ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ನಾನಾ ಕ್ಷೇತ್ರದ ಸಾಧಕರನ್ನು ಕಾರ್ಯಕ್ರಮದಲ್ಲಿ ಗುರುತಿಸಿ ಗೌರವಿಸಿದಲ್ಲಿ ಅವರ ಸಾಧನೆಗಳು ಯುವ ಜನತೆಗೆ ಸ್ಪೂರ್ತಿಯಾಗಿ ಸೇವಾ ಸಂಸ್ಥೆಗಳ ಸದಸ್ಯರಿಗೆ ಸಾಧನೆ ಮಾಡಲು ಸಹಾಯವಾಗುತ್ತದೆ ಎಂದು ಸಿನೀಯರ್ ಚೇಂಬರ್ಸ್ ಇಂಟರನ್ಯಾಷನಲ್ ಇದರ ರಾಷ್ಟ್ರೀಯ ನಿರ್ದೇಶಕ ಜಗದೀಶ್ ಕೆಮ್ಮಣ್ಣು ಹೇಳಿದರು. ಅವರು ಮಂಗಳವಾರ ಸಿನೀಯರ್ ಚೇಂಬರ್ಸ್ ಇಂಟರನ್ಯಾಷನಲ್ ನೇಜಾರು ಇದರ ವತಿಯಿಂದ ಸೆಲ್ಯೂಟ್ ಪುರಸ್ಕಾರ ಅಂಗವಾಗಿ ಬ್ರಹ್ಮಾವರ ಹೊಟೇಲ್ ಆಶ್ರಯದಲ್ಲಿ ಜರುಗಿದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾಧ್ಯಮ ಕ್ಷೇತ್ರದ ಸಾಧಕ ಬ್ರಹ್ಮಾವರದ ಹಿರಿಯ ಪತ್ರಿಕಾ ವರದಿಗಾರ ಬಂಡೀಮಠ ಶಿವರಾಮ ಆಚಾರ್ಯ ಮತ್ತು ಅಫಘಾತ ರಹಿತ ಅಟೋ ಚಾಲಕ ಪತ್ರಿಕಾ ವಿತರಕ ರವೀಂದ್ರ ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಸಿನೀಯರ್ ಚೇಂಬರ್ಸ್ ಇಂಟರನ್ಯಾಷನಲ್ ಇದರ ಸುರೇಶ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮಿತ್ರ ಕುಮಾರ್, ಯುತ್ ವಿಂಗ್ ಅಧ್ಯಕ್ಷ ರಾಹುಲ್ ಶೆಟ್ಟಿ, ಪ್ರಶಾಂತ್ ಆಚಾರ್ಯ, ಸೀನಿಯರೇಟ್ ನಿಕಟ ಪೂರ್ವ ಅಧ್ಯಕ್ಷ ಚೈತ್ರ ಕುಮಾರ್ ಉಪಸ್ಥಿತರಿದ್ದರು. ವಿಜಯ ಸುವರ್ಣ ಬೈಕಾಡಿ ಕಾರ್ಯಕ್ರಮ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೃಷಿ ಪತ್ತಿನ ಸಹಕಾರಿ ಸಂಘಗಳು ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು ಹಲವು ವರ್ಷಗಳಿಂದ ಈ ಭಾಗದ ಕೃಷಿಕರಿಗೆ ಅನುಕೂಲವಾಗುವಂತೆ ಹಲವು ಮಾದರಿ ಕಾರ್ಯ ನಡೆಸುತ್ತಿರುವುದು ಶ್ಲಾಘನೀಯವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಯೋಜನೆಗಳನ್ನು ರೂಪಿಸುವ ಕಾರ್ಯ ಈ ಸಹಕಾರಿ ಸಂಘದಿಂದಾಗಲಿ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಮಂಗಳವಾರ ಉಪ್ಪುಂದ ರೈತ ಸಿರಿ ಸಭಾಭವನದಲ್ಲಿ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಹಾಗೂ ರೈತ ಸಿರಿ, ಸೇವಾ ಒಕ್ಕೂಟ ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ರೈತರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪ್ರಗತಿಪರ ಕೃಷಿಕ ದೀಟಿ ಸೀತಾರಾಮ ಮಯ್ಯ ಅವರನ್ನು ಸನ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷ ಮಂಜು ದೇವಾಡಿಗ, ನಿರ್ದೇಶಕರಾದ ಈಶ್ವರ ಹಕತೋಡ್, ಮೋಹನ ಪೂಜಾರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೋನ್ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಟೆರೇಸ್ನಿಂದ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ರಾಜಸ್ಥಾನದ ಕರೋಲಿ ಮೂಲದ ಹೇಮೇಂದರ ಸಿಂಗ್ (40) ಮೃತಪಟ್ಟವರು. ಬಸ್ರೂರು ಮಾರ್ಗೊಳಿ ಎಂಬಲ್ಲಿ ಟೈಲ್ಸ್ ಫಿಟ್ಟಿಂಗ್ ಕೆಲಸ ಮಾಡುತ್ತಿದ್ದ ಹೇಮೇಂದರ ಸಿಂಗ್ ಮನೆಯ ತಾರಸಿ ಮೇಲೆ ಪೋನ್ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಅವರನ್ನು ಕುಂದಾಪುರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಮಣಿಪಾಲದ ಆಸ್ಪತ್ರೆಗೆ ಕಳುಹಿಸಿದರು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷ ಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಇವರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿಜೂರಿನಲ್ಲಿ ನಡೆದ ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಭಾಗವಹಿಸಿದ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಹಾಗೂ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದು ಸಾಧನೆಗೈದಿದ್ದಾರೆ. ಕನ್ನಡ ಭಾಷಣ – ಸಂಜನಾ ಶೆಟ್ಟಿ ಪ್ರಥಮ, ಕನ್ನಡ ಪ್ರಬಂಧ- ಸುಶ್ಮಿತಾ ನಾಯ್ಕ ಪ್ರಥಮ, ಸಂಸ್ಕ್ರತ ಧಾರ್ಮಿಕ ಪಠಣ-ಅವನಿ ಭಟ್ -ಪ್ರಥಮ, ಸಂಸ್ಕೃತ ಭಾಷಣ- ಪ್ರಥಮ್ ಜಿ., ಪ್ರಥಮ, ಭಾವಗೀತೆ- ಜಯಶ್ರೀ ಪ್ರಥಮ. ಅರೇಬಿಕ್ ಧಾರ್ಮಿಕ ಪಠಣ – ಮಸೀಹಾ – ದ್ವಿತೀಯ, ರಂಗೋಲಿ – ಭೂಮಿಕಾ – ದ್ವಿತೀಯ, ಸಂಸ್ಕೃತ ಧಾರ್ಮಿಕ ಪಠಣ – ಪ್ರತೀಕ್ಷಾ – ದ್ವಿತೀಯ, ಕವ್ವಾಲಿ – ಆಹಿಲ್ ಮತ್ತು ತಂಡ – ದ್ವಿತೀಯ, ಜಾನಪದ ನೃತ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 114ನೇ ತಿಂಗಳ ಕಾರ್ಯಕ್ರಮ ಶ್ರೀ ಕಾಶೀ ಮಠ ಶ್ರೀ ಸುಧೀಂದ್ರತೀರ್ಥ ಸ್ವಾಮೀಜಿ ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ವತಿಯಿಂದ ಘರ್ ಘರ್ ಭಜನ್ ಗೊಂಬೆ ಮನೆಯಲ್ಲಿ ಇತ್ತೀಚೆಗೆ ಜರುಗಿತು. ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರರಾದ ರಾಧಾಕೃಷ್ಣ ಶೆಣೈ, ತ್ರಿವಿಕ್ರಮ ಪೈ ಹಾಗೂ ಅನಂತ ಕಾಮತ್ ಅವರನ್ನು ಅಕಾಡೆಮಿ ವತಿಯಿಂದ ಭಾಸ್ಕರ್ ಕೊಗ್ಗ ಕಾಮತ್ ಹಾಗೂ ಎಮ್. ರತ್ನಾಕರ್ ಪೈ ಅವರು ಸಮ್ಮಾನಿಸಿದರು. ಉದಯ ಭಂಡಾರ್ಕಾರ್ ಹಟ್ಟಿಯಂಗಡಿ ಅವರು ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ಗಂಭೀರವಾಗಿ ಪರಿಗಣಿಸಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಟಾಸ್ಕ್ ಫೋರ್ಸ್ ಸಮಿತಿ ಸಭೆಗಳನ್ನು ನಡೆಸಬೇಕು. ಸಭೆಗಳ ವರದಿಯನ್ನು ಒಂದು ವಾರದೊಳಗೆ ಸಂಬಂಧಪಟ್ಟ ಇಲಾಖೆಗಳಿಗೆ ನೀಡಬೇಕು. ತಿಂಗಳಲ್ಲಿ ಒಂದು ದಿನ ಮಕ್ಕಳಿಗಾಗಿ ಮೀಸಲಿಡಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ತೆಗೆದುಕೊಂಡ ಕ್ರಮಗಳನ್ನು ನಿಯಮಿತವಾಗಿ ಆಯೋಗಕ್ಕೆ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಮಕ್ಕಳು ಮತ್ತು ಹದಿಹರೆಯದವರ ಕಾರ್ಮಿಕ ಪದ್ಧತಿ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 2025 ಏಪ್ರಿಲ್ ವರೆಗೆ ಒಟ್ಟು 660 ಕಡೆಗಳಲ್ಲಿ ತಪಾಸಣೆ ನಡೆಸಿ 1 ಬಾಲ ಕಾರ್ಮಿಕ 3 ಕಿಶೋರ ಕಾರ್ಮಿಕ ಒಟ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ರಾಜ್ಯಪಾಲರನ್ನು ದೇಗುಲದ ವತಿಯಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಮಾಜಿ ಶಾಸಕ ಬಿ.ಎಂ. ಸುಕುಮಾರ್ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಉಪಸ್ಥಿತರಿದ್ದರು. ಅರ್ಚಕರಾದ ಕೆ.ಎನ್. ನರಸಿಂಹ ಅಡಿಗ, ಶ್ರೀಧರ ಅಡಿಗ, ಸುಬ್ರಹ್ಮಣ್ಯ ಅಡಿಗ, ಗೋವಿಂದ ಅಡಿಗ, ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಶ್ರೀ ದೇವಿಗೆ ವಿಶೇಷ ಪೂಜೆ ನಡೆಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಸ್ತುತ ದಿನಗಳಲ್ಲಿ ಸಮಾಜ ಮತ್ತು ದೇಶದಲ್ಲಿ ನೈತಿಕತೆಯನ್ನು ಬೆಳೆಸುವ ಮತ್ತು ಆಧುನಿಕ ಜ್ಞಾನವನ್ನು ಮಾನವೀಯ ಮೌಲ್ಯಗಳೊಂದಿಗೆ ಸಂಯೋಜಿಸುವ ಮೂಲಕ, ಧರ್ಮ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸುವ, ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಿಕೊಳ್ಳುವ ಮತ್ತು ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಶಿಕ್ಷಣದ ಅವಶ್ಯಕತೆಯಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿಪ್ರಾಯಪಟ್ಟಿದ್ದಾರೆ. ಕುಂದಾಪುರ ಶಿಕ್ಷಣ ಸಂಘದ 50ನೇ ವಾರ್ಷಿಕೋತ್ಸವ ಮತ್ತು ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರಾಚೀನ ಕಾಲದಲ್ಲಿ, ನಮ್ಮ ದೇಶವು ತನ್ನ ಜ್ಞಾನ, ವಿಜ್ಞಾನ ಮತ್ತು ಬುದ್ಧಿವಂತಿಕೆಯಿAದಾಗಿ ವಿಶ್ವ ನಾಯಕನ ಸ್ಥಾನವನ್ನು ಹೊಂದಿತ್ತು. ಇದನ್ನು ಮರಳಿ ಪಡೆಯಲು, ನಮ್ಮ ಯುವಕರ ಕೌಶಲ್ಯ, ಪ್ರತಿಭೆ ಮತ್ತು ಶಕ್ತಿಯನ್ನು ಸಂಘಟಿಸಲು ನಾವು ಸಕ್ರಿಯ ಪ್ರಯತ್ನಗಳನ್ನು ಮಾಡಬೇಕು ಎಂದರು. ನಮ್ಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯವು ಬಹಳ ಪ್ರಾಚೀನವಾದುದು ಮತ್ತು ಪ್ರಾಚೀನ ಕಾಲದಿಂದಲೂ “ವಸುಧೈವ ಕುಟುಂಬಕA” ಎಂಬ ತತ್ವದಿಂದ ಪ್ರೇರಿತವಾಗಿದೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಜೆಸಿಐ ಭಾರತ ವಲಯ–15ರ 2026ನೇ ಸಾಲಿನ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆಯಾಗಿದ್ದಾರೆ. ಅವರು 2025ನೇ ಸಾಲಿನಲ್ಲಿ ಉಪ್ಪುಂದ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ‘ಜೇಸಿ ಉತ್ಸವʼ ಎಂಬ ಅಭೂತಪೂರ್ವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಭರತ್ ಅವರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ಸೇರಿದಂತೆ ಹತ್ತುಕ್ಕೂ ಹೆಚ್ಚು ಸಂಘ–ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಾಮಾಜಿಕ, ಸಂಘಟನಾ ಹಾಗೂ ಸೇವಾ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿಜೆಪಿ ಯುವಮೋರ್ಚಾ ಉಡುಪಿ ಜಿಲ್ಲಾ ಅದ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ವಿದ್ಯಾರ್ಥಿ ಜೀವನದಲ್ಲೇ ರಾಜಕೀಯ ಆರಂಭಮಾಡಿ, ಗ್ರಾಮಪಂಚಾಯತ್ ಅದ್ಯಕ್ಷರಾಗಿ, ಪೇಜಾವರ ವಿಶ್ವಪ್ರಸನ್ನರ ಮಾರ್ಗದರ್ಶನದಲ್ಲಿ ಗೋವಿಗಾಗಿ ಮೇವು ಸಂಘಟನೆಮೂಲಕ ರಾಜ್ಯದ ಮನೆಮಾತದವರು ಯುವಮೋರ್ಚಾ ಉಡುಪಿ ಜಿಲ್ಲಾ ಅದ್ಯಕ್ಷರಾಗಿ ಪಾದರಸದಂತೆ ಸದಾ ಕಾಂಗ್ರೆಸ್ ಪಕ್ಷದ ವಿರುದ್ದ ಗುಡುಗುವ ಇವರನ್ನು ಹತ್ತಿಕ್ಕಲು ಅಪಪ್ರಚಾರಕ್ಕೆ ಕಾಂಗ್ರೆಸ್ ಪಕ್ಷ ಮುಂದಾಗಿದೆ. ಇದನ್ನು ಖಂಡಿಸುವುದಾಗಿ ಬಿಜೆಪಿ ಯುವಮೋರ್ಚಾ ಬೈಂದೂರು ಮಂಡಲ ಅದ್ಯಕ್ಷ ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ ವ್ಯಕ್ತಪಡಿಸಿದರು ಬಾರ್ಕೂರಿನಲ್ಲಿ ಪ್ರಥ್ವಿರಾಜ್ ಅವರ ಮಾಲಕತ್ವದ ಸಂಕಮ್ಮ ತಾಯಿ ರೆಸಾರ್ಟ್ ನಲ್ಲಿ ನೇಪಾಳ ಮೂಲದ ಪ್ರಜೆ ಗಳು ಕೆಲಸದಲ್ಲಿರುವುದನ್ನೇ ದೊಡ್ಡ ದೇಶದ್ರೋಹ ಎನ್ನುವ ರೀತಿ ಬಿಂಬಿಸಿ ಅವರ ತೇಜೆವಧೆ ಮಾಡುತ್ತೇವೆ ಎನ್ನುವ ಭ್ರಮೆಯಲ್ಲಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಯುವಮೋರ್ಚಾ ಬೈಂದೂರು ಮಂಡಲ ಅದ್ಯಕ್ಷ ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ ವ್ಯಕ್ತಪಡಿಸಿದರು ಹಾಗೆಯೇ ಸಾಮಾಜಿಕ ಜಾಲತಾಣದಲ್ಲಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷರ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ದ ಕಾನೂನು…
