Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಂಸ್ಥೆಯಲ್ಲಿ ಸಮಾಜಕ್ಕಾಗಿ ಏನಾದರೂ ಮಾಡಬೇಕೆಂಬ ಹಂಬಲವಿದ್ದಾಗ ಮಾತ್ರ ಅಲ್ಲಿ ಅತ್ಯುತ್ತಮ ಯೋಜನೆಗಳು ಹುಟ್ಟಿಕೊಳ್ಳುತ್ತವೆ. ಉತ್ತಮ ಸಂಘ-ಸಂಸ್ಥೆಗಳು ವ್ಯಕ್ತಿತ್ವ ರೂಪಿಸುವ ಕೆಲಸವನ್ನು ಮಾಡುತ್ತವೆ ಎಂದು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಅವರು ಸುರಭಿ ರಿ. ಬೈಂದೂರು ಹಾಗೂ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಆಶ್ರಯದಲ್ಲಿ ಫೆ.೮ರಿಂದ ಜರುಗಲಿರುವ ಶಿಶಿರ ನಾಟಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಕಳೆದ ೧೯ ವರ್ಷಗಳಿಂದ ಸುರಭಿ ಸಂಸ್ಥೆಯು ಬೈಂದೂರಿಗೆ ವಿಭಿನ್ನ ಕಾರ್ಯಕ್ರಮಗಳನ್ನು ನೀಡಿ ಜನಮಾನಸದಲ್ಲಿ ಗುರುತಿಸಿಕೊಂಡಿರುವುದಲ್ಲದೇ ಬೈಂದೂರಿನ ಹೆಸರನ್ನು ಎಲ್ಲೆಡೆಯೂ ಪಸರಿಸುವಲ್ಲಿ ತನ್ನದೇ ಆದ ಕೊಡುಗೆ ನೀಡಿದೆ ಎಂದರು. ಸುರಭಿ ರಿ. ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೌರವ ಸಲಹೆಗಾರ ಜಿ. ತಿಮ್ಮಪ್ಪಯ್ಯ ಮಯ್ಯಾಡಿ, ಜೊತೆ ಕಾರ್ಯದರ್ಶಿ ಅಬ್ದುಲ್ ರವೂಫ್, ನಿರ್ದೇಶಕ ಸುಧಾಕರ ಪಿ. ಬೈಂದೂರು, ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಗತ್ತು ಸ್ವರ್ಧಾತ್ಮಕ ಸಾಗುತ್ತಿದ್ದು, ಯುವಜನತೆ ಹೊಸ ಸಾಧ್ಯತೆಗಳಿಗೆ ತೆರೆದುಕೊಂಡು ಗಟ್ಟಿಯಾಗಿ ನಿಲ್ಲುವ, ಬದುಕಿನಲ್ಲಿ ಗೆಲ್ಲವ ವಿಶ್ವಾಸ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಬಸ್ರೂರು ಶಾರದಾ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಪಾಂಡುರಂಗ ಹೇಳಿದರು. ಅವರು ನೆಹರು ಯುವ ಕೇಂದ್ರ ಉಡುಪಿ ಹಾಗೂ ಮೂಕಾಂಬಿಕಾ ಯುತ್ ಕ್ಲಬ್ ಬೈಂದೂರು ಆಶ್ರಯದಲ್ಲಿ ಬೈಂದೂರಿನ ಮೂಕಾಂಬಿಕಾ ಕಾಂಪ್ಲೆಕ್ಸ್ ಸಭಾಭವನದಲ್ಲಿ ಸೋಮವಾರ ಜರುಗಿದ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಎಲ್ಲರಿಗೂ ಬದುಕಿನಲ್ಲಿ ಸಂತೋಷದ ದಿನಗಳನ್ನು ಕಾಣುವ ಕಾತುರ ಇರುತ್ತದೆ. ಆದರೆ ಕಷ್ಟಪಡಲು ಯಾರೂ ತಯಾರಿರುವುದಿಲ್ಲ. ಪರಿಶ್ರಮವಿಲ್ಲದೇ ಯಶಸ್ಸು ಪಡೆಯುವುದು ಅಸಾಧ್ಯ ಎಂದ ಅವರು. ಯುವಜನರಲ್ಲಿ ಮೊಬೈಲ್ ಅತಿಯಾದ ಬಳಕೆಯಿಂದಾಗಿ ಮಾನವ ಸಂಬಂಧಗಳು ದೂರವಾಗುತ್ತಿವೆ. ನಾನು ಎಂಬ ಅಹಂ ಭಾವವೂ ಆವರಿಸಿಕೊಳ್ಳುತ್ತಿದೆ. ಇದನ್ನು ಮೆಟ್ಟಿ ನಿಂತಾಗಲೇ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದರು. ಮೂಕಾಂಬಿಕಾ ಯುತ್ ಕ್ಲಬ್ ಅಧ್ಯಕ್ಷ ಭಾಸ್ಕರ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನೆಹರು ಯುವ ಕೇಂದ್ರದ ಸ್ವಯಂಸೇವಕ ಸುನಿಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನೆಹರು ಯುವ ಕೇಂದ್ರ ಉಡುಪಿ ಹಾಗೂ ಸುರಭಿ ರಿ. ಬೈಂದೂರು ಸಂಸ್ಥೆಯ ಆಶ್ರಯದಲ್ಲಿ ಗುರುವಾರ ಇಲ್ಲಿನ ರೋಟರಿ ಭವನದಲ್ಲಿ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬೈಂದೂರು ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಅಬ್ದುಲ್ ರವೂಫ್ ಮಾತನಾಡಿ ಮಹತ್ಮಾ ಗಾಂಧಿಯವರ ಸಿದ್ಧಾಂತವನ್ನು ಆಚರಣೆ ತರುವ ಕೆಲಸವಾದರೆ ಅದುವೇ ಅವರಿಗೆ ನೀಡಬಹುದಾದ ನಿಜವಾದ ಗೌರವ ಎಂದರು. ಎಲ್ಲಾ ಧರ್ಮಗಳ ಆಶಯ ಒಂದೇ ಆಗಿದ್ದು, ಮನುಷ್ಯ ವರ್ಗವನ್ನು ಗೌರವಿಸಿ ಬದುಕಬೇಕು ಎಂಬ ಭಾವನೆ ಇದ್ದರೆ ಮಾತ್ರ ಮನುಷ್ಯನ ಬದುಕು ಉತ್ತಮವಾಗಲು ಹಾಗೂ ಭಾವೈಕ್ಯತೆ ಮೂಡಲು ಸಾಧ್ಯವಿದೆ ಎಂದರು ಈ ಸಂದರ್ಭ ಸುರಭಿ ರಿ. ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಅತಿಥಿಗಳಾಗಿದ್ದರು. ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹತ್ಮಾ ಗಾಂಧೀಜಿ ಅವರನ್ನು ಸ್ಮರಿಸಿ ಬಳಿಕ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು. ನೆಹರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳಿಗೆ ವೇಗ ನೀಡಿ ಅವಧಿಯೊಳಗಡೆ ಪೂರ್ಣಗೊಳಿಸಬೇಕು. ಪಡುಬಿದ್ರಿ ರಸ್ತೆಕಾಮಗಾರಿ ಮತ್ತು ಕುಂದಾಪುರದ ಶಾಸ್ತ್ರಿ ಸರ್ಕಲ್ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಲು ಮಾರ್ಚ್ 31ರ ದಿನ ನಿಗದಿಪಡಿಸಿದ್ದು, ಹೇಳಿದ ದಿನಾಂಕದಂದು ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಟೋಲ್ ಸಂಗ್ರಹ ಮಾಡಲು ಬಿಡುವುದಿಲ್ಲ ಎಂದು ಉಡುಪಿ ಜಿಲ್ಲಾ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಜಿಲ್ಲಾ ಪಂಚಾಯತ್‌ನ ವಿ.ಎಸ್‌ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಲ್ಪೆ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಡ್ಡಿಯಾಗುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಿ, ಯುದ್ದೋಪಾದಿಯಲ್ಲಿ ಕೆಲಸ ಮಾಡಿ, ಮಳೆಗಾಲಕ್ಕೂ ಮೊದಲೆ ಹೆದ್ದಾರಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಏಪ್ರಿಲ್ ಅಂತ್ಯದೊಳಗೆ ಪಡುಬಿದ್ರಿ ಮತ್ತುಶಾಸ್ತ್ರಿ ಸರ್ಕಲ್ ಫ್ಲೈಓವರ್ ಕಾಮಗಾರಿಗಳನ್ನು ಪೂರ್ಣಗೊಳಿಸುವುದಾಗಿ ಹೇಳಿದರು. ಕಾಮಗಾರಿಗಳಲ್ಲಿ ವಿಳಂಬ ತೋರುವ ಗುತ್ತಿಗೆ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಸಂಸದೆ ಅಧಿಕಾರಿಗಳಿಗೆ ಸೂಚಿಸಿದರು. ಅಲೆವೂರಿನಲ್ಲಿ ಕೇಂದ್ರೀಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಹಾಲಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಪುನರಾಯ್ಕೆಗೊಂಡರು. ಉಪಾಧ್ಯಕ್ಷರಾಗಿ ಈಶ್ವರ ಹಕ್ಲತೋಡು ಆಯ್ಕೆಗೊಂಡರು. ಬುಧವಾರ ಸಂಘದ ಮುಖ್ಯ ಕಛೇರಿಯಲ್ಲಿ ಜರುಗಿದ ಆಯ್ಕೆ ಪ್ರಕ್ರಿಯೆಯಲ್ಲಿ ಇಬ್ಬರೂ ಅವಿರೋಧವಾಗಿ ಚುನಾಯಿತರಾದರು. ಕೃಷಿ ಇಲಾಖೆಯ ಅಧಿಕಾರಿ ಶಂಕರ ಶೇರ್ವೆಗಾರ್ ಚುನಾವಣಾಧಿಕಾರಿ ಆಗಿದ್ದರು. ಈ ಸಂದರ್ಭ ನಿರ್ದೇಶಕರಾದ ಗುರುರಾಜ ಹೆಬ್ಬಾರ್, ನಾಗರಾಜ ಖಾರ್ವಿ, ಮಂಜು ದೇವಾಡಿಗ, ಮೋಹನ ಪೂಜಾರಿ, ರಘುರಾಮ ಶೆಟ್ಟಿ, ಸುರೇಶ ಶೆಟ್ಟಿ, ದಿನಿತಾ ಶೆಟ್ಟಿ, ಜಲಜಾಕ್ಷಿ, ಭರತ ದೇವಾಡಿಗ, ವೀರೇಂದ್ರ ಶೆಟ್ಟಿ, ಹೂವ ನಾಯ್ಕ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮೇಲ್ವಿಚಾರಕ ವಿಠಲ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ ಪೈ ಇದ್ದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ನಿರ್ದೇಶಕರು ಮತ್ತು ಸಿಬ್ಬಂದಿ ಅಭಿನಂದಿಸಿದರು. ರೈತರ ಸೇವೆಯೇ ಪ್ರಥಮ ಆದ್ಯತೆ: ಆಯ್ಕೆ ಪ್ರಕ್ರಿಯೆ ಬಳಿಕ ಮಾತನಾಡಿದ ಪ್ರಕಾಶ್ಚಂದ್ರ ಶೆಟ್ಟಿ ಇಪ್ಪತ್ತೆರಡು