ಲಿ ವಿಶೇಷ ಮಹತ್ವ ಪಡೆದಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರಿಯು ಕಳೆದ ಹದಿನಾಲ್ಕು ವರ್ಷಗಳಿಂದ ಸಾಹಿತ್ಯಿಕ , ಬೌದ್ಧಿಕ , ಸಾಂಸ್ಕೃತಿಕ ಮತ್ತು ವೈಚಾರಿಕ – ಹೀಗೆ ವಿವಿಧ ಆಯಾಮಗಳಲ್ಲಿ ನಡೆಸಿಕೊಂಡು ಬರುತ್ತಿರುವ ” ಆಳ್ವಾಸ್ ನುಡಿಸಿರಿ ” ಸಮ್ಮೇಳನವು ರಾಷ್ಟ್ರೀಯ ನಾಡು – ನುಡಿಯ ಉತ್ಸವವಾಗಿದೆ . ಈ ನಿಟ್ಟಿನಲ್ಲಿ ಆಳ್ವಾಸ್ ನುಡಿಸಿರಿಯ ಪ್ರಯುಕ್ತ, ಕನ್ನಡ ಮಾಧ್ಯಮದಲ್ಲಿ ಒಂದರಿಂದ ಹತ್ತನೇ ತರಗತಿಯವರೆಗೆ ಕಲಿತು ತದನಂತರ ಇತರೆ ಪದವಿಗಳನ್ನು (ಡಿಗ್ರಿ, ಸ್ನಾತಕೋತ್ತರ , ಇತ್ಯಾದಿ ) ಪಡೆದ ಅಭ್ಯರ್ಥಿ ಗಳಿಗೆ ಡಿಸೆಂಬರ್ 3 ರಂದು ವಿಶೇಷ ಉದ್ಯೋಗ ಮೇಳವನ್ನು ನಡೆಸಲು ನಿರ್ಧರಿಸಲಾಗಿದೆ. ಉದ್ಯೋಗಸಿರಿಯು ಮಹತ್ತರ ಉದ್ದೇಶದ ಈಡೇರಿಕೆಗಾಗಿ ನಡೆಸಲ್ಪಡುವುದರಿಂದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಇಲ್ಲಿನ ಶ್ರೀ ಕುಂದೇಶ್ವರ ದೇವಸ್ಥಾನ ದೀಪೋತ್ಸವಕ್ಕೆ ಸಹಸ್ರಾರು ಭಕ್ತರ ಸಾಕ್ಷಿಯಾದರು. ಶುಕ್ರವಾರ ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಿದ್ದು, ಸಂಜೆ ಪ್ರಣತಿ ದೀಪ ಬೆಳಗಿಸಲು ಸಹಸ್ರಾರು ಭಕ್ತರು ಕೈಜೋಡಿಸಿದರು. ಹಣತೆಯಿಂದ ಹಣತೆಗೆ ದೀಪ ಬೆಳಗಿಸಿ ಸಂಭ್ರಮಿಸಿದರು. ಶ್ರೀ ಕುಂದೇಶ್ವರ ದೇವಸ್ಥಾನಕ್ಕೆ ಐತಿಹಾಸಿಕ ಹಿನ್ನೆಲೆಯಿದ್ದು, ಕುಂದೇಶ್ವರ ರಾಜ ದೇವಸ್ಥಾನ ಪ್ರತಿಷ್ಠಾಪನೆ ಮಾಡಿದ್ದರಿಂದ ಕುಂದೇಶ್ವರ ಎಂಬ ಹೆಸರು ಬರಲು ಕಾರಣ ಎಂಬ ನಂಬಿಕೆಯಿದೆ. ಪ್ರಾತಕಾಲ ಪೂಜೆ, ರುದ್ರಾಭಿಷೇಕ ಹಾಗೂ ಶಿವನಿಗೆ ಪ್ರಿಯವಾದ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದಿದ್ದು, ಮಧ್ಯಾಹ್ನ ಮಹಾ ಅನ್ನಸಂತರ್ಣೆ ಕೂಡಾ ನಡೆಯಿತು. ಕುಂದೇಶ್ವರ ದೇವಸ್ಥಾನ ಬೀದಿ ದೀಪಾಲಂಕೃತವಾಗಿದ್ದು, ದೇವಸ್ಥಾನಕ್ಕೆ ಅಳವಡಿಸಿದ ಬಣ್ಣದ ದೀಪಗಳಿಂದ ಮತ್ತಷ್ಟು ಮೆರಗು ಬಂದಿತ್ತು. ಕುಂದೇಶ್ವರ ದೇವಸ್ಥಾನ ಪುಷ್ಕ್ಕರಣಿಗೆ ವಿಶೇಷ ವಿದ್ಯುತ್ ದೀಪ ಅಲಂಕಾರ ಮಾಡಿದ್ದು, ಪುಸ್ಕರಣಿಗೊಂದು ಹೊಸ ಕಳೆ ಮೂಡಿಸಿತ್ತು. ಹಾಗೆ ದೇವಸ್ಥಾನ ಬಳಿ ಇರುವ ಅಶ್ವಥಕಟ್ಟೆ ಬಳಿ ನಿರ್ಮಿಸಿದ ಬೃಹತ್ ಆಂಜನೇಯ ಮೂರ್ತಿ ಎಲ್ಲರ ಆಕರ್ಷಿಣೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 64ನೇ ಅಖಿಲ ಭಾರತ ಸಹಕಾರ ಸಪ್ತಾಹ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ, ಕಳೆದ 23 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿದ ಅಪೂರ್ವ ಸೇವೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರಿಗೆ ರಾಜ್ಯ ಮಟ್ಟದ ’ಉತ್ತಮ ಸಹಕಾರಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಾಗಲಕೋಟೆಯ ಕಲಾಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರಿ ಪತ್ತಿನ ಮಹಾಮಂಡಲ ಬೆಂಗಳೂರು ಆಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಮಾಜಿ ಸಚಿವ ಹೆಚ್. ವೈ ಮೇಟಿ ಅವರು ಉತ್ತಮ ಸಹಕಾರಿ ಪ್ರಶಸ್ತಿ ಪ್ರದಾನ ಮಾಡಿದರು. ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಅಜೆಯ ಕುಮಾರ್ ಸರ್ ನಾಯಕ್, ಕರ್ನಾಟಕ ರಾಜ್ಯ ಸಹಕಾರಿ ಪತ್ತಿನ ಸಂಘಗಳ ಮಹಾಮಂಡಲದ ಅಧ್ಯಕ್ಷ ಸಿ.ಎಂ ಮರೇಗೌಡ, ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಲ ನಿ. ಅಧ್ಯಕ್ಷ ಡಾ ಶೇಖರ ಗೌಡ ಮಾಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವ್ಯಂಗ್ಯಚಿತ್ರಕಾರರಲ್ಲಿ ವಿಶೇಷವಾದ ಪ್ರತಿಭೆಯಿದ್ದು, ಅವರ ಸಮಾಜವನ್ನು ಭಿನ್ನವಾದ ಆಯಾಮದಿಂದ ನೋಡಿ ರೇಖೆಗಳ ಮೂಲಕ ತಮ್ಮ ಆಲೋಚನೆಯನ್ನು ಹರಿಬಿಡುತ್ತಾರೆ ಎಂದು ಖ್ಯಾತ ಸ್ತ್ರೀ ರೋಗ-ಹೆರಿಗೆ ತಜ್ಞೆ ಡಾ. ಪ್ರಮೀಳಾ ನಾಯಕ್ ಹೇಳಿದರು. ಇಲ್ಲಿನ ಕಲಾಮಂದಿರದಲ್ಲಿ ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಟೂನು ಹಬ್ಬದಲ್ಲಿ ಸೈಂಟ್ ಮೇರಿಸ್ ಶಾಲೆ ೧೯೮೫-೮೬ ಬ್ಯಾಚ್ ಹಳೆ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಹಮ್ಮಿಕೊಂಡ ಕ್ಯಾರಿಕೇಚರ್ ಚಿತ್ರಿಸಿ ಸೈಂಟ್ ಮೇರಿಸ್ ಕನ್ನಡ ಮಾಧ್ಯಮ ಶಾಲೆಗೆ ನಿಧಿ ಸಂಗ್ರಹಿಸುವ ಕಾರ್ಯಕ್ರಮ ಚಿತ್ರನಿಧಿಗೆ ಚಾಲನೆ ನೀಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಬುದಾಬಿ ಪ್ರೊಗ್ರೆಸ್ಸಿವ್ ಟೆಕ್ನಾಲಜಿ ಸರ್ವಿಸಸ್ನ ಮಹಮ್ಮದ್ ಅನ್ಸಾರ್, ವರದಿಗಾರ ಚಂದ್ರಶೇಖರ ಬೀಜಾಡಿ ಉಪಸ್ಥಿತರಿದ್ದರು. ಖ್ಯಾತ ಹೃದ್ರೋಗ ತಜ್ಞ ಡಾ. ಜಯಶಂಕರ್ ಮಾರ್ಲ ಹಾಗೂ ಖ್ಯಾತ ಮೂತ್ರಪಿಂಡತಜ್ಞ ಡಾ. ಇಸ್ತಿಯಾಕ್ ಅವರನ್ನು ಗೌರವಿಸಲಾಯಿತು. ಕಾರ್ಟೂನಿಷ್ಠ್ ಸತೀಶ್ ಆಚಾರ್ಯ ಅವರು ಡಾ. ಪ್ರಮೀಳಾ ನಾಯಕ್ ಅವರ ಪ್ರಥಮ ಲೈವ್ ಕ್ಯಾರಿಕೇಚರ್ ಚಿತ್ರಿಸಿದರು. ವಕೀಲ ರವಿಕುಮಾರ್ ಗಂಗೊಳ್ಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶದ ಕಾನೂನು 18ನೇ ಶತಮಾನದಲ್ಲಿದ್ದರೇ, ಮನುಷ್ಯನ ಮನಸ್ಥಿತಿ 19ನೇ ಶತಮಾನದಲ್ಲಿದೆ. ಆದರೆ ಆತನ ಆಕಾಂಕ್ಷೆಗಳು 21ನೇ ಶತಮಾನದಲ್ಲಿದೆ. ಈ ಮೂರರ ತಿಕ್ಕಾಟದ ನಡುವೆ ಸಮಾಜವಿದೆ. ಬದಲಾದ ಸಮಾಜಕ್ಕೆ ತಕ್ಕಂತೆ ಸೈಬರ್ ಕ್ರೈಮ್ ಕಾನೂನು ಕೂಡ ಪ್ರಬಲವಾಗಿ ರೂಪುಗೊಂಡಿಲ್ಲ. ಸುಪ್ರಿಂ ಕೋರ್ಟ್ ಪಾರ್ಲಿಮೆಂಟ್ಗೆ ಕಾನೂನು ರಚಿಸಲು ನಿರ್ದೇಶನ ನೀಡಿದೆಯಾದರೂ, ಅಲ್ಲಿಯ ತನಕ ಅಸಹಾಯಕರಾಗಿ ಇರಬೇಕಾದ ಅನಿವಾರ್ಯತೆ ಇದೆ ಎಂದು ಚಿಕ್ಕಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಹೇಳಿದರು. ಅವರು ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರ ಆಶ್ರಯದಲ್ಲಿ, ಕುಂದಾಪುರ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಹಯೋಗದೊಂದಿಗೆ ಇಲ್ಲಿನ ಕಲಾಮಂದಿರದಲ್ಲಿ ಶುಕ್ರವಾರ ಜರುಗಿದ ಕಾರ್ಟೂನು ಹಬ್ಬದಲ್ಲಿ ಸೈಬರ್ ಖಬರ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಇಂದಿನ ಏಳು ನಿಮಿಷದಲ್ಲಿ ಆಗುತ್ತಿದ್ದ ಡಾಟಾ ವರ್ಗಾವಣೆ ನೂರು ವರ್ಷದ ಹಿಂದೆ ವರ್ಗಾವಣೆ ಆಗಲು ೩೫ ವರ್ಷ ಬೇಕಾಗುತ್ತಿತ್ತು. ಅಷ್ಟು ವೇಗದಲ್ಲಿ ಜಗತ್ತು ಸಾಗುತ್ತಿದೆ. ಒಂದು ಗಂಟೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಸ್ತು, ನಿಷ್ಠೆ, ಪ್ರಾಮಾಣೆಕತೆಯ ಹಾದಿಯಲ್ಲಿ ಸಾಗಿದಾಗ ಮಹತ್ತರವಾದ ಸಾಧನೆಯನ್ನು ಮಾಡಲು ಸಾಧ್ಯ ಎಂಬುವುದಕ್ಕೆ ವಿದ್ಯಾರಂಗ ಮಿತ್ರ ಮಂಡಳಿಯು ಸಾಕ್ಷಿಯಾಗಿದ್ದು, ಸಮಾಜದಲ್ಲಿ ಪರಿವರ್ತನೆ ತರುವ ಹಾಗೂ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಪ್ರಗತಿ ಕಾಣುವ ಆಶಯದ ಹೆಜ್ಜೆಗಳಲ್ಲಿ ಗಮನಾರ್ಹ ಸಾಧನೆ ಮಾಡಿರುವುದು ಪ್ರಶಂಸನೀಯ ಎಂದು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ.