Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಒಳ್ಳೆಯ ಯೋಜನೆ, ಚಿಂತನೆ ಜಾರಿಗೆ ಕುಂದಾಪುರ ಮೊದಲ ಆದ್ಯತೆ ನೀಡುತ್ತದೆ. 2018-19ರಲ್ಲಿ ಕುಂದಾಪುರದಲ್ಲಿ ಎಎಸ್ಪಿಯಾಗಿದ್ದ ಸಂದರ್ಭ ಕಳ್ಳತನ ತಡೆಗೆ ಜಾರಿಗೆ ತಂದಿದ್ದ ಸಿಸಿ ಟಿವಿ ಮಾನಿಟರಿಂಗ್ ಸಿಸ್ಟಮ್ ದೇಶದಲ್ಲಿ ಮೊದಲ ಯಶಸ್ವಿ ಪ್ರಯೋಗವಾಗಿ ಇಲ್ಲಿ ಜಾರಿಗೊಂಡಿದೆ. ಅಂದು ಸೊಸೈಟಿ, ದೇವಸ್ಥಾನಗಳಿಗೆ 900ಕ್ಕೂ ಮಿಕ್ಕಿ ಸೇಫ್ ಕ್ಯಾಮರಾ ಅಳವಡಿಸಿ ಲೈವ್ ಮಾನಿಟರಿಂಗ್ ಸಿಸ್ಟಂ ಜಾರಿಗೊಳಿಸಲಾಗಿದ್ದು ಕಳ್ಳತನ ಪ್ರಕರಣಕ್ಕೆ ದೊಡ್ಡಬ್ರೇಕ್ ಬಿದ್ದಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಹೇಳಿದರು. ಅವರು ಇಲ್ಲಿನ ಕುಂದೇಶ್ವರ ದೇವಳದ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪೊಲೀಸ್, ಕುಂದಾಪುರ ಪೊಲೀಸ್ ಉಪವಿಭಾಗ ಮತ್ತು ಕುಂದಾಪುರ ಪೊಲೀಸ್ ಠಾಣೆ ಆಶ್ರಯದಲ್ಲಿ ಆಯೋಜಿಸಿದ್ದ ದೃಷ್ಟಿ ಯೋಜನೆಯನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ 201 ಜಂಕ್ಷನ್ ಮತ್ತು ಗಡಿರೋಡ್ ಗುರುತಿಸಿದ್ದೇವೆ. ಇಲ್ಲಿ ಸೇಫ್ ಕ್ಯಾಮರಾ ಅಳವಡಿಕೆ ನಡೆಯಲಿದೆ. ನೈಟ್ ವಿಷನ್ ಕ್ಯಾಮರಾ ಬಳಕೆ ಮಾಡಲಾಗುತ್ತದೆ. ಇಡಿ ರಾಜ್ಯದಲ್ಲೇ ಮೊದಲ ಬಾರಿಗೆ ಜಂಕ್ಷನ್ ಗುರುತಿಸಿ ಕ್ಯಾಮೆರಾ ಅಳವಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿರುವ ನಗರದ ನಿಟ್ಟೂರಿನ ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ಕುಂಜಿಬೆಟ್ಟುವಿನ ಸರ್ಕಾರಿ ಬಾಲಕರ ಬಾಲಮಂದಿರ ಸಂಸ್ಥೆಯಲ್ಲಿ ಗೌರವಧನ ಆಧಾರದಲ್ಲಿ 8, 9 ಹಾಗೂ 10ನೇ ತರಗತಿ  ಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಗಣಿತ ಮತ್ತು ವಿಜ್ಞಾನ ಟ್ಯೂಷನ್ ಪಾಠ ಮಾಡುವ ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ದೂರವಾಣಿ ಸಂಖ್ಯೆ: 0820-2574964 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. ಸ್ಥಳೀಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವಜನರಲ್ಲಿ ಮಾದಕ ದ್ರವ್ಯ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಾದಕ ವ್ಯಸನ ಮುಕ್ತ ಸುಸ್ಥಿರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಆದ್ಯತೆಯಾಗಲಿ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಅಂದು ನಗರದ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನ ಯೋಜನೆಯ ಐದನೇ ವಾರ್ಷಿಕೋತ್ಸವದ ಅಂಗವಾಗಿ ಮಾದಕ ವಸ್ತು ಸೇವನೆ ವಿರುದ್ಧ ಪ್ರತಿಜ್ಞಾ ವಿಧಿ ಬೋಧಿಸಿ, ಮಾತನಾಡಿದರು. ಮಾದಕ ವ್ಯಸನವು ಬಹುದೊಡ್ಡ ಸಾಮಾಜಿಕ ಪಿಡುಗಾಗಿದ್ದು, ಕೆಲವರು ಅತೀ ಚಿಕ್ಕ ವಯಸ್ಸಿಗೆ ಮಾದಕ ವಸ್ತುಗಳ ದಾಸರಾಗಿ ತಮ್ಮ ಅಮೂಲ್ಯ ಜೀವವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ವ್ಯಕ್ತಿಯು ಯಾವುದೇ ವ್ಯಸನಕ್ಕೆ ಒಳಗಾದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ಎ ಸ್ಪರ್ಧೆಗಳ ಅಂಗವಾಗಿ ಬೆಂಗಳೂರಿನ ಪೋಲೀಸ್ ಸ್ಪಿರಿಟ್ ಶಾಲೆಯಲ್ಲಿ ಪ್ರಾದೇಶಿಕ ಮಟ್ಟದ ಖೋ ಖೋ ಸ್ಪರ್ಧೆಗಳನ್ನು ನಡೆಸಲಾಗಿತ್ತು. ಈ ಸ್ಪರ್ಧೆಯಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, ವಿದ್ಯಾರ್ಥಿಗಳಾದ ಸಚೇತ್, ಖುಷಿ ಬಿ. ಟಿ, ಅನುಷ್ಕಾ ಹುರಳಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರನ್ನು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಮತ್ತು ಶಾಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಹುರಿದುಂಬಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.13: ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಗುಣಗಳನ್ನು ಮೈಗೂಡಿಸಿಕೊಂಡರೆ ಮಾತ್ರ ಎಲ್ಲರನ್ನೂ ಗೌರವಾದರದಿಂದ ಕಾಣಲು ಸಾಧ್ಯವಾಗುತ್ತದೆ. ಎಲ್ಲಾ ಜಾತಿ, ಧರ್ಮಗಳು ಹಾಗೂ ಸಂಸ್ಕೃತಿಯನ್ನು ಗೌರವಿಸುವ ಬಹುತ್ವ ಈ ನೆಲೆದಲ್ಲಿ ಸಾವಿರಾರು ವರ್ಷಗಳಿಂದಲೂ ಇದೆ. ಈ ಬಹುತ್ವದ ನೆಲಗಟ್ಟನ್ನು ಗಟ್ಟಿಗೊಳಿಸುವ ಕಾರ್ಯ ಮುಖ್ಯವಾದದ್ದು ಎಂದು ಡಾ. ಶಿವರಾಮ ಕಾರಂತ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ಗಣನಾಥ ಎಕ್ಕಾರು ಹೇಳಿದರು. ಅವರು ಬುಧವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆದ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಜಾಲ್ಗಿರಿ’ ಕೃತಿಕಾರ ತುಂಬಾಡಿ ರಾಮಯ್ಯ ಅವರಿಗೆ ಪ್ರಶಸ್ತಿ ಪ್ರದಾನಿಸಿ ಮಾತನಾಡಿ, ಸಾಂವಿಧಾನಿಕ ಮೌಲ್ಯ, ಜಾತ್ಯಾತೀತ ಮೌಲ್ಯ ಹಾಗೂ ಮಾನವೀಯ ಮೌಲ್ಯವನ್ನು ಎತ್ತಿಹಿಡಿಯುವ ಕಾರ್ಯ ಇಂದು ಪ್ರಾಮುಖ್ಯವಾದದ್ದು. ತುಂಬಾಡಿ ಅವರ ಕೃತಿಗಳು ಈ ಮೌಲ್ಯಗಳಿಗೆ ಒತ್ತು ನೀಡಿದೆ ಎಂದರು. ಸಾಂಸ್ಕೃತಿಕ ಚಿಂತಕ, ಪ್ರಶಸ್ತಿ ಸಮಿತಿಯ ತೀರ್ಪುಗಾರರಾದ ಡಾ.‌ ಬಂಜೆರೆ ಜಯಪ್ರಕಾಶ್ ಅವರು ವರ್ಚುವಲ್ ವೇದಿಕೆಯಲ್ಲಿ ಮಾತನಾಡಿ, ತುಂಬಾಡಿ ಅವರ ಕಥನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ  ಮುಂಗಾರು ಅಧಿವೇಶನದಲ್ಲಿ ಶಾಸಕರಾದ ಗುರುರಾಜ್‌ ಗಂಟಿಹೊಳೆ ಅವರು ಪ್ರಮುಖ ವಿಷಯವೊಂದನ್ನು ಪ್ರಸ್ತಾಪಿಸಿ ಸರಕಾರದ ಗಮನ ಸೆಳೆದಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗ್ರಾಮೀಣ ಭಾಗವಾದ ಶಂಕರನಾರಾಯಣ ಕೇಂದ್ರೀಕೃತವಾಗಿ ಸುತ್ತ ಮುತ್ತಲಿನ ಗ್ರಾಮಗಳ ಜನರು ಪ್ರಸ್ತುತ ಸುಮಾರು 40 ಕಿ. ಮೀ ದೂರದ ಹೋಬಳಿ ಕೇಂದ್ರಕ್ಕೆ ತೆರಳ ಬೇಕಾಗಿರುವುದರಿಂದ ಪ್ರಸ್ತುತ ಇರುವ ಬೈಂದೂರು ಹಾಗೂ ವಂಡ್ಸೆ ಹೋಬಳಿಗಳ ಜೊತೆಗೆ ಶಂಕರನಾರಾಯಣ ಗ್ರಾಮ ಕೇಂದ್ರಿತವಾಗಿ ಶಂಕರನಾರಾಯಣ ಭಾಗದ ಗ್ರಾಮಗಳನ್ನು ಸೇರಿಸಿಕೊಂಡು ಆಡಳಿತಾತ್ಮಕ ಹಿತದೃಷ್ಟಿಯಿಂದ ಪ್ರತ್ಯೇಕವಾದ ಶಂಕರನಾರಾಯಣ ಹೋಬಳಿ ರಚನೆ ಮಾಡಲು ಶಾಸಕ ಗುರುರಾಜ್‌ ಶೆಟ್ಟಿ ಗಂಟಿಹೊಳೆ ಅವರ ಸದನದಲ್ಲಿ ಚುಕ್ಕೆ ರಹಿತ ಪ್ರಶ್ನೆಯ ಮೂಲಕ ಸರಕಾರದ ಗಮನ ಸೆಳೆದಿದ್ದಾರೆ. ರಾಜ್ಯ ಸರಕಾರದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಉತ್ತರಿಸಿ, ಹೊಸದಾಗಿ ಹೋಬಳಿಗಳನ್ನು ರಚಿಸುವ ವಿಷಯವು ಸರ್ಕಾರದ ಸಾಮಾನ್ಯ ನೀತಿಗೆ ಸಂಬಂಧಿಸಿದ್ದಾಗಿದೆ. ನೂತನ ಹೋಬಳಿಗಳು ರಚಿಸಬೇಕಾದರೆ ಭೌಗೋಳಿಕ ಮತ್ತು ಆಡಳಿತಾತ್ಮಕ ಅಗತ್ಯತೆಗಳ ಜೊತೆಗೆ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಕ್ಷಿತಿಜ್ ಪೈ (12)  ಅನಾರೋಗ್ಯದಿಂದ ಮಂಗಳವಾರದಂದು ಮೃತಪಟ್ಟಿದ್ದಾನೆ. ಈತ ಕೋಟ ಹಂದಟ್ಟು ನಿವಾಸಿ ಸಾಲಿಗ್ರಾಮದಲ್ಲಿ ನಂದಿನಿ ಮಿಲ್ಕ್ ಸ್ಟಾಲ್ ಮಾಲಕ ಪುಂಡಲೀಕ ಪೈ ಅವರ ಪುತ್ರನಾಗಿದ್ದು, ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾನೆ. ಈತ ತಂದೆ, ತಾಯಿ ಮತ್ತು ತಂಗಿಯನ್ನು ಅಗಲಿದ್ದಾನೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಹಳೆ ವಿದ್ಯಾರ್ಥಿ ಸಂಘದ ರಚನೆ ಶಾಲೆಯ ಸುಬ್ರಮಣ್ಯ ಮಂಜರ ಸಭಾಭವನದಲ್ಲಿ ಜರುಗಿತು. ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಸಂಜೀವ ಪೂಜಾರಿ ವಂಡ್ಸೆ ಆಯ್ಕೆಯಾದರು. ಗೌರವ ಅಧ್ಯಕ್ಷರಾಗಿ ವಂಡಬಳ್ಳಿ ಜಯರಾಮ್ ಶೆಟ್ಟಿ, ಉಪಾಧ್ಯಕ್ಷರಾಗಿ ಮಹಮ್ಮದ್ ರಫೀಕ್ ಸಾಹೇಬ್, ಕಾರ್ಯದರ್ಶಿಯಾಗಿ ಸೋಮರಾಯ ಜನ್ನು (ಪ್ರಭಾರ ಮುಖ್ಯೋಪಾಧ್ಯಾಯರು), ಜೊತೆ ಕಾರ್ಯದರ್ಶಿಯಾಗಿ ವಸಂತರಾಜ್ ಶೆಟ್ಟಿ, ಖಜಾಂಚಿಯಾಗಿ ನಾಗರಾಜ, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ ಮೆಂಡನ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗುಂಡು ಪೂಜಾರಿ, ಕ್ರೀಡಾಕಾರ್ಯದರ್ಶಿಯಾಗಿ ಚಂದ್ರ ಬಿಲ್ಲವ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಗುರುರಾಜ್ ಆಯ್ಕೆಯಾದರು. ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಉದಯ ಕುಮಾರ್ ಶೆಟ್ಟಿ, ದೇವು ಮೆಂಡನ್, ಶಂಕರ ಆಚಾರ್ಯ, ಪ್ರಸಾದ್ ಆಚಾರ್ಯ, ರಾಜೀವ ನಾಯ್ಕ, ಪ್ರತಾಪ ಕುಮಾರ್ ಶೆಟ್ಟಿ, ಮೊಹಮ್ಮದ್ ಫಾರೂಕ್, ಸುಮತಿ, ಜಯರಾಮ ಶೆಟ್ಟಿ ಬೆಳ್ವಾಣ, ಅಭಿಷೇಕ್ ಮೆಂಡನ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷೆ ಡಾ. ಪೂರ್ಣಿಮಾ ಹಾಗೂ ಹಳೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಮಣೂರು ಪಡುಕರೆ ನಿವಾಸಿ ಸಾಹಿತಿ, ಶಿಕ್ಷಕ, ಸಾಮಾಜಿಕ ಚಿಂತಕ ಸಂತೋಷ್ ಕುಮಾರ್ ಕೋಟ (44) ಮಂಗಳವಾರ ಕೆ.