Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೆಪಿಸಿಸಿ ಚುನಾವಣೆ ಪ್ರಚಾರ ಸಮಿತಿ ಉಪಾಧ್ಯಕ್ಷರನ್ನಾಗಿ ಅಬ್ದುಲ್ ಮುನೀರ್ ಜನ್ಸಾಲೆ ಅವರನ್ನು ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ ಅವರು ನೇಮಕ ಮಾಡಿ ಆದೇಶಿಸಿದ್ದಾರೆ. ಅಬ್ದುಲ್ ಮುನೀರ್ ಜನ್ಸಾಲೆ ಅವರು ಕೆಪಿಸಿಸಿ ಮಾಧ್ಯಮ ವಕ್ತಾರರು ಹಾಗೂ ತರಬೇತುದಾರರಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಸೇವಾ ಸಂಗಮ ಶಿಶು ಮಂದಿರ, ಕುಂದಾಪುರ ಸೇವಾ ಸಂಗಮ ಶಿಶುಮಂದಿರದ ಟ್ರಸ್ಟ್ ವತಿಯಿಂದ 2025-26ನೇ ಸಾಲಿಗೆ ಹೊಸದಾಗಿ ಸೇರ್ಪಡೆಗೊಂಡ  ಪಾಲಕರಿಗೆ ಟ್ರಸ್ಟಿನ ಅಧ್ಯಕ್ಷರಾದ ಸುಬ್ರಮಣ್ಯ ಹೊಳ್ಳ ಕುಂದಾಪುರ ಅವರು ಭಾರತೀಯ ಸಂಸ್ಕೃತಿ-ಸಂಸ್ಕಾರ ಹಾಗೂ ಜಲ ಸಂರಕ್ಷಣೆಯ ಬಗ್ಗೆ ಮತ್ತು ನಮ್ಮ ಸುತ್ತಮುತ್ತಲಿನ ಪರಿಸರದ ಬಾಂಧವ್ಯದ ಕುರಿತಾಗಿ ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಟ್ಟು ಈ ಮೇಲಿನ ಮಾತನ್ನು ಹೇಳಿದರು. ಕಾರ್ಯಾಗಾರದ ಸಭಾಧ್ಯಕ್ಷತೆ ವಹಿಸಿದ್ದ ಬೈಂದೂರು ಸೇವಾ ಸಂಘದ ಅಧ್ಯಕ್ಷರಾದ ಮಂಜುನಾಥ್ ಶೆಟ್ಟಿ ಅವರು ಮಾತನಾಡಿ, ಕಳೆದ ನಾಲ್ಕು ದಶಕಗಳಿಂದ ಗ್ರಾಮೀಣ ಭಾಗವಾದ ಬೈಂದೂರಿನಲ್ಲಿ ಸೇವಾ ಸಂಗಮ ಶಿಶು ಮಂದಿರದ ಕಾರ್ಯವೈಖರಿ ಮತ್ತು ಈ ಶಿಶು ಮಂದಿರ ಅಭಿವೃದ್ಧಿಯ ಪಥದಲ್ಲಿ ಸಾಗಲು ಸಂಸ್ಕೃತಿ-ಸಂಸ್ಕಾರದೊಂದಿಗೆ ಮುನ್ನಡೆಯಲು ಸಹಕರಿಸುತ್ತಿರುವ ಎಲ್ಲ ಮಾತೆಯರಿಗೆ ಶ್ಲಾಘನೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಿಶುಮಂದಿರದ ಪುಟಾಣಿಗಳಿಗೆ ನೀಡಲಾದ ಆಟೋಪಕರಣವನ್ನು ಬಿಡುಗಡೆ ಮಾಡಿದರು. ವೇದಿಕೆಯಲ್ಲಿ ಸೇವಾ ಸಂಗಮದ ವ್ಯವಸ್ಥಾಪಕ ದಿನೇಶ್ ಹಾಗೂ ಉಪಾಧ್ಯಕ್ಷ ರವೀಂದ್ರ ಶಾನುಭಾಗ್ ಹಾಗೂ ಸುಧಾಕರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪೋಷಕರು ಮತ್ತು ಶಿಕ್ಷಕರು ಒಂದಾಗಿ ವಿದ್ಯಾರ್ಥಿಗಳ ಬದುಕು ರೂಪಿಸುವುದು ಅಗತ್ಯ. ಪದವಿ ಶಿಕ್ಷಣದ ಸಂದರ್ಭದಲ್ಲಿ ಪೋಷಕರು ಮಕ್ಕಳ ಕುರಿತು ಗಮನಹರಿಸುವುದರೊಂದಿಗೆ ಶಿಕ್ಷಕರ ಜೊತೆ ನಿರಂತರ ಸಂಪರ್ಕವನ್ನಿಟ್ಟುಕೊಳ್ಳುವುದು ಅಗತ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಘಟಕ ಆಯೋಜಿಸಿದ ಪ್ರೇರಣಾ ಶಿಬಿರದ ಭಾಗವಾದ ರಕ್ಷಕ-ಶಿಕ್ಷಕರ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಮಾತನಾಡಿ, ಕಾಲೇಜಿನ ಆಡಳಿತದಲ್ಲಿ ವಿದ್ಯಾರ್ಥಿಗಳ ಮತ್ತು ಪೋಷಕರ ಪಾತ್ರವನ್ನು ತಿಳಿಸಿದರು. ಶೈಕ್ಷಣಿಕ ನಿಕಾಯಕರಾದ ಗಿರಿರಾಜ್ ಭಟ್ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಅರ್ಹತೆಗೆ ಆಂತರಿಕ ಪರೀಕ್ಷೆಗಳು ಹೇಗೆ ಸಹಾಯವಾಗುತ್ತವೆ ಎಂಬುವುದನ್ನು ತಿಳಿಸಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿ, ಸ್ವಾಗತಿಸಿದರು. ಐಕ್ಯೂಎಸಿ ಸಂಯೋಜಕಿ ಹಾಗೂ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ. ವಂದಿಸಿ, ವಾಣಿಜ್ಯ ವಿಭಾಗದ ಸಹಾಯಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನೇಪಾಳ ರಂಗಶೀಲ ಸ್ಟೇಡಿಯಂನಲ್ಲಿ ನಡೆದಿರುವ  ಅಂತಾರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಅಂತಾರಾಷ್ಟ್ರೀಯ ಕ್ರೀಡಾ ಪಟು ಕೋಟದ ದಿನೇಶ ಗಾಣಿಗ ಅವರು ಒಂದು ಚಿನ್ನದ ಪದಕ ಗಳಿಸಿದ್ದಾರೆ.  ವೇಗ ನಡಿಗೆ, ಗುಂಡೆಸೆತ, ಲಾಂಗ್ ಜಂಪ್‌ನಲ್ಲಿ ಭಾಗವಹಿಸಿ, 5 ಕಿಲೋಮೀಟರ್ ವೇಗ ನಡಿಗೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದಿದ್ದಾರೆ. ಈ ಹಿಂದೆ ಥೈಲ್ಯಾಂಡ್ ರಾಜಾಬಟಾ ಸ್ಟೇಡಿಯಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಒಂದು ಚಿನ್ನದ ಪದಕ, ಹರ್ಡಲ್ಸನಲ್ಲಿ ದ್ವಿತೀಯ ಒಂದು ಬೆಳ್ಳಿ ಪದಕ ಮತ್ತು ವೇಗ ನಡಿಗೆಯಲ್ಲಿ ತೃತೀಯ ಕಂಚು ಪದಕ ಹಾಗೂ 2021 ಸಿಂಗಾಪುರ, 2022 ಮಲೇಷಿಯಾ ಹಾಗೂ 2023 ರಲ್ಲಿ ಶ್ರೀಲಂಕಾ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ನಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ, ಕಂಚು ಪದಕ ವಿಜೇತರಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಜಾನುವಾರು ಅಕ್ರಮ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬೈಂದೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಬೈಂದೂರಿನ ಕಲಿನ ಮನೆ ನಿವಾಸಿ ರಮೇಶ್ ಮೊಗವೀರ (40) ಹಾಗೂ ಬೈಂದೂರಿನ ಗುಂಜನಗುಡ್ಡೆ ನಿವಾಸಿ ಅಬ್ದುಲ್ ಖಯೂಮ್ (26) ಎಂದು ತಿಳಿದು ಬಂದಿದೆ. ಗುರುವಾರ ಮುಂಜಾನೆ ಬಂದ ಖಚಿತ ಮಾಹಿತಿ ಮೇರೆಗೆ ಬೈಂದೂರು ಪೊಲೀಸ್ ಠಾಣೆಯ ಪಿಎಸ್‌ಐ ತಿಮ್ಮೇಶ್ ಬಿ.ಎನ್ ನೇತೃತ್ವದ ತಂಡ ಹೇರೂರಿನ ಚಟ್ಗುಳಿ ಕಡೆಯಿಂದ ಬರುವ ರಸ್ತೆಯ ಗುಂಜನಗುಡ್ಡೆ ಬಳಿ ದಾಳಿ ನಡೆಸಿದ್ದಾರೆ. ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ತಂಡ ತಡೆದಿದೆ ಎಂದು ತಿಳಿದು ಬಂದಿದೆ. ಪೊಲೀಸರು ವಾಹನವನ್ನು ತಪಾಸಣೆ ನಡೆಸಿದಾಗ ವಾಹನದಲ್ಲಿ ಹಸುವನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಕಂಡುಬಂದಿದೆ. ತಕ್ಷಣವೇ ಪೊಲೀಸರು ಹಸುವನ್ನು ರಕ್ಷಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರಕಾರದ ರಾಷ್ಟ್ರೀಯ ಗ್ರಾಮೀಣ ಸಾಕ್ಷಾರತ ಮಿಷನ್ ಯೋಜನೆಯ ಅಡಿಯಲ್ಲಿಅಂಪಾರು ಗ್ರಾಮದ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 4ನೇ ತರಗತಿ ಮಕ್ಕಳಿಗೆ ಉಚಿತ ಸ್ವೇಟರ್ ವಿತರಿಸಿಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಗೋಪಾಲಕೃಷ್ಣ ಕಿಣಿ, ಉಪಾಧ್ಯಕ್ಷರಾದ ವನಜ ಮೊಗವೀರ, ಸದಸ್ಯರಾದ ಕೆ. ಅಶೋಕ್, ಸತೀಶ್ ಶೆಟ್ಟಿ ಹಡಾಳಿ, ನವೀನ್ ಶೆಟ್ಟಿ ಹೊಸಿಮನೆ, ಭಾರತಿ ಶೇಟ್, ಶಕ್ತಿ ಕೇಂದ್ರ ಅಧ್ಯಕ್ಷರಾದ ಅರುಣ್ ಕುಮಾರ್ ಶೆಟ್ಟಿ, ಮುಖಂಡರಾದ ಮಹೇಂದ್ರ ಭೋವಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಹಾಗೂ ಲ್ಯಾಟರಲ್ ಎಂಟ್ರಿ ಮೂಲಕ ನೇರವಾಗಿ ಮೂರನೇ ಸೆಮಿಸ್ಟರ್‌ಗೆ ಪ್ರವೇಶಾತಿ ಪಡೆಯಲು ಐ.ಟಿ.ಐ, ದ್ವಿತೀಯ ಪಿ.ಯು.ಸಿ ವಿಜ್ಞಾನ ಹಾಗೂ ತಾಂತ್ರಿಕ ವಿಷಯಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 11 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ದೂ.ಸಂಖ್ಯೆ: 0820-2570244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ತಾಲೂಕಿನಲ್ಲಿ ದುಬಾರಿ ಬೆಲೆಯ ಕಾರುಗಳಿದ್ದ 360 ಮಂದಿಯ ಬಿಪಿಎಲ್ ಚೀಟಿ ರದ್ದಾಗಿದೆ ಎಂದು ಆಹಾರ ಇಲಾಖೆ ಅಧಿಕಾರಿ ತಿಳಿಸಿದರು. ಅವರು ಇಲ್ಲಿನ ತಾಲೂಕು ಪಂಚಾಯತ್ ನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಮಾತನಾಡಿದರು. ಆರ್ ಟಿಒದಿಂದ ಲಭಿಸಿದ ಮಾಹಿತಿ ಹಾಗೂ ಪರಿಶೀಲನೆ ಬಳಿಕವೇ ತೆಗೆಯಲಾಗುತ್ತಿದೆ. 15-20 ಲಕ್ಷ ರೂ.ಗಳ ಕಾರುಗಳಿದ್ದವರೂ ಬಿಪಿಎಲ್ ಚೀಟಿ ಹೊಂದಿದ್ದರು ಎಂದರು. ಪಡಿತರ ಚೀಟಿ ರದ್ದತಿ ಕುರಿತು ಕೋಣಿ ನಾರಾಯಣ ಆಚಾ‌ರ್, ಚಂದ್ರಕಾಂಚನ್ ಮಾತನಾಡಿ, ಅನರ್ಹರ ಪ್ರಕರಣ ಮಾತ್ರ ಪರಿಗಣಿಸಿ, ನೈಜ ಬಡವರ ಪಡಿತರ ಚೀಟಿ ರದ್ದು ಮಾಡಬೇಡಿ, ಅಂಗವಿಕಲರನ್ನು ಕರೆದೊಯ್ಯಲು ವಾಹನ ಇದ್ದರೂ ಬಿಪಿಎಲ್‌ನಿಂದ ತೆಗೆದು ಸಿರಿವಂತರೆನ್ನಬೇಡಿ ಎಂದರು. ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ಅಧ್ಯಕ್ಷರು ಸೂಚಿಸಿದರು. ಅಧ್ಯಕ್ಷತೆ ವಹಿಸಿದ್ದ ಹರಿಪ್ರಸಾದ್ ಶೆಟ್ಟಿ ಕಾನಕ್ಕಿ ಮಾತನಾಡಿ, ಸರಕಾರದ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ರಾಜ್ಯ ಸರಕಾರ ನೀಡುತ್ತಿರುವ ಯೋಜನೆಗಳೆಂದು ತಿಳಿಯಬೇಕು. ಅದಕ್ಕಾಗಿ ವಿವಿಧ ಇಲಾಖೆಗಳು ಕ್ರಮಕೈಗೊಳ್ಳಬೇಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಕ್ಕಳ ಭವಿಷ್ಯ ಕಟ್ಟುವ ಮಹತ್ವದ ಜವಾಬ್ದಾರಿ ಹೊಂದಿರುವ ಉಪನ್ಯಾಸಕರು ಹೊಸತನಕ್ಕೆ ಸದಾ ತೆರೆದುಕೊಂಡಿದ್ದರೆ ಮಾತ್ರ ವಿದ್ಯಾರ್ಥಿಗಳನ್ನು ಅರಿಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಾರುತಿ ಹೇಳಿದರು. ಅವರು ಗುರುವಾರ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಪದವಿಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಮತ್ತು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ ಇವರ ಆಶ್ರಯದಲ್ಲಿ ಒಂದು ದಿನದ ಕನ್ನಡ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಬೋಧಕರು ನಿರಂತರ ಅಭ್ಯಾಸದಲ್ಲಿ ತೊಡಗಿದ್ದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬಹುದು. ವಿದ್ಯಾರ್ಥಿಗಳ ಬಗ್ಗೆ ಯಾವುದೇ ಕಾರಣಕ್ಕೂ ನಿಲಕ್ಷ್ಯ ಧೋರಣೆ ಸಲ್ಲದು. ಇಂತಹ ಕಾರ್ಯಾಗಾರಗಳು ಬೋಧನಾ ವೃತ್ತಿಯಲ್ಲಿರುವವರಿಗೆ ಹೊಸ ವಿಷಯಗಳನ್ನು ಕಲಿಯಲು ಸಹಾಯ ಮಾಡುತ್ತವೆ ಎಂದು ಅವರು ಅಭಿಪ್ರಾಯಪಟ್ಟರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಜನ್ನಾಡಿಯ ಫೇವರೇಟ್ ಕ್ಯಾಶ್ಯೂ ಇಂಡಸ್ಟೀಸ್ ನ ಹೊಳ್ಮಗೆ ಶಂಕರ ಹೆಗ್ಡೆ ಅವರು ಮಾತನಾಡಿ, ಬದುಕಿನಲ್ಲಿ ಸವಾಲುಗಳು ಸಾಧನೆಯ ಶಿಖರವೇರಲು ಸಹಾಯ ಮಾಡುತ್ತವೆ;…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೈಂದೂರು: ಸಾಧನೆ ಸುಲಭದ ಮಾತಲ್ಲ. ಕೇವಲ ಪ್ರತಿಭೆಯಿಂದ ಮಾತ್ರ ಯಶಸ್ಸು ಕಾಣಲಾಗದು. ಕಠಿಣ ಪ್ರಯತ್ನದಿಂದ ಮಾತ್ರ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯ. ಜಗತ್ತಿನಲ್ಲಿ ಯಾವುದೂ ಕೂಡ ಸುಲಭವಾಗಿ ದಕ್ಕುವುದಿಲ್ಲ. ನಾವು ಸ್ವೀಕರಿಸುವ ರೀತಿ ಮತ್ತು ಸಾಧಿಸುವ ಛಲ. ಸತತ ಪರಿಶ್ರಮ ಬದುಕಿಗೆ ಸಾರ್ಥಕತೆಯನ್ನು ನೀಡುತ್ತದೆ ಎಂದು ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಾಗರಾಜ ಶೆಟ್ಟಿ ಹೇಳಿದರು ಅವರು ಇಲ್ಲಿನ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ ಸಂಘದ ಪ್ರಧಾನ ಕಛೇರಿಯಲ್ಲಿ ಸೊಸೈಟಿ ವತಿಯಿಂದ ಕೊಡಮಾಡುವ ವಿದ್ಯಾರ್ಥಿ ವೇತನ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು. ವಿದ್ಯಾರ್ಥಿ ದೆಸೆಯಲ್ಲಿ ಕಠಿಣ ಪ್ರಯತ್ನದ ಮೂಲಕ ಬೆಳೆಯಬೇಕು. ಸಾರ್ಥಕತೆಯ ಸಂತ್ರಪ್ತಿ ದೊರೆಯಬೇಕಾದರೆ ಸಾಧನೆಯ ಬದುಕು ನಮ್ಮದಾಗಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಮಾತನಾಡಿ, ಮಕ್ಕಳು ಸಮಾಜಕ್ಕೆ ಶಕ್ತಿ ತುಂಬುವ ಆಸ್ತಿಯಾಗಬೇಕು. ಭಾರತೀಯ ಸಂಸ್ಕೃತಿ ಆಧಾರಿತ ಶಿಕ್ಷಣ ನೀಡುವ…

Read More