Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 10 ಪೊಲೀಸ್‌ ಠಾಣೆಗಳ ಪೈಕಿ ಗಂಗೊಳ್ಳಿ ಪೊಲೀಸ್‌ ಠಾಣೆಯು 7ನೇ ಸ್ಥಾನ ಪಡೆದುಕೊಂಡಿದೆ. ಕರ್ನಾಟಕ ರಾಜ್ಯ ಪೊಲೀಸ್‌ ನಡೆಸಿರುವ ಈ ಆಂತರಿಕ ಸರ್ವೆಯಲ್ಲಿ ವಿವಿಧ ಮಾನದಂಡಗಳ ಆಧಾರದ ಮೇಲೆ ಅಂಕಗಳನ್ನು ನೀಡಲಾಗಿದೆ. ಅಪಘಾತಕ್ಕೆ ಕಡಿವಾಣ, ಸಾರ್ವಜನಿಕರೊಂದಿಗೆ ಉತ್ತಮ ಸ್ಪಂದನೆ, ದಾಖಲೆಗಳ ನಿರ್ವಹಣೆ ಮತ್ತು ತ್ವರಿತ ದೂರು ವಿಲೇವಾರಿ ಮೊದಲಾದ ಅಂಶಗಳನ್ನು ಪರಿಗಣಿಸಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ಕಲ್ಲಬೆಟ್ಟುವಿನ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 14 ವರ್ಷದ ವಯೋಮಿತಿಯ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯು ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಈ ಸಾಧನೆಯಲ್ಲಿ ಕುಂದಾಪುರದ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಸಾಯಿಶ್ ಜಿ. ಹೆಗ್ಡೆ ಹಾಗೂ ಆತ್ಮಯ್ ಎಂ. ಅವರು ಅತ್ಯುತ್ತಮ ಪ್ರತಿಭೆ ಮೆರೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್ ಅವರು ವಿಜೇತ ವಿದ್ಯಾರ್ಥಿಗಳನ್ನು ಹಾಗೂ ಅವರಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮಕ್ಕಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯವನ್ನು ವೃದ್ಧಿಗೊಳಿಸುವಂತೆ ಪ್ರೊತ್ಸಾಹಿಸಲು ಕಲಾ ಪ್ರತಿಭೋತ್ಸವವನ್ನು ಏರ್ಪಡಿಸಿದ್ದು, ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ 8 ವರ್ಷದಿಂದ 14 ವರ್ಷದ ಒಳಗಿನ ಬಾಲಪ್ರತಿಭೆಗಳು, 14 ರಿಂದ 18 ವರ್ಷದೊಳಗಿನ ಕಿಶೋರ ಪ್ರತಿಭೆಗಳು ಹಾಗೂ 18 ರಿಂದ 30 ವರ್ಷದೊಳಗಿನ ಯುವಪ್ರತಿಭೆಗಳು ಭಾಗವಹಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದವರನ್ನು ವಲಯಮಟ್ಟಕ್ಕೆ ಕಳುಹಿಸಿ ಕೊಡಲಾಗುವುದು, ವಲಯಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಗುವುದು. (ಜಿಲ್ಲಾ ಮತ್ತು ವಲಯ ಮಟ್ಟದಲ್ಲಿ ಯಾವುದೇ ನಗದು ಪುರಸ್ಕಾರ ಇರುವುದಿಲ್ಲ, ವಲಯ ಮತ್ತು ರಾಜ್ಯ ಮಟ್ಟದಲ್ಲಿ ಭಾಗವಹಿಸುವವರಿಗೆ ಪ್ರಯಾಣ ವಚ್ಚವನ್ನು ನೀಡಲಾಗುವುದು). ಜಿಲ್ಲಾ ಮಟ್ಟದಲ್ಲಿ ನಡೆಯುವ ಸ್ಪರ್ಧೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯು ವಯೋಮಿತಿ ದೃಢೀಕರಣಕ್ಕಾಗಿ ಶಾಲೆಯಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸಾರಿಕಾ ಪಿ.ವಿ. ಅವರ ಕೆನರಾ ಬ್ಯಾಂಕಿನ ಸಾಲಪತ್ರದಿಂದ (ಕ್ರೆಡಿಟ್ ಕಾರ್ಡ್) ಸೈಬರ್ ವಂಚಕರು 1,64,666 ರೂ. ಹಣ ಎಗರಿಸಿದ ಘಟನೆ ನಡೆದಿದೆ. ಸಾರಿಕಾ ಅವರು ಅ.7 ರಂದು ಬ್ಯಾಂಕ್ ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಹೊರಡುವ ವೇಳೆ ಸುಮಾರು 7.30ರ ವೇಳೆಗೆ ಮೊಬೈಲ್‌ನ ಒಳಪೆಟ್ಟಿಗೆಗೆ (ಇನ್ಬಾಕ್ಸ್) ಸಾಲಪತ್ರದಿಂದ 32,933.22ರ ನಂತೆ 5 ಬಾರಿ ಒಟ್ಟು 1.64 ಲಕ್ಷ ರೂ. ಕಡಿತ ಆಗಿರುವ ಸಂದೇಶ ಬಂದಿದೆ. ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಕಡಿತಗೊಂಡಿರುವುದು ದೃಢಪಟ್ಟಿದೆ. ಸಾರಿಕಾ ಅವರು ಮೊಬೈಲ್‌ನಲ್ಲಿ ಯಾವುದೇ ರೀತಿಯ ರಹಸ್ಯ ಸಂಖ್ಯೆಯಾಗಲಿ (ಒಟಿಪಿ), ಕಾರ್ಡ್ ದೃಢೀಕರಣ ಸಂಕೇತವನ್ನಾಗಲಿ (ವೇರಿಫಿಕೇಶನ್ ಕೋಡ್) ಕೇಳದೆಯೇ ಕೆನರಾ ಬ್ಯಾಂಕ್ ಸಾಲಪತ್ರದ ಸಂಖ್ಯೆಯಿಂದ ಯಾರೋ ಸೈಬರ್ ಕಳ್ಳರು ಈ ರೀತಿ ಹಣವನ್ನು ಎಗರಿಸಿರುವುದಾಗಿದೆ. ಈ ಬಗ್ಗೆ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವು ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗ ಬಿದ್ಕಲ್‌ಕಟ್ಟೆಯಲ್ಲಿ ಉದ್ಘಾಟನೆಗೊಂಡಿತು ಶಿಬಿರದ ಉದ್ಘಾಟನೆಯನ್ನು ಬಿದ್ಕಲ್‌ಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಶಾಂತ್ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಮಾತನಾಡಿ, ಇಂತಹ ಶಿಬಿರದಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ. ವಿಧ್ಯಾರ್ಥಿಗಳು ಸೇವೆ ಮಾಡುವುದರ ಮೂಲಕ ತಮ್ಮ ಬದುಕನ್ನು ಸಾರ್ಥಕ ಗೊಳಿಸಬೇಕೆಂದು ಆಶಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ತಗ್ಗರ್ಸೆ ಅವರು ವಹಿಸಿ, ಮಾತನಾಡಿ, ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ, ಸಹಬಾಳ್ವೆ ಮತ್ತು ನಾಯಕತ್ವದಂತಹ ಒಳ್ಳೆಯ ಮೌಲ್ಯಗಳು ಬೆಳೆಯುತ್ತದೆ ಸಮಾಜಮುಖಿ ಕೆಲಸದೊಂದಿಗೆ ದೇಶ ಸೇವೆ ಮಾಡಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ  ಮೊಳಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ದೇವಲ್ ಬೆಟ್ಟು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕಾಲ ಕಳೆಯುವ ಮೊದಲು ನಮಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರಕೃತಿ ಮತ್ತು ಜನರನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಜೀವನದಲ್ಲಿ ಯಶಸ್ಸು ಖಂಡಿತ ಸಿಗುತ್ತದೆ ಎಂದು ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಅರುಣ್ ಕುಮಾರ್ ಶಿರೂರು ಅವರು ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಬೈಂದೂರು ವಲಯದ ಶಿರೂರಿನ ಪಿ.ಎಂ. ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರದ ದಿಕ್ಸೂಚಿ ಭಾಷಣದಲ್ಲಿ ಅಭಿಪ್ರಾಯಪಟ್ಟರು. ಮೂಕಾಂಬಿಕ ಕಾಪರ್ ಇಂಡಸ್ಟ್ರೀಸ್ ಕೊಡಪಾಡಿಯ ಮಾಲೀಕರಾದ ಉಮೇಶ್ ಎಲ್ ಮೇಸ್ತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಎನ್ಎಸ್ಎಸ್ ಶಿಬಿರಗಳು ಬದುಕನ್ನು ಅರ್ಥ ಮಾಡಿಕೊಳ್ಳಲು ಕಲಿಸುತ್ತದೆ. ಕಷ್ಟಗಳನ್ನು ಎದುರಿಸುವಲ್ಲಿನ  ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.  ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂಸಿ ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್‌.ವಿ.ಎಸ್. ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ, ಸರಸ್ವತಿ ವಿದ್ಯಾಲಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿಮೂಡುಬಿದಿರೆ: ತುಮಕೂರಿನ ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಅಥ್ಲೆಟಿಕ್ ಸಂಸ್ಥೆ ರಿ. ಮತ್ತು ತುಮಕೂರು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣ ತುಮಕೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿದ ಆಳ್ವಾಸ್‌ನ ಕ್ರೀಡಾಪಟುಗಳು 06 ಚಿನ್ನ, 07 ಬೆಳ್ಳಿ ಹಾಗೂ 04 ಕಂಚು ಒಟ್ಟು 17 ಪದಕದೊಂದಿಗೆ ಸಾಹಿಲ್ 100ಮೀ.ನಲ್ಲಿ ಹಾಗೂ ಆರಂಭಮ್ ರಾಜು 60ಮೀ.ನಲ್ಲಿ ನೂತನ ಕೂಟ ದಾಖಲೆಯನ್ನು ಮಾಡಿರುತ್ತಾರೆ. ಫಲಿತಾಂಶ:ಬಾಲಕರ ವಿಭಾಗದಲ್ಲಿ : ನಿತಿನ್ ಎಲ್ ಜಿ – ಚಕ್ರ ಎಸೆತ (ದ್ವಿತೀಯ), ಆರಂಭಮ್ ರಾಜು – 60ಮೀ (ಪ್ರಥಮ), ಸಮರ್ಥ್ ಸಂಜೀವ್ ಕುಮಾರ್ – 1000ಮೀ (ಪ್ರಥಮ), ಸಾಹಿಲ್ – 100 ಮೀ (ಪ್ರಥಮ), ಅಬ್ದುಲ್ ರಜಕ್ ಶಿಗ್ಗಾನ – ಹ್ಯಾಮರ್ ತ್ರೋ (ತೃತೀಯ), ಧನುಷ್ಚಂದ್ರ – ಚಕ್ರ ಎಸೆತ (ಪ್ರಥಮ), ದರ್ಶನ್ – 200ಮೀ (ತೃತೀಯ),…

Read More