ಎಂ ಸಿ ಮಣಿಪಾಲ ಅಲ್ಲಿ ನಿಧನರಾದರು ಆ.8ರಂದು ಮಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಸಂತೋಷ್ ಕುಮಾರ್ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತೆಜಿಸಿದ್ದಾರೆ. ಕೋಟ ಸುತ್ತಮುತ್ತಲಿನ ಭಾಗದಲ್ಲಿ ಹಲವಾರು ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಯೋಜಕರಾಗಿ, ನಿರೂಪಕರಗಿ ತಮ್ಮನ್ನು ಗುರುತಿಸಿಕೊಂಡು ಸಂತೋಷ್ ಮೇಷ್ಟ್ರು ಎಂದೆ ಜನಜನಿತರಾಗಿದ್ದರು. ಕರಾವಳಿಯ ಕಡಲಕಿನಾರೆಯ ಗ್ರಾಮೀಣ ಭಾಗದಲ್ಲಿ ಇಂಡಿಕಾ ಕಲಾ ಬಳಗ ಎಂಬ ಸಂಸ್ಥೆಯನ್ನು ಹುಟ್ಟುಹಾಕಿ ಸಾಂಸ್ಕೃತಿಕ ತೇರ ಎಳೆದ ಅವರು ಖ್ಯಾತ ಯಕ್ಷಗಾನ ಕಲಾವಿದ ಮೊಳಹಳ್ಳಿ ಹೆರಿಯ ನಾಯ್ಕ ಪ್ರಶಸ್ತಿ ಹುಟ್ಟು ಹಾಕಿದರಲ್ಲದೆ, ಯಕ್ಷಗಾನ ಕ್ಷೇತ್ರದ ಅನೇಕ ಸಾಧಕರನ್ನು ಗುರುತಿಸಿದ ಹೆಗ್ಗಳಿಕೆ ಅವರದ್ದಾಗಿದೆ. ದಲಿತ ಸಂಘರ್ಷ ಸಮಿತಿ ಕೋಟ ,ಯಕ್ಷಕಲಾವಿದ ಕೋಟ ಸುರೇಶ್ ಅಭಿನಂದನಾ ಸಮಿತಿ, ಪ್ರಸಿದ್ಧ ಸ್ತ್ರೀವೇಷದಾರಿ ಮಾಧವ ನಾಗೂರು ಅಭಿನಂದನಾ ಸಮಿತಿಯ ಸಂಚಾಲಕರಾಗಿ, ಜಟ್ಟಿಗೇಶ್ವರ ಫ್ರೇಂಡ್ಸ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶಂಕರ ನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ಪೂರ್ವ ಪ್ರಾಥಮಿಕ ವಿಭಾಗದ ಪುಟಾಣಿಗಳಿಗಾಗಿ ‘ಬಾಲ ರಾಧೆ ಬಾಲ ಗೋಪಾಲ ‘ಸ್ಪರ್ಧೆಯನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಮುಖ್ಯ ತೀರ್ಪುಗಾರರಾಗಿ ಆಗಮಿಸಿದ ಕಿಶೋರ್ ಕುಮಾರ್ ಆರೂರ್ ಅವರು ಉದ್ಘಾಟಿಸಿ ಮಾತನಾಡಿ “ಇಲ್ಲಿ ಎಲ್ಲ ಮಕ್ಕಳು ಬಾಲಗೋಪಾಲ ಬಾಲರಾಧೆಯರೇ, ಇದು ಸ್ಪರ್ಧೆ ಎನ್ನುವುದಕ್ಕಿಂತ ಇದು ನಮ್ಮೆಲ್ಲರ ಮನವನ್ನು ತಣಿಸುವ ಸುಂದರ ಕಾರ್ಯಕ್ರಮ” ಎಂದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸ್ಥಾಪಕರು ಪುಟಾಣಿಗಳಿಗೆ ಶುಭ ಹಾರೈಸಿದರು.  ಈ ಸ್ಪರ್ಧೆಗೆ ನ್ಯಾಯ ನಿರ್ಣಾಯಕರಾಗಿ ನೃತ್ಯ ಗುರುಗಳಾದ ಜಗದೀಶ್ ಬನ್ನಂಜೆ, ಹಿಂದುಸ್ತಾನಿ ಸಂಗೀತ ಪ್ರವೀಣರಾದ ಅಶ್ವತ್ ಐತಾಳ್‌ರು ಉಪಸ್ಥಿತರಿದ್ದರು. ಈ ವಿಶೇಷ ಕಾರ್ಯಕ್ರಮದ ಉದ್ದೇಶ ಮಕ್ಕಳಲ್ಲಿ ಭಾರತೀಯ ಸಂಸ್ಕೃತಿಯ ಮೇಲಿನ ಅಭಿಮಾನವನ್ನು ಬೆಳೆಸುವುದು ಅವರ ಸೃಜನಶೀಲತೆ ಮತ್ತು ಆತ್ಮ ವಿಶ್ವಾಸವನ್ನುಉತ್ತೇಜಿಸುವುದಾಗಿತ್ತು. ಪುಟಾಣಿಗಳು ಕಣ್ಮನ ತಣಿಸುವಂತೆ ಬಾಲಗೋಪಾಲ ಮತ್ತು ಬಾಲರಾಧೆಯರ ವೇಷ ಧಾರಣೆಯಲ್ಲಿ ಮಿಂಚಿ ಮಾಧುರ್ಯಮಯ ಧ್ವನಿ ಮತ್ತು ಕೃಷ್ಣ ಲೀಲೆಯ ನೃತ್ಯಗಳ…

Read More