ವರ್ಷಗಳಿಂದ ಅಧ್ಯಕ್ಷನಾಗಿದ್ದೇನೆ. ಈ ಬಾರಿ ಶೇ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಟಿ. ನಾರಾಯಣ ಹೆಗ್ಡೆ ಅವಿರೋಧವಾಗಿ ಮೂರನೇ ಭಾರಿಗೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ನಿರ್ದೇಶಕರುಗಳಾಗಿ ವೆಂಕ್ಟ ಪೂಜಾರಿ, ಕೃಷ್ಣ ದೇವಾಡಿಗ, ಗಿರೀಶ್ ಮೇಸ್ತ, ಚಿಕ್ಕು ಪೂಜಾರಿ, ವಸಂತಕುಮಾರ್ ಶೆಟ್ಟಿ, ನಾಗರಾಜ ಶೆಟ್ಟಿ, ಡಿ. ಸದಾಶಿವ ಶೇರುಗಾರ್, ಕೆ. ಬಾಬು ಶೆಟ್ಟಿ, ಟಿ. ಕೃಷ್ಣ ನಾಯ್ಕ್, ಶಂಕರ ನಾಯ್ಕ್, ಜ್ಯೋತಿ ಶೇರುಗಾರ್, ರಜನಿ ಶ್ಯಾನುಭಾಗ್ ಈ ಮೊದಲು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಅವಿರೋಧವಾಗಿ ನಡೆಸಿದರು. ಬಳಿಕ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಮಾತನಾಡಿ ಸಂಸ್ಥೆಯಲ್ಲಿ ಹನ್ನೊಂದು ಸಾವಿರಕ್ಕೂ ಅಧಿಕ ಸದಸ್ಯರಿದ್ದು, ಉತ್ತಮ ಸೇವೆ ನೀಡುತ್ತಾ ಬರಲಾಗಿದೆ. ಇನ್ನು ಮುಂದೆಯೂ ಹಲವಾರು ಜವಾಬ್ದಾರಿಗಳಿದ್ದು, ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನೆರವೇರಿಸುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭ ಚುನಾವಣಾಧಿಕಾರಿ ವೇಣುಗೋಪಾಲ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ವಿಠಲ ಗೌಡ, ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಾಂತಾನಂದ ಶೆಟ್ಟಿ ಸ್ವಾಗತಿಸಿ, ಶಾಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಂಚಾರಿ ಪೋಲೀಸ್ ಠಾಣೆ ಮತ್ತು ರೋಟರಿ ಕ್ಲಬ್ ಮಿಡ್‌ಟೌನ್ ಕುಂದಾಪುರ ಇವರ ಸಹಯೋಗದೊಂದಿಗೆ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷ್ಷತಾ ಮಾಹಿತಿ ಶಿಬಿರವನ್ನು ಏರ್ಪಡಿಸಲಾಯಿತು. ಟ್ರಾಫಿಕ್ ಎಎಸ್‌ಐ ಪುಷ್ಪಾ ಅವರು ರಸ್ತೆ ಸಂಚಾರದ ವೇಳೆಯಲ್ಲಿ ಅನುಸರಿಸಬೇಕಾದ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಅವಶ್ಯಕ ಮಾಹಿತಿಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ವಲಯ 1 ರ ರೋಟರಿ ಸಹಾಯಕ ಗವರ್ನರ್ ರವಿರಾಜ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರೋಟರಿ ಕ್ಲಬ್ ಮಿಡ್‌ಟೌನ್ ಕುಂದಾಪುರ ಇದರ ಅದ್ಯಕ್ಷರಾದ ಶಶಿಧರ ಶೆಟ್ಟಿ, ಕಾರ್ಯದರ್ಶಿ ರಂಜಿತ್ ಕುಮಾರ್ ಶೆಟ್ಟಿ, ರಸ್ತೆ ಸುರಕ್ಷತಾ ವಿಭಾಗದ ನಿರ್ದೇಶಕರಾದ ನಿರಂಜನ್ ಶೆಟ್ಟಿ, ಕಾಲೇಜಿನ ಪ್ರಾಶುಪಾಲರಾದ ಗಣೇಶ ಮೊಗವೀರ, ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಕೃಷ್ಣ ಅಡಿಗ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷರಾಗಿ ಹಾಲಿ ಉಪಾಧ್ಯಕ್ಷ ಎಂ. ಚಂದ್ರಶೀಲ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ನಿರ್ದೇಶಕರುಗಳಾಗಿ ಜಗದೀಶ ಪಿ. ಪೂಜಾರಿ, ನರಸಿಂಹ ದೇವಾಡಿಗ, ಎಂ. ಅಣ್ಣಪ್ಪ ಬಿಲ್ಲವ, ವಾಸು ಪೂಜಾರಿ, ರಾಮಕೃಷ್ಣ ಖಾರ್ವಿ, ನಾರಾಯಣ ಶೆಟ್ಟಿ, ಎಂ. ನಾಗಮ್ಮ, ಸರೋಜಾ, ಪ್ರಕಾಶ ದೇವಾಡಿಗ, ರಾಮ ಗಾಂಧಿನಗರ, ಭೋಜ ನಾಯ್ಕ್ ಆಯ್ಕೆಯಾಗಿದ್ದು, ಅವರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಸತತ ಹತ್ತನೇ ಭಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಎಸ್. ರಾಜು ಪೂಜಾರಿ ಅವರು ಮಾತನಾಡಿ ಕಳೆದ 25 ವರ್ಷಗಳಲ್ಲಿ ಹಲವರು ಒಗ್ಗಟ್ಟಾಗಿ ಶ್ರಮಿಸಿದ್ದರಿಂದ ಸಂಸ್ಥೆ ಉತ್ತಮ ಪ್ರಗತಿ ಸಾಧಿಸಲು ಸಾಧ್ಯವಾಗಿದೆ. ಭವಿಷ್ಯದಲ್ಲಿಯೂ ಹಲವಾರು ಯೋಜನೆಗಳು ನಮ್ಮ ಮುಂದಿದ್ದು, ಎಲ್ಲಾ ನಿರ್ದೇಶಕರುಗಳ ಸಹಕಾರದೊಂದಿಗೆ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದ ಅವರು ಆಯ್ಕೆಯಾಗುವಲ್ಲಿ ಸಹಕರಿಸಿದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಚುನಾವಣಾ ಅಧಿಕಾರಿಯಾಗಿದ್ದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ, ಜ.26: ದೇಶದಲ್ಲಿ ನೂರ ಮೂವತ್ತು ಕೋಟಿ ಜನಸಂಖ್ಯೆ ಇದ್ದರೂ ಅಬ್ದುಲ್ ಕಲಾಂ ಕಂಡ 2020ಯ ಕನಸನ್ನು ಪೂರ್ಣವಾಗಿ ಸಾಕಾರಗೊಳಿಸಲು ವಿಫಲರಾಗಿದ್ದೇವೆ. ಸಾಧಿಸಬೇಕಾದ ವಿಷಯಗಳು ಇನ್ನು ತುಂಬಾ ಇವೆ. ಭಾರತದಲ್ಲಿ ಪ್ರತಿದಿನವು ಹೊಸ ಹೊಸ ಸಮಸ್ಯೆಗಳು ಎದುರಾಗುತ್ತಿವೆ. ದೇಶದಲ್ಲಿ 40ಕೋಟಿ ಜನರು ತಿನ್ನಲು ಅನ್ನ ಸಿಗದೆ ನರಳುತ್ತಿದ್ದಾರೆ. ನಮ್ಮ ರಕ್ಷಣೆಯಿಂದ ಹಿಡಿದು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವವರೆಗೆ ಪ್ರತೀ ವ್ಯವಸ್ಥೆಯನ್ನು ದೇಶ ಮಾಡಿಕೊಟ್ಟಿದೆ ಹೀಗಿರುವಾಗ ದೇಶ ಚೆನ್ನಾಗಿರಲು ನಾವೇನು ಕೊಡುಗೆ ನೀಡಿದ್ದೇವೆ ಎಂಬುದನ್ನು ಚಿಂತಿಸುವ ಅನಿವಾರ್ಯತೆ ಇದೆ ಎಂದು ಮಾಜಿ ಐಪಿಎಸ್ ಆಫೀಸರ್ ಅಣ್ಣಾಮಲೈ ಹೇಳಿದರು. ಪುತ್ತಿಗೆಯ ವನಜಾಕ್ಷಿ ಕೆ ಶ್ರೀಪತಿ ಭಟ್ ಬಯಲು ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆದ 71ನೇ ಗಣರಾಜ್ಯೋತ್ಸವದ ದ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ’ಗಣರಾಜ್ಯೋತ್ಸವ ಆಚರಿಸುವುದು ನಮ್ಮ ಕರ್ತವ್ಯಗಳನ್ನು ತಿಳಿಯಲು. ದೊಡ್ಡ ಮಟ್ಟಿನ ದೇಶ ಸೇವೆ ಸಾಧ್ಯವಾಗದಿದ್ದರೂ ನಮ್ಮ ಊರಿನಲ್ಲಿ ಪರಿಸರಕ್ಕಾಗಿ ಅಥವಾ ಜನರಿಗಾಗಿ ಮಾಡುವ ಸೇವೆಗಳು ದೇಶಕ್ಕಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಆಡಳಿತ, ಕುಂದಾಪುರ ಪುರಸಭೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ 71ನೇ ಗಣರಾಜ್ಯೋತ್ಸವದ ದ್ವಜಾರೋಹಣವನ್ನು ಕುಂದಾಪುರ ಸಹಾಯಕ ಆಯುಕ್ತ ಕೆ. ರಾಜು ನೆರವೇರಿಸಿದರು. ಬಳಿಕ ಗಣರಾಜ್ಯೋತ್ಸವ ಸಂದೇಶ ನೀಡಿದ ಅವರು, ನಮ್ಮ ದೇಶದಲ್ಲಿ ಮೂರುವರೆ ಸಾವಿರ ಜಾತಿಗಳಿದ್ದರೂ ಎಲ್ಲಾ ಜಾತಿ-ಧರ್ಮಗಳ ಜನರು ಸಮಾನವಾಗಿ ಬದುಕುವ ಹಕ್ಕನ್ನು ಈ ದೇಶದ ಸಂವಿಧಾನ ನೀಡಿದ್ದು, ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳು ನಮ್ಮೊಳಗೆ ಐಕ್ಯತೆ, ಒಗ್ಗಟ್ಟನ್ನು ಬೆಳೆಸಬೇಕು. ನಾವೆಲ್ಲರೂ ತಾಯಿ ಭಾರತಾಂಬೆಯ ಮಕ್ಕಳೆಂಬ ಹೆಮ್ಮೆ ಹೆಚ್ಚಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ ಕುಂದರ್ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ತಿಪ್ಪೇಸ್ವಾಮಿ, ಎಎಸ್ಪಿ ಹರಿರಾಮ್ ಶಂಕರ್, ಪುರಸಭೆ ಸದಸ್ಯರಾದ ಶ್ರೀಧರ್ ಶೇರುಗಾರ್, ಪ್ರಭಾಕರ ವಿ, ವೃತ್ತ ನಿರೀಕ್ಷಕ ಗೋಪಿಕೃಷ್ಣ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ಅಧಿಕಾರಿ ಕುಸುಮಾಕರ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಪುರಸಭೆ ಮಾಜಿ…

Read More