Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಂದು ಸರ್ಕಾರಿ ಶಾಲೆಗಳು ಎಲ್ಲ ರೀತಿಯಿಂದಲೂ ಸುಸಜ್ಜಿತವಾಗಿವೆ. ಅಲ್ಲಿ ಮೂಲ ಸೌಲಭ್ಯಗಳ ಕೊರತೆ ಇಲ್ಲ. ಖಾಸಗಿ ಶಾಲೆಗಳಿಗಿಂತ ಉತ್ತಮ ಅರ್ಹತೆ, ತರಬೇತಿ, ಅನುಭವ ಪಡೆದ ಶಿಕ್ಷಕರಿದ್ದಾರೆ. ಹಾಗಿದ್ದರೂ ಪೋಷಕರು ಖಾಸಗಿ ಶಿಕ್ಷಣ ಸಂಸ್ಥೆಗಳತ್ತ ಒಲವು ತೋರುತ್ತಿರುವುದರ ಮರ್ಮ ಅರ್ಥವಾಗುತ್ತಿಲ್ಲ ಎಂದು ಮರವಂತೆ ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆಯ ಸಂಸ್ಥಾಪನಾ ಸಮಿತಿ ಅಧ್ಯಕ್ಷ ಎಸ್. ಜನಾರ್ದನ ಮರವಂತೆ ಹೇಳಿದರು. ಅವರು ವರ್ಚುವಲ್ ವೇದಿಕೆಯಲ್ಲಿ ನಡೆದ ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆ ಆರಂಭೋತ್ಸವದಲ್ಲಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಪ್ರವೇಶ, ಶಿಕ್ಷಣ, ಪುಸ್ತಕವೇ ಮೊದಲಾದ ಸೌಕರ್ಯಗಳು ಉಚಿತವಾಗಿ ಸಿಗುತ್ತವೆ. ಗುಣಮಟ್ಟದ ಶಿಕ್ಷಣದ ಕಾರಣದಿಂದ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುತ್ತದೆ. ಮುಂದಿನ ದಿನಗಳಲ್ಲಾದರೂ ಪೋಷಕರು ಅವುಗಳ ಲಾಭ ಪಡೆಯುವ ಜಾಣತನ ಪ್ರದರ್ಶಿಸಬೇಕು ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷೆ ಅನಿತಾ ಆರ್. ಕೆ, ಹಿರಿಯ ಪ್ರಾಥಮಿಕ ಶಾಲಾ ಹಳೆವಿದ್ಯಾರ್ಥಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರೇ ಭಾಷೆಯ ಪುಸ್ತಕಗಳನ್ನು ಬೆಂಗಳೂರಿನ ರಾಜ್ಯ ಕೇಂದ್ರ ಗ್ರಂಥಾಲಯದ ಗ್ರಂಥಸ್ವಾಮ್ಯ ವಿಭಾಗದಲ್ಲಿ ಜುಲೈ 30 ರ ಒಳಗೆ ಕಾಫಿರೈಟ್ ಮಾಡಿಸಿರಬೇಕು. ಕಾಫಿರೈಟ್ ಮಾಡಿಸಿರುವ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಸಲ್ಲಿಸಲು ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಲೇಖಕರು, ಲೇಖಕ ಪ್ರಕಾಶಕರು ಹಾಗೂ ಪ್ರಕಟಣಾ ಸಂಸ್ಥೆಗಳು ಪುಸ್ತಕವನ್ನು ಆಯ್ಕೆಗೆ ಸಲ್ಲಿಸುವಾಗ ಅನುಮತಿ ಪತ್ರದೊಂದಿಗೆ ಪುಸ್ತಕದ ಸಾಫ್ಟ್ ಕಾಫಿಯನ್ನು ಸಿ.ಡಿ. ರೂಪದಲ್ಲಿ (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು ಇಲ್ಲಿಗೆ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://dpl.karnataka.gov.in/ ಅಥವಾ ನಗರ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯಗಳ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಛೇರಿಗಳನ್ನು ಸಂಪರ್ಕಿಸುವಂತೆ ನಗರ ಕೇಂದ್ರ ಗ್ರಂಥಾಲಯದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.  ಗಂಗೊಳ್ಳಿ: ವೈದ್ಯರ ದಿನದ ಅಂಗವಾಗಿ ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ಅವರನ್ನು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಸನ್ಮಾನಿಸಿ ಅಭಿನಂದಿಸಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷ ರಾಜೇಶ ಎಂ.ಜಿ., ನಿಕಟಪೂರ್ವ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ, ಸದಸ್ಯರಾದ ಕೆ.ರಾಮನಾಥ ನಾಯಕ್, ವಾಸುದೇವ ಶೇರುಗಾರ್, ಜನಾರ್ದನ ಪೂಜಾರಿ ಪೆರಾಜೆ, ಪ್ರೇಮಾ ಸಿ.ಪೂಜಾರಿ, ಫಿಲೋಮಿನಾ ಫೆರ್ನಾಂಡಿಸ್, ಚಂದ್ರಕಲಾ, ಗೋಪಾಲ ಪೂಜಾರಿ, ಜಯಂತಿ ಶೇರುಗಾರ್, ಆಸ್ಪತ್ರೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಮಿಡ್ ಟೌನ್ ಕುಂದಾಪುರ ಹಾಗೂ ಇಂಚರ ಇಕೋ ಕ್ಲಬ್ ಇವರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸ್ಕತ್ತೂರಿನಲ್ಲಿ ವನ ಮಹೋತ್ಸವ ಕಾರ್ಯಕ್ರಮ ನಡೆಯಿತು. ರೋಟರಿ ಕ್ಲಬ್ ಮಿಡ್ ಟೌನ್ ಕುಂದಾಪುರ ಅಧ್ಯಕ್ಷರಾದ ರೊ. ನಳಿನ್ ಕುಮಾರ್ ಶೆಟ್ಟಿ ಹಾಗೂ ನಿಯೋಜಿತ ಅಧ್ಯಕ್ಷರಾದ ರೊ. ಎಚ್ ರವೀಶ್ಚಂದ್ರ ಶೆಟ್ಟಿ ಜೊತೆಯಾಗಿ ಹೊಂಗೆ ಗಿಡಗಳನ್ನು ನೆಡುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ವಿಠಲ ಕುಲಾಲ ವಹಿಸಿದ್ದರು. ರೋಟರಿ ಕ್ಲಬ್ ಮಿಡ್ ಟೌನ್ ಕುಂದಾಪುರದ ಪೂರ್ವಾಧ್ಯಕ್ಷರು ಹಾಗೂ ವಲಯ 1 ರ ನಿಯೋಜಿತ ಸಹಾಯಕ ಗವರ್ನರ್ ರೊ. ಜಯಪ್ರಕಾಶ್ ಶೆಟ್ಟಿ ವೈ, ಕಾರ್ಯದರ್ಶಿ ರೊ. ನಿರಂಜನ್ ಶೆಟ್ಟಿ , ಹುಣಸೆಮಕ್ಕಿ ಸಮೂಹ ಸಂಪನ್ಮೂಲ ವ್ಯಕ್ತಿ ರಾಜೀವ ಕುಲಾಲ, ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಸಹಶಿಕ್ಷಕರಾದ ಸಂಜೀವ ಎಂ, ಜಯಲಕ್ಷ್ಮಿ ಬಿ., ವಿಜಯಾ ಆರ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಇನ್ಫೋಸಿಸ್ ವತಿಯಿಂದ ಉಡುಪಿ ಜಿಲ್ಲಾಡಳಿತಕ್ಕೆ ಸುಮಾರು 70 ಲಕ್ಷ ರೂ. ಮೌಲ್ಯದ 10 ಆಕ್ಸಿಜನ್ ಕಾನ್ಸನ್ಟ್ರೇಟರ್ ಹಾಗೂ 10 ವೆಂಟಿಲೇಟರ್‌ಗಳನ್ನು  ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಹಸ್ತಾಂತರಿಸಲಾಯಿತು. ನಂತರ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಇನ್ಫೋಸಿಸ್ ವತಿಯಿಂದ ಕೋವಿಡ್ ಮೊದಲನೇ ಅಲೆಯ ಸಂದರ್ಭದಲ್ಲೂ ಸಹ ಜಿಲ್ಲಾಡಳಿತದ ಮನವಿಗೆ ಕೂಡಲೇ ಸ್ಪಂದಿಸಿ ಅಗತ್ಯವಿದ್ದ ಅರೋಗ್ಯ ಸಾಮಗ್ರಿಗಳನ್ನು ನೀಡಲಾಗಿದ್ದು, ಕೋವಿಡ್ 2 ನೇ ಅಲೆಯ ಈ ಸಮಯದಲ್ಲೂ ಸಹ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ, ಅಕ್ಸಿಜನ್ ಕಾನ್ಸನ್ಟ್ರೇಟರ್ ಮತ್ತು ವೆಂಟಿಲೇಟರ್ಗಳನ್ನು ನೀಡಿದ್ದು, ಸಂಸ್ಥೆಯ ಮುಖ್ಯಸ್ಥರಿಗೆ ಜಿಲ್ಲಾಡಳಿತ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು. ಪ್ರಸ್ತುತ ನೀಡಿರುವ ಉಪಕರಣಗಳಲ್ಲಿ ಉಡುಪಿ ಜಿಲ್ಲಾಸ್ಪತ್ರೆಗೆ 5 ವೆಂಟಿಲೇಟರ್ ಮತ್ತು ಅಕ್ಸಿಜನ್ ಕಾನ್ಸನ್ಟ್ರೇಟರ್, ಕುಂದಾಪುರ ತಾಲೂಕು ಆಸ್ಪತ್ರೆಗೆ 2 ವೆಂಟಿಲೇಟರ್ ಮತ್ತು ಅಕ್ಸಿಜನ್ ಕಾನ್ಸನ್ಟ್ರೇಟರ್, ಕಾರ್ಕಳ ತಾಲೂಕು ಆಸ್ಪತ್ರೆಗೆ 3 ವೆಂಟಿಲೇಟರ್ ಮತ್ತು ಅಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ನೀಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಕಾರದ ಉಚಿತ ಲಸಿಕಾ ಅಭಿಯಾನದ ಪೂರ್ಣ ಸದುಪಯೋಗವನ್ನು ಪಡೆದುಕೊಂಡಿರುವ ಭಂಡಾರ್ಕಾರ್ಸ್ ಕಾಲೇಜು ೧೮ ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಲಸಿಕೆ ನೀಡಿದ್ದು ಈ ಬಗ್ಗೆ ಪೋಷಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಉಡುಪಿ ಜಿಲ್ಲಾ ಆಸ್ಪತ್ರೆ, ಕುಂದಾಪುರ ತಾಲೂಕಾ ಆಸ್ಪತ್ರೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ ಜೂನ್ 25ರಿಂದ ಮೂರು ದಿನಗಳ ಕಾಲ ಉಚಿತ ಲಸಿಕಾ ಅಭಿಯಾನ ವನ್ನು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಸರಕಾರದ ಈ ಅಭಿಯಾನದ ಸದುಪಯೋಗವನ್ನು ಕಾಲೇಜಿನ ಹೆಚ್ಚಿನ ವಿದ್ಯಾರ್ಥಿಗಳಿಗೆ ತೆಗೆದುಕೊಂಡರು. ಒಟ್ಟು ಮೂರು ದಿನಗಳ ಕಾಲ ನಡೆದ ಈ ಅಭಿಯಾದಲ್ಲಿ ಮೊದಲನೇ ದಿನ ೪೬೦ ಎರಡನೇ ದಿನ ೧೦೫೧ ಮತ್ತು ಮೂರನೇ ದಿನ ೪೫೧ ಮಂದಿ ಮೊದಲನೇ ಮತ್ತು ಕೆಲವರು ಎರಡನೇ ಡೋಸ್‌ನ್ನು ತೆಗೆದುಕೊಂಡಿದ್ದಾರೆ. ಉದ್ಘಾಟನೆ: ಕಾರ್ಯಕ್ರಮವನ್ನು ಕುಂದಾಪುರ ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ರಾಬರ್ಟ ರೆಬೆಲ್ಲೋ ಉದ್ಘಾಟಿಸಿ ಮಾತನಾಡಿ ವ್ಯಾಕ್ಸಿನ ತೆಗೆದುಕೊಂಡಾಗ ಕೋವಿಡ್ ಸಾಂಕ್ರಾಮಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಜು.1: ಉಡುಪಿ ಜಿಲ್ಲಾ ಪಂಚಾಯತಿ ಸಂಬಂಧಿಸಿದಂತೆ ಚುನಾವಣಾ ಕ್ಷೇತ್ರಗಳ ಮೀಸಲಾತಿಯು ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಗೊಂಡಿದೆ. ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜುಲೈ 8ರ ಒಳಗೆ ಕಾರ್ಯದರ್ಶಿಗಳು, ರಾಜ್ಯ ಚುನಾವಣಾ ಆಯೋಗ, 1ನೇ ಮಹಡಿ, ಕೆ.ಎಸ್.ಸಿ.ಎಂ.ಎಫ್ ಕಟ್ಟಡ ಹಿಂಭಾಗ, ನಂ8, ಕನ್ನಿಂಗ್ ಹ್ಯಾಂ ರಸ್ತೆ, ಬೆಂಗಳೂರು – 560052 ಇಲ್ಲಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ತಿಳಿಸಲಾಗಿದೆ. ಇದನ್ನೂ ಓದಿ: ► ಉಡುಪಿ ಜಿಲ್ಲೆ – ತಾಲೂಕು ಪಂಚಾಯತಿ ಚುನಾವಣಾ ಕ್ಷೇತ್ರದ ಮೀಸಲಾತಿ ಪ್ರಕಟ – https://kundapraa.com/?p=49636 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಜು.1: ಉಡುಪಿ ಜಿಲ್ಲೆಯ ತಾಲೂಕು ಪಂಚಾಯತಿ ಚುನಾವಣಾ ಕ್ಷೇತ್ರಗಳ ಮೀಸಲಾತಿಯು ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಗೊಂಡಿದೆ. ಉಡುಪಿ ತಾಲೂಕು ಪಂಚಾಯತಿಯ 11 ಕ್ಷೇತ್ರ, ಕಾಪು ತಾಲೂಕು ಪಂಚಾಯತಿಯ 10 ಕ್ಷೇತ್ರ, ಬ್ರಹ್ಮಾವರ ತಾಲೂಕು ಪಂಚಾಯತಿಯ 13 ಕ್ಷೇತ್ರ, ಬೈಂದೂರು ತಾಲೂಕು ಪಂಚಾಯತಿಯ 9 ಕ್ಷೇತ್ರ, ಕುಂದಾಪುರ ತಾಲೂಕು ಪಂಚಾಯತಿಯ 19 ಕ್ಷೇತ್ರ, ಕಾರ್ಕಳ ತಾಲೂಕು ಪಂಚಾಯತಿಯ 13 ಕ್ಷೇತ್ರ, ಹೆಬ್ರಿ ತಾಲೂಕು ಪಂಚಾಯತಿಯ 11 ಕ್ಷೇತ್ರಗಳಿಗೆ ಮೀಸಲಾಯಿ ಪ್ರಕಟವಾಗಿದೆ. ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜುಲೈ 8ರ ಒಳಗೆ ಕಾರ್ಯದರ್ಶಿಗಳು, ರಾಜ್ಯ ಚುನಾವಣಾ ಆಯೋಗ, 1ನೇ ಮಹಡಿ, ಕೆ.ಎಸ್.ಸಿ.ಎಂ.ಎಫ್ ಕಟ್ಟಡ ಹಿಂಭಾಗ, ನಂ8, ಕನ್ನಿಂಗ್ ಹ್ಯಾಂ ರಸ್ತೆ, ಬೆಂಗಳೂರು – 560052 ಇಲ್ಲಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ತಿಳಿಸಲಾಗಿದೆ. ಇದನ್ನೂ ಓದಿ: ► ಉಡುಪಿ ಜಿಲ್ಲಾ ಪಂಚಾಯತಿ ಚುನಾವಣಾ ಕ್ಷೇತ್ರದ ಮೀಸಲಾತಿ ಪ್ರಕಟ – https://kundapraa.com/?p=49642 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೀನುಗಾರರ ಒಕ್ಕೂಟದ ವತಿಯಿಂದ ನಾಡದೋಣಿ ಮೀನುಗಾರರು ಸಮುದ್ರ ಪೂಜೆ ಹಾಗೂ ಕಡಲಿಗೆ ಬಾಗಿನ ಅರ್ಪಿಸಿ, ಈ ಮೀನುಗಾರಿಕೆ ಋತುವಿನಲ್ಲಿ ಸುರಕ್ಷಿತ ಹಾಗೂ ಸಮೃದ್ಧ ಮತ್ಸ್ಯಸಂಪತ್ತನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು. ಪ್ರತೀ ವರ್ಷದ ಸಂಪ್ರದಾಯದಂತೆ ನಾಡದೋಣಿ ಮೀನುಗಾರರು ಕಡಲಿಗೆ ಮೀನುಗಾರಿಕೆಗೆ ಇಳಿಯುವ ಮುನ್ನ ಮರವಂತೆಯ ಶ್ರೀ ಮಹಾರಾಜಸ್ವಾಮಿ ವರಾಹ ದೇವಸ್ಥಾನದ ಬಳಿ ಸಮುದ್ರ ಪೂಜೆ ಸಲ್ಲಿಸುವುದು ವಾಡಿಕೆ. ಸಂಪ್ರದಾಯದಂತೆ ಗುರುವಾರ ಬೆಳಿಗ್ಗೆ ಶ್ರೀ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ ಶ್ರೀದೇವರಿಗೆ ಪೂಜೆ ಸಲ್ಲಿಸಿ, ದೇವಸ್ಥಾನದ ಸಮೀಪದ ತೀರದಲ್ಲಿ ಸಮುದ್ರ ದೇವತೆಯ ಲಿಂಗ ರಚಿಸಿ ಪೂಜೆ ಮಾಡಿದ ಬಳಿಕ ಸಮುದ್ರ ಪೂಜೆ ನಡೆಯಿತು. ಅರ್ಚಕ ನರಸಿಂಹ ಅಡಿಗ ಅವರು ಸಮುದ್ರ ಪೂಜೆಯ ವಿಧಿ ವಿಧಾನಗಳನ್ನು ನೆರವೇರಿಸಿದರು. ಸಮುದ್ರ ಪೂಜೆಯ ಬಳಿಕ ಉತ್ತಮ ಮೀನುಗಾರಿಕಾ ಋತುವಿನ ನಿರೀಕ್ಷೆಯೊಂದಿಗೆ ನಾಡದೋಣಿ ಮೀನುಗಾರರು ಕಡಲಿಗೆ ಇಳಿಯುತ್ತಾರೆ. ಈ ಸಂದರ್ಭದಲ್ಲಿ ಮರವಂತೆಯ ಶ್ರೀ ಮಹಾರಾಜಸ್ವಾಮಿ ವರಾಹ ದೇವಸ್ಥಾನದ ಧರ್ಮದರ್ಶಿ ರಾಮಚಂದ್ರ ಹೆಬ್ಬಾರ್, ಗಂಗೊಳ್ಳಿ ವಲಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡ ಚಿತ್ರರಂಗದ ಭರವಸೆಯ ನಟ ರಕ್ಷಿತ್ ಶೆಟ್ಟಿ ವಿರುದ್ಧ ಟಿವಿ ಕಾರ್ಯಕ್ರಮವೊಂದರಲ್ಲಿ ಅವಾಚ್ಯ ಪದಗಳನ್ನು ಬಳಸಿ ತೇಜೋವಧೆ ಮಾಡಿರುವುದನ್ನು ಖಂಡಿಸಿ ಖಾಸಗಿ ವಾಹಿನಿಯೊಂದರ ವಿರುದ್ಧ ತಾಲೂಕಿನ ಶಂಕರನಾರಾಯಣ ಠಾಣೆಯಲ್ಲಿ ದೂರು ನೀಡಲಾಗಿದೆ. ನಟ ರಕ್ಷಿತ್ ಶೆಟ್ಟಿಯನ್ನು ನಿಂದಿಸುವ ಉದ್ದೇಶದಿಂದಲೇ ಕಾರ್ಯಕ್ರಮ ರೂಪಿಸಿದ್ದಾರೆಂದು ಆರೋಪಿಸಿ ಬುಧವಾರ ರಾತ್ರಿಯಿಂದಲೇ ರಕ್ಷಿತ್ ಶೆಟ್ಟಿ ಅಭಿಮಾನಿಗಳು ತಮ್ಮ ಆಕ್ರೋಶ ಹೊರಹಾಕುತ್ತಿದ್ದು ಇದೀಗ ಶಂಕರನಾರಾಯಣದ ಭರತ್ ತಲ್ಲಂಜೆ ಎಂಬುವವರು ಠಾಣೆಯಲ್ಲಿ ದೂರು ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ. ದೂರಿನ ಸಾರಾಂಶವೇನು? ಬುಧವಾರ ಸಂಜೆ 7:30ಕ್ಕೆ ಪಬ್ಲಿಕ್ ಟಿವಿ ವಾಹಿನಿಯಲ್ಲಿ ಪ್ರಸಾರಗೊಳ್ಳುತ್ತಿರುವ ಸಿನಿ ಅಡ್ಡ ಕಾರ್ಯಕ್ರಮದಲ್ಲಿ ರಕ್ಷಿತ್ ಶೆಟ್ಟಿ ಅವರು ರಸ್ತೆ ಬದಿಯಲ್ಲಿ ಪಾನಿಪುರಿ ಮಾರಲಿಕ್ಕೂ ನಾಲಾಯಕ ಎಂದು ಅಪಪ್ರಚಾರ ಮಾಡಿರುತ್ತಾರೆ. ರಕ್ಷಿತ್ ಶೆಟ್ಟಿಯವರ ತೆಜೋವಧೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಪ್ರಸರಣ ಮಾಡಿರುತ್ತಾರೆ ಮಹೇಶದೇವ ಶೆಟ್ಟಿ ಎಂಬುವರು ಪ್ರೊಗ್ರಾಮ್ ಪ್ರೊಡ್ಯೂಸರ್ ಆಗಿ, ದಿವ್ಯಜ್ಯೋತಿ ಎಂಬುವರು ನಿರೂಪಕಿಯಾಗಿ ಈ ಕಾರ್ಯಕ್ರಮ…

Read More