ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಡೇರಹೋಬಳಿ ಗೆಳೆಯರು ಆಯೋಜಿಸಿದ ವಾರ್ಡ್ ಟ್ರೋಫಿ-೨೦೧೭, ಕುಂದಾಪುರದ ಗೋಲ್ಡನ್ ಮಿಲ್ಲರ್ ಪ್ರಶಸ್ತಿ ಹಾಗೂ ೨೨,೨೨೨/ ಸಾವಿರ ರೂ, ನಗದು ಪಡೆಯಿತು. ಫೈನಲ್ ಪಂದ್ಯಾಟದಲ್ಲಿ ಮದ್ದುಗುಡ್ಡೆ ಫ್ರೆಂಡ್ಸ್ ವಿರುದ್ಧ ೧೨ ರನ್ಗಳ ವಿಜಯ ದಾಖಲಿಸುವ ಮೂಲಕ ಪ್ರಶಸ್ತಿ ಪಡೆಯಿತು. ಮದ್ದುಗುಡ್ಡೆ ಫ್ರೆಂಡ್ಸ್ ದ್ವಿತೀಯ ಪ್ರಶಸ್ತಿ ಸಹಿತ ೧೧,೧೧೧/ ನಗದು ಪಡೆಯಿತು. ವೈಯಕ್ತಿಕ ಪ್ರಶಸ್ತಿ ಉತ್ತಮ ದಾಂಡಿಗ ರಾಘವೇಂದ್ರ (ಗೋಲ್ಡನ್ ಮಿಲ್ಲರ್) ಉತ್ತಮ ಎಸೆತಗಾರ ವೇಣು (ಗೋಲ್ಡನ್ ಮಿಲ್ಲರ್), ಉತ್ತಮ ಗೂಟರಕ್ಷಕ ಯೋಗೀಶ (ಗೋಲ್ಡನ್ ಮಿಲ್ಲರ್), ಫೈನಲ್ ಪಂದ್ಯಾಟದ ಪಂದ್ಯಶ್ರೇಷ್ಠ ನಿತೇಶ (ಗೋಲ್ಡನ್ ಮಿಲ್ಲರ್) ಸರಣಿ ಶ್ರೇಷ್ಠ ಪ್ರಶಸ್ತಿ ವಿಕ್ಕಿ (ಮದ್ದುಗುಡ್ಡೆ ಫ್ರೆಂಡ್ಸ್), ವೈಯಕ್ತಿಕ ಪ್ರಶಸ್ತಿ ಪಡೆದರು. ಹಾಗೂ ಇದೇ ಸಂದರ್ಭದಲ್ಲಿ ಚಕ್ರವರ್ತಿಯ ಹಿರಿಯ ಆಟಗಾರ ಹಾಗೂ ಜೆ.ಡಿ.ಯು. ನ ಜಿಲ್ಲಾ ಅಧ್ಯಕ್ಷರಾದ ರಾಜೀವ ಕೋಟ್ಯಾನ ಅವರಿಗೆ ಸನ್ಮಾನಿಸಲಾಯಿತು. ಆರ್ಥಿಕ ನೆರವು: ವಿಶೇಷವಾಗಿ ಪ್ರಥಮ ಪ್ರಶಸ್ತಿ ಪಡೆದ ಗೋಲ್ಡನ್ ಮಿಲ್ಲರ್ ಕುಂದಾಪುರ ತಂಡ ಜಯಸಿದ ೨೨,೨೨೨/ ಹಾಗೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ೧೬ನೇ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಯುವ ಕವಿ ಜಗದೀಶ ದೇವಾಡಿಗ ಕುಪ್ಪುಮನೆ ಮುಳ್ಳಿಕಟ್ಟೆ ಅವರ ೪ನೇ ಕವನ ಸಂಕಲನ ’ಮುಗುಳು ನಗು’ ಕೃತಿಯನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಬಿ. ಅಪ್ಪಣ್ಣ ಹೆಗ್ಡೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ರಾಜ್ಯದಲ್ಲಿ ಹಿಂದೂಗಳ ಹತ್ಯೆ ನಿರಂತರ ನಡೆಯುತ್ತಿದೆ. ದೀಪಕ್ ರಾವ್ ಸೇರಿ ಇಪ್ಪತ್ತೊಂದು ಹಿಂದೂ ಯುವಕರ ಭರ್ಬರ ಹತ್ಯೆ ಮಾಡಲಾಗಿದೆ. ಪಿಎಫ್ಐ, ಭಯೋತ್ಪಾದಕರ ರಕ್ಷಣೆಗೆ ರಾಜ್ಯ ಸರ್ಕಾರ ನಿಂತಿದೆ. ಕಾಂಗ್ರೆಸ್ ಸರ್ಕಾರ ತಮ್ಮ ಪರವಾಗಿದೆ ಎಂಬ ನಿಲುವಲ್ಲಿ ಪಿಎಫ್ಐ ಬೆಂಬಲಿತರು ಹತ್ಯೆ ಮಾಡುತ್ತಿದ್ದಾರೆ. ಹಿಂದೂ ಯುವಕರ ಹತ್ಯೆ ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲಾವಾಗಿದ್ದು, ಇದಕ್ಕೆ ತಕ್ಕ ಬೆಲೆ ಎಂದು ಎಚ್ಚರಿಸಿದವರು ಆರ್ಎಸ್ಸೆಸ್ ದಕ್ಷಣ ಪ್ರಾಂತ ಸಂಚಾಲಕ ಸುಬ್ರಹ್ಮಣ್ಯ ಹೊಳ್ಳ. ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ಹಿಂದೂಪರ ಸಂಘಟನೆಗಳ ಸುರತ್ಕಲ್ ದೀಪಕ್ ರಾವ್ ಕೊಲೆ ಖಂಡಿಸಿ ನಡೆಸಿದ ರಸ್ತೆ ರೋಖೋದಲ್ಲಿ ಮಾತನಾಡಿ, ಪಿಎಫ್ಐ ಸಂಘಟನೆ ನಿಶೇಧ ಮಾಡುವಂತೆ ಒತ್ತಾಯಿಸಿದರೂ ಸಿದ್ದರಾಮಯ್ಯ ಕಿವುಡಾಗಿದ್ದಾರೆ. ವಿವಿಧ ಅಪರಾಧಗಳಲ್ಲಿ ಭಾಗಿಯಾದ ೧೬೦ಕ್ಕೂ ಮಿಕ್ಕ ಜನರ ಮೇಲಿದ್ದ ಕೇಸ್ ಹಿಂದಕ್ಕೆ ಪಡೆಯುವ ಮೂಲಕ ರಾಜ್ಯ ಸರ್ಕಾರ ಹಿಂದೂ ಯುವಕರ ಕೊಲೆಗೆ ದಾರಿ ಮಾಡಿಕೊಡುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಹಿಂದೂ ಯುವಕರ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಗಳ 430ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ ಖಾದರ್, ಯುವಜನ ಕ್ರೀಡಾ ಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಮೆಸ್ಕಾಂ ನಿರ್ದೇಶಕ ಸಂಪಿಗೇಡಿ ಸಂಜೀವ ಶೆಟ್ಟಿ, ಮೀನುಗಾರ ಮುಖಂಡ ಮದನ್ ಕುಮಾರ್ ಉಪ್ಪುಂದ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ ಸೇರಿದಂತೆ ಇನ್ನತರ ಗಣ್ಯರು ವೇದಿಕೆಯಲ್ಲಿದ್ದರು. ಶಾಸಕ ಕೆ. ಗೋಪಾಲ ಪೂಜಾರಿ ಅವರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಕೆ. ಸಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಭಗವಂತನನ್ನು ಅನನ್ಯ ಭಕ್ತಿಯಿಂದ ಸೇವೆ ಮಾಡಿದರೆ ಅವನು ನಮ್ಮ ಯೋಗ ಕ್ಷೇಮ ನೋಡಿಕೊಳ್ಳುತ್ತಾನೆ. ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ದೇವರ ಅನುಗ್ರಹ ಮತ್ತು ಪ್ರಾಮಾಣಿಕ ಪ್ರಯತ್ನ ಎರಡೂ ಇರಬೇಕು. ಯೋಗ ಮತ್ತು ಕ್ಷೇಮ ನಮಗೆ ಎರಡು ಕಣ್ಣುಗಳಿದ್ದಂತೆ. ಯೋಗ ಕ್ಷೇಮ ಎರಡೂ ನಮಗೆ ದೊರೆತರೆ ನಮ್ಮ ಜೀವನ ಸಾರ್ಥಕವಾಗುತ್ತದೆ. ವಿದ್ಯಾರ್ಥಿಗಳಲ್ಲಿ ನೀತಿ, ನಿಯಮದ ಜೊತೆಗೆ ಆರೋಗ್ಯ ಕೂಡ ಉತ್ತಮವಾಗಬೇಕು. ಶ್ರೀ ದೇವರ ಅನುಗ್ರಹದಿಂದ ಕಳೆದ ೧೪ ವರ್ಷಗಳ ಹಿಂದೆ ಪ್ರಾರಂಭಿಸಿದ ಚಿಣ್ಣರ ಸಂತರ್ಪಣೆಯನ್ನು ಶ್ರೀ ಕೃಷ್ಣನ ಪ್ರಸಾದ ರೂಪದಲ್ಲಿ ಮಕ್ಕಳಿಗೆ ನೀಡುತ್ತಾ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದೆ ೨೦೧೮ನೇ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಪೀಠವನ್ನಲಂಕರಿಸಲಿರುವ ಶ್ರೀ ಪಲಿಮಾರು ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ಹೇಳಿದರು. ಪರ್ಯಾಯ ಪೂರ್ವ ಸಂಚಾರ ಪ್ರಯುಕ್ತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಗೆ ಗುರುವಾರ ಭೇಟಿ ನೀಡಿದ ಅವರು ಆಶೀರ್ವಚನ ನೀಡಿ ಮಾತನಾಡಿದರು. ಗಂಗೊಳ್ಳಿಯ ಸರಸ್ವತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ತಲ್ಲೂರು ರಾಷ್ಟೀಯ ಹೆದ್ದಾರಿ ೬೬ರಲ್ಲಿ ನಡೆದ ಖಾಸಗಿ ಬಸ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಗುಲ್ವಾಡಿ ಕೌಜೂರು ನಿವಾಸಿ ರಾಘವೇಂದ್ರ ಆಚಾರ್ ಮೃತ ದುರ್ದೈವಿ. ಇಂದು ಬೆಳಿಗ್ಗೆ ರವೀಂದ್ರ ಆಚಾರ್ ಕೆಲಸಕ್ಕೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಬಸ್ ಢಿಕ್ಕಿಯಾಗಿತ್ತು. ಅಫಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಸುಬ್ಬಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಿ.ಎಸ್. ಆಚಾರ್ ಅವರಂತಹ ಧುರೀಣರ ಗರಡಿಯಲ್ಲಿ ಪಳಗಿ ರಾಜಕೀಯದ ಕ್ಷೇತ್ರದಲ್ಲಷ್ಟೇ ಅಲ್ಲದೇ, ಸಹಕಾರ ಕ್ಷೇತ್ರದಲ್ಲಿ ಎರಡು ದಶಕಗಳ ಕಾಲ ತೊಡಗಿಸಿಕೊಂಡು ವಿವಿಧ ಸಹಕಾರಿ ಸಂಘಗಳ ಬೆಳವಣಿಗೆ ನಿರಂತರವಾಗಿ ಶ್ರಮಿಸಿರುವ ಎಸ್. ರಾಜು ಪೂಜಾರಿ ಅವರಿಗೆ ರಾಜ್ಯದ ಉತ್ತಮ ಸಹಕಾರಿ ಪ್ರಶಸ್ತಿ ದೊರೆತಿರುವುದು ಅವರ ಕಾರ್ಯತತ್ಪರತೆಗೆ ದೊರೆತ ಪ್ರತಿಫಲ ಎಂದು ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಅವರು ಹೇಳಿದರು. ಅವರು ಇಲ್ಲಿನ ಹಳ್ಳಿಹೊಸೂರು ಶಾಲಾ ಆವರಣದಲ್ಲಿ ಇತ್ತಿಚಿಗೆ ಚಂದನ ಹಾಲಂಬೇರು ಮೂಡನಗದ್ದೆ ಭಾಗದ ನಾಗರಿಕರು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ರಾಜ್ಯ ಉತ್ತಮ ಸಹಕಾರಿ ಪ್ರಶಸ್ತಿ ಪುರಸ್ಕೃತ ಸಹಕಾರಿ ಧುರೀಣ ಎಸ್. ರಾಜು ಪೂಜಾರಿ ಹಾಗೂ ರತಿ ರಾಜು ಪೂಜಾರಿ ದಂಪತಿಯನ್ನು ಅಭಿನಂದಿಸಿ ಬಳಿಕ ಮಾತನಾಡಿದರು. ಸಾಮಾಜಿಕ ರಂಗಕ್ಕೆ ಪಾದಾರ್ಪಣೆ ಮಾಡಿದ ಬಳಿಕ ಏಳು ಬೀಳುಗಳು ಸಾಮಾನ್ಯ. ಆದರೆ ಎಂಥಹ ಸಂದರ್ಭದಲ್ಲಿಯೂ ಜನಸಾಮಾನ್ಯರೊಂದಿಗೆ ಬೆರೆತು ಅವರ ಕಷ್ಟ ಸುಖಗಳಿಗೆ ಸ್ಪಂದಿಸುವವರು ನಿಜವಾದ ಜನನಾಯಕರೆನಿಸಿಕೊಳ್ಳುತ್ತಾರೆ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೂಗಳ ಮಾರಣ ಹೋಮ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಮುಂದಿನ ದಿನಗಳಲ್ಲಿ ಜನರೆ ಕಾಂಗ್ರೇಸ್ ಪಕ್ಷಕ್ಕೆ ಸರಿಯಾದ ಪಾಠ ಕಲಿಸುತ್ತಾರೆ ಎಂದು ಬೈಂದೂರು ಬಿಜೆಪಿ ಮುಖಂಡ ದೀಪಕ್ ಕುಮಾರ್ ಶೆಟ್ಟಿ ಹೇಳಿದರು. ಅವರು ಮಂಗಳೂರಿನ ಕಾಟಿಪಳದಲ್ಲಿ ಹತ್ಯೆಯಾದ ದೀಪಕ್ ರಾವ್ ಕೊಲೆ ಖಂಡಿಸಿ ಬೈಂದೂರು ಮಂಡಲ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ನೇತೃತ್ವದಲ್ಲಿ ಬಂದೂರು ಬೈಪಾಸ್ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಬಾಬು ಶೆಟ್ಟಿ ತಗ್ಗರ್ಸೆ, ಶಂಕರ ಪೂಜಾರಿ, ಸುರೇಶ್ ಬಟ್ವಾಡಿ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಸುಖಾನಂದ ಶೆಟ್ಟಿ, ಸದಾಶಿವ ಡಿ. ಪಡುವರಿ, ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಪ್ರಧಾನ ಕಾರ್ಯದರ್ಶಿ ರವಿ ಗಾಣಿಗ ಕೆಂಚನೂರು, ಹಿಂದೂಳಿದ ಮೋರ್ಚಾದ ಅಧ್ಯಕ್ಷ ಗಣೇಶ ಪೂಜಾರಿ, ವಿಶ್ವ ಹಿಂದೂ ಪರಿಷತ್…
ಬೈಂದೂರು ಕ್ಷೆತ್ರದಲ್ಲಿ ಮುಖ್ಯಮಂತ್ರಿ ಸ್ವಾಗತಕ್ಕೆ ಭರದ ಸಿದ್ಧತೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ರಾಜ್ಯ ಸರಕಾರದ ಸಾಧನಾ ಸಮಾವೇಶದಲ್ಲಿ ಭಾಗವಹಿಸಲು ಜ.8ರ ಸೋಮವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಗಮಿಸಲಿದ್ದು, ವಿವಿಧ ಇಲಾಖೆಗಳ 490.97 ಕೋಟಿ ರೂ. ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಅವರು ಹೇಳಿದರು. ಬೈಂದೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ಬೈಂದೂರು ಗಾಂಧಿ ಮೈದಾನದಲ್ಲಿ ಸರ್ವ ತಯಾರಿಗಳ ನಡೆಯುತ್ತಿದ್ದು ಅಂದು ಸುಮಾರು 35,000 ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬೈಂದೂರು ಕ್ಷೇತ್ರದ ಕರಾವಳಿ ಭಾಗಕ್ಕೆ ಮೊದಲ ಭಾರಿಗೆ ಮುಖ್ಯಂತ್ರಿಗಳು ಆಗಮಿಸುತ್ತಿರುವುದರಿಂದ ಪಕ್ಷದ ಕಾರ್ಯಕರ್ತರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಮೂರು ಪ್ರಮುಖ ಬೇಡಿಕೆಗಳನ್ನು ಸಲ್ಲಿಸಲಾಗುತ್ತಿದೆ. ಸಾಲಮನ್ನಕ್ಕೆ ಪೂರ್ವಭಾವಿಯಾಗಿ ಪೂರ್ಣ ಸಾಲ ಕಟ್ಟಿದವರಿಗೆ ಸಾಲಮನ್ನ ಮಾಡಬೇಕು ಹಾಗೂ ಸ್ವಸಹಾಯ ಗುಂಪುಗಳಿಗೆ ನೀಡುತ್ತಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಳೆದ ನಾಲ್ಕೂವರೆ ವರ್ಷಗಳಿಂದ ನಿರಂತರವಾಗಿ ಶ್ರಮಿಸುತ್ತಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಫಲಾನುಭವಿಗಳಿಗೆ ಈವರೆಗೆ ಸುಮಾರು 2,000 ಕೋಟಿ ಅನುದಾನ ರಾಜ್ಯ ಸರಕಾರದಿಂದ ಬಿಡುಗಡೆಗೊಂಡಿದ್ದು, ಈ ಪೈಕಿ ಬಹುಪಾಲು ಕಾಮಗಾರಿಗಳು ಪೂರ್ಣಗೊಂಡಿವೆ, ಇನ್ನಿತರ ಕಾಮಗಾರಿಗಳು ಪ್ರಗತಿಯ ಹಂತದಲ್ಲಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ, ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು. ಬೈಂದೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಇಲಾಖಾವಾರು ವಿವರ ಬಿಡುಗಡೆ ಮಾಡಿದರು. ಲೋಕೋಪಯೋಗಿ ಇಲಾಖೆಯಿಂದ 178.22 ಕೋಟಿ, ಸಣ್ಣ ನೀರಾವರಿ ಇಲಾಖೆ 50.34 ಕೋಟಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಗ್ರಾಮೀಣಾಭಿವೃದ್ದಿ ಇಲಾಖೆ 45.11 ಕೋಟಿ, ವರಾಹಿ ನಿರಾವರಿ ನಿಗಮ 41.98 ಕೋಟಿ, ಕರಾವಳಿ ಪ್ರಾಧಿಕಾರ 1.45 ಕೋಟಿ, ಬಂದರು ಮತ್ತು ಮೀನುಗಾರಿಕಾ ಇಲಾಖೆ 241.45 ಕೋಟಿ, ಸಮಾಜ ಕಲ್ಯಾಣ ಇಲಾಖೆ 8.12 ಕೋಟಿ, ಸಮಗ್ರ ಗಿರಿಜನ ಅಭಿವೃದ್ದಿ ಇಲಾಖೆ…