ಕಿಶೋರ್ ಕುಮಾರ್ ಕುಂದಾಪುರ ಹೇಳಿದರು. ಅವರು ಕುಂದಾಪುರ ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನದ ಸಭಾಂಗಣದಲ್ಲಿ ಕುಂದಾಪುರದ ವಿದ್ಯಾರಂಗ ಮಿತ್ರ ಮಂಡಳಿ (ರಿ.) ಸುವರ್ಣ ಮಹೋತ್ಸವ ಸಮಿತಿಯ ಪದಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮುಖ್ಯ ಅತಿಥಿ ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಕಾಸ್ ಹೆಗ್ಡೆ ಮಾತನಾಡಿ ಸಮಾಜದ ಒಟ್ಟಾರೆ ಬೆಳವಣಿಗೆಗೆ ಪ್ರತಿಯೊಬ್ಬರ ಕೊಡುಗೆ ಅವಶ್ಯಕ. ಸಮಾಜದ ಬೆಳಕಾಗಿ ಉತ್ತಮ ಕಾರ್ಯ ಮಾಡುತ್ತಿರುವ ಸಂಸ್ಥೆಗೆ ಸರಕಾರದಿಂದ ಸಿಗಬಹುದಾದ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಕುಂದಾಪುರ ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನದ ಅಧ್ಯಕ್ಷ ಜಯಾನಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರ ಕುರಿತು ಅವಹೇಳನ ಮಾಡಿ, ಅಶ್ಲೀಲ ಫೋಟೊಗಳನ್ನು ವಾಟ್ಸ್ಯಾಪ್ ಗ್ರೂಪಿನಲ್ಲಿ ರವಾನೆ ಮಾಡಿದ್ದಾರೆಂದು ಆರೋಪಿಸಿ ಕುಂದಾಪುರದ ಮೂವರು ಬಿಜೆಪಿ ಮುಖಂಡರ ವಿರುದ್ದ ಉಡುಪಿ ಸೆನ್ ಅಪರಾಧ ಪೋಲಿಸ್ ಠಾಣೆಯಲ್ಲಿ ಬಿಜೆಪಿ ಕುಂದಾಪುರ ಕ್ಷೇತ್ರಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ ಗುರುವಾರ ಪ್ರಕರಣ ದಾಖಲಾಗಿದೆ. ಕುಂದಾಪುರ ಬಿಜೆಪಿಯ ಮೂವರು ಮುಖಂಡರುಗಳಾದ ರಾಜೇಶ್ ಕಾವೇರಿ, ಬಿ. ಕಿಶೋರ್ ಕುಮಾರ್ ಮತ್ತು ರಾಜು ಪೂಜಾರಿ ಎಂಬುವವರ ವಿರುದ್ದ ದೂರು ದಾಖಲಿಸಿದ್ದು, ಮೂವರು ಮುಖಂಡರು ನವೆಂಬರ್ ೧೩ ರ ಬಳಿಕ ಬಿ.ಜೆ.ಪಿ. ಕುಂದಾಪುರ ಎನ್ನುವ ಅನಧಿಕೃತ ವಾಟ್ಸ್ಪ್ ಗ್ರೂಪ್ನಲ್ಲಿ ಬಿ.ಜೆ.ಪಿ. ರಾಜ್ಯಾಧ್ಯಕ್ಷರಾದ ಬಿ.ಎಸ್. ಯಡಿಯೂರಪ್ಪ ಮತ್ತು ಸಂಸದೆ ಶೋಭಾ ಕರಾಂದ್ಲಾಜೆ ಅವರ ಬಗ್ಗೆ ಅವಹೇಳನಕರವಾಗಿ ವಾಟ್ಸ್ಅಪ್ ನಲ್ಲಿ ಬರಹಗಳನ್ನು ಪೋಸ್ಟ್ ಮಾಡಿದ್ದು, ಅಲ್ಲದೇ ಅವರಿಬ್ಬರ ಫೋಟೋಗಳನ್ನು ಎಡಿಟ್ ಮಾಡಿ ಅಶ್ಲೀಲವಾಗಿ ವಾಟ್ಸ್ಅಪ್ ಮೂಲಕ ಕಳುಹಿಸಿ, ಮಾನ ಹಾನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಟಿ.ವಿ, ಮೊಬೈಲ್ ಮುಂತಾದ ಆಧುನಿಕ ಸಾಧನಗಳಿಂದಾಗಿ ಮಕ್ಕಳು ಆಟಕ್ಕೆ ಕುತ್ತು ಬಂದಿದೆ. ಆಟ ಆಡುವವರೇ ಇಲ್ಲದಂತಾಗಿದೆ. ಬಹಳಷ್ಟು ಮಕ್ಕಳಲ್ಲಿ ಏಕಾಗ್ರೆತೆ ಕೊರತೆ, ನಿರಾಸಕ್ತಿ ಕಂಡು ಬರುತ್ತಿದೆ ಎಂದು ಖ್ಯಾತ ಮನೋಶಾಸ್ತ್ರಜ್ಞ ಡಾ. ಪಿ. ವಿ ಭಂಡಾರಿ ಆಂತಕ ವ್ಯಕ್ತಪಡಿಸಿದರು. ಅವರು ಕುಂದಾಪುರದ ಕಲಾಮಂದಿರದಲ್ಲಿ ನಡೆದ ಕಾರ್ಟೂನು ಹಬ್ಬ ಮೊದಲ ದಿನ ಉದಯೋನ್ಮುಖ ವ್ಯಂಗ್ಯಚಿತ್ರಕಾರರಿಗಾಗಿ ಆಯೋಜಿಸಲಾಗಿದ್ದ ಕಾರ್ಟೂನು ಸ್ವರ್ಧೆ ಹಾಗೂ ಮಾಯಾ ಕಾಮತ್ ಸ್ಮರಣಾರ್ಥ ಆಯೋಜಿಸಲಾಗಿದ್ದ ಕಾರ್ಟೂನು ಸ್ವರ್ಧೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವ್ಯಂಗ್ಯಚಿತ್ರಕಾರ ರವಿರಾಜ್ ಹಾಲಂಬಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರಾಚಾರ್ಯರಾದ ಡಾ. ರಶ್ಮಿ ಕುಂದಾಪುರ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ವಿಜಯ ಕರ್ನಾಟಕ ಪತ್ರಿಕೆಯ ಕಿರಿಯ ಸಹ ಸಂಪಾದಕಿ ಮೇರಿ ಜೋಸೆಫ್, ಹಟ್ಟಿಯಂಗಡಿ ಸಿದ್ದಿವಿನಾಯಕ ರೆಸಿಡೆನ್ಸಿಯಲ್ ಶಾಲೆಯ ಪ್ರಾಂಶುಪಾಲರಾದ ಶರಣ್ಕುಮಾರ್, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಚೈತ್ರಾ ಕುಂದಾಪುರ ಕಾರ್ಯಕ್ರಮ ನಿರೂಪಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾರ್ಟೂನಿಷ್ಠರಿಗೆ ವಿಶೇಷ ದೃಷ್ಠಿಕೋನವಿದೆ. ನಮಗೆ ಗೊತ್ತಿರುವುದು, ಗೊತ್ತಿಲ್ಲದ್ದು, ಒಳಿತು ಕೆಡುಕುಗಳನ್ನು ರೇಖೆಗಳ ಮೂಲಕ ತೋರಿಸುವ ಚಾಕಚಕ್ಯತೆ ಅವರಲ್ಲಿದೆ. ಸಮಾಜದ ಓರೆ ಕೋರೆಗಳನ್ನು ಚಿತ್ರಿಸಿ ದೇಶಕಟ್ಟುವ ಕೆಲಸದ ಅವರುಗಳ ಶ್ರಮ ವಿಶೇಷವಾದ್ದು ಎಂದು ತರಂಗ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕಿ ಡಾ. ಸಂಧ್ಯಾ ಎಸ್. ಪೈ ಹೇಳಿದರು. ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರ ನೇತೃತ್ವದಲ್ಲಿ ಕುಂದಾಪುರ ಕಲಾಮಂದಿರಲ್ಲಿ ಆಯೋಜಿಸಲಾಗಿದ್ದ ಕಾರ್ಟೂನು ಹಬ್ಬ 2017 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪತ್ರಕರ್ತರ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಶೇಖರ ಅಜೆಕಾರು ಮಾತನಾಡಿ ಕರಾವಳಿಯ ಮಣ್ಣಿಗೆ ಕಲೆಯ ಸೆಳೆತವಿದೆ. ಅದಕ್ಕೆ ತಕ್ಕಂತೆ ಪ್ರೋತ್ಸಾಹ ದೊರೆತರೆ ಅವರಲ್ಲಿನ ಪ್ರತಿಭೆ ಅನಾವರಣಗೊಳ್ಳುತ್ತದೆ. ಪೋರ್ಬ್ಸ್ ಪತ್ರಿಕೆಯಲ್ಲಿ ಕುಂದಾಪುರದ ಸತೀಶ್ ಆಚಾರ್ಯ ಅವರ ಹೆಸರು ಪ್ರಟಕವಾಗಿರುವುದೇ ಅವರ ಸಾಧನೆಯ ಮಟ್ಟವನ್ನು ತಿಳಿಸುತ್ತದೆ. ತಾನು ಬೆಳೆಯುವುದರೊಂದಿಗೆ ಇತರರನ್ನು ಬೆಳೆಸುವ ಅವರ ಗುಣ ಅವರನ್ನು ಈ ಮಟ್ಟಕ್ಕೆ ತಂದಿದೆ ಎಂದರು. ಕುಂದಾಪ್ರ ಕನ್ನಡದ ಹಾಸ್ಯ ಕಲಾವಿದ, ಶಿಕ್ಷಕ ಮನು ಹಂದಾಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಖಾಸಗಿ ಆಸ್ಪತ್ರೆಗೆ ಹಾಜರಾಗದ ವೈದ್ಯರು, ಬಾಗಿಲು ತೆರೆಯದ ಆಸ್ಪತ್ರೆ ಔಷಧಾಲಯ. ಸರ್ಕಾರಿ ಆಸ್ಪತ್ರೆಗೆ ಮುಗಿಬಿದ್ದ ರೋಗಿಗಳು. ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಪರದಾಡಿದ ರೋಗಿಗಳು. ವೈದ್ಯರ ರಜೆ ಬೋರ್ಡ್, ವೈದ್ಯರ ಕೊಠಡಿಯಲ್ಲಿ ಖಾಲಿ ಕುರ್ಚಿ! ಇದು ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆ ಹಿನ್ನೆಲೆಯಲ್ಲಿ ಕುಂದಾಪುರದಲ್ಲಿ ಗುರುವಾರ ಕಂಡು ಬಂದ ದೃಶ್ಯ. ಖಾಸಗಿ ಆಸ್ಪತ್ರೆ ನಿಯಂತ್ರಣ ಮಸೂದೆ ವಿರೋಧಿಸಿ ಖಾಸಗಿ ವೈದ್ಯರು ಸೇವೆ ಸ್ಥಗಿತಗೊಳಿಸಿ ಹೂಡಿದ್ದ ಮುಷ್ಕರದಿಂದಾಗಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ಅನಿವಾರ್ಯ ಕಾರಣಗಳಿಂದ ಗೈರು ಹಿನ್ನೆಲೆಯಲ್ಲಿ ಆರೋಗ್ಯ ಸೇವೆಯ ಬಗ್ಗೆ ಕುಂದಾಪ್ರ ಡಾಟ್ ಕಾಂ ನಡೆಸಿದ ರಿಯಾಲಿಟಿ ಚೆಕ್ನಲ್ಲಿ ಕಂಡುಬಂದ ಸಾಮಾನ್ಯ ದೃಶ್ಯ. ಖಾಸಗಿ ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ಸರ್ಕಾರ ಸರಕಾರಿ ಅಸ್ಪತ್ರೆ ವೈದ್ಯರು ಹಾಜರಾತಿ ಕಡ್ಡಾಯ ಎಂಬ ಆದೇಶ ಮಾಡಿದ್ದರೂ ವಿವಿಧ ಕಾರಣಗಳ ಹಿನ್ನೆಲೆಯಲ್ಲಿ ವೈದ್ಯರ ಅನುಪಸ್ಥಿತಿಯಲ್ಲಿ ರೋಗಿಗಳು ಪರದಾಡುವ ಸ್ಥಿತಿ ಕಂಡು ಬಂತು. ಕುಂದಾಪುರ ಸರ್ಕಾರಿ ಆಸ್ಪತ್ರೆ…