ಕುಂದಾಪ್ರ ಡಾಟ್‌  ಕಾಂ ಸುದ್ದಿ.ಉಡುಪಿ: ನಗರದ ಸಾನ್ವಿ ಟ್ರೇಡರ್ಸ್, ಕಲ್ಸಂಕ, ಅಂಬಾಗಿಲು ರೋಡ್, ಗುಂಡಿಬೈಲು ಉಡುಪಿ ಇಲ್ಲಿ ಅಕ್ಟೋಬರ್ 13ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿದ್ಯಾರ್ಥಿಗಳಿಗೆ ನಮ್ಮ ದೇಶದ ಸಂವಿಧಾನದ ಬಗ್ಗೆ ಹಾಗೂ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ಯುವ ಸಂಸತ್ತು ಸಭೆಯನ್ನು ಆಯೋಜಿಸಲಾಗುತ್ತಿದೆ. ಇದನ್ನು ವ್ಯವಸ್ಥಿತ ಹಾಗ ಅರ್ಥ ಪೂರ್ಣವಾಗಿ ಆಯೋಜಿಸಿ ಯಶಸ್ವಿಗೊಳಿಸಲು ಕಾರ್ಯ ಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ದೇಶದ ಸಂವಿಧಾನದ ಅನ್ವಯ ಸರಕಾರದ ಕಾರ್ಯಗಳು ನಡೆಯುತ್ತಿವೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರಜೆಗಳೇ ತಮ್ಮ ಪ್ರಭುಗಳನ್ನು ಆಯ್ಕೆ ಮಾಡಿ ಸರಕಾರ ನಡೆಸಲು ಅನುವು ಮಾಡಿಕೊಡಲಾಗಿದೆ. ಜನಸಾಮಾನ್ಯರ ಆಶೋತ್ತರಗಳನ್ನು ನೆರವೇರಿಸಲು ಸಂಸತ್ತಿನಲ್ಲಿ ಕಾರ್ಯ ಕಲಾಪಗಳು ಯಾವೆಲ್ಲಾ ರೀತಿಯಲ್ಲಿ ಚರ್ಚೆ ನಡೆದು ಅನುಷ್ಠಾನಗೊಳಿಸಲಾಗುತ್ತದೆ ಎಂಬುದರ ಬಗ್ಗೆ ಯುವ ಸಮುದಾಯಕ್ಕೆ ಪರಿಚಯ ಮಾಡಿಕೊಡುವ ಉದ್ದೇಶದಿಂದ ಯುವ ಸಂಸತ್ತು ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಮತ್ತು ಕಾಲೇಜಿನ ಮಾನವ ಹಕ್ಕು ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಕ್ಟೋಬರ್ 10ರ ಪ್ರಯುಕ್ತ ಮಾನಸಿಕ ಅರೋಗ್ಯ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಮನೋವೈದರು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಜಿಲ್ಲೆ ಇದರ ವೈದ್ಯಾಧಿಕಾರಿ ಡಾ. ಶಶಾಂತ್ ಎಸ್. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ದೈಹಿಕ ಆರೋಗ್ಯದಷ್ಟೇ ಮಹತದಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಶೈಕ್ಷಣಿಕ ಒತ್ತಡ , ಪರೀಕ್ಷಾ ಭಯ, ಭವಿಷ್ಯ ಚಿಂತೆ ಹಾಗೂ ವೈಯಕ್ತಿಕ ಸಮಸ್ಯೆಗಳನ್ನು ಸಮರ್ಪಕವಾಗಿ ಎದುರಿಸುವ ರೀತಿ ಮತ್ತು ಧನಾತ್ಮಕ ಚಿಂತನೆ ಸಮಯ ನಿರ್ವಹಣೆ, ಧ್ಯಾನ ವಿಶ್ರಾಂತಿ ಹಾಗೂ ವಿದ್ಯಾರ್ಥಿಗಳು ಭಾವನಾತ್ಮಕ ಸಮಸ್ಯೆಗಳನ್ನು ಎದುರಿಸುವಾಗ ಅವುಗಳನ್ನು ಮುಚ್ಚಿಡದೇ ಪೋಷಕರಿಗೆ, ಶಿಕ್ಷಕರಿಗೆ, ಆರೋಗ್ಯ ತಜ್ಞರೊಂದಿಗೆ ಮುಕ್ತವಾಗಿ ಚರ್ಚಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಆರೋಗ್ಯ ಮೇಲ್ವಿಚಾರಣಾಧಿಕಾರಿಗಳಾದ ಹೆಚ್.. ನಾಯ್ಕರ್, ಜಿಲ್ಲಾ…

Read More